ಏನೂ ಸಾಧ್ಯವಿಲ್ಲವೆಂಬ ಕಾಲಘಟ್ಟದಲ್ಲಿ ಪ್ರತಿರೋಧಗಳು ಬಂದಿವೆ ಬಿ.ಶ್ರೀನಿವಾಸ ಬಂಡ್ರಿ ಗೆಳೆಯ ಬಿ.ಶ್ರೀನಿವಾಸ ಕಡುಬಡತನದ, ಅನಕ್ಷರಸ್ಥ ಕುಟುಂಬದಲ್ಲಿ ಜನಿಸಿದರು. ೦೧-೦೬-೧೯೭೦ ಅವರ ಜನ್ಮದಿನ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ತಂದೆ ಬಂಡ್ರಿ ನರಸಪ್ಪ, ತಾಯಿ ಓಬವ್ವರಿಗೆ ಹನ್ನೊಂದು ಮಕ್ಕಳ ಪೈಕಿ, ಬದುಕುಳಿದ ಏಳು ಮಕ್ಕಳಲ್ಲಿ ಶ್ರೀನಿವಾಸ ಸಹ ಒಬ್ಬರು.ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಜೋಗಿಕಲ್ಲು ಗುಡ್ಡದಿಂದ ಬದುಕನ್ನರಸಿ ಕೂಡ್ಲಿಗಿಯಲ್ಲಿ ನೆಲೆನಿಂತರು. ಪ್ರಾಥಮಿಕ,ಪ್ರೌಢಶಾಲಾ ವಿದ್ಯಾಭ್ಯಾಸವನ್ನೆಲ್ಲ ಕೂಡ್ಲಿಗಿಯಲ್ಲಿ ಪೂರೈಸಿದ ನಂತರ,ಕೊಟ್ಟೂರು,ಹೂವಿನಹಡಗಲಿ,ಹೊಸಪೇಟೆಯಲ್ಲಿ ಬಿ.ಎಸ್.ಸಿ ಪದವಿ ನಂತರ ಕಲಬುರಗಿಯಲ್ಲಿ ನ್ಯೂಕ್ಲಿಯರ್ ಭೌತಶಾಸ್ತ್ರದಲ್ಲಿ ಎಮ್.ಎಸ್.ಸಿ.ಸ್ನಾತಕೋತ್ತರ ಪದವಿ ಪಡೆದರು.ಪ್ರಜಾವಾಣಿ […]
ಅಂಕಣ ಬರಹ ಸರಳತೆಯ ಘನತೆ ನಾನು ಭೇಟಿಮಾಡಿದ ಅಪರೂಪದ ವ್ಯಕ್ತಿಗಳಲ್ಲಿ ಬನ್ನೂರು ನಿವಾಸಿ ಅದೀಬ್ ಅಖ್ತರ್ ಅವರೂ ಒಬ್ಬರು. ಅದೀಬರ ಲಘು ಬರೆಹಗಳನ್ನು ಪತ್ರಿಕೆಗಳಲ್ಲಿ ಓದಿದ್ದೆ. ಒಂದು ಲೇಖನದಲ್ಲಿ ಅವರು ತಾನೊಬ್ಬ ಉರ್ದು ಮಾಧ್ಯಮದ ವಿದ್ಯಾರ್ಥಿಯೆಂದೂ, ನಡುಪ್ರಾಯದಲ್ಲಿ ಕನ್ನಡ ಕಲಿತು ಬರೆಯಲು ಆರಂಭಿಸಿದವನೆಂದೂ ಹೇಳಿಕೊಂಡಿದ್ದರು. ಇದು ಕುತೂಹಲ ಹುಟ್ಟಿಸಿತು. ಅವರೂ ನನ್ನನ್ನು ನೋಡಬಯಸಿ ಪತ್ರ ಬರೆದರು. ಅಂಗಡಿ ಬಿಟ್ಟು ಹೋಗಲು ಸಾಧ್ಯವಾಗದೆ ಇರುವುದರಿಂದ ನಾನೇ ಬರಬೇಕೆಂದು ತಿಳಿಸಿದ್ದರು. ಬನ್ನೂರಿಗೆ ಹೋದೆ. ಅದೀಬರ ವಿಳಾಸ ಬಹಳ ಸುಲಭ- ಬಸ್ಸುನಿಲ್ದಾಣ […]
ಕಬ್ಬಿಗರ ಅಬ್ಬಿ -9
ಕಬ್ಬಿಗರ ಅಬ್ಬಿ -8 ಬಂಧ ಮತ್ತು ಸ್ವಾತಂತ್ರ್ಯದ ನಡುವೆ ಹದ ಹುಡುಕುತ್ತಾ. ಶ್ರೀ ಹರಿ ಕೋಟಾದ ರಾಕೆಟ್ ಉಡ್ಡಯನ ಕೇಂದ್ರವದು. ಭಾರತೀಯ ಬಾಹ್ಯಾಕಾಶ ಸಂಸ್ಥೆಯ ವಿಜ್ಞಾನಿಗಳು ಗಣಕಯಂತ್ರದ ಪರದೆಯೇ ಕಣ್ಣಾಗಿ ಕುಳಿತಿದ್ದಾರೆ. ಮಹಿಳಾ ವಿಜ್ಞಾನಿಯ ಇಂಪಾದ ಮತ್ತು ಅಷ್ಟೇ ಸಾಂದ್ರವಾದ ದನಿಯಿಂದ ನಿಧಾನವಾಗಿ ಮತ್ತು ಖಚಿತವಾಗಿ…ಹತ್ತು..ಒಂಭತ್ತು…ಎಂಟು.. ಹೌದು. ಅದು ಕೌಂಟ್ ಡೌನ್! ಉಪಗ್ರಹದ ಭಾರ ಹೊತ್ತ ರಾಕೆಟ್ ಸಾಕಮ್ಮನ ಮಡಿಲಿಂದ ಎದೆಯುಬ್ಬಿಸಿ ಹಾರಬೇಕು.ಒಂದು….ಸೊನ್ನೆ!!.ಅದೋ ಅದೋ..ಅಧೋಮುಖದಿಂದ ಬೆಂಕಿ ಹೊಗೆ ಚಿಮ್ಮಿತು, ರಾಕೆಟ್ಟು ಜಿಗಿಯಿತು ಅನಂತಕ್ಕೆ. ವ್ಯೋಮಗಮನಕ್ಕೆ ಮೊದಲ ಜಿಗಿತ.ಸಾಕೇ?. […]
ಕಾಡು ಸುತ್ತಿಸಿ ನಿಸರ್ಗದ ಪಾಠ ಹೇಳುವ ಕಾನ್ಮನೆಯ ಕಥೆಗಳು ನಾನು ಎರಡನೇ ತರಗತಿ ಇದ್ದಿರಬಹುದು. ಅಜ್ಜಿ ಮನೆಯ ಊರಲ್ಲಿ ಬಂಡಿ ಹಬ್ಬ. ಅಂಕೋಲಾ ಹಾಗೂ ಕುಮಟಾದವರು ಏನನ್ನಾದರೂ ಬಿಟ್ಟಾರು. ಆದರೆ ಬಂಡಿ ಹಬ್ಬ ಬಿಡುವುದುಂಟೆ? ಆದರೆ ಬಂಡಿ ಹಬ್ಬದಲ್ಲಿ ದೇವರು ಒಮ್ಮೆ ಕಳಸದ ಮನೆಯಲ್ಲಿ ಕುಳಿತ ನಂತರ ಮತ್ತೆ ಎದ್ದು ಬರೋದು ರಾತ್ರಿಯೇ. ಅದರಲ್ಲೂ ಬಂಡಿ ಆಟ ಮುಗಿಸಿ ತಡವಾಗಿದ್ದ ರಾತ್ರಿಯದು. […]
