Category: ಅಂಕಣ

ಅಂಕಣ

ಉತ್ತಮರ ಸಂಗ ಎನಗಿತ್ತು ಸಲಹೊ

ಸಂಬಂಧಗಳು ಹುಟ್ಟಿಕೊಳ್ಳುವುದು ಅಂಥ ವಿಶೇಷವಾದ ಸಂಗತಿಯೇನಲ್ಲ. ಹುಟ್ಟಿಕೊಂಡ ಸಂಬಂಧಗಳು ಎಲ್ಲಿಯವರೆಗೆ ಬಾಳುತ್ತವೆ, ನಮ್ಮ ಬದುಕಿನ ಚಲನೆಯಲ್ಲಿ ಅವುಗಳ ಮಹತ್ವವೇನು, ಅವು ಯಾವ ಬಗೆಯ ಹೊಸತನವನ್ನು ನಮ್ಮ ಯೋಚನೆಗಳಿಗೆ ಒದಗಿಸಬಲ್ಲವು ಎನ್ನುವ ಆಧಾರದ ಮೇಲೆ ಸಂಬಂಧಗಳ ಗುಣಮಟ್ಟದ ನಿರ್ಧಾರವಾಗುತ್ತದೆ. ಈ ಗುಣಮಟ್ಟದ ಮೌಲ್ಯಮಾಪನ ಯಾವುದೇ ರೂಪ, ಆಕಾರ ಅಥವಾ ಹೆಸರುಗಳ ಪ್ರಾಪಂಚಿಕ ಚೌಕಟ್ಟಿನೊಳಗೆ ನಡೆಯುವಂಥದ್ದಲ್ಲ. ತಲೆದಿಂಬಿನ ಪಕ್ಕದಲ್ಲಿ ನೆಮ್ಮದಿಯಿಂದ ನಿದ್ರಿಸಿರುವ ಮೊಬೈಲ್ ನಲ್ಲಿ ಪಾಪ್ ಅಪ್ ಆಗುವ ಗುಡ್ ಮಾರ್ನಿಂಗ್ ಮೆಸೇಜುಗಳಲ್ಲಿ ಹದಿನೈದು ವರ್ಷಗಳ ನಂತರ ಮತ್ತೆ ಜೊತೆಯಾದ […]

ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್ ಬರೆದದ್ದು. ಒಮ್ಮೆ ಇಬ್ಬರು ಗೆಳೆಯರು ಕಾಡಿನಲ್ಲಿ ಹೋಗುತ್ತಿದ್ದರು. ಕಾಡು ಪ್ರಾಣಿಗಳು ಪೊದೆಗಳ ಹಿಂದೆ ಅಡಗಿರಬಹುದೆಂಬ  ಭಯದಿಂದ ಇಬ್ಬರೂ ಕೈ ಕೈ ಹಿಡಿದು ಸಾಗುತ್ತಿದ್ದರು.  ಕಾಡಿನ ದಾರಿಯನು ಗೆಲುವಾಗಿ ಸಾಗಲು ಅತಿ ಪ್ರೀತಿಯಿಂದ ಅದು ಇದು ಹರಟುತ್ತ ಸಾಗುತ್ತಿದ್ದರು. ಒಮ್ಮೆಲೇ ಕರಡಿ ಕಾಣಿಸಿಕೊಂಡಿತು.ಕರಡಿ ಇನ್ನೂ ದೂರದಲ್ಲಿತ್ತು. ಹಾಗಾಗಿ ಹೇಗಾದರೂ ಅದರಿಂದ ಬಚಾವಾಗಬೇಕೆಂದು ಉಪಾಯ ಮಾಡಲು ಅವರಿಬ್ಬರಿಗೂ ಕೆಲ […]

ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ

ಮಹಾಂತೇಶ್ ಪಲದಿನ್ನಿ ಮಿಥುನ ಶಿಲ್ಪಗಳ ಮೂಲಕ ಸಾಮಾಜಿಕ ಎಚ್ಚರಿಕೆ ನೀಡುವ  ಸಂದೇಶವೂ ಇದೆ ‘ * ಕಲಾವಿದ ಡಾ.ಮಹಾಂತೇಶ್ ಎಂ.ಪಲದಿನ್ನಿ . ವಿಜಾಪುರ ಇವರ ಊರು. ಹುಟ್ಟಿದ್ದು ೧೯೮೪. ಕಲಾ ಶಿಕ್ಷಣ ಕಲಿತದ್ದು ಹಂಪಿ ಕನ್ನಡ ವಿವಿ ಶಿಲ್ಪಕಲಾ ವಿಭಾಗದಲ್ಲಿ. ಬಿಎಫ್‌ಎ ಶಿಲ್ಪಕಲೆ ಕಲಿತ ಅವರು ಮೈಸೂರಿನ ಕಾವಾದಲ್ಲಿ ಮಾಸ್ಟರ್ ಆಫ್ ಆರ್ಟ ಕಲಿತರು. ನಂತರ ಶಿಲ್ಪಕಲೆಯಲ್ಲಿ ಎಂ.ಫಿಲ್.ಪದವಿ ಹಾಗೂ ಡಾಕ್ಟರೇಟ್ ಪದವಿಗಳನ್ನು ಹಂಪಿ ಕನ್ನಡ ವಿ.ವಿ.ಯಿಂದ ಪಡೆದರು. ಹಂಪಿ ವಿಶ್ವ ವಿದ್ಯಾಲಯದ ಶಿಲ್ಪಕಲಾ ವಿಭಾಗ ಬದಾಮಿ […]

ಕಬ್ಬಿಗರ ಅಬ್ಬಿ – ಸಂಚಿಕೆ ೩

ಶ್ರಾವಣ ಗೀತ ಮಹಾದೇವ ಕಾನತ್ತಿಲ ಸಂಕ್ರಮಣ! ಹೌದು, ಸಂಕ್ರಮಣ, ಒಂದು ಸ್ಥಿತಿಯಿಂದ ಇನ್ನೊಂದಕ್ಕೆ, ಮತ್ತೆ ಮತ್ತೊಂದಕ್ಕೆ!.  ಅಂಗಳದಲ್ಲಿ ಲಂಗದಾವಣಿ ಹಾಕಿ ಕುಣಿದು ಹಾರುತ್ತಿದ್ದ ಹುಡುಗಿ, ಪುಷ್ಪವತಿಯಾಗಿ, ಗಾಂಭೀರ್ಯ ತುಂಬಿ, ಗಜಗಾಮಿನಿಯಾದಾಗ ಸಂಕ್ರಮಣ. ಒಂದು ಮುಂಜಾನೆ, ಕಪ್ಪುಹಸಿರು ಜಡ ಎಲೆಗಳ ಮಾಮರದಲ್ಲಿ, ನಸುಗೆಂಪು ತಳಿರು ಚಿಗುರೊಡೆದಾಗ ಮರಕ್ಕೆ ಸಂಕ್ರಮಣ. ನಲವತ್ತರ ನಸುಕಲ್ಲಿ, ಕಣ್ಣು ಮಬ್ಬಾಗಿ ನೆಟ್ಟ ನೇರ ನೋಟಕ್ಕೆ, ಚಾಳೀಸು ಬಂದಾಗ ಸಂಕ್ರಮಣ. ಅರುವತ್ತಕ್ಕೆ ವೃತ್ತಿಯಿಂದ ನಿವೃತ್ತಿ ಸಂಕ್ರಮಣ. ಹೆಚ್ಚೇನು! ಸೂರ್ಯೋದಯ,ಸೂರ್ಯಾಸ್ತಮಾನ ದಿನ ರಾತ್ರೆಗಳ ಅದಲು ಬದಲು ಸಂಕ್ರಮಣ!. […]

