ಇಬ್ಬರೂ ವಚನಕಾರರ ಬದುಕಿನ ಹಿನ್ನೆಲೆಯಲ್ಲಿ ಈ ವಚನವನ್ನು ಗಮನಿಸಬಹುದು. ಬಸವಣ್ಣನವರು ಭಕ್ತಿಭಂಡಾರಿ ಹೇಗೋ ಹಾಗೇ ಬಿಜ್ಜಳನ ಭಂಡಾರದ ಮೇಲ್ವಿಚಾರಣೆ ನೋಡಿಕೊಳ್ಖುತ್ತಿದ್ದವರು. ಅಕ್ಕ ಮಹಾರಾಣಿಯಾಗಿದ್ದವಳು ಕೊನೆಗೆ ತನಗಾಗಿ ಎಲ್ಲವನ್ನೂ ಬಿಟ್ಟು ಬಂದವಳು. ಈ ಹಿನ್ನೆಲೆಯಲ್ಲಿ ಇಬ್ಬರೂ ಆರ್ಥಿಕವಾಗಿ ಸಬಲರು ಮತ್ತು ಸಮಾಜದ ಮೇಲ್ವರ್ಗದಲ್ಲಿ ಇದ್ದವರು. ಹೆಣ್ಣಾಗಿ ಅಕ್ಕ ತಾನೇ ಎಲ್ಲ ಬಿಟ್ಟು ದಿಟ್ಟವಾಗಿ ನಿಂತವಳು, ಆತ್ಮ ಸಂಗಾತಕ್ಕೆ ನೀ ಎನಗುಂಟು ಎಂದು ನಡೆದಂತೆ, ಈ ದೇಹವ ನಾಯಿತಿಂದರೇನು ನೀರು ಕುಡಿದರೇನು ಎಂದು ನಿಂತವಳು. ಈ ಎಲ್ಲ ಹಿನ್ನೆಲೆಯಲ್ಲಿ ಈ ವಚನದಲ್ಲಿ ಒಡಮೂಡುವ ಭಾವದಿಂದ ಇಬ್ಬರ ನಿರ್ಧಾರಗಳೂ ಮಹತ್ತರವಾದವುಗಳು.
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—29 ಆತ್ಮಾನುಸಂಧಾನ ಯಕ್ಷಗಾನದ ಹುಚ್ಚು ಹಿಡಿಸಿದ ದಿನಗಳು ಗೋಖಲೆ ಸೆಂಟಿನರಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿರುವಾಗ ಆಯ್ದುಕೊಂಡ ಮುಖ್ಯ ಐಚ್ಛಿಕ ವಿಷಯ ಕನ್ನಡ, ಆಗ ನಮಗೆ ಕನ್ನಡ ಕಲಿಸಲು ಕಾಲೇಜಿನಲ್ಲಿ ಪ್ರೊ. ವಿ.ಏ, ಜೋಶಿ ಮತ್ತು ಪ್ರೊ. ಕೇ.ವಿ. ನಾಯಕ ಎಂಬ ಇಬ್ಬರು ಉಪನ್ಯಾಸಕರಿದ್ದರು. ಇಬ್ಬರೂ ಕನ್ನಡ ವಿಷಯ ಬೋಧನೆಯಲ್ಲಿ ಪರಿಣಿತರಾಗಿದ್ದರು. ಹಳಗನ್ನಡ – ಹೊಸಗನ್ನಡ ಕಾವ್ಯಗಳನ್ನು ಜೋಶಿಯವರು ಲೀಲಾಜಾಲವಾಗಿ ಪಾಠ ಮಾಡುತ್ತಿದ್ದರೆ, ನಡುಗನ್ನಡ ಕಾವ್ಯಗಳನ್ನು, ಗದ್ಯ ಮತ್ತು ವ್ಯಾಕರಣಗಳನ್ನು […]
ಎಲ್ಲವೂ ಕನಸಿನಲ್ಲಿ. ಏನೋ ನಡೆದಂತೆ. ಉಮಾಶ್ರೀಯವರು ಮುಖ್ಯಪಾತ್ರದಲ್ಲಿದ್ದ ಸಿನೇಮಾ. ಕೃಷ್ಣಮೂರ್ತಿಯವರಿಗೆ ಅವರ ಗಂಡನ ಪಾತ್ರ. ನನಗೆ ಅವರ ಎರಡನೆಯ ಹೆಂಡತಿಯ ಪಾತ್ರ
ಅದು ಹೋಗಲಿ ಬಿಡಿ.. ಸದಾ ಆರೇಳು ಮಕ್ಕಳು ಗುಂಪು ಸೇರಿ ಶಾಲಾ ಚೀಲದೊಳಗೆ ಪುಸ್ತಕೇತರ ಹಲವು ಪರಿಕರಗಳನ್ನು ಹೊತ್ತು ಶಾಲೆಗೆ ಹೋಗುತ್ತಿದ್ದ ನಮ್ಮ ತಂಡವು ಯಾವ ‘ಸಾರ್ಥ’ಕ್ಕೂ (ವ್ಯಾಪಾರೀ ತಂಡ) ಕಡಿಮೆ ಇರುತ್ತಿರಲಿಲ್ಲ
ಸಾವಿನೊಂದಿಗೇ ಬದುಕುವ ಅನಿವಾರ್ಯತೆ ಈ ಬದುಕಿನದು. ಏನೇ ಇದ್ದರೂ ಏನೇ ಗೆದ್ದರೂ ಕೊನೆಗೊಮ್ಮೆ ಎಲ್ಲ ತೊರೆದು ಹಿಡಿ ಬೂದಿಯಾಗುವುದು ಅಥವಾ ಮಣ್ಣಲ್ಲಿ ಸೇರುವುದು ಕಾಲಚಕ್ರದ ನಿಯಮ.
