ಕಥಾಗುಚ್ಛ
ಜೀವನವೆಂದರೆ ಹೀಗೇನೆ ಟಿ.ಎಸ್.ಶ್ರವಣಕುಮಾರಿ ಪುಟ್ಟ ದೀಪೂಗೆ ಇವತ್ತು ಶಾಲೆಯಿಂದ ಬರುವಾಗಲೇ ಎರಡು ರೆಕ್ಕೆ ಹುಟ್ಟಿಕೊಂಡು ಬಿಟ್ಟಿತ್ತು. ಯಾವಾಗಲೂ ತನ್ನನ್ನು ಎರಡನೆಯ ಸ್ಥಾನಕ್ಕೆ ತಳ್ಳುತ್ತಿದ್ದ ಪುನೀತನನ್ನು ಅವನು ಎರಡನೆಯ ಸ್ಥಾನಕ್ಕೆ ಕಳಿಸಿ ತಾನು ಅವನ ಜಾಗದಲ್ಲಿ ಹೆಮ್ಮೆಯಿಂದ ನಿಂತಿದ್ದ. ಟೀಚರ್ ಮಾರ್ಕ್ಸ್ ಕಾರ್ಡ್ ಕೊಡೋವಾಗ ಪುನೀತನ ಮುಖ ನೋಡ್ಬೇಕಿತ್ತು. `ತಾನೇ ಫಸ್ಟ್ ಬರೋದು ಅನ್ನೋ ಜಂಭ… ಬೀಗ್ತಾ ಎಲ್ಲರ ಕಡೆ ನೋಡ್ತಾ ಇದ್ದ. ಆದರೆ ತನ್ನ ಹೆಸರು ಹೇಳಿದ ತಕ್ಷಣ ಅವನ ಮುಖ ಹೇಗಾಗಿ ಹೋಯಿತು…. ಹಾ! ಹಾ! […]
ಲಹರಿ
ಖಾಸಗಿ ಬಸ್ ಪಯಣ ಜಿ.ಹರೀಶ್ ಬೇದ್ರೆ ಇದು ನಿಮ್ಮ ಗಮನಕ್ಕೆ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಇದನ್ನು ಓದಿದ ಮೇಲಾದರೂ ಗಮನಿಸಿ, ನಾನು ಹೇಳಿದ್ದು ನಿಜವೆನಿಸಿ ನೀವು ನಗದಿದ್ದರೆ ಹೇಳಿ. ಅಂಥಹ ವಿಚಾರ ಏನೂ ಅಂತೀರಾ, ಅದೇ ಬಸ್ಸಗಳು ಹಾಗೂ ಅದರಲ್ಲಿನ ಸಂಚಾರ. ಅದರಲ್ಲಿ ಸಿಗುವ ವಿವಿಧ ರೀತಿಯ ಅನುಭವಗಳು. ನೋಡಿ ಸರ್ಕಾರಿ ಬಸ್ಸುಗಳು ತುಂಬಾ ಗೌರವಸ್ಥ ಹೆಣ್ಣಿನಂತೆ ನಿಲ್ದಾಣಕ್ಕೆ ಬಂದು ಊರಿಂದ ಊರಿಗೆ ಹೋದರೆ, ಖಾಸಗಿ ಬಸ್ಸುಗಳು ಆಗ ತಾನೇ ಪ್ರಾಯಕ್ಕೆ ಬಂದ ಹುಡುಗಿ ಎಲ್ಲರೂ ತನ್ನನೇ […]
ಕಥಾಗುಚ್ಛ
