Category: ಅಂಕಣ

ಅಂಕಣ

ಅಂಕಣ ಬರಹ “ಸಿಕ್ಕಿತಾ ಎಂದರೆ ಸಿಕ್ಕಿಲ್ಲ ಎಂಬುದೇ ಉತ್ತರ…” ಆಗಾಗ ಕೆಲವರು ಬರಹವನ್ನೂ ಮತ್ತು ಬರೆದ ಬರಹಗಾರನನ್ನೂ ಒಂದೆನ್ನುವಂತೆ ಭಾವಿಸಿ ಅನುಮಾನದಿಂದ ನೋಡುವುದನ್ನು ನೋಡುತ್ತಿರುತ್ತೇವೆ. ಗೆಳೆಯರು ಇದನ್ನು ಬಾರಿ ಬಾರಿ ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ ಇದು ಪ್ರತಿಯೊಬ್ಬ ಬರಹಗಾರನಿಗೂ ಒಂದಲ್ಲಾ ಒಂದು ಬಾರಿ ಎದುರಿಸಬೇಕಾಗಿ ಬರುವ ಸಾಮಾನ್ಯ ಸನ್ನಿವೇಶವೂ ಆಗಿರುತ್ತದೆ. ಆದರೆ ಓದುಗರು ಒಂದು ಮಾತನ್ನು ನೆನಪಿನಲ್ಲಿಡಬೇಕು. ಅವನು ಬರಹಗಾರ… ತನಗೆ ಕಂಡ, ಅನುಭವಿಸಿದ, ಇರರ ಅನುಭವದಿಂದ ಅರಿತ ಎಲ್ಲವನ್ನೂ ಒಂದಾಗಿಸಿ ಬರಹದ ಮೂಲತತ್ವದ ಅಚ್ಚಿಗೆ ಸುರಿದು ಓದುಗರಿಗೆ […]

ಅಂಕಣ ಬರಹ ಹೊಸ ದನಿ ಹೊಸ ಬನಿ ೧೬ ಹುಚ್ಚು ಆದರ್ಶಗಳಿಲ್ಲದ ಭಾವ ಭಿತ್ತಿಯ ಸಹಜ ನಿರೂಪಣೆ ನಾಗರೇಖಾ ಗಾಂವಕರ್ ಕವಿತೆಗಳು ಅವಳ ಮಾಂಸ ಮಜ್ಜೆಯ ನೆರಳು, ಮುಟ್ಟಿನ ವಾಸನೆಬಡಿಯದೇ, ಪೊಗರಿದ ಅವನೆಂಬವನ  ಹುಡುಕಿ ಸೋತಿದ್ದೇನೆ, ಹುಡುಕಿ ಕೊಡು ಹೇ! ಪ್ರಭು. ಎಂದು ಗಟ್ಟಿಯಾಗಿ ಪ್ರಶ್ನಿಸುತ್ತಲೇ ಸುರುವಾಗುವ ಈ ಕವಿತೆ ಗಂಡಿನ ಅಹಮ್ಮನ್ನು ಗುರಾಯಿಸುತ್ತಲೇ ಕಡೆಗೆ ಆದರವನ ದೇವರಿಗೆ ಅವಳ ಮಾಂಸ ಮಜ್ಜೆಯ ನೆರಳು, ಮುಟ್ಟಿನ ವಾಸನೆ ಮೈಲಿಗೆಯಂತೆ. ಆ ದೇವನೆಂಬವನ ಹುಡುಕಿ ಕೊಡು ಹೇ! ಪ್ರಭು […]

