ಅಂಕಣ ಬರಹ ಋಗ್ವೇದ ಸ್ಫುರಣ ಅನುವಾದ : ಹೆಚ್.ಎಸ್.ವೆಂಕಟೇಶಮೂರ್ತಿ ಋಗ್ವೇದ ಸ್ಫುರಣಅನುವಾದ : ಹೆಚ್.ಎಸ್.ವೆಂಕಟೇಶಮೂರ್ತಿಪ್ರ : ಅಭಿನವ ಪ್ರಕಟಣೆಯವರ್ಷ : ೨೦೧೭ಬೆಲೆ : ರೂ.೨೦೦ಪುಟಗಳು : ೧೬೦ ಪ್ರಾಚೀನ ಭಾರತದ ಅತ್ಯಂತ ಪ್ರಮುಖ ಭಾಷಿಕ ದಾಖಲೆಯಾದ ಋಗ್ವೇದ ಸೂಕ್ತಗಳಲ್ಲಿರುವ ಋಕ್ಕುಗಳೊಳಗಿನ ಬಿಡಿ ಪದ್ಯಗಳ ಸರಳ ಅನುವಾದ ಈ ಕೃತಿಯಲ್ಲಿದೆ. ಮೂಲ ಸಂಸ್ಕೃತದಲ್ಲಿರುವ ಈ ಪದ್ಯಗಳನ್ನು ಆರಂಭದಲ್ಲಿ ಸೂಕ್ತ ವ್ಯಾಖ್ಯಾನಗಳ ಮೂಲಕವೂ ನಂತರ ತಿಳಿಗನ್ನಡದಲ್ಲಿ ವ್ಯಾಖ್ಯಾನಗಳಾಗಿಯೂ ನೀಡಲಾಗಿದೆ. ಋಗ್ವೇದದ ಋಕ್ಕುಗಳು ಪ್ರಕೃತಿಯ ಮಹಾಶಕ್ತಿಗಳು. ವಾಸ್ತವದ ನೆಲೆಯಲ್ಲಿ ಗ್ರಹಿಸುವಂಥವು. ವಿಶ್ವಭ್ರಾತೃತ್ವವನ್ನು […]
ಅಂಕಣ ಬರಹ ಹಾಡು ಹಳೆಯದಾದರೇನು ಹಳೆಯ ಹಾಡುಗಳನ್ನು ಕೇಳುವಾಗಲೆಲ್ಲಾ ಎಂಥದೋ ಭಾವುಕತೆಗೆ ಒಳಗಾಗುವುದು, ಏನೋ ಒಂದು ರೀತಿ ಹೊಟ್ಟೆ ಚುಳ್ ಎನ್ನುವುದು, ಆ ಹಳೇ ದಿನಗಳ ನೆನಪುಗಳೆಲ್ಲಾ ಹಿಂದಿನ ಜನ್ಮದ ನೆನಪುಗಳೇನೋ ಎನ್ನುವಂತೆ ಕಾಡುವುದು… ಹೀಗೆಲ್ಲಾ ನನಗೆ ಮಾತ್ರ ಅನಿಸುತ್ತದಾ? ಬೇರೆಯವರಿಗೂ ಹೀಗೆಲ್ಲಾ ಆಗುತ್ತದಾ? ಗೊತ್ತಿಲ್ಲ. ಆದರೆ ನನಗೆ ಇದರ ಜೊತೆಗೆ ಇನ್ನೂ ವಿಚ್ ವಿಚಿತ್ರವಾಗೆಲ್ಲ ಏನೇನೋ ಅನ್ನಿಸುವುದಿದೆ. ಹಳೇ ಫೋಟೋಗಳನ್ನು ನೋಡುವಾಗ ಅದರಲ್ಲಿನ ಅಪರಿಚಿತರ ಬಗ್ಗೆ ಏನೇನೋ ಅನಿಸುತ್ತದೆ. ಅವರನ್ನು ನಾನೆಲ್ಲೋ ಭೇಟಿ ಮಾಡಿರುವೆ, ಮಾತಾಡಿಸಿರುವೆ, […]
ಅಂಕಣ ಬರಹ ಹೊಸ ದನಿ – ಹೊಸ ಬನಿ-೧೩. ಸಿದ್ಧಾಂತದ ಚೌಕಟ್ಟಿನಲ್ಲೇ ಉಳಿದೂ ಬೆಳಕಿಗೆ ತಡಕುವ ವಸಂತ ಬನ್ನಾಡಿ ಕವಿತೆಗಳು ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ವಾಣಿಜ್ಯ ಪಾಠ ಕಲಿಸುತ್ತಿದ್ದ ಶ್ರೀ ವಸಂತ ಬನ್ನಾಡಿ ಅಲ್ಲಿನ ರಂಗ ಅಧ್ಯಯನ ಕೇಂದ್ರದ ಸಂಚಾಲಕರಾಗಿಯೂ ಪ್ರಸಿದ್ಧರು. ಶಬ್ದಗುಣ ಹೆಸರಿನ ಅರ್ಧವಾರ್ಷಿಕ ಸಾಹಿತ್ಯ ಪತ್ರಿಕೆಯನ್ನು ಅತ್ಯಂತ ಶ್ರೀಮಂತವಾಗಿ ಸಂಪಾದಿಸುತ್ತಿದ್ದವರು ಅವರು. ಶಬ್ದಗುಣ ಕೂಡ ಉಳಿದೆಲ್ಲ ಹಲವು ಸಾಹಿತ್ಯ ಪತ್ರಿಕೆಗಳ ಹಾಗೇ ಪ್ರಾರಂಭದಲ್ಲಿ ಅತಿ ಉತ್ಸಾಹ ತೋರುತ್ತಲೇ ಮೂರು ಸಂಚಿಕೆಗಳನ್ನು ಸಂಪಾದಿಸುವಷ್ಟರಲ್ಲೇ ಅಕಾಲಿಕ ಮರಣಕ್ಕೆ […]
ಅಂಕಣ ಬರಹ ಕವಿತೆ ಅನಂತ ಮೌನಗಳ ಶಬ್ದ ಸಾಗರ ರಂಜಾನ್ ಹೆಬಸೂರು.ಹುಬ್ಬಳ್ಳಿ ಕವಿತೆಗಳನ್ನು ಯಾಕೆ ಬರೆಯುವಿರಿ? ಕವಿತೆ ಅಥವಾ ಕಾವ್ಯ ನಮ್ಮೊಳಗಿನ ಒತ್ತಡಗಳನ್ನು ಕಳೆದುಕೊಳ್ಳುವ ಒಂದು ಮಾಧ್ಯಮ ನನ್ನೊಳಗೆ ಒಡಮೂಡುವ ಸೂಕ್ಷ್ಮ ಗ್ರಹಿಕೆಯ ಸಂವೇದನಗಳು , ಒತ್ತಡಗಳು ಸಂಕಟಗಳನ್ನು , ವರ್ತಮಾನದ ತಲ್ಲಣಗಳಿಗೆ ಅನುಸಂಧಾನವಾಗಿಸುವುದು ಮುಖಾಮುಖಿಯಾಗುವುದಕ್ಕೆ ಕಾವ್ಯ ಬರೆಯುತ್ತವೆ ಒಳಗಿನ ಕತ್ತಲೆಗೆ ಬೆಳಕು ಸುರಿಯಲಿಕ್ಕೆ,ಮನುಷ್ಯ ಬದುಕಿನ ಶೋಧಕ್ಕೆ,ಕಾಡುವ ಘಟನೆಗಳಿಗೆ ಚಿತ್ರಗಳಿಗೆ, ನೋವಿಗೆ,ಸಂಕಟಕ್ಕೆ,ತಲ್ಲಣಕ್ಕೆ,ಮಿಡಿಯುವ ಕರುಳಿಗೆ,ಅವಮಾನ ನೋವು,ಹತಾಶೆ,ಕ್ರೋಧ,ಅವ್ಯಕ್ತ ಭಾವಗಳ ಅಕ್ಷರಗಳಿಗೆ ಕಾವ್ಯ ಮಾಧ್ಯಮ ವಾಗುತ್ತದೆ . ಕಾವ್ಯ ಕಾರ್ಯ ಕಾರಣವಿಲ್ಲದೆ […]
ಅಂಕಣ ಬರಹ ದಿ ಲಾಸ್ಟ್ ಲೆಕ್ಚರ್ ದಿ ಲಾಸ್ಟ್ ಲೆಕ್ಚರ್ ( ಆತ್ಮ ಕಥನ ರೂಪದ ಉಪನ್ಯಾಸಗಳು)ಮೂಲ : ರ್ಯಾಂಡಿ ಪಾಶ್ ಕನ್ನಡಕ್ಕೆ : ಎಸ್.ಉಮೇಶ್ಪ್ರ : ಧಾತ್ರಿ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೦೦ಪುಟಗಳು : ೧೯೩ ಮೂಲಕೃತಿಯ ಅದ್ಭುತ ಜನಪ್ರಿಯತೆಯಿಂದಾಗಿ ಕನ್ನಡಕ್ಕೂ ಬಂದು ಕನ್ನಡದಲ್ಲೂ ಮಾರಾಟ ಮತ್ತು ಜನಪ್ರಿಯತೆಗಳ ದೃಷ್ಟಿಯಿಂದ ಅಪಾರ ಯಶಸ್ಸು ಪಡೆದ ಕೃತಿಯಿದು. ಮೂಲ ಲೇಖಕ ರ್ಯಾಂಡಿ ಪಾಶ್ ಜಠರದ ಕ್ಯಾನ್ಸರಿನಿಂದ ಪೀಡಿತನಾಗಿ ಇನ್ನು ಕೆಲವೇ ತಿಂಗಳುಗಳಷ್ಟೇ ಬದುಕುವನೆಂದು ವೈದ್ಯಕೀಯ […]
