Category: ಅಂಕಣ

ಅಂಕಣ

ಅಂಕಣ ಬರಹ ನಿತ್ಯ ಎದುರಾಗುವ ನಿರ್ವಾಹಕರು ಪ್ರತಿನಿತ್ಯ ಕೆಲಸಕ್ಕೆ ಬಸ್ಸಿನಲ್ಲೆ ತೆರಳುವ ನಾವು ಹಲವಾರು ಜನ ಕಂಡಕ್ಟರುಗಳನ್ನು ಪ್ರತಿನಿತ್ಯ ನೋಡುತ್ತಿರುತ್ತೇವೆ. ಒಬ್ಬೊಬ್ಬ ನಿರ್ವಾಹಕರೇ ಒಂದೊಂದು ಥರ. ಕೆಲವರು ತಾಳ್ಮೆಯಿಂದ ಇರುತ್ತಾರೆ, ಕೆಲವರಿಗೆ ಎಂಥದ್ದೋ ಅವಸರ, ಕೆಲವರು ಎಷ್ಟೊಂದು ದಯಾಮಯಿಗಳು, ಮತ್ತೊಂದಿಷ್ಟು ಜನ ಜಗತ್ತಿನ ಎಲ್ಲ ಕೋಪವನ್ನೂ ಹೊತ್ತು ತಿರುಗುತ್ತಿರುವವರಂತೆ ಚಟಪಟ ಸಿಡಿಯುತ್ತಿರುತ್ತಾರೆ. ಮನಸಿನಂತೆ ಮಹದೇವ ಎನ್ನುವ ಹಾಗೆ ಮನಸಿನ ಅವತಾರಗಳಷ್ಟೇ ವೈವೀಧ್ಯಮಯ ನಿರ್ವಾಹಕರು. ಪ್ರತಿನಿತ್ಯ ನಿರ್ವಾಹಕರು ಮತ್ತು ಪ್ರಯಾಣಿಕರ ನಡುವೆ ಬಹುತೇಕ ಉಂಟಾಗುವ ಜಗಳಕ್ಕೆ ಮುಖ್ಯ ಕಾರಣವಾಗುವುದೇ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಸೌಂದರ್ಯ ಲಹರಿ ಆ ಅಜ್ಜ ತನ್ನ ಮನೆಯ ಅಂಗಳದಲ್ಲಿ ಕುಳಿತು ನೋಡುತ್ತಲೇ ಇದ್ದರು. ದಿನಾಲೂ ನೋಡುತ್ತಿದ್ದರು. ಚಿಟ್ಟೆಯನ್ನು! ಬಣ್ಣದ ಚಿಟ್ಟೆಯನ್ನು.  ಅದರ ಎಡ ಬಲದ ರೆಕ್ಕೆಗಳು ಒಂದಕ್ಕೊಂದು ಕನ್ನಡಿ ಹಿಡಿದ ಬಿಂಬಗಳ ಹಾಗೆ. ಆಗಷ್ಟೇ ರವಿ ವರ್ಮ, ತನ್ನ ಕುಂಚದಿಂದ ಬಳಿದು ಬಿಡಿಸಿದ ತೈಲವರ್ಣಚಿತ್ರದ ರೇಖೆಗಳ ಹಾಗೆ ನಾಜೂಕು ವರ್ಣ ರೇಖೆಗಳು ಆ ರೆಕ್ಕೆಗಳಲ್ಲಿ!. ಅದು ಹಾರೋದಂದರೆ! ಲಪ್..ಟಪ್.. ಎಂದು ರೆಕ್ಕೆಯನ್ನು ನಯ ನಾಜೂಕಿನಿಂದ ತೆರೆದು ಮಡಿಸಿ ವಿಶ್ವಾಮಿತ್ರನ ತಪಸ್ಸು ಭಂಗಕ್ಕೆ […]