ಗೂಡಂಗಡಿಯ ತಿರುವು ಬದುಕು ಎನ್ನುವುದು ಕುದಿಯುತ್ತಿರುವ ಹಾಲಿನಂತೆ. ಚೆಲ್ಲಿಹೋಗದಂತೆ ಕಾಪಾಡುವುದು ಬೆಂಕಿಯ ಕರ್ತವ್ಯವೋ, ಪಾತ್ರೆಯ ಜವಾಬ್ದಾರಿಯೋ ಅಥವಾ ಮನೆಯೊಡತಿಯ ಉಸ್ತುವಾರಿಯೋ ಎಂದು ಯೋಚಿಸುವುದು ನಿರರ್ಥಕವಾದೀತು! ಕುದಿಯುವುದು ಹಾಲಿನ ಕರ್ತವ್ಯವಾದರೆ, ಆ ಕ್ರಿಯೆ ಅಪೂರ್ಣವಾಗದಂತೆ ಮುತುವರ್ಜಿ ವಹಿಸುವುದು ಮಹತ್ತರವೆನ್ನಬಹುದಾದಂತಹ ಕೆಲಸ. ಬದುಕು ಎನ್ನುವ ಕಾಯಕ ಪರಿಪೂರ್ಣವಾಗುವುದೇ ಅದಕ್ಕೆ ಸಂಬಂಧಪಟ್ಟ ಕ್ರಿಯೆ-ಪ್ರಕ್ರಿಯೆಗಳ ನಿರಂತರತೆಯಲ್ಲಿ. ಮಣ್ಣಿನ ಒಡಲಿನಲ್ಲಿ ಬೇರು ಬಿಡುವ ಬೀಜ ಬೆಳಕಿನಾಶ್ರಯದಲ್ಲಿ ಕುಡಿಯೊಡೆವ ಕ್ಷಣದಲ್ಲಿ ಸದ್ದಿಲ್ಲದೆ ಬಿದ್ದ ಮಳೆಹನಿಯೊಂದು ಜೀವಜಲವಾಗಿ ಹರಿದು ಚಂದದ ಹೂವನ್ನರಳಿಸುತ್ತದೆ; ಎಲ್ಲಿಂದಲೋ ಹಾರಿಬಂದ ಬಣ್ಣದ ರೆಕ್ಕೆಗಳ […]
ಅರ್ಧನಾರೀಶ್ವರ ( ಕಾದಂಬರಿ) ತಮಿಳು ಮೂಲ : ಪೆರುಮಾಳ್ ಮುರುಗನ್ ಕನ್ನಡಕ್ಕೆ : ನಲ್ಲತಂಬಿ ಬದುಕಿನ ಆದಿಮ ಸತ್ಯಗಳಾದ ಕಾಮ, ಹುಟ್ಟು, ತಾಯ್ತನ, ವಂಶಾಭಿವೃದ್ಧಿಯ ಬಯಕೆಗಳು ಮತ್ತು ಸಾಮಾಜಿಕ ವ್ಯವಸ್ಥೆ ಬೆಳೆದು ಬಂದ ಬಗೆಗಳ ನಡುವಣ ಸಂಘರ್ಷವೇ ಈ ಕಾದಂಬರಿಯ ಕಥಾವಸ್ತು. ಕಾಮ ಮತ್ತು ತಾಯ್ತನದ ಬಯಕೆಗಳು ನೈಸರ್ಗಿಕವಾಗಿ ಇರುವಂಥವು. ಆದರೆ ಗಂಡು-ಹೆಣ್ಣುಗಳ ನಡುವಣ ಕಾಮದಾಸೆಯ ಪೂರೈಕೆಗಾಗಿ ಸಮಾಜವು ರೂಪಿಸಿಕೊಂಡ ವಿವಾಹವೆಂಬ ವ್ಯವಸ್ಥೆಯು ಕೆಲವೊಮ್ಮೆ ವಿಫಲವಾದಾಗ ವ್ಯವಸ್ಥೆಯನ್ನು ಒಡೆದು ಬೇರೆ ದಾರಿ ಹಿಡಿಯುವುದು ಹೇಗೆ ಮತ್ತು ಅದರ […]
