ಬೊಗಸೆಯಲ್ಲೊಂದು ಹೂನಗೆ ನೆನಪೊಂದು ಮಳೆಯಾಗಿ ಸುರಿದಾಗಲೆಲ್ಲ ನಗುವೊಂದು ಮಳೆಯ ಹನಿಗಳಾಗಿ ಅಂಗೈಯನ್ನು ಸ್ಪರ್ಶಿಸುತ್ತದೆ. ಹಾಗೆ ಸ್ಪರ್ಶಿಸಿದ ಒಂದಿಷ್ಟು ಹನಿಗಳು ಜಾರಿಬಿದ್ದು ನೆಲವನ್ನು ಹಸಿಯಾಗಿಸಿದರೆ, ಉಳಿದವು ಬೊಗಸೆಯಲ್ಲೊಂದು ಹೊಸ ಪ್ರಪಂಚವನ್ನು ಬಿಚ್ಚಿಡುತ್ತವೆ. ಹಾಗೆ ನಮ್ಮೆದುರು ತೆರೆದುಕೊಳ್ಳುವ ಪ್ರಪಂಚದಲ್ಲಿ ಕೈಗೂಸಿನ ಕನಸಿನಂಥ ನಗುವೊಂದು ಅಮ್ಮನ ಮಡಿಲಿನಲ್ಲಿ ಕದಲಿದರೆ, ಹೂನಗೆಯ ಹೊತ್ತ ಹುಡುಗಿಯೊಬ್ಬಳು ಸೈಕಲ್ಲನ್ನೇರಿ ಕನಸಿನಂತೆ ಮರೆಯಾಗುತ್ತಾಳೆ; ಹನಿಮೂನ್ ಪ್ಯಾಕೇಜಿನ ರೆಸಾರ್ಟ್ ಒಂದರ ಡೈನಿಂಗ್ ಹಾಲ್ ನಲ್ಲಿ ನಾಚಿಕೆಯ ನಗುವೊಂದು ಮೋಂಬತ್ತಿಯಾಗಿ ಕರಗಿದರೆ, ಆಪರೇಟಿಂಗ್ ರೂಮೊಂದರಿಂದ ಹೊರಬಂದ ವೈದ್ಯರ ನಗುವೊಂದು ಕಣ್ಣೀರನ್ನೆಲ್ಲ […]
ಅವಮಾನದ ತಿರುವುಗಳು ಗೆಲುವಿನ ಮೈಲಿಗಲ್ಲುಗಳು ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದು ಅವಮಾನದ ಒಂದು ಪ್ರಸಿದ್ಧ ಉದಾಹರಣೆ; ಪವಿತ್ರ ನರ್ಮದಾ ನದಿಯಲ್ಲಿ ಒಮ್ಮೆ ಸಂತ ಏಕನಾಥ ಸ್ನಾನ ಮಾಡಿ ಹೊರ ಬರುತ್ತಿದ್ದ.ಆಗ ಪಠಾಣನೊಬ್ಬ ಮನದಲ್ಲಿ ವಿಷ ತುಂಬಿಕೊಂಡು ಸಂತನ ಮೇಲೆ ಉಗುಳಿದ. ಏಕನಾಥ ‘ಜೈ ವಿಠ್ಠಲ’ ಎನ್ನುತ್ತ ಮತ್ತೆ ನರ್ಮದೆಗಿಳಿದ. ಈ ರೀತಿ ಮುಂಜಾನೆಯಿಂದ ಸಂಜೆಯವರೆಗೂ ಇಬ್ಬರ ನಡುವೆ ನಡೆಯಿತು ಯಾರು ಸೋಲುತ್ತಾರೆಂದು ನದಿ ತಟದಲ್ಲಿ ಜನ ನಿಂತು ನೋಡುತ್ತಿದ್ದರು. ಕೊನೆಗೆ ಪಠಾಣ, ಸಂತರನ್ನು ಉದ್ದೇಶಿಸಿ ನಾನು ಯಾವುದೇ ಕಾರಣವಿಲ್ಲದೇ […]
