ಪಿಂಜರ್ ಶೋಷಣೆಗೊಳಗಾಗಿ ಅಸ್ಥಿಪಂಜರಗಳಾಗುವ ಹೆಣ್ಣುಮಕ್ಕಳ ಕಥೆ ಅಮೃತಾ ಪ್ರೀತಮ್ ಪಿಂಜರ್ಮೂಲ : ಅಮೃತಾ ಪ್ರೀತಮ್ಕನ್ನಡಕ್ಕೆ : ಎಲ್.ಸಿ.ಸುಮಿತ್ರಾಪ್ರ : ಅಂಕಿತ ಪುಸ್ತಕಪ್ರ.ವರ್ಷ :೨೦೦೬ಬೆಲೆ : ರೂ.೬೦ಪುಟಗಳು : ೧೦೪ ದೇಶ ವಿಭಜನೆಯ ಕಾಲದಲ್ಲಿ ಶೋಷಣೆಗೊಳಗಾದ ಅಮಾಯಕ ಹೆಣ್ಣು ಮಕ್ಕಳ ಕರುಣ ಕಥೆಯಿದು. ಪೂರೋ ಎನ್ನುವವಳು ಇಲ್ಲಿ ಕಥಾ ನಾಯಕಿ. ತನ್ನ ಇಬ್ಬರು ಸಹೋದರಿಯರು ಮತ್ತು ಒಬ್ಬ ಸಹೋದರನಿರುವ ಒಂದು ಸುಖಿ ಕುಟುಂಬದಲ್ಲಿ ಹಾಯಾಗಿ ಬೆಳೆದ ಹುಡುಗಿ ಪೂರೊ. ಸೌಮ್ಯ ಸ್ವಭಾವದವಳೂ ವಿಧೇಯಳೂ ಆದ ಅವಳು […]
ಶ್ರೀಮಂತ ಅನುಭವಗಳ ಸಹಜ ಒಡಂಬಡಿಕೆ ಸುಧಾ ಆಡುಕಳ ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳದವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಶಿಕ್ಷಕಿಯಾಗಿದ್ದಾರೆ. ಸಾಹಿತ್ಯ ಕೃಷಿಯಲ್ಲಿ ಆಸಕ್ತಿ ಇರುವ ಕಾರಣ ರಾಧಾ, ನೃತ್ಯಗಾಥಾ, ಮಕ್ಕಳ ರವೀಂದ್ರ, ನಾರಸಿಂಹ, ಮಕ್ಕಳ ರಾಮಾಯಣ, ಕನಕ-ಕೃಷ್ಣ ಮೊದಲಾದ ನಾಟಕಗಳನ್ನು ರಚಿಸಿದ್ದಾರೆ. ರವೀಂದ್ರ ನಾಥ ಟ್ಯಾಗೋರರ ಚಿತ್ರಾ, ಕೆಂಪುಕಣಗಿಲೆ, ಅವಳ ಕಾಗದ ಮೊದಲಾದ ನಾಟಕಗಳನ್ನು ಕನ್ನಡಕ್ಕೆ ರೂಪಾಂತರಿಸಿದ್ದಾರೆ. ‘ಬಕುಲದ ಬಾಗಿಲಿನಿಂದ’ ಎಂಬ ಅಂಕಣ ಬರಹ ಜಿ.ಎನ್ ಮೋಹನ್ ಸಾರಥ್ಯದ “ಅವಧಿ” ಅಂತರ್ಜಾಲ ಪತ್ರಿಕೆಯಲ್ಲಿ ಪ್ರಕಟವಾಗುತ್ತಿತ್ತು. […]
ಅಂಕಣಬರಹ ಬದುಕಿನ ಏರಿಳಿತಗಳನು ಒಪ್ಪಿಕೊಳ್ಳುವುದು ಹೇಗೆ? ಬದುಕಿನ ರೀತಿಯೇ ಅಂಥದ್ದು. ಪ್ರತಿ ಕ್ಷಣವೂ ಹೊಸತನದಿಂದಲೇ ಕೂಡಿಕೊಂಡಿರುತ್ತದೆ.