ಅಂಕಣ ಬರಹ ಜೀವಕ್ಕಿಂತಲೂ ಹೆಚ್ಚಾಗಿ ಅಂಧಶ್ರದ್ಧೆಯಲ್ಲಿ ನಂಬಿಕೆ ಇಟ್ಟಿರುವುದು ನನಗೆ ಹೆಚ್ಚುಕಾಡುವ ವಿಷಯ” ಈ ಸಲದ ಮುಖಾಮುಖಿ ಯಲ್ಲಿ ನಾಗರಾಜ್ ಹರಪನಹಳ್ಳಿ ಸಂದರ್ಶಿಸಿದ್ದಾರೆ ಕವಿ,ಕತೆಗಾರ ಹುಬ್ಬಳ್ಳಿಯ ಕುಮಾರ ಬೇಂದ್ರೆ ಅವರನ್ನು.……….ಪರಿಚಯ :ಸಂಯುಕ್ತ ಕರ್ನಾಟಕ, ಉದಯವಾಣಿ, ಗೌರಿಲಂಕೇಶ್ ಪತ್ರಿಕೆಗಳು ಸೇರದಂತೆ ೧೪ ವರ್ಷಗಳ ಕಾಲ ಪತ್ರಕರ್ತನಾಗಿ ಕೆಲಸ. ಸಧ್ಯ ಚಲನಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರಕಲೆಯಲ್ಲಿ ಡಿಪ್ಲೋಮಾ, ಕನ್ನಡ ಎಂ.ಎ. ಪದವಿಧರ. ಸುಮಾರು ಎರಡು ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ಸಕ್ರಿಯರು. ಮಾದಪ್ಪನ ಸಾವುಅದೃಶ್ಯ ಲೋಕದ ಮಾಯೆ ನಿರ್ವಾಣಗಾಂಧಿ ವೃತ್ತದ ದಂಗೆ […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….5 ಅಪ್ಪ ಅವ್ವನ ಅದ್ಧೂರಿ ಮದುವೆ             ಜೋಯ್ಡಾದಲ್ಲಿ ಶಾನುಭೋಗಿಕೆಯ ಕೆಲಸ ತುಂಬಾ ಅನುಕೂಲಕರವಾಗಿತ್ತು. ತಿಂಗಳ ಸಂಬಳದಲ್ಲಿ ಒಂದು ಪೈಸೆಯನ್ನೂ ಖರ್ಚುಮಾಡಗೊಡದೆ ಹಳ್ಳಿಯ ರೈತಾಪಿ ಜನ ದವಸ-ಧಾನ್ಯ ತರಕಾರಿಗಳನ್ನೆಲ್ಲ ತಂದುಕೊಟ್ಟು ಸಹಕರಿಸುತ್ತಿದ್ದರಂತೆ. ಚಾವಡಿಯ ಒಂದು ಮೂಲೆಯಲ್ಲಿಯೇ ವಾಸ್ತವ್ಯಕ್ಕೆ ಅವಕಾಶವೂ ಇತ್ತು. ಬೆಟ್ಟದ ಹಳ್ಳಿಗಾಡಿನ ಹಳೆಯ ಕಟ್ಟಡವಾದ್ದರಿಂದ ಸಹಜವಾಗಿಯೇ ಕೋಣೆ ತುಂಬಾ ಬಿಲಗಳಿದ್ದವು. ಆ ಬಿಲಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಇಲಿ ಹೆಗ್ಗಣ ಮತ್ತು ಅವುಗಳ ವಾಸನೆ ಹಿಡಿದು ಅಲ್ಲಿಗೆ […]

