Category: ಅಂಕಣ

ಅಂಕಣ

ಜಾಮಿನಿಯ ನೆನಪಿನಲ್ಲಿ ಈ ಮಳೆಗಾಲದಲ್ಲಿಯೇ ನೆನಪುಗಳು ಹುಟ್ಟಿಕೊಂಡಿರಬಹುದು ಎನ್ನುವ ಬಲವಾದ ನಂಬಿಕೆಯಿದೆ ನನಗೆ. ಮೋಡಗಳೊಂದಿಗೆ ತಣ್ಣಗೆ ತೇಲಿಬಂದ ನೆನಪೊಂದು, ಏಕಾಂತ ಬಯಸಿ ಟೆರೇಸಿನಲ್ಲಿ ಕುಳಿತು ಆಕಾಶ ದಿಟ್ಟಿಸುತ್ತಿದ್ದ ಹೃದಯವೊಂದನ್ನು ತಾಕಿ ನೆಲಕ್ಕೆ ಇಳಿದಿರಬಹುದು. ಹಾಗೆ ತಾಕಿದ ನೆನಪು ಒಮ್ಮೆ ಬಾಲ್ಯದ ಬೆರಗಾಗಿ, ಇನ್ನೊಮ್ಮೆ ಹರೆಯದ ಕನಸಾಗಿ, ಮತ್ತೊಮ್ಮೆ ಫ್ರಿಡ್ಜ್ ನಲ್ಲಿಟ್ಟ ಐಸ್ ಕ್ರೀಮಾಗಿ ಎಲ್ಲರ ಅರಿವಿಗೂ ದಕ್ಕಿರಬಹುದು. ಹಾಗೆ ದಕ್ಕಿದ ನೆನಪು ಈಗಷ್ಟೇ ಟ್ರೆಕ್ಕಿಂಗ್ ಮುಗಿಸಿದ ಹುಡುಗನೊಬ್ಬನ ಭಾರವಾದ ಬ್ಯಾಗ್ ನಲ್ಲೋ, ಕಾಡುಪಾಪವೊಂದನ್ನು ಕಷ್ಟಪಟ್ಟು ಕ್ಲಿಕ್ಕಿಸಿದ ಫೋಟೋಗ್ರಾಫರ್ […]

ಅಕ್ಷರದ ಬಂಡಾಯ ತಲ್ಲಣಗಳಿಗೆ ಪ್ರತಿಕ್ರಿಯೆ ಬೇಕಾದ ಅನಿವಾರ್ಯತೆಯಲ್ಲಿ ಬರೆಯಲು ಮನಸ್ಸು ಮಾಡಿದೆ’ ಡಾ.ರಾಮಕೃಷ್ಣ ಗುಂದಿ ಡಾ.ರಾಮಕೃಷ್ಣ ಗುಂದಿ ಕನ್ನಡದ ಅತ್ಯಂತ ಪ್ರಭಾವಶಾಲಿ ಕತೆಗಾರರಲ್ಲಿ ಒಬ್ಬರು. ಅವಾರಿ ಅವರ ಪ್ರಸಿದ್ಧ ಕತೆ. ಅವರ ಮೊದಲ ಕಥಾ ಸಂಕಲನ ಅವಾರಿ ಹೆಸರಲ್ಲೇ ಪ್ರಕಟವಾಯಿತು. ಕಡಲ ಬೆಳಕಿನ ದಾರಿಯಲ್ಲಿ, ಸೀತೆದಂಡೆ ಹೂವೆ ಅವರ ಕಥಾ ಸಂಕನಲಗಳು. ಪ್ರಾಂಜಲ ಅವರು ವಿವಿಧ ಲೇಖಕರಿಗೆ ಬರೆದ ಮುನ್ನುಡಿಗಳ ಸಂಗ್ರಹ. ಆಗೇರರ ಬದುಕು ಮತ್ತು ಸಂಸ್ಕೃತಿ ಕುರಿತು ಅವರು ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕ ವಿಶ್ವವಿದ್ಯಾನಿಲಯದಿಂದ […]