ವೃದ್ದಾಶ್ರಮ ಎಂಬ ಬೆಳಕು. ಸುಮಾ ಉಮೇಶ್ ಗೌಡ ಮೊಮ್ಮಕ್ಕಳು ಶಾಲೆಗೆ ಹೋದ್ರು, ಮಗ ಸೊಸೆ ಕೆಲಸಕ್ಕೆ ಹೋದ್ರು, ಬಾಗಿಲು ಭದ್ರ ಪಡಿಸಿದ ರಾಯರು ಪತ್ನಿಯ ಫೊಟೋ ನೋಡುತ್ತಾ ಕುಳಿತರು ಏಕಾಂಗಿ ಆಗಿ… ಗಂಡು ಎಷ್ಟೆ ದರ್ಪದಿಂದ ಇದ್ರು ಪತ್ನಿ ಮರಣಿಸಿದ ಮೇಲೆ ಹಲ್ಲು ಕಿತ್ತ ಹಾವಿನಂತೆ, ಯಾರಿಗೆ ಬುಸುಗುಡಿದ್ರು ಹೇದರಿಕೊಳ್ಳೊರು ಯಾರು..? ರಾಯರ ಬದುಕು ಇದಕ್ಕೆ ಹೊರತಾಗಿರಲಿಲ್ಲ… ಸದಾ ಚಟುವಟಿಕೆ ಇಂದ ಇರುವ ರಾಯರಿಗೆ, ನಿವೃತ್ತಿ ಅನ್ನೋದೇ ಶಾಪವಾದ್ರು, ಪತ್ನಿಯ ನಗು ಮುಖ, ಹುಸಿ […]
ಸಣ್ಣಕಥೆ
ಪ್ರೀತಿ ಆನಂದ್ ಕೊರಟಿ ಆಫೀಸಿಗೆÉ ತಡವಾಗುತ್ತಿದೆ, ಬೇಗ ಹೋಗಬೇಕು…’ ಅವನು ತನ್ನ ಕೋಟನ್ನು ಭುಜದ ಮೇಲೆ ಹಾಕಿಕೊಳ್ಳುತ್ತಾ ಜೋರಾಗಿ ಹೇಳಿದ. ಮೆಟ್ಟಿಲುಗಳನ್ನು ಇಳಿದು ಮನೆಯಿಂದ ಹೊರಗೆ ಓಡುತ್ತಾ ಹೊರಟ. ಅವನು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಂತೆ, ಅವಳು ಓಡುತ್ತಾ ಮೆಟ್ಟಿಲಿಳಿದು ಬಂದಳು. ‘ತಡಿ, ತಡಿ….’ ಎಂದು ಕೂಗಿದಳು, ಆದರೆ ಅಷ್ಟರಲ್ಲಿ ಅವನು ಹೊರಟು ಹೋಗಿದ್ದ. ಅವಳ ಮುಖ ಮುದುರಿದ ಕಾಗದದಂತೆ ಆಯಿತು. ‘ಅವನು ಹೋಗುವಾಗ ನನಗೆ ಮುತ್ತಿಕ್ಕುವುದನ್ನು ಮರೆತ’ ತನಗೆ ಆದ ನೋವಿನಿಂದ ನಡುಗುವ ಧ್ವನಿಯಲ್ಲಿ ಪಿಸುಗುಟ್ಟಿದಳು. ಅವಳು […]
ಕಥಾಗುಚ್ಛ
ಜಿ.ಹರೀಶ್ ಬೇದ್ರೆ ಯಾಣ ಬಿಸಿಲು ಬೆವರಿಗೆ ಹೊಂದಿಕೊಂಡು ಬೆಳೆದಿದ್ದ ಮೈಮನಗಳಿಗೆ ಮೊದಲ ಬಾರಿಗೆ ಥರಗುಟ್ಟುವ ಚಳಿಯಲ್ಲಿ ಹೊದೆಯಲು ಏನೂ ಇಲ್ಲದೆ ರಾತ್ರಿಯೆಲ್ಲಾ ಮುದುಡಿಕೊಂಡೇ ಮಲಗಿ, ಪುಣ್ಯಾತ್ಮರ ಮನೆಯೊಂದರಲ್ಲಿ ತಾಮ್ರದ ಹಂಡೆಯಲ್ಲಿ ಹದವಾಗಿ ಕಾಯಿಸಿದ ನೀರನ್ನು