ಅಂಕಣ ಬರಹ ರಂಗರಂಗೋಲಿ-5 ಪಾತ್ರೆ ತುಂಬಿದ ಇನ್ನೆರಡು ಪಾತ್ರಗಳು ಪೂರ್ಣ… ಪೂ..ರ್ಣ.. ಅವರು ಕರೆಯುತ್ತಿದ್ದಾರೆ!. ತೆಳ್ಳಗಿನ ಸ್ವರವದು. ಉದ್ದ ಜಗಲಿಯನ್ನು ಹಂಚಿಕೊಂಡ ಮೂರನೆಯ ಹೊಸ್ತಿಲಿನ ಕೊನೆಯ ಕೋಣೆಯದು. ಮುಸ್ಸಂಜೆ ಸಮಯ,  ಒಬ್ಬರೇ ಆ‌ ಮರದ ಕಿಟಕಿಯ ಬಳಿ ಕೂತು  ತಿನ್ನುತ್ತಿದ್ದದ್ದು ಒಂದು ಆಮ್ಲೇಟ್. ಅದೂ ಚಿಕ್ಕದು. ಅದಕ್ಕೆ ಬಹಳ ಹೊತ್ತು ತೆಗೆದುಕೊಳ್ಳುತ್ತಿದ್ದರು.  ಆ ಸಮಯ ಮಾತ್ರ ಅವರು ನನ್ನ ಹೆಸರು ಕೂಗುತ್ತಿದ್ದರು. ಮನೆಯ ಹಿಂಬದಿಗೆ ಆ ಕಿಟಕಿಯ ಅರೆ ಕತ್ತಲಿಗೆ ನಾನು ಓಡುತ್ತಿದ್ದೆ. ಕಡ್ಡಿಯಂತಹ ಬಿಳೀ ಬೆರಳುಗಳು. […]

ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ

ಅಂಕಣ ಬರಹ ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮತ್ತು ಕೊಲೆ! ಪ್ರತಿನಿತ್ಯ ಇಂತಹ ಅಸಂಖ್ಯ ಸುದ್ದಿಗಳು ಸರ್ವೆ ಸಾಮಾನ್ಯ ಎನಿಸುವಷ್ಟು ಬರುತ್ತಿರುತ್ತವೆ. ಓದುವುದಕ್ಕೇ ಆಗದಂಥ ವಿಚಿತ್ರ ಸಂಕಟ… ನಿರ್ಲಕ್ಷಿಸುವುದು ಸಾಧ್ಯವಿಲ್ಲ, ಏನಾದರೂ ಮಾಡುವಾ ಎಂದರೆ ಮಾಡಲಾಗದ ಅಸಹಾಯಕತೆ… ಹಿಂದೆಯೇ ಇಂಥವನ್ನ ಎಷ್ಟು ದಿನ ಅಂತ ಸಹಿಸಿಕೊಳ್ಳುವುದು ಎನ್ನುವ ಬೆಂಬಿಡದ ಪ್ರಶ್ನೆ… ಇನ್ನೂ ಅರಳದ ಮೊಗ್ಗನ್ನ ತಮ್ಮ ಕೆಟ್ಟ ದಾಹಕ್ಕೆ ಬಳಸಿ ಬಿಸಾಡುತ್ತಾರಲ್ಲ, ರಕ್ತ ಕುದಿಯುತ್ತದೆ. ಎಲ್ಲೋ ಕೆಲ ಕಂದಮ್ಮಗಳಿಗೆ ಒಂದಷ್ಟು ಸಂತಾಪವಾದರೂ […]

ಅಂಕಣ ಬರಹ ” ಹೆಣ್ಣೆಂಬ ತಾರತಮ್ಯವೇ ಪದೆ ಪದೆ ಕಾಡುವ ವಿಷಯ “ ಇಂದುಮತಿ ಲಮಾಣಿ ಪರಿಚಯ; ಇಂದುಮತಿ ಲಮಾಣಿ. ಬಿಜಾಪುರದವರು. ೧೯೫೯ ಜನನ. ಓದಿದ್ದು ಪಿಯುಸಿ.ಕತೆ ,ಕವನ ಸಂಕಲನ ,ಸಂಪಾದನಾ ಕೃತಿ ಸೇರಿ ೧೮ ಕೃತಿಗಳನ್ನು ಪ್ರಕಟಿಸಿದ್ದಾರೆ. ನನ್ನ ಆಸೆ ಎಂಬ ಕವನ ೯ ನೇ ತರಗತಿ ಕನ್ನಡ ಪಠ್ಯದಲ್ಲಿ ಸೇರಿದೆ. ಅತ್ತಿಮಬ್ಬೆ,ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದಿದ್ದಾರೆ.‌ ಬಿಜಾಪುರದ ಬಂಜಾರ ಸಮಾಜ ಸೇವಾ ಸಂಘದ ಅಧ್ಯಕ್ಷೆಯಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಬಿಜಾಪುರಮಹಿಳಾ ಸೇನಾ ಸಾಹಿತ್ಯ ಸಂಗಮದ […]