ನವಿರು ಹಾಸ್ಯದೊಳಗೆ ಚುಚ್ಚುವ ಮೊನಚಿದೆ ಹಿಂದೊಮ್ಮೆ ಪ್ರಮಿಳಾ ರಾಜ್ಯವೊಂದಿತ್ತಂತೆ. ಅಲ್ಲಿ ಮಹಿಳೆಯರೇ ರಾಣಿಯರು, ಅಧಿಕಾರದಲ್ಲಿರುವವರು ಎಲ್ಲಾ. ಅಲ್ಲಿ ಗಂಡಸರಿಗೆ ಪ್ರವೇಶವೇ ಇರಲಿಲ್ಲವಂತೆ. ಸಂತಾನ ಬೇಕಾದ ಸ್ತ್ರೀಯರೂ ರಾಜ್ಯದ ಹೊರಗೆ ಹೋಗಿ ಪಡೆಯಬೇಕಾಗಿತ್ತಂತೆ. ಒಂದುವೇಳೆ ಗಂಡು ಸಂತಾನವನ್ನು ಪಡೆದರೆ ಆ ಮಗುವನ್ನು ಅಲ್ಲಿಯೇ ಬಿಟ್ಟು ಬಿಡುವುದು ಅನಿವಾರ್ಯವಾಗಿತ್ತಂತೆ. ಆದರೆ ಹೆಣ್ಣು ಮಗುವಾಗಿದ್ದರೆ ಮಾತ್ರ ತಮ್ಮ ರಾಜ್ಯಕ್ಕೆ ಕರೆದೊಯ್ಯಬಹುದಿತ್ತಂತೆ. ಅಂತಹುದ್ದೊಂದು ಪ್ರಮಿಳಾ ರಾಜ್ಯವಿದ್ದರೆ  ನಾನೂ ಅಲ್ಲಿಯೇ ಹೋಗಿ ಇರಬಹುದಾಗಿತ್ತು ಎಂದು ಎಷ್ಟೋ ಸಲ ಅಂದುಕೊಳ್ಳುತ್ತಿರುತ್ತೇನೆ. ಎಷ್ಟೊಂದು ಕೆಲಸಗಳು. ಮುಗಿಯದ, ಮುಗಿಯಲೊಲ್ಲದ […]

ಮಾತು ಅರಳುವ ಹೊತ್ತು ನಗುವಿನೊಂದಿಗೆ ಜನ್ಮತಳೆದ ಸಂಬಂಧಗಳ ಭವಿಷ್ಯವನ್ನು ಮಾತು ನಿರ್ಣಯಿಸುತ್ತದೆ. ಮಾತು ಸರಾಗವೆನ್ನಿಸದ ಹೊರತು ಸಂಬಂಧಗಳನ್ನು ಸರಳವಾಗಿಸಿ ಸುಂದರಗೊಳಿಸಲಾಗದು. ಬದುಕಿನ ಸೂಕ್ಷ್ಮಗಳೆಲ್ಲವನ್ನೂ ತನ್ನೆಲ್ಲ ಚಾಣಾಕ್ಷತೆಯನ್ನು ಉಪಯೋಗಿಸಿ ಕಾಪಾಡಿಕೊಳ್ಳುವ ಮಾತು, ಅಗತ್ಯ ಬಿದ್ದಾಗಲೆಲ್ಲ ಸಂಬಂಧಗಳಿಗೊಂದು ಜೀವಂತಿಕೆಯನ್ನೂ ಒದಗಿಸುತ್ತದೆ. ಮಾತುಗಳೇ ಇಲ್ಲದ ಸಂಬಂಧವೊಂದು ಎಲ್ಲಿಯವರೆಗೆ ಜೀವಂತವಾಗಿ ಉಳಿದೀತು; ಎಲ್ಲ ನಕಾರಾತ್ಮಕತೆಯ ಪರಿಹಾರವೆನ್ನುವಂತೆ ಹೃದಯಕ್ಕಿಳಿವ ಮಾತು ಮಾತ್ರವೇ ಸಂಬಂಧಗಳನ್ನೆಲ್ಲ ಸಹೃದಯತೆಯ ಸೆರಗಿನಲ್ಲಿ ಬಚ್ಚಿಟ್ಟು ಸಾಕಿ ಸಲಹೀತು!           ಕಾಲಕಾಲಕ್ಕೆ ತಕ್ಕಂತೆ ಸಂಬಂಧಗಳ ಮೌಲ್ಯದ ಪರಿಕಲ್ಪನೆ ಬದಲಾಗುತ್ತಾ ಹೋದರೂ ಮಾತು ಮಾತ್ರ […]

