ಗಝಲ್ ಲೋಕ
ಬಸವರಾಜ್ ಕಾಸೆ ಗಝಲ್ ಬಗ್ಗೆ ಮಾಹಿತಿ ನೀಡುವ ಮತ್ತು ಗಝಲ್ ರಚನೆಗೆಇರುವ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿ ಕೊಡುವ ಹೊಸ ಅಂಕಣವೇ ‘ಗಝಲ್ ಲೋಕ’ ಪ್ರತಿ ಬುದವಾರಮತ್ತು ಶನಿವಾರ ನಮ್ಮ ನಡುವಿನಕವಿ ಬಸವರಾಜ್ ಕಾಸೆ ಅವರ ಲೇಖನಿಯಿಂದ
ಜ್ಞಾನಪೀಠ ವಿಜೇತರು
ಯು.ಆರ್.ಅನಂತಮೂರ್ತಿ..! ಜ್ಞಾನಪೀಠ ಪುರಸ್ಕೃತ ಯು.ಆರ್.ಅನಂತಮೂರ್ತಿ..! ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ ದೇಶದ ಗಮನ ಸೆಳೆಯಿತು. ಈ ಗೌರವ ಪಡೆದವರು ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ… ಎಲ್ಲರಿಗೂ ಅವರವರ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಅತ್ಯಗತ್ಯ ಎಂದು ಬಲವಾಗಿ ಪ್ರತಿಪಾದಿಸುವ ಅನಂತಮೂರ್ತಿ; ವಿದೇಶಗಳ ಹಲವಾರು ಭಾಷೆ ತಿಳಿದಿರುವ ನಮಗೆ ನಮ್ಮ ಅಕ್ಕಪಕ್ಕದ ನಾಡಿನ ಭಾಷೆಗಳು ಗೊತ್ತೇ ಇಲ್ಲದ್ದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಜಗತ್ತಿನ ಬೇರೆ ಬೇರೆ ಭಾಷೆಗಳ ಹಲವು ಮಹತ್ವದ ಕೃತಿಗಳು ಇಂಗ್ಲೀಷಿಗೆ ಸಮರ್ಥವಾಗಿ ಅನುವಾದಗೊಳ್ಳಲು ಸಾಧ್ಯವಿಲ್ಲ ಎನ್ನುವುದ ಅವರ ಅಭಿಪ್ರಾಯವಾಗಿದೆ. ಕನ್ನಡ ಸಾಹಿತಿಯೂ ಮತ್ತು ಭಾರತೀಯ ಸಾಹಿತ್ಯದ ವಿಮರ್ಶಕರೂ ಆದ ಅನಂತಮೂರ್ತಿ ತಮ್ಮನ್ನು ಕನ್ನಡ ಸಂಸ್ಕೃತಿಯ Critical Insider ಎಂದು ಕರೆದುಕೊಳ್ಳುತ್ತಾರೆ… ತಮ್ಮ ಬಹು ಚರ್ಚಿತ ಸಂಸ್ಕಾರ ಕಾದಂಬರಿಯಿಂದ ಭಾರತೀಯ ಸಾಹಿತ್ಯ ಮತ್ತು ಚಲನಚಿತ್ರ ರಂಗಗಳಲ್ಲಿ ಒಂದು ದೊಡ್ಡ ವಿವಾದವನ್ನೇ ಮಾಡಿದ ಅನಂತಮೂರ್ತಿ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಹಳ್ಳಿಯಲ್ಲಿ. ಇಬ್ಬರು ಜ್ಞಾನಪೀಠ ಪ್ರಶಸ್ತಿ ವಿಜೇತ (ಕುವೆಂಪು ಮತ್ತು ಅನಂತಮೂರ್ತಿ) ರನ್ನು ನೀಡಿದ ಹೆಗ್ಗಳಿಕೆ ತೀರ್ಥಹಳ್ಳಿ ತಾಲ್ಲೂಕಿನದು. ಇವರು ಹುಟ್ಟಿದ್ದು ೧೯೩೨ರ ಡಿಸೆಂಬರ್ ೨೧ರಂದು. ತಂದೆ ಉಡುಪಿ ರಾಜಗೋಪಾಲಾಚಾರ್ಯ. ತಾಯಿ ಸತ್ಯಮ್ಮ (ಸತ್ಯಭಾಮ)… ದೂರ್ವಾಸಪುರದ ಸಾಂಪ್ರದಾಯಿಕ ಸಂಸ್ಕೃತ ಪಾಠಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಆರಂಭಿಸಿದ ಅನಂತಮೂರ್ತಿಯವರ ಓದು ಅನಂತರ ತೀರ್ಥಹಳ್ಳಿ, ಮೈಸೂರುಗಳಲ್ಲಿ ಮುಂದುವರೆಯಿತು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದ ಇವರು ಹೆಚ್ಚಿನ ವ್ಯಾಸಂಗಕ್ಕಾಗಿ ಇಂಗ್ಲೆಂಡಿಗೆ ಹೋದರು. ಕಾಮನ್‍ವೆಲ್ತ್ ವಿದ್ಯಾರ್ಥಿ ವೇತನ ಪಡೆದ ಇವರು ಬರ್ಮಿಂಗ್‍ಹ್ಯಾಮ್ ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ಮತ್ತು ತೌಲನಿಕ ಸಾಹಿತ್ಯ ಎಂಬ ವಿಷಯದಲ್ಲಿ ೧೯೬೬ರಲ್ಲಿ ಪಿಎಚ್.ಡಿ. ಪಡೆದರು… ೧೯೭೦ರಿಂದ ಮೈಸೂರು ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದಲ್ಲಿ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ಕೆಲಸ ಮಾಡಿದ ಅನಂತಮೂರ್ತಿಯವರು, ೧೯೮೭ರಲ್ಲಿ ಕೇರಳದ ಕೋಟ್ಟಯಂನ ಮಹಾತ್ಮಾಗಾಂಧಿ ವಿಶ್ವವಿದ್ಯಾಲಯದ ಉಪಕುಲಗತಿಗಳಾಗಿದ್ದರು. ೧೯೯೨-೯೩ರ ಅವಧಿಯಲ್ಲಿ ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯದ ಅಧ್ಯಕ್ಷರಾಗಿದ್ದರು. ೧೯೯೩ರಲ್ಲಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಗೋಕಾಕರ ಅನಂತರ ಈ ಸಂಸ್ಥೆಯ ಅಧ್ಯಕ್ಷರಾದ ಎರಡನೆಯ ಕನ್ನಡಿಗರು ಇವರು… ಅನಂತಮೂರ್ತಿಯವರು ದೇಶವಿದೇಶಗಳ ಹಲವು ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಜವಾಹರಲಾಲ್ ನೆಹರೂ ವಿ.ವಿ., ಜರ್ಮನಿಯ ತೂಬಿಂಗೆನ್ ವಿ.ವಿ., ಅಮೇರಿಕ ದೇಶದ ಐಯೊವಾ ವಿ.ವಿ., ಟಫಟ್ಸ್ ವಿ.ವಿ., ಕೊಲ್ಲಾಪುರದ ಶಿವಾಜಿ ವಿ.ವಿ.ಗಳಲ್ಲಿ ಪ್ರಾಧ್ಯಾಪಕರಾಗಿದ್ದರು… ಬರಹಗಾರರಾಗಿ, ಭಾಷಣಕಾರರಾಗಿ ಅನಂತಮೂರ್ತಿಯವರು ದೇಶದ ಒಳಗೆ ಮತ್ತು ಹೊರಗೆ ಹಲವಾರು ಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ; ಉಪನ್ಯಾಸ ನೀಡಿದ್ದಾರೆ. ೧೯೮೦ರಲ್ಲಿ ಸೋವಿಯತ್ ರಷ್ಯಾ, ಹಂಗೇರಿ, ಪಶ್ಚಿಮ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಗೆ ಭೇಟಿ ನೀಡಿದ ಭಾರತೀಯ ಲೇಖಕರ ಬಳಗದ ಸದಸ್ಯರಾಗಿದ್ದರು. ಮಾರ್ಕ್ಸ್‌ವಾದದಿಂದ ತುಂಬ ಪ್ರಭಾವಿತರಾಗಿದ್ದ ಇವರು ತಮ್ಮ ಹಲವಾರು ಅಭಿಪ್ರಾಯಗಳನ್ನು ಪರೀಕ್ಷಿಸಿ ನೋಡಲು ಈ ಭೇಟಿ ನೆರವಾಯಿತು. ಸೋವಿಯತ್ ಪತ್ರಿಕೆಯೊಂದರ ಸಲಹಾ ಸಮಿತಿಯ ಸದಸ್ಯರಾಗಿ ೧೯೮೯ರಲ್ಲಿ ಮಾಸ್ಕೋಗೆ ಭೇಟಿ ನೀಡಿದರು. ೧೯೯೩ರಲ್ಲಿ ಚೀನಾ ದೇಶಕ್ಕೆ ಭೇಟಿ ನೀಡಿದ ಭಾರತೀಯ ಬರಹಗಾರರ ಬಳಗಕ್ಕೆ ಇವರು ನಾಯಕರಾಗಿದ್ದರು. ಇವಲ್ಲದೆ ದೇಶವಿದೇಶಗಳ ಹಲವಾರು ವೇದಿಕೆಗಳಿಂದ ನೂರಕ್ಕೂ ಹೆಚ್ಚು ಉಪನ್ಯಾಸ ನೀಡಿದ್ದಾರೆ… ಇಷ್ಟೇ ಅಲ್ಲದೆ, ಅನಂತಮೂರ್ತಿಯವರು ಕನ್ನಡದ ಹಲವಾರು ಸಾಹಿತ್ಯ ದಿಗ್ಗಜರನ್ನು ರೇಡಿಯೋ ಮತ್ತು ದೂರದರ್ಶನಗಳಲ್ಲಿ ಸಂದರ್ಶಿಸಿದ್ದಾರೆ. ಮೈಸೂರು ಆಕಾಶವಾಣಿಗಾಗಿ ಗೋಪಾಲಕೃಷ್ಣ ಅಡಿಗ, ಶಿವರಾಮ ಕಾರಂತ, ಆರ್.ಕೆ. ನಾರಾಯಣ್, ಆರ್.ಕೆ.ಲಕ್ಷ್ಮಣ್ ಮತ್ತು ಜನರಲ್ ಕಾರಿಯಪ್ಪ ಅವರನ್ನು ಸಂದರ್ಶಿಸಿದ್ದಾರೆ. ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರುಗಳನ್ನು ಕುರಿತು ದೂರದರ್ಶನವು ನಿರ್ಮಿಸಿದ ಸಾಕ್ಷ್ಯ ಚಿತ್ರಗಳಲ್ಲಿ ಸಂದರ್ಶಕರಾಗಿ ಭಾಗವಹಿಸಿದ್ದಾರೆ… ಅನಂತಮೂರ್ತಿಯವರು ಪ್ರಸಿದ್ಧರಾಗಿರುವುದು ಕನ್ನಡದ ಬರಹಗಾರರಾಗಿ ಮತ್ತು ಕನ್ನಡ ಸಂಸ್ಕೃತಿಯ critical insider ಆಗಿ. ೧೯೫೫ರಲ್ಲಿ “ಎಂದೆಂದೂ ಮುಗಿಯದ ಕತೆ” ಕಥಾ ಸಂಕಲನದಿಂದ ಅವರ ಸಾಹಿತ್ಯ ಕೃಷಿ ಆರಂಭವಾಯಿತು. ಮೌನಿ, ಪ್ರಶ್ನೆ, ಆಕಾಶ ಮತ್ತು ಬೆಕ್ಕು -ಇವರ ಕಥಾಸಂಕಲನಗಳು. ಈ ಎಲ್ಲ ಕತೆಗಳನ್ನೂ ಒಳಗೊಂಡ “ಮೂರು ದಶಕದ ಕಥೆಗಳು” ೧೯೮೯ರಲ್ಲಿ ಹೊರಬಂದಿದೆ. ಹಿರಿಯ ಸಮಾಜವಾದಿ ರಾಜಕಾರಣಿ ಜೆ. ಎಚ್. ಪಟೇಲರ ಸಮೀಪವರ್ತಿಯಾಗಿದ್ದ ಅನಂತಮೂರ್ತಿ ಅವರು ಶಾಂತವೇರಿ ಗೋಪಾಲ ಗೌಡ ಮತ್ತು ಲೋಹಿಯಾ ಅವರ ಪ್ರಭಾವಕ್ಕೆ ಒಳಗಾದವರು. ಇವರ ಬರಹದಲ್ಲಿ ಈ ಇಬ್ಬರ ಪ್ರಭಾವಗಳು ಎದ್ದು ಕಾಣುತ್ತವೆ… ೧೯೬೫ರಲ್ಲಿ ಇವರ ಮೊದಲ ಕಾದಂಬರಿ “ಸಂಸ್ಕಾರ” ಪ್ರಕಟವಾಯಿತು. ಪ್ರಕಟವಾದಾಗ ಮತ್ತು ಚಲನಚಿತ್ರವಾದಾಗ ತುಂಬ ವಿವಾದವನ್ನುಂಟು ಮಾಡಿದ ಈ ಕಾದಂಬರಿ ಹಲವಾರು ದೇಶೀಯ ಮತ್ತು ವಿದೇಶೀಯ ಭಾಷೆಗಳಿಗೆ ಅನುವಾದಗೊಂಡಿದೆ. ಭಾರತೀಪುರ, ಅವಸ್ಥೆ ಮತ್ತು ಭವ -ಇವರ ಇತರ ಕಾದಂಬರಿಗಳು. “ಆವಾಹನೆ” ಎಂಬ ಒಂದು ನಾಟಕವನ್ನು ಬರೆದಿರುವ ಅನಂತಮೂರ್ತಿ “೧೫ ಪದ್ಯಗಳು”, “ಮಿಥುನ” ಮತ್ತು “ಅಜ್ಜನ ಹೆಗಲ ಸುಕ್ಕುಗಳು” ಎಂಬ ಮೂರು ಕವನ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಪ್ರಜ್ಞೆ ಮತ್ತು ಪರಿಸರ, ಪೂರ್ವಾಪರ, ಸಮಕ್ಷಮ -ಇವು ಅವರ ಪ್ರಬಂಧ ಸಂಕಲನಗಳು. ಇಷ್ಟಲ್ಲದೆ ಇಂಗ್ಲೀಷಿನಲ್ಲಿ ಇವರು ಬರೆದಿರುವ ಹಲವಾರು ಪ್ರಬಂಧಗಳು ದೇಶ-ವಿದೇಶಗಳ ಸಾಹಿತ್ಯಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ೧೯೮೧ರಲ್ಲಿ ರಾಜಕೀಯ, ಸಾಂಸ್ಕೃತಿಕ ಮತ್ತು ಸಾಹಿತ್ಯಕ ವಿಷಯಗಳಿಗೆಂದು “ರುಜುವಾತು” ಎಂಬ ತ್ರೈಮಾಸಿಕ ಪತ್ರಿಕೆಯನ್ನು ಪ್ರಾರಂಭಿಸಿದರು… ಅನಂತಮೂರ್ತಿಯವರ ಹಲವು ಕತೆಗಳು ಕನ್ನಡ ಸಾಹಿತ್ಯ ವಿಮರ್ಶಕರ ಗಮನ ಸೆಳೆದಿವೆ ಮತ್ತು ಚರ್ಚೆಗೂ ವಿವಾದಕ್ಕೂ ಒಳಗಾಗಿವೆ. ಸೂರ್ಯ ಕುದುರೆ, ನವಿಲುಗಳು, ಬರ, ಘಟಶ್ರಾದ್ಧ, ತಾಯಿ, ಹುಲಿಯ ಹೆಂಗರಳು ಈ ಸಾಲಿಗೆ ಸೇರುತ್ತವೆ… ಅನಂತಮೂರ್ತಿಯವರ ಸಂಸ್ಕಾರ, ಅವಸ್ಥೆ ಕಾದಂಬರಿಗಳನ್ನು ಮತ್ತು ಬರ, ಘಟಶ್ರಾದ್ಧ ಕತೆಗಳನ್ನು ಆಧರಿಸಿ ಚಲನಚಿತ್ರಗಳು ನಿರ್ಮಾಣವಾಗಿವೆ. ಇವೆಲ್ಲವೂ ಮಹತ್ವದ ಚಿತ್ರಗಳಾಗಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿವೆ. ಘಟಶ್ರಾದ್ಧ ಕತೆಯನ್ನು ಆಧರಿಸಿ “ದೀಕ್ಷಾ” ಎಂಬ ಹಿಂದಿ ಚಲನಚಿತ್ರವೂ ತಯಾರಾಗಿದೆ. ಸಂಸ್ಕಾರ ಮತ್ತು ಘಟಶ್ರಾದ್ಧ ಚಲನಚಿತ್ರಗಳು ಭಾರತ ಸರಕಾರದಿಂದ ಸ್ವರ್ಣಕಮಲ ಪ್ರಶಸ್ತಿಯನ್ನು ಪಡೆದಿವೆ… ಸಂಸ್ಕಾರ, ಘಟಶ್ರಾದ್ಧ ಮತ್ತು ಬರ ಚಿತ್ರಗಳಿಗೆ ಅತ್ಯುತ್ತಮ ಕತೆಗಾಗಿ ಅನಂತಮೂರ್ತಿಯವರಿಗೆ ಪ್ರಶಸ್ತಿ ಸಿಕ್ಕಿದೆ. ೧೯೮೩ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೮೪ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,೧೯೯೨ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೯೪ರಲ್ಲಿ ಮಾಸ್ತಿ ಪ್ರಶಸ್ತಿ -ಇವು ಅನಂತಮೂರ್ತಿಯವರಿಗೆ ಬಂದ ಮನ್ನಣೆಗಳಲ್ಲಿ ಕೆಲವು. ೧೯೯೪ರಲ್ಲಿ ಬಂದಿರುವ ಜ್ಞಾನಪೀಠ ಪ್ರಶಸ್ತಿ ಇವೆಲ್ಲವುಗಳಿಗೆ ಕಳಶಪ್ರಾಯವಾದುದು… ಹೀಗಿದ್ದರು ಹೀಗಿತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್.ಅನಂತಮೂರ್ತಿಯವರ ಬದುಕು ಮತ್ತು ಸಾಹಿತ್ಯ… *********** — ಕೆ.ಶಿವು.ಲಕ್ಕಣ್ಣವರ
ಜ್ಞಾನಪೀಠ ವಿಜೇತರು
ಮಾಸ್ತಿ ವೆಂಕಟೇಶ ಅಯ್ಯಂಗಾರ್ ‘ಕನ್ನಡದ ಆಸ್ತಿ’ ಮಾಸ್ತಿ ವೆಂಕಟೇಶ ಅಯ್ಯಂಗಾರ್..! ‘ಕನ್ನಡದ ಆಸ್ತಿ’ ಎಂದೇ ಪರಿಗಣಿತರಾದರು ‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು..! ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು… ತಿರುಮಲ್ಲಮ್ಮ ದಂಪತಿಗಳಿಗೆ ೮-೬-೧೮೯೧ರಲ್ಲಿ ಜನಿಸಿದರು. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಮೈಸೂರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಪ್ರಥಮ ದರ್ಜೆಯಲ್ಲಿ ಎಫ್.ಎ. ಪದವಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ ೧೯೧೨ರಲ್ಲಿ ಬಿ.ಎ. ಮತ್ತು ೧೯೧೩ರಲ್ಲಿ ಎಂ.ಸಿ.ಎಸ್. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರು. ಮುಂದೆ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಿಂದ ಎಂ.ಎ. (ಇಂಗ್ಲಿಷ್) ಪದವಿ ಪಡೆದರು. ಇವರು ೧೯೧೪ರಲ್ಲಿ ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ಮಾಸ್ತಿ ಅವರು ಸಬ್ ಡಿವಿಜನ್ ಆಫೀಸರ್ (೧೯೨೭) ಮ್ಯಾಜಿಸ್ಟ್ರೇಟ್ ಮತ್ತು ಕಂಟ್ರೋಲರ್ (೧೯೩0) ಡೆಪ್ಯುಟಿ ಕಮೀಷನರ್ (೧೯೩೪) ಎಕ್ಸೈಜ್ ಕಮೀಷನರ್ (೧೯೪0) ಮೊದಲಾದ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ೧೯೪೩ ಸ್ವಇಚ್ಛೆಯಿಂದ ಸರ್ಕಾರಿ ಸೇವೆಯಿಂದ ನಿವೃತ್ತರಾದರು… ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ (೧೯೪೩-೪೮), ಅಧ್ಯಕ್ಷರಾಗಿ (೧೯೫0-೬೪) ಸೇವೆ ಸಲ್ಲಿಸಿರುವ ಇವರು ‘ಜೀವನ’ ಮಾಸಪತ್ರಿಕೆಯನ್ನು ೨೫ ವರ್ಷ ಪ್ರಕಟಿಸಿದರು. ಕನ್ನಡ ಏಕೀಕರಣಕ್ಕೆ ಶ್ರಮಿಸಿದರು. ಸಹಾಯನಿಧಿ ಮೂಲಕ ಕನ್ನಡ ಲೇಖಕರನ್ನು ಬೆಳಕಿಗೆ ತಂದರು. ಪಿಇಎನ್ ಸಂಸ್ಥೆಯ ಉಪಾಧ್ಯಕ್ಷರಾಗಿ (೧೯೬೪) ಆಯ್ಕೆಯಾಗಿದ್ದರು. ೧೯೪೨ರಲ್ಲಿ ಅಖಿಲ ಭಾರತ ಪ್ರಾಚ್ಯ ಸಮ್ಮೇಳನದ ಕನ್ನಡ ವಿಭಾಗದ ಅಧ್ಯಕ್ಷರಾಗಿದ್ದರು. ಅನೇಕ ಅಖಿಲ ಭಾರತ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ ಮಾಸ್ತಿಯವರು… ಮೈಸೂರು ಮಹಾರಾಜರು ರಾಜಸೇವಾ ಪ್ರಸಕ್ತ ಬಿರುದನ್ನು ೧೯೪೨ರಲ್ಲಿ ನೀಡಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್(೧೯೫೬), ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ(೧೯೬೮), ವರ್ಧಮಾನ ಪ್ರಶಸ್ತಿ (೧೯೮೩), ಮೈಸೂರು ವಿಶ್ವವಿದ್ಯಾನಿಲಯದ ಡಾಕ್ಟರೇಟ್(೧೯೭೭), ಭಾರತೀಯ ಜ್ಞಾನಪೀಠ ಪ್ರಶಸ್ತಿ (೧೯೮೩), ಕರ್ನಾಟಕ ಸರ್ಕಾರದ ಸನ್ಮಾನ (೧೯೮೪), ನಾಡಿನ ನಾನಾ ಸಂಸ್ಥೆಗಳಿಂದ ನೂರಾರು ಸನ್ಮಾನ, ಪ್ರಶಸ್ತಿ, ಗೌರವಗಳು ಮಾಸ್ತಿ ಅವರಿಗೆ ಸಂದಿವೆ… ಕನ್ನಡ ಸಣ್ಣಕತೆಗಳ ಜನಕರೆಂದೇ ಖ್ಯಾತಿ ಹೊಂದಿದ ಮಾಸ್ತಿ ಅವರು ನೂರಕ್ಕೂ ಮೀರಿ ಕೃತಿಗಳನ್ನು ವಿವಿಧ ವಿಷಯಗಳ ಮೇಲೆ ರಚಿಸಿ ಕನ್ನಡವನ್ನು ಬೆಳೆಸಿದವರಲ್ಲಿ ಒಬ್ಬರಾಗಿದ್ದಾರೆ. ಇಲ್ಲಿ ಅವರ ಕೆಲವು ಕೃತಿಗಳನ್ನು ಉದಾಹರಿಸಿದೆ… ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು. 1910 ರಲ್ಲಿ ಬರೆದ ‘ರಂಗನ ಮದುವೆ’ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩… ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. 20ನೆಯ ಶತಮಾನದ ಆರಂಭದ ಕಾಲದಲ್ಲಿ ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು… ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ‘ಚಿಕವೀರ ರಾಜೇಂದ್ರ’ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”. “ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥವಾಗಿದೆ… ಸಣ್ಣ ಕತೆಗಳ ಸಂಗ್ರಹ.– ಸಣ್ಣಕತೆಗಳು (೫ ಸಂಪುಟಗಳು). ರಂಗನ ಮದುವೆ. ಮಾತುಗಾರ ರಾಮಣ್ಣ. ನೀಳ್ಗತೆ.– ಸುಬ್ಬಣ್ಣ (೧೯೨೮). ಶೇಷಮ್ಮ(೧೯೭೬). ಕಾವ್ಯ ಸಂಕಲನಗಳು– ಬಿನ್ನಹ, ಮನವಿ(೧೯೨೨). ಅರುಣ(೧೯೨೪). ತಾವರೆ(೧೯೩೦). ಸಂಕ್ರಾಂತಿ(೧೯೬೯). ನವರಾತ್ರಿ(೫ ಭಾಗ ೧೯೪೪-೧೯೫೩) ಚೆಲುವು, ಸುನೀತ. ಮಲಾರ. ಶ್ರೀರಾಮ ಪಟ್ಟಾಭಿಷೇಕ (ಖಂಡಕಾವ್ಯ). ಜೀವನ ಚರಿತ್ರೆ.