Category: ಅಂಕಣ

ಅಂಕಣ

ಅಂಕಣ ಬರಹ ಕಳೆದುಕೊಂಡದ್ದು ಸಮಯವಾದರೆ ಹುಡುಕಲೂ ಆಗದು        (ಟೈಂ ಬ್ಯಾಂಕ್ ಅಕೌಂಟ್ ಮೆಂಟೇನನ್ಸ್- ಹೀಗೆ ಮಾಡಿ ನೋಡಿ )           ಟೈಂ ನೋಡೋಕೂ ಟೈಂ ಇಲ್ಲ. ಎಲ್ಲಾ ಟೈಮಿನೊಳಗೂ ಮೈ ತುಂಬ ಕೆಲಸ. ಎಲ್ಲಿ ಕುಂತರೂ ಕೆಲಸ ಕೈ ಮಾಡಿ  ಕರಿತಾವ..ಮೈ ಕೆರೆದುಕೊಳ್ಳಲೂ ಪುರುಸೊತ್ತಿಲ್ಲದಂಗ ಕೆಲಸ ಮಾಡಿದರೂ ಕೆಲಸ ಮುಗಿತಿಲ್ಲ. ಆದರೂ ಮಾಡಿದ ಕೆಲಸ ಒಂದೂ  ನೆಟ್ಟಗಾಗ್ತಿಲ್ಲ ಎನ್ನುವದು ಅನೇಕರ ಗೊಣಗಾಟ. ಇಂಥ ಟೈಮಿನೊಳಗ ಕನಸು ಬೇರೆ ಕಾಡ್ತಾವ. ಕನಸು ಕಾಣಬೇಕೋ ನೆಟ್ಟಗಾಗುವಂಗ ಕೆಲಸ ಮಾಡೂ […]

ಅಂಕಣ ಬರಹ ಸಾಹಿತ್ಯಿಕ ರಾಜಕಾರಣ ಸಮಾಜಕ್ಕೆ ಅತೀ ಹೆಚ್ಚು ಅಪಾಯಕಾರಿ ಕೆ.ಬಿ.ವೀರಲಿಂಗನಗೌಡ್ರ ಪರಿಚಯ ಬಾಗಲಕೋಟ ಜಿಲ್ಲೆ, ಬಾದಾಮಿ ತಾಲೂಕಿನ ನಂದಿಕೇಶ್ವರ ಸ್ವಗ್ರಾಮ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(ಶಿರ್ಸಿ) ಪಟ್ಟಣದಲ್ಲಿ ಚಿತ್ರಕಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವೆ. ಪ್ರಕಟಿತ ಕೃತಿಗಳು ‘ಅರಿವಿನ ಹರಿಗೋಲು’ (ಕವನ ಸಂಕಲನ), ‘ಅವಳು ಮಳೆಯಾಗಲಿ’ (ಕಥಾ ಸಂಕಲನ), ಘಟಸರ್ಪ (ಸಾಮಾಜಿಕ ನಾಟಕ), ‘ಸಾವಿನಧ್ಯಾನ’ (ಲೇಖನಗಳ ಸಂಕಲನ), ‘ಮೌನ’ (ಸಂಪಾದಿತ) ಸಂದರ್ಶನ ಪ್ರಶ್ನೆ  :ನೀವು ಚಿತ್ರ ಮತ್ತು ಕವಿತೆಗಳನ್ನು ಏಕೆ ಬರೆಯುತ್ತಿರಿ? ಉತ್ತರ           :ನನ್ನೊಳಗೆ ನುಸುಳುವ […]