ಸ್ವಾತ್ಮಗತ

ಸುಭಾಷ್ ಪಾಳೇಕರರ ‘ಸಹಜ ಕೃಷಿ ಪದ್ದತಿ’ಯೂ..! ಮೈಸೂರಿನ ಆರ್.ಸ್ವಾಮಿ.ಆನಂದರ ‘ಸುಭಾಷ್ ಪಾಳೇಕರರ ಸಹಜ ಕೃಷಿ’ ಪುಸ್ತಕವೂ.!! ಕಳೆದ ಜುಲೈನಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ‘ಶೂನ್ಯ ಬಂಡವಾಳದ (ನೈಸರ್ಗಿಕ) ಕೃಷಿ’ಯನ್ನು ಉತ್ತೇಜಿಸುವುದಾಗಿ ಉಲ್ಲೇಖಿಸಿದ್ದರು. ಇದಕ್ಕೂ ಮುಂಚೆಯೇ ಕರ್ನಾಟಕವೂ ಸೇರಿದಂತೆ ಆಂಧ್ರ ಪ್ರದೇಶ, ಛತ್ತೀಸ್ ಘಡ, ಹಿಮಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲೂ ಈ ಕೃಷಿ ಪದ್ದತಿಯನ್ನು  ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಆಯಾಯ ರಾಜ್ಯ ಸರ್ಕಾರಗಳು ಹಮ್ಮಿಕೊಂಡಿವೆ. […]

ಭಯದ ಬಗ್ಗೆ ಭಯ ಬೇಡ

ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.         ಮಕ್ಕಳು ಯಾವ ಯಾವುದೋ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ ಮಾನಸಿಕ ಸಮಸ್ಯೆ. ಭಯ ಅಂದರೇನು? ಅದು ಏಕೆ […]

ಶಾಂತಿ ಬೀಜಗಳ ಜತನ’

ಸಾಹಿತ್ಯದ ಬರವಣಿಗೆ ಗಂಭೀರವಾದಂತೆಲ್ಲಾ ಲೇಖಕರ ಜವಾಬ್ದಾರಿ ಹೆಚ್ಚುತ್ತದೆ  ಡಾ. ಪ್ರಕಾಶ ಗ. ಖಾಡೆ  ಬಾಗಲಕೋಟೆಯಲ್ಲಿ ಅಧ್ಯಾಪಕರಾಗಿರುವ ಡಾ. ಪ್ರಕಾಶ ಗಣಪತಿ ಖಾಡೆ ಅವರು ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ೧೦-೦೬-೧೯೬೫ ರಂದು ಜನಿಸಿದರು. ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ, ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾಗಿ , ೨೦೦೫ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ “ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ” ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ […]

ಸ್ವಾತ್ಮಗತ

ಮರಗಳ ಮಹಾತಾಯಿ ನಾನು ಎಕೋ ಇಷ್ಟು ಬರಹವನ್ನು ಬರೆದರೂ ಅದ್ಯಾಕೋ ಈ ‘ಸಾಲು ಮರಗಳ ತಿಮ್ಮಕ್ಕ’ನ ಬಗೆಗೆ ಬರೆಯಲಾಗಿರಲಿಲ್ಲ. ಈ ತಿಮ್ಮಕ್ಕನ ಬಗೆಗೆ ಟಿಪ್ಪಣಿ ಬರೆದಿಟ್ಟುಕೊಂಡು ಬಹಳ ದಿನಗಳಾದವು. ಈಗ ಸಾಲು ಮರದ ಈ ತಿಮ್ಮನ ಬಗೆಗೆ ಬರೆಯಬೇಕು ಎಂಬ ತವಕ ಅದ್ಯಾಕೋ ಹೇಚ್ಚಾಯಿತು. ಅದಕ್ಕಾಗಿ ಇಂದು ಈ ಬರಹ ಬರೆದನು.ಅದೋ ಈ ಲೇಖನ ‘ಮರಗಳ ತಾಯಿ ತಿಮ್ಮಕ್ಕ’..! ಮರ ಎಂದಾಕ್ಷಣ ನಮ್ಮ ಮನದಲ್ಲಿ ಮೂಡಿ ಬರುವವರೇ ತಿಮ್ಮಕ್ಕನರವರು. ಬರೀ ತಿಮ್ಮಕ್ಕನೆಂದರೆ ಬಹುಶಃ ಯಾರಿಗೂ ಗೊತ್ತಾಗಲಾರದು. ಸಾಲು […]

Back To Top