Category: ಅನುವಾದ

ಅನುವಾದ

ಅನುವಾದ ಸಂಗಾತಿ

Solitary! ತೆಲುಗು ಮೂಲ : ರವಿ ವೀರೆಲ್ಲಿ ಅನುವಾದ : ರೋಹಿಣಿಸತ್ಯ ಒಂಟಿ ಮೇಘದಂತೆ ಅಲ್ಲಿ ಇಲ್ಲಿ ಎಷ್ಟುಹೊತ್ತು ಅಡ್ಡಾಡಲು ಸಾಧ್ಯ?! ಸ್ವಲ್ಪಹೊತ್ತಿಗೆ ಸಾವಿರವಾಗಿ ಸೀಳಿಹೋಗುತ್ತೇನೆ ಕಡೆಗೆ ಹನಿಗಳೆಲ್ಲವನ್ನು ಒಟ್ಟುಗೂಡಿಸಿಕೊಂಡು ದೊಡ್ಡ ಸಮೂಹವಾಗಿ ದಾಳಿಯಿಡುತ್ತೇನೆ ಯುದ್ಧ ಮುಗಿದಮೇಲೆ ಯಾವ ತೊರೆಯಲ್ಲೋ ಏಕಾಂಗಿಯಾಗಿ ಹರಿಯುತ್ತೇನೆ ಒಂಟಿಯಾಗಿ ಬಾಳಲಾಗದಿರುವುದಕ್ಕೆ ಸಮೂಹದಲ್ಲಿ ನಡೆಯಲಾಗದಿರುವುದಕ್ಕೆ ನಡುವೆ ಎಷ್ಟೋ ಕಾಲಗಳು ಹಾಗೆ ಓರೆಗಣ್ಣಿನಿಂದ ನೋಡುತ್ತಾ ಸಾಗುತ್ತಿರುತ್ತವೆ ಮತ್ತೆಷ್ಟೋ ಕ್ಷಣಗಳು ಕಾಯದೆ ಅನುಕಂಪದಿಂದ ಕದಲುತ್ತಿರುತ್ತವೆ ಯಾವ ಕೈಯಾಸರೆ ನನ್ನನ್ನು ಲಾಲಿಸುವುದಿಲ್ಲವೆಂದು ಯಾವ ಮೊಗ್ಗು ನನಗಾಗಿ ಮೂಡುವುದಿಲ್ಲವೆಂದು […]

ಅನುವಾದ

ವಸಂತನಾಗಮನ ಮೂಲ ತೆಲುಗು ರಚನೆ: ಗುಂಟೂರು ಶೇಷೇಂದ್ರಶರ್ಮ ಗುಂಟೂರು ಶೇಷೇಂದ್ರ ಶರ್ಮಾ ಬಿ.ಏ.ಬಿ.ಯಲ್ 1927 -2007 ತೆಲುಗು ಸಾಹಿತ್ಯದಲ್ಲಿ ಜನಪ್ರಿಯ ಕವಿ ಯುಗಕವಿ ಎಂದು ಹೆಸರುಗಳಿಸಿದವರು. ಇವರು ಕವಿ, ವಿಮರ್ಶಕ ಹಾಗೂ ಬರಹಗಾರರು.1994 ರಲ್ಲಿ ಇವರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಇವರು ನೋಬಲ್ ಬಹುಮಾನಕ್ಕೂ ಭಾರತದಿಂದ ನಾಮಿನೇಟ್ ಆಗಿದ್ದರು. ಇವರ ಹಲವಾರು ರಚನೆಗಳು ಕನ್ನಡ, ಇಂಗ್ಲೀಷು ಹಿಂದೀ ಉರ್ದೂ ಬೆಂಗಾಲೀ ನೇಪಾಲಿ ಹಾಗೂ ಗ್ರೀಕ್ ಭಾಷೆಗಳಿಗೂ ಅನುವಾದಗೂಂಡಿವೆ ಕನ್ನಡಕ್ಕನುವಾದ: ನಾರಾಯಣ ಮೂರ್ತಿ ಬೂದುಗೂರು ಹೂಗಳು ತುಟಿಯರಳಿಸಿವೆ […]

ಅನುವಾದ

ತೆಲುಗು ಮೂಲ- ಡಾ.ಕತ್ತಿ ಪದ್ಮಾರಾವು ಕನ್ನಡಕ್ಕೆ ನಾರಾಯಣಮೂರ್ತಿ ಬೂದುಗೂರು ಯಾರು ಕೊಲೆಪಾತಕರು? ಸಮುದ್ರ ಹಿಮದಿಂದ ಗಾಢವಾಗಿ ಗಡ್ಡೆಕಟ್ಟಿದೆ ನಡುವೆ ಒಂದು ನೀರಿನ ಝರೀ ತಿಮಿಂಗಲಗಳು ಈಜುತ್ತಾ ಸಾಗುತ್ತಿವೆ ಹೆಚ್ಚಾಗಿ ಇಬ್ಬನಿ ಸುರಿದಾಗ, ಅವಕ್ಕೆ ಉಸಿರಾಡಲು ಕಷ್ಟವೆನಿಸುತ್ತದೆ ಈಗ ತಿಮಿಂಗಲಗಳದೇ ಬೇಟೇ ಬಲೆಗಳೆಲ್ಲಾ ಖಾಲೀ,ಖಾಲೀ ಬಿದ್ದಿವೆ ಇತ್ತೀಚೆಗೆ ಮೀನುಗಳೂ… ಬಲೆಯನ್ನು ಗುರ್ತು ಹಚ್ಚುತ್ತಿವೆ. ಆ ಕಾಲುವೆ ಬದಿಯಲ್ಲಿ ತುಂಬಾ ನಾಯೀಕೊಡೆಗಳ ಸಾಲು ರಸ್ತೆ ಒದ್ದೆ ಒದ್ದೆಯಾಗಿ ಕಿರುಪಾದಗಳ ಸಪ್ಪಳಕೆ ನೀರು ಚೆಲ್ಲುತಿದೆ. ಮನುಷ್ಯನಿಗೆ  ಈ ಚಳೀಯಲ್ಲೂ ಬೆವರು ಕಿತ್ತುಬರುತ್ತಿದೆ […]

Back To Top