Category: ಅಂಕಣ

ಅಂಕಣ

ಅಂಕಣ ಬರಹ ಕಬ್ಬಿಗರ ಅಬ್ಬಿ ನೆಲದವ್ವನ ಒಡಲ ಜೀವಜಲ ಆ ಬಾವಿ ನೀರಿಗೆ ಅಷ್ಟೊಂದು ರುಚಿ. ಆಸರಾದ ಗಂಟಲಿಗರ ಆಸರೆಯೇ ಆ ಬಾವಿ. ನಮ್ಮ ಮನೆಯಿಂದ ಶಾಲೆ ತಲಪಲು ನಾಲ್ಕುಮೈಲಿಯ ಹೆಜ್ಜೆ. ನಡುದಾರಿಯಲ್ಲಿ ದೇವಸ್ಥಾನ. ಅದರ ಪಕ್ಕದಲ್ಲಿ ಈ ಬಾವಿ. ನಾನು ತುಂಬಾ ಚಿಕ್ಕವನಿದ್ದಾಗ, ನನ್ನ ಅಕ್ಕನ ಜತೆಗೆ ಶಾಲೆಗೆ ನಡೆದು ಬಾಯಾರಿದರೆ ಈ ಬಾವಿಯಿಂದ ಅಕ್ಕ ನೀರು ಸೇದುತ್ತಿದ್ದಳು. ಬಾವಿಯಾಳಕ್ಕೆ ಹಳೆಯ ಅಲ್ಯುಮಿನಿಯಮ್ ಬಿಂದಿಗೆ ಇಳಿಸಿ ನೀರು ನಿಧಾನವಾಗಿ ತುಂಬುವಾಗ ಗುಳು ಗುಳು ಶಬ್ಧ ಬಾವಿಯ […]

ಅಂಕಣ ಬರಹ ಕಣ್ಣು-ಕಣ್ಕಟ್ಟು ರೋಣ ತಾಲೂಕಿನ ಗಜೇಂದ್ರಗಡಕ್ಕೆ ಗೆಳೆಯರ ಭೇಟಿಗೆಂದು ಹೊರಟಿದ್ದೆ. ಹಾದಿಯಲ್ಲಿ ಯಲಬುರ್ಗಾ ತಾಲೂಕಿನ ಪುಟ್ಟಹಳ್ಳಿ ನೆಲಜೇರಿ ಎಡತಾಕಿತು. ಗೋಧಿ ಉಳ್ಳಾಗಡ್ಡೆ ಸುರೇಪಾನ ಮೆಣಸು ಮೊದಲಾಗಿ ಮಳೆಯಾಶ್ರಯದ ಪೀಕು ತೆಗೆಯುವ ಎರೆಸೀಮೆಯಿದು. ಹೆಚ್ಚಿನ ತರುಣರು ಕೊಪ್ಪಳದ ಬಗಲಲ್ಲಿ ಬೀಡುಬಿಟ್ಟಿರುವ ಉಕ್ಕಿನ ಕಾರ್ಖಾನೆಗಳಿಗೆ ದಿನಗೂಲಿಗಳಾಗಿ ಹೋಗುತ್ತಾರೆ. ನೆಲಜೇರಿ ಆರ್ಥಿಕವಾಗಿ ಬಡಕಲಾದರೂ ಸಾಂಸ್ಕøತಿಕವಾಗಿ ಸಮೃದ್ಧ ಹಳ್ಳಿ. ಈ ವೈರುಧ್ಯ ಉತ್ತರ ಕರ್ನಾಟಕದ ಬಹಳಷ್ಟು ಹಳ್ಳಿಗಳ ಲಕ್ಷಣ.  ನೆಲಜೇರಿಯ ತಟ್ಟಿ ಹೋಟೆಲಿನಲ್ಲಿ ಚಹಾಪಾನ ಮಾಡುತ್ತ ಇಲ್ಲಿ ಯಾರಾದರೂ ಜನಪದ ಗಾಯಕರು […]