ಅಂಕಣ ಬರಹ ಮೆಹಬೂಬ್ ಮುಲ್ತಾನಿ ಪರಿಚಯ: ಮೆಹಬೂಬ್ ಮುಲ್ತಾನಿ ಬೆಳಗಾವಿ ಜಿಲ್ಲೆಯ ಖಾನಾಪುರ ‌ತಾಲೂಕಿನ‌ ಚಿಕ್ಕನದಿಕೊಪ್ಪ‌ ಶಾಲೆಯಲ್ಲಿ ‌ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಕಾಲಿನ ಓದು ಬರಹ ವೇದಿಕೆ ಕಟ್ಟಿಕೊಂಡು ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಹಿಂದಿ,ಉರ್ದು, ಮರಾಠಿ, ಆಂಗ್ಲ ಭಾಷೆಯ ಸಾಹಿತ್ಯ ಅನುವಾದ, ವಿಶೇಷವಾಗಿ ಕವಿತೆಗಳ ಅನುವಾದ ಇವರ ಇಷ್ಟದ ಕೆಲಸ. ಕವಿತೆ ಬರೆಯಲು ಪ್ರಾರಂಭಿಸಿದ್ದಾರೆ. ತುಂಬಾ ಜೀವನ ಪ್ರೀತಿಯ ಮನುಷ್ಯ ನಮ್ಮ ಮೆಹಬೂಬ್ ಮುಲ್ತಾನಿ ಈ ವಾರದ ಮುಖಾಮುಖಿಯಲ್ಲಿ ಕವಿ ಮೆಹಬೂಬ್ ಮುಲ್ತಾನಿಯನ್ನು ಮಾತಾಡಿಸಿದ್ದಾರೆನಾಗರಾಜ ಹರಪನಹಳ್ಳಿ ” ನನ್ನ […]

ಅಂಕಣ ಬರಹ ಹೂಕೊಂಡ ಹೂಕೊಂಡತಮಿಳು ಮೂಲ : ಪೆರುಮಾಳ್ ಮುರುಗನ್ಅನುವಾದ : ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೨೫ಪುಟಗಳು : ೧೪೪ ಪುರುಷ ಪ್ರಧಾನ ಸಮಾಜದಲ್ಲಿ ಸ್ತಿçಯು ಶೋಷಣೆಗೊಳಗಾಗುವ ದುರಂತ ಕಥಾವಸ್ತುವನ್ನು ಹೊಂದಿದ ಕಾದಂಬರಿ ಇದು. ಜಾತಿ ಸಮಸ್ಯೆಯೂ ಇದರ ವಿನ್ಯಾಸದ ಇನ್ನೊಂದು ಮುಖ. ಅಲ್ಲದೆ ಸರಳ ಸ್ವಭಾವದ ಮಂದಿ ಎಂದು ಎಲ್ಲರೂ ಭಾವಿಸುವ ಗ್ರಾಮೀಣರಲ್ಲೂ ಎಂಥ ಕ್ರೌರ್ಯವಿರಬಹುದು ಎನ್ನುವ ಕಹಿ ಸತ್ಯವನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ. ಮದುವೆಯಾಗಿ ಕೇವಲ ಎರಡು […]

ಅಂಕಣ ಬರಹ ಕಬ್ಬಿಗರ ಅಬ್ಬಿ ನೆಲದವ್ವನ ಒಡಲ ಜೀವಜಲ ಆ ಬಾವಿ ನೀರಿಗೆ ಅಷ್ಟೊಂದು ರುಚಿ. ಆಸರಾದ ಗಂಟಲಿಗರ ಆಸರೆಯೇ ಆ ಬಾವಿ. ನಮ್ಮ ಮನೆಯಿಂದ ಶಾಲೆ ತಲಪಲು ನಾಲ್ಕುಮೈಲಿಯ ಹೆಜ್ಜೆ. ನಡುದಾರಿಯಲ್ಲಿ ದೇವಸ್ಥಾನ. ಅದರ ಪಕ್ಕದಲ್ಲಿ ಈ ಬಾವಿ. ನಾನು ತುಂಬಾ ಚಿಕ್ಕವನಿದ್ದಾಗ, ನನ್ನ ಅಕ್ಕನ ಜತೆಗೆ ಶಾಲೆಗೆ ನಡೆದು ಬಾಯಾರಿದರೆ ಈ ಬಾವಿಯಿಂದ ಅಕ್ಕ ನೀರು ಸೇದುತ್ತಿದ್ದಳು. ಬಾವಿಯಾಳಕ್ಕೆ ಹಳೆಯ ಅಲ್ಯುಮಿನಿಯಮ್ ಬಿಂದಿಗೆ ಇಳಿಸಿ ನೀರು ನಿಧಾನವಾಗಿ ತುಂಬುವಾಗ ಗುಳು ಗುಳು ಶಬ್ಧ ಬಾವಿಯ […]