ರೇಖಾಚಿತ್ರ ಕಲೆಯ ತಾಯಿ “ಚಿತ್ರಕಲಾ ಅಧ್ಯಾಪಕರ ಆಯ್ಕೆಯಲ್ಲಿ ಪಠ್ಯಕ್ಕೆ ಅನುಗುಣವಾದ ಪ್ರಯೋಗಿಕ ಪರೀಕ್ಷೆ ಮಾನದಂಡವಾಗಬೇಕು” …………………………………. ಹಜರತ್ ಅಲಿ ನಾಡಿನ ಖ್ಯಾತ ಕಲಾವಿದ. ಹರಪನಹಳ್ಳಿ ಬಳಿಯ ಉಚ್ಚಂಗಿ ದುರ್ಗ ಅವರ ಹುಟ್ಟೂರು. ಅವರು ನೆಲೆಸಿರುವುದು ದಾವಣೆಗರೆಯಲ್ಲಿ. ಕಾರ್ಯ ನಿರ್ವಹಿಸುತ್ತಿರುವುದು ತುಮಕೂರು ವಿಶ್ವವಿದ್ಯಾಲಯದ ಚಿತ್ರಕಲಾ ವಿಭಾಗದಲ್ಲಿ ಉಪನ್ಯಾಸಕರಾಗಿ. ಉತ್ಸವಾಂಬ ಪ್ರೌಢಶಾಲೆಯಲ್ಲಿ ಕಲಿತ ಅವರು , ದಾವಣಗೆರೆಯ ಚಿತ್ರಕಲಾ ಶಾಲೆಯಲ್ಲಿ ಫೈನ್ ಆರ್ಟ ಮತ್ತು ಮಾಸ್ಟರ್ ಆಫ್ ಆರ್ಟ ಪದವಿಗಳಿಸಿದರು. ಹಂಪಿ ಅವರ ನೆಚ್ಚಿನ ತಾಣ. ನಿಸರ್ಗ ಮತ್ತು ಹಳ್ಳಿ […]
ಚಹಾ ಎನ್ನುವ ಜನುಮದ ಸಾಕಿ ಬುಕ್ ಆಫ್ ಟೀ ಲೇಖಕರು – ಕುಮಾರ್ ಎಸ್ ಬೆಲೆ- -100 ಎಲ್ಲವನ್ನೂ ಬೆಸೆದ ಚಹಾ ಪ್ರೀತಿಗೆ ಎನ್ನುವ ಬರೆಹದೊಂದಿಗೆ ಈ ಪುಸ್ತಕ ನನ್ನ ಕೈ ಸೇರಿದಾಗ ಎಷ್ಟೊಂದು ಖುಷಿಯಾಗಿತ್ತು ಎಂದರೆ ಕುಳಿತಲ್ಲೇ ಒಂದು ಕಪ್ಪು ಬಿಸಿಬಿಸಿ ಚಹಾ ಕುಡಿದಷ್ಟು ರಿಲ್ಯಾಕ್ಸ್ ಆಗಿದ್ದೆ. ನನ್ನ ಚಹಾ ಪ್ರೀತಿಯೇ ಅಂತಹುದ್ದು. ಕೊಟ್ಟರೆ ಮೊಗಮೊಗೆದು ಕುಡಿಯುತ್ತಲೇ ಇರುವ ಇಲ್ಲದಿದ್ದರೆ ದಿನವಿಡೀ ಕುಡಿಯದ ಪ್ರೀತಿಯಂತಹ ಪ್ರೀತಿ ಈ ಚಹ. ಪ್ರೀತಿಯೂ ಹಾಗೆ. ಪ್ರೇಮ ಸಾಗರದಲ್ಲಿ […]