ದಿಕ್ಸೂಚಿ

ತೊಂದರೆ ಕೊಡಬೇಡಿ ಅಂತ ಹೇಳಿಬಿಡಿ ಜಯಶ್ರೀ.ಜೆ.ಅಬ್ಬಿಗೇರಿ ಮೊದಲೇ ಓದಿನ ಒತ್ತಡ. ಇದು ಸಾಲುವುದಿಲ್ಲ ಎಂಬಂತೆ ಬಹು ದಿನಗಳಿಂದ ಬೆನ್ನು ಬಿಡದಿರುವ ಕೆಲ ವೈಯುಕ್ತಿಕ ಸಮಸ್ಯೆಗಳು. ತಲೆ ತಿನ್ನುತ್ತಿವೆ. ಒಂದಿಷ್ಟು ಹೊತ್ತು ಎಲ್ಲೋ ಒಂದು ಕಡೆ ಹೋಗಿ ಮೌನವಾಗಿದ್ದು ಬರೋಣವೆಂದರೆ ನಿಮ್ಮ ಗೆಳೆಯ/ ಗೆಳತಿ ನಿಮಗೆ ಸಂಬಂಧವಿಲ್ಲದ ಯಾವುದೋ ವಿಷಯ ಹೇಳಿ ತಲೆ ತಿನ್ನುತ್ತಿದ್ದರೆ ಕೋಪ ನೆತ್ತಿಗೇರಿ ಬಿಡುತ್ತದೆ. ಖಂಡ ತುಂಡವಾಗಿ ಹೇಳಿ ಹೊರಗೆ ಅಟ್ಟಬೇಕೆನಿಸಿದರೂ ಹಾಗೆ ಮಾಡಲು ಸಾಧ್ಯವಿಲ್ಲವೆಂದು ಹೇಗೋ ಸಹಿಸಿಕೊಳ್ಳುತ್ತೀರಿ. ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ […]

ಉದಯಿಸುತ್ತಿರುವ ಸೂರ್ಯನೊಂದಿಗೆ ಹೆಜ್ಜೆಯಿಡುವ ತವಕದಲ್ಲಿ. ತೇರೂವೋ ಮೂಲ ಗೌರಿ ದೇಶಪಾಂಡೆ ಕನ್ನಡಕ್ಕೆ- ಚಂದ್ರಕಾಂತ ಪೋಲಳೆ ಬೆಲೆ-೮೦   ನನಗೆ ಬೇರೆ ಭಾಷೆಗಳಿಂದ ಅನುವಾದಗೊಂಡ ಕಾದಂಬರಿಗಳ ಹುಚ್ಚು ಹಿಡಿಸಿದ್ದು ಸೃಷ್ಟಿ ನಾಗೇಶರವರು. ಅವರ ಸೃಷ್ಟಿ ಪ್ರಕಾಶನ ಎಂದರೆ ಅನುವಾದಗಳಿಗಾಗಿಯೇ ಮೀಸಲಾಗಿರುವ ಪ್ರಕಾಶನ. ಜಗತ್ತಿನ ಅದ್ಭುತ ಕಾದಂಬರಿಗಳ ಅನುವಾದಗಳನ್ನು ನಾನು ಓದಿದ್ದು ಸೃಷ್ಟಿ ಪ್ರಕಾಶನದ ಪುಸ್ತಕಗಳಿಂದಾಗಿಯೇ. ತಮ್ಮ ಪ್ರಕಾಶನದ ಪುಸ್ತಕಗಳನ್ನು ತಲುಪಿಸುವ ಸೃಷ್ಟಿ ನಾಗೇಶ ಇದನ್ನು ಮೊದಲು ಓದಿ, ಈ ಪುಸ್ತಕ ಅದ್ಭುತವಾಗಿದೆ ಓದಿ ಎಂದೆಲ್ಲ ಸಲಹೆ ಮಾಡಿಯೇ ಕಳುಹಿಸುತ್ತಾರೆ. […]

