Category: ಅಂಕಣ

ಅಂಕಣ

ಅಂಕಣ ಬರಹ ಹೊಸ ದನಿ-ಹೊಸ ಬನಿ-೧೧ ಭಾವಕ್ಕಿಂತಲೂ ಬುದ್ಧಿಯ ನಡೆಯಲ್ಲೇ ತವಕಿಸುವ ದಿಲೀಪ ಕುಮಾರ್ ಪದ್ಯಗಳು. ಹೊಸ ಕಾಲದ ಹುಡುಗ ಹುಡುಗಿಯರು ಫೇಸ್ಬುಕ್ ವಾಟ್ಸ್ ಆಪಿನಂಥ ಸಾಮಾಜಿಕ ಜಾಲತಾಣದಲ್ಲಿ ಬರೆದುದನ್ನು ತಿದ್ದುವ ಮೊದಲೇ ಪ್ರಕಟಿಸಿ ಬಿಡುವುದರಿಂದ ನಿಜಕ್ಕೂ ಕವಿತೆಗಳಾಗುವ ತಾಕತ್ತಿದ್ದ ರಚನೆಗಳು ಕೂಡ ಗರ್ಭಪಾತಕ್ಕೆ ಸಿಲುಕಿ ಅಂಥ ತಾಣಗಳಲ್ಲೇ ತಿಣುಕುತ್ತಿರುವ ಕೆಲವರ ಲೈಕು ಈಮೋಜಿ ಕಮೆಂಟುಗಳಿಂದಲೇ ಉಬ್ಬಿ ಹೋಗಿ ಆ ಕವಿ ಮಿಣುಕುಗಳು ನಕ್ಷತ್ರಗಳಾಗುವ ಮೊದಲೇ ಉರಿದು ಬಿದ್ದು ಹೋಗುತ್ತಿರುವ ಕಾಲವಿದು. ಅಪರೂಪಕ್ಕೆ ಹೊಸತಲೆಮಾರಿನ ಕೆಲವು ಹುಡುಗ […]

ಅಂಕಣ ಬರಹ ಪದೇ ಪದೇ ಕಾಡೋದು ಮನುಷ್ಯನ ವೈರುಧ್ಯಗಳು, ಸಂಬಂಧಗಳು. ಸಾಮಾಜಿಕ ತಲ್ಲಣ ತವಕಗಳು” ಮಮತಾ ಅರಸೀಕೆರೆ ಪರಿಚಯ :ಮಮತಾ ಅರಸಿಕೆರೆ ಕವಯಿತ್ರಿ. ವೃತ್ತಿಯಿಂದ ಶಿಕ್ಷಕಿ. ಚಿಕ್ಕಮಗಳೂರಿನ ಬೆಳವಾಡಿ ಅಪ್ಪನ ಊರು. ತುಮಕೂರು ಅವರ ತಾಯಿಯ ತವರು. ಶಿಕ್ಷಣ ಪಡೆದದ್ದೆಲ್ಲವೂ ಜಾವಗಲ್ ನಲ್ಲಿ. ಶಿಕ್ಷಕ ವೃತ್ತಿಯಲ್ಲಿದ್ದು, ಎಂ.ಎ.ಬಿಎಡ್ ಪಡೆದವರು. ವೃತ್ತಿಯಿಂದ ಶಿಕ್ಷಣ ಇಲಾಖೆಯಲ್ಲಿ ಈಗ ಸಿಆರ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂರು ಕೃತಿಗಳು ಪ್ರಕಟವಾಗಿವೆ. ಕಾವ್ಯ, ಅನುವಾದ ಹಾಗೂ ಮಕ್ಕಳ ೩ ನಾಟಕಗಳು ಎಂಬ ಕೃತಿಗಳನ್ನು ಹೊರ ತಂದಿರುವ ಇವರ […]