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—28 ಆತ್ಮಾನುಸಂಧಾನ ಬಹುಮುಖೀ ವ್ಯಕ್ತಿತ್ವದ ರಾಕಜ್ಜ ನಮ್ಮ ತಾಯಿಯ ಚಿಕಪ್ಪ ರಾಕು. ಬಾಲ್ಯದಲ್ಲಿಯೇ ತಂದೆ, ಅವಳ ವಿವಾಹದ ಬಳಿಕ ತಾಯಿಯನ್ನು ಕಳೆದುಕೊಂಡ ಅವ್ವನಿಗೆ ತೌರುಮನೆಯ ಕಡೆಯಿಂದ ಕೊನೆಯವರೆಗೂ ಹತ್ತಿರದಲ್ಲಿ ಕುಟುಂಬದ ಸದಸ್ಯನೇ ಎಂಬಂತೆ ಆಧಾರವಾಗಿದ್ದವನು ಚಿಕ್ಕಪ್ಪ ರಾಕು. ನಮಗೆಲ್ಲ ಅಕ್ಕರೆಯ ರಾಕಜ್ಜ. ವಿಶೇಷವೆಂದರೆ ಬಾಲ್ಯದಿಂದಲೂ ನನ್ನನ್ನು ವಿಶೇಷವಾಗಿ ಎದೆಗೆ ಹಚ್ಚಿಕೊಂಡು ಅಕ್ಕರೆ ತೋರಿದವನು ರಾಕಜ್ಜನೇ. ಜಾತ್ರೆಗೋ, ಯಕ್ಷಗಾನ ಬಯಲಾಟ ನೋಡುವುದಕ್ಕೋ ನನ್ನನ್ನು ಹೆಗಲೇರಿಸಿಕೊಂಡು ಹೊರಡುವ ರಾಕಜ್ಜ ನಾನು ಬೇಡಿದುದನ್ನು ಕೊಡಿಸುತ್ತ […]
ನಾಟಕ ನೋಡಿದ ಅದೆಷ್ಟು ಸಿರಿವಂತ ಹೃದಯದವರು ದೊಡ್ಡ ದೊಡ್ಡ ಹೆಸರು ಮಾಡಿದ ಕಲಾವಿದರೊಂದಿಗೆ ನನ್ನನ್ನು ಹೋಲಿಸಿ ಶಹಭಾಷ್ ಎಂದಾಗ ಕಲಾವಿದೆಯಾಗಿ ತೊರೆ ತೆರೆದು ಅರಳುವಿಕೆಗೆ ಸಮರ್ಪಣೆ ಮಾಡಿದ್ದು ಸಾರ್ಥಕ ಅನ್ನಿಸಿದೆ
‘ಕೈ ಕೈ ಎಲ್ಹೋಯ್ತು? ಬಾಗಿಲ ಸಂಧಿಗೆ ಹೋಯ್ತು.. ಬಾಗಿಲೇನು ಕೊಡ್ತು..? ಚಕ್ಕೆ ಕೊಡ್ತು..’ ಎಂಬ ಬಾಲ್ಯದಾಟವು ಕೊಡುವ ಮಹತ್ತನ್ನು ಸಾರಿದರೆ, ಕೋಲಾಟ, ಗಿರಿಗಿಟ್ಲೆ, ಚಿನ್ನಿದಾಂಡು, ಚನ್ನೆಮಣೆ ಮೊದಲಾದವನ್ನು ಆಡಲೂ ಜೊತೆಗಾರರ ಕೈ ಬೇಕು ಎಂಬುದನ್ನು ಮಕ್ಕಳಿಗೆ ತಿಳಿಸುತ್ತವೆ.
ಎಲ್ಲವೂ ಸರಿ ಇದ್ದಲ್ಲಿ ಸುಳ್ಳಿನ ಅವಶ್ಯಕತೆಯೇ ಬಾರದು.ಎಲ್ಲಿ ಸ್ವಾರ್ಥ, ಮೋಸ, ನಯವಂಚಕತನ,ಅಹಂಗಳು ವಿಜೃಂಭಿಸುತ್ತವೋ ಅಲ್ಲಿ ಸುಳ್ಳು ಆಹ್ವಾನಕ್ಕೇ ಕಾಯದ ಅತಿಥಿಯಂತೆ ಧಾವಿಸಿ ಹೋಗಿ ನೆಲೆಸುತ್ತದೆ.ಮತ್ತು ಅಲ್ಲೇ ಖಾಯಂ ಆಗಿ ಉಳಿಯಲು ಪ್ರಯತ್ನಿಸುತ್ತದೆ.
ನಮ್ಮ ಪೂರ್ವಜರು ನೆಲೆಸಿದ್ದ ‘ಗುಂದಿ ಹಿತ್ತಲು’ ನಮ್ಮ ಮನೆಯಿಂದ ಕೂಗಳತೆ ದೂರಮದಲ್ಲಿಯೇ ಇತ್ತಾದರೂ ಇತ್ತೀಚೆಗೆ ಅಲ್ಲಿ ನೆಲೆಸಿದ ಕುಟುಂಬಗಳು ಮಾಸ್ಕೇರಿ ಮತ್ತು ಅಗ್ಗರಗೋಣದ ಕಡೆಗೆ ವಲಸೆ ಹೋಗಿ ಸರಕಾರಿ ಭೂಮಿ ಪಡೆದು ನೆಲೆ ಕಂಡುಕೊಂಡಿದ್ದವು