ಸ್ನಾನ ಮಾಡುವ ಅವಕಾಶ ಸಿಕ್ಕಿತು. ಒಮ್ಮೆ ಹಬೆಯಾಡುವ ಬಿಸಿನೀರು ಮೈಮೇಲೆ ಬಿದ್ದೊಡನೆ ಹಿಂದಿನ ದಿನ ನಡೆದೂ ನಡೆದು ಸುಸ್ತಾಗಿದ್ದ ನೋವೆಲ್ಲಾ ಅರ್ಧ ಮಾಯವಾದಂತಾಗಿತ್ತು. ಬಚ್ಚಲು ಮನೆಯೂ ಹಿಂಭಾಗದಲ್ಲಿ ಇದದ್ದರಿಂದ ಎಲ್ಲರೂ ಸ್ನಾನ ಆಗುವ ತನಕ ಅಲ್ಲೇ ಹಿಂದೆ ಗಿಡಮರಗಳನ್ನು ನೋಡುತ್ತಾ, ಮಾತನಾಡುತ್ತಾ […]
ನ್ಯಾನೊ ಕಥೆಗಳು
ಅಂಬ್ರೀಶ್ ಎಸ್ ಹೈಯ್ಯಾಳ್… ಒಂದು– ಬರಗಾಲದಿಂದ ತತ್ತರಿಸಿದ ಜನ ದೇವರ ಮೊರೆ ಹೋದರು. ಮಳೆ ಬರಲೆಂದು ಪ್ರಾರ್ಥಿಸಿದರು. ಆದರೆ ದೇವಸ್ಥಾನದಲ್ಲಿ ಪೂಜಾರಿಯಿಂದ ಪ್ರತಿದಿನವೂ ದೇವರನ್ನು ನೀರಿನಿಂದ ತೊಳೆದು ಹಾಲು ತುಪ್ಪದ ಅಬಿಷೇಕ ಜರಗುತಿತ್ತು. ಎರಡು– ಅದು ಬೇಸಿಗೆ ಸಮಯ.ಅಲ್ಲೊಂದು ಉದ್ಯಾನವನದಲ್ಲಿ. ನೀರಿನ ಕಾರಂಜಿಯಾಟದ ಕಾರ್ಯಕ್ರಮ ಏರ್ಪಾಡಾಗಿತ್ತು. ಹೊಮ್ಮಿಸುವ ಸಂಗೀತಕ್ಕೆ ಬಣ್ಣ ಬಣ್ಣದ ನೀರಿನ ಕಾರಂಜಿ ನೃತ್ಯವಾಡುತಿತ್ತು. ಆದರೆ ಅಲ್ಲಿ ನೋಡುತ್ತಾ ಕುಳಿತ ಪ್ರೇಕ್ಷಕರು ಬಾಯಾರಿಕೆಯಾಗಿ ನೀರಿಲ್ಲದೆ ಪರದಾಡುತಿದ್ದರು. ಮೂರು– ಅಲ್ಲೊಂದು ಕಾಡು. ಕಾಡಿನ ಮದ್ಯೆ ಹರಿಯುವ ನದಿಯೊಂದು […]
ಕಥಾಗುಚ್ಛ
ಹಬ್ಬ ಪ್ರೀತಿಯನ್ನು ಹಬ್ಬಿದರೆ ಸುಮಂಗಳ ಮೂರ್ತಿ ಬಾನುಮತಿ ಈ ಸಾರಿ ವಿಜಯದಶಮಿಯನ್ನು ವಿಶೇಷವಾಗಿ ಆಚರಿಸಬೇಕು, ಅದು ನಮ್ಮ ಕುಟುಂಬದವರಿಗೆ ಮತ್ತು ಬಂದ ಬಂಧು ಬಳಗದವರಿಗೆ ಖುಷಿ ಕೊಡುವ ಹಾಗೆ ಇರಬೇಕು,ಎಂದು ಯೋಚಿಸುತ್ತಿದ್ದ ಅವಳು,ಖರ್ಚಿನ ಬಗ್ಗೆಯೂ ನಿಗಾವಹಿಸಬೇಕಿತ್ತು. ಅವಳು ಒಂದು ಮಧ್ಯಮವರ್ಗದ ಕುಟುಂಬಸ್ಥೆ ಎನ್ನುವುದು ಮರಿಯೋ ಆಗಿಲ್ಲ . ಬಾನುಮತಿಗೆ ಮದುವೆಯಾದ ನಂತರದ ಮೊದಲನೇ ವಿಜಯದಶಮಿ, ಹಾಗಾಗಿ ಗಂಡನ ಮನೆಯ ಪದ್ಧತಿಗಳು ಅವಳಿಗೆ ಅಷ್ಟಾಗಿ ಏನು ತಿಳಿದಿರಲಿಲ್ಲ. ಆ ಕಾರಣದಿಂದ ಅವಳ ಅತ್ತೆಯ ಸಲಹೆ ಕೇಳಿ ಅವರ […]
ಕಥಾಗುಚ್ಛ
ಮುಡಿಯೇರಿದ ಹೂವು! ಸಂತೇಬೆನ್ನೂರು ಫೈಜ್ನಾಟ್ರಾಜ್ ಹುಡ್ಗಿ ಮನೆ ಪಕ್ಕಾನೇ ಇದ್ ಬಿಟ್ರೆ ಪ್ರೀತಿ ಹುಟ್ ಬಿಡುತ್ತಾ ? ಹುಡುಗೀರೂ ಥಕ್ ಅಂತ ತೆಕ್ಕೆಗೆ ಬಿದ್ ಬಿಡ್ತಾರಾ ? ಅದೆಲ್ಲಾ ನಮ್ಮಂಥಾ ಹುಚ್ ಹುಡುಗರ ಬೆಚ್ ಕಲ್ಪನೆಗಳು ! ಈಗ ಈ ರೇಷ್ಮಾ ನಮ್ಮ ಪಕ್ಕದ್ಮನೇಲೇ ಇರೋದು ; ಆಕೆ ಬಂದು ಸರಿ ಸುಮಾರು ವರ್ಷ ಆಗ್ತಾ ಬಂತು. ತಲೆ ಮೇಲಿನ ದಾವಣಿ ಸರೀಲಿಲ್ಲ. ತಲೆ ಎತ್ತಿ ಯಾರನ್ನೂ ನೋಡ್ಲಿಲ್ಲ. ತಾನು, ತನ್ನ ಕೆಲ್ಸ ಅಂತ ಸದಾ ಮೌನದ […]
ಕಥಾಗುಚ್ಛ
ಟೊಮ್ಯಾಟೊ ಕೆಚಪ್ ಡಾ.ಅಜಿತ್ ಹರೀಶಿ ಹಲೋ ಸನಾ, ನಾನ್ಯಾರು ಗೊತ್ತಾಯ್ತಾ? ಒಂದು ವಾರದಿಂದ ವಾಟ್ಸ್ ಆಪ್ ಮಾಡದೆ, ನಿನ್ನ ಸಂದೇಶಕ್ಕೆ ಉತ್ತರ ಕೊಡದೆ ಸುಮ್ಮನಿದ್ದನಲ್ಲ… ಜಯ್.. ನಾನು ಜಯ್ ಅಲ್ಲ. ನನ್ನ ಹೆಸರು ಸುಹಾನ್. ನಾನೀಗ ಮೇಲ್ ಮಾಡಿದ್ದು ನಿನಗೆ ಸತ್ಯ ಹೇಳಲಿಕ್ಕೆ… ಸನಾ, ಅಡಿಗೇನೆ ಬರದ ನೀನು, ಮೆಟ್ರಿಮೋನಿಯಲ್ ನ ಪ್ರೊಫೈಲ್ ನಲ್ಲಿ ನನಗೆ ಒಪ್ಪಿಗೆ ಆದಾಗ್ಯೂ, ವಧು ಪರೀಕ್ಷೆ ಮಾಡೋದಿಕ್ಕೆ ಅಂತ ನಾನೊಂದು ವೇಷ ಹಾಕಿದೆ. ಜಯ್, ಕಂಪ್ಯೂಟರ್ ಇಂಜಿನಿಯರ್ ಅಂತ. ನಿಂಗೆ ಟೊಮ್ಯಾಟೊ […]