ಈಗಲೂ ನನಗೆ ತಾಯಪ್ರೀತಿ ಅಂದಾಗ ಮಹಾ ನಿಷ್ಠುರಿಯಾಗಿದ್ದ, ಸಂಸಾರ ಸಂಭಾಳಿಸುತ್ತ ಸಿಡುಕಿಯಾಗಿದ್ದ ನನ್ನಮ್ಮ ನೆನಪಾಗುವುದಿಲ್ಲ. ಮಕ್ಕಳಿಲ್ಲದೆ ನನ್ನಂತಹವರನ್ನು ಸಾಕಿದ ಪಾರ್ವತಕ್ಕ ನೆನಪಾಗುತ್ತಾಳೆ. ಕೆಂಪನೆಯ ನಕ್ಕಾಗ ನಿರಿಗೆಗಟ್ಟುವ ಅವಳ ಮುಖ ನೆನಪಾಗುತ್ತದೆ.
ಇಂತಹ ಅಗಾಧತೆಯಲ್ಲಿ ಸೂಜಿ ಮೊನೆಯ ಮಿದುಳಿನ ಮನುಷ್ಯ ಮತ್ತು ಆತನ ಮನಸ್ಸು, ತಾನು ಮಾತ್ರ ಜೀವಿ, ಇನ್ನುಳಿದ ಕಲ್ಲು, ಭೂಮಿ, ನಕ್ಷತ್ರ, ಆಕಾಶಗಳು ನಿರ್ಜೀವಿ ಎಂದು ನಿರ್ಧರಿಸುವಾಗ, ಆ ಪ್ರಜ್ಞೆ ಎಷ್ಟು ಸ್ವಕೇಂದ್ರಿತವಲ್ಲವೇ?.
ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….4 ” ಪರಾವಲಂಬನೆಯ ಕಠಿಣ ದಿನಗಳು…” “ಆತ್ಮಾನುಸಂಧಾನ “ ಸಾಣೆಕಟ್ಟೆಯಲ್ಲಿ ದೊಡ್ಡಮ್ಮನ ಆಶ್ರಯ ಗಣಪುವಿನ ಎರಡು ಹೊತ್ತಿನ ಊಟ ತಿಂಡಿಯ ಚಿಂತೆ ಬಗೆಹರಿಸಿತು. ಆದರೆ ಗಣಪು ಬಯಸಿದ್ದು ಅಕ್ಷರಾಭ್ಯಾಸ. ಆಕಸ್ಮಿಕವಾಗಿ ಸಾಣೆಕಟ್ಟೆಗೆ ಬಂದ ನಾಡುಮಾಸ್ಕೇರಿಯ ಬೇಲೆ ಹಿತ್ತಲ ರಾಕು ಎಂಬ ತರುಣ ಹಮ್ಮಜ್ಜಿಯ ಮನೆಯಲ್ಲಿದ್ದ ಗಣಪುವಿನ ಯೋಗಕ್ಷೇಮ ವಿಚಾರಿಸುತ್ತ ಆತನ ಕಲಿಯುವ ಆಸೆಯನ್ನು ಗ್ರಹಿಸಿದ. ಊರಿಗೆ ಮರಳಿದವನು ಗಣಪುವಿಗೆ ಮತ್ತೆ ಹನೇಹಳ್ಳಿ ಹಾಸ್ಟೇಲಿನಲ್ಲಿ ಅವಕಾಶ ದೊರೆಯುವಂತೆ […]
ಅಂಕಣ ಬರಹ ರಂಗ ರಂಗೋಲಿ – ೪ ಚಾವಡಿಯಲ್ಲಿ ರಂಗ ಗೀತೆ ಎಂಟನೇ ತರಗತಿಯ ಕ್ಲಾಸಿನಲ್ಲಿ ಪುಟ್ಟ ಗುಬ್ಬಚ್ಚಿ ದೇಹದ ನಾನು ಮೊದಲನೇ ಬೆಂಚಿನಲ್ಲಿ ಮುದುಡಿ ಕುಳಿತಿದ್ದೆ. ” ದೇವದಾಸಿ ಪದ್ದತಿ,ಬಸವಿ ಪದ್ದತಿ,ಗೆಜ್ಜೆಪೂಜೆ ನಿಷೇಧಿಸಿದರು” ತರಗತಿಯಲ್ಲಿ ಕನ್ನಡದ ಬಾಲಕೃಷ್ಣ ಮೇಷ್ಟ್ರು ಕರ್ನಾಟಕದ ಇತಿಹಾಸದ ಬಗ್ಗೆ ಬಿಡುವಿನಲ್ಲಿ ಕಥೆಯ ರೂಪದಲ್ಲಿ ಹೇಳುತ್ತಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ಮೈಸೂರಿನ ಕರ್ತೃ. ಜಾರಿಗೆ ತಂದ ಈ ಕಾನೂನುಗಳು ಹೊಸದಾದ ಮನ್ವಂತರಕ್ಕೆ ನಾಂದಿ ಹಾಡಿತ್ತು. ಥಟ್ಟನೆ ನನ್ನ ಕಣ್ಣೆದುರು, ಆ ದೊಡ್ಡ […]
