Category: ಕಥಾಗುಚ್ಛ

ಕಥಾಗುಚ್ಛ

ಸಣ್ಣ ತಪ್ಪು

ಕಥೆ ಸಣ್ಣ ತಪ್ಪು ಲಕ್ಷ್ಮೀದೇವಿ ಪತ್ತಾರ ಬೆಳಗ್ಗಿನ ಆಹ್ಲಾದಕರ ವಾತಾವರಣ ತಣ್ಣನೆ ಗಾಳಿ ಬೀಸುತ್ತಿತ್ತು. ವಾಕಿಂಗ್ ಮಾಡಿ ಬಂದಿದ್ದರಿಂದ ಸಣ್ಣದಾಗಿ ಬೇವರು ಬರುತ್ತಿತ್ತು. ಸ್ವಲ್ಪ ಹೊತ್ತು ಹೊರಗೆ ಕುಳಿತು ಒಳಗೆ ಹೋದರಾಯಿತು ಎಂದು ವರಾಂಡದ ಮೆಟ್ಟಿಲು ಮೇಲೆ ಕುಳಿತು ವಿಶ್ರಾಂತಿ ತೆಗೆದುಕೊಳ್ಳುತ್ತಿರುವಷ್ಟರಲ್ಲೇ ಬಂದ ಅಕ್ಕಮ್ಮ “ಇವತ್ತೇನು ಅಡುಗೆ ಮಾಡಬೇಕ್ರಿ” ಎಂದಳು. ಅಕ್ಕಮ್ಮ ನಮ್ಮ ಮನೆ ಅಡುಗೆಯಾಕೆ. ಮಗ ಬೆಳಿಗ್ಗೆ 7.30ಕ್ಕೆ ಶಾಲೆಗೆ ಹೋಗುವನು. ಅವನು ಹೋಗುವಷ್ಟರಲ್ಲಿ ಉಂಡು ಬಾಕ್ಸಿಗೆ ಹಾಕಿಕೊಂಡು ಹೋಗಲು ಅಡುಗೆ ಸಿದ್ಧವಾಗಿರಬೇಕು. ಅವಳು ಬಂದರೆ […]

ಭಯ

ಕಥೆ ಭಯ ಲಕ್ಷ್ಮೀದೇವಿ ಪತ್ತಾರ ಸಂಜನಾ ಬೆಳಗ್ಗೆದ್ದ ತಕ್ಷಣ ಪಾರಿಜಾತದ ಗಿಡದತ್ತ ಹೂ ತರಲು ಹೋದಳು. ಹೊತ್ತಾದರೆ ಹೂಗಳು ನೆಲಕ್ಕುರುಳಿ ಬಿಳುವುದೆಂದು ಹೂಬುಟ್ಟಿ ಹಿಡಿದು ಗಿಡದ ಬಳಿ ಹೋದಳು. ಆ ಹೂವೆ ಹಾಗೆ. ಅತಿಸೂಕ್ಷ್ಮವೂ ಅತ್ಯಾಕರ್ಷಕವೂ ಅಲ್ಲದೆ ರಾತ್ರಿ ಅರಳಿ ಬೆಳಗಾಗುವಷ್ಟರಲ್ಲಿ ನೆಲಕ್ಕೆ ಅಲಂಕಾರ ಮಾಡಿದಂತೆ ನೆಲದ ತುಂಬಾ ಅರಳಿ ಬೀಳುತ್ತಿದ್ದವು. ಕೆಲವಷ್ಟು ಗಿಡದ ಮೇಲೆಯೂ ಇರುತ್ತಿದ್ದವು. ಇನ್ನು ಪೂರ್ಣ ಬೆಳಕು ಹರಿಯುವ ಮುನ್ನವೇ ಅವನು ತಂದು ಬಿಡುತ್ತಿದ್ದಳು ಸಂಜನಾ. ಅಂದು ಸ್ವಲ್ಪ ಲೇಟಾಗಿ ಎದ್ದಿರುದರಿಂದ ದೌಡಾಯಿಸಿ […]

