ಕಥಾ ಯಾನ
ಕಥೆ ಸ್ವಾತಂತ್ರ್ಯ ಡಾ.ಪ್ರೇಮಲತ ಬಿ. ನನಗೀಗ ೧೯ ವರ್ಷ. ಕೆಲವೊಮ್ಮೆ ಆಲೋಚನಾ ಲಹರಿಯಿಂದ ನಾನು ಇತರರಿಗಿಂತ ವಿಭಿನ್ನ ಮಿಡಿತಗಳನ್ನು ಹೊಂದಿರುವಂತೆ ಅನಿಸಿದರೂ ತಾರುಣ್ಯದ ದಿನಗಳ ಎಲ್ಲ ಭಾವನೆಗಳ ಉಗಮದ ಪ್ರತಿ ಅನುಭವ ನನಗಾಗಿದೆ. ಮಧ್ಯಮವರ್ಗದ ಸಾಂಪ್ರದಾಯಿಕ ಕುಟುಂಬದಿಂದ ಬಂದಿರುವ ಕಾರಣದಿಂದಲೋ ಏನೋ, ಪ್ರೀತಿ-ಪ್ರೇಮದ ಅಲೆಗಳಲ್ಲಿ, ಡಿಸ್ಕೋ-ಕುಡಿತಗಳ ಅಮಲಿನಲ್ಲಿ ಕೊಚ್ಚಿಹೋಗುವ ಉನ್ಮಾದಕ್ಕಾಗಿ ಮನಸ್ಸು ತೀವ್ರವಾಗಿ ಮಿಡಿದಿಲ್ಲ. ಬದಲು ಸಮಾಜದಲ್ಲಿ ಮುಕ್ತತೆಯನ್ನು ಕಾಣುವ, ಸ್ವಾತಂತ್ರದ ಸಂಪೂರ್ಣ ಸ್ವೇಚ್ಚೆಗಾಗಿ ನನ್ನ ಮನಸ್ಸು ತುಮಲಗೊಳ್ಳುತ್ತದೆ. ಧೀಮಂತ ಯುವ ಶಕ್ತಿಯನ್ನು ಬಳಸಿ ಈ ಸಂಕುಚಿತ […]
ನೂರು ಪದಗಳಮೂರು ಕಥೆಗಳು
ಕಥೆಗಳು ಡಾ.ಪ್ರೇಮಲತ ಬಿ. ಸಮಸ್ಯೆ ಆ ಮನೆಯಲ್ಲಿದ್ದ ಎಲ್ಲರೂ ಚಿಂತಾಕ್ರಾಂತರಾಗಿದ್ದರು. ವಿಷಯವೂ ಗಂಭೀರದ್ದೇ ಆಗಿತ್ತು. ಸಮಸ್ಯೆಯ ಜಾಡನ್ನಿಡಿದು ಅದು ಹೇಗೆ ಶುರುವಾಯ್ತು, ಹೇಗೆ ಬೆಳೆಯಿತು ಎಂದು ಮತ್ತೆ ಮತ್ತೆ ಎಷ್ಟು ಯೋಚಿಸಿದರೂ ಅದಕ್ಕೊಂದು ಉತ್ತಮ ಪರಿಹಾರ ಹೊಳೆದಿರಲಿಲ್ಲ. ಒಂದು ರೀತಿಯ ಒಪ್ಪಂದಮಾಡಿಸಿದರೆ, ನಿಮ್ಮಿ ಮತ್ತು ಶೈಲಜಾರ ಬದುಕು ಹಸನಾಗುತ್ತಿತ್ತು ಆದರೆ ರಾಘವನಿಗೆ ಘೋರ ಅನ್ಯಾಯವಾಗುತ್ತಿತ್ತು. ರಾಘವನ ಕಡೆ ವಾಲಿದರೆ ಇಡೀ ಸ್ತ್ರೀ ಕುಲಕ್ಕೇ ಮಸಿ ಬಳೆವಂತ ಪರಿಹಾರ ಹೇಳಿದ ಪಾಪ ವೆಂಕಣ್ಣಯ್ಯನ ಹೆಗಲೇರಿ ಕಾಡುತ್ತಿತ್ತು. ಈ ಸಂದಿಗ್ದದಲ್ಲಿ […]
ಸಹನೆಯ ತೇರು
ಕಥೆ ಸುಧಾ ಹಡಿನಬಾಳ. ರೀ, ನಿನ್ನೆ ಅವರೆಲ್ಲಾ ನಗ್ ನಗ್ತಾ ಮಾತಾಡ್ತಿರ್ವಾಗ ನೀವ್ಯಾಕ್ರಿ ಮಂಕಾಗಿ ಕುತಿದ್ರಿ? ನೀವೂ ನಗ್ತಾ ಮಾತಾಡ್ತಾ ಇದ್ರೆ ನಂಗೆ ಎಷ್ಟು ಖುಷಿ ಆಗ್ತಿತ್ತು ಗೊತ್ತಾ’ ಎನ್ನುತ್ತ ನಿನ್ನೆಯ ಅಮ್ಮನ ಮನೆ ಸಡಗರದ ಗುಂಗಲ್ಲೇ ಗಂಡನ ಕೊರಳಿಗೆ ಜೋತು ಬಿದ್ದು ಲಲ್ಲೆಗರೆದಳು ಸ್ವಾತಿ. ಅಷ್ಟೇ ನಿರ್ದಾಕ್ಷಿಣ್ಯವಾಗಿ ಅವಳ ಕೈಗಳನ್ನು ತಳ್ಳಿ ‘ ಒಹೋ, ನಿನ್ ತರನೆ ಕಂಡವರ ಜೊತೆ ಎಲ್ಲಾ ಹಲ್ ಕಿರ್ದು ನಗ್ಬೇಕಿತ್ತಾ? ನಿಂಗೆ ನೀನು ಮದುವೆ ಆಗಿರೋಳು ಅನ್ನೋದೆ ಮರ್ತು […]
ಧಾರವಾಡದ ಹೇಮಾಮಾಲಿನಿ
ಸಣ್ಣ ಕಥೆ ಬಸವರಾಜ ಹೂಗಾರ ಆಕೆ ಒಡೆದ ಪ್ರತಿಮೆಯಂತಿದ್ದಳು. ಬಿದ್ದ ಪ್ರತಿಮೆಯ ಯಾವುದೇ ಚೂರಾದ ಸಂಗತಿಯನ್ನು ಎತ್ತಿಕೊಂಡರೂ ಅಲ್ಲಿಂದ ಬಿಂಬಗಳು ಕಾಣಿಸುತ್ತಿದ್ದವು . ಆಕೆ ಹೆಚ್ಚು ಪ್ರೇಮದ ಕುರಿತು ಮಾತನಾಡುತ್ತಿದ್ದಳು ಆಕೆಯ ಡ್ರೆಸ್ಸಿನದೇ ಒಂದು ವಿಚಿತ್ರ ಡಿಸೈನ್ .ಕಟ್ಟಿಕೊಂಡ ಬಣ್ಣದ ಬಟ್ಟೆಯ ತುಣುಕುಗಳು ,ಬೊಚ್ಚು ಬಾಯಿ ,ಅರ್ಧ ಗೌನೊ ,ಬಣ್ಣದ ಗಗ್ಗರಿಯನ್ನೊ ಉಟ್ಟುಕೊಂಡು ಬಗಲಿಗೆ ಜೋಳಿಗೆ ಏರಿಸಿ ತನ್ನಷ್ಟಕ್ಕೆ ತಾನೇ ಮಾತಾಡಿಕೊಳ್ಳುತ್ತಾ ಕೆಲವು ಸಾರಿ ದಿವ್ಯ ಮೌನ ವಹಿಸುತ್ತಾ ಚಿಂದಿ ಆಯುತ್ತಿದ್ದರೆ, ಅದು ಧಾರವಾಡ ಗೊತ್ತಿದ್ದವರಾಗಿದ್ದರೆ ಖಂಡಿತ […]
