Category: ಅಂಕಣ

ಅಂಕಣ

ಸ್ವಾತ್ಮಗತ

ಮರಗಳ ಮಹಾತಾಯಿ ನಾನು ಎಕೋ ಇಷ್ಟು ಬರಹವನ್ನು ಬರೆದರೂ ಅದ್ಯಾಕೋ ಈ ‘ಸಾಲು ಮರಗಳ ತಿಮ್ಮಕ್ಕ’ನ ಬಗೆಗೆ ಬರೆಯಲಾಗಿರಲಿಲ್ಲ. ಈ ತಿಮ್ಮಕ್ಕನ ಬಗೆಗೆ ಟಿಪ್ಪಣಿ ಬರೆದಿಟ್ಟುಕೊಂಡು ಬಹಳ ದಿನಗಳಾದವು. ಈಗ ಸಾಲು ಮರದ ಈ ತಿಮ್ಮನ ಬಗೆಗೆ ಬರೆಯಬೇಕು ಎಂಬ ತವಕ ಅದ್ಯಾಕೋ ಹೇಚ್ಚಾಯಿತು. ಅದಕ್ಕಾಗಿ ಇಂದು ಈ ಬರಹ ಬರೆದನು.ಅದೋ ಈ ಲೇಖನ ‘ಮರಗಳ ತಾಯಿ ತಿಮ್ಮಕ್ಕ’..! ಮರ ಎಂದಾಕ್ಷಣ ನಮ್ಮ ಮನದಲ್ಲಿ ಮೂಡಿ ಬರುವವರೇ ತಿಮ್ಮಕ್ಕನರವರು. ಬರೀ ತಿಮ್ಮಕ್ಕನೆಂದರೆ ಬಹುಶಃ ಯಾರಿಗೂ ಗೊತ್ತಾಗಲಾರದು. ಸಾಲು […]

ಕಬ್ಬಿಗರ ಅಬ್ಬಿ – ಸಂಚಿಕೆ – ೨

ಚೊಕ್ಕಾಡಿಯ ಹಾಡುಹಕ್ಕಿ ಮಹಾದೇವ ಕಾನತ್ತಿಲ ಎರಡು ದಶಕಗಳ ಹಿಂದೆ, ಹಿಮಾಲಯದ ತಪ್ಪಲಿನ, ರಾಣೀಖೇತ್ ಎಂಬ ಜಾಗದಲ್ಲಿ, ಚಾರಣ ಮಾಡುತ್ತಿದ್ದೆ.  ಬೆಟ್ಟ ಹತ್ತುತ್ತಾ, ಓರ್ವ ಬೆಟ್ಟದ ಜೀವಿ ಜತೆಯಾದ. ಆತನ ಮನೆ ಬೆಟ್ಟದ ತುದಿಯ ಹತ್ತಿರ. ಬರೇ ಕಾಲುದಾರಿ,ಸುತ್ತೀ ಬಳಸೀ, ಮರ ಹತ್ತುವ ಲತೆಯಂತೆ ಗುಡ್ಡ ಹತ್ತುತ್ತೆ. ಆಸ್ಪತ್ರೆಗೆ ಬೇಕಾದಲ್ಲಿ ಹತ್ತಾರು ಕಿಲೋಮೀಟರ್ ದೂರ. ಆತನ ಹತ್ತಿರ, ನಾನು ಕೇಳಿದೆ, ಅನಾರೋಗ್ಯವಾದಾಗ ಏನು ಮಾಡುತ್ತೀರಿ ಅಂತ. ಆತ ಅಂದ, “ಇಧರ್ ವನಸ್ಪತಿಯೋಂ ಕೀ ಹವಾ ಹೈ, ಹಮ್ ಹಮೇಷಾ […]