ಅಂಕಣ ಬರಹ  ದುಗುಡದ ನೆನಪು (ಕಲಬುರ್ಗಿಯವರು ಕೊಲೆಯಾದಾಗ ಬರೆದ ಬರೆಹ) ಕರ್ನಾಟಕ ವಿಶ್ವವಿದ್ಯಾಲಯದ ಶ್ರೇಷ್ಠ ಅಧ್ಯಾಪಕರಲ್ಲಿ ಎಂ.ಎಂ.ಕಲಬುರ್ಗಿಯವರೂ ಒಬ್ಬರೆಂದು ಅವರ ಶಿಷ್ಯರ ಮೂಲಕ ಕೇಳುತ್ತಿದ್ದೆವು. ಅವರ ಸಂಶೋಧನ ಬರೆಹಗಳಲ್ಲಿ ವ್ಯಾಪಕ ಅಧ್ಯಯನ ಮತ್ತು ಆಳವಾದ ವಿದ್ವತ್ತಿರುವುದೂ ತಿಳಿದಿತ್ತು. ಆದರೆ ಅವರ ವೈಯಕ್ತಿಕ ಒಡನಾಟವಿರಲಿಲ್ಲ. ನನಗೆ ಈ ಒಡನಾಟವು ಮೊದಲ ಸಲ ಒದಗಿದ್ದು ನನ್ನ ಪಿಎಚ್.ಡಿ., ಪ್ರಬಂಧದ ಮೌಲ್ಯಮಾಪಕರಾಗಿ ಅವರು ಮೌಖಿಕ ಪರೀಕ್ಷೆಗೆ ಬಂದಾಗ. 1987ರಲ್ಲಿ. ಪ್ರಬಂಧದಲ್ಲಿ ವಚನಸಾಹಿತ್ಯದ ಮೇಲೆ ನಾನು ಮಾಡಿದ್ದ `ಸೋಲು’ ಎಂಬ ಟೀಕೆಯ ವಿಷಯದಲ್ಲಿ […]

ಅಂಕಣ ಬರಹ ನರವಾನರ ನರವಾನರಮರಾಠಿ ಮೂಲ : ಶರಣಕುಮಾರ ಲಿಂಬಾಳೆಕನ್ನಡಕ್ಕೆ : ಪ್ರಮೀಳಾ ಮಾಧವಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ. ೧೬೫ಪುಟಗಳು : ೧೯೨ ಭಾರತದಾದ್ಯಂತ ಅಂಬೇಡ್ಕರ್ ದಲಿತರ ಪರವಾಗಿ ಮಾಡಿದ ಚಳುವಳಿಯ ಕುರಿತಾದ ಕಾದಂಬರಿ ಇದು. ಮನುಸ್ಮೃತಿಯಲ್ಲಿ ಶೂದ್ರರು ಮತ್ತು ದಲಿತರ ಕುರಿತಾಗಿರುವ ಉಲ್ಲೇಖಗಳಿಂದ ದಲಿತರ ಬದುಕು ನರಕವಾಗಿ ಬಿಟ್ಟು ಅವರಿಗಾದ ಅನ್ಯಾಯಗಳ ವಿರುದ್ಧ ಕೆರಳಿ ಕೆಂಡವಾದ ಅಂಬೇಡ್ಕರ್ ವರ್ಣವ್ಯವಸ್ಥೆಯಿಂದಾಗಿ ಹಿಂದೂ ಸಮಾಜದಲ್ಲಿ ಮೇಲು ಜಾತಿಯವರು ನಿಮ್ನ ಜಾತಿಯವರನ್ನು ಶೋಷಿಸಿದ್ದರ […]

ಅಂಕಣ ಬರಹ  ಕಬ್ಬಿಗರ ಅಬ್ಬಿ  ನಿಮಗೆ ತಿಳಿಸಾರು ಗೊತ್ತೇ? ಅದೊಂದು ಕೋಣೆ, ರಸಾವಿಷ್ಕಾರದ ಕೋಣೆ ಅದು!. ಅದನ್ನು ಜನರು ಈ ಕೋಣೆಯನ್ನು ಮನೆ ಅಂತಲೇ ಕರೆಯೋದಕ್ಕೆ, ಬಹುಷಃ ಈ ಕೋಣೆಯ ತಾಯ್ತನವೇ ಕಾರಣ ಅನ್ಸುತ್ತೆ. ಮಗುವಿಗೆ ಅಮ್ಮ ಊಡುವ ಎದೆ ಹಾಲಿನ ಹಾಗೆಯೇ, ಈ ಕೋಣೆ ಮನೆ ಮಂದಿಗೆಲ್ಲ ಉಣಿಸುವುದು ಬದುಕು. ‘ಅಡುಗೆ ಮನೆ’ ಯಲ್ಲಿ ಜೀವಜಲ ಬಿಂದುವಾಗಿ ಹರಿಯುತ್ತೆ. ಹಸಿರು ತರಕಾರಿಗಳು ನೆಲಹಾಸಿನಲ್ಲಿ ತಣ್ಣಗೆ ಕಾಯುತ್ತವೆ. ನೆಲದೊಳಗೆ ಬೇರಿಳಿಸಿ ಪಿಷ್ಟಅಹಾರ ಸಂಗ್ರಹಿಸಿ ಬಲಿತ ಗಡ್ಡೆಗಳೂ ಜತೆಗೆ. […]

