Category: ಅಂಕಣ

ಅಂಕಣ

ಈಗ ಬಸವಣ್ಣನವರು ಪೂರ್ವಪಕ್ಷ ಮತ್ತು ಪ್ರತಿಪಕ್ಷಗಳಿಗೆ ಈ ಎರಡು ಹೆಸರುಗಳನ್ನು ಪ್ರಶ್ನಾರ್ಥಕವಾಗಿಯೇ ಬಳಸಿ ಏನನ್ನು ಸೂಚಿಸುತ್ತಿದ್ದಾರೆ ಎಂಬುದನ್ನು ಹೀಗೆ ಪಟ್ಟಿ ಮಾಡಿಯೇಬಿಡಬಹುದು.

ಅಂಕಣ ಬರಹ ಹೊಸ್ತಿಲಾಚೆಗಿನ ರಂಗಜೀವಿ ಬದುಕ ರಂಗವನ್ನು ಆತ್ಮ ತೊರೆದಿತ್ತು. ಮನೆಯ ಉದ್ದದ ಚಾವಡಿಯಲ್ಲಿ ಅತ್ತೆಯ ಶರೀರ  ಮಲಗಿತ್ತು. ತಲೆಯ ಬದಿಯಲ್ಲಿ ತೆಂಗಿನ ಕಾಯಿಯ ಒಂದು ಭಾಗದೊಳಗೆ ದೀಪ ಮೌನವಾಗಿ ಉರಿಯುತ್ತಿತ್ತು. ರಾಶಿ ಮೌನಗಳನ್ನು ದರದರನೆ ಎಳೆತಂದು ಕಟ್ಟಿ ಹಾಕಿದ ರಾಕ್ಷಸ ಮೌನ ಘೀಳಿಡುತ್ತಿತ್ತು. ಎದೆ ಒತ್ತುವ, ಕುತ್ತಿಗೆ ಒತ್ತುವ ನಿರ್ವಾತಕ್ಕೆ ಅಂಜಿ ಮುಂಬಾಗಿಲಿಗೆ ಬಂದೆ. ಶರೀರವನ್ನು ಉದ್ದಕ್ಕೆ ನೆಲಕಂಟಿಸಿ ಮುಖವನ್ನು ಅಡ್ಡಕ್ಕೆ ಬಾಗಿಸಿ ‘ಪೀಕು’ ಮಲಗಿದ್ದಾಳೆ. ನಾನು ಅಲ್ಲಿರುವುದು ತಿಳಿದಿಲ್ಲವೇ? ಯಾವಾಗಲೂ ನಡಿಗೆಯ ಪದತರಂಗವನ್ನು ಗಬಕ್ಕೆಂದು […]

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—20 ಆತ್ಮಾನುಸಂಧಾನ ಸಂಸ್ಕೃತವನ್ನು ಓದಗೊಡದ ಸಂಸ್ಕೃತ ಮೇಷ್ಟ್ರು ನಾನು ‘ಜೈಹಿಂದ್’ ಹೈಸ್ಕೂಲು ವಿದ್ಯಾರ್ಥಿಯಾಗಿ ಪ್ರವೇಶ ಪಡೆದ ಬಳಿಕ ವಿಷಯ ಆಯ್ಕೆಯ ಸಂದರ್ಭದಲ್ಲಿ ಒಂದು ತಪ್ಪು ಮಾಡಿದೆ. ಬಾಲ್ಯದಿಂದಲೂ ಯಕ್ಷಗಾನದ ಪ್ರಭಾವಕ್ಕೆ ಪಕ್ಕಾಗುವ ವಾತಾವರಣದಲ್ಲಿ ಬೆಳೆದ ನಾನು ಹಿರಿಯ ಅರ್ಥಧಾರಿಗಳು ಅರ್ಥ ಹೇಳುವಾಗ ಮಾತಿನ ಮಧ್ಯೆ ಅಲ್ಲಲ್ಲಿ ಬಳಸುವ ಸಂಸ್ಕೃತ ಶ್ಲೋಕಗಳನ್ನು ಕೇಳುವಾಗ ಅದು ತುಂಬ ಅದ್ಭುತವೆನ್ನಿಸುತ್ತಿತ್ತು. ಇಂಥ ಸಂಸ್ಕೃತ ಉಕ್ತಿಗಳನ್ನು ಮಾತಿನ ಮಧ್ಯೆ ಬಳಸುವವರು ತುಂಬಾ ಜಾಣರು, ಬಹಳಷ್ಟು […]

ಇನ್ನು ‘ಸತ್ತ ಕಲ್ಗಳ ಮುಂದೆ ಅತ್ತು ಕರೆದುದು ಸಾಕು ಜೀವದಾತೆಯನಿಂದು ಕೂಗಬೇಕು’. ಹಾಗೇ ಅಕ್ಷರಗಳಿಂದಲೇ ಕೂಗಿ ಕರೆಯಬೇಕು ಎಲ್ಲಾ ಎಚ್ಚರಗಳಿಗೆ. ಅಪಾಯಗಳ ಬಾಯಿಗೆ ಆಹಾರವಾಗುವ ಮುನ್ನ .