ವಲಸೆಯ ಹಾದಿಯಲ್ಲಿ ಪುಸ್ತಕ- ಮಲಾಣ್ಲೇಖಕರು- ಶಾಂತಾ ನಾಯ್ಕ ಶಿರಗಾನಹಳ್ಳಿಬೆಲೆ-೩೧೦/-ಪ್ರಕಾಶಕರು- ದೇಸಿ ಪುಸ್ತಕ        ಸೃಷ್ಟಿ ನಾಗೇಶ್ ಒಂದಿಷ್ಟು ಪುಸ್ತಕಗಳನ್ನು ಕಳಿಸಿದ್ದರು. ಅದರಲ್ಲಿ ಮಲಾಣ್ ಕೂಡ ಒಂದು. ನೋಡಿದ ಕೂಡಲೇ ಬೇರೆಲ್ಲ ಕೆಲಸ ಬಿಟ್ಟು ಅದನ್ನೇ ಓದಲಾರಂಭಿಸಿದೆ. ಯಾಕೆಂದರೆ ಅದು ನಾನು ತುಂಬಾ ಗೌರವಿಸುವ ಶಾಂತಾ ನಾಯ್ಕ ಶಿರಗಾನಹಳ್ಳಿಯವರ ಪುಸ್ತಕ. ಹಿಂದೊಮ್ಮೆ ಸುಮಾರು ನಾನು ಹೈಸ್ಕೂಲಿನಲ್ಲಿದ್ದಾಗ ಅವರು ಕಾರವಾರದ ಆಕಾಶವಾಣಿಯಲ್ಲಿದ್ದವರು. ಆಗಲೇ ಇವಳು ಬರೆಯುತ್ತಾಳೆ ನೋಡಿ ಎಂದು ಬೆನ್ನು ತಟ್ಟಿದವರು. ಹೀಗಾಗಿ ಅವರ ಹೆಸರು ನೋಡಿದಾಕ್ಷಣ […]

ಬೊಗಸೆಯಲ್ಲೊಂದು ಹೂನಗೆ ನೆನಪೊಂದು ಮಳೆಯಾಗಿ ಸುರಿದಾಗಲೆಲ್ಲ ನಗುವೊಂದು ಮಳೆಯ ಹನಿಗಳಾಗಿ ಅಂಗೈಯನ್ನು ಸ್ಪರ್ಶಿಸುತ್ತದೆ. ಹಾಗೆ ಸ್ಪರ್ಶಿಸಿದ ಒಂದಿಷ್ಟು ಹನಿಗಳು ಜಾರಿಬಿದ್ದು ನೆಲವನ್ನು ಹಸಿಯಾಗಿಸಿದರೆ, ಉಳಿದವು ಬೊಗಸೆಯಲ್ಲೊಂದು ಹೊಸ ಪ್ರಪಂಚವನ್ನು ಬಿಚ್ಚಿಡುತ್ತವೆ. ಹಾಗೆ ನಮ್ಮೆದುರು ತೆರೆದುಕೊಳ್ಳುವ ಪ್ರಪಂಚದಲ್ಲಿ ಕೈಗೂಸಿನ ಕನಸಿನಂಥ ನಗುವೊಂದು ಅಮ್ಮನ ಮಡಿಲಿನಲ್ಲಿ ಕದಲಿದರೆ, ಹೂನಗೆಯ ಹೊತ್ತ ಹುಡುಗಿಯೊಬ್ಬಳು ಸೈಕಲ್ಲನ್ನೇರಿ ಕನಸಿನಂತೆ ಮರೆಯಾಗುತ್ತಾಳೆ; ಹನಿಮೂನ್ ಪ್ಯಾಕೇಜಿನ ರೆಸಾರ್ಟ್ ಒಂದರ ಡೈನಿಂಗ್ ಹಾಲ್ ನಲ್ಲಿ ನಾಚಿಕೆಯ ನಗುವೊಂದು ಮೋಂಬತ್ತಿಯಾಗಿ ಕರಗಿದರೆ, ಆಪರೇಟಿಂಗ್ ರೂಮೊಂದರಿಂದ ಹೊರಬಂದ ವೈದ್ಯರ ನಗುವೊಂದು ಕಣ್ಣೀರನ್ನೆಲ್ಲ […]