ಜಾಮಿನಿಯ ನೆನಪಿನಲ್ಲಿ ಈ ಮಳೆಗಾಲದಲ್ಲಿಯೇ ನೆನಪುಗಳು ಹುಟ್ಟಿಕೊಂಡಿರಬಹುದು ಎನ್ನುವ ಬಲವಾದ ನಂಬಿಕೆಯಿದೆ ನನಗೆ. ಮೋಡಗಳೊಂದಿಗೆ ತಣ್ಣಗೆ ತೇಲಿಬಂದ ನೆನಪೊಂದು, ಏಕಾಂತ ಬಯಸಿ ಟೆರೇಸಿನಲ್ಲಿ ಕುಳಿತು ಆಕಾಶ ದಿಟ್ಟಿಸುತ್ತಿದ್ದ ಹೃದಯವೊಂದನ್ನು ತಾಕಿ ನೆಲಕ್ಕೆ ಇಳಿದಿರಬಹುದು. ಹಾಗೆ ತಾಕಿದ ನೆನಪು ಒಮ್ಮೆ ಬಾಲ್ಯದ ಬೆರಗಾಗಿ, ಇನ್ನೊಮ್ಮೆ ಹರೆಯದ ಕನಸಾಗಿ, ಮತ್ತೊಮ್ಮೆ ಫ್ರಿಡ್ಜ್ ನಲ್ಲಿಟ್ಟ ಐಸ್ ಕ್ರೀಮಾಗಿ ಎಲ್ಲರ ಅರಿವಿಗೂ ದಕ್ಕಿರಬಹುದು. ಹಾಗೆ ದಕ್ಕಿದ ನೆನಪು ಈಗಷ್ಟೇ ಟ್ರೆಕ್ಕಿಂಗ್ ಮುಗಿಸಿದ ಹುಡುಗನೊಬ್ಬನ ಭಾರವಾದ ಬ್ಯಾಗ್ ನಲ್ಲೋ, ಕಾಡುಪಾಪವೊಂದನ್ನು ಕಷ್ಟಪಟ್ಟು ಕ್ಲಿಕ್ಕಿಸಿದ ಫೋಟೋಗ್ರಾಫರ್ […]
ಅಕ್ಷರದ ಬಂಡಾಯ ತಲ್ಲಣಗಳಿಗೆ ಪ್ರತಿಕ್ರಿಯೆ ಬೇಕಾದ ಅನಿವಾರ್ಯತೆಯಲ್ಲಿ ಬರೆಯಲು ಮನಸ್ಸು ಮಾಡಿದೆ’ ಡಾ.ರಾಮಕೃಷ್ಣ ಗುಂದಿ ಡಾ.ರಾಮಕೃಷ್ಣ ಗುಂದಿ ಕನ್ನಡದ ಅತ್ಯಂತ ಪ್ರಭಾವಶಾಲಿ ಕತೆಗಾರರಲ್ಲಿ ಒಬ್ಬರು. ಅವಾರಿ ಅವರ ಪ್ರಸಿದ್ಧ ಕತೆ. ಅವರ ಮೊದಲ ಕಥಾ ಸಂಕಲನ ಅವಾರಿ ಹೆಸರಲ್ಲೇ ಪ್ರಕಟವಾಯಿತು. ಕಡಲ ಬೆಳಕಿನ ದಾರಿಯಲ್ಲಿ, ಸೀತೆದಂಡೆ ಹೂವೆ ಅವರ ಕಥಾ ಸಂಕನಲಗಳು. ಪ್ರಾಂಜಲ ಅವರು ವಿವಿಧ ಲೇಖಕರಿಗೆ ಬರೆದ ಮುನ್ನುಡಿಗಳ ಸಂಗ್ರಹ. ಆಗೇರರ ಬದುಕು ಮತ್ತು ಸಂಸ್ಕೃತಿ ಕುರಿತು ಅವರು ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕ ವಿಶ್ವವಿದ್ಯಾನಿಲಯದಿಂದ […]
ದಿಕ್ಸೂಚಿ