ಅದೆಷ್ಟೇ ಬೇಸರಗೊಂಡಿದ್ದರೂ ಮತ್ತೆ ಕುತೂಹಲದಿಂದ ಸೆಳೆದು ನಿಲ್ಲಿಸಬಲ್ಲ ಮಾಯಾಶಕ್ತಿ ಅದಕ್ಕಿದೆ. ರಾಶಿ ರಾಶಿ ಹೊಸ ಅನುಭವಗಳು ಮುಂದೆ ಕಾದಿವೆ ಎಂದು ಗೊತ್ತಿದ್ದರೂ ಕೆಲವೊಂದು ಸಲ ಕಷ್ಟದ ಸಾಲುಗಳು ಇನ್ನಿಲ್ಲದಂತೆ ಆವರಿಸಿ ಹಿಂಡಿ ಹಿಪ್ಪಿ ಮಾಡಿಬಿಡುತ್ತವೆ. ಪ್ರತಿ ಕಷ್ಟವೂ ವಿಶಿಷ್ಟತೆಯಿಂದ ಕಾಡುತ್ತದೆ. ಅನುಭವದ ಪಾಠವನ್ನು ಕಲಿಸಿಯೇ ಮುನ್ನಡೆಯುತ್ತದೆ. ಒಮ್ಮೊಮ್ಮೆ ದಡದಡನೆ ಓಡುವವರನ್ನು ಗಕ್ಕನೇ ನಿಲ್ಲಿಸಿ ಬಿಡುತ್ತದೆ. ಅಟ್ಟದ ಮೇಲೇರಿ ಕುಳಿತವರನ್ನು ಕೆಳಕ್ಕೆ […]
ಮುಖಾಮುಖಿ ಈ ಜಗತ್ತಿನೊಂದಿಗೆ ನನ್ನ ಜಗತ್ತನ್ನ ಬೆಸೆಯುವ ತಂತು ಕವಿತೆ ಪರಿಚಯ ;ಚೈತ್ರಾ ಶಿವಯೋಗಿಮಠಮೂಲತಃ ಬಿಜಾಪುರದವರು. ಬೆಂಗಳೂರಿನ ನಿವಾಸಿ.ಎಂಟೆಕ್ ಪದವಿಯನ್ನು ವಿಟಿಯು ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ವೃತ್ತಿಯಲ್ಲಿ ಸಾಫ್ಟವೇರ್ ಇಂಜಿನಿಯರ್. ಕಾರ್ಯಕ್ರಮದ ನಿರೂಪಣೆ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ನನ್ನೊಂದಿಗೆ ನಾನು ಈ ಜಗತ್ತಿನೊಂದಿಗೆ ನನ್ನ ಜಗತ್ತನ್ನ ಬೆಸೆಯುವ ತಂತು ಕವಿತೆ. ತೀವ್ರವಾಗಿ ನನ್ನ ಮನಸ್ಸಿಗೆ ಅರ್ಥೈಸಬೇಕಾದರೆ ಅದನ್ನ ಪದಗಳಾಗಿಸಿ ನನ್ನ ಮನದಾಳಕಿಳಿಸಿಕೊಳ್ಳುತ್ತೇನೆ. ಮನೆಯನ್ನ ನಾವು ದಿನವೂ ಗುಡಿಸಿ ಶುಚಿ ಮಾಡಿದರೂ ಅದು […]
ಅಂಕಣ ಬರಹ ಜ್ಞಾನಪಾನ ಭಕ್ತಿ ಜ್ಞಾನಗಳನ್ನು ಪ್ರೇರಿಸುವ ಕೃತಿ ಕೃತಿಯ ಹೆಸರು : ಜ್ಞಾನಪಾನಪ್ರಕಾಶಕರು : ಶ್ರೀ ಅಯ್ಯಪ್ಪ ಭಕ್ತ ಸಭಾ , ಚೆನ್ನೈಪ್ರಕಟಣಾ ವರ್ಷ : ೨೦೨೦ಪುಟಗಳು : ೩೨ ಹದಿನಾರನೆಯ ಶತಮಾನದಲ್ಲಿ ಭಾರತದಾದ್ಯಂತ ನಡೆದ ಭಕ್ತಿ ಚಳುವಳಿಯ ಸಂದರ್ಭದಲ್ಲಿ ಮಲೆಯಾಳ ಭಕ್ತಿ ಕಾವ್ಯ ರಚನೆ ಮಾಡಿದವರಲ್ಲಿ ಪ್ರಮುಖರು ಪೂಂದಾನಂ ನಂಬೂದಿರಿ. ಕನ್ನಡದಲ್ಲಿ ರಚನೆಯಾದ ದಾಸ ಸಾಹಿತ್ಯದಷ್ಟು ವ್ಯಾಪಕವಾದ ವಸ್ತು ವೈವಿಧ್ಯಗಳಿಲ್ಲದಿದ್ದರೂ ಮಲೆಯಾಳದಲ್ಲಿ ಪೂಂದಾನಂ, ಚೆರುಶ್ಶೇರಿ ನಂಬೂದಿರಿ, ತುಂಜತ್ತ್ ಎಳುತ್ತಚ್ಛನ್, ನಾರಾಯಣ ಭಟ್ಟಾತಿರಿಪ್ಪಾಡ್ ಮೊದಲಾದ ಭಕ್ತಿ […]