ಅಂಕಣ ಬರಹ ಮಾನವ ಜೀವನ : ಒಂದು ವಿಲಕ್ಷಣ ಪ್ರಹಸನ ಮಾನವ ಜೀವನ : ಒಂದು ವಿಲಕ್ಷಣ ಪ್ರಹಸನಮೂಲ ಗುಜರಾತಿ: ಪನ್ನಾಲಾಲ್ ಪಟೇಲ್ ಕನ್ನಡಕ್ಕೆ : ಎಲ್.ವಿ.ಶಾಂತಕುಮಾರಿಪ್ರ : ಸಾಹಿತ್ಯ ಅಕಾಡೆಮಿಪ್ರ.ವರ್ಷ :೨೦೧೫ಬೆಲೆ : ರೂ.೧೯೦ಪುಟಗಳು : ೪೨೪   ಎಲ್.ವಿ.ಶಾಂತಕುಮಾರಿ ನಮ್ಮ ನಡುವಿನ ಬಹಳ ದೊಡ್ಡ ವಿದ್ವಾಂಸರು ಮತ್ತು ಅನುವಾದಕರು. ಅನೇಕ ಕ್ಲಾಸಿಕ್ ಗಳನ್ನು ಅವರು ಕನ್ನಡಕ್ಕೆ ಮತ್ತು ಕನ್ನಡದಿಂದ ಇಂಗ್ಲಿಷಿಗೆ ಅನುವಾದಿಸಿದ್ದಾರೆ. ಮಾನವ ಜೀವನ : ಒಂದು ವಿಲಕ್ಷಣ ಪ್ರಹಸನ’ ಕಾದಂಬರಿಯು ಜ್ಞಾನಪೀಠ ಪ್ರಶಸ್ತಿ […]

ಮೊದಲ ಬಾರಿ ಪೇಯಿಂಗ್ ಗೆಸ್ಟ್ ಆಗಿ ಹೋದಾಗ

ಅನುಭವ ಮೊದಲಬಾರಿಪೇಯಿಂಗ್ ಗೆಸ್ಟ್ಆಗಿಹೋದಾಗ      ಬೆಂಗಳೂರಿಗೆ ಹೋಗಿ ಬಂಧುಗಳ ಮನೆಯಲ್ಲಿ  ಬಂಧುಗಳ  ಹಾಗೆ ಒಂದೆರಡು ದಿನ ಇದ್ದು ಬರುವುದು ಬೇರೆ ವಿಚಾರ !ಅದೇ ನಮ್ಮ ಕೆಲಸಕ್ಕೆ ಹೋಗಿ ಇರುವುದು ವೆರಿ ಹಾರಿಬಲ್‌! ಯಾರಿಗೂ ಇರಿಸು ಮುರಿಸು ಬೇಡ ಎಂಬ ಕಾರಣಕ್ಕೆ ಸಾಧನಾಕಾಂಕ್ಷೆಗಳ ಅರ್ಥಾತ್ ಉದ್ಯೋಗಾಕಾಂಕ್ಷೆಗಳು,. ಸ್ಪರ್ಧಾಕಾಂಕ್ಷಿಗಳು ಏನೇ ಕರೆಯಲಿ ಅವರ ಮುಂದಿನ ಆಯ್ಕೆ ಪಿಜಿ.  ಪಿಜಿ ಅಂದರೆ  ‘ಪೇ’ ಮಾಡಿ ‘ಗೆಸ್ಟ್’ ಆಗಿರಿ ಅಂತ ಅಲ್ಲ ಪೇ ಮಾಡಿ  ಪೇನ್ಫುಲ್ ಅಡ್ಜಸ್ಮೆಂಟ್ ಮಾಡಿಕೊಂಡಿರಿ ಎಂದರ್ಥ. ಅತ್ತೆ ಮನೆಯ […]