ತೊಂದರೆ ಕೊಡಬೇಡಿ ಅಂತ ಹೇಳಿಬಿಡಿ ಜಯಶ್ರೀ.ಜೆ.ಅಬ್ಬಿಗೇರಿ ಮೊದಲೇ ಓದಿನ ಒತ್ತಡ. ಇದು ಸಾಲುವುದಿಲ್ಲ ಎಂಬಂತೆ ಬಹು ದಿನಗಳಿಂದ ಬೆನ್ನು ಬಿಡದಿರುವ ಕೆಲ ವೈಯುಕ್ತಿಕ ಸಮಸ್ಯೆಗಳು. ತಲೆ ತಿನ್ನುತ್ತಿವೆ. ಒಂದಿಷ್ಟು ಹೊತ್ತು ಎಲ್ಲೋ ಒಂದು ಕಡೆ ಹೋಗಿ ಮೌನವಾಗಿದ್ದು ಬರೋಣವೆಂದರೆ ನಿಮ್ಮ ಗೆಳೆಯ/ ಗೆಳತಿ ನಿಮಗೆ ಸಂಬಂಧವಿಲ್ಲದ ಯಾವುದೋ ವಿಷಯ ಹೇಳಿ ತಲೆ ತಿನ್ನುತ್ತಿದ್ದರೆ ಕೋಪ ನೆತ್ತಿಗೇರಿ ಬಿಡುತ್ತದೆ. ಖಂಡ ತುಂಡವಾಗಿ ಹೇಳಿ ಹೊರಗೆ ಅಟ್ಟಬೇಕೆನಿಸಿದರೂ ಹಾಗೆ ಮಾಡಲು ಸಾಧ್ಯವಿಲ್ಲವೆಂದು ಹೇಗೋ ಸಹಿಸಿಕೊಳ್ಳುತ್ತೀರಿ. ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ […]
ಉದಯಿಸುತ್ತಿರುವ ಸೂರ್ಯನೊಂದಿಗೆ ಹೆಜ್ಜೆಯಿಡುವ ತವಕದಲ್ಲಿ. ತೇರೂವೋ ಮೂಲ ಗೌರಿ ದೇಶಪಾಂಡೆ ಕನ್ನಡಕ್ಕೆ- ಚಂದ್ರಕಾಂತ ಪೋಲಳೆ ಬೆಲೆ-೮೦ ನನಗೆ ಬೇರೆ ಭಾಷೆಗಳಿಂದ ಅನುವಾದಗೊಂಡ ಕಾದಂಬರಿಗಳ ಹುಚ್ಚು ಹಿಡಿಸಿದ್ದು ಸೃಷ್ಟಿ ನಾಗೇಶರವರು. ಅವರ ಸೃಷ್ಟಿ ಪ್ರಕಾಶನ ಎಂದರೆ ಅನುವಾದಗಳಿಗಾಗಿಯೇ ಮೀಸಲಾಗಿರುವ ಪ್ರಕಾಶನ. ಜಗತ್ತಿನ ಅದ್ಭುತ ಕಾದಂಬರಿಗಳ ಅನುವಾದಗಳನ್ನು ನಾನು ಓದಿದ್ದು ಸೃಷ್ಟಿ ಪ್ರಕಾಶನದ ಪುಸ್ತಕಗಳಿಂದಾಗಿಯೇ. ತಮ್ಮ ಪ್ರಕಾಶನದ ಪುಸ್ತಕಗಳನ್ನು ತಲುಪಿಸುವ ಸೃಷ್ಟಿ ನಾಗೇಶ ಇದನ್ನು ಮೊದಲು ಓದಿ, ಈ ಪುಸ್ತಕ ಅದ್ಭುತವಾಗಿದೆ ಓದಿ ಎಂದೆಲ್ಲ ಸಲಹೆ ಮಾಡಿಯೇ ಕಳುಹಿಸುತ್ತಾರೆ. […]
ಗುಂಡಪ್ಪೆಯ ಮಳೆಗಾಲ ಈ ಮಾವಿನಹಣ್ಣಿಗೂ ಮಳೆಗಾಲಕ್ಕೂ ಒಂಥರಾ ಅವಿನಾಭಾವ ಎನ್ನುವಂಥ ಸಂಬಂಧ. ಮೊದಲಮಳೆಯೆನ್ನುವ ಸಂಭ್ರಮ ನಮ್ಮೊಳಗೊಂದು ಹೊಸ ಚೈತನ್ಯ ತುಂಬುವ ಸಮಯದಲ್ಲಿ, ಸಕಲ ಸೊಬಗಿನ ದೇವಕನ್ಯೆಯೊಬ್ಬಳು ಭುವಿಗಿಳಿದಂತೆ ಮಾವಿನಹಣ್ಣೊಂದು ನೆಲಕ್ಕುರುಳುತ್ತದೆ. ಹೀಗೆ ಕಳಚಿಬಿದ್ದ ಮಾವಿನಹಣ್ಣಿನ ಮೇಲೆ ಮಳೆಹನಿಗಳೆಲ್ಲ ಮುತ್ತಿನಂತೆ ಹೊಳೆದು, ಗೌಜು-ಗದ್ದಲವಿಲ್ಲದ ಹೊಸ ಲೋಕವೊಂದು ಸೃಷ್ಟಿಯಾಗುತ್ತದೆ. ಹೀಗೆ ಗದ್ದೆಬಯಲಿನಲ್ಲೋ, ಬೆಟ್ಟದ ತುದಿಯಲ್ಲೋ ನಿರಾತಂಕವಾಗಿ ಹುಟ್ಟಿಕೊಳ್ಳುವ ಈ ಸೊಬಗಿನ ಪ್ರಪಂಚಕ್ಕೆ ಮಳೆಯೊಂದು ಜೀವ ತುಂಬುವ ಪರಿ ಅನನ್ಯ. ಮಳೆ ಆಗೊಮ್ಮೆ ಈಗೊಮ್ಮೆ ಅವಾಂತರಗಳನ್ನು ಸೃಷ್ಟಿಸಿದರೂ ಅದೊಂದು ಮಾಯೆಯಾಗಿ ಮೈ-ಮನಗಳನ್ನು […]
ದಿಕ್ಸೂಚಿ
ಸೋಲು ಒಪ್ಪಿಕೊಳ್ಳುವ ಮುನ್ನ ಕೊಂಚ ಪ್ರಶ್ನಿಸಿಕೊಳ್ಳಿ ಜಯಶ್ರೀ ಅಬ್ಬಿಗೇರಿ ನಾನು ಕೈ ಹಾಕಿದ ಯಾವ ಕೆಲಸದಲ್ಲೂ ಗೆಲುವು ಸಿಗುತ್ತಲೇ ಇಲ್ಲ. ನನ್ನ ಹಣೆ ಬರಹವೇ ಚೆನ್ನಾಗಿಲ್ಲ. ನಸೀಬು ಕೆಟ್ಟಿದೆ. ಸಾಲು ಸಾಲು ಸೋಲುಗಳು ನನ್ನ ಬೆನ್ನು ಹತ್ತಿವೆ. ಹೀಗೇ ಇನ್ನೊಂದಿಷ್ಟು ಸಮಯ ಕಳೆದರೆ ಜೀವನದ ಆಸೆಗಳೇ ಕಮರಿ ಹೋಗಿ ಬಿಡುತ್ತವೆ. ನನ್ನಿಂದೇನೂ ಮಾಡಲು ಸಾಧ್ಯವಿಲ್ಲವೆಂದು ಊಟ ತಿಂಡಿ ಬಿಟ್ಟು ಕೈ ಕಟ್ಟಿ ಕುಳಿತು ಚಿಂತಿಸಿದರೆ ಬದುಕು ನಿಂತ ನೀರಾಗಿ ಬಿಡುತ್ತದೆ. ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತವೆ. ಉಗ್ರ ರೂಪ […]