ಅಲೀಕತ್ತು
ಅಲೀಕತ್ತು ಕಥೆ ಕೆ. ಎ. ಎಂ. ಅನ್ಸಾರಿ “ನಮ್ಮ ಮಗಳು ಆಮಿನಾ ಳಿಗೆ ವಯಸ್ಸು ಹನ್ನೆರಡು ಆಯಿತಲ್ಲವೇ…? ಇನ್ನು ಒಂದೆರಡು ವರ್ಷ ಆದ್ರೆ ಮದುವೆ ಗಂಡು ಹುಡುಕಬೇಕು… ಅದಕ್ಕಿಂತ ಮೊದಲು ಅವಳಿಗೆ ಅಲೀಕತ್ತು ತೊಡಿಸಬೇಕಲ್ಲಾ…” ಪೋಕರ್ ಹಾಜಿ ಮಡದಿ ಪಾತುವಿನಲ್ಲಿ ಹೇಳುವುದು ಆಮಿನಾಳಿಗೆ ಕೇಳಿಸುತ್ತಿತ್ತು ಅಲೀಕತ್ತು ಎಂಬ ಪದ ಕೇಳುತ್ತಿದ್ದಂತೆಯೇ ಅಪ್ಪನ ಮಂಚದ ಕೆಳಗೆ ಮಲಗಿದ್ದ ಅಮಿನಾ ನಾಚಿ ನೀರಾದಳು… ಅವಳಿಗೆ ಬಂಗಾರವೆಂದರೆ ಪ್ರಾಣ. ಆಮಿನಾ ಕೇಳಿಸಿಕೊಂಡವಳಂತೆ ನಟಿಸಲಿಲ್ಲ.. ಅವಳಷ್ಟಕ್ಕೆ ಚಾಪೆಯಲ್ಲಿ ಹೊರಳಾಡುತ್ತಿದ್ದಳು… … ರಾತ್ರಿ ಸುಮಾರು […]
ನಾಯಿ ಮತ್ತು ಬಿಸ್ಕತ್ತು
ಕಿರು ಕಥೆ ನಾಗರಾಜ ಹರಪನಹಳ್ಳಿ ಆತ ದಂಡೆಗೆ ಬಂದು ಕುಳಿತ. ಎಲ್ಲಾ ಕಡೆ ಬಂಧನಗಳಿಂದ ಬಿಗಿದ ಜಗತ್ತು ಸಾಕೆನಿಸಿತ್ತು. ರಸ್ತೆಗಳೆಲ್ಲೆ ಮಕಾಡೆ ಮಲಗಿದ್ದವು. ಜನರ ಸುಳಿವಿಲ್ಲ.ಮುಚ್ಚಿದ ಹೋಟೆಲ್ಲು, ಲಾಡ್ಜು, ಅಂಗಡಿ ಬಾಗಿಲು. ಗೂಡಂಗಡಿಗಳು ಬಲವಾದ ಹಗ್ಗಗಳಿಂದ ಬಂಧಿಸಲ್ಪಟ್ಟಿದ್ದವು. ಇಡೀ ನಗರ ಸತ್ತು ಹೋಗಿತ್ತು. ಬಿಕೊ ಅನ್ನುತ್ತಿದ್ದ ಬಸ್ ಸ್ಟ್ಯಾಂಡ್. ಬಿಕ್ಷುಕುರ ಸುಳಿವು ಸಹ ಇಲ್ಲ.ಮನುಷ್ಯರ ಸುಳಿವಿಲ್ಲ. ಪ್ರತಿ ಸರ್ಕಲ್ ನಲ್ಲಿ ಸುರಿವ ಉರಿ ಬಿಸಿಲಲ್ಲಿ ಖಾಲಿ ರಸ್ತೆಗಳನ್ನು ಪೊಲೀಸರು ಕಾಯುತ್ತಿದ್ದರು. ಭೀತಿ ಮತ್ತು ಭಯ ಸ್ಪರ್ಧೆಗೆ ಬಿದ್ದಂತೆ […]
