ಅಂಕಣ ಬರಹ ಕಬ್ಬಿಗರ ಅಬ್ಬಿ ಕಾವ್ಯೋದ್ಭವ “ಗುರುಗಳೇ, ನನಗೆ ಸಂಗೀತ ಕಲಿಯಬೇಕು! ಕಲಿಸುವಿರಾ..” ಅಲ್ಲಲ್ಲಿ ಹರಿದರೂ ತಕ್ಕಮಟ್ಟಿಗೆ ಒಪ್ಪವಾಗಿದ್ದ ಅಂಗಿ, ಖಾಕಿ ಚಡ್ಡಿ ಧರಿಸಿದ ಹುಡುಗ, ‘ಧ್ರುಪದ್ ಗಂಧರ್ವ’ ಮನೆ ತಲಪಿದ್ದ. ಮನೆಯ ಬಂಧನ ಬಿಟ್ಟು, ಎರಡು ದಿನ, ಮೂರು ರಾತ್ರೆ ರೈಲು ಯಾತ್ರೆ ಮಾಡಿದಾಗ, ಹೊತ್ತು ತಂದದ್ದು ಕಪ್ಪು ಕಣ್ಣುಗಳ ತುಂಬಿದ ಕನಸು ಮಾತ್ರ. ಕಣ್ಣಲ್ಲಿ ಕಣ್ಣಿಟ್ಟು ಒಳಗಿನ ಭಾಷೆಯನ್ನು ಅರ್ಥ ಮಾಡಿಕೊಂಡವರಂತೆ ಗುರುಗಳು ಒಪ್ಪಿಕೊಂಡರು. ಗುರುಗಳ ಮನೆಯಲ್ಲಿಯೇ ವಾಸ. ಬೆಳಗ್ಗೆ ಗಡಿಯಾರದ ಲೋಲಕ ಢಣ್ […]
ಅಂಕಣ ಬರಹ ರುದ್ರಭೂಮಿಯಲೇ ಜ್ಞಾನೋದಯ ಅಲ್ಲಮಪ್ರಭು ಭಾರತೀಯ ದಾರ್ಶನಿಕ ಚರಿತ್ರೆಯಲ್ಲಿ ಬಹಳ ದೊಡ್ಡ ಹೆಸರು. ಹನ್ನೆರಡನೆಯ ಶತಮಾನದ ಬಹುದೊಡ್ಡ ತಾತ್ವಿಕ ವಚನಕಾರ. ಇವನಷ್ಟು ನಿಖರ, ನೇರ ಮತ್ತು ಸ್ಪಷ್ಟವಾಗಿ ತಾತ್ವಿಕ ಸಂಘರ್ಷಕ್ಕೆ ನಿಲ್ಲುವ ಮತ್ತೊಬ್ಬನನ್ನು ಹುಡುಕಿದರೂ ವಚನಕಾರರಲ್ಲಿ ಸಿಕ್ಕುವುದು ಬಹಳ ಕಷ್ಟ ಮತ್ತು ವಿರಳ. ಸಾಮಾಜಿಕ ಸುಧಾರಣೆಯೇ ಪ್ರಮುಖ ಧ್ಯೇಯವಾಗಿ ನಡೆದ ಚಳುವಳಿಯ ಉಪೋತ್ಪನ್ನವಾಗಿ ಹುಟ್ಟಿದವು ವಚನಗಳು. ಕೊಂಡುಗೊಳಿ ಕೇಶಿರಾಜನಿಂದ ಕೊನೆ ಕೊನೆಯ ವಚನಕಾರನೆಂದು ಕರೆವುದಾದರೆ ಅಗ್ಘವಣಿಯ ಹಂಪಯ್ಯನವರೆಗೂ ಈ ವಚನ ಚಳುವಳಿಯ ಸಾಮಾಜಿಕ, ರಾಜಕೀಯ, […]
ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….8 ನಾನೂ ಶಾಲೆಗೆ ಸೇರಿದೆ… ಅಪ್ಪನಿಗೆ ಅಲಗೇರಿಯಿಂದ ಕುಮಟಾ ತಾಲೂಕಿನ ಹನೇಹಳ್ಳಿ ಶಾಲೆಗೆ ವರ್ಗವಾಯಿತು. ಮತ್ತೆ ನಾವು ನಮ್ಮ ತಾಯಿಯ ತೌರೂರು ನಾಡುಮಾಸ್ಕೇರಿಗೆ ಬಂದು ನೆಲೆಸಬೇಕಾಯಿತು. ನಾಡು ಮಾಸ್ಕೇರಿಯಲ್ಲಿ ಆಗ ನಮ್ಮ ಜಾತಿಯ ಜನಕ್ಕೆ ಸ್ವಂತ ಭೂಮಿಯೆಂಬುದೇ ಇರಲಿಲ್ಲ. ಕೆಲವು ಕುಟುಂಬಗಳು ನಾಡವರ ಜಮೀನಿನ ಒಂದು ಮೂಲೆಯಲ್ಲಿ ಆಶ್ರಯ ಪಡೆದು ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದರು. ನಾಡುಮಾಸ್ಕೇರಿಯಲ್ಲಿ ನಾಡವರು ಇದ್ದುದರಲ್ಲಿಯೇ ಸ್ಥಿತಿವಂತರಾಗಿದ್ದರು. ಎಲ್ಲ ಕುಟುಂಬಗಳಿಗೂ ಅಲ್ಪಸ್ವಲ್ಪ ಬೇಸಾಯದ ಭೂಮಿಯೂ […]
ಅಂಕಣಬರಹ ಗೊಂಬೆಗೆ ತೊಡಿಸಿದ ಬಣ್ಣದ ಅಂಗಿ ಅಳು ತಡೆಯದಾದಾಗ ಆಸರೆಯಾಗುತ್ತಿದ್ದದ್ದು ಒಂದೋ ಅಜ್ಜಿಯ ಮಡಿಲು, ಇಲ್ಲವಾದರೆ ಆ ತಾಯಿಯಂತಹ ಮರದ ತಣಿಲು. ದಪ್ಪದಪ್ಪದ ಎರಡು ಕಾಂಡಗಳು ಬುಡವೊಂದೇ,ಹೆಗಲೆರಡು ಎಂಬ ಹಾಗೆ ನಿಂತಿದ್ದ ಆಲದ ಮರ. ಅದನ್ನು ಅಪ್ಪಿ ಹಿಡಿದು ನಿಂತರೆ ಎಂತಹಾ ದುಗುಡ,ಭಯ,ದುಃಖವನ್ನೂ ಅದು ಹೀರಿ ನಾನು ಹಗುರವಾಗುತ್ತಿದ್ದೆ. ಯಾವುದೋ ಜನ್ಮಾಂತರದ ಬಂಧದ ಸಾಕ್ಷಿಯೇನೋ ಎಂಬಂತೆ ಮುಖ್ಯ ರಸ್ತೆಯ ಒಂದು ಬದಿಗೆ ಉದ್ದದ ನೆರಳು ಹಾಸಿ ನಿಂತ ಆಲದ ಮರವದು. ಅದರ ಪಕ್ಕದಲ್ಲೇ ತುಸು ಅಂತರ ಕಾಪಾಡಿಕೊಂಡು […]
ಅಂಕಣ ಬರಹ ಸಂಕ್ರಾಂತಿ ಬಂತೋ ರತ್ತೋ ರತ್ತೋ ಸಂಕ್ರಾಂತಿ ಎಂದ ಕೂಡಲೇ ನೆನಪಾಗುವುದೇ ಚಂದದ ರೇಷಿಮೆ ಲಂಗ ತೊಟ್ಟು ಉದ್ದ ಜಡೆ ಹೆಣೆದುಕೊಂಡು, ಘಮ ಘಮ ಮಲ್ಲಿಗೆ ಹೂ ಮುಡಿದು, ಏನೆಲ್ಲ ಸಾಧ್ಯವಿರುತ್ತದೋ ಅಷ್ಟೆಲ್ಲಾ ಅಲಂಕಾರ ಮಾಡಿಕೊಂಡು ನೆರೆಹೊರೆಯವರಿಗೆ ಎಳ್ಳು ಬೆಲ್ಲ ಹಂಚಲು ಹೊರಡುತ್ತಿದ್ದದ್ದು… ಸಂಕ್ರಾಂತಿ ಹಬ್ಬದ ಪ್ರಮುಖ ಆಕರ್ಷಣೆಯೇ ಇದಾಗಿರುತ್ತಿತ್ತಾದರೂ ಸಂಕ್ರಾಂತಿಗಿರುವ ಆಕರ್ಷಣೆಗಳ ದೊಡ್ಡಪಟ್ಟಿಯೂ ಇರುತ್ತಿತ್ತು. ಸಂಕ್ರಾಂತಿ ಹೆಣ್ಣುಮಕ್ಕಳ ಹಬ್ಬ ಎನಿಸಿಬಿಡುತ್ತಿತ್ತು. ಅದೆಷ್ಟೋ ದಿನಗಳ ತಯಾರಿ ಈ ಹಬ್ಬಕ್ಕೆ. ಹದಿನೈದು ದಿನಗಳಿಗೆ ಮುಂಚೆಯೇ ಎಳ್ಳು-ಬೆಲ್ಲ ತಯಾರಿಸಲು […]