ಅಂಕಣ ಬರಹ ಕಣ್ಣು-ಕಣ್ಕಟ್ಟು ರೋಣ ತಾಲೂಕಿನ ಗಜೇಂದ್ರಗಡಕ್ಕೆ ಗೆಳೆಯರ ಭೇಟಿಗೆಂದು ಹೊರಟಿದ್ದೆ. ಹಾದಿಯಲ್ಲಿ ಯಲಬುರ್ಗಾ ತಾಲೂಕಿನ ಪುಟ್ಟಹಳ್ಳಿ ನೆಲಜೇರಿ ಎಡತಾಕಿತು. ಗೋಧಿ ಉಳ್ಳಾಗಡ್ಡೆ ಸುರೇಪಾನ ಮೆಣಸು ಮೊದಲಾಗಿ ಮಳೆಯಾಶ್ರಯದ ಪೀಕು ತೆಗೆಯುವ ಎರೆಸೀಮೆಯಿದು. ಹೆಚ್ಚಿನ ತರುಣರು ಕೊಪ್ಪಳದ ಬಗಲಲ್ಲಿ ಬೀಡುಬಿಟ್ಟಿರುವ ಉಕ್ಕಿನ ಕಾರ್ಖಾನೆಗಳಿಗೆ ದಿನಗೂಲಿಗಳಾಗಿ ಹೋಗುತ್ತಾರೆ. ನೆಲಜೇರಿ ಆರ್ಥಿಕವಾಗಿ ಬಡಕಲಾದರೂ ಸಾಂಸ್ಕøತಿಕವಾಗಿ ಸಮೃದ್ಧ ಹಳ್ಳಿ. ಈ ವೈರುಧ್ಯ ಉತ್ತರ ಕರ್ನಾಟಕದ ಬಹಳಷ್ಟು ಹಳ್ಳಿಗಳ ಲಕ್ಷಣ.  ನೆಲಜೇರಿಯ ತಟ್ಟಿ ಹೋಟೆಲಿನಲ್ಲಿ ಚಹಾಪಾನ ಮಾಡುತ್ತ ಇಲ್ಲಿ ಯಾರಾದರೂ ಜನಪದ ಗಾಯಕರು […]

ಅಂಕಣ ಬರಹ ಫ್ರಾಂಕಿನ್‌ಸ್ಟೆನ್ ಫ್ರಾಂಕಿನ್‌ಸ್ಟೆನ್ಮೂಲ ಇಂಗ್ಲಿಷ್ : ಮೇರಿ ಷೆಲ್ಲಿ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟಣೆಯ ವರ್ಷ :೨೦೦೭ ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೆöನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ. ನಿಸರ್ಗ ನಿಯಮಗಳ ವಿರುದ್ಧ ಹೋಗುವ ಅಹಂಕಾರವನ್ನು ಮನುಷ್ಯ ತೋರಿಸಿದರೆ ಪರಿಣಾಮವೇನಾಗಬಹುದು ಎಂಬ ವಿಷಯದ ಕುರಿತುಳ್ಳ ಈ ಕಾದಂಬರಿತನ್ನ ನಿರೂಪಣೆಗೆ ಫ್ಯಾಂಟಸಿ ಶೈಲಿಯನ್ನು ಆಯ್ದುಕೊಂಡಿದೆ ಮಾತ್ರವಲ್ಲದೆ ಅದು ಒಂದು […]

ಅಂಕಣ ಬರಹ ಎಲ್ಲಾ ಒಳ್ಳೆಯದೇ ಆಗುತ್ತೆ… ಈ ಥರದ ಮಾತುಗಳನ್ನ ನಾವು ಬಹಳಷ್ಟು ಸಾರಿ ಕೇಳಿರ್ತೇವೆ. “ಒಳ್ಳೇವ್ರಿಗೆ ಒಳ್ಳೆಯದೇ ಆಗುತ್ತೆ”, “ನಾವು ಒಬ್ರಿಗೆ ಒಳ್ಳೇದು ಮಾಡಿದ್ರೆ ದೇವರು ನಮಗೆ ಒಳ್ಳೇದು ಮಾಡ್ತಾನೆ”, “ತಾತ ಮಾಡಿದ ಪಾಪ ಮೊಮ್ನೊಗನಿಗೆ”… ಹೀಗೆ ಹಲವಾರು ಮಾತುಗಳು… ಇವೆಲ್ಲ ಬರಿಯ ಮಾತುಗಳಲ್ಲ, ಅದೊಂದು ದೈತ್ಯ ಶಕ್ತಿಯ ನಂಬಿಕೆ, ನಮ್ಮ ಬದುಕನ್ನು ಮುನ್ನಡೆಸುವ ಶಕ್ತಿ. ನನ್ನ ತಂದೆ ಒಬ್ಬ ಪ್ರಾಮಾಣಿಕ ಹೈಸ್ಕೂಲ್ ಗಣಿತದ ಮೇಷ್ಟ್ರು. ತಮ್ಮ ವಿದ್ಯಾರ್ಥಿಗಳಿಗೆ ಸ್ವಂತ ಮಕ್ಕಳ ರೀತಿಯಲ್ಲೇ ಭಾವಿಸಿ ಪಾಠ […]