ಅಮ್ಮಿಣಿ
ಕಿರುಗಥೆ ಕೆ. ಎ. ಎಂ. ಅನ್ಸಾರಿ ಅಮ್ಮಿಣಿಗೆ ಒಂದೇ ಚಿಂತೆ… ಸೂರ್ಯೋದಯಕ್ಕೆ ಮೊದಲೇ ಹೊರಡುವ ಗಂಡ ಸುಂದ ವಾಪಸ್ಸು ಬರುವಾಗ ಕತ್ತಲೆಯಾಗುತ್ತದೆ. ಖಂಡಿತಾ ಅವನು ಹೆಚ್ಚಿನ ಸಮಯ ಲಚ್ಚಿಮಿ ಯ ಗುಡಿಸಲಲ್ಲೇ ಕಳೆಯುತ್ತಿರಬಹುದು. ರಾತ್ರಿ ತನ್ನ ಗುಡಿಸಲು ಸೇರಿದರೆ ಗದ್ದಲ ಬೇರೆ. ಸಾರಾಯಿ ಏರಿಸದೆ ಒಂದು ದಿನವೂ ಬಂದದ್ದಿಲ್ಲ. ಹಾಗೆಂದು ಮನೆ ಖರ್ಚಿಗೆ ಕೊಡುವುದಿಲ್ಲ ಎಂದಲ್ಲ. ಮಕ್ಕಳ ಮೇಲೆ ಪ್ರೀತಿಯಿದೆ .. ಆದರೂ ಆ ಲಚ್ಚಿಮಿ ಯ ಗುಡಿಸಲಲ್ಲಿ ಅವನಿಗೆ ಏನು ಇಷ್ಟು ಕೆಲಸ .. ? […]
ಕಾದ್ರಿಯಾಕ ಮತ್ತು ನಾಡ ದೋಣಿ
ಕಿರು ಕಥೆ ಕೆ.ಎ. ಎಂ. ಅನ್ಸಾರಿ ಪಕ್ಕದ ಮಸೀದಿಯ ಬಾಂಗು(ಅಜಾನ್) ಕೇಳಿದಾಗ ಎದ್ದೇಳುವ ಕಾದ್ರಿಯಾಕನ ದಿನಚರಿ ಮಗ್ರಿಬ್ (ಮುಸ್ಸಂಜೆ) ವರೆಗೂ ಮುಂದುವರಿಯುತ್ತಿತ್ತು. ಬೆಳಗ್ಗೆ ಎದ್ದಕೂಡಲೇ ದೋಣಿಯ ಹತ್ತಿರ ಹೋಗಿ ದೋಣಿಯ ಸುತ್ತ ಒಂದು ಪ್ರದಕ್ಷಿಣೆ ಹಾಕಿ ಅದರ ಪ್ರತಿ ಭಾಗಕ್ಕೆ ಒಂದು ಚಿಕ್ಕ ಏಟು. ನಂತರ ದೋಣಿಯ ಒಳಗಡೆ ಕುಳಿತುಕೊಳ್ಳುವ ಆಸನದ ಪರಿಶೀಲನೆ… ಎಲ್ಲೂ ಹಲಗೆ ಅಲುಗಾಡುತ್ತಿಲ್ಲ… ಎಂಬುದನ್ನು ಖಾತ್ರಿಪಡಿಸುವಿಕೆ. ನಂತರ ಕಂಗಿನ ಹಾಳೆಯಿಂದ ಮಾಡಿದ ಚಿಳ್ಳಿ (ನೀರೆತ್ತಲು ಮಾಡಿದ ದೇಸಿ ಪರಿಕರ)ಯಿಂದ ದೋಣಿಯೊಳಗಿನ ನೀರನ್ನು ಹೊರಚೆಲ್ಲುವುದು. […]
ಹಿ ಈಸ್ ಅನ್ಲೈನ್..ಬಟ್ ನಾಟ್ ಫಾರ್ ಯೂ. …..