ಅಂಕಣ ಬರಹ ಎಡವಿದವನಿಗೂ ಸಣ್ಣ ಸಹಾನುಭೂತಿ ಸಿಗಲಿ ಬಹುಶಃ ನಾನವಾಗ ನಾಲ್ಕನೆಯ ತರಗತಿಯಲ್ಲಿದ್ದೆ. ಅಂದು ಭಾನುವಾರ. ಅವತ್ತು ನಾವೆಲ್ಲ ಹೀಗೇ ಆಟ ಆಡುತ್ತಿದ್ದೆವು. ಶಾಲೆಯ ಸುತ್ತಮುತ್ತ ನಾನು, ಶ್ರುತಿ, ಸ್ವಪ್ನ ಮತ್ತೆ ಇನ್ನೂ ಒಂದಿಷ್ಟು ಗೆಳತಿಯರು, ಆಡಿ ಆಡಿ ಸುಸ್ತಾದೆವು. ಕೊನೆಗೆ ನೀರು ಕುಡಿಯಬೇಕೆನಿಸಿತು ಎಲ್ಲರಿಗೂ. ಅಲ್ಲಿಯೇ ಇದ್ದ ಬೋರನ್ನು ಹೊಡೆಯತೊಡಗಿದೆವು. ನೀರು ಬಂತು. ಒಬ್ಬೊಬ್ಬರೇ ನೀರು ಹೊಡೆಯುವುದು, ಉಳಿದೆಲ್ಲರು ಸರತಿಯಲ್ಲಿ ಮುಖತೊಳೆದು ನೀರುಕುಡಿಯುವುದು ಮಾಡುತ್ತಿರುವಾಗ, ನಾನೊಂದಿಷ್ಟು ಬೋರು ಹೊಡೆಯುವ ಉಳಿದವರು ಕುಡಿಯಲಿ ಎಂದು ಹಿಂದೆ ಬಂದೆ. […]
ಪ್ರಪಂಚದಲ್ಲಿ ಬಹುಶಃ ತಪ್ಪೇ ಮಾಡದಿರುವ ಒಬ್ಬನೇ ಒಬ್ಬ ವ್ಯಕ್ತಿ ಇರಲಿಕ್ಕಿಲ್ಲ. ಯಾವುದಾದರೂ ಒಂದು ಸಂದರ್ಭದಲ್ಲಿ ಏನಾದರೂ ಒಂದು ತಪ್ಪನ್ನು ಮಾಡಿರಲೇ ಬೇಕು. ಮಾಡಿದ ತಪ್ಪನ್ನು ಒಪ್ಪಿಕೊಳ್ಳದೆ , ತಾನು ಯಾವಾಗಲೂ ಸರಿ ಎಂಬ ವರ್ತನೆಯನ್ನು ತೋರಿಸುವ ಬಹಳಷ್ಟು ಮಂದಿಯಿದ್ದಾರೆ
” ರಾಜಕಾರಣ ಎಂದರೆ ಸಮುದಾಯ, ಧರ್ಮಗಳ ಮಧ್ಯ ಯಾವುದೇ ದ್ವೇಷ ಹುಟ್ಟದಂತಿರಬೇಕು “
ಅಂಕಣ ಬರಹ ಏಕತಾರಿ ಕಣ್ಮರೆ ಹಲವು ವರುಷಗಳಿಂದ ತತ್ವಪದ ಗಾಯಕರನ್ನು ಭೇಟಿಮಾಡುತ್ತ, ಅವರು ಹಾಡುವ ಪದಗಳನ್ನು ಕೇಳುತ್ತ ತಿರುಗಾಡುತ್ತಿದ್ದೇನೆ. ಈ ಗಾಯನದಲ್ಲಿ ಜೀವಾಳದಂತೆ ಬಳಕೆಯಾಗುತ್ತಿದ್ದ ಏಕತಾರಿ ಮರೆಯಾಗುತ್ತಿರುವುದು ಕಾಣುತ್ತಿದೆ. ಯಾಕಿರಬಹುದು? ಇದರ ಪರಿಣಾಮ ಏನಾಗಿದೆ? ವಿಚಾರ ಮಾಡಬೇಕಿನಿಸಿತು. ತಾಡಿಸಿದರೆ ನುಡಿವ ತೊಗಲಿನ ತಮಟೆ, ಡೋಲು, ಮೃದಂಗ, ಢಕ್ಕೆ, ಹಲಗೆ, ದಮಡಿ, ದಪ್ಪು, ಉರುಮೆಗಳಿವೆ; ಗಾಳಿ ವಾದ್ಯಗಳಾದ ಹಾರ್ಮೋನಿಯಂ, ಕೊಳಲು, ಶಹನಾಯಿಗಳಿವೆ; ಮೀಟಿದರೆ ನಾದ ಹೊರಡಿಸುವ ವೀಣೆ, ಕಿನ್ನರಿ, ಚೌಡಿಕೆ, ಏಕತಾರಿ, ಸಾರಂಗಿಯಂತಹ ತಂತಿವಾದ್ಯಗಳೂ ಇವೆ. ಇವುಗಳಲ್ಲಿ ಏಕತಾರಿಯದೇ […]
ಅಂಕಣ ಬರಹ ಕಬ್ಬಿಗರ ಅಬ್ಬಿ ಸಾಲುಗಟ್ಟಿದ ಮನಸ್ಸುಗಳು ಮನೆ ಕಟ್ಟುವಾಗ ಮೊದಲು ಕಲ್ಲಿನಿಂದ ಗಟ್ಟಿಯಾದ ಅಡಿಪಾಯ, ಆಮೇಲೆ ಕಟ್ಟುವುದೇ ಗೋಡೆ!. ತಳಪಾಯದ ನಾಲ್ಕೂ ಅಂಚುಗಳುದ್ದಕ್ಕೂ ನಾಲ್ಕು ಗೋಡೆಗಳು ಮಧ್ಯದಲ್ಲಿ ಸ್ಪೇಸ್ ಮತ್ತು ಗಾಳಿ ಬಂಧಿಸಲ್ಪಡುತ್ತದೆ. ಒಳಗೆ ಮತ್ತೊಂದಷ್ಟು ಗೋಡೆಗಳು. ಡ್ರಾಯಿಂಗ್ ರೂಂ ಮತ್ತು ಮಲಗುವ ಕೋಣೆ ನಡುವೆ ಗೋಡೆ, ಮನೆಗೆ ಬರುವ ಆಗಂತುಕರಿಂದ ಪ್ರೈವೆಸಿ ಅತ್ಯಗತ್ಯ. ಆಮೇಲೆ ಅಡುಗೆ ಕೋಣೆ ಮತ್ತು ಡೈನಿಂಗ್ ರೂಂ ನಡುವೆ ಗೋಡೆಗಳು. ಮತ್ತೆ, ದೇವರ ಕೋಣೆ ಎನ್ನಲ್ಪಡುವ ಗೂಡಿನಂತಹ ಚಿಕ್ಕ ಕೋಣೆಗೂ […]
ಅಂಕಣ ಬರಹ ರಾಮಕೃಷ್ಣ ಗುಂದಿ ಆತ್ಮಕತೆ–03 ಅಕ್ಷರ ಬೀಜದ ಬೆಳಕಿನತ್ತ….. ಗುಂದಿ ಹಿತ್ತಲಿನ ಎರಡೂ ಕುಟುಂಬಗಳು ಗೇಯ್ದು ಉಣ್ಣುವ’ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದವು. ಅಕ್ಷರ ದಾರಿದ್ರö್ಯದ ದಟ್ಟ ಬಡತನವೊಂದು ಅವರಿಗೆ ಬಡತನವೇ ಅನ್ನಿಸಿರಲಿಲ್ಲ. ಅಂಥ ಕುಟುಂಬಗಳಲ್ಲಿ ಗಣಪು ಎಂಬ ಹುಡುಗನೊಬ್ಬ ಹೇಗೋ ಅಕ್ಷರ ಕಲಿಕೆಗೆ ಆಸೆಪಟ್ಟು ಅಕ್ಷರ ಬೀಜದ ಬೆಳಕಿನ ಬೆನ್ನು ಹತ್ತಿದ. ಸಮೀಪದ ಹೆಗ್ರೆ ಶಾಲೆಯಲ್ಲಿ ಅ, ಆ ಕಲಿಕೆಯ ಹಂತದಲ್ಲೆ ತಾಯಿ ತೀರಿಕೊಂಡಳು. ಶಾಲೆ ಕಲಿಯುವ ಹಂಬಲಕ್ಕೆ ಮತ್ತುಷ್ಟು ತೊಡಕುಗಳಾದವು. ಮತ್ತೆ ಕೆಲವು ದಿನಗಳ […]