ಕಥಾಗುಚ್ಛ
ಮರಳಿನ ಕಥೆ ರಮೇಶ್ ನೆಲ್ಲಿಸರ ತುಂಗಾನದಿಯ ನೀರನ್ನು ಕುಡಿದೊ ಅಥವಾ ಬೆಳೆಗಳಿಗೆ ಹಾಯಿಸಿ ಬದುಕು ಕಟ್ಟಿಕೊಂಡವರು ಹಲವರಾದರೆ ತುಂಗೆಯ ಒಡಲ ಬಗೆದು ಮರಳು ತೆಗೆಯುವುದರ ಮೂಲಕ ಸಿರಿತನದ ಸುಪ್ಪತ್ತಿಗೆಯನ್ನು ಅನುಭವಿಸುತ್ತಿರುವವರು ಕೆಲವೇ ಕೆಲವರು, ರಾಜಕೀಯದ ವಾಸನೆ ತುಂಗೆಯ ಎಡಬಲದ ಮರಳು ಕ್ವಾರಿಗಳ ಪ್ರತಿ ಮರಳಿನ ಕಣದಲ್ಲಿ ಹಿಂದೆಯೂ ಇತ್ತು ಈಗಲೂ ಇದೆ. ಅಂದ ಹಾಗೆ ನಾನು ಹೇಳ ಹೊರಟಿದ್ದು ಈ ಮರಳು ಮಾಫಿಯಾದ ಕುರಿತು ಅಲ್ಲ!, ಈ ಮರಳು ದಂಧೆಗೆ ಅಂಟಿಕೊಂಡಿರುವ ಕೆಲಸಗಾರರ ಕುರಿತು, ಆಗ 2002-03 […]
Read Moreಕಾಲೋ ಜಗದ್ಭಕ್ಷಕಃ ಅನುಪಮಾ ರಾಘವೇಂದ್ರ ‘ಮಕ್ಕಳು ಮೊಮ್ಮಕ್ಕಳು ಜೊತೆಯಲ್ಲಿದ್ದರೆ ಇಳಿ ವಯಸ್ಸಿನಲ್ಲೂ ವಯಸ್ಸು ಇಳಿಯುತ್ತದೆ’ ಎಂದು ಎಲ್ಲೋ ಓದಿದ್ದು ನೆನಪಾಗಿ ನಸು ನಗು ಬಂತು. ಪಕ್ಕದಲ್ಲೇ ಕುಳಿತಿದ್ದ ಮೊಮ್ಮಗ ಕಿಶನ್ “ಏನಜ್ಜೀ….. ನಗ್ತಾ ಇದ್ದೀರಿ. ನಂಗೂ ಹೇಳಿ” ಎಂದ. “ಪುಟ್ಟಾ … ನೀನು ಹುಟ್ಟಿದ ಮೇಲೆ ಮೊದಲ ಸಲ ಇಷ್ಟು ದಿನ ಈ ಅಜ್ಜಿಯ ಮನೆಯಲ್ಲಿ ಉಳಿದುಕೊಂಡದ್ದಲ್ವಾ …… ನೀನಿಲ್ಲಿರಲು ಕೊರೋನಾ ಒಂದು ನೆಪವಾಯ್ತಲ್ಲಾ ಅಂತ ನೆನೆಸಿ ನಗು ಬಂತು” ಎಂದೆ. “ಹೌದಜ್ಜೀ …… ಹಳ್ಳಿ ಮನೆ […]
Read More
ಗೂಡು ಅದೊಂದು ಸಾದಾರಣವಾದ ಕೆಂಪು ಹೆಂಚಿನ ಮನೆ. ಇತ್ತ ದೊಡ್ಡದೂ ಅಲ್ಲ,ಅತ್ತ ಚಿಕ್ಕದೂ ಅಲ್ಲ,ಅಂತಹುದು. ಮನೆಯ ಮುಂದೆ ಒಂದಷ್ಟು ದಾಸವಾಳ,ಕಣಗಿಲೆ.ನೀಲಿ ಗೊರಟೆ ಹೂವಿನ ಗಿಡಗಳು. ಪುಟ್ಟ ಕಾಂಪೋಂಡ್,ಹಿತ್ತಲಲಿ ಬಟ್ಟೆ ತೊಳೆಯುವ ಕಲ್ಲು,ಒಂದು ನುಗ್ಗೆ ಮರ,ಬಚ್ಚಲು ನೀರು ಹೋಗುವ ಚರಂಡಿಗೆ ಹೊಂದಿಕೊಂಡಂತೆ ಹರಡಿಕೊಂಡ ಬಸಳೆ ಬಳ್ಳಿ. ಆ ಮನೆಯಲ್ಲಿ ಇದ್ದವರು ಇಬ್ಬರೆ,ಅವನು-ಅವಳು. ಅವರ ಮದುವೆಯಾಗಿ ಎರಡು ವರ್ಷವಾಗಿತ್ತು.ಪ್ರಶಾಂತವಾಗಿ ಹರಿಯುವ ನದಿಯಂತೆ ಬದುಕು ಸಾಗುತ್ತಿತ್ತು.ಅವನು ಬೆಳಿಗ್ಗೆ ಬೇಗಗ ಏಳುತ್ತಿದ್ದ.ತಣ್ಣೀರ ಸ್ನಾನ ಮಾಡಿ ಅಂಗಳದ ಗಿಡಗಳಿಂದ ಹೂ ಬಿಡಿಸಿ ತಂದು ದೇವರ […]
Read More
ಕಕ್ಷೆ ಡಾ.ಅಜಿತ್ ಹರೀಶಿ [11:59 am, 31/05/2020] AJITH HARISHI: ‘ಹಲೋ, ಡಾಕ್ಟ್ರೇ, ನಮ್ಮನೆ ಕೆಂಪಿಗೆ ಹೆರಿಗೆ ನೋವು ಬಂದದ್ರಾ, ಈಗ್ಲೆ ಬತ್ರ?’ ಫೋನ್ ಎತ್ತಿದೊಡನೆ ಹೇಳಿ, ನನ್ನುತ್ತರಕ್ಕೆ ಕಾಯ್ದಿತ್ತು ಆ ಸ್ವರ. ‘ನಾ ಹೆರಿಗೆ ಡಾಕ್ಟರ್ ಅಲ್ಲ, ಮಾರಾಯ್ರ,’ ಅಂದೆ. ‘ಹೋಯ್, ನೀವು ನಮ್ ದನೀನ ಡಾಕ್ಟರ ಅಲ್ದ? ನಾ ಅವ್ರಿಗೆ ಫೋನು ಮಾಡಿದ್ದಾಗಿತ್ತು’. ಫೋನ್ ಕಟ್ ಆಗಿತ್ತು. ** ಆಗಷ್ಟೇ ಆಸ್ಪತ್ರೆ ಆರಂಭಿಸಿದ್ದ ದಿನಗಳು… ಹುಟ್ಟಿದೂರಿನಲ್ಲೇ ವೈದ್ಯವೃತ್ತಿ ಆರಂಭಿಸಿದ್ದರಿಂದ ಉಳಿದ ತೊಡಕುಗಳೇನೂ ಇರಲಿಲ್ಲ. ಹೊಸ ಉತ್ಸಾಹ, […]
Read More