ಅಂಕಣ ಬರಹ ಕನಸಿನೂರಿನ ಕಿಟ್ಟಣ್ಣ ಕನಸಿನೂರಿನ ಕಿಟ್ಟಣ್ಣ ( ಮಕ್ಕಳ ಕಾದಂಬರಿ)ಮಲೆಯಾಳ ಮೂಲ : ಇ.ಪಿ.ಪವಿತ್ರನ್ ಕನ್ನಡಕ್ಕೆ : ಕೆ.ಪ್ರಭಾಕರನ್: ದೇಸಿ ಪುಸ್ತಕಪ್ರಕಟಣೆಯ ವರ್ಷ :೨೦೧೫ಬೆಲೆ :ರೂ.೮೦ಪುಟಗಳು :೧೩೮ ಕನ್ನಡದಲ್ಲಿ ಅತಿ ವಿರಳವೆಂದು ಹೇಳಬಹುದಾದ ಮಕ್ಕಳ ಕಾದಂಬರಿ ಪ್ರಕಾರಕ್ಕೆ ಕೊಡುಗೆಯಾಗಿ ಈ ಕಾದಂಬರಿ ಅನುವಾದವಾಗಿ ಬಂದಿದೆ ಎನ್ನಬಹುದು.  ಶೀರ್ಷಿಕೆಯೇ ಸೂಚಿಸುವಂತೆ ಕಿಟ್ಟಣ್ಣ ಈ ಕಥೆಯ ನಾಯಕ. ಕನಸಿನೂರು ಎಂಬ ಪುಟ್ಟ ಹಳ್ಳಿಯ ಮಧ್ಯಮ ವರ್ಗದ ಜಮೀನ್ದಾರಿ ಕುಟುಂಬವೊಂದರಲ್ಲಿ ಪುರಾಣದ ಕೃಷ್ಣನಂತೆ ಜಡಿಮಳೆಯ ಆರ್ಭಟದ ನಡುವೆ ಹುಟ್ಟುವ ಕಿಟ್ಟಣ್ಣ […]

ಅಂಕಣ ಬರಹ ಸಂತೆಯ ಗೌಜು ತರೀಕೆರೆಯಲ್ಲಿ ಸಂತೆ ಸೇರುವ ಜಾಗಕ್ಕೆ ಸಮೀಪದಲ್ಲಿ ನಮ್ಮ ಮನೆಯಿತ್ತು. ಪ್ರತಿ ಶುಕ್ರವಾರ ಎಬ್ಬಿಸುತ್ತಿದ್ದುದು ಮಸೀದಿಯ ಬಾಂಗಲ್ಲ, ಗುಡಿಯ ಸುಪ್ರಭಾತವಲ್ಲ, ಸಂತೆಗೌಜು. ಇಂಪಾದ ಆ ಗುಜುಗುಜು ನಾದ ಭಾವಕೋಶದಲ್ಲಿ ಈಗಲೂ ಉಳಿದಿದೆ. ಎಂತಲೇ ನನಗೆ ‘ಸಂತೆಯೊಳಗೊಂದು ಮನೆಯ ಮಾಡಿ’ ವಚನ ಓದುವಾಗ ಕೆಣಕಿದಂತಾಗುತ್ತದೆ. ಅಕ್ಕ ‘ಶಬ್ದಕ್ಕೆ ನಾಚಿದೊಡೆ ಎಂತಯ್ಯಾ?’ ಎಂದು ಪ್ರಶ್ನಿಸುತ್ತಾಳೆ. ಉತ್ತರ ಪ್ರಶ್ನೆಯೊಳಗೇ ಇದೆ-ನಾವು ಬದುಕುವ ಲೋಕಪರಿಸರ ಸಂತೆಯಂತಿದೆ; ಅಲ್ಲಿ ಸದ್ದಿರುವುದು ಸಹಜವೆಂದು. ಹಾಗಾದರೆ ಈ ಕಿರಿಕಿರಿಗೆ ಪರಿಹಾರ, ಸದ್ದಿರದ ಕಡೆ […]

