ಬಣ್ಣದ ವೇಷ
ಕಥೆ ಪ್ರಜ್ಞಾ ಮತ್ತಿಹಳ್ಳಿ ನೀಲಕಮಲವೆಂದು ಚೆಂದನೆಯ ಸ್ಟಿಕ್ಕರ್ ಅಂಟಿಸಿಕೊಂಡು ಫಳಫಳ ಹೊಳೆಯುತ್ತಿದ್ದ ಸ್ಟೀಲು ತಾಟು ಢಮಾರ್ ಎಂಬ ದೊಡ್ಡ ಸಪ್ಪಳದೊಂದಿಗೆ ಗೋಡೆಗೆ ಮುಖ ಗುದ್ದಿಕೊಂಡು ನೆಲಕಪ್ಪಳಿಸುವುದು, ಅದೇ ಗೋಡೆಯ ಮೇಲೆ ನೇತಾಡುವ ಬಂಗಾರ ಬಣ್ಣದ ಗುಂಡು ಮೋರೆಯ ಗಡಿಯಾರ ಢಣ್ ಢಣ್ ಎಂದು ಒಂಭತ್ತು ಸಲ ಹೊಡೆದುಕೊಳ್ಳುವುದೂ ಏಕಕಾಲದಲ್ಲಿಯೇ ಘಟಿಸುವ ಮೂಲಕ ತಗ್ಗಿನಕೇರಿಯೆನ್ನುವ ಊರಿನಲ್ಲೇ ಹೆಚ್ಚು ತಗ್ಗಾಗಿರುವ ಆ ಕೇರಿಯಲ್ಲೊಂದು ಯುದ್ಧ ಘೋಷಣೆಯಾಗಿತ್ತು. ದುರವೀಳ್ಯವನ್ನು ತನ್ನ ಕುದಿಯುವ ಮನಸ್ಸಿನಲ್ಲಿಯೇ ತಯಾರಿಸಿಕೊಂಡ ನಾಗಲಕ್ಷ್ಮಿ ಹೆಡೆಯಾಡಿಸುವ ಘಟಸರ್ಪದಂತೆ ಧುಸ್ ಧುಸ್ […]
ಕಡಲಲೆಗಳ ಲೆಕ್ಕ
ಕಥೆ ಸುಧಾ ಹೆಚ್.ಎನ್ ರುಕ್ಮಿಣಮ್ಮ ಕಡಲಿನ ಮಗಳು. ಹುಟ್ಟಿದ್ದು, ಬೆಳೆದದ್ದು, ಪ್ರತಿ ಬೆಳಗು, ಪ್ರತಿರಾತ್ರಿ ಕಳೆದದ್ದು ಸಮುದ್ರದ ಜೊತೆಗೇ. ಮೀನುಗಳ ವ್ಯಾಪಾರ ಮಾಡುತ್ತಿದ್ದ ತಂದೆಯ, ಜೀವನದ ಜೊತೆಗಾರನಾದ ಪಾಂಡುರಂಗನ ಮನೆಯಿದ್ದದ್ದು ಕಡಲತೀರದಲ್ಲೇ. ತಮ್ಮ ಸುಮಾರು ಎಂಬತ್ತು ವರ್ಷದ ಜೀವಮಾನವನ್ನು ಕಣ್ಣಳತೆಯಲ್ಲಿದ್ದ ಅಗಾಧ ಸಮುದ್ರ, ಅವಿರತವಾಗಿ ಕೇಳಿಬರುತ್ತಿದ್ದ ಅಲೆಗಳ ಮೊರೆತ, ಮೀನು….ಇತರೆ ವಾಸನೆಯ ಜೊತೆಗೆ ಜೀವನ ಸವೆಸಿದ್ದರು ರುಕ್ಮಿಣಮ್ಮ. ರುಕ್ಮಿಣಮ್ಮ ಮತ್ತು ಪಾಂಡುರಂಗಪ್ಪ ಐವರು ಮಕ್ಕಳಿಗೆ ತಮ್ಮ ಕೈಲಾದ ಮಟ್ಟಿಗೆ ವಿದ್ಯಾಭ್ಯಾಸ ಕೊಡಿಸಿ, ಮದುವೆ ಮಾಡಿದ್ದರು. ಎಲ್ಲಾ […]
ಅಬ್ಬರವಿಳಿದಾಗ