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-4 ಬೆಳಗಿನ ಜಾವ ಐದೂವರೆಗೆ ಇಲ್ಲಿಯ ಏಳುವರೆಯಷ್ಟು ಬೆಳಕು ಮತ್ತು ಎಳೆ ಬಿಸಿಲು. ಒಳ್ಳೆಯ ನಿದ್ರೆಯಾಗಿ ತಾಜಾತನ ತುಂಬಿಕೊಂಡಂತೆ ಮೈ ಮನಸ್ಸು ಉಲ್ಲಸಿತವಾಗಿತ್ತು. ಮನೆಯಲ್ಲಿದ್ದರೆ ಹಲವಾರು ಕೆಲಸಗಳು ಸಾಲಾಗಿ ಧಬಧಬನೆ ಮೈ ಮೇಲೆ ಬಿದ್ದ ಹಾಗೆ ಧಾವಿಸಿ ಬರುತಿದ್ದವು. ಇಲ್ಲಿ ಯಾವ ಕೆಲಸದ ಗೊಡವೆಯೂ ಇಲ್ಲದೆ ಹಾಯಾಗಿ ಆ ಬೆಳಗಿನ ಜಾವವನ್ನು  ಆನಂದಿಸಿದೆ. ಸ್ನಾನಾದಿಗಳನ್ನು ಮುಗಿಸಿ ಬೆಳಗಿನ ಉಪಹಾರವೂ ಆಯಿತು. […]

ಅಂಕಣ ಬರಹ ಮೌನದ ಮಾತು… ಇದನ್ನ ಈ ಮುಂಚೆ ಯಾರಾದರೂ ಹೇಳಿರಬಹುದು ..ನನಗೆ ಗೊತ್ತಿಲ್ಲ… ಈ ಕ್ಷಣ ಹೊಳೆದ ಮಾತುಗಳಿವು.     ಬಹಳಷ್ಟು ಸಂದರ್ಭಗಳಲ್ಲಿ ಬಹಳಷ್ಟು ಜನರ ಮೌನವನ್ನು ದೌರ್ಬಲ್ಯ ಎಂದೇ ಪರಿಗಣಿಸಿ ಇನ್ನಷ್ಟು ತುಳಿಯಲು ಸಮಾಜದಲ್ಲಿ , ವ್ಯವಸ್ಥೆಯಲ್ಲಿ ಪ್ರಯತ್ನಗಳು ನಡೆದಿವೆ , ನಡೆಯುತ್ತಲೇ ಇವೆ ..     ಮೌನ ಕಾಯುತ್ತಿರುತ್ತದೆ ..ಒಳಗೊಳಗೇ ಮಾಗುತ್ತಿರುತ್ತದೆ ..ಒಡಕು ಪಾತ್ರಗಳೆಲ್ಲ ಸದ್ದು ಮಾಡಿ ಮಾಡಿ ಸೋತು ಸುಮ್ಮನಾದ ನಂತರ ಮೌನ ಮಾತಾಗುತ್ತದೆ..           ನುಡಿದರೆ ಮುತ್ತಿನ ಹಾರದಂತಿರಬೇಕು ಎಂದು […]

ಸ್ವಾತಂತ್ರ್ಯದ ಪೂರ್ವಕಾಲದಲ್ಲಿಯೇ ಆರಂಭಗೊಂಡ ‘ಜೈಹಿಂದ್ ಎಜ್ಯುಕೇಶನ್ ಸೊಸೈಟಿ’ ಎಂಬ ಶಿಕ್ಷಣ ಸಂಸ್ಥೆಯು ೧೮೯೬ ರಲ್ಲಿ ಸ್ಥಾಪಿಸಿದ ‘ಎಡ್ವರ್ಡ್ ಹೈಸ್ಕೂಲು’ ಗುಣಮಟ್ಟದ ಶಿಕ್ಷಣಕ್ಕೆ ಜಿಲ್ಲೆಯಾದ್ಯಂತ ಹೆಸರುವಾಸಿಯಾಗಿತ್ತು

ರಂಗ ರಂಗೋಲಿ
ಹೊರಗಡೆ ಕಪ್ಪು ಇರುಳು. ತೆಂಗಿನಪಾತಿ ಕಪ್ಪಾಗಿ ಅದರ ಹಿಂಬದಿ ಚಿತ್ತಾರಗೊಂಡು ಅರಳಿದ ಚಂದಿರನನ್ನು ಆ ಮರದ ಕಿಟಕಿಯ ಸರಳುಗಳ ನಡುವಿನಿಂದ ನೋಡುತ್ತಲೇ ಇದ್ದೆ. ಮಲಗಿದ ಭಂಗಿ ಸಡಿಲಿಸಿ ಅದೇ ಹಳೆಯ ದೊಡ್ಡ ಮಂಚದ ಮೇಲೆ ಕೂತು ಕಣ್ಣಬೊಗಸೆಗೆ ದಕ್ಕುವಷ್ಟು ದೂರ ದೃಷ್ಟಿ ನೆಟ್ಟರೆ, ಎದೆಗಿಳಿಯುತ್ತಿದ್ದ ಚಂದ್ರಿಕೆಯ ಒಡಲ ರಾಗ ತುಂಡಾಗಿ ಬಿಡುವ ಅಂಜಿಕೆ

Back To Top