ಕಥೆ ನಂದಿನಿ ವಿಶ್ವನಾಥ ಹೆದ್ದುರ್ಗ. “ನಾಡಿದ್ದು ಒಂದು ಇಂಟರವ್ಯೂ ಮಾಡೋಕಿದೆ.ಅವರ ಫೋನ್ ನಂಬರ್ ಜೊತೆಗೆ ಉಳಿದ ಡೀಟೈಲ್ಸ್ ಕಳಿಸ್ತಿನಿ.ಪ್ಲಾಂಟೇಷನ್ ನಲ್ಲಿ ಅವರು ಮಾಡಿರೋ ಸಾಧನೆಯ ಸಣ್ಣ ವಿವರವನ್ನೂ ಕಳಿಸ್ತೀನಿ.ಡೇಟ್ ನೆನಪಿರ್ಲಿ” ಅಂತ ಒಂದೇ ಉಸುರಿಗೆ ಹೇಳಬೇಕಾದ್ದನ್ನೆಲ್ಲಾ ಹೇಳಿ ಮುಗಿಸಿದ. ಅವನ ಸಮಯ ಅವನಿಗೆ ಬಹಳ ಮಹತ್ವದಂತೆ.ಹಾಗಂತ ಪದೇಪದೇ ಹೇಳ್ತಾನೆ ಇರ್ತಾನೆ. ಅದೂ ಇತ್ತೀಚಿಗೆ. ಅವನ ಜೊತೆಗೆ ಮಾತಾಡುವಾಗ ಸ್ವರ ಆದಷ್ಟೂ ಸಹಜವಾಗಿರೋದಿಕ್ಕೆ ಪ್ರಯತ್ನಿಸ್ತೀನಿ. ಅವನಿಗೆ ಕಾಲ್ ಮಾಡಿ ಆ ಕಡೆಯಿಂದ ಬರುವ ಮೊದಲ ಹಲೋಗೆ ಎದೆ ಮೂರು […]
ನಡಿ ಕುಂಬಳವೇ ಟರಾ ಪುರಾ
ಕಥೆ ಪ್ರಜ್ಞಾ ಮತ್ತಿಹಳ್ಳಿ ಇನ್ನೇನು ಈ ಬಸ್ಸು ಇಳಿದಿಳಿದು ಕೆರೆಯೊಳಗೇ ನುಗ್ಗಿ ಬಿಡುತ್ತದೆ ಎಂಬ ಭಾವ ಬಂದು ಮೈ ಜುಂ ಎನ್ನುವಷ್ಟರಲ್ಲಿ ರೊಯ್ಯನೆ ಎಡಕ್ಕೆ ತಿರುಗಿ ದಟ್ಟ ಕಾಡಿನ ಏರಿ ಶುರುವಾಗುತ್ತದೆ. ಅಂದರೆ ಇದರರ್ಥ ಇಳಿಯೂರು ಎಂಬ ಊರು ದಾಟಿತು ಹಾಗೂ ತಲೆಯೂರಿಗೆ ೧೫ ಕಿ.ಮೀ ಉಳಿದಿದೆ ಅಂತ. ಮೂರು ಜನರ ಸೀಟಿನ ಎಡತುದಿಗೆ ಕೂತಿದ್ದ ಬಸವರಾಜ ಎಡಬದಿಯ ಕಂಬಿಯನ್ನು ಗಟ್ಟಿಯಾಗಿ ಹಿಡಿದುಕೊಂಡು ಬೀಳುವುದನ್ನು ತಪ್ಪಿಸಿಕೊಳ್ಳುತ್ತಿದ್ದಾನೆ. ಇಕ್ಕೆಲದ ಎತ್ತೆತ್ತರದ ಮರಗಳು, ಅವುಗಳ ದಟ್ಟ ನೆರಳಿನಲ್ಲಿ ಬಿಸಿಲೇ […]