ಒಂದು ವಿಶೇಷ ದಿನ ಮಲಯಾಳಂ ಮೂಲ: ಪೂನತಿಲ್ ಕುಞಬ್ದುಳ್ಳ ಕನ್ನಡಕ್ಕೆ ಚೇತನಾ ಕುಂಬ್ಳೆ ಹಲವು ವರ್ಷಗಳ ನಂತರ, ಅವನು ಚಂದ್ರಿಕಳ ಮನೆಗೆ ಬಂದ. ಕೇವಲ ಚಂದ್ರ ಎಂಬ ಹೆಸರು ಅವನಿಗಿದ್ದದ್ದರಿಂದ ಮಾತ್ರ ಚಂದ್ರಿಕ ಆತನನ್ನು ಧ್ಯಾನಿಸಿದ್ದಲ್ಲ. ಅವನು ಸಿ.ಸಿ ಚಂದ್ರ. ಚಂದ್ರನ್ ಆಂಡ್ ಬ್ರದರ್ಸ್ ನ ಮ್ಯಾನೇಜಿಂಗ್ ಪಾರ್ಟ್ನರ್ ಆಗಿದ್ದ. ಅವರಿಗೆ ನೂರಾರು ಟ್ರಕ್ಕುಗಳೂ, ಹತ್ತಿ ಬಟ್ಟೆ ನೇಯುವ ಮೂರು ದೊಡ್ಡ ಮಿಲ್ಲುಗಳು ತಮಿಳುನಾಡಿನಲ್ಲಿವೆ. ವಿವಿಧ ವ್ಯಾಪಾರ ಸಂಘಟನೆಗಳ ನಾಯಕರನ್ನು ವಶೀಕರಿಸುವ ಮಾದಕ ವಸ್ತುಗಳಿವೆ. ಒಂದು […]
Read More
ಸರಸ್ವತಿ ಜಿ. ಹರೀಶ್ ಬೇದ್ರೆ ಸರಸ್ವತಿ ಮುಂಜಾನೆ ಬೇಗನೇ ಎದ್ದು ಗಂಡ ಮಕ್ಕಳಿಗೆ ಕಾಫಿ ತಿಂಡಿ ಮಾಡಿಕೊಟ್ಟು ಅಂಗಡಿಯ ಬಳಿ ಬರುವ ಹೊತ್ತಿಗೆ ಎಂಟು ಗಂಟೆಯಾಗಿತ್ತು. ಆಗಲೇ ಸಾಮಾಜಿಕ ಅಂತರ ಬಳಸಿ ನಿಂತಿದ್ದ ಕ್ಯೂ ಹೆಚ್ಚುಕಮ್ಮಿ ಅರ್ಧ ಕಿ.ಮೀ.ಗಿಂತ ಉದ್ದವಿತ್ತು. ಅಂಗಡಿ ತೆರೆಯಲು ಇನ್ನೂ ಒಂದು ಗಂಟೆ ಬಾಕಿ ಇತ್ತು. ಅಯ್ಯೋ ಏನಪ್ಪಾ ಮಾಡುವುದು ಎಂದು ಗೊಣಗುತ್ತಲೇ ಸರತಿಯಲ್ಲಿ ನಿಂತಳು. ಕ್ಷಣಕ್ಷಣಕ್ಕೂ ಕ್ಯೂ ಹನುಮಂತನ ಬಾಲದಂತೆ ಬೆಳೆಯುತ್ತಲೇ ಹೋಯಿತು. ಜನರನ್ನು ನಿಯಂತ್ರಿಸಲು ಒಂದಿಬ್ಬರು ಪೋಲಿಸರು ಬಂದರು. […]
Read More
“ಕತ್ತೆಗೊಂದು ಕಾಲ” ಅದು ಗಿರಿಕಂದರ ಪರ್ವತ ಶ್ರೇಣಿಗಳ ನಾಡು. ಅಲ್ಲಿ ಜಯದೇವ ಅರಸನು ರಾಜ್ಯ ಆಳುತಿದ್ದನು. ಆತ ತನ್ನ ಆಸ್ಥಾನದಲ್ಲಿ ಕುದುರೆಗಳ ಜೊತೆಗೆ ಕತ್ತೆಗಳನ್ನು ಸಾಕಿದ್ದನು. ಎಲ್ಲ ರಾಜರು ಕುದುರೆ ಸಾಕುತಿದ್ದರೆ, ಈತ ಮಾತ್ರ ಎರಡನ್ನು ಸಾಕುತಿದ್ದನು. ಈ ಮಾತು ರಾಜ್ಯದ ಎಲ್ಲ ಜನರಿಗೆ ಅಷ್ಟೆ ಅಲ್ಲ, ಕುದುರೆಗಳಿಗೂ ಆಶ್ಚರ್ಯವಾಗಿತ್ತು. ಒಂದು ದಿನ ಸೇವಕರು ಕುದುರೆ ಮತ್ತು ಕತ್ತೆ ಒಟ್ಟಿಗೆ ಬಯಲಲ್ಲಿ ಮೈಯಲು ಬಿಟ್ಟರು. ಆಗ ಮೈಯುತ್ತಾ […]
Read More
ಕೆಪ್ಪ ಅಂಜನಾ ಹೆಗಡೆ ಕೆಪ್ಪನ ಕಥೆ ಶುರುವಾಗುವುದು ನವರಾತ್ರಿಯಿಂದ. ನವರಾತ್ರಿಯೆಂದರೆ ಅದು ಅಂತಿಂಥ ನವರಾತ್ರಿಯಲ್ಲ. ಹಳೇಮನೆ ರಾಮಚಂದ್ರಣ್ಣನ ನವರಾತ್ರಿಯೆಂದರೆ ಯಲ್ಲಾಪುರ ತಾಲೂಕಿನಲ್ಲೆಲ್ಲ ಮನೆಮಾತಾದ ನವರಾತ್ರಿ ಅದು. ಚೌತಿ ಹಬ್ಬ ಮುಗಿದು ಇನ್ನೇನು ಹತ್ತೋ ಹದಿನೈದೋ ದಿನವಾಗುವಷ್ಟರಲ್ಲಿ ರಾಮಚಂದ್ರಣ್ಣನ ನವರಾತ್ರಿಯ ಧಾವಂತ ಶುರುವಾಗುತ್ತಿತ್ತು. ಅಟ್ಟದ ಮೇಲಿನ ಅಡಿಕೆ ಕಂಬಗಳನ್ನು ಒಂದೊಂದಾಗಿ ಕೆಳಗಿಳಿಸಿ ದೇವರಮನೆಯಲ್ಲಿ ನಿಲ್ಲಿಸುವುದರಿಂದ ಶುರುವಾಗುವ ನವರಾತ್ರಿ ಸಂಭ್ರಮ ಹಳೆಮನೆಯಲ್ಲಿ ವಿಜಯದಶಮಿಯವರೆಗೂ ಇರುತ್ತಿತ್ತು. ಅಲ್ಯೂಮಿನಿಯಂ ಬೋಗುಣಿಯೊಂದರಲ್ಲಿ ತಾನೇ ಕೈಯಾರೆ ತಯಾರಿಸಿಕೊಂಡ ಗೋಧಿಅಂಟಿನೊಂದಿಗೆ ಪ್ರತೀರಾತ್ರಿ ರಾಮಚಂದ್ರಣ್ಣ ಶಾರದೆಯ ಮಂಟಪ ರೆಡಿಮಾಡಲು […]
Read More
ಕಿರಿ ದೇವರಿಗೆ ಮರದ ಜಾಗಟೆ. ಕೆ.ಎನ್.ಮಹಾಬಲ ಹನ್ನೊಂದು ಗಂಟೆಗೆ ಬಾಸ್ ನ ಕೋಣೆ ಒಳಗೆ ಹೋಗಿ ಬಂದ ಅಟೆಂಡರ್ ಸಿದ್ದಲಿಂಗು “ಬಾಸ್ ಸಿಟ್ಟಾಗಿದ್ದಾರೆ.’ಏನಯ್ಯ ನನಗೆ ಹುಷಾರಿಲ್ಲ .