ಶೈಲಜಾ ಹಾಸನ್ ತಣ್ಣಗೆ ಗಾಳಿ ಬೀಸಿದಂತಾಗಿ ಮಾಧವಿ ನಡುಗಿದಳು. ಕೆರೆ ಏರಿ ಮೇಲೆ ಕುಳಿತಿದ್ದರಿಂದ ಕೆರೆಯ ಮೇಲಿಂದ ಹಾದು ಬರುತ್ತಿದ್ದ ಗಾಳಿ ಎದೆ ನಡುಗಿಸುವಂತಿತ್ತು. ಚಳಿ ಆಗುತ್ತಿದ್ದರೂ ಮಾಧವಿಗೆ ಮನೆಗೆ ಹೋಗುವ ಮನಸ್ಸು ಇರಲಿಲ್ಲ. ಏರಿ ಮೇಲೆ ಕುಳಿತು ಸಾಕಾದ ಮಾಧವಿ ನಿಧಾನವಾಗಿ ಕೆಳಗಿಳಿದು ನೀರಿಗೆ ಕಾಲು ಇಳಿಬಿಟ್ಟು ಚಪ್ಪಡಿ ಮೇಲೆ ಕುಳಿತಳು. ಕಾಲುಗಳೆರಡನ್ನು ನೀರಿನಲ್ಲಿ ಆಡಿಸುತ್ತಾ ಕಾಲಬೆರಳನ್ನು ಕಚ್ಚಲು ಬರುತ್ತಿದ್ದ ಮೀನುಗಳೊಡನೆ ಆಟವಾಡತೊಡಗಿದಳು. ಕೆಲವು ನಿಮಿಷಗಳಷ್ಟೆ ಆ ಆಟವೂ ಮುದ ನೀಡದೆ […]
ಕಥಾಯಾನ
ಮರಳಿನ ಕಥೆ ರಮೇಶ್ ನೆಲ್ಲಿಸರ ತುಂಗಾನದಿಯ ನೀರನ್ನು ಕುಡಿದೊ ಅಥವಾ ಬೆಳೆಗಳಿಗೆ ಹಾಯಿಸಿ ಬದುಕು ಕಟ್ಟಿಕೊಂಡವರು ಹಲವರಾದರೆ ತುಂಗೆಯ ಒಡಲ ಬಗೆದು ಮರಳು ತೆಗೆಯುವುದರ ಮೂಲಕ ಸಿರಿತನದ ಸುಪ್ಪತ್ತಿಗೆಯನ್ನು ಅನುಭವಿಸುತ್ತಿರುವವರು ಕೆಲವೇ ಕೆಲವರು, ರಾಜಕೀಯದ ವಾಸನೆ ತುಂಗೆಯ ಎಡಬಲದ ಮರಳು ಕ್ವಾರಿಗಳ ಪ್ರತಿ ಮರಳಿನ ಕಣದಲ್ಲಿ ಹಿಂದೆಯೂ ಇತ್ತು ಈಗಲೂ ಇದೆ. ಅಂದ ಹಾಗೆ ನಾನು ಹೇಳ ಹೊರಟಿದ್ದು ಈ ಮರಳು ಮಾಫಿಯಾದ ಕುರಿತು ಅಲ್ಲ!, ಈ ಮರಳು ದಂಧೆಗೆ ಅಂಟಿಕೊಂಡಿರುವ ಕೆಲಸಗಾರರ ಕುರಿತು, ಆಗ 2002-03 […]
ಕಥಾಯಾನ
ಕಾಲೋ ಜಗದ್ಭಕ್ಷಕಃ ಅನುಪಮಾ ರಾಘವೇಂದ್ರ ‘ಮಕ್ಕಳು ಮೊಮ್ಮಕ್ಕಳು ಜೊತೆಯಲ್ಲಿದ್ದರೆ ಇಳಿ ವಯಸ್ಸಿನಲ್ಲೂ ವಯಸ್ಸು ಇಳಿಯುತ್ತದೆ’ ಎಂದು ಎಲ್ಲೋ ಓದಿದ್ದು ನೆನಪಾಗಿ ನಸು ನಗು ಬಂತು. ಪಕ್ಕದಲ್ಲೇ ಕುಳಿತಿದ್ದ ಮೊಮ್ಮಗ ಕಿಶನ್ “ಏನಜ್ಜೀ….. ನಗ್ತಾ ಇದ್ದೀರಿ. ನಂಗೂ ಹೇಳಿ” ಎಂದ. “ಪುಟ್ಟಾ … ನೀನು ಹುಟ್ಟಿದ ಮೇಲೆ ಮೊದಲ ಸಲ ಇಷ್ಟು ದಿನ ಈ ಅಜ್ಜಿಯ ಮನೆಯಲ್ಲಿ ಉಳಿದುಕೊಂಡದ್ದಲ್ವಾ …… ನೀನಿಲ್ಲಿರಲು ಕೊರೋನಾ ಒಂದು ನೆಪವಾಯ್ತಲ್ಲಾ ಅಂತ ನೆನೆಸಿ ನಗು ಬಂತು” ಎಂದೆ. “ಹೌದಜ್ಜೀ …… ಹಳ್ಳಿ ಮನೆ […]
ಗೂಡು ಅದೊಂದು ಸಾದಾರಣವಾದ ಕೆಂಪು ಹೆಂಚಿನ ಮನೆ. ಇತ್ತ ದೊಡ್ಡದೂ ಅಲ್ಲ,ಅತ್ತ ಚಿಕ್ಕದೂ ಅಲ್ಲ,ಅಂತಹುದು. ಮನೆಯ ಮುಂದೆ ಒಂದಷ್ಟು ದಾಸವಾಳ,ಕಣಗಿಲೆ.ನೀಲಿ ಗೊರಟೆ ಹೂವಿನ ಗಿಡಗಳು. ಪುಟ್ಟ ಕಾಂಪೋಂಡ್,ಹಿತ್ತಲಲಿ ಬಟ್ಟೆ ತೊಳೆಯುವ ಕಲ್ಲು,ಒಂದು ನುಗ್ಗೆ ಮರ,ಬಚ್ಚಲು ನೀರು ಹೋಗುವ ಚರಂಡಿಗೆ ಹೊಂದಿಕೊಂಡಂತೆ ಹರಡಿಕೊಂಡ ಬಸಳೆ ಬಳ್ಳಿ. ಆ ಮನೆಯಲ್ಲಿ ಇದ್ದವರು ಇಬ್ಬರೆ,ಅವನು-ಅವಳು. ಅವರ ಮದುವೆಯಾಗಿ ಎರಡು ವರ್ಷವಾಗಿತ್ತು.ಪ್ರಶಾಂತವಾಗಿ ಹರಿಯುವ ನದಿಯಂತೆ ಬದುಕು ಸಾಗುತ್ತಿತ್ತು.ಅವನು ಬೆಳಿಗ್ಗೆ ಬೇಗಗ ಏಳುತ್ತಿದ್ದ.ತಣ್ಣೀರ ಸ್ನಾನ ಮಾಡಿ ಅಂಗಳದ ಗಿಡಗಳಿಂದ ಹೂ ಬಿಡಿಸಿ ತಂದು ದೇವರ […]
ಕಥಾಯಾನ
ಕಕ್ಷೆ ಡಾ.ಅಜಿತ್ ಹರೀಶಿ [11:59 am, 31/05/2020] AJITH HARISHI: ‘ಹಲೋ, ಡಾಕ್ಟ್ರೇ, ನಮ್ಮನೆ ಕೆಂಪಿಗೆ ಹೆರಿಗೆ ನೋವು ಬಂದದ್ರಾ, ಈಗ್ಲೆ ಬತ್ರ?’ ಫೋನ್ ಎತ್ತಿದೊಡನೆ ಹೇಳಿ, ನನ್ನುತ್ತರಕ್ಕೆ ಕಾಯ್ದಿತ್ತು ಆ ಸ್ವರ. ‘ನಾ ಹೆರಿಗೆ ಡಾಕ್ಟರ್ ಅಲ್ಲ, ಮಾರಾಯ್ರ,’ ಅಂದೆ. ‘ಹೋಯ್, ನೀವು ನಮ್ ದನೀನ ಡಾಕ್ಟರ ಅಲ್ದ? ನಾ ಅವ್ರಿಗೆ ಫೋನು ಮಾಡಿದ್ದಾಗಿತ್ತು’. ಫೋನ್ ಕಟ್ ಆಗಿತ್ತು. ** ಆಗಷ್ಟೇ ಆಸ್ಪತ್ರೆ ಆರಂಭಿಸಿದ್ದ ದಿನಗಳು… ಹುಟ್ಟಿದೂರಿನಲ್ಲೇ ವೈದ್ಯವೃತ್ತಿ ಆರಂಭಿಸಿದ್ದರಿಂದ ಉಳಿದ ತೊಡಕುಗಳೇನೂ ಇರಲಿಲ್ಲ. ಹೊಸ ಉತ್ಸಾಹ, […]
ಕಥಾಯಾನ
