Category: ಅಂಕಣ

ಅಂಕಣ

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು 80ರ ದಶಕದ ಆಚೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯದಲ್ಲಿ ಫಿಲಾಸಫಿಗಳ ಗುಂಗು ಶುರುವಾಯಿತು. ಇದ್ದಕ್ಕಿದ್ದ ಹಾಗೆ ರಜನೀಶ್, ಬುದ್ಧ, ಜಿಡ್ಡು ಕೃಷ್ಣಮೂರ್ತಿ, ಯೂಜಿ ಮುಂತಾದವರು ಪ್ರಚಾರಕ್ಕೆ ಬಂದರು. ಇವರೆಲ್ಲ ಹೇಳಿದ್ದನ್ನು ಕತೆಗಳಲ್ಲೂ ಕವನಗಳಲ್ಲೂ ಲೇಖನಗಳಲ್ಲೂ ತಂದು ಕೊನೆಗೆ ಆ ಹೆಸರುಗಳನ್ನು ಕೇಳಿದರೆ ಕಿರಿಕಿರಿಯಾಗುವಂತೆ ಮಾಡುವಲ್ಲಿ ನಮ್ಮ ಲೇಖಕರೂ ಸಾಹಿತಿಗಳೂ ಯಶಸ್ವಿಯಾದರು.ಈಗಲೂ ಕೆಲವರು ಲೋಹಿಯಾವಾದವನ್ನು ಮತ್ತೆ ಕೆಲವರು ಅಂಬೇಡ್ಕರರನ್ನೂ ಕೆಲವರು ಗಾಂಧಿಯನ್ನೂ ಹೀಗೇ ಬಳಸುತ್ತ, ಬೆದಕುತ್ತ ತಮ್ಮ ಬರವಣಿಗೆಗೆ ಬಳಸುತ್ತ ಆ ಅಂಥವರ ಹೆಸರನ್ನೇ […]

ದಿಕ್ಸೂಚಿ

ಸೋಲಿನ ಸುಳಿಯಲ್ಲೇ ಗೆಲುವಿನ ತುದಿಯಿದೆ! ಎಷ್ಟೆಲ್ಲ ಅನುಭವಗಳ ಮೂಟೆಯನ್ನು ಬೆನ್ನಿಗೆ ಕಟ್ಟಿಕೊಂಡು ತಿರುಗಿದರೂ ಗೆಲುವು ಮಿಂಚಿನಂತೆ ಅರೆಗಳಿಗೆ ಮಿಂಚಿ ಮಾಯವಾಗುತ್ತದೆ.ಇಲ್ಲಿ ಎಲ್ಲದರಲ್ಲೂ ಒತ್ತಡ. ಯಾವುದೂ ಸರಳ ರೇಖೆಯಲ್ಲಿ ಸಿಗುವುದಿಲ್ಲ. ಎಲ್ಲವನ್ನೂ ವಕ್ರ ರೇಖೆಯ ಕಾಣದ ತಿರುವುಗಳಲ್ಲಿ  ಶ್ರಮ ಹಾಕಿಯೇ ಪಡೆಯಬೇಕು.ಕೆಲವೊಮ್ಮೆ ಶ್ರಮ ಹಾಕಿದರೂ ಮುಖ ಎತ್ತಿಯೂ ನೋಡದೇ, ಬೆನ್ನು ತೋರಿಸಿ ನಗುತ್ತದೆ. ಕೈಗೆ ಸಿಗದೇ ಓಡಿ ಬಿಡುತ್ತದೆ ಗೆಲುವು! ಒಮ್ಮೊಮ್ಮೆ ನನಗೇ ತಿಳಿಯದಂತೆ ಮೇಲಕ್ಕೆತ್ತರಿಸಿ ಕೂರಿಸುತ್ತದೆ. ಮತ್ತೊಮ್ಮೆ ನಿರೀಕ್ಷಿಸಿದರೂ ಕೈಗೆ ಸಿಗದೇ ಕೆಳಕ್ಕೆ ಎಸೆದು ಬಿಡುತ್ತದೆ. ಹೆದರಿಸಿ  […]