– ರವೀಂದ್ರನಾಥ ಠಾಕೂರ(೧೯೩೫). ಶ್ರೀ ರಾಮಕೃಷ್ಣ(೧೯೩೬). ಪ್ರಬಂಧ– ಕನ್ನಡದ ಸೇವೆ(೧೯೩೦). ವಿಮರ್ಶೆ (೪ ಸಂಪುಟ ೧೯೨೮-೧೯೩೯). ಜನತೆಯ ಸಂಸ್ಕೃತಿ(೧೯೩೧). ಜನಪದ ಸಾಹಿತ್ಯ(೧೯೩೭). ಆರಂಭದ ಆಂಗ್ಲ ಸಾಹಿತ್ಯ(೧೯೭೯). ನಾಟಕಗಳು.– ಶಾಂತಾ, ಸಾವಿತ್ರಿ, ಉಷಾ (೧೯೨೩). ತಾಳೀಕೋಟೆ(೧೯೨೯). ಶಿವಛತ್ರಪತಿ(೧೯೩೨). ಯಶೋಧರಾ(೧೯೩೩). ಕಾಕನಕೋಟೆ(೧೯೩೮). ಲಿಯರ್ ಮಾಹಾರಾಜ. ಚಂಡಮಾರುತ, ದ್ವಾದಶರಾತ್ರಿ. ಹ್ಯಾಮ್ಲೆಟ್. ಶೇಕ್ಸ್ ಪಿಯರ್ ದೃಶ್ಯಗಳು ೧,೨,೩. ಪುರಂದರದಾಸ. ಕನಕಣ್ಣ. ಕಾಳಿದಾಸ. ಅಜ್ಜನದಾರಿ, ಭಟ್ಟರಮಗಳು, ವಿಮಲಾ ಮರಿಯಾನ್. ಬಾನುಲಿ ದೃಶ್ಯಗಳು. ಕಾದಂಬರಿಗಳು.– ಚೆನ್ನಬಸವ ನಾಯಕ(೧೯೫೦). ಚಿಕವೀರ ರಾಜೇಂದ್ರ(೧೯೫೬). ಆತ್ಮಚರಿತ್ರೆ.– ಭಾವ. ಹೀಗೆ ಅನೇಕಾನೇಕ ಕೃತಿಗಳ ರಚನೆಯೊಂದಿಗೆ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಬದುಕಿ ಬಾಳಿದರು..! — ಕೆ.ಶಿವು.ಲಕ್ಕಣ್ಣವರ ಕೆ.ಶಿವು ಲಕ್ಕಣ್ಣವರ
ಸ್ವಾತ್ಮಗತ
ಕವಿ ಹೋರಾಟಗಾರ ಗವಿಸಿದ್ದ ಎನ್ ಬಳ್ಳಾರಿ ಕೆ.ಶಿವು ಲಕ್ಕಣ್ಣವರ ಹೈದರಾಬಾದ್ ಕರ್ನಾಟಕದ ಜನಧ್ವನಿ ಸಾಹಿತಿ, ಹೋರಾಟಗಾರ ಗವಿಸಿದ್ಧ ಎನ್. ಬಳ್ಳಾರಿ..! ಕೊಪ್ಪಳವನ್ನು ಕೇಂದ್ರವನ್ನಾಗಿಟ್ಟುಕೊಂಡೇ ರಾಜ್ಯಮಟ್ಟದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದವರು ಗವಿಸಿದ್ಧ ಎನ್. ಬಳ್ಳಾರಿ.ಯವರು. ಹುಟ್ಟಿದ್ದು ಜೂನ್ ೧೭, ೧೯೫೦ ರಂದು. ಮಾರ್ಚ್ ೧೪, ೨೦೦೪ ರಂದು ೫೪ ನೇ ವಯಸ್ಸಿನಲ್ಲೇ ನಿಧನರಾದರು… ಸಾಹಿತ್ಯ ಕ್ಷೇತ್ರದಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪಡೆದವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಕೆಲಸ ನಿರ್ವಹಿಸಿದವರು… ಬಿ.ಎಸ್ಸಿ., ಎಂ.ಎ ಪದವೀಧರರು. ಪ್ರೌಢಶಿಕ್ಷಣದವರೆಗೆ ಕೊಪ್ಪಳದ ಗವಿಸಿದ್ಧೇಶ್ವರ ಸಂಸ್ಥೆಯಲ್ಲಿಯೇ ಓದಿ, ಬಿ.ಎಸ್ಸಿ. ಪದವಿಯನ್ನು ಹುಬ್ಬಳ್ಳಿಯ ಪಿ.ಸಿ. ಜಾಬಿನ್ ಕಾಲೇಜಿನಲ್ಲಿ ಮುಗಿಸಿದರು. ಅಲ್ಲಿನ ಕ್ರಾಂತಿಕಾರಿ ಕವಿಗಳ ಇಡೀ ದಂಡಿನಲ್ಲಿ ಸರಳ, ಸಜ್ಜನಿಕೆ ಮತ್ತು ಹರಿತ ಕಾವ್ಯದ ಮೂಲಕ ಆಗಲೇ ಹೆಸರಾಗಿದ್ದವರು… ಕರ್ನಾಟವ ವಿಶ್ವ ವಿದ್ಯಾಲಯ ಧಾರವಾಡದಲ್ಲಿ ಎಂ.ಎ. ಕನ್ನಡ ಸ್ನಾತಕ ಪದವಿಯನ್ನು ಪಡೆದರು. ತುರ್ತುಪರಿಸ್ಥಿತಿಯ ಕಾಲಘಟ್ಟದಲ್ಲಿ ‘ಕತ್ತಲು ದೇಶದ ಪದ್ಯಗಳು’ ಎನ್ನುವ ಮೊದಲ ಸಂಕಲನವನ್ನು ೧೯೭೭ ರಲ್ಲಿ ಪ್ರಕಟಿಸಿದರು. ನಂತರ ೧೯೮೪ ರಲ್ಲಿ ‘ಕಪ್ಪುಸೂರ್ಯ’ ಎಂಬ ಎರಡನೆಯ ಕವನ ಸಂಕಲನದ ಮೂಲಕ ರಾಜ್ಯದ ಸಾಹಿತ್ಯ ವಲಯದಲ್ಲಿ ಮಿಂಚು ಹರಿಸಿದವರು. ಈ ಕೃತಿಗೆ ಗುಲಬರ್ಗಾ ವಿಶ್ವ ವಿದ್ಯಾಲಯದ ೫,೦೦೦ ರೂ. ಗಳ ಬಹುಮಾನ ದೊರೆಯಿತು. ೨೦೦೪, ಮಾರ್ಚ್ ೧೪ ರಂದು ಬಳ್ಳಾರಿಯ ಲೋಹಿಯಾ ಪ್ರಕಾಶನ ಪ್ರಕಟಿಸಿದ ‘ಈ ಮಣ್ಣು ಅಪ್ಪಿಕೊಳ್ಳುವ ಮುನ್ನ’ ಕವನ ಸಂಕಲನ ಬಿಡುಗಡೆಯಾಯಿತು. ವಿಪರ್ಯಾಸವೆಂಬಂತೆ ಅದೇ ಸಮಯದಲ್ಲಿ ಅವರು ನಿಧನ ಹೊಂದಿದರು. ಈ ಕೃತಿಗೆ ‘ಕಣವಿ ಕಾವ್ಯ ಪ್ರಶಸ್ತಿ’ ದೊರೆತಿದೆ… ಡಾ. ಜಿ.ಎಸ್. ಶಿವರುದ್ರಪ್ಪನವರು ಒಮ್ಮೆ ಕೊಪ್ಪಳಕ್ಕೆ ಬಂದಾಗ ‘ನಾನು ಗವಿಸಿದ್ಧ ಅವರನ್ನು ಭೇಟಿಯಾಗಿಯೇ ಹೋಗಬೇಕು, ಅವರನ್ನು ಕರೆಸಿರಿ’ ಎಂದು ಹೇಳಿದ್ದು ಗವಿಸಿದ್ಧ ಬಳ್ಳಾರಿಯವರ ಕಾವ್ಯದ ಗಟ್ಟಿತನ ತೋರಿಸುತ್ತದೆ… ಮೂಲತಃ ಇವರದು ವ್ಯಾಪಾರಿ ಮನೆತನ. ಹವ್ಯಾಸದಲ್ಲಿ ಪತ್ರಿಕೋದ್ಯಮದಲ್ಲಿಯೂ ಕೆಲಸ ಮಾಡಿದರು. ಇಂಡಿಯನ್ ಎಕ್ಸಪ್ರೆಸ್ ವರದಿಗಾರರಾಗಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿಯೂ ಕೆಲಸ ಮಾಡಿದ್ದಾರೆ. ೧೯೯೯ ರಲ್ಲಿ ‘ತಳಮಳ’ ಎನ್ನುವ ವಾರಪತ್ರಿಕೆ ಆರಂಭಿಸಿ ಇಡೀ ಹೈದರಾಬಾದ್ ಕನಾಟಕದ ಜನಧ್ವನಿಯಾಗಿ ಅನೇಕ ಕವಿಗಳ, ಕಲಾವಿದರ, ಎಲೆ ಮರೆಯ ಕಾಯಿಯಂತಿದ್ದ ಹಲವರನ್ನು ಪರಿಚಯಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಕಲಬುರ್ಗಿಯ ಶ್ರೀ ಶರಣ ಬಸವೇಶ್ವರ ಸಂಸ್ಥಾನದಿಂದ ಬಂಗಾರದ ಪದಕವನ್ನು ಪಡೆದ ಪ್ರತಿಭಾವಂತರಾಗಿದ್ದರು. ಬಾಲ್ಯದಲ್ಲಿಯೇ ಕವಿತೆಗಳ ಮೂಲಕ ಶಾಲೆಯಲ್ಲಿ ಗುರುತಿಸಿಕೊಂಡಿದ್ದರು. ಮುಂದೆ ಪಿ.ಸಿ. ಜಾಬಿನ್ ಕಾಲೇಜು ಇವರ ಸಾಹಿತ್ಯದ ಹರವು ವಿಸ್ತಾರಗೊಳಿಸಿತು. ಮೈಸೂರು ದಸರಾ, ಅಖಿಲ ಭಾರತ ಸಾಹಿತ್ಯ ಸಮ್ಮೇಳನ, ಬಂಡಾಯ ಸಮ್ಮೇಳನಗಳು, ಹಂಪಿ ಉತ್ಸವ ಮೊದಲಾದ ರಾಜ್ಯ, ಅಂತಾರಾಜ್ಯ ಮಟ್ಟದ ಹೊರ ರಾಜ್ಯದ ಸಮ್ಮೇಳನಗಳಲ್ಲಿ ಕಾವ್ಯ ವಾಚನ ಮಾಡಿ ಗಮನ ಸೆಳೆಯುತ್ತಿದ್ದರು… ಇವರ ಕವನಗಳು ಪದವಿಗೆ ಪಠ್ಯವಾಗಿಯೂ ಪ್ರಕಟವಾಗಿವೆ. ನಾಡಿನ ಎಲ್ಲ ಪ್ರಮುಖ ಪತ್ರಿಕೆಗಳಲ್ಲಿ ಮತ್ತು ಬೆಂಗಳೂರು, ಧಾರವಾಡ, ಭದ್ರಾವತಿ, ಗುಲಬರ್ಗಾ ಆಕಾಶವಾಣಿಗಳಲ್ಲಿ ಅಷ್ಟೇ ಅಲ್ಲದೇ ಚಂದನ, ಡಿ.ಡಿ. ಬೆಂಗಳೂರು ದೂರದರ್ಶನದಲ್ಲಿ ಇವರ ಕವನಗಳು ಪ್ರಕಟಗೊಂಡಿವೆ… ಕೊಪ್ಪಳದಲ್ಲಿ ನಡೆದ ೬೨ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ಹಿಂದೆ ಇವರ ಪಾತ್ರ ಬಹಳಷ್ಟಿದೆ. ಗೌರವ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಸಮ್ಮೇಳನದ ನೆನಪಿನ ಸಂಚಿಕೆ ‘ತಿರುಳ್ಗನ್ನಡ’ದ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದಾರೆ… ಇವರನ್ನು ಪ್ರೀತಿಯಿಂದ ಜನತೆ ‘ನಾಡಕವಿ’ ಎಂದೇ ಸಾಹಿತಿಗಳು, ಸಾಹಿತ್ಯಾಸಾಕ್ತರು ಕರೆಯುತ್ತಿದ್ದರು. ನಾಡಿನ ಪ್ರಮುಖ ಚಳುವಳಿಯಾದ ಗೋಕಾಕ್ ಚಳುವಳಿ, ಹೈದರಾಬಾದ್ ಕರ್ನಾಟಕದ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ, ಕೊಪ್ಪಳ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದವರು… ೧೯೮೬ ರಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿಯ ವತಿಯಿಂದ ಆಂಧ್ರಪ್ರದೇಶಕ್ಕೆ ಸಾಹಿತ್ಯದ ಪ್ರವಾಸ ಕೈಗೊಂಡು ಅಧ್ಯಯನ ಮಾಡಿದ್ದಾರೆ ಇವರು… ಇವರ ಇನ್ನಿತರ ಪ್ರಕಟಣೆಗಳೆಂದರೆ — ಕಾವ್ಯಮೇಳ (೧೦೯೪) (ಸಂ. ಹಾ.ಮಾ.ನಾ.), ದಶವಾರ್ಷಿಕ ಕವಿತೆಗಳು (ಸಂ. : ಗೋ.ಕೃ. ಅಡಿಗ), ೧೯೭೪-೮೪ : ರತ್ನ ಸಂಪುಟ ೧೯೮೫ (ಮೈಸೂರು ವಿ.ವಿ.), ಗಾಂಧೀ ಗಾಂಧೀ (ಚಂಪಾ), ಬಂಡಾಯ ಕಾವ್ಯ : ೧೯೯೦ (ಸಂ. ಬರಗೂರು ರಾಮಚಂದ್ರಪ್ಪ), ರತ್ನ ಸಂಪುಟ ಕಾವ್ಯ (ಸಂ. ಮೈಸೂರು ವಿ.ವಿ)… ಹೀಗೆಯೇ ನಾನಾ ಕೃತಿಗಳನ್ನು ರಚಿಸಿದರು ಮತ್ತು ಅನೇಕಾನೇಕ ಕೃತಿಗಳನ್ನು ಸಂಪಾದಿಸಿದ್ದಾರೆ ಗವಿಸಿದ್ಧ.ಎನ್. ಬಳ್ಳಾರಿಯವರು. ಹೀಗೆ ಸಾಗಿತ್ತು ಗವಿಸಿದ್ಧ.ಎನ್. ಬಳ್ಳಾರಿಯವರ ಬದುಕು-ಬರಹದ ಪಯಣ….!
