ಚಿಕ್ಕಿಯ ಫೋಟೋ
ಕಥೆ ಚಿಕ್ಕಿಯ ಫೋಟೋ ಮಧುರಾ ಕರ್ಣಮ್ “ಚಿಕ್ಕಿ ಇಸ್ಕೂಲಿಗೆ ಬತ್ತೀಯೇನೆ? ಟೇಮಾಗ್ತಾ ಐತೆ” ಎಂದು ಕಮಲಿ ಕೂಗು ಹಾಕಿದಾಗ ಚಿಕ್ಕಿ “ಒಸಿ ನಿಂತ್ಕೊಳ್ಳೆ, ಬಂದೆ” ಎನ್ನುತ್ತ ತಟ್ಟೆಯಲ್ಲಿದ್ದ ತಂಗಳನ್ನ ಮುಗಿಸಿ ಕೈ ತೊಳೆದಳು. ಅಲ್ಲಲ್ಲಿ ಹರಿದ ಸ್ಕೂಲ್ ಬ್ಯಾಗ್ ಹೆಗಲಿಗೇರಿಸಿ “ನಾನ್ ಇಸ್ಕೂಲಿಗೆ ಹೋಗ್ಬರ್ತೀನಿ ಕಣವ್ವೋ” ಎಂದು ಕೂಗು ಹಾಕಿದಳು. “ಚಿಕ್ಕಿ, ಹಿಂದೆ ಒಂದ್ನಾಲ್ಕು ಪಾತ್ರೆ ಅವೆ, ತೊಳದ್ಹೋಗೆ” ಎಂಬ ಕೂಗು ಕೇಳಿಸದಂತೆ ಕಮಲಿಯ ಕೈಹಿಡಿದು ಓಡಿದಳು. “ಈ ಅವ್ವ ಹೋಗಾಗಂಟ ಕೆಲ್ಸ ಮಾಡಿದ್ರೂನು ಮತ್ತೆ `ಇದ್ […]
ಡಿಯರ್-ಟೈಗರ್!
ಕಥೆ ಡಿಯರ್-ಟೈಗರ್! ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೆಣ್ಣು ಅಂದರೆ ಪ್ರಬಲವಾದ ಶಿಸ್ತು ಮತ್ತು ಕಬಂಧ ಬಾಹುಬಲದ ಚೌಕಟ್ಟಿನಲ್ಲಿ ಬೆಳೆಯಬೇಕು; ಅಷ್ಟೇ ಕಟ್ಟುನಿಟ್ಟಿನ ಬೇಲಿಯೊಳಗೆ ಬದುಕಬೇಕು ಎಂಬ ಬಂಧಿಯಲ್ಲ. ಅವಳಿಗೂ ಸರ್ವಸ್ವತಂತ್ರದ ಬದುಕು ಇಷ್ಟ. ಖಂಡಿತ! ಇದು ಬಹುಶಃ ಎಲ್ಲರ ಪಾಲಿನ ಸತ್ಯ. ಆದರೆ, ಅನೇಕರಿಗೆ ಅಂಥ ಜೀವನ ಇರಲಿ, ಆ ರೀತಿಯ ಮುಕ್ತ ಯೋಚನೆ ಕೂಡ ಅಸಾಧ್ಯ, ಅನ್ನಿಸುವಷ್ಟು ‘ಸರಳುಗಳ ಹಿಂದಿನ ಬಾಳು!’. ವಾಸ್ತವವಾಗಿ, ಅವರಿಗೆ ಆ ಸರಳುಗಳನ್ನು ಎಣಿಸುವ ಧೈರ್ಯ ಸಹ ಇರಲಾರದು… ಕಲ್ಯಾಣಿ […]
ಕೊನೆಯ ಬೇಡಿಕೆ
ಪೂರ್ಣಿ ಹೋಟೆಲ್‌ನಿಂದ ಹೊರಬಂದಂತೆ ಕಂಡ ಅಜ್ಜ ಕತ್ತಲ ಕಾಲದ ಜೊತೆ ಮಲಗಿ ಮಿಲನ್ ಕ್ಲಾತ್ ಶಾಪ್ ಕಟ್ಟಿ ಹೊರಗ ನಿದ್ದೆ ಹೋಗಿದ್ದ.