ಸಂಕ್ರಾಂತಿ ಕಾವ್ಯ ಸುಗ್ಗಿ ನಂದಿನಿ ಹೆದ್ದುರ್ಗ ನನ್ನದೆಯ ಗಾಯಗಳಾವೂ ನನ್ನವಲ್ಲ..ನೀನದರ ಒಡೆಯ..ನನ್ನ ವಾಸ್ತವ ,ಭ್ರಮೆ, ಕಲ್ಪನೆಗಳೂನಿನ್ನವೇ ಕೊಡುಗೆ..ನೊಂದು ನೋಯಿಸಿದ್ದಾದ ಮೇಲೆಒಂದು ಅಂತರದಲಿ ನೀ ನಿಂತು ನೋಡುವೆ.ಈ ಕ್ರೂರ ಮೌನದೊಳಗೆಎಷ್ಟೊಂದು ಪ್ರಶ್ನೆಗಳು.. ಬಗೆದು ತೋರಬಹುದೇ ಒಲವ ಈ ಬಗೆಯನ್ನು?ಹಗಲು ಹೊಳೆಯುವುದೆ ಇರುಳ ಈ ಹುಣ್ಣಿಮೆಗೆ?ಎದೆಯೊಳಗೆ ನೋವು ಉಲಿಯುವ ಹಕ್ಕಿಗೆ ಹೆಸರಿದೆಯೇ?ನಾನು ಬರುವ ಮೊದಲು ಎಷ್ಟೊಂದು ಸುಖಿ ನೀನು!! ಮಾತು ಮಹಲುಗಳಿಗಿಲ್ಲಿ ನೋವ ಅಡಿಪಾಯಹೊರಡಲೇ ಎನುವಾಗಷ್ಟೇ ನರಳು ನಿಟ್ಟುಸಿರುಎರಡು ಹೂವೆಸಳು,ಬೆಳುದಿಂಗಳು,ಎದೆಯ ಆಲಾಪಕ್ಕೂಬಿಡುವಿಲ್ಲ ನಿನಗೆ ಶೂನ್ಯ ಹುಟ್ಟಿಸಿದ್ದೂ ನೀನೇ.ಕೋಲಾಹಲಕ್ಕೆ ಕಾರಣವೂ ನೀನೇನಾನು […]
ಅಂಕಣ ಬರಹ ಮಹಿಳೆಯರು ಹೊರ ಜಗತ್ತಿಗೆ ತೆರೆದುಕೊಂಡಾಗಿದೆ ದೀಪ್ತಿ ಭದ್ರಾವತಿ ಪರಿಚಯ: ದೀಪ್ತಿ ಭದ್ರಾವತಿ ಕನ್ನಡದ ಕತೆಗಾರ್ತಿ. ಮೂಲತಃ ದಕ್ಷಿಣ ಕನ್ನಡದವರಾದರು, ದೀಪ್ತಿ ನೆಲೆ ನಿಂತದ್ದು ಭದ್ರಾವತಿಯಲ್ಲಿ. ಆರೋಗ್ಯ ಇಲಾಖೆಯಲ್ಲಿ ನೌಕರಿ. ಕವಿತೆ ಬರೆಯುತ್ತಿದ್ದ ದೀಪ್ತಿ ಆರಂಭದಲ್ಲಿ ಕಾಗದದ ಕುದುರೆ, ಗ್ರೀನ್ ರೂಂನಲ್ಲಿ ಎಂಬ ಎರಡು ಕವಿತಾ ಸಂಕಲನ ಪ್ರಕಟಿಸಿದರು. ಆ ಬದಿಯ ಹೂ, ಗೀರು ಇವರ ಕಥಾ ಸಂಕಲನಗಳು. ಆ ಬದಿಯ ಹೂ ಸಂಕಲನಕ್ಕೆಕತೆಗಳಿಗೆ ಮಾಸ್ತಿ ಕಥಾ ಪ್ರಶಸ್ತಿ ಪಡೆದವರು, ಗೀರು ಕಥಾ ಸಂಕಲನಕ್ಕೆ ಪಾಟೀಲ […]
ಅಂಕಣ ಬರಹ ವಸಾಹತುವಿನಿಂದ ಬಿಡುಗಡೆಗೆ ಭಾಷೆ ಕೊಟ್ಟವ ( ಬಸವಣ್ಣನವರ ಒಂದು ವಚನದ ಭಾಷಿಕ ವಿವೇಚನೆ ) ಕನ್ನಡ ಸಾಹಿತ್ಯ ಸಂಸ್ಕೃತದ ಪ್ರಭಾವಕ್ಕೆ ಸಿಕ್ಕು ವಸ್ತು, ರೂಪ, ಅಭಿವ್ಯಕ್ತಿಯ ಕ್ರಮದಲ್ಲಿ ಬೆಳವಣಿಗೆ ಹೊಂದಿ ಜನಸಾಮಾನ್ಯರಿಂದ ಬಹುದೂರ ನಿಂತಿದ್ದುದು ಎಲ್ಲಕಾಲದಲ್ಲಿಯೂ ಸತ್ಯವೇ ಸರಿ. ಹನ್ನೆರಡನೆಯ ಶತಮಾನದ ವಚನ ಚಳುವಳಿಯ ಸಾಹಿತ್ಯ ರೂಪ ಮತ್ತು ಅದರೊಳಗಿನ ಸಂವೇದನೆಗಳು ನೆಲದ ಬೇಡಿಕೆ, ಸದ್ಯದ ತುರ್ತಿಗೆ ಸ್ಪಂದಿಸಿ ಜನಸಾಮಾನ್ಯರ ನಾಡಿಮಿಡಿತಕ್ಕೆ ಸ್ಪಂದಿಸಿದ್ದು. ಸಂಸ್ಕೃತದ ಮಾರ್ಗ ಸಂಪ್ರದಾಯಕ್ಕೆ, ಮಹಾಕಾವ್ಯ ಪರಂಪರೆಗೆ ವಿರುದ್ಧವಾಗಿ ತನ್ನದೇ […]
ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….7 ಅಲಗೇರಿಯಲ್ಲಿ ಬೆಂಕಿ ಮತ್ತು ಮೊಲ ನಾಗಮ್ಮಜ್ಜಿಯ ಅಂತ್ಯಸಂಸ್ಕಾರ ಅನಿವಾರ್ಯವಾಗಿ ಕಾರವಾರದಲ್ಲಿ ನಡೆದುಹೋಯಿತು. ಕ್ರಿಯಾ ಕರ್ಮಗಳನ್ನು ಪೂರ್ಣಗೊಳಿಸುವವರೆಗೆ ಊರಿಗೆ ಮರಳುವ ಹಾಗೆಯೂ ಇರಲಿಲ್ಲ. ತಾತ್ಕಾಲಿಕವಾಗಿ ನಮ್ಮ ಪರಿವಾರ ಕಾರವಾರ ತಾಲೂಕಿನ ಅರಗಾ ಎಂಬಲ್ಲಿ ಶಾನುಭೋಗಿಕೆಯಲ್ಲಿರುವ ನಾರಾಯಣ ಆಗೇರ ಎಂಬ ಜಾತಿ ಬಂಧುವೊಬ್ಬರ ಮನೆಯಲ್ಲಿ ವಾಸ್ತವ್ಯ ಮಾಡಬೇಕಾಯಿತು. ಶಾನುಭೋಗರ ಪತ್ನಿ (ಅವಳ ಹೆಸರೂ ನಾಗಮ್ಮ) ನನ್ನ ಯೋಗಕ್ಷೇಮಕ್ಕೆ ನಿಂತಳು. ತಬ್ಬಲಿ ತನದಲ್ಲಿ ನೊಂದು ಹಾಸಿಗೆ ಹಿಡಿದ ಅವ್ವ, […]
ಅಂಕಣ ಬರಹ ಶಾಲಾರಂಗದೊಳಗೊಂದು ಕೋಲಾಟ ಠಣ್…ಠಣ್… ಠಣ್.. ಗಂಟೆಯ ಸದ್ದು ಒಂಭತ್ತು ಸಾರಿ ಕೇಳಿಸಿತಾ! ಹಾಂ!! ಅದು ನಮ್ಮ ಶಾಲೆಯ ಬೆಳಗಿನ ಗಂಟೆ. ನನ್ನಜ್ಜಿಯ ಹಣೆಯ ನಡುವಿನ ಕುಂಕುಮದ ಬೊಟ್ಟಿನಂತೆ ನಮ್ಮ ಊರಿನ ಕೇಂದ್ರ ಭಾಗದಲ್ಲಿ ಆಧಾರ ಸ್ತಂಭದಂತೆ ಕೂತಿತ್ತು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಹೌದು ಅದು ನಮ್ಮ ಶಾಲೆ. ನಮ್ಮ ಹಳ್ಳಿಯ ಶಾಲೆ. ಬಲಗಾಲಿಟ್ಟು ಒಳಗೆ ಬರಬೇಕು. ಮೊದಲು ಕಾಣಿಸುವುದೇ ಬಿಳೀ ಕಂಬದ ಧ್ವಜಸ್ತಂಭ. ಅದರ ಬುಡದಲ್ಲಿ ಕಟ್ಟೆ . ಅದರ ಹಿಂದೆ, […]