ಗುಂಡಪ್ಪೆಯ ಮಳೆಗಾಲ ಈ ಮಾವಿನಹಣ್ಣಿಗೂ ಮಳೆಗಾಲಕ್ಕೂ ಒಂಥರಾ ಅವಿನಾಭಾವ ಎನ್ನುವಂಥ ಸಂಬಂಧ. ಮೊದಲಮಳೆಯೆನ್ನುವ ಸಂಭ್ರಮ ನಮ್ಮೊಳಗೊಂದು ಹೊಸ ಚೈತನ್ಯ ತುಂಬುವ ಸಮಯದಲ್ಲಿ, ಸಕಲ ಸೊಬಗಿನ ದೇವಕನ್ಯೆಯೊಬ್ಬಳು ಭುವಿಗಿಳಿದಂತೆ ಮಾವಿನಹಣ್ಣೊಂದು ನೆಲಕ್ಕುರುಳುತ್ತದೆ. ಹೀಗೆ ಕಳಚಿಬಿದ್ದ ಮಾವಿನಹಣ್ಣಿನ ಮೇಲೆ ಮಳೆಹನಿಗಳೆಲ್ಲ ಮುತ್ತಿನಂತೆ ಹೊಳೆದು, ಗೌಜು-ಗದ್ದಲವಿಲ್ಲದ ಹೊಸ ಲೋಕವೊಂದು ಸೃಷ್ಟಿಯಾಗುತ್ತದೆ. ಹೀಗೆ ಗದ್ದೆಬಯಲಿನಲ್ಲೋ, ಬೆಟ್ಟದ ತುದಿಯಲ್ಲೋ ನಿರಾತಂಕವಾಗಿ ಹುಟ್ಟಿಕೊಳ್ಳುವ ಈ ಸೊಬಗಿನ ಪ್ರಪಂಚಕ್ಕೆ ಮಳೆಯೊಂದು ಜೀವ ತುಂಬುವ ಪರಿ ಅನನ್ಯ. ಮಳೆ ಆಗೊಮ್ಮೆ ಈಗೊಮ್ಮೆ ಅವಾಂತರಗಳನ್ನು ಸೃಷ್ಟಿಸಿದರೂ ಅದೊಂದು ಮಾಯೆಯಾಗಿ ಮೈ-ಮನಗಳನ್ನು […]

ದಿಕ್ಸೂಚಿ

ಸೋಲು ಒಪ್ಪಿಕೊಳ್ಳುವ ಮುನ್ನ ಕೊಂಚ ಪ್ರಶ್ನಿಸಿಕೊಳ್ಳಿ ಜಯಶ್ರೀ ಅಬ್ಬಿಗೇರಿ ನಾನು ಕೈ ಹಾಕಿದ ಯಾವ ಕೆಲಸದಲ್ಲೂ ಗೆಲುವು ಸಿಗುತ್ತಲೇ ಇಲ್ಲ. ನನ್ನ ಹಣೆ ಬರಹವೇ ಚೆನ್ನಾಗಿಲ್ಲ. ನಸೀಬು ಕೆಟ್ಟಿದೆ. ಸಾಲು ಸಾಲು ಸೋಲುಗಳು ನನ್ನ ಬೆನ್ನು ಹತ್ತಿವೆ. ಹೀಗೇ ಇನ್ನೊಂದಿಷ್ಟು ಸಮಯ ಕಳೆದರೆ ಜೀವನದ ಆಸೆಗಳೇ ಕಮರಿ ಹೋಗಿ ಬಿಡುತ್ತವೆ. ನನ್ನಿಂದೇನೂ ಮಾಡಲು ಸಾಧ್ಯವಿಲ್ಲವೆಂದು ಊಟ ತಿಂಡಿ ಬಿಟ್ಟು ಕೈ ಕಟ್ಟಿ ಕುಳಿತು ಚಿಂತಿಸಿದರೆ ಬದುಕು ನಿಂತ ನೀರಾಗಿ ಬಿಡುತ್ತದೆ. ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತವೆ. ಉಗ್ರ ರೂಪ […]