ಅಂಕಣ ಬರಹ ಗಂಗಾವತಿಯ `ಜಜ್ಬ್’ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಉರ್ದು ಪಂಡಿತರ ಪಡೆಯೊಂದು ಈಚಿನವರೆಗೂ ಇತ್ತು. ನಿಜಾಂ ಸಂಸ್ಥಾನದಲ್ಲಿ ಉರ್ದು ಆಡಳಿತ ಹಾಗೂ ಶಿಕ್ಷಣದ ಭಾಷೆಯಾಗಿದ್ದು, ಸಹಜವಾಗಿಯೇ ಈ ಭಾಗದ ಎಲ್ಲ ಜಾತಿಮತಗಳ ಜನ ಉರ್ದುವಿನಲ್ಲಿ ಶಿಕ್ಷಣ ಪಡೆದರು. ಅವರಲ್ಲಿ ಕೆಲವರು ಆಡಳಿತಾತ್ಮಕ ಉರ್ದುವಿನಲ್ಲಿ ವಿಶೇಷ ಪರಿಣತಿ ಪಡೆದುಕೊಂಡರು. 1948ರಲ್ಲಿ ಸಂಸ್ಥಾನವು ಭಾರತ ಒಕ್ಕೂಟದಲ್ಲಿ ವಿಲೀನಗೊಂಡಿತು. ಹಳೇ ಗುಲಬರ್ಗ ಬೀದರ್ ರಾಯಚೂರು ಜಿಲ್ಲೆಗಳು ಏಕೀಕೃತ ಕರ್ನಾಟಕದ ನಕ್ಷೆಯೊಳಗೆ ಬಂದವು. ಈ ರಾಜಕೀಯ ಪಲ್ಲಟವು ಉರ್ದು ಪಂಡಿತರನ್ನು ಇದ್ದಕ್ಕಿದ್ದಂತೆ […]
ಅಂಕಣ ಬರಹ ಕಬ್ಬಿಗರ ಅಬ್ಬಿ–12 ಬಸರೀಕಟ್ಟೆ ಮತ್ತು ಬೂದಿಕಟ್ಟೆ ನಡುವಿನ ಈ ವಿಸ್ಮಯ ಆ ಇಬ್ಬರು ಆಗಲೇ ೨೭೦೦೦ ಅಡಿಗಳಷ್ಟು ಎತ್ತರ ಏರಿದ್ದರು. ಅದುವರೆಗೂ ಯಾರೂ ಏರದ ಎತ್ತರ ಅದು. ಹಿಮದ ಗಡ್ಡೆಗಳ ಇಳಿಜಾರು ಒಂದು ಕಡೆ, ದೂರ ದೂರದತ್ತ ಕಣ್ಣು ಹಾಯಿಸಿದರೆ ಕಾಣುವುದು ಬರೇ ಬಿಳಿ ಬಿಳೀ ಹಿಮ. ಅದರಡಿಯಲ್ಲಿ ಅದೆಷ್ಟು ಸಾಹಸೀ ದೇಹಗಳು ದಫನವಾಗಿವೆ ಎಂದು ಯೋಚಿಸಿ ಆತ ನಡುಗುತ್ತಾನೆ. ಬದುಕೇ ಹಾಗೆ, ಕಾಣದ ಕಾಣ್ಕೆಗೆ ಹಂಬಲಿಸುತ್ತೆ. ಎತ್ತರೆತ್ತರ ಏರಲು, ಏನೋ ಹೊಸತು..ಹೊಸ ದಿಕ್ಕು, […]
ಹಲವು ಭಾವಗಳನ್ನು ಒಟ್ಟಿಗೆ ಸೆರೆಹಿಡಿಯುವ ರೂಪಕಗಳು ಸೂಜಿ ಕಣ್ಣಿಂದ ತೂರಿದದಾರಕ್ಕೆ ಒಳಗಿಲ್ಲ ಹೊರಗಿಲ್ಲ ಈ ಒಂದು ಸಾಲಲ್ಲಿಯೇ ತನ್ನ ಇಡೀ ಕಾವ್ಯದ ಸತ್ವವನ್ನು ನಮ್ಮೆದುರಿಗೆ ತೆರೆದಿಟ್ಟ ಕೃಷ್ಣ ಗಿಳಿಯಾರ ಎಂಬ ವೈದ್ಯರ ಪರಿಚಯ ಯಾರಿಗಿಲ್ಲ ಹೇಳಿ. ವೃತ್ತಿಯಲ್ಲಿ ವೈದ್ಯರಾದರೂ ನವಿರು ಗೆರೆಗಳು ಅವರ ಭಾವಾಭಿವ್ಯಕ್ತಿಯ ಪ್ರತಿರೂಪ. ಭಟ್ಕಳದಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಕೃಷ್ಣ ಗಿಳಿಯಾರರ ಕ್ಯಾಮರಾಕ್ಕೆ ಫೋಸ್ ನೀಡಲೆಂದೇ ಬಹಳಷ್ಟು ಹೂವುಗಳು ಅರಳುತ್ತವೆ. ಹೆಚ್ಚಿನ ಪಕ್ಷಿಗಳು ಅವರೆದುರು ಹೊಸ ಮದುವಣಗಿತ್ತಿಯಂತೆ ನುಲಿಯುತ್ತ ನಡೆಯುತ್ತವೆ. ಸೂರ್ಯ ಬಳಕುತ್ತ ತನ್ನದೊಂದು […]
ಪಾಲಿಸೋ ಹೂವ ನಾನು ಚಿಕ್ಕವಳಿದ್ದಾಗ ಊರಿನ ಆಂಜನೇಯ ದೇವಸ್ಥಾನದ ದೇವರ ಪಲ್ಲಕ್ಕಿ ವರುಷಕ್ಕೊಮ್ಮೆ ನಮ್ಮ ಮನೆಗೆ ಬರುತ್ತಿತ್ತು. ಮನೆಯ ಹಿರಿಯರೆಲ್ಲರೂ ಭಯ-ಭಕ್ತಿಗಳಿಂದ ದೇವರನ್ನು ಸ್ವಾಗತಿಸಲು ಸಿದ್ಧರಾದರೆ, ನನ್ನ ಮನಸ್ಸಿನಲ್ಲೊಂದು ವಿಚಿತ್ರವಾದ ಸಡಗರ ತುಂಬಿಕೊಳ್ಳುತ್ತಿತ್ತು. ಕಲ್ಲು-ಮುಳ್ಳು ಬಿಸಿಲು ಯಾವುದನ್ನೂ ಲೆಕ್ಕಿಸದೆ ಮಡಿಬಟ್ಟೆಯಲ್ಲಿ ಪಲ್ಲಕ್ಕಿ ಹೊರುತ್ತಿದ್ದ ಗಂಡಸರು, ಅವರ ಕಾಲುಗಳನ್ನು ತಣ್ಣೀರಿನಿಂದ ತೊಳೆದು ಹಳೆಹಾಡುಗಳನ್ನು ಹಾಡುತ್ತ ಪಲ್ಲಕ್ಕಿಯನ್ನು ಸ್ವಾಗತಿಸುತ್ತಿದ್ದ ಹೆಂಗಸರು, ದೇವರು-ಶಾಸ್ತ್ರ ಯಾವುದರ ಬಗ್ಗೆಯೂ ಸ್ಪಷ್ಟ ಕಲ್ಪನೆಯಿಲ್ಲದೆ ದೇವರ ಆಗಮನವನ್ನು ನೆಂಟರು ಬಂದಂತೆ ಸಂಭ್ರಮಿಸುತ್ತಿದ್ದ ಮಕ್ಕಳು ಹೀಗೆ ಬಿಡಿಬಿಡಿಯಾದ ಪ್ರಪಂಚಗಳನ್ನು […]
ಜುಮ್ಮಾ- ಕಥಾ ಸಂಕಲನ ಜುಮ್ಮಾ- ಕಥಾ ಸಂಕಲನತೆಲುಗು ಮೂಲ: ವೇಂಪಲ್ಲಿ ಶರೀಫ್ಕನ್ನಡಕ್ಕೆ:ಸೃಜನ್ಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೭೫ಪುಟಗಳು : ೯೬ ಮುಸ್ಲಿಂ ಸಂವೇದನೆಗಳಿಗೆ ಧ್ವನಿ ನೀಡುವ ಮತ್ತು ಓದುಗರ ಮನಮಿಡಿಯುವಂತೆ ಮಾಡುವ ೧೩ ಹೃದಯಸ್ಪರ್ಶಿ ಕಥೆಗಳ ಸಂಕಲನವಿದು. ಮುಖ್ಯವಾಗಿ ಗ್ರಾಮೀಣ ತಳ ಸಮುದಾಯದವರ ಕುರಿತಾದ ಕಥೆಗಳು ಇಲ್ಲಿವೆ. ಬದುಕಿನಲ್ಲಿ ಸುಖವೆಂದರೇನೆಂದೇ ತಿಳಿಯದ ಅಸ್ತಿತ್ವಕ್ಕಾಗಿ ಹೆಣಗಾಡುವ ಮಂದಿ ಇಲ್ಲಿದ್ದಾರೆ. ಲೇಖಕರಾದ ವೇಂಪಲ್ಲಿ ಶರೀಫ್ ತಮ್ಮ ಸುತ್ತಮುತ್ತ ತಾವು ಕಂಡ ಜಗತ್ತನ್ನು ಸ್ವಲ್ಪವೂ ಉತ್ಪ್ರೇಕ್ಷೆಯಿಲ್ಲದೆ […]