ಅವಮಾನದ ತಿರುವುಗಳು ಗೆಲುವಿನ ಮೈಲಿಗಲ್ಲುಗಳು ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದು ಅವಮಾನದ ಒಂದು ಪ್ರಸಿದ್ಧ ಉದಾಹರಣೆ; ಪವಿತ್ರ ನರ್ಮದಾ ನದಿಯಲ್ಲಿ ಒಮ್ಮೆ ಸಂತ ಏಕನಾಥ ಸ್ನಾನ ಮಾಡಿ ಹೊರ ಬರುತ್ತಿದ್ದ.ಆಗ ಪಠಾಣನೊಬ್ಬ ಮನದಲ್ಲಿ ವಿಷ ತುಂಬಿಕೊಂಡು ಸಂತನ ಮೇಲೆ ಉಗುಳಿದ. ಏಕನಾಥ ‘ಜೈ ವಿಠ್ಠಲ’ ಎನ್ನುತ್ತ ಮತ್ತೆ ನರ್ಮದೆಗಿಳಿದ. ಈ ರೀತಿ ಮುಂಜಾನೆಯಿಂದ ಸಂಜೆಯವರೆಗೂ ಇಬ್ಬರ ನಡುವೆ ನಡೆಯಿತು ಯಾರು ಸೋಲುತ್ತಾರೆಂದು ನದಿ ತಟದಲ್ಲಿ ಜನ ನಿಂತು ನೋಡುತ್ತಿದ್ದರು. ಕೊನೆಗೆ ಪಠಾಣ, ಸಂತರನ್ನು ಉದ್ದೇಶಿಸಿ ನಾನು ಯಾವುದೇ ಕಾರಣವಿಲ್ಲದೇ […]

ರೇಖಾಚಿತ್ರ ಕಲೆಯ ತಾಯಿ “ಚಿತ್ರಕಲಾ ಅಧ್ಯಾಪಕರ ಆಯ್ಕೆಯಲ್ಲಿ ಪಠ್ಯಕ್ಕೆ ಅನುಗುಣವಾದ ಪ್ರಯೋಗಿಕ ಪರೀಕ್ಷೆ ಮಾನದಂಡವಾಗಬೇಕು” …………………………………. ಹಜರತ್ ಅಲಿ ನಾಡಿನ ಖ್ಯಾತ ಕಲಾವಿದ. ಹರಪನಹಳ್ಳಿ ಬಳಿಯ ಉಚ್ಚಂಗಿ ದುರ್ಗ ಅವರ ಹುಟ್ಟೂರು. ಅವರು ನೆಲೆಸಿರುವುದು ದಾವಣೆಗರೆಯಲ್ಲಿ.  ಕಾರ್ಯ ನಿರ್ವಹಿಸುತ್ತಿರುವುದು ತುಮಕೂರು ವಿಶ್ವವಿದ್ಯಾಲಯದ ಚಿತ್ರಕಲಾ ವಿಭಾಗದಲ್ಲಿ ಉಪನ್ಯಾಸಕರಾಗಿ. ಉತ್ಸವಾಂಬ ಪ್ರೌಢಶಾಲೆಯಲ್ಲಿ ಕಲಿತ ಅವರು , ದಾವಣಗೆರೆಯ ಚಿತ್ರಕಲಾ ಶಾಲೆಯಲ್ಲಿ ಫೈನ್ ಆರ್ಟ ಮತ್ತು ಮಾಸ್ಟರ್ ಆಫ್ ಆರ್ಟ ಪದವಿಗಳಿಸಿದರು. ಹಂಪಿ ಅವರ ನೆಚ್ಚಿನ ತಾಣ. ನಿಸರ್ಗ ಮತ್ತು ಹಳ್ಳಿ […]