ಕಬ್ಬಿಗರ ಅಬ್ಬಿ.-13 ಗಗನ ಚುಂಬಿ ಮತ್ತು ಲಿಫ್ಟು ಸರ್ಗೇಯಿ ಬೂಬ್ಕಾ ,ಎಂಬ ಸೋವಿಯತ್ ಯುನಿಯನ್ ನ ಹುಡುಗ ಉದ್ದ ಕೋಲು ಹಿಡಿದು ಪೋಲ್ ವಾಲ್ಟ್ ಹಾರಲು ಸಿದ್ಧನಾಗಿದ್ದ.  ಇದೊಂದು ಥರದ ಹೈ ಜಂಪ್ ಸ್ಪರ್ಧೆ. ಈ ಆಟದಲ್ಲಿ ಒಂದು ಕೋಲಿನ ಸಹಾಯದಿಂದ ಜಿಗಿಯಲಾಗುತ್ತೆ, ಆ ಕೋಲನ್ನು ಹಾರುಗೋಲು ಎಂದು ಕರೆಯೋಣ. ಹೈಜಂಪ್ ಮಾಡೋವಾಗ ಮೊದಲೇ ನಿರ್ಧರಿಸಿದ ಎತ್ತರದಲ್ಲಿ ನೆಲಕ್ಕೆ ಸಮಾನಾಂತರವಾಗಿ ಒಂದು ಕೋಲು ( ಅಳೆಗೋಲು) ಇಟ್ಟಿರುತ್ತಾರೆ. ಉದ್ದದ ಹಾರುಗೋಲು ಹಿಡಿದು, ಓಡುತ್ತಾ ಬಂದು, ಕೋಲನ್ನು ಹೈ […]

ಅಂಕಣ ಬರಹ ರಾತ್ರಿಬಸ್ಸುಗಳೊಂದಿಗೆ ಮಾತುಕತೆ ರಾತ್ರಿಬಸ್ಸಿನಲ್ಲಿ ಎಷ್ಟೆಲ್ಲ ಕನಸುಗಳು ಪಯಣಿಸುತ್ತಿರುತ್ತವೆ; ತಲುಪಬೇಕಾದ ಸ್ಥಳವನ್ನು ಗಮನದಲ್ಲಿಟ್ಟುಕೊಂಡು ಹವಾಮಾನಕ್ಕೆ ತಕ್ಕ ಬಟ್ಟೆ ತೊಟ್ಟು ಬೆಳಗೆನ್ನುವ ಬೆರಗಿಗೆ ಕಣ್ಣುಬಿಡಲು ತಯಾರಾಗಿ ಹೊರಟುನಿಂತಿರುತ್ತವೆ! ಬಗಲಲ್ಲೊಂದು ಹಗುರವಾದ ಪರ್ಸು, ಕೈಯಲ್ಲೊಂದು ಭಾರವಾದ ಬ್ಯಾಗು, ಕೂದಲನ್ನು ಮೇಲೆತ್ತಿ ಕಟ್ಟಿದ ರಬ್ಬರ್ ಬ್ಯಾಂಡು ಎಲ್ಲವೂ ಆ ಕನಸುಗಳೊಂದಿಗೆ ಹೆಜ್ಜೆಹಾಕುತ್ತಿರುತ್ತವೆ. ಅವಸರದಲ್ಲಿ ಮನೆಬಿಟ್ಟ ಕನಸುಗಳ ಕಣ್ಣಿನ ಕನ್ನಡಕ, ಕೈಗೊಂದು ವಾಚು, ಬಿಸಿನೀರಿನ ಬಾಟಲಿಗಳೆಲ್ಲವೂ ಆ ಪಯಣದ ಪಾತ್ರಧಾರಿಗಳಂತೆ ಪಾಲ್ಗೊಳ್ಳುತ್ತವೆ. ಅರಿವಿಗೇ ಬಾರದಂತೆ ಬದುಕಿನ ಅದ್ಯಾವುದೋ ಕಾಲಘಟ್ಟದಲ್ಲಿ ಹುಟ್ಟಿಕೊಂಡ ಆ […]