ನೆಗಡಿ,ತಲೆಭಾರ ಸ್ವಲ್ಪ ಜ್ವರನೂ ಬಂದಂತಿದೆ.ನೀನು ನೋಡಿದ್ರೆ ಇಷ್ಟೊಂದು ಫೈಲ್ ತಂದು ಕುಕ್ಕುತ್ತಿದ್ದೀಯಾ’ಎಂದು ರೇಗಿದರು ಎನ್ನುತ್ತಾ ಹೊರಗೆ ಬಂದ ಸಿದ್ದಲಿಂಗು “ಈ ಸಾಹೇಬರಿಗೆ ಹುಷಾರಿಲ್ಲ ಅಂತ ಯಾರಿಗಾದ್ರೂ ಕನಸು ಬಿದ್ದಿರತ್ತಾ?’ ಎಂದು ಗೊಣಗಿಕೊಂಡ. ಆ ಬಾಸ್ ಗೆ ಹುಷಾರಿಲ್ವ? ಏನಂತೆ ?ಯಾವಾಗಿಂದ?ಡಿಪಾರ್ಟಮೆಂಟಿನಲ್ಲಿದ್ದ ಎಲ್ಲ ಉದ್ಯೋಗಿಗಳು ಒಟ್ಟಿಗೇ ಪ್ರತಿಕ್ರಿಯಿಸಿದರು. “ಬೆಳಿಗ್ಗೆ ನಾನು ಅವರು ಬರೋ ಹೊತ್ತಲ್ಲಿ ಬೇರೆ ಡಿಪಾರ್ಟ್ ಮೆಂಟಿಗೆ ಹೋಗಿದ್ದೆ.ಅವರು ಬಂದ […]
Read More
ಮನಸು ಮಂಜುಗಡ್ಡೆಯಲ್ಲ. ಜ್ಯೋತಿ ಗಾಂವಕರ್ “ಈಗೀಗ ಏನೂ ನಿರೀಕ್ಷೆಗಳೇ ಇಲ್ಲ ನೋಡು ಭಾವನಾತ್ಮಕ ಅವಲಂಬನೆಯೂ ಇಲ್ಲ ಆಪ್ತವಾಗಿ ಏನೋ ಹೇಳ್ಕೊಬೇಕು ಅನ್ಸೋದೇ ಇಲ್ಲ ಎದೆ ಬಂಡೆಯಾಗ್ತಿದೆ ಅನ್ನಿಸ್ತಿದೆ “ ಅಂತ ಗೆಳತಿಯೊಬ್ಬಳು ನಿರ್ಭಾವುಕವಾಗಿ ಹೇಳಿಕೊಳ್ಳುತ್ತಿದ್ದರೆ ….. ” ಹಾಗಾದರೆ ಬಂಡೆಯ ಮೇಲಿಂದ ಇಳಿಯುವ ಜಲಪಾತದಂತಹ ಭೋರ್ಗರೆತವೇನು ? ಭಾವುಕತೆಗೆ ಹುಟ್ಟಿದ ಕಣ್ಣೀರಲ್ಲವಾ” ಅಂತ ಹೇಳಿ ಅವಳನ್ನು ಆ ನಿರ್ಲಿಪ್ತ ಭಾವದಿಂದ ಹೊರತರುವದಕ್ಕೆ ಪ್ರಯತ್ನಿಸುತ್ತಿದ್ದೆ… “ನಿಜ ಬಿಡು ಎಷ್ಟೇ ಕಲ್ಲಾಗಿದ್ದೇವೆಂದರೂ ಈ ಹೆಣ್ಣುಮಕ್ಕಳಿಗೆ ಕರಗೋದು ಅಭ್ಯಾಸ ….ಅತಿ ಭಾವುಕತೆ […]
Read More| Powered by WordPress | Theme by TheBootstrapThemes