ಚಹಾ ಎನ್ನುವ ಜನುಮದ ಸಾಕಿ ಬುಕ್ ಆಫ್ ಟೀ ಲೇಖಕರು – ಕುಮಾರ್ ಎಸ್ ಬೆಲೆ- -100           ಎಲ್ಲವನ್ನೂ ಬೆಸೆದ ಚಹಾ ಪ್ರೀತಿಗೆ ಎನ್ನುವ ಬರೆಹದೊಂದಿಗೆ ಈ ಪುಸ್ತಕ ನನ್ನ ಕೈ ಸೇರಿದಾಗ ಎಷ್ಟೊಂದು ಖುಷಿಯಾಗಿತ್ತು ಎಂದರೆ ಕುಳಿತಲ್ಲೇ ಒಂದು ಕಪ್ಪು ಬಿಸಿಬಿಸಿ ಚಹಾ ಕುಡಿದಷ್ಟು ರಿಲ್ಯಾಕ್ಸ್ ಆಗಿದ್ದೆ.  ನನ್ನ ಚಹಾ ಪ್ರೀತಿಯೇ ಅಂತಹುದ್ದು. ಕೊಟ್ಟರೆ ಮೊಗಮೊಗೆದು ಕುಡಿಯುತ್ತಲೇ ಇರುವ ಇಲ್ಲದಿದ್ದರೆ ದಿನವಿಡೀ ಕುಡಿಯದ ಪ್ರೀತಿಯಂತಹ ಪ್ರೀತಿ ಈ ಚಹ. ಪ್ರೀತಿಯೂ ಹಾಗೆ. ಪ್ರೇಮ ಸಾಗರದಲ್ಲಿ […]

ಜಾಮಿನಿಯ ನೆನಪಿನಲ್ಲಿ ಈ ಮಳೆಗಾಲದಲ್ಲಿಯೇ ನೆನಪುಗಳು ಹುಟ್ಟಿಕೊಂಡಿರಬಹುದು ಎನ್ನುವ ಬಲವಾದ ನಂಬಿಕೆಯಿದೆ ನನಗೆ. ಮೋಡಗಳೊಂದಿಗೆ ತಣ್ಣಗೆ ತೇಲಿಬಂದ ನೆನಪೊಂದು, ಏಕಾಂತ ಬಯಸಿ ಟೆರೇಸಿನಲ್ಲಿ ಕುಳಿತು ಆಕಾಶ ದಿಟ್ಟಿಸುತ್ತಿದ್ದ ಹೃದಯವೊಂದನ್ನು ತಾಕಿ ನೆಲಕ್ಕೆ ಇಳಿದಿರಬಹುದು. ಹಾಗೆ ತಾಕಿದ ನೆನಪು ಒಮ್ಮೆ ಬಾಲ್ಯದ ಬೆರಗಾಗಿ, ಇನ್ನೊಮ್ಮೆ ಹರೆಯದ ಕನಸಾಗಿ, ಮತ್ತೊಮ್ಮೆ ಫ್ರಿಡ್ಜ್ ನಲ್ಲಿಟ್ಟ ಐಸ್ ಕ್ರೀಮಾಗಿ ಎಲ್ಲರ ಅರಿವಿಗೂ ದಕ್ಕಿರಬಹುದು. ಹಾಗೆ ದಕ್ಕಿದ ನೆನಪು ಈಗಷ್ಟೇ ಟ್ರೆಕ್ಕಿಂಗ್ ಮುಗಿಸಿದ ಹುಡುಗನೊಬ್ಬನ ಭಾರವಾದ ಬ್ಯಾಗ್ ನಲ್ಲೋ, ಕಾಡುಪಾಪವೊಂದನ್ನು ಕಷ್ಟಪಟ್ಟು ಕ್ಲಿಕ್ಕಿಸಿದ ಫೋಟೋಗ್ರಾಫರ್ […]