ಮುಖಾಮುಖಿ

“ಏಕತಾನತೆಗೆ ಬೇಸತ್ತಾಗ ಕವಿತೆ ಕೈಹಿಡಿಯುತ್ತದೆ” “ಪೋಯಟ್ರಿ ಇಸ್ ಅನ್ ಎಸ್ಕೇಪ್ ಪ್ರಾಮ್ ಪರ್ಸನಾಲಿಟಿ” ನಾಗರೇಖಾ ಗಾಂವಕರ್ ನಾಗರೇಖಾ ಗಾಂವ್ಕರ್ ಅಂಕೋಲಾ ತಾಲೂಕಿನ ಆಡ್ಲೂರು ಗ್ರಾಮದವರು. ನಾಗರೇಖಾ ಅವರು ದಾಂಡೇಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಂಗ್ಲಾಭಾಷಾ ಉಪನ್ಯಾಸಕಿ. ಏಣಿ, ಪದಗಳೊಂದಿಗೆ ನಾನು, ಬರ್ಫದ ಬೆಂಕಿ ಎಂಬ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಪಾಶ್ಚಿಮಾತ್ಯ ಸಾಹಿತ್ಯ ಲೋಕ ಭಾಗ-೧,೨ ನ್ನು ಸಹ ಪ್ರಕಟಿಸಿದ್ದಾರೆ. ಕತೆಗಳನ್ನು ಸಹ ಬರೆಯುವ ಇವರು, ಕೆಲ ಕತಗಳಿಗೆ ಬಹುಮಾನ ಸಹ ಪಡೆದಿದ್ದಾರೆ. ಕನ್ನಡ ಕವಿಗಳ ಕವಿತೆಗಳನ್ನು ಆಂಗ್ಲಭಾಷೆಗೆ […]

ಕಬ್ಬಿಗರ ಅಬ್ಬಿ – ಸಂಚಿಕೆ -7 ಕಾವ್ಯ, ವಾಸ್ತವ ಮತ್ತು ‌ವಿಜ್ಞಾನಗಳು ಮುಖಾಮುಖಿಯಾದಾಗ ಕಾವ್ಯ, ವಾಸ್ತವ ಮತ್ತು ‌ವಿಜ್ಞಾನಗಳು  ಮುಖಾಮುಖಿಯಾದಾಗ ಓಹ್! ನಮಸ್ಕಾರ ಸಾರ್!.. ಬನ್ನಿ..ಬನ್ನಿ.. ಹೀಗೆ ಬನ್ನಿ! ಇದೇ ನೋಡಿ! ನಮ್ಮ ಕವಿಗಳ ಮನೆಯ ಡ್ರಾಯಿಂಗ್ ರೂಂ,  ಎಷ್ಟು ವಿಶಾಲವಾಗಿದೆ ಅಲ್ವಾ. ಕೆಲವೇ ಕೆಲವು ಪೀಠೋಪಕರಣಗಳು, ಅವರಿವರು ಬಂದಾಗ, ಮುಖಕ್ಕೆ ಮುಖ ಕೊಟ್ಟು ಮಾತಾಡಲು, ಕೆಲವೊಮ್ಮೆ ಮುಖವಾಡ ತೊಟ್ಟು ಮಾತಾಡಲೂ. ಸ್ವರಗಳು ಕಂಪಿಸುವ ಮಾತುಗಳು, ಸ್ವರಗಳು ಸರೀಸೃಪದ ಹಾಗೆ ಹರಿದಾಡುವ ಮಾತುಗಳು, ಹಾವಿನಂತೆ ಬುಸುಗುಟ್ಟುವ ಮಾತುಗಳು, […]

ಹೆಣ್ಣೊಡಲಾಳದ ನೋವಿನ ದನಿಗಳು ಅಂಕಣ ಬರಹ ಊರ ಒಳಗಣ ಬಯಲುಲೇಖಕಿ-ವಿನಯಾಪ್ರಕಾಶಕರು- ಛಂದ ಪುಸ್ತಕಬೆಲೆ-೪೦/-              ನಮ್ಮ ಮನೆಯಿಂದ ಒಂದುವರೆ ಕಿ.ಮಿ ಹೋದರೆ ಗಂಗಾವಳಿ ನದಿ ಸಮುದ್ರಕ್ಕೆ ಸೇರುವ ಸ್ಥಳ ಬರುತ್ತದೆ. ಅಲ್ಲಿಯೇ ಸ್ವಲ್ಪ ಹಿಂದೆ ಗಂಗಾವಳಿ ನದಿಯನ್ನು ದಾಟಿಸುವ ಸ್ಥಳವಿದೆ. ಮೊದಲೆಲ್ಲ ದೋಣಿಯಲ್ಲಿ ದಾಟಿಸುತ್ತಿದ್ದರು. ಈಗ ದೊಡ್ಡದೊಂದು ಬಾರ್ಜು ಬಂದಿದೆ. ಮಕ್ಕಳಿಗೆ ಒಂದು ಚಂದದ ಅನುಭವವಾಗಲೆಂದು ಕೆಲವೊಮ್ಮೆ ಅಲ್ಲಿಂದ ಬಾರ್ಜಿನಲ್ಲಿ ದಾಟಿ ಸಮೀಪದ ಮಾಸ್ಕೇರಿ ಎಂಬ ಊರಿಗೆ ಹೋಗಿ ಬರುವುದೂ […]