ಬಣ್ಣ-ರೇಖೆಗಳ ಜೊತೆಯಾಟ ಪಕ್ಷಾತೀತ ಕಲಾವಿದ ಅನಾಥ ಶಿಶುವಿನಂತೆ’ ಎಂ.ಎಲ್.ಸೋಮವರದ ಎಂ.ಎಲ್.ಸೋಮವರದ ದೇಶ ಕಂಡ ಉತ್ತಮ ಕಲಾವಿದರಲ್ಲಿ ಒಬ್ಬರು. ಮಂಡ್ಯದ ವಿ.ವಿ.ನಗರದ ಕಲ್ಲಹಳ್ಳಿ ನಿವಾಸಿ. ತುಂಬಾ ನಿಷ್ಠುರ ವ್ಯಕ್ತಿತ್ವದ ಸೋಮವರದ , ಜೀವನದಲ್ಲಿ ಕಷ್ಟಗಳನ್ನೇ ಹೆಚ್ಚು ಹೊದ್ದವರು. ನ್ಯಾಯ, ನೈತಿಕ ಮತ್ತು ವೈಚಾರಿಕ ನಿಲುವಿನ ಕಲಾವಿದ. ವೈಚಾರಿಕ ಮನೋಭಾವದಿಂದ ಅನೇಕ ಅವಕಾಶಗಳನ್ನು ಕಳೆದುಕೊಂಡವರು. ಎಂ.ಎಲ್.ಸೋಮವರದ ಬೆಂಗಳೂರಿನ ಕೆನ್ ಕಲಾ ಶಾಲೆಯಿಂದ 1987ರಲ್ಲಿ ಡಿ.ಎಂ.ಸಿ. ಪದವಿ ಪಡೆದವರು. 2008 ರಲ್ಲೇ ಮೈಸೂರು ಮುಕ್ತ ವಿ.ವಿ.ಯಿಂದ ಬಿ.ಎಫ್.ಎ. ಅಧ್ಯಯನ ಮಾಡಿದರು. ಮಂಡ್ಯ, […]

ಮೂರನೇ ಆಯಾಮ

ಸುಪ್ತಮನದೊಳಗಿನ ಗುಪ್ತತೆಗಳ ಅನಾವರಣ ಸುಪ್ತಲೇಖಕರು- ಡಾ. ಕೆಬಿ ಶ್ರೀಧರಬೆಲೆ- ೨೦೦ ತ್ರೀ ಈಡಿಯೆಟ್ಸ್ ನೋಡಿದ್ದೀರಲ್ಲ? ಅಲ್ಲಿನ ಒಂದು ದೃಶ್ಯ. ಇಂಜಿನಿಯರ್ ಕಾಲೇಜಿನ ರಿಸಲ್ಟ್ ಬಂದಿರುತ್ತದೆ. ಸ್ನೇಹಿತರಾದ ಫರ್ಹಾನ್ ಖಾನ್ ಮತ್ತು ರಾಜು ತಮ್ಮ ತಮ್ಮ ರಿಸಲ್ಟ್ ನೋಡಲು ಅಂಕಪಟ್ಟಿಯ ಕೆಳಗಿನಿಂದ ಮೇಲಕ್ಕೆ ನೋಡುತ್ತಿರುತ್ತಾರೆ. ಅಲ್ಲೆಲ್ಲೋ ಮಧ್ಯದಲ್ಲಿ ಅವರ ಹೆಸರುಗಳು ಕಾಣಿಸುತ್ತವೆ. ತಮ್ಮ ಹೆಸರು ಸಿಕ್ಕ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಾರೆ. ಆದರೆ ತಮಗಿಂತ ಒಂದಿಷ್ಟು ಮೇಲಿನವರೆಗೆ ನೋಡಿದರೂ ರಾಂಚೋ ನಂಬರ್ ಸಿಕ್ಕುವುದೇ ಇಲ್ಲ. ಗೆಳೆಯರಿಗೆ ಬೇಸರ. ತಮ್ಮದೇ ಜೊತೆ […]