ಅಕ್ಷರದ ಬಂಡಾಯ ತಲ್ಲಣಗಳಿಗೆ ಪ್ರತಿಕ್ರಿಯೆ ಬೇಕಾದ ಅನಿವಾರ್ಯತೆಯಲ್ಲಿ ಬರೆಯಲು ಮನಸ್ಸು ಮಾಡಿದೆ’ ಡಾ.ರಾಮಕೃಷ್ಣ ಗುಂದಿ ಡಾ.ರಾಮಕೃಷ್ಣ ಗುಂದಿ ಕನ್ನಡದ ಅತ್ಯಂತ ಪ್ರಭಾವಶಾಲಿ ಕತೆಗಾರರಲ್ಲಿ ಒಬ್ಬರು. ಅವಾರಿ ಅವರ ಪ್ರಸಿದ್ಧ ಕತೆ. ಅವರ ಮೊದಲ ಕಥಾ ಸಂಕಲನ ಅವಾರಿ ಹೆಸರಲ್ಲೇ ಪ್ರಕಟವಾಯಿತು. ಕಡಲ ಬೆಳಕಿನ ದಾರಿಯಲ್ಲಿ, ಸೀತೆದಂಡೆ ಹೂವೆ ಅವರ ಕಥಾ ಸಂಕನಲಗಳು. ಪ್ರಾಂಜಲ ಅವರು ವಿವಿಧ ಲೇಖಕರಿಗೆ ಬರೆದ ಮುನ್ನುಡಿಗಳ ಸಂಗ್ರಹ. ಆಗೇರರ ಬದುಕು ಮತ್ತು ಸಂಸ್ಕೃತಿ ಕುರಿತು ಅವರು ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕ ವಿಶ್ವವಿದ್ಯಾನಿಲಯದಿಂದ […]

ದಿಕ್ಸೂಚಿ

ತೊಂದರೆ ಕೊಡಬೇಡಿ ಅಂತ ಹೇಳಿಬಿಡಿ ಜಯಶ್ರೀ.ಜೆ.ಅಬ್ಬಿಗೇರಿ ಮೊದಲೇ ಓದಿನ ಒತ್ತಡ. ಇದು ಸಾಲುವುದಿಲ್ಲ ಎಂಬಂತೆ ಬಹು ದಿನಗಳಿಂದ ಬೆನ್ನು ಬಿಡದಿರುವ ಕೆಲ ವೈಯುಕ್ತಿಕ ಸಮಸ್ಯೆಗಳು. ತಲೆ ತಿನ್ನುತ್ತಿವೆ. ಒಂದಿಷ್ಟು ಹೊತ್ತು ಎಲ್ಲೋ ಒಂದು ಕಡೆ ಹೋಗಿ ಮೌನವಾಗಿದ್ದು ಬರೋಣವೆಂದರೆ ನಿಮ್ಮ ಗೆಳೆಯ/ ಗೆಳತಿ ನಿಮಗೆ ಸಂಬಂಧವಿಲ್ಲದ ಯಾವುದೋ ವಿಷಯ ಹೇಳಿ ತಲೆ ತಿನ್ನುತ್ತಿದ್ದರೆ ಕೋಪ ನೆತ್ತಿಗೇರಿ ಬಿಡುತ್ತದೆ. ಖಂಡ ತುಂಡವಾಗಿ ಹೇಳಿ ಹೊರಗೆ ಅಟ್ಟಬೇಕೆನಿಸಿದರೂ ಹಾಗೆ ಮಾಡಲು ಸಾಧ್ಯವಿಲ್ಲವೆಂದು ಹೇಗೋ ಸಹಿಸಿಕೊಳ್ಳುತ್ತೀರಿ. ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ […]

Back To Top