ನೀಲಿ ನಕ್ಷತ್ರದ ಬೆಡಗಿನ ಪದ್ಯಗಳು ವಿ.ನಿಶಾ ಗೋಪಿನಾಥ್ ವಿನಿಶಾ ಗೋಪಿನಾಥ್ ಫೇಸ್ಬುಕ್ಕಿನಲ್ಲಿ ನಿರ್ಭಿಡೆಯಿಂದ ಬರೆಯುತ್ತಿರುವ ಕೆಲವೇ ಕವಯತ್ರಿಯರ ಪೈಕಿ ಗಮನಿಸಲೇ ಬೇಕಾದ ಹೆಸರು. ಈಗಾಗಲೇ ಒಂದು ಕಥಾ ಸಂಕಲನ ಮತ್ತು ಒಂದು ಕವನ ಸಂಕಲನ ಪ್ರಕಟಿಸಿರುವ ವಿನಿಶಾ ಅವರ ಪದ್ಯಗಳು ಪ್ರೀತಿಯ ನಶೆ ಹೊತ್ತಿರುವ ಮತ್ತು ಸಂಜೆಯ ಏಕಾಂತಗಳಿಗೆ ನಿಜದ ಸಾಥ್ ನೀಡುವ “ನಿಶಾ” (ಹೊತ್ತಿಳಿದ ಮಬ್ಬು ಬೆಳಕಿನ ಸಂಜೆಯ) ಕಾಲದ ಯಶಸ್ವೀ ಪದ್ಯಗಳೇ ಆಗಿವೆ. ಅವರ ಮೊದಲ ಸಂಕಲನ ಪ್ರಕಟಿಸಿರುವುದು “ಶಬ್ದ ಗುಣ” ಸಾಹಿತ್ಯ ಪತ್ರಿಕೆಯ […]
ಸೃಜನಶೀಲರಾಗಿ ಯಶಸ್ವಿ ವ್ಯಕ್ತಿಗಳಾಗಿ ಸಾಮಾನ್ಯವಾಗಿ ನಾವು ಮಾಮೂಲಿ ಕೆಲಸಗಳನ್ನು ಮಾಮೂಲಿ ರೀತಿಯಲ್ಲಿ ಮಾಡಿ ಅತ್ಯದ್ಭುತ ಫಲಿತಾಂಶ ಬಯಸುತ್ತೇವೆ. ನಾವು ಮಾಡುತ್ತಿರುವ ಕೆಲಸವನ್ನು ಎಂದಿನಂತೆ ಮಾಡುವ ರೀತಿಯಲ್ಲಿಯೇ ಮುಂದುವರೆಸಿದರೆ ಹಿಂದೆ ಬಂದ ಫಲಿತಾಂಶವೇ ಬರುವುದು ಸಹಜ. ಕೆಲವರು ನಾವು ಮಾಡುತ್ತಿರುವ ಕೆಲಸವನ್ನೇ ಮಾಡಿ ನೋಡ ನೋಡುತ್ತಿದ್ದಂತೆ ಗೆಲುವು ಪಡೆಯುತ್ತಾರೆ. ಎಲ್ಲರ ನೆದರಿನಲ್ಲಿಯೂ ಮಿಂಚುತ್ತಾರೆ.ತಾವೂ ಹಿಗ್ಗಿ ಹಲಸಿನಕಾಯಿಯಾಗುತ್ತಾರೆ. ಅದನ್ನು ನಾವು ಬೆರಗುಗಣ್ಣುಗಳಿಂದ ನೋಡುತ್ತಲೇ ಇದ್ದು ಬಿಡುತ್ತೇವೆ. ಅವರು ಅದೃಷ್ಟವಂತರು ಎಂಬ ಹಣೆಪಟ್ಟಿ ಕಟ್ಟುತ್ತೇವೆ. “ಮನುಷ್ಯನು ತನ್ನ ಕುರಿತು ತಾನೇನು ಅಂದುಕೊಳ್ಳುತ್ತಾನೋ […]