ಧೃಡ ಚಿತ್ತ

ಕಥೆ ಧೃಡ ಚಿತ್ತ ವಾಣಿ ಸುರೇಶ್ ರಾತ್ರಿ ಎಲ್ಲಾ ಕೆಲಸ ಮುಗಿಸಿ ರೂಮಿಗೆ ಹೋದ ಹರಿಣಿ ಬಾಲ್ಕನಿಯಲ್ಲಿ ಆಕಾಶ ನೋಡುತ್ತಾ ಸುಮ್ಮನೆ ನಿಂತಳು.ಧಾತ್ರಿ ಹೇಳಿದ ಮಾತು ಇನ್ನೂ ಅವಳ ಕಿವಿಯಲ್ಲಿ ಗುಣಗುಣಿಸುತ್ತಿತ್ತು.ನನಗ್ಯಾಕೆ ಅವಳಂತೆ ಮನೆಯಲ್ಲಿ ಹೇಳಕ್ಕಾಗಲ್ಲ ಎಂದು ಯೋಚಿಸುತ್ತಿರುವಾಗ ಗಂಡ ವಿಜಯ್ ಬಂದು ಪಕ್ಕದಲ್ಲಿ ನಿಂತನು.” ಇನ್ನು ಕೂಡ ಆ ನೆಟ್ ಫ್ಲಿಕ್ಸ್ ಬಗ್ಗೆ ಯೋಚನೆ ಮಾಡುತ್ತಿದ್ಯಾ? ಈಗಿನ ಮಕ್ಕಳು ಗೊತ್ತಲ್ವಾ ಹರಿಣಿ? ನಾವು ನೆಟ್ ಫ್ಲಿಕ್ಸ್ ಸಬ್ಸ್ಕ್ರೈಬ್ ಮಾಡದಿದ್ರೆ ಅವ್ಳು ಯಾರದ್ದೋ ಅಕೌಂಟ್ ಶೇರ್ ಮಾಡಿ […]

ಮನಸೆಂಬ ಮರ್ಕಟ

ಕಥೆ ಮನಸೆಂಬ ಮರ್ಕಟ ವಾಣಿ ಸುರೇಶ್ ಕೆ. ಸ್ಕೂಟರ್ ಕೀ , ಬ್ಯಾಗನ್ನು ತೆಗೆದುಕೊಂಡು ಧಾತ್ರಿ ಟಿವಿ ನೋಡುತ್ತಿದ್ದ ಮಗಳು, ಪೇಪರ್ ಓದುತ್ತಿದ್ದ ಗಂಡ, ತಿಂಡಿ ತಿನ್ನುತ್ತಿದ್ದ ಅತ್ತೆಗೆ ಕೇಳಿಸುವಂತೆ ಜೋರಾಗಿ , ” ಇನ್ನು ಮುಂದೆ ನಾನು ಯಾರ ಬಗ್ಗೆಯೂ ತಲೆ ಕೆಡಿಸಿಕೊಳ್ಳಲ್ಲ ಅಂತ ಡಿಸೈಡ್ ಮಾಡಿದ್ದೇನೆ.ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು  ಪಾಲಿಸಿದರೆ , ನನಗೂ ಆ್ಯಂಗ್ಸೈಟಿ, ಮೈಗ್ರೇನ್‌ ಕಡಿಮೆಯಾಗತ್ತೆ. ಸಣ್ಣಪುಟ್ಟ ವಿಷಯಕ್ಕೆ ನನಗೆ ಮೆಸೇಜ್ ಮಾಡೋದು, ಫೋನ್ ಮಾಡೋದು ಮಾಡ್ಬೇಡಿ. ಫೋನನ್ನು ಸೈಲೆಂಟ್ ಮೋಡಲ್ಲಿ ಇಡ್ತಾ […]

ಸ್ವಾಭಿಮಾನಿ

ಪುಟ್ಟ ಕಥೆ ಸ್ವಾಭಿಮಾನಿ ಮಾಧುರಿ ಕೃಷ್ಣ ಸಂಬಂಧಿ ಮಹಿಳೆ…ಹನ್ನೆರಡಕ್ಕೆ ಮದುವೆಯಾಗಿತ್ತು. ಎಲ್ಲರೂ ಮೊದಲ ಮಗುವಿನ ಬರವಿನಲ್ಲಿದ್ದರೆ ಅಪ್ಪನಾಗುವವನು ಮಾಯ ! ಕಷ್ಟಪಟ್ಟು ಹುಡುಕಿ ಹುಡುಕಿ ಕರೆ ತರುತ್ತಿದ್ದರು.ಮೂರು ಮಕ್ಕಳಾದ ಮೇಲೆ ತಿಳಿವು ಬಂದದ್ದು ಇನ್ನೂ ಇಪ್ಪತ್ತರ ಗಡಿಯಲ್ಲೇ ಇದ್ದ ಯುವತಿ ಹೆಂಡತಿಗೆ. ಬಗಲಲ್ಲೆರಡು ಸೀರೆ ತುರುಕಿಕೊಂಡು ಕಾದೇ ಕಾದಳು. ಐದು ತಿಂಗಳ ಮೊಲೆಹಾಲು ಕುಡಿಯುತ್ತಿದ್ದ ಮಗುವನ್ನು ಕೆಳಗಿಳಿಸಿ ಸದ್ದಿಲ್ಲದೆ ಅಪರರಾತ್ರಿಯಲ್ಲಿ ಗಂಡನ ಹಿಂದೆ ಹೋದಳು.ಟಿಕೇಟು ಕೇಳಿದಾಗ ಮುಂದೆ ಮುದುಡಿ ಕುಳಿತ ಗಂಡನೆಡೆ ಕೈ ಮಾಡಿದಳು. ದೂರದ ತಮಿಳುನಾಡಿನಲ್ಲಿ […]