ಅಜ್ಜನಮನೆಯೆನ್ನುವ ಜೀವನಪಾಠ….. ಅಜ್ಜ ನೆನಪಿಗೆ ಬಂದಾಗಲೆಲ್ಲ ಅಜ್ಜನಮನೆ ಎನ್ನುವ ಮಮತೆಯ ಮಲ್ಹಾರವೊಂದು ಮನಸ್ಸನ್ನೆಲ್ಲ ತುಂಬಿಕೊಳ್ಳುತ್ತದೆ. ಈ ಪ್ರೀತಿ-ಮಮಕಾರಗಳ ಮೂಲವನ್ನೊಮ್ಮೆ ಕೆದಕಿ ನೋಡಿ! ಅಜ್ಜಿಯ ಸೆರಗಿನಂಚಿನ ಪ್ರೀತಿಯ ಸೆಲೆಯೊಂದು, ಅಜ್ಜನ ಕಿರುಬೆರಳಿನ ಅಭಯವೊಂದು ನಾವಿಡುವ ಪ್ರತೀ ಹೆಜ್ಜೆಯನ್ನೂ ಸಲಹುತ್ತಿರುತ್ತದೆ. ಎಷ್ಟೇ ಆಧುನಿಕ ಜೀವನಶೈಲಿಯಾದರೂ, ಅಪಾರವಾದ ಸ್ನೇಹಬಳಗವಿದ್ದರೂ ಅಜ್ಜ-ಅಜ್ಜಿ ಎನ್ನುವ ಪ್ರೀತಿಯ ಬಲೆಯೊಂದರಲ್ಲಿ ಬದುಕಿನುದ್ದಕ್ಕೂ ಬಂದಿಯಾಗಿರುತ್ತೇವೆ; ಅಚ್ಚರಿಯೆಂದರೆ ಆ ಬಂಧನ ನಮಗೆಂದೂ ಹೊರೆಯೆನ್ನಿಸುವುದಿಲ್ಲ. ಅಜ್ಜನ ಕಥೆಯಲ್ಲಿ ಬರುವ ನೂರಾರು ಮೂಟೆಗಳ ಭತ್ತದ ದಾಸ್ತಾನನ್ನು ರಾತ್ರೋರಾತ್ರಿ ಖಾಲಿ ಮಾಡಿದ ಇರುವೆಗಳ ದಂಡು, […]

ಸ್ವಾತ್ಮಗತ

ಪ್ರೋ.‘ಸಿಜಿಕೆ’ ಎಂಬ ರಂಗ ಪ್ರಜ್ಞೆ ಪ್ರೋ.‘ಸಿಜಿಕೆ’ ಎಂಬ ರಂಗ ಪ್ರಜ್ಞೆಯೂ..!ಸಿಜಿಕೆ ರಂಗ ದಿನವೂ.!! ‘ಸಿಜಿಕೆ’ ಎಂದರೆ ಅದೊಂದು ಮಹಾ ರಂಗಪರಂಪರೆಯ ಸಂಕೇತ. ತನ್ನ ಸುತ್ತಲಿನವರನ್ನು ಒಟ್ಟು ಸಮಾಜವನ್ನು ಸಾಂಸ್ಕೃತಿಕ, ರಾಜಕೀಯ ಪ್ರಜ್ಞೆ ಮತ್ತು ಹೋರಾಟದ ಮನೋಭಾವನೆಯ ರಂಗ ಚಟುವಟಿಕೆಗಳ ಮೂಲಕ ಪ್ರಭಾವಿಸಿದ ರಂಗ ಚೇತನ. ದೇಶ, ಕಾಲ ಆಯಾ ಸಂದರ್ಭದಲ್ಲಿ ಎದುರಿಸುವ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಸವಾಲುಗಳನ್ನು ರಂಗ ಬದ್ಧತೆಯೊಂದಿಗೆ ದಿಟ್ಟತನದಿಂದ ಮೆರೆದ ಮಹಾ ಜಗಜಟ್ಟಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಸಿ.ಜಿ.ಕೃಷ್ಣಸ್ವಾಮಿ ಪಕ್ಕಾ ದೇಸಿ ಪ್ರತಿಭೆ.ಬೆಂಗಳೂರು […]

Back To Top