ಅಂಕಣ ಬರಹ ಫ್ರಾಂಕಿನ್‌ಸ್ಟೆನ್ ಫ್ರಾಂಕಿನ್‌ಸ್ಟೆನ್ಮೂಲ ಇಂಗ್ಲಿಷ್ : ಮೇರಿ ಷೆಲ್ಲಿ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟಣೆಯ ವರ್ಷ :೨೦೦೭ ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೆöನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ. ನಿಸರ್ಗ ನಿಯಮಗಳ ವಿರುದ್ಧ ಹೋಗುವ ಅಹಂಕಾರವನ್ನು ಮನುಷ್ಯ ತೋರಿಸಿದರೆ ಪರಿಣಾಮವೇನಾಗಬಹುದು ಎಂಬ ವಿಷಯದ ಕುರಿತುಳ್ಳ ಈ ಕಾದಂಬರಿತನ್ನ ನಿರೂಪಣೆಗೆ ಫ್ಯಾಂಟಸಿ ಶೈಲಿಯನ್ನು ಆಯ್ದುಕೊಂಡಿದೆ ಮಾತ್ರವಲ್ಲದೆ ಅದು ಒಂದು […]

ಅಂಕಣ ಬರಹ ಎಲ್ಲಾ ಒಳ್ಳೆಯದೇ ಆಗುತ್ತೆ… ಈ ಥರದ ಮಾತುಗಳನ್ನ ನಾವು ಬಹಳಷ್ಟು ಸಾರಿ ಕೇಳಿರ್ತೇವೆ. “ಒಳ್ಳೇವ್ರಿಗೆ ಒಳ್ಳೆಯದೇ ಆಗುತ್ತೆ”, “ನಾವು ಒಬ್ರಿಗೆ ಒಳ್ಳೇದು ಮಾಡಿದ್ರೆ ದೇವರು ನಮಗೆ ಒಳ್ಳೇದು ಮಾಡ್ತಾನೆ”, “ತಾತ ಮಾಡಿದ ಪಾಪ ಮೊಮ್ನೊಗನಿಗೆ”… ಹೀಗೆ ಹಲವಾರು ಮಾತುಗಳು… ಇವೆಲ್ಲ ಬರಿಯ ಮಾತುಗಳಲ್ಲ, ಅದೊಂದು ದೈತ್ಯ ಶಕ್ತಿಯ ನಂಬಿಕೆ, ನಮ್ಮ ಬದುಕನ್ನು ಮುನ್ನಡೆಸುವ ಶಕ್ತಿ. ನನ್ನ ತಂದೆ ಒಬ್ಬ ಪ್ರಾಮಾಣಿಕ ಹೈಸ್ಕೂಲ್ ಗಣಿತದ ಮೇಷ್ಟ್ರು. ತಮ್ಮ ವಿದ್ಯಾರ್ಥಿಗಳಿಗೆ ಸ್ವಂತ ಮಕ್ಕಳ ರೀತಿಯಲ್ಲೇ ಭಾವಿಸಿ ಪಾಠ […]

ಅಂಕಣ ಬರಹ ಹೊಸ ದನಿ ಹೊಸ ಬನಿ – ೧೫. ದೀರ್ಘ ಶೀರ್ಷಿಕೆಗಳ ಭಾರದಲ್ಲೂ ಸರಳ ನಡಿಗೆಯ ಮಂಜುಳ. ಡಿ  ಕವಿತೆಗಳು ಮಂಜುಳ ಡಿ ಈಗಾಗಲೇ ವಿಶ್ವವಾಣಿ ಪತ್ರಿಕೆಯ ಅಂಕಣ ಬರಹಗಾರರಾಗಿ ಕವಯತ್ರಿಯಾಗಿ ಖ್ಯಾತರಾದವರು. ಈಗಾಗಲೇ ಮೂರು ಪುಸ್ತಕಗಳನ್ನು ಪ್ರಕಟಿಸಿರುವ ಅವರು ಬೆಂಗಳೂರಿನವರು. ಅವರ ಫೇಸ್ಬುಕ್ ಬರಹಗಳಲ್ಲಿ ಗದ್ಯ ಪದ್ಯಗಳ ಮಿಶ್ರಣವನ್ನು ಕಾಣಬಹುದು. “ಆಸೆಯ ಕಂದೀಲು” ಕವನ ಸಂಕಲನಕ್ಕೆ ಕಾವ್ಯ ವ್ಯಾಮೋಹಿ ವಾಸುದೇವ ನಾಡಿಗರು ಮುನ್ನುಡಿ ಬರೆದಿರುವುದರಿಂದ ಸಂಕಲನದ ಗುಣ ನಿಷ್ಕರ್ಷೆ ಸುಲಭದ್ದೇ ಆಗಿದೆ. ಈ ಸಂಕಲನ […]