ಅಂಕಣಬರಹ ಅದುಮಿಟ್ಟ ಮನದ ಮಾತುಗಳು ಕವಿತೆಗಳಾದಾಗ ಪುಸ್ತಕ- ಸಂತೆ ಸರಕುಕವಿ- ಬಿ ಎ ಮಮತಾ ಅರಸೀಕೆರೆಪ್ರಕಾಶನ- ನಾಕುತಂತಿ  ಬೆಲೆ- ೮೦/-           ಸಿದ್ಧ ಸೂತ್ರ ಬದಲಾಗಬೇಕುಅಜ್ಜಿ ಕಥೆಯಲ್ಲಿಅರಿವು ಜೊತೆಯಾಗಬೇಕುಹೊಸ ಕಥೆಗಳ ಬರೆಯಬೇಕುಅಕ್ಷರ ಲೋಕದಲಿಅಕ್ಷರ ಲೋಕದಲ್ಲಿ ಬದಲಾವಣೆ ಬಯಸುವ ಮಮತಾ ಆಡಲೇ ಬೇಕಾದ ಮಾತುಗಳೊಂದಿಗೆ ನಮ್ಮೆದುರಿಗಿದ್ದಾಳೆ.  ಮಮತಾ ಅಂದರೇ ಹಾಗೆ. ಹೇಳಬೇಕಾದುದನ್ನು ಮನದೊಳಗೇ ಇಟ್ಟುಕೊಂಡಿರುವವಳಲ್ಲ. ಹೇಳಬೇಕಾದುದ್ದನ್ನು ಥಟ್ಟನೆ ಹೇಳಿಬಿಡುವವಳು. ಆ ಮಾತಿನಿಂದ ಏನಾದರೂ ವ್ಯತಿರಿಕ್ತವಾದರೆ ನಂತರದ ಪರಿಣಾಮಗಳ ಬಗ್ಗೆ ಕೊನೆಯಲ್ಲಿ ಯೋಚಿಸಿದರಾಯಿತು ಎಂದುಕೊಂಡಿರುವವಳು. […]

ಪಿಂಜರ್ ಶೋಷಣೆಗೊಳಗಾಗಿ ಅಸ್ಥಿಪಂಜರಗಳಾಗುವ ಹೆಣ್ಣುಮಕ್ಕಳ ಕಥೆ ಅಮೃತಾ ಪ್ರೀತಮ್ ಪಿಂಜರ್ಮೂಲ : ಅಮೃತಾ ಪ್ರೀತಮ್ಕನ್ನಡಕ್ಕೆ : ಎಲ್.ಸಿ.ಸುಮಿತ್ರಾಪ್ರ : ಅಂಕಿತ ಪುಸ್ತಕಪ್ರ.ವರ್ಷ :೨೦೦೬ಬೆಲೆ : ರೂ.೬೦ಪುಟಗಳು : ೧೦೪          ದೇಶ ವಿಭಜನೆಯ ಕಾಲದಲ್ಲಿ  ಶೋಷಣೆಗೊಳಗಾದ ಅಮಾಯಕ ಹೆಣ್ಣು ಮಕ್ಕಳ ಕರುಣ ಕಥೆಯಿದು. ಪೂರೋ ಎನ್ನುವವಳು ಇಲ್ಲಿ ಕಥಾ ನಾಯಕಿ.       ತನ್ನ ಇಬ್ಬರು ಸಹೋದರಿಯರು ಮತ್ತು ಒಬ್ಬ ಸಹೋದರನಿರುವ ಒಂದು ಸುಖಿ ಕುಟುಂಬದಲ್ಲಿ ಹಾಯಾಗಿ ಬೆಳೆದ ಹುಡುಗಿ ಪೂರೊ. ಸೌಮ್ಯ ಸ್ವಭಾವದವಳೂ ವಿಧೇಯಳೂ ಆದ ಅವಳು […]