ಬದುಕು ಬಂದಂತೆ
ಕಥೆ ಬದುಕು ಬಂದಂತೆ ಅನಸೂಯ ಎಂ.ಆರ್. ಲತ ಮನೆಗೆ ಬಂದಾಗ ಎಂದಿನಂತೆ ಸುಶೀಲಮ್ಮನು ಬಾಗಿಲು ತೆರೆಯದೆ ಮನು ಬಂದಾಗ “ಅಜ್ಜಿ ಎಲ್ಲೊ” ಎಂದಳು. ” ಅಜ್ಜಿ ಮಲಗಿದಾರಮ್ಮ” ಎಂದ ಕೂಡಲೇ ವ್ಯಾನಿಟಿ ಬ್ಯಾಗ್ ಮತ್ತು ಲಂಚ್ ಬಾಕ್ಸ್ ನ್ನು ಟೇಬಲ್ ಮೇಲಿಟ್ಟು “ಅತ್ತೆ” ಎನ್ನುತ್ತಾ ರೂಂ ನೊಳಗೆ ಹೋದಳು ಮುಸುಕು ಹಾಕಿ ಮಲಗಿದ್ದ ಸುಶೀಲಮ್ಮ ಮುಸುಕನ್ನು ತೆಗೆಯುತ್ತಾ “ಯಾಕೋ, ಜ್ವರ ಬಂದಂತಾಗಿದೆ ಕಣಮ್ಮ” ಎಂದರು. ಅವರ ಹಣೆಯ ಮೇಲೆ ಕೈಯಿಟ್ಟು ನೋಡಿದ ಲತಾ ” ಬಹಳ ಜ್ವರ […]
ಉಡ್ಡಾಣ
ಕಥೆ ಉಡ್ಡಾಣ ಹೇಮಾ ಸದಾನಂದ್ ಅಮೀನ್ ಎಡೆಬಿಡದೆ ಅಳುವ ಆ ಮಗುವಿನ ತಾಯಿಯ ಬೇಜವಾಬ್ದಾರಿತನವನ್ನು ನೋಡಿ ಯಾರೂ ಸಿಡಿಮಿಡಿಗೊಳ್ಳುವದು ಸಹಜವೇ. ಆದರೆ ಇದು ಫಸ್ಟ್ ಕ್ಲಾಸ್ ಕಂಪಾರ್ಟ್ಮೆಂಟಿನಲ್ಲಿ ಆಗಿರುವುದರಿಂದ ಕೇವಲ ಮುಖ ಸಿಂಡರಿಸಿ, “ ತಾನು ಡಿಸ್ಟರ್ಬ್ ಆಗಿದ್ದೇನೆ. ದಯಮಾಡಿ ನಿಮ್ಮ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳಿ “ ಎಂದು ವಕ್ರ ದೃಷ್ಟಿಯಿಂದಲೇ ಎಚ್ಚರಿಕೆ ಕೊಡುವ ಮನಸ್ಥಿತಿಯುಳ್ಳವರ ಮಧ್ಯ ಮೂರೂ ತಿಂಗಳ ಗರ್ಭಿಣಿಯಾಗಿದ್ದ ಸಮೀಕ್ಷಳ ಮನಸ್ಸು ತೀರ ವಿಚಲಿತಗೊಂಡಿತ್ತು. ಆಕೆ ಆ ತಾಯಿ ಮಗುವನ್ನು ಒಂದೇ […]
ಒಂದು ತಪ್ಪು ಗಂಟು
ಒಂದು ತಪ್ಪು ಗಂಟು ಎಸ್.ನಾಗಶ್ರೀ ಅದು ಕಾರ್ತೀಕ ಮಾಸದ ಪ್ರಾರಂಭದ ದಿನಗಳು. ಸಂಜೆ ಬೇಗ ಕಳೆದು ರಾತ್ರಿಯ ಚಾದರ ಹೊದ್ದು ಸುತ್ತಲೂ ಕತ್ತಲು. ಪ್ರತಿಮನೆಯ ಮುಂದೂ ಬೆಳಗುವ ಹಣತೆಗಳು. ಪ್ರಕಾಶ್ ರೆಡ್ಡಿ ಅಂದೂ ಸಂಜೆ ಏಳರ ಸಿಗರೇಟ್ ಹಚ್ಚಿ ಮನೆಯ ಮುಂದೆ ಕುರ್ಚಿ ಹಾಕಿ ಕುಳಿತಿದ್ದ. ಚಳಿ ಏಕೋ ಮೂಳೆಗಿಳಿಯುವಷ್ಟು ಏರಿದೆ ಎನಿಸಿ ಬಿಸಿ ಕಾಫಿಗೆ ಸೈಲೂ ಎಂದು ಕೂಗಿ, ಅರೆಘಳಿಗೆ ಹಿಂದಕ್ಕೆ ಒರಗಿದ. ಬೇಡಬೇಡವೆಂದರೂ ಪ್ರತಿ ಕಾರ್ತೀಕದಲ್ಲಿ ನೆನಪಾಗಿ ಹೃದಯ ಭಾರವಾಗುವ ಆ ಘಟನೆಯ ಕಿಡಿ […]
ನಂಬಿಕೆ : ಮರು ಪ್ರಶ್ನೆ
ಸಣ್ಣ ಕಥೆ ನಂಬಿಕೆ : ಮರು ಪ್ರಶ್ನೆ ರೇಷ್ಮಾ ನಾಯ್ಕ, ಶಿರಸಿ ಯಾರು ಒಳ್ಳೆ ಕೆಲ್ಸ ಮಾಡ್ತಾರೋ ಅವ್ರ ಪರ ದೇವ್ರು ನಿಂತಿರ್ತಾನೆ ಯಾವುದೇ ರೀತಿಲಿ ಸಮಸ್ಯೆಗಳಿಗೆ ಪರಿಹಾರಾನೂ ಸೂಚಿಸುತ್ತಾನೆ ಎಂದ ಮಾತಿಗೆ; ಮಗಳು , ” ಹಾಗಾದ್ರೆ ಜಗತ್ತಿಗೆ ಕರೋನ ಬಂದಿದೆ ಇಷ್ಟೆಲ್ಲ ಕಷ್ಟ ಪಡ್ತಿದೀವಿ ಶಾಲೆಗೂ ಹೋಗೋಕಾಗ್ತಿಲ್ಲ ಯಾಕಮ್ಮ ದೇವ್ರು ಪರಿಹಾರಾನೇ ಸೂಚಿಸ್ತಿಲ್ಲ?” ಎಂದಳು. ಕಂದಾ, ” ದೇವ್ರು ಅನ್ನೋದು ಒಂದು ನಂಬಿಕೆ , ಧೈರ್ಯ. “ ನಿಂಗೆ ಜ್ವರ ಬಂದಾಗ ಹೆದ್ರಬೇಡ ನಾವ್ […]
ಸುಳಿಗಾಣ
ಸಣ್ಣ ಕತೆ. ಸುಳಿಗಾಣ ಶೋಭಾ ನಾಯ್ಕ .ಹಿರೇಕೈ ರಾತ್ರಿಯಿಡಿ ನಿದ್ದೆಯಿಲ್ಲದೆ ಕೆಂಡದುಂಡೆಯಾದ ಕಣ್ಣುಗಳನ್ನುಜ್ಜಿಕೊಂಡು ಹಾಸಿಗೆಯಿಂದೆದ್ದ ಮಾದೇವ ರೂಢಿಯಂತೆ ಕೊಟ್ಟಿಗೆಯ ಕಡೆ ಕಣ್ಣು ಹಾಯಿಸಿದ. ಉಕ್ಕಿ ಬಂದ ಸಿಟ್ಟು, ಅಳು ಎಲ್ಲವನ್ನೂ ನುಂಗಿಕೊಂಡು ” ಛೇ.. ” ಎಂದು ಬಲಗಾಲನ್ನೆತ್ತಿ ದೊಪ್ಪೆಂದು ನೆಲಕ್ಕೆ ಬಡಿದವನೆ, ಏನೋ ತೀರ್ಮಾನ ಮಾಡಿದವನಂತೆ ತಂಗಿಯನ್ನಾದರೂ ‘ವಿದ್ಯಾಗಿರಿ’ ಹೈಸ್ಕೂಲ್ ಮೆಟ್ಟಿಲ ಹತ್ತಿಸಿಯೇ ತೀರಬೇಕೆಂದು, ತನಗೆ ಕಲಿಸಿದ ಮಾಸ್ತರರ ಮನೆಯತ್ತ ಹೋಗುತ್ತಿದ್ದಾಗ, ” ಈ ಮಾಸ್ತರರ ಮನೆಯಲ್ಲಿ ಎಲ್ಲರನ್ನೂ ಒಳ ಸೇರಿಸಿ ಬಿಡ್ತಾರಪ್ಪ. ನಮಗೆ ಕೊಡೋ […]