ಅಂಕಣ ಬರಹ ಜ್ಞಾನವೆಂಬ ತಿಜೋರಿಯ ಕೀಲಿಕೈ… ಪುಸ್ತಕಗಳ ರಾಶಿಯನ್ನು ತಡವುವಾಗೆಲ್ಲಾ ಎಂಥದೋ ಆಪ್ತಭಾವ. ಗುಪ್ತಗೆಳೆಯನೊಬ್ಬ ಮನಕ್ಕೆ ಆಗಮಿಸಿದಂತೆ ಪ್ರತಿ ಪುಸ್ತಕವೂ ನಮ್ಮ ಅತಿ ಖಾಸಗೀತನವನ್ನು ಕೊಳ್ಳೆ ಹೊಡೆಯುತ್ತಿರುತ್ತದೆ. ನನಗೆ ಪುಸ್ತಕದ ರುಚಿ ಹತ್ತಿದ್ದು ಬಹುಶಃ ಮೂರೋ ನಾಲ್ಕನೆಯದೋ ತರಗತಿಯಲ್ಲಿದ್ದಾಗ. ಆಗ ನನ್ನ ಮನೆಗೆ ಬರುತ್ತಿದ್ದದ್ದು ದಿಕ್ಸೂಚಿ ಮಾತ್ರ. ಅದು ಖಂಡಿತ ದಿಕ್ಸೂಚಿ ಆಕರ್ಷಕವಾಗಿ ಕಾಣಿಸಬಹುದಾದ ವಯಸ್ಸು ಆಗಿರಲಿಲ್ಲ. ಆದರೆ ಒಂದು ಪುಸ್ತಕದ ಸ್ಪರ್ಶದ ಅನುಭೂತಿ ಹೇಗಿರುತ್ತದೆಂದು ತಿಳಿದದ್ದು ಮಾತ್ರ  ದಿಕ್ಸೂಚಿಯಿಂದಲೇ. ಶಾಲೆಯ ಪಠ್ಯ ಪುಸ್ತಕಗಳು ಸದಾ ನಮ್ಮೊಂದಿಗಿರುತ್ತಿದ್ದವಾದರೂ […]

ಅಂಕಣ ಬರಹ ಹೊಸ ದನಿ ಹೊಸ ಬನಿ – ೧೦. ಹಂಗೆ ಇಲ್ಲದ ಖಬರಿನೊಳಗ ಏನೊ ಗುನುಗಿದ್ಹಾಂಗ ಚಂ ಸು ಕವಿತೆಗಳು ರಾಣೇಬೆನ್ನೂರು ಸಮೀಪ ಕೂನಬೇವು ಗ್ರಾಮದ ಸಾಹಿತಿ ಚಂಸು (ಚಂದ್ರಶೇಖರ ಸುಭಾಸ ಗೌಡ ಪಾಟೀಲ ಅಂದರೆ ಯಾರಿಗೂ ಗೊತ್ತಾಗುವುದಿಲ್ಲ!) ಅವರ “ಬೇಸಾಯದ ಕತಿ” ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೧೮ನೇ ಸಾಲಿನ ಸಿಂಪಿ ಲಿಂಗಣ್ಣ ದತ್ತಿ (ಜೀವನಚರಿತ್ರೆ) ಪ್ರಶಸ್ತಿ ಪ್ರಕಟವಾದಾಗ ಅವರನ್ನು ಅಭಿನಂದಿಸಲು ಫೋನ್ ಮಾಡಿದ್ದೆ.  ಆ ಲೇಖನಗಳಲ್ಲಿ ಕೆಲವನ್ನು ಓದಿದ್ದರಿಂದಾಗಿ ಬೇಸಾಯದ ಬದುಕಿನ ಹಿಂದಣ […]

   ಭಯದ ಬಗ್ಗೆ ಭಯ ಬೇಡ      ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.        ಮಕ್ಕಳು ಯಾವ ಯಾವದೆ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ […]

Back To Top