ಸ್ವಾತ್ಮಗತ
ಜಾನಪದ ಗಾರುಡಿಗ ಬೈಲೂರ ಬಸವಲಿಂಗಯ್ಯ ಹಿರೇಮಠ..! ಕೆ.ಶಿವುಲಕ್ಕಣ್ಣವರ ಜಾನಪದ ಗಾರುಡಿಗ ಬೈಲೂರ ಬಸವಲಿಂಗಯ್ಯ ಹಿರೇಮಠ..! ನಾನು ಬೈಲೂರ ಬಸವಲಿಂಗಯ್ಯ ಹಿರೇಮಠ ಅವರ ಪುಸ್ತಕವಾದ ‘ನೂರು ಜಾನಪದ ಹಾಡುಗಳು’ ಬಗೆಗೆ ವಿಮರ್ಶಾತ್ಮಕ ಲೇಖನವನ್ನು ಬರೆದೆನು. ಆಗ ಸಾಕಷ್ಟು ಪ್ರಶಂಸೆಗಳು ಬಂದವು. ಅಲ್ಲದೇ ಸಾಕಷ್ಟು ಜನರು ಅವರ ಆ ಪುಸ್ತಕವನ್ನು ಕೇಳಿದರು. ನಾನು ಅವರ ಅಂದರೆ ಬೈಲೂರ ಬಸವಲಿಂಗಯ್ಯ ಹಿರೇಮಠರ ಫೋನ್ ನಂಬರ್ ಕೊಟ್ಟು ಸುಮ್ಮನಾದೆನು. ಅದರೆ ಬಹಳಷ್ಟು ಜನರು ಬೈಲೂರ ಬಸವಲಿಂಗಯ್ಯ ಹಿರೇಮಠರ ವೈಯಕ್ತಿಕ ಮಾಹಿತಿಯನ್ನು ಕೇಳಿದರು. ನಾನು ಸಾಧ್ಯವಾದಷ್ಟು ಮತ್ತು ನನಗೆ ಗೊತ್ತಿದ್ದಷ್ಟು ಮಾಹಿತಿಯನ್ನೂ ಫೋನ್ ನಲ್ಲಿಯೇ ಹೇಳಿದೆನು. ಕೆಲವರಂತೂ ಅವರ ಕುರಿತಾಗಿ ಒಂದು ವೈಯಕ್ತಿಕ ಬದುಕಿನ ಬಗೆಗೆ ಅಂದರೆ ಅವರ ‘ಜಾನಪದ ಬದುಕಿನ ಮಜಲ’ನ್ನೇ ಒಂದು ಲೇಖನ ಮಾಡಿರೆಂದರು. ಹಾಗಾಗಿ ಆ ಅವರ ವೈಯಕ್ತಿಕ ಬದುಕಿನ ಬಗೆಗೆ ಕೇಳಿದರಿಗಾಗಿ ಏಕೆ ಒಂದು ಲೇಖನ ಬರೆಯಬಾರದೆಂದು ಈ ಬೈಲೂರ ಬಸವಲಿಂಗಯ್ಯ ಹಿರೇಮಠ ಜಾನಪದ ಬದುಕಿನ ಬಗೆಗೆ ಬರೆಯಬೇಕಾಯಿತು… ಅದು ಹೀಗಿದೆ– ಬೈಲೂರ ಬಸವಲಿಂಗಯ್ಯ ಹಿರೇಮಠರು ಅತ್ಯಂತ ಗ್ರಾಮೀಣ ಸೊಗಡಿನ ಜಾನಪದ ಪ್ರತಿಭೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಬೈಲೂರಿನವರು ಇವರು… ಇವರು ಚಿಕ್ಕಂದಿನಿಂದಲೇ ಜಾನಪದ ಸಂಗೀತ ಹಾಗೂ ಬಯಲಾಟಗಳೊಂದಿಗೆ ಹಾಡುತ್ತ, ಆಡುತ್ತ ಬೆಳೆದವರು. ಮುಂದೆ ಇವರು ಜಾನಪದದಲ್ಲಿ ಎಂ.ಎ.ಪದವಿ ಪಡೆವರು. ೧೯೮೩ರಲ್ಲಯೇ ನೀನಾಸಂ ‘ಜನ ಸ್ಪಂದನ’ ಶಿಬಿರದ ಮೂಲಕ ಹವ್ಯಾಸಿ ರಂಗಭೂಮಿಗೆ ಕಾಲಿಟ್ಟವರು. ಇವರು ತಿರುಗಾಟದಲ್ಲಿ ನಟರಾಗಿ, ಗಾಯಕರಾಗಿ, ಸಂಗೀತ ನಿರ್ದೇಶಕರಾಗಿ ಕೆಲ ಮಾಡಿದವರು. ಬಿ.ವಿ.ಕಾರಂತರೊಂದಿಗೆ ‘ರಂಗ ಸಂಗೀತ’ ಕುರಿತಂತೆ ಅಭ್ಯಾಸ ಮಾಡಿದವರು… ಧಾರವಾಡದಲ್ಲೊಂದು ‘ಜಾನಪದ ಸಂಶೋಧನಾ ಕೇಂದ್ರ’ವನ್ನು ಹುಟ್ಟು ಹಾಕಿ ತನ್ಮೂಲಕ ದಂಪತಿಗಳ ಇಬ್ಬರೂ ೩೦ ವರ್ಷಗಳಿಂದ ಜಾನಪದ ರಂಗಭೂಮಿ, ಗ್ರಾಮೀಣ ವೃತ್ತಿ ರಂಗಭೂಮಿ, ಹಾಗೂ ಆದುನಿಕ ರಂಗಭೂಮಿಯಲ್ಲೂ ತಮ್ಮನ್ನು ತಾವು ತೊಡಗಿಕೊಂಡವರು. ಇವರ ರಚನೆಯ ಪರಿಷ್ಕೃತ ರಂಗರೂಪ ‘ಶ್ರೀ ಕೃಷ್ಣ ಪಾರಿಜಾತ’ ಸಾವಿರ ಪ್ರಯೋಗದತ್ತ ದಾಪುಗಾಲು ಹಾಕುತ್ತಿದೆ… ಇವರು ನಟರಾಗಿ, ಹಾಡುಗಾರರಾಗಿ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ ಇವರು ಸುಮಾರು ನೂರಕ್ಕೂ ಹೆಚ್ಚು ನಾಟಕಗಳಿಗೂ ಸಂಗೀತ ನಿರ್ದೇಶನ ಮಾಡಿದ್ದಾರೆ. ಬಿ.ವಿ.ಕಾರಂತರ ಆಸೆಯದಂತೆ ‘ರಂಗ ಸಂಗೀತ’ ಎನ್ನುವುದು ಭಾಷೆಯಾಗಬೇಕು ಎಂಬುದನ್ನು ಮನಗಂಡು ಇವರು ಆ ತೆರದಲ್ಲಿ ಸಂಗೀತ ನಿರ್ದೇಶನದಲ್ಲೂ ತೊಡಗಿಸಿಕೊಂಡಿದ್ದಾರೆ. ಜಾನಪದ ಬಯಲಾಟಗಳು, ಹಾಡುಗಳು ಅದರ ವಾದ್ಯಗಳ ಅಬ್ಬರದಲ್ಲಿ ಸ್ಪಷ್ಟತೆ ಕಳೆದುಕೊಂಡ ಈ ಸಂದರ್ಭದಲ್ಲಿ ಅಲ್ಲಿಯ ಮಟ್ಟಗಳ ಕುರಿತು ಅಧ್ಯಯನ ಮಾಡಿ ಪುಸ್ತಕಗಳನ್ನು ಹೊರತಂದಿದ್ದಾರೆ ಬೈಲೂರು ಬಸವಲಿಂಗಯ್ಯ ಹಿರೇಮಠ ಅವರು. ಹಿಂದೂಸ್ತಾನಿ ಸಂಗೀತದಲ್ಲೂ ಪದವಿ ಪಡೆದ ಇವರು ರಂಗ ಸಂಗೀತ, ದಾಸವಾಣಿ, ಶರಣವಾಣಿ, ತತ್ವಪದ ಹಾಗೂ ಬಯಲಾಟ ಪದಗಳ ಕುರಿತಂತೆ ಕರ್ನಾಟಕವಲ್ಲದೇ ಹೊರ ರಾಜ್ಯ ಹಾಗೂ ಹೊರದೇಶಗಳಾದ ಅಮೆರಿಕಾ, ಲಂಡನ್, ಬೆಹರಿನ್, ಸಿಂಗಪುರ ಮುಂತಾದೆಡೆ ಕಾರ್ಯಕ್ರಮ ನಡೆಸಿದ್ದಾರೆ. ನೂರಾರು ರಂಗಪದಗಳು ಒಳಗೊಂಡಂತೆ ೨೦ ಕ್ಕೂ ಹೆಚ್ಚು ಧ್ವನಿ ಸುರುಳಿಗಳನ್ನು ಹೊರ ತಂದಿದ್ದಾರೆ. ಈಗ ಮೂಲ ಪತ್ತಾರ ಮಾಸ್ತರರ ಪದ್ಯರೂಪದ ‘ಸಂಗ್ಯಾ ಬಾಳ್ಯಾ’ನಿಗೊಂದು ‘ರಂಗ ರೂಪ’ ನೀಡಿ ಸಂಗೀತದ ಹೊಸ ಸಾಧ್ಯತೆಗಳತ್ತ ನೋಟಬೀರಿದ್ದಾರೆ. ಇವರ ಈ ಜಾನಪದ ಹೊಸ ಸಾಧ್ಯತೆಗಾಗಿ ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ಅಭಿನವ ಶರೀಫ ಹಾಗೂ ಜಾನಪದ ಸೇರಿದಂತೆ ಅನೇಕ ಪುರಸ್ಕಾರಗಳು ಸಂದಿವೆ… ಇವಿಷ್ಟು ಬೈಲೂರ ಬಸವಲಿಂಗಯ್ಯ ಹಿರೇಮಠ ಅವರ ಬಗೆಗೆ ಹೇಳಿ ಮಾತು ಮುಗಿಸುತ್ತೇನೆ..!
ಹೊತ್ತಾರೆ
ಅಮ್ಮನ ಅಡುಗೆ ಅಮೆರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಜ್ಜಿಯನ್ನು ನಾನು ಅಮ್ಮ ಅಂತ ಕರೆಯುತ್ತಿದ್ದುದು. ನನ್ನ ಬಾಲ್ಯದ ಮುಕ್ಕಾಲು ಪಾಲಿಗಿಂತಲೂ ಹೆಚ್ಚು ಅಮ್ಮನ ಜೊತೆಯಲ್ಲೇ ಕಳೆದಿದ್ದರಿಂದ ನೆನಪುಗಳ ರಾಶಿಯೇ ಇದೆ. ಹಾಗಾಗಿ ನಾನು ನಿಧಾನವಾಗಿ ಸಂದರ್ಭಗಳನ್ನೆಲ್ಲ ಪೋಣಿಸುತ್ತಾ ಒಂದೊಂದೇ ಬರಹ ಬರೆಯುತ್ತಿರುತ್ತೇನೆ. ಮುಂದೆ ಎಲ್ಲವನ್ನೂ ಕ್ರೋಢೀಕರಿಸುವುದೂ ಆಗುತ್ತದೆ. ಒಂದಂತೂ ನಿಜ ಇದುವರೆಗಿನ ನನ್ನ ಬದುಕಿನ ಎಂತಹದ್ದೇ ಮುಖ್ಯ ಸಂದರ್ಭವಾದರೂ ಅಲ್ಲಿ ಅಮೂರ್ತವಾಗಿ ಅಮ್ಮ ಇದ್ದೇ ಇರುತ್ತಾರೆ. ನನಗಿನ್ನೂ ನೆನಪಿದೆ. ನನಗೆ ಬುದ್ಧಿ ತಿಳಿಯುವಾದಾಗಿಂದಲೂ, ಅಮ್ಮ ನಿತ್ಯವೂ ಕೋಳಿ ಕೂಗುವ ಹೊತ್ತಿಗೆ ಎದ್ದು ತನ್ನ ಕೆಲಸದಲ್ಲಿ ತಲ್ಲೀನರಾಗಿಬಿಡುತ್ತಿದ್ದರು. ಸುಮಾರು ಐದುಮುಕ್ಕಾಲಿಗೆ ಅಮ್ಮನ ಕೆಲಸಗಳ ಧಡಬಡ ಸದ್ದು ಕೇಳಲು ಶುರುವಾಗುತ್ತಿತ್ತು. ಸುಮಾರು ನೂರೈವತ್ತು ಅಡಿ ಉದ್ದ ಹದಿನೈದು ಅಡಿ ಅಗಲದ ಮನೆಯ ಅಂಗಳವನ್ನು ಗುಡಿಸಿ ನೀರು/ಗಂಜಲ ಹಾಕಿ ಸಾರಿಸಿ ರಂಗೋಲಿಯಿಟ್ಟು, ಹೊಸ್ತಿಲು ತೊಳೆದು ಅರಿಶಿನ ಕುಂಕುಮಗಳಿಂದ ಅಲಂಕಾರ ಮಾಡಿ, ಬಿಸಿನೀರಿನ ಒಲೆ ಹಚ್ಚುತ್ತಿದ್ದರು. ಆಮೇಲೆ ಕೊಟ್ಟಿಗೆಯಿಂದ ದನಗಳನ್ನೆಲ್ಲ ಹೊರಗೆ ಕಟ್ಟಿ ಕೊಟ್ಟಿಗೆ ಕಸ ಗುಡಿಸಲು ಅಣಿಯಾಗುತ್ತಿದ್ದರು. ಇವೆಲ್ಲವೂ ನಡೆಯುವಾಗ ನನ್ನ ನಿದ್ರೆ ಸಾಂಗವಾಗಿ ಸಾಗುತ್ತಲೇ ಇರುತ್ತಿತ್ತು. ಹಬ್ಬದ ದಿನಗಳಲ್ಲಿ ಮಾತ್ರ ಮಾತಿನಲ್ಲೇ ತಿವಿದು ತಿವಿದು ಏಳುವವರೆಗೆ ಬಿಡುತ್ತಲೇ ಇರಲಿಲ್ಲವಾದ್ದರಿಂದ ಆ ದಿನಗಳಲ್ಲಿ ಅಮ್ಮನ ನಿತ್ಯದ ಕೆಲಸಗಳನ್ನು ಗಮನಿಸುವುದು ಸಾಧ್ಯವಿತ್ತು. ಮಿಕ್ಕ ದಿನಗಳಲ್ಲಿ ಅಮ್ಮ ಕೆಲಸಗಳನ್ನೆಲ್ಲ ಮುಗಿಸಿ ನಮ್ಮ ಮನೆಯಲ್ಲಿದ್ದ ಪುಟ್ಟ ಫಿಲಿಪ್ಸ್ ರೇಡಿಯೋ ಹೊತ್ತಿಸಿದಾಗಲೇ ನನಗೆ ಬೆಳಗಾಗುತ್ತಿದ್ದುದು. ಅದರಲ್ಲೂ, ಇಯಂ ಆಕಾಶವಾಣಿಃ, ಸಂಪ್ರತಿ ವಾರ್ತಾಹ ಶ್ರೂಯಂತಾಂ, ಪ್ರವಾಚಕಾಃ ಬಲದೇವಾನಂದ ಸಾಗರಃ ಅಂದಾಗ, ಸರಿಯಾಗಿ ಆರುಮುಕ್ಕಾಲು…. ಆ ಮಾರಾಯ ಬಲದೇವಾನಂದ ಸಾಗರಾಹ ಗೆ ಹುಷಾರು ತಪ್ಪುತ್ತಲೇ ಇರಲಿಲ್ಲವೇನೋ. ಒಂದೂ ದಿನ ತಪ್ಪದ ಹಾಗೆ ಸಂಸ್ಕೃತ ವಾರ್ತೆ ಕೇಳಿಸುತ್ತಿದ್ದರು. ನಂತರ ಚಿಂತನ, ಆಮೇಲೆ ಪ್ರದೇಶ ಸಮಾಚಾರ ಹೀಗೆ ರೇಡಿಯೋ ಕಾರ್ಯಕ್ರಮಗಳು ಮುಂದುವರಿಯುತ್ತಿರುವಾಗ ನನಗೂ ಹಾಸಿಗೆಗೂ ಇರುವ ಅಂಟು ನಿಧಾನವಾಗಿ ಬಿಡಿಸಿಕೊಳ್ಳುತ್ತಿತ್ತು. ಅಂಟು ಅಂದರೆ ಅದೊಂದು ನೀಳ್ಗತೆ. ಇಲ್ಲಿ ಸ್ವಲ್ಪ polished ಭಾಷೆಯಲ್ಲಿ ಹೇಳ್ತೇನೆ. ಬಾಲ್ಯದಲ್ಲಿ ನಾನು bedwetting ಮಾಡಿಕೊಳ್ಳುವ ಹವ್ಯಾಸ ಇತ್ತು; ಹವ್ಯಾಸ ಅನ್ನುವುದಕ್ಕೆ ಅದೇನು ಫೋಟೋಗ್ರಫಿ, ಪಕ್ಷಿವೀಕ್ಷಣೆ, ಚಾರಣ ಇಂತಹದ್ದೇನಲ್ಲ. ನಿತ್ಯವೂ ತಪ್ಪದೇ ನಡೆಯುತ್ತಿದ್ದರಿಂದ ಹಾಗಂದಿದ್ದು. ನನ್ನ ಬಾಲ್ಯದಲ್ಲಿ ಕನಸು ನನಸಾಗುತ್ತಿದ್ದುದು ಉಂಟು. ಅದು ಈ ಹವ್ಯಾಸದ ಮೂಲಕವಷ್ಟೇ! ನಿತ್ಯವೂ ನಾನು ಹೊರಗೆಲ್ಲೋ ಹೋಗಿ ಸೂಸು ಮಾಡಿಬಂದಿರುತ್ತಿದ್ದೆ. ಎಚ್ಚರವಾದಾಗ ಎಂದಿನಂತೆ ಎಡವಟ್ಟಾಗಿರುತ್ತಿತ್ತು!! ಕನ್ನಡಕ್ಕೆ ಅನುವಾದಿಸಿದರೆ ಆ ಬಾಲ್ಯದ ಸಂಕೋಚ ಮತ್ತೆ ಮರಳಿಬಿಡುವುದಲ್ಲಾಂತ ಈ ರೀತಿ ಪಾಲಿಶ್ ಮಾಡಿದ್ದೇನಷ್ಟೇ. ಸಧ್ಯಕ್ಕೆ ಈ ಕತೆ ಇಲ್ಲಿಗೇ ನಿಂತಿರಲಿ. ಅಮ್ಮನ ಹೊರಗಿನ ಕೆಲಸಗಳೆಲ್ಲ ಮುಗಿದು ಅಡುಗೆ ಮನೆಗೆ ಬಂದು ರೊಟ್ಟಿ ಮಾಡಲು ಅಣಿ ಮಾಡಿಕೊಳ್ಳುತ್ತಿದ್ದರು. ಅಮ್ಮನ ತಿಂಡಿ ಅಂದರೆ ಅದು ರೊಟ್ಟಿಯೇ. ಅಪ್ಪಿತಪ್ಪಿ ಉಪ್ಪಿಟ್ಟೋ ಚಿತ್ರಾನ್ನವೋ ಆದರೆ ಆ ದಿನ ಅಮ್ಮನ ಆರೋಗ್ಯ ಸರಿಯಿಲ್ಲ ಅಂತ ಅರ್ಥ, ಅಥವಾ ಬೆಳಗಿನ ಗ್ರಹಚಾರ ನೆಟ್ಟಗಿಲ್ಲ ಅಂತ ಇನ್ನೊಂದು ಅರ್ಥ. ರೊಟ್ಟಿಯ ಹೊರತಾಗಿ ಬೇರೆ ಯಾವುದೇ ತಿಂಡಿಯನ್ನೂ ನಾನೂ ನನ್ನ ಕೊನೆಯ ಸೋದರಮಾವನೂ ಒಕ್ಕೊರಲಿನಿಂದ ನಿರಾಕರಿಸುತ್ತಿದ್ದೆವು. ಅದರಲ್ಲೂ ಅಕ್ಕಿರೊಟ್ಟಿಯೇ ಆಗಬೇಕು. ಅಪರೂಪಕ್ಕೆ ಒಮ್ಮೊಮ್ಮೆ ಅಕ್ಕಿಹಿಟ್ಟು ಖಾಲಿಯಾಗಿ ಮುದ್ದೆ ಮಾಡಲು ಯಥೇಚ್ಛವಾಗಿರುತ್ತಿದ್ದ ರಾಗಿ ಹಿಟ್ಟಿನ ರೊಟ್ಟಿಯೇನಾದರೂ ಆಯ್ತೋ, ಅದಕ್ಕೂ ಗ್ರಹಚಾರ ಬಿಡಿಸುತ್ತಿದ್ದೆವು. ರೊಟ್ಟಿಗೆ ನಿತ್ಯವೂ ತೆಂಗಿನಕಾಯಿ ಚಟ್ನಿ, ಮುಂಗಾರಿನಲ್ಲಾದರೆ ತಿಂಗಳ ಹುರುಳಿಯ ಕಾಯಿ ಫಲ್ಯ, ಆಲೂಗಡ್ಡೆ ಫಲ್ಯ. ಅಮ್ಮನ ಆ ಒಂದು ರೊಟ್ಟಿ ತಿಂದರೆ ಮಧ್ಯಾಹ್ನ ಊಟದ ಅಗತ್ಯವಿರುತ್ತಿರಲಿಲ್ಲ. ಹಾಗಾಗಿ ಸ್ಕೂಲ್ ನ ಮಧ್ಯಾಹ್ನದ ಊಟದ ಸಮಯದಲ್ಲಿ ಅದೆಷ್ಟು ಒತ್ತಾಯಿಸಿದರೂ, ಗೆಳೆಯರ ಜೊತೆಯಲ್ಲಿ ಆಟ ಆಡುವುದಕ್ಕೆ ಜಾರಿಕೊಳ್ತಿದ್ದೆ. ಹಾಗೆ ಆಟ ಆಡುವಾಗ, ಕಳ್ಳ ಪೊಲೀಸ್ ಆಟವೇನಾದರೂ ಆಗಿದ್ದು, ಗುಡ್ಡದಂತೆ ಇದ್ದ ನಮ್ಮ ಊರಿನ ಕೆಳಭಾಗದಲ್ಲಿದ್ದ ಸ್ಕೂಲ್ ನಿಂದ ಗುಡ್ಡದ ತುದಿಯಲ್ಲಿದ್ದ ನಮ್ಮ ಮನೆಯ ಸಮೀಪ ಬಂದದ್ದೇನಾದರೂ ಆಗಿದ್ದರೆ ಅಂತಹ ಮಧ್ಯಾಹ್ನ ಊಟಕ್ಕೆ. ಇಲ್ಲಾಂದ್ರೆ ಚಕ್ಕರ್. ಒತ್ತಾಯಗಳಿಗೆ ಮಣಿಯದ ನನ್ನನ್ನು ಬದಲಾಯಿಸಲಾಗದೇ ಅಮ್ಮನೇ ಒಂದರ್ಧ ರೊಟ್ಟಿಯನ್ನು ಬ್ಯಾಗಿನೊಳಗೆ ಹಾಕಿ ಸ್ಕೂಲಿಗೆ ಕಳಿಸ್ತಿದ್ದರು. ಅಮ್ಮನ ಅಡುಗೆ ಅಂದರೆ ಅದು ಖಾರಾ ಬಾಂಬು! ಓಹೋ, ಆ ಖಾರಾಪುಡಿಯನ್ನು ತಯಾರಿ ಮಾಡಿಕೊಳ್ಳುವುದಂತೂ ಅಮ್ಮನ ಸಂಪ್ರದಾಯ. ಮೆಣಸಿನಕಾಯಿ ಹೆಕ್ಕಿ ಅದನ್ನು ಬಿಸಿಲಿನಲ್ಲಿ ಹದವಾಗಿ ಒಣಗಿಸಿ ಆಮೇಲೆ ಮೆಲು ಉರಿಯಲ್ಲಿ ಹುರಿದು ಪುಡಿಮಾಡಿಸುತ್ತಿದ್ದ ಪ್ರಕ್ರಿಯೆ, ನಮ್ಮ ರಕ್ಷಣಾ ಇಲಾಖೆಯ ಮದ್ದುಗುಂಡುಗಳ ತಯಾರಿಕೆಯ ಹಾಗೆ ಇರುತ್ತಿತ್ತು. ಇನ್ನು ಉಳಿದ ಸಂಬಾರ ಪದಾರ್ಥಗಳ ಏರ್ಪಾಡು ಅಂದರೆ ಅದು ಬಿಡಿ, ಬಜೆಟ್ ಮಂಡಿಸುವುದಕ್ಕೂ ಸಹ ಹಣಕಾಸು ಸಚಿವರು ನನ್ನ ಅಮ್ಮನ ರೀತಿಯ ತಯಾರಿ ಮಾಡಿಕೊಳ್ಳಲಾರರು! ಅಮ್ಮನ ಆ ಖಾರಾಬಾಂಬಿಗೆ ನಾವು ಎಷ್ಟು ಒಗ್ಗಿಹೋಗಿದ್ದೆವೆಂದರೆ ಯಾರಾದರೂ ನೆಂಟರು ಬಂದರೆ ಅವರ ಮೇಲಿನ ಕಾಳಜಿಯಿಂದ ಅಮ್ಮ ಸ್ವಲ್ಪ ಖಾರ ಕಡಿಮೆ ಮಾಡಿದರೂ ಅವರ ಬೆವರಿಳಿಯುತ್ತಿರುತ್ತಿತ್ತು. ನಾವು ಬೇರೆ ಮನೆಗಳಲ್ಲಿ ಊಟ ಮಾಡುವಾಗ ಉಪ್ಪಿನ ಕಾಯಿ ಇದ್ದರಷ್ಟೇ ಅಮ್ಮನ ಬಾಂಬಿಗೆ ತುತ್ತಾದ ನಮ್ಮ ನಾಲಿಗೆಗೆ ಬೇರೆಯವರ ಸಾಂಬಾರಿನ ರುಚಿ ಹೊಂದಿಸಿಕೊಳ್ಳಬಹುದಾಗಿತ್ತು. ಅಮ್ಮನ ಇನ್ನೊಂದು ವೈಖರಿಯೆಂದರೆ ಕಾಲಕ್ಕೆ ತಕ್ಕಂತೆ, ಋತು ಬದಲಾದ ಹಾಗೆ ಅಮ್ಮನ ತರಕಾರಿ ಪದಾರ್ಥಗಳೂ ಬದಲಾಗುತ್ತಿದ್ದವು. ಒಂದೇ ರೀತಿಯ ತರಕಾರಿಯನ್ನು ಯಾವತ್ತೂ ಪುನರಾವರ್ತಿಸುತ್ತಿರಲಿಲ್ಲ. ಸೊಪ್ಪು ಹೊಂದಿಸುವುದಕ್ಕಂತೂ ಅರ್ಧ ಮೈಲಿ ಸುತ್ತಿ ಬರುತ್ತಿದ್ದರು. ಇನ್ನು ಅಣಬೆ ಅಂದರೆ ಮುಂಜಾವಿನಲ್ಲಿಯೇ ಹೊರಟು ಒಂದು ಬುಟ್ಟಿ ಅಣಬೆ ಹೊಂದಿಸಿ ತಂದಿಟ್ಟಿರುತ್ತಿದ್ದರು. ಸೀಗೆಸೊಪ್ಪು, ನುಗ್ಗೆಸೊಪ್ಪು, ಬಸಳೆಸೊಪ್ಪು, ಬಿದಿರಿನ ಕಳಲೆ, ಗದ್ದೆಬದುಗಳಲ್ಲಿ ಇರ್ತಿದ್ದ ಕಹಿಎಣಿಗೆ ಸೊಪ್ಪು. ಹಲಸಿನ ಬಡುಕು, ಹಲಸಿನ ಬೀಜ, ಇವು ಕೆಲವೇ ಕೆಲವು. ಇನ್ನು ತರಕಾರಿಗೆ ತಕ್ಕಂತೆ ಹೊಂದುವ ಕಾಳುಗಳು. ಅವೂ ಸಹ ಎರಡು ದಿನಕ್ಕೆ ಪುನರಾವರ್ತನೆಯಾಗುತ್ತಿರಲಿಲ್ಲ. ಇಷ್ಟೆಲ್ಲಾ ಆಹಾರ ವೈವಿಧ್ಯತೆಯಿರುತ್ತಿದ್ದರಿಂದ ನಮಗೆ ಅನಾರೋಗ್ಯ ಅನ್ನುವುದೇ ಗೊತ್ತಿರಲಿಲ್ಲ. ಅಪರೂಪಕ್ಕೆಂದು ಜ್ವರವೋ, ಕೆಮ್ಮೋ ಆದರೆ ನಮ್ಮ ಊರಿನ ಪಕ್ಕದಲ್ಲಿರುವ ಶೆಟ್ಟಿಹಳ್ಳಿಯ ಸಂತಮರಿಯಮ್ಮನ ಆಸ್ಪತ್ರೆ. ಅಲ್ಲಿ ಒಂದು ಕ್ಯಾನ್ ನಲ್ಲಿ ಇರಿಸುತ್ತಿದ್ದ ಕೆಮ್ಮಿನ ಸಿರಪ್, ಅಥವಾ ಬಿಸಿನೀರಿನಲ್ಲಿ ಸದಾ ಕುದಿಸುತ್ತಿದ್ದ ಆ ಗಾಜಿನ ಸಿರಿಂಜುಗಳಲ್ಲಿ ಮೇಲಿನ ತುದಿಗೆ ಒಂದೆರಡು ಹನಿಯಂತೆ ಎಳೆದು ಚುಚ್ಚುತ್ತಿದ್ದ ಇಂಜೆಕ್ಷನ್ನು, ಅದೂ ಯುಗಾದಿ, ದೀಪಾವಳಿಯ ಹಾಗೆ ವರ್ಷಕ್ಕೊಂದೋ ಅಥವಾ ಎರಡೋ ಅಷ್ಟೇ! ನಾವು ಮಳೆಯಲ್ಲಿ ನೆನೆಯುವುದು ಧೂಳು ಕೊಳಕಿನಲ್ಲಿ ಆಟವಾಡುತ್ತಿದ್ದಕ್ಕೆ ಶೀತ ನೆಗಡಿ ಅನ್ನುವುದು ಆಗ್ಗಾಗ್ಗೆ ತೋರ್ಪಡಿಸಿಕೊಳ್ಳುತ್ತಿತ್ತು. ಹಾಲಿಗೆ ಒಂದಿಷ್ಟು ಮೆಣಸಿನ ಪುಡಿ, ಇನ್ನೊಂದಿಷ್ಟು ಅರಿಶಿನ ಹಾಕಿ ಬಿಸಿಯಾಗಿ ಕುಡಿದರೆ ಅದೇ ಮದ್ದು. ಅದಕ್ಕಿಂತ ಹೆಚ್ಚಿನ ಶುಶ್ರೂಷೆಯ ಅಗತ್ಯವಿರಲಿಲ್ಲ. ಆದರೆ ಅಮ್ಮನ ನಿತ್ಯದ ಖಾರಾಬಾಂಬಿನ ಜೊತೆಯಲ್ಲೇ, ಪ್ರತಿಶನಿವಾರವೂ ಕೊತಕೊತ ಕುದಿಯುತ್ತಿದ್ದ ನೀರಿನ ಅಭ್ಯಂಜನ. ಅದಂತೂ ಲಾವಾರಸವೇ ಮೈಮೇಲೆ ಹರಿದ ಹಾಗಿರುತ್ತಿತ್ತು. ನಾನಂತೂ ಶನಿವಾರದ ಸ್ನಾನ ತಪ್ಪಿಸಿಕೊಳ್ಳುವುದಕ್ಕೆ ತುದಿಗಾಲಿನಲ್ಲಿರುತ್ತಿದ್ದೆ. ಆಗುತ್ತಿರಲಿಲ್ಲ. ಓಹೋ, ಮೈಯೆಲ್ಲಾ ಸುಟ್ಟು ಹೊಗೆ ಬರುವ ಹಾಗೆ ಮಾಡಿಬಿಡುತ್ತಿದ್ದರು. ಅಲ್ಲಿಗೆ ಮಿಕ್ಕ ಖಾಯಿಲೆಗಳೆಲ್ಲ ಅದರಿ ಅಲ್ಲಾಡಿ ಬೆದರಿ ಬೆಂಡಾಗಿ ಹೋಗಿಬಿಡಬೇಕಿತ್ತಷ್ಟೇ! ಅಮ್ಮನ ಜೊತೆಗಿನ ಈ ದಿನಗಳಲ್ಲಿ ಅಂಗನವಾಡಿಯ ಸಮಯದಲ್ಲಿ ಆಂಟಿಯೂ ಇದ್ದರು. ನಾನು ಒಂದನೇ ಕ್ಲಾಸಿನಲ್ಲಿದ್ದಾಗ ಅವರ ಮದುವೆಯಾಯ್ತು. ಅದಾದ ನಂತರ ಏಳನೇ ಕ್ಲಾಸಿನ ತನಕ ಅಮ್ಮನ ಜೊತೆಯಲ್ಲಿಯೇ ಇದ್ದೆ. ಅಮ್ಮನ ಜೊತೆಯಿದ್ದು ಅದೆಷ್ಟು ಅವಲಂಬಿತನಾಗಿದ್ದೆ ಅಂದರೆ, ನನಗೆ ಬಾಗಿ ನನ್ನ ಕಾಲು ತೊಳೆದುಕೊಳ್ಳುವುದಕ್ಕೇ ಬರುತ್ತಿರಲಿಲ್ಲ. ನಾಲ್ಕನೇ ಕ್ಲಾಸಿನಲ್ಲಿ ನನ್ನ ಇಮ್ಮಡಿಗಳನ್ನು ಉಜ್ಜಿ ತೊಳೆಯುವುದಕ್ಕೆ ಕಲಿತಿದ್ದು. ಅಷ್ಟೇ ಯಾಕೆ, ಮೂಗಿನ ಸಿಂಬಳ ತೆಗೆಯುವುದು ಹೇಗೆ ! ಅಂತಲೂ ಗೊತ್ತಿರಲಿಲ್ಲ. ಅಮ್ಮನ ಆ ಆರೈಕೆ ಕಾಳಜಿಗಳು ಮುಂದೆ ನಾನು ಹಾಸ್ಟೆಲ್ ಸೇರಿದ ದಿನಗಳಲ್ಲಿ ವಿಪರೀತ ಹಿಂಸೆ ಅನುಭವಿಸುವ ಹಾಗೂ ಮಾಡಿದವು. ಆದರೆ ಬಾಲ್ಯದ ಅಮ್ಮನ ಆ ಆಹಾರ ಪದ್ಧತಿಯು ನನ್ನ ಆರೋಗ್ಯವನ್ನು ಏರುಪೇರಾಗದಂತೆ ಇರಿಸಿತ್ತು. ಒಂದು ಸಾರ್ತಿ ಹಾಸನದಲ್ಲಿದ್ದಾಗ ಟೈಫಾಯ್ಡ್ ಆಗಿ ಆಸ್ಪತ್ರೆ ದಾಖಲಾಗಿದ್ದ ಒಂದೇ ಘಟನೆ. ಅದು ಬಿಟ್ಟು ನಾನು ಈವರೆಗೆ ಬೇರೆ ಖಾಯಿಲೆ ಅಂತ ಡಾಕ್ಟರನ್ನು ನೋಡಿಲ್ಲ. ಇನ್ನು ದೇಶಬಿಟ್ಟ ನಂತರವಂತೂ, ಒಂದು ದಿನ ಡ್ರೈವರ್ ಲೈಸಿನ್ಸ್ ಪಡೆಯುವುದಕ್ಕೆ ಕಡ್ಡಾಯವಾಗಿ ನಡೆಸಬೇಕಾದ ತಪಾಸಣೆಗೆಂದು ಆಸ್ಪತ್ರೆಗೆ ಹೋಗಿದ್ದು; ಆಮೇಲೆ ಒಂದು ಸಾರ್ತಿ ರಾಶಿ ಹಿಮ ಸುರಿದಿದ್ದ ಚಳಿಗಾಲದಲ್ಲಿ ಕೆಮ್ಮಾಗಿ ನಿರ್ಲಕ್ಷಿಸಿದ್ದಕ್ಕೆ ಅದು ಜ್ವರಕ್ಕೆ ತಿರುಗಿ ಒಂದು ದಿನ ಆಸ್ಪತ್ರೆಗೆ ಹೋಗಿದ್ದೆ. ಅದು ಬಿಟ್ಟರೆ ಹತ್ತು ವರ್ಷಗಳಲ್ಲಿ ಆಸ್ಪತ್ರೆಯ ಮುಖ ನೋಡಬೇಕಾದ ಅಗತ್ಯವೇ ಬಂದಿಲ್ಲ ನನಗೆ. ಹಾಂ, ಸದಾ ಕಂಪ್ಯೂಟರ್ ಮುಂದೆಯೇ ನನ್ನ ಕೆಲಸವಾಗಿರುವುದರಿಂದ, ಮೊದಲ ಕೆಲವು ವರ್ಷಗಳ ಸಿಆರ್‌ಟಿ ಮಾನಿಟರುಗಳ ಕೃಪೆಯಿಂದಾಗಿ ದೃಷ್ಟಿ ನೆಟ್ಟಗೆ ಮಾಡಿಕೊಳ್ಳುವುದಕ್ಕೆಂದು ಕನ್ನಡಕ ಕಡ್ಡಾಯವಾಗಿಬಿಟ್ಟಿದೆ! ಅದಕ್ಕಂತೂ ಪ್ರತಿ ಎರಡು ವರ್ಷಕ್ಕೊಮ್ಮೆ ರಾಜಾಸೀಟಿನ ಮೇಲೆ ಕೂತು ಆ ಡಾಕ್ಟರು ತಿರುಗಿಸುವ ಲೆನ್ಸುಗಳ ಮೂಲಕ ನೋಡಿ ನನಗೆ ಓದಲು ಬರ್ತದೋ ಇಲ್ಲವೋ ಅಂತ ಅವರ ಮುಂದೆ ಸಾಬೀತುಪಡಿಸಬೇಕಾಗ್ತದೆ. ಆದರೆ ಸಣ್ಣಪುಟ್ಟ ಖಾಯಿಲೆಗಳಿಗೆ ನಾನು ಇಂದೂ ಸಹ ಅಮ್ಮನ ಆ ಮನೆ ಔಷಧಿಗಳನ್ನೇ ಅನುಸರಿಸ್ತೇನೆ, ಖಾರಾಬಾಂಬು, ಹೊಗೆಯಾಡಿಸುವಂತಹ ಆ ಅಭ್ಯಂಜನ ಸ್ನಾನ ಇವೆರಡನ್ನು ಹೊರತುಪಡಿಸಿ! *********
ಸ್ವಾತ್ಮಗತ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಕೋಟ ಶಿವರಾಮ ಕಾರಂತರು..! ಕೆ.ಶಿವು ಲಕ್ಕಣ್ಣವರ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ ೧೦-೧೦-೧೯0೨ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೇ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ ಹಾಡಿದರು… ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದರು. ಚಲನಚಿತ್ರ ಮಾಡಿದರು, ಯಕ್ಷಗಾನ ಪ್ರಯೋಗಗಳನ್ನು ನಡೆಸಿದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದರು… ಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾ ರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು… ೧೯೫೮ರಲ್ಲಿ ಇವರ ಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ೧೯೬೩ರಲ್ಲಿ ಇವರಿಗೆ ಗೌರವ ಡಾಕ್ಟರೇಟ್ ನೀಡಿದರೆ, ೧೯೬೮ರಲ್ಲಿ ಭಾರತ ಸರ್ಕಾರ ಪದ್ಮಭೂಷಣ ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ ೩೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ನೀಡಿ ಪರಿಷತ್ತು ಸನ್ಮಾನಿಸಿತು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು… ಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ. ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫೦ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ… ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು ೯-೧೨-೧೯೯೭ರಲ್ಲಿ ಮಂಗಳೂರಿನಲ್ಲಿ ನಿಧನರಾದರು..! ***********
ಸ್ವಾತ್ಮಗತ