ನಾಗರೀಕತೆಯನ್ನು ಆರಂಭಿಸಿದ ಮಿತ್ರರು

ಅಂಕಣ ಬರಹ-01 ಶಾಂತಿ ವಾಸು ರೇಡಿಯೋ ಸಾಮ್ರಾಜ್ಯ ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಬೆಂಗಳೂರು ಎಂಬುದು ಬಹು ನೆಮ್ಮದಿಯ ತಾಣವಾಗಿತ್ತು. ಕರ್ನಾಟಕದ ಬೇರೆ ಬೇರೆ ಹಳ್ಳಿಗಳು, ದೇಶದ ನಾನಾ ರಾಜ್ಯಗಳಿಂದ ಉದ್ಯೋಗ, ಜೀವನವನ್ನರಸಿ ಬಂದವರಿಗೆ ಬದುಕು ಸೃಷ್ಟಿಸುತ್ತಾ, ವಿವಿಧ ಸಂಸ್ಕೃತಿಯ ಜೊತೆಗೆ ಎಲೆಕ್ಟ್ರಿಕಲ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಬ ಆಧುನಿಕತೆಯನ್ನು ಅಳವಡಿಸಿಕೊಳ್ಳುತ್ತಿದ್ದ ಬೆಂಗಳೂರಿನಲ್ಲಿ, ಬೆಳಕಿನ ಮೂಲವಾಗಿ ಪರಿಚಯವಾದ ಮನೆಗಳ ಬಲ್ಬುಗಳು, ಬೀದಿ ದೀಪಗಳು, ಸೈಕಲ್ಲಿಗೆ ಡೈನಾಮ ಲೈಟ್, (ಸೈಕಲ್ಲು ತುಳಿಯುವಾಗ ಪುಟ್ಟ ಬಲ್ಬ್ ಹೊತ್ತಿಕೊಳ್ಳುತ್ತಿತ್ತು.) ಈ ಡೈನಾಮ ಲೈಟುಗಳು […]

ಅಂಕಣ ಬರಹ ಡಾ ಶ್ರೀಧರ್ ಗೌಡ ಉಪ್ಪಿನ ಗಣಪತಿ ಲೇಖಕರ ಪರಿಚಯ : ಡಾ ಶ್ರೀಧರ್ ಗೌಡ ಉಪ್ಪಿನ ಗಣಪತಿ ವೃತ್ತಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ.ಸಾಹಿತ್ಯ ಬರಹ ಹವ್ಯಾಸ.“ಕಡಲಿಗರ ಸಂಸ್ಕೃತಿ” ಸಂಶೋಧನ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರ್ ಪ್ರದಾನ ಮಾಡಿದೆ. ಡಾಕ್ಟರ್ ಸೈಯದ್ ಜಮೀರುಲ್ಲಾ ಷರೀಫ್ ಮಾರ್ಗದರ್ಶಕರು.ಸಂಶೋಧನಾ ಮಹಾಪ್ರಬಂಧ ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಕುಮಟಾತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆಮೂರು ತಾಲೂಕು ಸಾಹಿತ್ಯ ಸಮ್ಮೇಳನ ಸಂಘಟನೆಪ್ರತಿ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಎರಡು ದಿನಗಳ ಕಾಲ ಸಂಘಟಿಸಿ ದ್ದು […]

ಅಂಕಣ ಬರಹ ಸೋತು ಗೆದ್ದ ಮನುಷ್ಯ ಸೋತು ಗೆದ್ದ ಮನುಷ್ಯತೆಲುಗು ಮೂಲ : ಮಲ್ಲಾರೆಡ್ಡಿಅನುವಾದ : ಕಸ್ತೂರಿಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೦೪ ¥ಪುಟಗಳು :೧೫೨ ಇದು ತೆಲುಗು ಮೂಲದ ಮಲ್ಲಾರೆಡ್ಡಿಯವರ ಆತ್ಮಕಥೆ. ವಿಷಮ ಪರಿಸ್ಥಿತಿಗಳು ತಂದ ನೋವು-ಸಂಕಷ್ಟಗಳಿಂದಾಗಿ ಮಾನಸಿಕವಾಗಿ ನೊಂದು ಬದುಕಿನಲ್ಲಿ ಭರವಸೆಯನ್ನೇ ಕಳೆದುಕೊಂಡು ಮಾನಸಿಕವಾಗಿ ಅಸ್ವಸ್ಥನಾದ ವ್ಯಕ್ತಿಯೊಬ್ಬ ತನ್ನ ಎಲ್ಲಾ ಅನುಭವಗಳನ್ನು ಇಲ್ಲಿ ವಿವರವಾಗಿ ಮನಮುಟ್ಟುವಂತೆ ಹೇಳುತ್ತಾನೆ. ತೀರಾ ಎಳೆಯ ಹುಡುಗನಾಗಿದ್ದಾಗಲೇ ಸೂಕ್ಷ್ಮ ಸಂವೇದನೆಯುಳ್ಳವನಾಗಿದ್ದರಿಂದ ತನ್ನ ಸುತ್ತ ಮುತ್ತ […]