ಮಕ್ಕಳು ಮತ್ತು ನಿಸರ್ಗ ನನ್ನನ್ನು ಮತ್ತೆ ಮತ್ತೆ ಹಿಡಿದಿಡುತ್ತವೆ ತಮ್ಮಣ್ಣ ಬೀಗಾರ ಮಕ್ಕಳ ಸಾಹಿತಿ ತಮ್ಮಣ್ಣ ಅವರ ಕುರಿತು… ತಮ್ಮಣ್ಣ ಬೀಗಾರ ಅವರು ಯಲ್ಲಾಪುರದ ಬೀಗಾರದವರು.1959 ನವ್ಹೆಂಬರ್ 22 ರಂದು ಜನಿಸಿದರು. ಸ್ನಾತಕೋತ್ತರ ಪದವೀಧರ , ಸಿದ್ದಾಪುರದ ಬಿದ್ರಕಾನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕಳೆದ 37 ವರ್ಷಗಳಿಂದ ಮಕ್ಕಳ ಜೊತೆ ಮಕ್ಕಳಾಗಿದ್ದರು. ಮಕ್ಕಳ ಸಾಹಿತ್ಯದ ಬಗ್ಗೆ ಬರೆಯುವವರು ವಿರಾಳತೀ ವಿರಳ. ಅದರೆ ತಮ್ಮಣ್ಣ ಮಕ್ಕಳ ಸಾಹಿತ್ಯವನ್ನು ತಮ್ಮ ಅಭಿವ್ಯಕ್ತಿಯಾಗಿ ಆಯ್ಕೆ […]
ಕಬ್ಬಿಗರ ಅಬ್ಬಿ -8 ನಿಸರ್ಗಕ್ಕೂ ಬೇಕು ಸ್ವಾತಂತ್ರ್ಯ ಈ ನೆಲ, ಈ ಜಲ ಈ ಆಕಾಶಈ ಜೀವ ಈ ಭಾವ ಅನಂತಾವಕಾಶಈ ಕಲ್ಲು ಪರಮಾಣು ಒಳದೇವರ ಕಣ್ಣುಈ ಸ್ಥಾವರ ಈ ಜಂಗಮ ಪ್ರಾಣ ವಿಹಂಗಮಈ ವಾತ ನಿರ್ವಾತ ಆತ್ಮನೇ ಆತ್ಮೀಯಈ ಅಂಡ ಬ್ರಹ್ಮಾಂಡ ಉಸಿರಾಡುವ ಕಾಯ ಕಾವ್ಯದೊಳಗೆ ಜೀವರಸವಿದೆ.ರಸದ ಸೆಲೆಯಿದೆ.ಕುದಿಸಮಯವನ್ನೂ ತಣಿಸುವ ಪ್ರೀತಿಯಿದೆ.ಕಲ್ಲ ಮೊಟ್ಟೆಯನ್ನೂ ಕಾವು ಕೊಟ್ಟು ಮರಿ ಮಾಡುವ ಸೃಷ್ಟಿ ತಂತುವಿನ ತರಂಗವಿದೆ.ಕವಿಯ ಕಣ್ಣೊಳಗೆ ಮೂಡಿದ ಪ್ರತೀ ವಸ್ತುವಿನ ಬಿಂಬ ಜೀವಾತ್ಮವಾಗಿ ಕಾವ್ಯದೇಹ ತೊಟ್ಟು ಹೊರ […]