ಗಜಾನನ ಹೆಗಡೆ ಅಸ್ತಂಗತ.. ಕೆ.ಶಿವು ಲಕ್ಕಣ್ಣವರ ಖ್ಯಾತ ಸುದ್ದಿ ನಿರೂಪಕ, ಹಿರಿಯ ಪತ್ರಕರ್ತ ಗಜಾನನ ಹೆಗಡೆ ಅಸ್ತಂಗತ..! ಖ್ಯಾತ ಸುದ್ದಿ ನಿರೂಪಕ, ಹಿರಿಯ ಪತ್ರಕರ್ತ ಗಜಾನನ ಹೆಗಡೆ ಇಂದು ವಿಧಿವಶರಾಗಿದ್ದಾರೆ. ಇತ್ತೀಚಿಗೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಜೆ.ಪಿ.ನಗರದ ಪಿ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ ೨೬-೨-೨೦೨೦ರಂದು ಮಧ್ಯಾಹ್ನ ಕೊನೆಯುಸಿರೆಳೆದರು. ಮೃತರಿಗೆ ಪತ್ನಿ, ಒಬ್ಬ ಪುತ್ರ (ಮಯೂರ) ಹಾಗೂ ಒಬ್ಬ ಪುತ್ರಿ ಇದ್ದಾರೆ. ಉತ್ತರ ಕನ್ನಡ ಮೂಲದವರಾದ ಗಜಾನನ ಹೆಗಡೆಯವರು ಹೊನ್ನಾವರ – ಗೇರುಸೊಪ್ಪ ಮಧ್ಯೆದಲ್ಲಿರೋ ಕವಲಕ್ಕಿ ಗ್ರಾಮದವರು. ಮಾಧ್ಯಮ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕೆಂದು ಇಪ್ಪತ್ತು ವರ್ಷಗಳ ಹಿಂದೆ ಮನೆ ಬಿಟ್ಟು ಹೊರ ಬಂದಿದ್ದರು. 2001ರಲ್ಲಿ ‘ಈ ಟಿವಿ’ ಕನ್ನಡ ಸುದ್ದಿ ವಾಹಿನಿ ಮೂಲಕ ನ್ಯೂಸ್ ಆಂಕರ್ ಆಗಿದ್ದವರು. ಬಳಿಕ ಕನ್ನಡ ವಾಹಿನಿ ‘ಕಸ್ತೂರಿ 24’ನಲ್ಲಿ ಆಂಕರ್ ಚೀಫ್ ಆಗಿ ಕಾರ್ಯ ನಿರ್ವಹಿಸಿದರು. ಅಲ್ಲಿಂದ ಮತ್ತೊಂದು ಖಾಸಗಿ ಸುದ್ದಿ ವಾಹಿನಿಯಾದ ‘ಪ್ರಜಾ ಟಿವಿ’ಯಲ್ಲಿ ಮುಖ್ಯ ಸುದ್ದಿ ನಿರೂಪಕರಾಗಿ ಮನೆ ಮಾತಾಗಿದ್ದರು. ಪ್ರಚಲಿತ ವಿದ್ಯಮಾನಗಳ ಕುರಿತು ಗಂಟೆಗಟ್ಟಲೇ ಚರ್ಚೆ ನಡೆಸಿ ತೆಗೆದುಕೊಂಡ ವಿಷಯದ ಮೇಲೆ ಬೆಳಕು ಚೆಲ್ಲುತ್ತಿದ್ದರು. ಮಾಧ್ಯಮ ರಂಗದಲ್ಲಿ ಅನೇಕ ಮಿತ್ರರನ್ನು ಸಂಪಾದಿಸಿದ್ದರು ಅವರು. ಜೊತೆಗೆ ಅನೇಕ ಶಿಷ್ಯರಿಗೂ ಅವರು ಮಾರ್ಗದರ್ಶಕರಾಗಿದ್ದರು. ಇಂತಹ ಗಜಾನನ ಹೆಗಡೆ ಧಾರವಾಡದಲ್ಲಿ ಡಿಗ್ರಿ ಓದುತ್ತಿರುವಾಗಲೇ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿದ್ದರು. ಮುಂದೆ ಅದೇ ಸಲುಗೆ ಪ್ರೇಮಕ್ಕೆ ತಿರುಗಿ ಇಬ್ಬರೂ ಪಾಲಕರನ್ನು ಒಪ್ಪಿಸಿ ಮದ್ವೆಯಾಗಿದ್ದರು. ಗಜಾನನ ಹೆಗಡೆಯವರು ಪ್ರೀತಿಸಿದ ಹುಡುಗಿ ಲಿಂಗಾಯತರೆಂಬ ಕಾರಣಕ್ಕೆ ಬ್ರಾಹ್ಮಣರಾದ ಹೆಗಡೆಯವರ ಮನೆಯವರು ಮೊದ ಮೊದಲು ಒಪ್ಪಿರಲಿಲ್ಲವಂತೆ. ನಂತರ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾದ ಗಜಾನನ ಅವರಿಗೆ ಹಾಡು, ನಾಟಕವನ್ನು ಬಿಟ್ಟು ಬೇರೇನೂ ಗೊತ್ತಿರಲಿಲ್ಲ. ಹೀಗಾಗಿ ಪ್ರೀತಿಸಿದವಳನ್ನು ಕಟ್ಟಿಕೊಂಡ ಸಂತೋಷ ಒಂದು ಕಡೆಯಾದರೆ, ಯಾರ ಸಹಾಯವಿಲ್ಲದೇ ಬದುಕನ್ನು ಕಟ್ಟಿಕೊಳ್ಳೋದು ಹೇಗೆ? ಎಂಬ ಚಿಂತೆಯಾಗಿತ್ತು. ಆಗ ನೆರವಿಗೆ ಬಂದದ್ದೇ ‘ಈ ನಾಡು’ ಕನ್ನಡ ವಾಹಿನಿ! ಆಗ ತಾನೆ ಮೂಡಿ ಬಂದಿದ್ದ ‘ಈ ಟಿವಿ’ಯಲ್ಲಿ ಗೆಳೆಯರ ನೆರವಿನಿಂದ ಗಜಾನನ ಹೆಗಡೆ ಮೊದಲಿಗೆ ಎಂಟರ್ ಟೈನ್ಮೆಂಟ್ ವಿಭಾಗದಲ್ಲಿ ನಿರೂಪಕರಾಗಿ ಕೆಲಸ ಆರಂಭಿಸುತ್ತಾರೆ. ಈ ವೇಳೆ, ಅದಾಗಲೇ ಹೈದರಾಬಾದ್ ನ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಅದೇ ಟಿವಿಯಲ್ಲಿ ನ್ಯೂಸ್ ಆಂಕರ್ ಆಗಿದ್ದ ಗೌರೀಶ್ ಅಕ್ಕಿ ಮತ್ತು ಚೆನ್ನವೀರ ಸಗರನಾಳ್ ಅವರ ಪರಿಚಯವಾಗುತ್ತೆ. ಮದುವೆ ಮಾಡಿಕೊಂಡು ಪತ್ನಿಯನ್ನು ಊರಿನಲ್ಲಿಯೇ ಬಿಟ್ಟು ಬಂದಿದ್ದ ಗಜಾನನ ಅವರಿಗೆ ಇಬ್ಬರು ಸ್ನೇಹಿತರು ತಮ್ಮಲ್ಲೇ ಆಶ್ರಯವೊದಗಿಸುತ್ತಾರೆ. ಮುಂದೆ ಕೆಲ ದಿನಗಳಲ್ಲಿಯೇ ಗಜಾನನ ಹೆಗಡೆಯವರು ತಮ್ಮ ಪತ್ನಿಯನ್ನು ಹೈದರಾಬಾದ್ ಗೆ ಕರೆದುಕೊಂಡು ಬಂದು ಸಂಸಾರದ ನೊಗ ಎಳೆಯುತ್ತಾರೆ. ಹೈದರಾಬಾದ್ ನಲ್ಲಿಯೇ ಸುಮಾರು ಹತ್ತು ವರ್ಷಗಳನ್ನು ಕಳೆದ ಗಜಾನನ ಹೆಗಡೆ ತಿರುಗಿ ನೋಡಿದ್ದಿಲ್ಲ. ಗಜಾನನ ಹೆಗಡೆ ಕನ್ನಡ ಸುದ್ದಿ ನಿರೂಪಕರಲ್ಲಿ ಎದ್ದು ಕಾಣುವಂಥ ವ್ಯಕ್ತಿತ್ವವುಳ್ಳವರು. ಅವರದು ಕಂಚಿನ ಕಂಠ. ಕನ್ನಡವನ್ನು ಬಹುವಾಗಿ ಪ್ರೀತಿಸುತ್ತಿದ್ದ ಗಜಾನನ ಹೆಗಡೆ ಕನ್ನಡವನ್ನು ಅಷ್ಟೇ ಸೊಗಸಾಗಿ ಮತ್ತು ಸ್ಪಷ್ಟವಾಗಿ ಮಾತನಾಡುತ್ತಿದ್ದರು. ಟಿವಿಯಲ್ಲೂ ಅಷ್ಟೇ ಸುಂದರವಾಗಿ ಕಾಣುತ್ತಿದ್ದರು. ಗಜಾನನ ಹೆಗಡೆಯವರು ಓರ್ವ ರಂಗಕರ್ಮಿ ಕೂಡ ಆಗಿದ್ದರು ಅನ್ನೋದು ಬಹಳಷ್ಟು ಜನರಿಗೆ ಗೊತ್ತಿರಲಿಕ್ಕಿಲ್ಲ. ಮಾಧ್ಯಮ ಕ್ಷೇತ್ರಕ್ಕೆ ಕಾಲಿಡುವ ಮುನ್ನ ಗಜಾನನ ಅವರು ನೀನಾಸಂ ನಲ್ಲಿದ್ದರು. ಬಣ್ಣ ಹಚ್ಚಿ ನಾಟಕ ಮಾಡಿದ್ದುಂಟು. ಒಳ್ಳೆಯ ಗಾಯಕರೂ ಆಗಿದ್ದ ಗಜಾನನ ಹೆಗಡೆ, ಬೇಂದ್ರೆಯವರ ಶ್ರಾವಣ ಬಂತು ನಾಡಿಗೆ ಹಾಡನ್ನು ತಮ್ಮದೇಯಾದ ವಿಶಿಷ್ಟ ರೀತಿಯಲ್ಲಿ ಹಾಡುತ್ತಿದ್ದರು. ಮಾತ್ರವಲ್ಲ, ಅವರು ಅಲ್ಲಲ್ಲಿ ಸಂಗೀತ ಕಚೇರಿ ನಡೆಸಿದ್ದೂ ಉಂಟು. ಯೂ ಟ್ಯೂಬ್ ಚಾನೆಲ್ ಗೂ ಅಲ್ಬಮ್ ಮಾಡಿದ್ದರು. ಇಂತಹ ಗಜಾನನ ಹೆಗಡೆ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಮಾಧ್ಯಮ ಸ್ನೇಹಿತರಿಗೆ ಶಾಕ್ ಉಂಟಾಗಿದೆ. ಮೊದಲಿಗೆ ಯಾರೂ ನಂಬದಾಗಿದ್ದರು. ಆಂಕರ್ಸ್ ಗ್ರೂಪ್ ನಲ್ಲಿ ಆ ಬಗ್ಗೆ ಚರ್ಚೆ ನಡೆದಿತ್ತು. ಆಸ್ಪತ್ರೆಯಲ್ಲಿ ಶವವಾಗಿ ಮಲಗಿದ್ದ ಗಜಾನನ ಹೆಗಡೆಯವರ ಭಾವಚಿತ್ರವನ್ನು ನೋಡಿ ಎಲ್ಲರೂ ದಿಗ್ಬ್ರಮೆಗೊಳಗಾದರು. ಈ ವೇಳೆ ಬಹುತೇಕ ಎಲ್ಲ ಸುದ್ದಿ ನಿರೂಪಕರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಇಂಥ ಗಜಾನನ ಹೆಗಡೆಯವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಗಜಾನನ ಹೆಗಡೆಯವರ ಸ್ವಂತ ಊರಿಗೆ ತೆಗೆದುಕೊಂಡು ಹೋಗಲಾಗುತ್ತೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿರೋ ಹೆಗಡೆ ನಿವಾಸದಲ್ಲಿ ಯಾರೂ ಇಲ್ಲದೇ ನೀರವ ಮೌನ ಆವರಿಸಿದೆ. ಏನೇ ಆಗಲಿ ಗಜಾನನ ಹೆಗಡೆಯವರಿಗೆ ಶಾಂತಿ ದೊರಕಲಿ ಎಂದು ಹಾರೈಸೋಣ. *********
ಅವ್ಯಕ್ತಳ ಅಂಗಳದಿಂದ
ದೌರ್ಬಲ್ಯ-ಸಾಮರ್ಥ್ಯ -2 ಅವ್ಯಕ್ತ ನನ್ನ ಹಿಂದಿನ ಕಥೆಯಲ್ಲಿ ಹೇಳಿದ ರೀತಿ ನಮ್ಮ ದೃಷ್ಟಿಕೋನ ದಲ್ಲಿ ಬದಲಾವಣೆಯಾದಂತೆ ನಮ್ಮ ದೌರ್ಬಲ್ಯಗಳು ನಮ್ಮ ಸಾಮರ್ಥ್ಯಗಳಾಗಿ ಬದಲಾಗುತ್ತವೆ….. ಇದಕ್ಕೆ ಅಂಟಿಕೊಂಡಂತೆ ಇನ್ನೊಂದು ಕಥೆಯನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿದುಕೊಳ್ಳಲು ಪ್ರಯತ್ನಿಸೋಣ… ಸಾಮಾನ್ಯವಾಗಿ ಮಕ್ಕಳು ಅಥವಾ ಕೆಲವು ದೊಡ್ಡವರು ತಮಗೆಲ್ಲ ತಿಳಿದಿದೆ ಎಂದು ಪ್ರತಿಯೊಂದು ಘಟನೆಯನ್ನು ಪ್ರತಿಯೊಬ್ಬರನ್ನು ಸರಿ-ತಪ್ಪುಗಳಲ್ಲಿ, ಒಳ್ಳೆಯದು-ಕೆಟ್ಟದ್ದು ಗಳಲ್ಲಿ ತೂಗಿ ತಮ್ಮ ಹಳೆಯ ಅನುಭವಗಳ ಮೇರೆಗೆ ಅವರದೇ ಆದ ಒಂದು ದೃಷ್ಟಿಕೋನವನ್ನು ಮಾಡಿಕೊಂಡು ಬಿಡುತ್ತಾರೆ.. ಅವರಿಗೆ ಅದೇ ಸರಿ…ಈ ನಿಟ್ಟಿನಲ್ಲಿ ನನ್ನ ಮಕ್ಕಳಲ್ಲಿಯೂ ಕೂಡ ಇದು ಕಂಡುಬಂತು… ಆ ದಿನ ನಾನು ಹೇಳಿ ಕೊಟ್ಟಿದ್ದೇನೋ ಹೌದು ನಮ್ಮ ಗುಣಗಳನ್ನು ನಾವು ತಿಳಿದುಕೊಂಡರೆ, ಅದು ನಮ್ಮ ಸಾಮರ್ಥ್ಯವಾಗಿ ಬಿಡುತ್ತವೆ…. ಆದರೆ ಎಲ್ಲೋ ಇದು ಅರ್ಧ ಸತ್ಯವಾಗಿತ್ತು. ಅದನ್ನು ಸಮಾಜದ ದೃಷ್ಟಿಯಿಂದಲೂ ಹೇಳಿಕೊಡಬೇಕಾದ ಅಗತ್ಯತೆ ಇತ್ತು… ಇದಕ್ಕೆ ಪೂರಕವಾಗಿ ಒಂದು ಹುಡುಗಿ ನನ್ನ ಬಳಿಗೆ ಬಂತು ‘ಮಿಸ್ ಮಿಸ್ಆವತ್ ಹೇಳಿದ್ದೇನೋ ನಿಜ! ನಾವು ಹೇಗಿದ್ದೇವೆ ಅದನ್ನು ಒಪ್ಪಿಕೊಂಡರೆ ನಮಗೆ ನೋವಾಗುವುದಿಲ್ಲ. ಆದರೂ ಏಕೆ ಸಮಾಜದಲ್ಲಿ ಕೆಲವೊಂದನ್ನು ಎತ್ತಿಹಿಡಿಯುತ್ತಾರೆ ?