ಅಂಕಣ ಬರಹ ಪ್ರಶ್ನೆಯ ಜರೂರಿ ಕೆಲವು ವರ್ಷಗಳ ಹಿಂದೆ ಎರಡು ವಿದ್ಯಮಾನ ಜರುಗಿದವು. ಒಂದು- ತಾನು ಓದುವ ಶಾಲೆಯನ್ನು ತಾಲಿಬಾನಿಗಳು ಯಾಕೆ ಕೆಡವಬೇಕು ಎಂದು ಪ್ರಶ್ನಿಸಿದ ಪುಟ್ಟಬಾಲೆ ಮಲಾಲಳದು. ಎರಡು-ಬಾಳಾಸಾಹೇಬ್ ಠಾಕರೆ ತೀರಿಕೊಂಡರೆ ಮುಂಬೈ ಬಂದ್ ಯಾಕೆ ಮಾಡಬೇಕು ಎಂದು ಚರ್ಚಿಸಿದ ಇಬ್ಬರು ತರುಣಿಯರದು. ಸುತ್ತಮುತ್ತ ಬದುಕುತ್ತಿರುವ ಲಕ್ಷಾಂತರ ಜನರಲ್ಲಿ ಹುಟ್ಟದ ಪ್ರಶ್ನೆಗಳು ಈ ಹುಡುಗಿಯರಲ್ಲಿ ಸಹಜವಾಗಿ ಹೇಗೆ ಹುಟ್ಟಿಕೊಂಡವು? ನಮಗೇತಕ್ಕೆ ಇಲ್ಲದ ರಗಳೆ ಎಂದು ಬಹುಸಂಖ್ಯಾತ ಸಾರ್ವಜನಿಕರು ಸುರಕ್ಷಿತಮೌನ ತಾಳಿರುವಾಗ ಕೆಲವರೇಕೆ ಕೇಳುವ ದಿಟ್ಟತನ ತೋರುತ್ತಾರೆ? […]

ಅಂಕಣ ಬರಹ ಕಬ್ಬಿಗರ ಅಬ್ಬಿ ಹಣತೆ ಹಚ್ಚಿದ ಅಕ್ಷರ ದೀಪ ನಮ್ಮ ಅಜ್ಜಿ ಹಚ್ಚಿ  ಹಣತೆ ಬೆಳಕಲ್ಲಿ ತೆರೆದಳು ರಾಮಾಯಣ. ಹಣತೆ ಸಣ್ಣಗೆ ಬೆಳಗುವಾಗ ರಾಮ ಪುಟು ಪುಟು ಹೆಜ್ಜೆ ಹಾಕುತ್ತಿದ್ದ.ಜತೆಗೆ ಇನ್ನೂ ಮೂರು ತಮ್ಮ ತಮ್ಮ ತಮ್ಮಂದಿರು. ಎಷ್ಟು ಪ್ರೀತಿ ಮುಗ್ಧ ಬೆಳಕಿತ್ತು. ಕತೆ ಕೇಳುತ್ತಾ ನಮಗೆಲ್ಲ ಪುಳಕ. ಹಣತೆಯ ಬೆಳಕೂ ರಾಮನೂ ಜತೆ ಜತೆ ಬೆಳೆದರು. ವಿಶ್ವಾಮಿತ್ರನ ಕೈ ಹಿಡಿದು ಅಣ್ಣ ತಮ್ಮ ಗುರು ತೋರಿದ ಕಾಡುಹಾದಿಯಲ್ಲಿ ತಿಳಿವಿನ ಬೆಳದಿಂಗಳಿತ್ತು. ಕೆಂಗಣ್ಣ ದೈತ್ಯೆ ತಾಟಕಿಯ […]

Back To Top