ವಿಭ್ರಮ

ಕಥೆ ವಿಭ್ರಮ ಮಧುರಾ   ಕರ್ಣಮ್ “ಚರಿ, ಇಪ್ಪ ಎನ್ನ ಪಣ್ಣಣು?” ಎಂದು  ದುಗುಡ ತುಂಬಿದ ಮುಖದಿಂದ ಕೇಳಿದಳು ಆಂಡಾಳು. “ಏನ್ಮಾಡೋದು? ಇದ್ದುದನ್ನು ಇದ್ದ ಹಾಗೇ ಪ್ರಾಮಾಣಿಕವಾಗಿ ನಿಜ ಹೇಳಿಬಿಡೋದು. ನಮ್ಮ ಮನಸ್ಸಿಗಾದ್ರೂ ನೆಮ್ಮದಿ ಇರುತ್ತೆ. ಎಷ್ಟು ದಿನಾಂತ ಸುಳ್ಳು ಪಳ್ಳು ಹೇಳಿ ಮುಚ್ಚಿಟ್ಕೊಳ್ಳೋಕಾಗುತ್ತೆ?” ಎಂದರು ವರದರಾಜ ಐಯ್ಯಂಗರ‍್ರು. “ಗುರುವಾಯೂರಪ್ಪಾ, ನಾನು ನಿಮ್ಮನ್ ಕೇಳ್ತಿದೀನಲ್ಲ, ನನಗೆ ಬುದ್ಧಿ ಇಲ್ಲ.” ಎಂದು ಕೂಗುತ್ತ ಒಳಗೋಡಿದಳು ಆಂಡಾಳು. ಅವಳಿಗೆ ಸಮಸ್ಯೆ ಎಲ್ಲರಿಗೂ ಗೊತ್ತಾಗುವದು ಬೇಡವಾಗಿತ್ತು. ಹಾವೂ ಸಾಯದಂತೆ ಕೋಲೂ ಮುರಿಯದಂತೆ ಮಧ್ಯದ […]

ಬದಲಾವಣೆ

ಕಥೆ ವಿಜಯಶ್ರೀ ಹಾಲಾಡಿಯವರ ಹೊಸ ಕತೆ ಬದಲಾವಣೆ ಕುದಿಸಿ ಆರಿಸಿದ ನೀರಿಗೆ ತಂಪಿನ ಬೀಜವನ್ನು ಹಾಕಿ ರುಚಿಗೊಂಚೂರು ಬೆಲ್ಲ ಸೇರಿಸಿ ಚಮಚದಲ್ಲಿ ಕಲಕುತ್ತ ಕುಳಿತಿದ್ದಾಳೆ ಜುಬೇದಾ. ಫ್ಯಾನ್ ತಿರುಗುತ್ತಿದ್ದರೂ ಸೆಖೆಯೇನೂ ಕಮ್ಮಿಯಿಲ್ಲ, ಅಲ್ಲದೇ ಫ್ಯಾನಿಂದ ಬರುವುದೂ ಬಿಸಿಗಾಳಿಯೇ: ಏನೂ ಸುಖವಿಲ್ಲ. “ನೀನು ಕೆಲಸ ಎಂತ ಮಾಡುವುದು ಬೇಡ, ಸುಮ್ಮನೇ ರೆಸ್ಟ್ ತಕೋ. ಹೊತ್ತುಹೊತ್ತಿಗೆ ಸರಿಯಾಗಿ ತಿನ್ನು. ಪುನಃ ಆಸ್ಪತ್ರೆ ಸೇರಿದರೆ ನನ್ನಿಂದಾಗಲಿಕ್ಕಿಲ್ಲ” ಬೆಳಿಗ್ಗೆ ಅಂಗಡಿಗೆ ಹೋಗುವ ಮುಂಚೆ ಎಚ್ಚರಿಸಿ ಹೋಗಿದ್ದಾನೆ ರಹೀಮ. ಅದಲ್ಲದೆ “ಉಮ್ಮ, ನೀವು ಪೂರ್ತಿ […]