ಅಂಕಣ ಬರಹ ಬಾಗದ ಬದುಕು ನಾನು ಶಿವಮೊಗ್ಗೆಯಲ್ಲಿದ್ದ ದಿನಗಳಲ್ಲಿ ಹಲವು ತಲೆಮಾರಿಗೆ ಸೇರಿದ ಸ್ವಾತಂತ್ರ್ಯ ಹೋರಾಟಗಾರರು, ಗಾಂಧಿವಾದಿಗಳು ಹಾಗೂ ಸಮಾಜವಾದಿಗಳು ಬೀದಿಯಲ್ಲಿ ಓಡಾಡಿಕೊಂಡಿದ್ದನ್ನು ಕಾಣುತ್ತಿದ್ದೆ. ಹೆಚ್ಚಿನವರು ಗಾಂಧಿ ಇಲ್ಲವೇ ಲೋಹಿಯಾರ ವ್ಯಕ್ತಿತ್ವ ಅಥವಾ ಚಿಂತನೆಯ ಭಾವಕ್ಕೆ ಸಿಕ್ಕು ಬದುಕಿನ ಹಾದಿ ರೂಪಿಸಿಕೊಂಡವರು. ಸಮಕಾಲೀನ ಚುನಾವಣಾ ರಾಜಕಾರಣದಲ್ಲಿ ಇವರ ಯಾರ ಹೆಸರೂ ಚಾಲ್ತಿಯಲ್ಲಿರುತ್ತಿರಲಿಲ್ಲ. ಹೀಗಾಗಿ ಮಾಧ್ಯಮಗಳೂ ಇವರ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಇವರು ಮಲೆನಾಡಿನ ಮಳೆಗಾಲದಲ್ಲಿ ಮೋಡಗಳ ಮರೆಯಿಂದ ತಟ್ಟನೆ ಕಾಣಿಸಿಕೊಂಡು ಬೆಳಗುವ ಸೂರ್ಯನಂತೆ ಸನ್ನಿವೇಶ ಬಂದಾಗ ಪ್ರತ್ಯಕ್ಷವಾಗುತ್ತಿದ್ದರು. […]
ಅಂಕಣ ಬರಹ ಹುಣಿಸೆ ಮರದ ಕತೆ ಹುಣಿಸೆ ಮರದ ಕತೆತಮಿಳು ಮೂಲ : ಸುಂದರ ರಾಮಸ್ವಾಮಿಅನುವಾದ : ಕೆ.ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೫೦ಪುಟಗಳು : ೧೯೨ ಪರಿಸರ ಕಾಳಜಿಯನ್ನು ಹೊಂದಿದ ಒಂದು ವಿಶಿಷ್ಟ ಕಾದಂಬರಿಯಿದು. ಅದೊಂದು ಪುಟ್ಟ ಹಳ್ಳಿಯಲ್ಲಿ, ಮೂರು ರಸ್ತೆ ಕೂಡುವ ಸ್ಥಳದಲ್ಲಿ ಆ ಹುಣಿಸೆ ಮರವಿತ್ತು. ಆ ಜಾಗ ಜನರ ಓಡಾಟ-ಗಿಜಿ ಗಿಜಿಗಳಿಂದ ತುಂಬಿ ಲವಲವಿಕೆಯಿಂದ ಕೂಡಿತ್ತು. ತನ್ನಷ್ಟಕ್ಕೆ ಹುಟ್ಟಿಕೊಂಡ ಆ ಹುಣಿಸೆ ಮರವು ಮಾನವನ […]
ಅಂಕಣ ಬರಹ ಅಸಾಮಾನ್ಯದ ವ್ಯಕ್ತಿ ಚಿತ್ರ ಇವನು… ಬಾಲ್ಯದಲ್ಲಿ ಅಜ್ಜನ ಊರು ಮತ್ತು ಅಜ್ಜನ ಮನೆ ಎನ್ನುವ ಆ ಜಾಗ ಎಷ್ಟೊಂದು ಆಸ್ಥೆಯ ಆಕರ್ಷಣೆಯ ಜಾಗವಾಗಿತ್ತು… ಅದೆಷ್ಟು ಖುಷಿಯಿಂದ ಅಜ್ಜನ ಮನೆಗೆ ಬರುತ್ತಿದ್ದೆವು… ಅಜ್ಜನ ಮನೆಯ ಮಾಳಿಗೆ, ಪಡಸಾಲೆ, ನೆಲಾಗಾಣೆ, ಅಟ್ಟ, ಗಣಿಗೆ, ಬಾದಾಳ, ಸಗಣಿ ನೆಲ, ಮಣ ಗಾತ್ರದ ಒಂಟಿ ತಲೆ ಬಾಗಿಲು, ಪಡಸಾಲೆಯ ನಾಲ್ಕು ಕಂಬಗಳು, ಅಡುಗೆ ಮನೆಯ ಮಜ್ಜಿಗೆ ಕಡೆಯುವ ಕಂಬ, ದನಾಕ್ಕೆ, ತಿಪ್ಪೆ, ಬಾರುಕೋಲು, ಹಗೇವಿನ, ಸಗಣಿ, ಗಂಜಲ…. ಇನ್ನೂ ಅಸಂಖ್ಯ […]
ಅಂಕಣ ಬರಹ ಹೊಸ ದನಿ ಹೊಸ ಬನಿ-೧೨. ಚದುರಿದ ಚಿತ್ರಗಳಲ್ಲೇ ಅರಳುವ ಹೂವುಗಳಂಥ ನರಸಿಂಹ ವರ್ಮ ಕವಿತೆಗಳು ವಿಟ್ಲದ ನರಸಿಂಹ ವರ್ಮ “ಆಕಾಶದ ಚಿತ್ರಗಳು” ಹೆಸರಿನ ಕವನ ಸಂಕಲನವನ್ನು ೨೦೧೯ರಲ್ಲಿ ಪ್ರಕಟಿಸುವುದರ ಮೂಲಕ ಈಗಾಗಲೇ ಸಾಹಿತ್ಯ ಲೋಕಕ್ಕೆ ಪರಿಚಿತರಾಗಿದ್ದಾರೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾನೂನು ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಅವರ ಕವಿತೆಗಳಲ್ಲಿ ಹುಡುಕಿದರೂ ವಾದ ವಿವಾದಗಳಾಗಲೀ, ವ್ಯವಸ್ಥೆಯ ಪರ ಅಥವ ವಿರೋಧದ ನಿಲುವಾಗಲೀ ಇಲ್ಲದೇ ಇರುವುದು ವಿಶೇಷ. ಜೊತೆಗೇ ವರ್ತಮಾನದ ಸಂಗತಿಗಳಿಗೆ ಥಟ್ಟನೆ ಪ್ರತಿಕ್ರಯಿಸಿ ಪದ್ಯವೊಂದನ್ನು […]
ಅಂಕಣ ಬರಹ ಕತೆಗಾರ್ತಿ ಆಶಾ ಜಗದೀಶ್ಮುಖಾಮುಖಿಯಲ್ಲಿ “ಹೆಣ್ಣು ನನ್ನ ಬರಹದ ಮೂಲ ಕಾಳಜಿ” ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ಉತ್ತರ: ಕವಿತೆಯನ್ನು ನಾನು ಬರೆಯುತ್ತೇನೆ ಎನ್ನುವುದು ತಪ್ಪಾಗುತ್ತದೆ. ಕವಿತೆಗಳೇ ನನ್ನಿಂದ ಬರೆಸಿಕೊಳ್ಳುತ್ತವೆ ಎನ್ನುವುದು ಸರಿ. ನನ್ನೊಳಗೆ ಅಂತಹುದೊಂದು ತೀವ್ರತೆಯನ್ನು ಇಟ್ಟುಕೊಳ್ಳದೆ ಬರೆಯುವುದು ನನಗೆ ಕಷ್ಟ. ಕವಿತೆ ಹುಟ್ಟುವ ಕ್ಷಣ ಯಾವುದು ? ಉತ್ತರ: ಯಾವ ಕ್ಷಣವಾದರೂ ಸರಿ ಅದು ನನ್ನನ್ನು ಕಾಡಬೇಕು. ಸತಾಯಿಸಬೇಕು. ಇನ್ನು ಬರೆಯದೆ ಉಳಿಯಲಾರೆ ಅನ್ನಿಸುವಂತೆ ಮಾಡಬೇಕು. ಆಗ ಮಾತ್ರ ಕವಿತೆ ಹುಟ್ಟುತ್ತದೆ. ಹಾಗಾಗಿ […]