…’ ಅವಳ ಮಾತು ಕೇಳಿ ನನಗೆ ಅಯ್ಯೋ ಎನಿಸಿತು, ಹೌದಲ್ವಾ ಇದರಲ್ಲಿ ಸಮಾಜದ ಜವಾಬ್ದಾರಿಯನ್ನು ತಿಳಿಸಿ ಹೇಳೋಣ.. ಇವತ್ತಿನ ಕ್ರಿಯೆ ನನ್ನದು ಸ್ವಲ್ಪ ವಿಚಿತ್ರವಾಗಿತ್ತು, ಪ್ರತಿಯೊಂದು ಮಗುವಿನ ದೌರ್ಬಲ್ಯವು ನನಗೆ ಗೊತ್ತಿತ್ತು.. ಬೇಕಂತಲೇ ಅದನ್ನು ಎತ್ತಿ ಹಿಡಿದು ಹೀಯಾಳಿಸಿ ಬಿಟ್ಟೆ.. “ಏನೇ ಡುಮ್ಮಿ ಕೊಟ್ಟ ಕೆಲಸ ಮಾಡಿದ್ಯಾ, ಇಲ್ಲ ಬರೀ ತಿಳ್ಕೊಂಡೆ ಕೂತಿದ್ಯಾ”……“ಕೋಳಿ ಅಳುಬುರುಕಿ ಕೆಲಸ ಮುಗಿಸು ಆಮೇಲೆ ಕಾವೇರಿಯ ಹೊಳೆ ತುಂಬಿಸುವಂತೆ”…. “ಏ ಕುಳ್ಳ , ನೋಡಲಿಕ್ಕೆ ಮಾತ್ರ ಕುಳ್ಳ ಬರೀ ಕುಚೇಷ್ಟೆ ಪ್ರತಿಷ್ಠೆ ನಿನ್ನದು ಸುಮ್ಮನೆ ಕೂತು ನಿನ್ನ ಕೆಲಸ ಮಾಡು ಹುಂಬ”…. ಐದೇ ನಿಮಿಷದಲ್ಲಿ ಮಕ್ಕಳ ಮುಖಗಳೆಲ್ಲ ಚಪ್ಪೆಯಾಗಿ ಹೋದವು… ನಾನು ಮನಸ್ಸಿನಲ್ಲಿ ನಗಾಡಿ ಕೊಳ್ಳುತ್ತಾ….ಆ ದಿನದ ಕೊನೆ ಬರುವವರೆಗೂ ಅವರುಗಳನ್ನು ಗೊಂದಲದಲ್ಲಿಯೇ ಬಿಟ್ಟುಬಿಟ್ಟೆ…. ನನಗೆ ಗೊತ್ತು ಸುಲಭವಾಗಿ ಬಾಯಲ್ಲಿ ಹೇಳಿದ ನೀತಿ ಮಕ್ಕಳ ತಲೆಗೆ ಹತ್ತುವುದಿಲ್ಲ ಕ್ರಿಯೆಯಲ್ಲಿ ಮಾಡಿತೋರಿಸಿದರೆ ಮಾತ್ರ ಹತ್ತರಲ್ಲಿ ಐದು ಜನಕ್ಕಾದರೂ ಉಳಿದುಕೊಳ್ಳುತ್ತದೆ….ದಿನದ ಕೊನೆಯಲ್ಲಿ ಮಕ್ಕಳಲ್ಲಿ ಕೇಳಿದೆ, ಹೇಗಿತ್ತು ಇವತ್ತು ನನ್ನ ಮಾತಿನ ಶೈಲಿ ವೆರಿ ಸ್ಟ್ರಾಂಗ್ ಅಲ್ವಾ….. ಎಲ್ಲರೂ ಸಪ್ಪೆಯಾಗಿ ಸ್ವಲ್ಪ ಹೊತ್ತು ಕೂತರು ನಂತರ ಅದರಲ್ಲಿ ಒಬ್ಬಳು ‘ಮಿಸ್ ನೀವ್ ಇವತ್ತು ಹೀಗೆ ಮಾತನಾಡಬಾರದಿತ್ತು. ಯಾಕೆ ಅವಳನ್ನು ಹೀಯಾಳಿಸಿದಿರಿ, ಅವಳಿಗೆ ನೋವಾಗುವುದಿಲ್ಲ ವೇ?’ ಎಂದು ಕೇಳಿಯೇ ಬಿಟ್ಟಳು… ನನಗೂ ಬೇಕಿದ್ದದು ಅವೇ ತಾನೇ…. ನಾನು ಹೇಳಿದೆ ‘ಹೌದು ಬೇಕಂತಲೇ ಹೀಗೆ ಮಾಡಿದೆ.ಕೆಲವು ದಿನಗಳ ಕೆಳಗೆ ನಮ್ಮ ದೌರ್ಬಲ್ಯವನ್ನು ನಾವು ಸಾಮರ್ಥ್ಯ ವಾಗಿ ಹೇಗೆ ಉಳಿಯಬಹುದು ಎಂದು ತಿಳಿಸಿಕೊಟ್ಟಿದೆ, ಇವತ್ತು ಬೇರೆಯವರ ದೌರ್ಬಲ್ಯಗಳ ಕಡೆಗೆ ನಮ್ಮ ದೃಷ್ಟಿಕೋನ ಹೇಗಿರಬೇಕು ಹಾಗೂ ನಮ್ಮ ಜವಾಬ್ದಾರಿ ಏನು ಹೇಳಿ ನೋಡೋಣ??’ಎಲ್ಲರೂ ಯೋಚಿಸತೊಡಗಿದರು, ನನಗೆ ಗೊತ್ತಿತ್ತು ಅಷ್ಟು ಸುಲಭವಾಗಿ ಇವರು ಗ್ರಹಿಸಿರಲಿಕ್ಕಿಲ್ಲಾ… ಇನ್ನೊಬ್ಬರಿಗೆ ದೈಹಿಕವಾಗಿ ನಾವು ಹೊಡೆಯುವುದು ಜಿಗುಟುಗಳು ಎಷ್ಟು ಸರಿಯಲ್ಲವೋ ಹಾಗೆ ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹದನ್ನು ಮಾತನಾಡುವುದು ತಪ್ಪು, ಇದರಲ್ಲಿ ಅವರ ಗೌರವಕ್ಕೆ ಧಕ್ಕೆಯಾಗುತ್ತದೆ ಎಂದಾದರೆ ಎಂದಿಗೂ ಹಾಗೆ ಮಾಡಬಾರದು…’ಆತ್ಮೀಯ ಸ್ನೇಹಿತರು ಹೀಗೆ ಅಡ್ಡ ಹೆಸರು ಇಟ್ಟು ಕರೆಯಬಹುದು ಅಲ್ಲವೇ’ ಎಂದು ಇನ್ನೊಬ್ಬ ಕೇಳಿದ.. ನಮಗೆ ಆತ್ಮೀಯ ವಾದವರು ನಮ್ಮ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಮಾಜದ ಎದುರು ವರ್ತಿಸುವುದಿಲ್ಲ, ಹಾಗಾದರೆ ಮಾತ್ರ ಅವರು ನಮ್ಮ ನಿಜವಾದ ಆತ್ಮೀಯರು, ನಾವು ನಾವು ಇರುವಾಗ ಎಷ್ಟು ಸಲಿಗೆಯ ಮಾತನಾಡಿದರು, ಮುಕ್ತವಾಗಿ ತರಲೆ ಹೊಡೆದರೂ ಹತ್ತಾರು ಜನಗಳ ಎದುರು ಅವರ ಗೌರವ ಪ್ರೀತಿ ಎಷ್ಟು ಮುಖ್ಯವೋ ಅಷ್ಟೇ ಆತ್ಮೀಯರ ಗೌರವ ಪ್ರೀತಿಯನ್ನು ಕಾಪಾಡುತ್ತಾರೆ…ಇಲ್ಲವಾದರೆ ಅವರು ನಿಮ್ಮ ಪರಮಾಪ್ತರು ಅಲ್ಲವೇ ಅಲ್ಲ… ಇದು ಮಾತ್ರ ನಿಜವಾದ ಸಂಬಂಧ ವಾಗಿರುತ್ತದೆ, ನೆನಪಿನಲ್ಲಿಡಿ ಮಕ್ಕಳೇ ಎಂದೆ. ಸಮಾಜದ ಒಳಿತಿಗೆ, ಅದರ ಆರೋಗ್ಯಕರ ಬೆಳವಣಿಗೆಗೆ ಪ್ರತಿಯೊಬ್ಬನಿಗೂ ಸಾಮಾಜಿಕ ಜವಾಬ್ದಾರಿ ಇರಬೇಕು. **********************************
ಜ್ಞಾನಪೀಠ ಪ್ರಶಸ್ತಿ ವಿಜೇತರು
ದ.ರಾ.ಬೇಂದ್ರೆ ಕೆ.ಶಿವು ಲಕ್ಕಣ್ಣವರ ವರ ಕವಿ ದ. ರಾ. ಬೇಂದ್ರೆಗೆ ಅಂಬು ತಾಯಿಯೇ ಬದುಕಿನ ಮೊದಲ ಪ್ರೇರಕ ಶಕ್ತಿ..! ಈ ಅಂಬು ತಾಯಿಯ ನೆನಪಿನಲ್ಲಿ ದ.ರಾ.ಬೇಂದ್ರೆಯವರು ‘ಅಂಬಿಕಾತನಯದತ್ತ’ವಾದರು… ಈ ಅಂಬಿಕಾತನಯದತ್ತ ಕಾವ್ಯನಾಮದಿಂದ ಕನ್ನಡಿಗರ ಮನೆಮಾತಾಗಿರುವ ದತ್ತಾತ್ರೆಯ ರಾಮಚಂದ್ರ ಬೇಂದ್ರೆಯವರು 31ನೆ ಜನವರಿ 1896ರಂದು ಧಾರವಾಡದ ಪೋತನೀಸರ ಓಣಿಯಲ್ಲಿರುವ ಗುಣಾರಿಯವರ ಮನೆಯಲ್ಲಿ ಹುಟ್ಟಿದರು. ಅವರ ತಂದೆ ರಾಮಚಂದ್ರ ಪಂತರು. ತಾಯಿ ಅಂಬೂ ತಾಯಿ. ತಂದೆಯವರು ತೀರಿಕೊಂಡ ಮೇಲೆ ತನ್ನ ಇನ್ನೊಬ್ಬ ಚಿಕ್ಕಪ್ಪ ಬಂಡೋಪಂತರ ಆಶ್ರಯದಲ್ಲಿ ಬೇಂದ್ರೆಯವರ ಬಡ ಕುಟುಂಬ ಆಸರೆ ಪಡೆಯಿತು. ಚಿಕ್ಕಪ್ಪನ ಆಶ್ರಯದಲ್ಲಿಯೇ ಬಿ.ಎ. ವರೆಗಿನ ಅಭ್ಯಾಸ, ಪುಣೆಯ ಫರ್ಗೂಸನ್ ಕಾಲೇಜಿನಲ್ಲಿ ನಡೆಯಿತು… ವಿಕ್ಟೋರಿಯಾ ಹೈಸ್ಕೂಲಿನಲ್ಲಿ ಮೂರು ವರ್ಷ, ಮುಂದೆ ರಾಷ್ಟ್ರೀಯ ಶಾಲೆಯಲ್ಲಿ ಉದ್ಯೋಗ, ತಮ್ಮ 28ನೆಯ ವಯಸ್ಸಿನಲ್ಲಿ ಮಾತೃವಿಯೋಗ, ಮಧ್ಯೆ ಸೊಂಡೂರು ಸಂಸ್ಥಾನದಲ್ಲೂ ಸ್ವಲ್ಪಕಾಲದ ನೌಕರಿ. ಒಂದು ವರ್ಷ ಅಲೆದಾಟ, 1925ರಿಂದ 1932ರವರೆಗೆ ವಿಕ್ಟೋರಿಯಾ ಹೈಸ್ಕೂಲಿನಲ್ಲಿ ವಿವಿಧ ಕ್ಷೇತ್ರಗಳ ದುಡಿಮೆ. ನರಬಲಿ ಕವನದ ಕಾರಣವಾಗಿ 3 ತಿಂಗಳು ಹಿಂಡಲಗಿ ಕಾರಾಗೃಹ ವಾಸ ಶಿಕ್ಷೆ. ಮತ್ತೆ ಅಲೆದಾಟ, 1935ರಿಂದ 1940ರವರೆಗೆ 5 ವರ್ಷಗಳ ಕಾಲ ನಿರುದ್ಯೋಗ. ಅನಂತರ ಅಣ್ಣ ಮಾಸ್ತಿ ಅವರ ಬೆಂಬಲದಿಂದ ‘ಜೀವನ’ ಪತ್ರಿಕೆಯ ಸಂಪಾದಕನೆಂಬ ಗೌರವ ವೃತ್ತಿ. ಒಂದು ವರ್ಷ ಗದಗಿನ ಚೌಹಾನ ಪ್ರೌಢಶಾಲೆಯಲ್ಲಿ ಶಿಕ್ಷಕ ವೃತ್ತಿ. ಮತ್ತೆ ಒಂದು ವರ್ಷ ಹುಬ್ಬಳ್ಳಿಯ ಇಂಗ್ಲಿಷ್ ಸ್ಕೂಲಿನಲ್ಲಿ ಅಲ್ಪಾವಧಿ ವೃತ್ತಿ. 1942-43ರಲ್ಲಿ ಪೂನಾದ ಕಾಮರ್ಸ್ ಕಾಲೇಜಿನಲ್ಲಿ ಅರ್ಧಕಾಲಿಕ ಕನ್ನಡ ಅಧ್ಯಾಪಕ ವೃತ್ತಿ. ಅನಂತರ 1944ರಲ್ಲಿ ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ವೃತ್ತಿ. ