ಕಥಾಯಾನ
ಸಂಬಂಧಗಳ ನವೀಕರಣ ಸುಧಾ ಹೆಚ್.ಎನ್ ನನ್ನಿಂದ ಆಗಲ್ಲ ಮೇಡಂ, ನನಗೆ ಅವನ ಜೊತೆ ಹೆಂಡತಿತರ ಸಂಸಾರ ಮಾಡಕ್ಕೆ ಸಾಧ್ಯನೇ ಇಲ್ಲ,ನನಗೆ ಡೈವರ್ಸ್ ಬೇಕು” ಅಂದಳು ಹುಡುಗಿ. ಇಪ್ಪತ್ತೊಂದರ ಹರೆಯದ ಲಕ್ಷಣವಾದ ವಿದ್ಯಾವಂತೆ. ತಾಯಿಯನ್ನು ಕಳೆದುಕೊಂಡು ತಂದೆಯ ಆನಾದಾರಕ್ಕೊಳಗಾಗಿ ಅನಾಥವಾಗಿದ್ದ ಎರಡು ವರ್ಷದ, ಈ ಹುಡುಗಿಯನ್ನು ಮೊಮ್ಮಗಳ ನಾಥೆಯಿಂದ ಮಡಿಲಿಗೆ ಹಾಕಿಕೊಂಡಿದ್ದಳು,ತಾಯಿಯ ತಾಯಿ ಅಂದರೆ ಅಜ್ಜಿ. ಅಜ್ಜಿ…ಮತ್ತವಳ ಹುಟ್ಟು ಕುರುಡ ಮಗನೇ ಇವಳ ಬಂದು-ಬಳಗ ಎಲ್ಲಾ,ಅಜ್ಜಿ ಹೊಲ, ಮನಿ ಚಾಕರಿ ಎಂದು ಬಿಡುವಿಲ್ಲದೆ ದುಡಿಯುತ್ತಿದ್ದರೆ,ಹುಡುಗಿಗಿಂತ […]
ಕಥಾಯಾನ
ಅಂಜಲಿ ಜ್ಯೋತಿ ಬಾಳಿಗ ಇಂಜಿನಿಯರಿಂಗ್ ಕೆಲಸದ ನಿಮಿತ್ತ ಅಮೇರಿಕಾಕ್ಕೆ ಹೋದ ಅಂಜಲಿ ‘ವೀಸಾ’ ರಿನಿವಲ್ ಗಾಗಿ ಮತ್ತೆ ಭಾರತಕ್ಕೆ ಬಂದಿದ್ದಳು. ಬೆಂಗಳೂರು ವಿಮಾನ ನಿಲ್ದಾಣದಿಂದ ಮೊದಲೇ ಕಾಯ್ದಿರಿಸಿದ ‘ಪಂಚತಾರಾ’ ಹೊಟೇಲ್ ಗೆ ಹೋಗಿ ಫ್ರೆಶ್ ಆಗಿ ತನ್ನ ಗೆಳತಿಯನ್ನು ಭೇಟಿ ಮಾಡಬೇಕೆಂದು ವೆರೆಂಡಾದ ಬಳಿ ಬಂದಾಗ ತನ್ನ ಗತ ಜೀವನದ ಭಾಗವಾಗಿರುವ ವ್ಯಕ್ತಿಯನ್ನು ಹೊಟೇಲ್ ನ ಪಾರ್ಕಿಂಗ್ ನಲ್ಲಿ ನೋಡಿದೊಡನೆ ಭಯದಿಂದ ಕಂಪಿಸತೊಡಗಿದಳು. ತಾನು ಯಾರನ್ನು ಜೀವನದುದ್ದಕ್ಕೂ ನೋಡಬಾರದು ಅಂದುಕೊಂಡಿದ್ದಳೋ ಆ ವ್ಯಕ್ತಿಯ ಆಗಮನವು,ಅವಳ ಬದುಕನ್ನು ಮತ್ತೊಮ್ಮೆ […]
ಕಥಾಯಾನ
ಒಂದು ಹನಿ ನೀರಿನ ಕಥೆ ಜ್ಯೋತಿ ಬಾಳಿಗಾ ಸದಾಶಿವ ರಾಯರಿಗೆ ಆರೋಗ್ಯದಲ್ಲಿ ತೊಂದರೆ ಆಗಿ ಆಸ್ಪತ್ರೆಗೆ ಸೇರಿಸಿದ್ದಾರಂತೆ. ಹಳ್ಳಿಯಿಂದ ನಿನ್ನ ಮಾವನ ಪೋನು ಬಂದಿತ್ತು ಸಚಿನ್. ರಾಯರು ಹೇಗಿದ್ದಾರೆ ಅಂತ ಒಮ್ಮೆ ನೋಡಿಕೊಂಡು ಬರೋಣ ಅಂದರೆ ಅಷ್ಟು ದೂರ ಪ್ರಯಾಣ ನನ್ನಿಂದ ಸಾಧ್ಯವಿಲ್ಲ ಮಗನೇ….ನಿನ್ನ ವಿದ್ಯಾಭ್ಯಾಸಕ್ಕೆ ತುಂಬಾ ಸಹಾಯ ಮಾಡಿದ್ದಾರೆ ರಾಯರು. ನೀನಾದರೂ ಅವರ ಬಗ್ಗೆ ವಿಚಾರಿಸಿಕೊಂಡು ಬಾ ಎಂದು ಅಪ್ಪಾಜಿ ಹೇಳಿದಾಗ,ಆಸ್ಪತ್ರೆ ಎಂದರೆ ಮಾರು ದೂರ ಓಡುವ ನನಗೆ ಏನು ಮಾಡುವುದೆಂದು ತಿಳಿಯದೇ ಹುಂಗುಟ್ಟಿದೆ. ಊರಿಗೆ […]
ಕಥಾಯಾನ
ಸುನಂದಾಬಾಯಿ ಕೊಡ ಮಲ್ಲಿಕಾರ್ಜುನ ಕಡಕೋಳ ಸುತ್ತ ನಾಕಿಪ್ಪತ್ತು ಹಳ್ಳಿಗಳಲ್ಲಿ ಅವರ ಬಡತನ ಪ್ರಸಿದ್ದವಾಗಿತ್ತು. ತಲೆಮಾರುಗಳಿಂದ ಶೀಲವಂತರ ಸುನಂದಾಬಾಯಿ ಭಗವಂತ್ರಾಯ ದಂಪತಿಗಳು ಪಡೆದುಕೊಂಡ ಆಸ್ತಿಯೆಂದರೆ ಕಿತ್ತುತಿನ್ನುವ ಬಡತನ. ಅದನ್ನೇ ಹಾಸುಂಡು ಬೀಸಿ ಒಗೆಯುವಂತಿತ್ತು. ಅವರೂರು ಮಾತ್ರವಲ್ಲ. ಸುತ್ತ ಹತ್ತಾರು ಹಳ್ಳಿಯ ಮಂದಿ ಘೋರ ಬಡತನದ ಬಗ್ಗೆ ಮಾತಾಡುವಾಗ ಶೀಲವಂತರ ಭಗಂತ್ರಾಯರ ಬಡತನ ಉಲ್ಲೇಖಿಸದೇ ಇರಲಿಕ್ಕೆ ಸಾಧ್ಯವಿರುತ್ತಿರಲಿಲ್ಲ. ಅವರು ಉಪವಾಸದ ದಿನಗಳನ್ನು ನೆನಪಿಡುತ್ತಿರಲಿಲ್ಲ., ಅಂಬಲಿ ಕುಡಿದ ದಿನಗಳನ್ನು ನೆನಪಿಡುತ್ತಿದ್ದರು. ಈ ದಿನಗಳೇ ಅಪರೂಪ. ಸಜ್ಜೆ ಹಿಟ್ಟಿನ ಗಂಜಿಗೆ ರುಚಿ ಬರಲೆಂದು ಸೇರಿಸಲು ” ಉಪ್ಪಿಗೂ ” ಅವರಲ್ಲಿ ಬಡತನವಿತ್ತು. ಅಂತೆಯೇ ಉಪವಾಸದ ದಿನಗಳೇ ಹೇರಳ. ಗಂಜಿ ಕುಡಿದ ದಿನಗಳೇ ವಿರಳ. ಸುನಂದಾಬಾಯಿಗೆ ಜಾಂಬಳ ಬಣ್ಣದ ಒಂದೇ ಒಂದು ಸೀರೆ ಇತ್ತು. ಮೈ ಮೇಲಿನ ಆ ಒಂದು ಸೀರೆಯನ್ನು ಜಳಕ ಮಾಡುವಾಗ ಅರ್ಧರ್ಧ ತೋಯಿಸುತ್ತಾ ಒಣಗಿಸಿಕೊಳ್ಳುತ್ತಿದ್ದಳು. ಅಷ್ಟಕ್ಕೂ ಆಕೆ ಹೊಲಕ್ಕೆ ಹೋದಾಗ ನಿರ್ಜನ ಕರ್ಮನಹಳ್ಳದಲ್ಲಿ ಜಳಕ ಮಾಡುತ್ತಿದ್ದಳು. ಕೂಲಿನಾಲಿ ಮಾಡುವಾಗ ಸೀರೆ, ಗಿಡಗಂಟಿಗಳಿಗೆ ತಾಗದಂತೆ ಮತ್ತು ಕುಂತೇಳುವಾಗ ಜಿಗಿಸತ್ತ ಸೀರೆ ಟಸಕ್ಕನೆ ಹರಿದು ಹೋಗದಂತೆ ಕಟ್ಟೆಚ್ಚರ ವಹಿಸುತ್ತಿದ್ದಳು. […]
ಕಥಾಯಾನ
ಹದಿನೆಂಟು ವರುಷದ ಬಳಿಕ ಸಿಕ್ಕವಳು… ಮಲ್ಲಿಕಾರ್ಜುನ ಕಡಕೋಳ ಹದಿನೆಂಟು ವರುಷದ ಬಳಿಕ ಸಿಕ್ಕವಳು… ಆದರೆ ಮೊನ್ನೆ ಸಂಜೆ ಸಿಕ್ಕಾಗ ತುಂಬಾನೇ ಚೆಂದ ಕಾಣಿಸುತ್ತಿದ್ದಳು. ಹದಿನೆಂಟು ವರುಷಗಳ ಹಿಂದೆ ಅವಳಿಗೆ ಹದಿನೆಂಟರ ಹದಿಹರೆಯ. ತೆಳ್ಳಗೆ., ಸಜ್ಜೆ ಬಣ್ಣದ ಸಾದಗಪ್ಪಿನ ಸುಂದರಿ. ಹದಿನೆಂಟು ವರುಷಗಳ ಹಿಂದೆ ದಾವಲ್ ಮಲೀಕನ ಯಂಕಂಚಿ ಜಾತ್ರೆಯಲಿ ಸಿಕ್ಕವಳು., ಮೊನ್ನೆ ಸಂಜೆ ತಂಗಾಳಿ ತೇಲಿ ಬರುವ ಹೊತ್ತಲಿ ಸಡನ್ನಾಗಿ ಸಿಕ್ಕಳು. ಇಪ್ಪತ್ತು ವರುಷಗಳ ಹಿಂದೆ ಮೊದಲ ಭೆಟ್ಟಿಯಲಿ ಹುಟ್ಟಿಕೊಂಡ ಹಿರಿ ಹಿರಿ ಹಿಗ್ಗುವ ಸಂತಸವೇ ಮೊನ್ನೆ ಮತ್ತೆ ನಮ್ಮಲ್ಲಿ ಚೇತನಗೊಂಡಿತು. ಏಕಕಾಲಕ್ಕೆ ನಮ್ಮಿಬ್ಬರಿಗೂ ಕ್ಷಿಪ್ರ ಕ್ರಾಂತಿಯ ಪರಮ ಅಚ್ಟರಿ!! ಸಿನೆಮಾ ಕತೆಗಳಲ್ಲಂತೆ ಕ್ಷಣಕಾಲ ಸ್ಟಿಲ್ಲಾದೆವು. ಲಗಾಮು ತುಳಿದು ನನ್ನ ಕಪ್ಪು ಕುದುರೆ ತರುಬಿದೆ. ಕುದುರೆಯೆಂದರೆ ಕುದುರೆಯಲ್ಲ. ಕಪ್ಪು ಕಲರಿನ ಹೀರೋ ಹೊಂಡಾ…. ಜಾಂಬಳ ವರ್ಣದ ಕಾಟನ್ ಸೀರೆ, […]
ಕಥಾಯಾನ
ಕಥೆ ಪೊಟ್ಟಿ ಶೀಲಾ ಭಂಡಾರ್ಕರ್. ಪೊಟ್ಟಿ. ಪೊಟ್ಟಿ, ಬಂಟ್ವಾಳದ ಬಂಗ್ಲೆ ಗುಡ್ಡೆಯಲ್ಲೊಂದು ಗುಡಿಸಲು ಕಟ್ಟಿ ವಾಸವಾಗಿದ್ದಳು. ಬಂಗ್ಲೆ ಗುಡ್ಡೆಗೆ ಹೋಗುವ ರಸ್ತೆಗೆ ತಾಗಿಯೇ ನಮ್ಮಜ್ಜಿ ಮನೆ ಇದ್ದುದರಿಂದ ಅವಳು ಯಾವುದಕ್ಕಾದರೂ ಓಡಿ ಬರುವುದಿತ್ತು. ಅವಳಿಗೆ ಒಂದಿಷ್ಟು ಜನ ಮಕ್ಕಳು. ಎಷ್ಟು ಎಂದು ಅವಳಿಗೇ ಲೆಕ್ಕ ಇತ್ತೊ ಇಲ್ಲವೊ. ಕೃಶ ಶರೀರದ ಮಧ್ಯಮ ಎತ್ತರದ ಪೊಟ್ಟಿಗೆ ಒಬ್ಬ ಗಂಡ ಅಂತ ಇದ್ದನಂತೆ ಎಂದು ಬಾಪಮಾ ಹೇಳಿದ್ದ ನೆನಪು. ಅದೇನೋ ಆಗಿ ಅವನು ಸತ್ತ ಮೇಲೆ ಒಂದೆರಡು ಮಕ್ಕಳ ಜೊತೆ […]
ಕಾರ್ಮಿಕ ದಿನದ ವಿಶೇಷ-ಕಥೆ
ಕಾರ್ಮಿಕ ದಿನದ ವಿಶೇಷ-ಕಥೆ ತಿಥಿ ಟಿ. ಎಸ್. ಶ್ರವಣ ಕುಮಾರಿ. ತಿಥಿ “ನಾಗೂ… ಏ ನಾಗೂ… ಇದಿಯನೇ ಒಳಗೆ…” ಅಡುಗೆಮನೆಯನ್ನಿಸಿಕೊಂಡ ಆ ಮನೆಯ ಮೂಲೆಯಲ್ಲಿ ಹೊಗೆಯೊಂದಿಗೆ ಗುದ್ದಾಡುತ್ತಾ ಹುಳಿಗೆ ಹಾಕಲು ಹುಣಿಸೇಹಣ್ಣು ಕಿವುಚುತ್ತಾ ಕುಳಿತಿದ್ದ ನಾಗುವಿಗೆ ಸುಬ್ಬಣ್ಣನ ದನಿ ಕೇಳಿ ʻಯಾಕ್ ಬಂದ್ನೋ ಮಾರಾಯ ಈಗ, ಕೆಲಸಿಲ್ದೆ ಈ ದಿಕ್ಕಿಗ್ ಕೂಡಾ ತಲೆಯಿಟ್ಟು ಮಲಗೋನಲ್ಲʼ ಎಂದುಕೊಂಡೇ “ಇದೀನೋ ಇಲ್ಲೇ ಒಲೆಮುಂದೆ ಅಡುಗೆಮಾಡ್ತಾ” ಎಂದುತ್ತರಿಸಿದಳು. ಬಿಸಿಲಿನಿಂದ ಒಳಗೆ ಬಂದವನಿಗೆ ಅಡುಗೆಮನೆಯೆಂದು ಮಾಡಿದ್ದ ಅಡ್ಡಗೋಡೆಯ ಒಳಗಿನ ಕತ್ತಲೆ, ಹೊಗೆಯ ಮಧ್ಯೆ […]
ಕಾರ್ಮಿಕ ದಿನದ ವಿಶೇಷ-ಕಥೆ
ಕಥೆ ಕರ್ಮ ಮತ್ತು ಕಾರ್ಮಿಕ! ಪೂರ್ಣಿಮಾ ಮಾಳಗಿಮನಿ ಕರ್ಮ ಮತ್ತು ಕಾರ್ಮಿಕ! ಎಲ್ಲರ ಮನೆಯ ದೋಸೆಯೂ ತೂತೇ, ಹಾಗಂತ ತೂತಿಲ್ಲದ ದೋಸೆಗಾಗಿ ಹಾತೊರೆಯುವುದನ್ನು ರಾಗಿಣಿ ಬಿಟ್ಟಿರಲಿಲ್ಲ. ಮನೆಯೊಳಗಿನ ಸಣ್ಣ ಪುಟ್ಟ ಜಗಳಗಳಿಗೆ, ಮೂವತ್ತೈದು ವರ್ಷಕ್ಕೇ ಜೀವನವೇ ಸಾಕಾಗಿ ಹೋಗಿದೆ, ಎಂದು ಕೈ ಚೆಲ್ಲಿ ಕುಳಿತ ಹೆಂಡತಿ ರಾಗಿಣಿಯನ್ನು ಮ್ಯಾರೇಜ್ ಕೌನ್ಸಲರ ಬಳಿ ಕರೆದೊಯ್ಯುವ ವಿಚಾರ ಮಾಡಿದ್ದು ಪ್ರಶಾಂತನೇ. ಮಕ್ಕಳೂ ಆಗಿಲ್ಲವೆಂದ ಮೇಲೆ ನಿಮ್ಮ ಹೆಂಡತಿ ಟೈಮ್ ಪಾಸ್ ಮಾಡುವುದಾದರೂ ಹೇಗೆ ಎಂದು ದಬಾಯಿಸಿ, ಕೌನ್ಸಲರ ಒಂದು ನಾಯಿ ಮರಿ […]
ಕಥಾಯಾನ
ಈಗೊಂದು ಉತ್ತರ ಸಿಗದಾ ಪ್ರಶ್ನೆ ಸುಮಂತ್ ಎಸ್ ಅದೊಂದು ಸಂಜೆ, ನನ್ನ ಕೈಯಲ್ಲಿ ಆಕೆಯ ಕೈ ಇತ್ತು. ಕಣ್ ಮಿಟುಕಿಸದೆ, ಚಂದ್ರ ನಕ್ಷತ್ರಗಳನು ಎಣಿಸುವ ಹಾಗೆ ಆಕೆ ನನ್ನನ್ನೇ ನೋಡುತ್ತಿದ್ದಳು, ನಾನು ಆಕೆಯನ್ನು.ಸೂರ್ಯಾಸ್ತಮಾನದ ಮೋಡಗಳಂತಾಗಿದ್ದ ಕಣ್ಣುಗಳು ನನಗೆ ಏನನ್ನೊ ಹೆಳಬೇಕೆಂದು ಚಟಪಡಿಸುತಿದ್ದನ್ನು ಕಂಡೆ. ಇದೇನು ಮೊದಲಬಾರಿಯಲ್ಲ, ಅದೆಷ್ಟೋ ಬಾರಿ ಹೀಗೆ ಏನನ್ನೊ ಹೇಳಬೇಕೆಂದು ಪ್ರಯತ್ನಿಸಿ ಸೂತಿದ್ದು ಗೂತ್ತಿದೆ ನನಗೆ, ಅದೇ, ಅನಿಶ್ಚಿತತೆ, ನಾಚಿಕೆ,ಭಯ,ಗೂಂದಲ ಇಂದಿಗೂ ಅವಳ ಕಣ್ಣಾ ಪರದೆ ಹಿಂದಿನಿಂದ ಇಣುಕುತ್ತಲೇಯಿತ್ತು. ಎಲ್ಲಾ ನದಿಗಳು ಸೇರಿದರೂ ಒಂದೇತರನಾಗಿರುವ […]
ಕಥಾಯಾನ
ಮಕ್ಕಳ ಕಥೆ ಗರುಡನ ಆದರ್ಶ ರಾಜ್ಯ ಮಲಿಕಜಾನ ಶೇಖ ವಿಂದ್ಯ ಪರ್ವತಗಳ ಇಳಿಜಾರು ಭಾಗದಲ್ಲಿ ‘ಸುಂದರಬನ’ ಎಂಬ ಸುಂದರ ಕಾಡು. ಹಚ್ಚ ಹಸಿರಿನ ಸಿರಿ, ಸುತ್ತಲೂ ಪರ್ವತ ಶ್ರೇಣಿ. ಅಲ್ಲಲ್ಲಿ ನೀರಿನ ಹೊಂಡಗಳು, ಜುಳು ಜುಳು ಹರಿಯುವ ನದಿ ಇವೆಲ್ಲವುಗಳಲ್ಲಿ ಹಾರಾಡಿ, ನಲಿದು ನೆಮ್ಮದಿಯಿಂದ ಬದುಕುವ ಪಕ್ಷಿ ಸಂಕುಲ. ಪಕ್ಷಿಗಳೆಲ್ಲಾ ಹಾರಾಡಿಕೊಂಡು ಗೂಡು ಮಾಡಿಕೊಂಡು ಸಂತೋಷವಾಗಿದ್ದವು. ಕಾಲ ಕ್ರಮೇಣ ಅವುಗಳಲ್ಲಿ ಸ್ವಾರ್ಥ ಬೆಳೆದು, ತಂಡ ಕಟ್ಟಿಕೊಂಡು ಕಳ್ಳತನ, ಸುಲಿಗೆ, ಅನ್ಯಾಯ, ಅತ್ಯಾಚಾರದಲ್ಲಿ ನಿರತರಾದವು. ಅದರಲ್ಲಿ ನೆರೆಯ […]