ಈಗಲೂ ನನಗೆ ತಾಯಪ್ರೀತಿ ಅಂದಾಗ ಮಹಾ ನಿಷ್ಠುರಿಯಾಗಿದ್ದ, ಸಂಸಾರ ಸಂಭಾಳಿಸುತ್ತ ಸಿಡುಕಿಯಾಗಿದ್ದ ನನ್ನಮ್ಮ ನೆನಪಾಗುವುದಿಲ್ಲ. ಮಕ್ಕಳಿಲ್ಲದೆ ನನ್ನಂತಹವರನ್ನು ಸಾಕಿದ ಪಾರ್ವತಕ್ಕ ನೆನಪಾಗುತ್ತಾಳೆ. ಕೆಂಪನೆಯ ನಕ್ಕಾಗ ನಿರಿಗೆಗಟ್ಟುವ ಅವಳ ಮುಖ ನೆನಪಾಗುತ್ತದೆ.

ಇಂತಹ ಅಗಾಧತೆಯಲ್ಲಿ ಸೂಜಿ ಮೊನೆಯ ಮಿದುಳಿನ ಮನುಷ್ಯ ಮತ್ತು ಆತನ ಮನಸ್ಸು, ತಾನು ಮಾತ್ರ ಜೀವಿ, ಇನ್ನುಳಿದ ಕಲ್ಲು, ಭೂಮಿ, ನಕ್ಷತ್ರ, ಆಕಾಶಗಳು ನಿರ್ಜೀವಿ ಎಂದು ನಿರ್ಧರಿಸುವಾಗ, ಆ ಪ್ರಜ್ಞೆ ಎಷ್ಟು ಸ್ವಕೇಂದ್ರಿತವಲ್ಲವೇ?.

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….4 ” ಪರಾವಲಂಬನೆಯ ಕಠಿಣ ದಿನಗಳು…” “ಆತ್ಮಾನುಸಂಧಾನ “             ಸಾಣೆಕಟ್ಟೆಯಲ್ಲಿ ದೊಡ್ಡಮ್ಮನ ಆಶ್ರಯ ಗಣಪುವಿನ ಎರಡು ಹೊತ್ತಿನ ಊಟ ತಿಂಡಿಯ ಚಿಂತೆ ಬಗೆಹರಿಸಿತು. ಆದರೆ ಗಣಪು ಬಯಸಿದ್ದು ಅಕ್ಷರಾಭ್ಯಾಸ. ಆಕಸ್ಮಿಕವಾಗಿ ಸಾಣೆಕಟ್ಟೆಗೆ ಬಂದ ನಾಡುಮಾಸ್ಕೇರಿಯ ಬೇಲೆ ಹಿತ್ತಲ ರಾಕು ಎಂಬ ತರುಣ ಹಮ್ಮಜ್ಜಿಯ ಮನೆಯಲ್ಲಿದ್ದ ಗಣಪುವಿನ ಯೋಗಕ್ಷೇಮ ವಿಚಾರಿಸುತ್ತ ಆತನ ಕಲಿಯುವ ಆಸೆಯನ್ನು ಗ್ರಹಿಸಿದ. ಊರಿಗೆ ಮರಳಿದವನು ಗಣಪುವಿಗೆ ಮತ್ತೆ ಹನೇಹಳ್ಳಿ ಹಾಸ್ಟೇಲಿನಲ್ಲಿ ಅವಕಾಶ ದೊರೆಯುವಂತೆ […]

Back To Top