ಶ್ರೀಮಂತ ಅನುಭವಗಳ ಸಹಜ ಒಡಂಬಡಿಕೆ ಸುಧಾ ಆಡುಕಳ ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳದವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಶಿಕ್ಷಕಿಯಾಗಿದ್ದಾರೆ. ಸಾಹಿತ್ಯ ಕೃಷಿಯಲ್ಲಿ ಆಸಕ್ತಿ ಇರುವ ಕಾರಣ ರಾಧಾ, ನೃತ್ಯಗಾಥಾ, ಮಕ್ಕಳ ರವೀಂದ್ರ, ನಾರಸಿಂಹ, ಮಕ್ಕಳ ರಾಮಾಯಣ, ಕನಕ-ಕೃಷ್ಣ ಮೊದಲಾದ ನಾಟಕಗಳನ್ನು ರಚಿಸಿದ್ದಾರೆ. ರವೀಂದ್ರ ನಾಥ ಟ್ಯಾಗೋರರ ಚಿತ್ರಾ, ಕೆಂಪುಕಣಗಿಲೆ, ಅವಳ ಕಾಗದ ಮೊದಲಾದ ನಾಟಕಗಳನ್ನು ಕನ್ನಡಕ್ಕೆ ರೂಪಾಂತರಿಸಿದ್ದಾರೆ. ‘ಬಕುಲದ ಬಾಗಿಲಿನಿಂದ’ ಎಂಬ ಅಂಕಣ ಬರಹ ಜಿ.ಎನ್ ಮೋಹನ್ ಸಾರಥ್ಯದ “ಅವಧಿ” ಅಂತರ್ಜಾಲ ಪತ್ರಿಕೆಯಲ್ಲಿ ಪ್ರಕಟವಾಗುತ್ತಿತ್ತು. […]

ಅಂಕಣಬರಹ                             ಬದುಕಿನ ಏರಿಳಿತಗಳನು ಒಪ್ಪಿಕೊಳ್ಳುವುದು ಹೇಗೆ? ಬದುಕಿನ ರೀತಿಯೇ ಅಂಥದ್ದು. ಪ್ರತಿ ಕ್ಷಣವೂ ಹೊಸತನದಿಂದಲೇ ಕೂಡಿಕೊಂಡಿರುತ್ತದೆ.ಅದೆಷ್ಟೇ ಬೇಸರಗೊಂಡಿದ್ದರೂ ಮತ್ತೆ ಕುತೂಹಲದಿಂದ ಸೆಳೆದು ನಿಲ್ಲಿಸಬಲ್ಲ ಮಾಯಾಶಕ್ತಿ ಅದಕ್ಕಿದೆ. ರಾಶಿ ರಾಶಿ ಹೊಸ ಅನುಭವಗಳು ಮುಂದೆ ಕಾದಿವೆ ಎಂದು ಗೊತ್ತಿದ್ದರೂ ಕೆಲವೊಂದು ಸಲ ಕಷ್ಟದ ಸಾಲುಗಳು ಇನ್ನಿಲ್ಲದಂತೆ ಆವರಿಸಿ ಹಿಂಡಿ ಹಿಪ್ಪಿ ಮಾಡಿಬಿಡುತ್ತವೆ. ಪ್ರತಿ ಕಷ್ಟವೂ ವಿಶಿಷ್ಟತೆಯಿಂದ ಕಾಡುತ್ತದೆ. ಅನುಭವದ ಪಾಠವನ್ನು ಕಲಿಸಿಯೇ ಮುನ್ನಡೆಯುತ್ತದೆ. ಒಮ್ಮೊಮ್ಮೆ ದಡದಡನೆ ಓಡುವವರನ್ನು ಗಕ್ಕನೇ ನಿಲ್ಲಿಸಿ ಬಿಡುತ್ತದೆ. ಅಟ್ಟದ ಮೇಲೇರಿ ಕುಳಿತವರನ್ನು ಕೆಳಕ್ಕೆ […]

Back To Top