ಒಂದು ವಿಶೇಷ ದಿನ ಮಲಯಾಳಂ ಮೂಲ: ಪೂನತಿಲ್ ಕುಞಬ್ದುಳ್ಳ ಕನ್ನಡಕ್ಕೆ ಚೇತನಾ ಕುಂಬ್ಳೆ ಹಲವು ವರ್ಷಗಳ ನಂತರ, ಅವನು ಚಂದ್ರಿಕಳ ಮನೆಗೆ ಬಂದ. ಕೇವಲ ಚಂದ್ರ ಎಂಬ ಹೆಸರು ಅವನಿಗಿದ್ದದ್ದರಿಂದ ಮಾತ್ರ ಚಂದ್ರಿಕ ಆತನನ್ನು ಧ್ಯಾನಿಸಿದ್ದಲ್ಲ. ಅವನು ಸಿ.ಸಿ ಚಂದ್ರ. ಚಂದ್ರನ್ ಆಂಡ್ ಬ್ರದರ್ಸ್ ನ ಮ್ಯಾನೇಜಿಂಗ್ ಪಾರ್ಟ್ನರ್ ಆಗಿದ್ದ. ಅವರಿಗೆ ನೂರಾರು ಟ್ರಕ್ಕುಗಳೂ, ಹತ್ತಿ ಬಟ್ಟೆ ನೇಯುವ ಮೂರು ದೊಡ್ಡ ಮಿಲ್ಲುಗಳು ತಮಿಳುನಾಡಿನಲ್ಲಿವೆ. ವಿವಿಧ ವ್ಯಾಪಾರ ಸಂಘಟನೆಗಳ ನಾಯಕರನ್ನು ವಶೀಕರಿಸುವ ಮಾದಕ ವಸ್ತುಗಳಿವೆ. ಒಂದು […]
ಕಥಾಯಾನ
ಸರಸ್ವತಿ ಜಿ. ಹರೀಶ್ ಬೇದ್ರೆ ಸರಸ್ವತಿ ಮುಂಜಾನೆ ಬೇಗನೇ ಎದ್ದು ಗಂಡ ಮಕ್ಕಳಿಗೆ ಕಾಫಿ ತಿಂಡಿ ಮಾಡಿಕೊಟ್ಟು ಅಂಗಡಿಯ ಬಳಿ ಬರುವ ಹೊತ್ತಿಗೆ ಎಂಟು ಗಂಟೆಯಾಗಿತ್ತು. ಆಗಲೇ ಸಾಮಾಜಿಕ ಅಂತರ ಬಳಸಿ ನಿಂತಿದ್ದ ಕ್ಯೂ ಹೆಚ್ಚುಕಮ್ಮಿ ಅರ್ಧ ಕಿ.ಮೀ.ಗಿಂತ ಉದ್ದವಿತ್ತು. ಅಂಗಡಿ ತೆರೆಯಲು ಇನ್ನೂ ಒಂದು ಗಂಟೆ ಬಾಕಿ ಇತ್ತು. ಅಯ್ಯೋ ಏನಪ್ಪಾ ಮಾಡುವುದು ಎಂದು ಗೊಣಗುತ್ತಲೇ ಸರತಿಯಲ್ಲಿ ನಿಂತಳು. ಕ್ಷಣಕ್ಷಣಕ್ಕೂ ಕ್ಯೂ ಹನುಮಂತನ ಬಾಲದಂತೆ ಬೆಳೆಯುತ್ತಲೇ ಹೋಯಿತು. ಜನರನ್ನು ನಿಯಂತ್ರಿಸಲು ಒಂದಿಬ್ಬರು ಪೋಲಿಸರು ಬಂದರು. […]
ಮಕ್ಕಳ ಕಥೆ
“ಕತ್ತೆಗೊಂದು ಕಾಲ” ಅದು ಗಿರಿಕಂದರ ಪರ್ವತ ಶ್ರೇಣಿಗಳ ನಾಡು. ಅಲ್ಲಿ ಜಯದೇವ ಅರಸನು ರಾಜ್ಯ ಆಳುತಿದ್ದನು. ಆತ ತನ್ನ ಆಸ್ಥಾನದಲ್ಲಿ ಕುದುರೆಗಳ ಜೊತೆಗೆ ಕತ್ತೆಗಳನ್ನು ಸಾಕಿದ್ದನು. ಎಲ್ಲ ರಾಜರು ಕುದುರೆ ಸಾಕುತಿದ್ದರೆ, ಈತ ಮಾತ್ರ ಎರಡನ್ನು ಸಾಕುತಿದ್ದನು. ಈ ಮಾತು ರಾಜ್ಯದ ಎಲ್ಲ ಜನರಿಗೆ ಅಷ್ಟೆ ಅಲ್ಲ, ಕುದುರೆಗಳಿಗೂ ಆಶ್ಚರ್ಯವಾಗಿತ್ತು. ಒಂದು ದಿನ ಸೇವಕರು ಕುದುರೆ ಮತ್ತು ಕತ್ತೆ ಒಟ್ಟಿಗೆ ಬಯಲಲ್ಲಿ ಮೈಯಲು ಬಿಟ್ಟರು. ಆಗ ಮೈಯುತ್ತಾ […]