ಮುಗಿಲ ಮಲ್ಲಿಗೆ
ಕಥೆ ಮುಗಿಲ ಮಲ್ಲಿಗೆ ರೂಪಕಲಾ ಕೆ.ಎಂ. ಕತ್ತಲೆಯ ಸೆರಗನ್ನು ಹೊದ್ದು ಮಲಗಿದ್ದ ರಸ್ತೆಯಲ್ಲಿ, ವೇಗವಾಗಿ ಚಲಿಸುತ್ತಿದ್ದ ಬಸ್ಸು.. ಅದಕ್ಕಿಂತಲೂ ವೇಗದಲ್ಲಿ ಓಡುತ್ತಿತ್ತು ಹರೀಶನ ಮನಸ್ಸು. ಆಗಾಗ ಎದುರಾಗುವ ವಾಹನಗಳ ಬೆಳಕು ಬಂದು ಕಣ್ಣಿಗೆ ಹೊಡೆದರೂ, ಮನಸ್ಸು ಮಾತ್ರ ಕತ್ತಲೆಯ ಗೂಡಾಗಿತ್ತು.. ಪಕ್ಕದ ಸೀಟಿನಲ್ಲಿ ರಾಧಿಕ ಗಾಢವಾದ ನಿದ್ರೆಯಲ್ಲಿದ್ದಳು.. ಬಸ್ಸಿನ ಪ್ರಯಾಣದಲ್ಲಿಯೂ ಗೊರಕೆ ಹೊಡೆಯುತ್ತ ಮಲಗಿದ್ದ ಸಹ ಪ್ರಯಾಣಕರನ್ನು ನೋಡಿ, ‘ಚಿಂತೆಯಿಲ್ಲದವರೆಗೆ ಸಂತೆಯಲ್ಲೂ ನಿದ್ರೆಯಂತೆ’ ಅನ್ನೊ ಮಾತು ಅವನಿಗೆ ನೆನಪಾಯಿತು.. ಅವನ ಮನ ಪದೇ ಪದೆ ಪ್ರದೀಪನನ್ನೇ ಮೆಲಕು […]
ಮರಳಿ ತವರಿಗೆ
ಸಣ್ಣ ಕಥೆ ಮರಳಿ ತವರಿಗೆ ನಾಗರಾಜ್ ಹರಪನಹಳ್ಳಿ ಕರೋನಾ ಕಾರಣವಾಗಿ ತವರು ಮನೆಗೆ ಕೊಲ್ಲಾಪುರ ದಿಂದ ಬಂದಿದ್ದ ರೋಶನಿ ತನ್ನೆರಡು ಮಕ್ಕಳೊಂದಿಗೆ ಹೈಸ್ಕೂಲ್ ಗೆಳತಿ ಶರ್ಮಿತಾಳನ್ನು ಕಾಣಲು ಹೊರಟಳು.ಮಲೆ ನಾಡಿನ ಒಂಟಿ ಮನೆಗಳು ಅಡಿಕೆ ತೆಂಗು ಹಾಗೂ ಕಾಡಿನ ಮರಗಳ ಮಧ್ಯೆ ಅಡಗಿರುವುದೇ ಹೆಚ್ಚು. ಶರ್ಮಿತಾಳ ತಾಯಿ ಮನೆ ಎದುರು ದನಗಳಿಗೆ ಕರಡ ಬೆಳೆಯಲು ಬಿಟ್ಟಿದ್ದ ಬಯಲು ಭೂಮಿ , ಜೂನ್ ತಿಂಗಳು ಎರಡು ವಾರ ಸುರಿದ ಮಳೆಯ ಕಾರಣ , ಅದಾಗಲೇ ಹಸಿರಾಗಿ ಇತ್ತು. ಮೊದಲ […]