ಅಂಕಣ ಬರಹ ಹೊಸ ದನಿ ಹೊಸ ಬನಿ – ೧೫. ದೀರ್ಘ ಶೀರ್ಷಿಕೆಗಳ ಭಾರದಲ್ಲೂ ಸರಳ ನಡಿಗೆಯ ಮಂಜುಳ. ಡಿ  ಕವಿತೆಗಳು ಮಂಜುಳ ಡಿ ಈಗಾಗಲೇ ವಿಶ್ವವಾಣಿ ಪತ್ರಿಕೆಯ ಅಂಕಣ ಬರಹಗಾರರಾಗಿ ಕವಯತ್ರಿಯಾಗಿ ಖ್ಯಾತರಾದವರು. ಈಗಾಗಲೇ ಮೂರು ಪುಸ್ತಕಗಳನ್ನು ಪ್ರಕಟಿಸಿರುವ ಅವರು ಬೆಂಗಳೂರಿನವರು. ಅವರ ಫೇಸ್ಬುಕ್ ಬರಹಗಳಲ್ಲಿ ಗದ್ಯ ಪದ್ಯಗಳ ಮಿಶ್ರಣವನ್ನು ಕಾಣಬಹುದು. “ಆಸೆಯ ಕಂದೀಲು” ಕವನ ಸಂಕಲನಕ್ಕೆ ಕಾವ್ಯ ವ್ಯಾಮೋಹಿ ವಾಸುದೇವ ನಾಡಿಗರು ಮುನ್ನುಡಿ ಬರೆದಿರುವುದರಿಂದ ಸಂಕಲನದ ಗುಣ ನಿಷ್ಕರ್ಷೆ ಸುಲಭದ್ದೇ ಆಗಿದೆ. ಈ ಸಂಕಲನ […]

ನಾಗರೀಕತೆಯನ್ನು ಆರಂಭಿಸಿದ ಮಿತ್ರರು

ಅಂಕಣ ಬರಹ-01 ಶಾಂತಿ ವಾಸು ರೇಡಿಯೋ ಸಾಮ್ರಾಜ್ಯ ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಬೆಂಗಳೂರು ಎಂಬುದು ಬಹು ನೆಮ್ಮದಿಯ ತಾಣವಾಗಿತ್ತು. ಕರ್ನಾಟಕದ ಬೇರೆ ಬೇರೆ ಹಳ್ಳಿಗಳು, ದೇಶದ ನಾನಾ ರಾಜ್ಯಗಳಿಂದ ಉದ್ಯೋಗ, ಜೀವನವನ್ನರಸಿ ಬಂದವರಿಗೆ ಬದುಕು ಸೃಷ್ಟಿಸುತ್ತಾ, ವಿವಿಧ ಸಂಸ್ಕೃತಿಯ ಜೊತೆಗೆ ಎಲೆಕ್ಟ್ರಿಕಲ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಬ ಆಧುನಿಕತೆಯನ್ನು ಅಳವಡಿಸಿಕೊಳ್ಳುತ್ತಿದ್ದ ಬೆಂಗಳೂರಿನಲ್ಲಿ, ಬೆಳಕಿನ ಮೂಲವಾಗಿ ಪರಿಚಯವಾದ ಮನೆಗಳ ಬಲ್ಬುಗಳು, ಬೀದಿ ದೀಪಗಳು, ಸೈಕಲ್ಲಿಗೆ ಡೈನಾಮ ಲೈಟ್, (ಸೈಕಲ್ಲು ತುಳಿಯುವಾಗ ಪುಟ್ಟ ಬಲ್ಬ್ ಹೊತ್ತಿಕೊಳ್ಳುತ್ತಿತ್ತು.) ಈ ಡೈನಾಮ ಲೈಟುಗಳು […]

Back To Top