ಕಥಾಯಾನ

‘ಬಾಳ ಬಣ್ಣ’  ವಸುಂಧರಾ ಕದಲೂರು       ಕುಸುಮಳಿಗೆ ವಿವಾಹದ ಏಳು ವರ್ಷದ ಅನಂತರ ಹುಟ್ಟಿದವನೇ ‘ಅಮರಕಿಶೋರ’. ಕುಸುಮಾಳದ್ದು ಮೂವತ್ತರ ಹರಯದಲ್ಲಾದ ವಿವಾಹ.    ತಡವಾದ ವಿವಾಹ ಜೊತೆಗೆ ತಡವಾಗಿಯೇ ಮಗು ಹುಟ್ಟಿದ್ದು. ಈ ಕಾರಣಕ್ಕೋ ಏನೋ ಮಗುವನ್ನು ಐದು ವರ್ಷ ಆಗೋವರೆಗೂ ನೆಲಕ್ಕೆ ಬಿಟ್ಟರೆಎಲ್ಲಿ ನವೆದು ಹೋಗುವುದೋ ಎಂದುಕೊಂಡು ಕೆಳಕ್ಕೆ ಬಿಡದೇ ಕಂಕುಳಲ್ಲಿಟ್ಟುಕೊಂಡು ಸಾಕಿದಳು. ಕಣ್ಣನ್ನು ರೆಪ್ಪೆಗಳು ಹೇಗೆ ಮುಚ್ಚಟೆಯಿಂದ ರಕ್ಷಿಸುತ್ತವೆಯೋ ಹಾಗೆ ಮಗನನ್ನು ನೋಡಿಕೊಳ್ಳುತ್ತಿದ್ದಳು.         ಮಗುವಿಗೆ ಹಸಿವಾಗಿ ಅದು […]

ಕಥಾಯಾನ

ಕನ್ನಡದ ಇಲಿ ವಸುಂಧರಾ ಕದಲೂರು ಅಮ್ಮನ ಕೈ ಹಿಡಿದು ಹಾಲಿನ ಬೂತಿನ ಬಳಿ ನಿಂತಿದ್ದ ಕಿಶೋರನಿಗೆ ಪಕ್ಕದ ಮೋರಿಯಿಂದ ಏನೋ ಚಲಿಸುತ್ತಿರುವುದು ಕಂಡಿತು.          ಅಮ್ಮನ ಕೈಯನ್ನು ಗಟ್ಟಿಯಾಗಿ ಹಿಡಿದವನೇ ಪುನಃ ಆ ಕಡೆಗೇ ನೋಡತೊಡಗಿದ. ಪುಳುಪುಳನೆ ಪುಳಕ್ಕೆಂದು ಬಿಲದಿಂದ ಹೊರಬಂದ ಇಲಿಯೊಂದು ಕಸದ ಡಬ್ಬದ  ಹೊರಗೆ ಚೆಲ್ಲಿದ್ದ ಹಾಲಿನ ಕವರ್ ಅನ್ನು ಸ್ವಲ್ಪ ಎಳೆಯಿತು.       ಬರೀ ಟಾಮ್ ಅಂಡ್ ಜರ್ರಿ ಕಾರ್ಟೂನಿನಲ್ಲಿ ಇಲಿ ನೋಡಿ ಗೊತ್ತಿದ್ದ ಕಿಶೋರ ನಿಜವಾದ […]

ಕೊರೊನಾ ಮತ್ತು ಕಲಾವಿದೆ ಬೇಗಂ…

ಕಥೆ ಕೊರೊನಾ ಮತ್ತು ಕಲಾವಿದೆ ಬೇಗಂ… ಮಲ್ಲಿಕಾರ್ಜುನ ಕಡಕೋಳ ಕೈ ಕಾಲುಗಳಲ್ಲಿ ಥರ್ಕೀ ಹುಟ್ಟಿದಂಗಾಗಿ ನಡುಗ ತೊಡಗಿದವು. ಮೈಯೆಲ್ಲ ಜಲ ಜಲ ಬೆವೆತು ಹೋಯ್ತು. ಎದೆಗುಂಡಿಗೆ ಹಿಂಡಿದಂಗಾಯ್ತು. ಎದ್ದು ಹೋಗಿ ನೀರಿನ ತಂಬಿಗೆ ತುಂಬಿಕೊಳ್ಳಬೇಕೆಂದು ರಗಡ ಪ್ರಯತ್ನ ಮಾಡಿದರೂ ಎದ್ದೇಳಲು ಸಾಧ್ಯವಾಗಲಿಲ್ಲ. ಯಾರಿಗಾದರೂ ಫೋನ್ ಮಾಡಬೇಕೆಂದ್ರೆ ಅವಳ ಡಬ್ಬಾ ಫೋನಲ್ಲಿ ದುಡ್ಡಿಲ್ಲ. ಎರಡು ತಿಂಗಳಿಂದ ಅದು ಬರೀ ಇನ್ಕಮಿಂಗ್ ಸೆಟ್ ಆಗಿತ್ತು. ” ದೈವಹೀನರಿಗೆ ದೇವರೇಗತಿ ” ಎಂಬ ಸಾಳುಂಕೆ ಕವಿಗಳ ನಾಟಕವೊಂದರ ಡೈಲಾಗ್ ನೆನಪಾಗಿ, ದೇವರನ್ನೇ […]

Back To Top