ಅಂಕಣ ಬರಹ ಹೂವು ಹೊರಳುವ ಹಾದಿ ಬಾಲ್ಕನಿ ಎಂದಾಗಲೆಲ್ಲ ನನಗೆ ಹೂವಿನ ಕುಂಡಗಳು ನೆನಪಾಗುತ್ತವೆ. ಪುಟ್ಟಪುಟ್ಟ ಕುಂಡಗಳ ಕೆಂಪು ಗುಲಾಬಿ, ಗುಲಾಬಿ ಬಣ್ಣದ ನುಣುಪಾದ ಕುಂಡಗಳಲ್ಲರಳಿದ ದುಂಡು ಮಲ್ಲಿಗೆ, ದುಂಡನೆಯ ಕುಂಡದಲ್ಲೊಂದು ಹಸುಗೂಸಿನಂಥ ಮೊಳಕೆ, ಮೊಳಕೆಯೊಂದು ಮೊಗ್ಗಾಗುವ ಪ್ರಕ್ರಿಯೆ ಹೀಗೆ ಹೂಗಳ ದೊಡ್ಡದೊಂದು ಪ್ರಪಂಚವೇ ಪುಟ್ಟ ಬಾಲ್ಕನಿಯಲ್ಲಿ ಎದುರಾಗುತ್ತದೆ. ಅರಳಿಯೂ ಅರಳದಂತಿರುವ ಕೆಂಪು ದಾಸವಾಳ ಬೆಳಗನ್ನು ಸ್ವಾಗತಿಸಿದರೆ, ಮುಳುಗುವ ಸೂರ್ಯನನ್ನು ಮಲ್ಲಿಗೆಯ ಪರಿಮಳ ಬೀಳ್ಕೊಡುತ್ತದೆ; ಮಧ್ಯರಾತ್ರಿಯಲ್ಲಿ ಅರಳಿದ ಬ್ರಹ್ಮಕಮಲಗಳೆಲ್ಲ ಚಂದಿರನಿಗೆ ಜೊತೆಯಾಗುತ್ತವೆ. ಸಮಯ ಸಿಕ್ಕಾಗ ಹೂಬಿಡುವ ನಾಗದಾಳಿ, […]

“ಭವ”ದ ಬಂಧಗಳಲ್ಲೇ ಅರಳಿದ ಸಾರ್ಥಕ ಸಾಲುಗಳು

“ಭವ”ದ ಬಂಧಗಳಲ್ಲೇ ಅರಳಿದ ಸಾರ್ಥಕ ಸಾಲುಗಳು ಫೇಸ್ಬುಕ್ಕಿನ ತುಂಬ ಹರಡುವ ಪದ್ಯದ ಘಮಲಿಗೆ ತಮ್ಮ ದನಿಯನ್ನೂ ಸೇರಿಸಲು ಹಾತೊರೆಯುತ್ತಿರುವ ಅಸಂಖ್ಯ ಕವಿ ಮನಸ್ಸುಗಳ ನಡುವೆ ಕೊಟ್ರೇಶ್ ತಂಬ್ರಳ್ಳಿ ಅಮರಗೋಳಮಠ ಅವರದು ಗಮನಿಸಲೇಬೇಕಾದ ಹೆಸರು. ಸ್ವಲ್ಪ ಹದವೆನ್ನಿಸುವ ಯಾರದೇ ಕವಿತೆಗಳಿಗೆ ತಕ್ಷಣದ ಪ್ರತಿಕ್ರಿಯೆ ನೀಡುವ ಕೊಟ್ರೇಶ್ ಆಗೀಗ ತಮ್ಮ ರಚನೆಗಳನ್ನೂ ಈ ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟು ಪ್ರತಿಕ್ರಿಯೆಗೆ ಕಾಯುತ್ತಾರೆ. ನಿಜಕ್ಕೂ ಚಂದ ಇರುವ ಅವರ ನಿಜದ ರಚನೆಗಳಿಗಿಂತ ತಕ್ಷಣಕ್ಕೆ ಕೋಪ ತರಿಸುವ, ಸ್ವಲ್ಪ ಒರಟೇ ಎನ್ನಿಸುವ […]

ಅಂಕಣ

ಆಗದು ಎಂದು ಹೇಳಲು ಕಲಿಯಿರಿ ಕಲಿಸಿರಿ ಎಲ್ಲದಕ್ಕೂ ಹೂಂ ಎನ್ನುವ ಸ್ವಭಾವ ಬಹಳ ಜನರಲ್ಲಿ ಬೇ ರೂರಿದೆ. ಹೀಗಾಗಿ ಅವರೆಲ್ಲ ಹೌದಪ್ಪಗಳಾಗಿದ್ದಾರೆ.ಪ್ರತಿ ಯೊಂದು ಕೆಲಸಕ್ಕೂ ಹೂಂ ಎಂದು ಒತ್ತಡ ಆತಂಕವನ್ನು ಅನಾಯಾಸವಾಗಿ ತಾವೇ ಮೈ ಮೇಲೆ ಎಳೆದು ಕೊಳ್ಳುತ್ತಾ ರೆ.ಯಾವುದಕ್ಕೂ ಇಲ್ಲ ಎಂದು ಹೇಳಿ ರೂಢಿಯೇ ಇಲ್ಲ. ಇಲ್ಲ ಎಂದು ಹೇಳುವುದು ಅಗೌರವ ಎಂದೇ ಭಾವಿಸಿದ್ದೇ ವೆ.ನನಗೀಗ ತಾವು ಹೇಳಿದ ಕೆಲಸ ಮಾಡಲಾಗುವುದಿಲ್ಲ. ನಾನು ಬೇರೊಂದು ಕಾರ್ಯದಲ್ಲಿ ಮಗ್ನನಾಗಿದ್ದೇನೆ ಎಂದು ಎದುರಿಗಿನವರು ನಮ್ಮನ್ನು ತಪ್ಪಾಗಿ ತಿಳಿಯುತ್ತಾರೆಂದು ನಾವೇ […]

ಮುಖಾಮುಖಿ

ಅಂಕಣ ಬರಹ ಮುಖಾಮುಖಿಯಲ್ಲಿ ರೇಖಾಭಟ್ ನಮ್ಮೊಳಗಿನ ಪ್ರೀತಿ, ಕರುಣೆ, ಮಮತೆಗಳೇ ದೇವರು ರೇಖಾ ಗಜಾನನ ಭಟ್ಟ ವಜ್ರಳ್ಳಿ ಹತ್ತಿರದ ಹೊನ್ನಗದ್ದೆಯವರು. ಯಲ್ಲಾಪುರದ ಕುಂದೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಇವರ ಪತಿ ಹೈಸ್ಕೂಲ್ ಶಿಕ್ಷಕರು. ಗಾಯನ ಮತ್ತು ಬರವಣಿಗೆ ಇವರ ಹವ್ಯಾಸಗಳು. ಗಜಲ್ ಬರೆಯುವುದರ ಮೂಲಕ ಕನ್ನಡ ಸಾಹಿತ್ಯವನ್ನು ಪ್ರವೇಶಿಸಿದ್ದಾರೆ. ಇವರ ಚೊಚ್ಚಿಲ ಕೃತಿಯನ್ನು ಮಡಿಲ ನಕ್ಷತ್ರವನ್ನು ಅದಿತಿ ಪ್ರಕಾಶನ ಪ್ರಕಟಿಸಿದೆ. ಈ ಕೃತಿಯ ಪ್ರಕಟಣೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಧನ ಸಹಾಯ ಮಾಡಿದೆ. ಕನ್ನಡದಲ್ಲಿ ಯುವ ಬರಹಗಾರರನ್ನು […]

ಗೆಳೆಯನ ಮಕ್ಕಳು

ಗೆಳೆಯನ ಮಕ್ಕಳು ಅಂಕಣ ಬರಹ ಎಷ್ಟೊ ವರ್ಷಗಳ ಬಳಿಕ ಗೆಳೆಯನ ಮನೆಗೆ ಹೋಗಬೇಕಾಯಿತು. ಅವನೂ ಅವನ ಹೆಂಡತಿಯೂ ಪ್ರೀತಿಯಿಂದ ಬರಮಾಡಿಕೊಂಡರು. ನಾನು ಅವರ ಮನೆ ಹೊಕ್ಕಾಗ ಎಂಟು ವರ್ಷದ ಮಗಳು ಬೊಂಬೆಗೆ ಸೀರೆಯುಡಿಸುತ್ತಿದ್ದಳು. ಹನ್ನೆರಡು ವರುಷದ ಮಗ ಸೋಫಾದಲ್ಲಿ ಮೈಚೆಲ್ಲಿ ಕಾಲನ್ನು ಆಗಸಕ್ಕೆ ಚಾಚಿ ಲ್ಯಾಪ್‍ಟಾಪಿನಲ್ಲಿ ವಿಡಿಯೊ ಗೇಂ ಆಡುತ್ತಿದ್ದ. ಮನೆಗೆ ಬಂದು ಹೋದವರ ಬಗ್ಗೆ ಖಬರಿಲ್ಲದಷ್ಟು ತನ್ಮಯನಾಗಿದ್ದ. ನನ್ನ ಗೆಳೆಯ `ಅಪ್ಪಿ ನೋಡೊ. ನನ್ನ ಕ್ಲಾಸ್‍ಮೇಟ್ ಬಂದಾನ. ಅಂಕಲ್‍ಗೆ ನಮಸ್ಕಾರ ಮಾಡು’ ಎಂದರೂ ಕಣ್ಣೆತ್ತಿ ನೋಡಲಿಲ್ಲ. […]

Back To Top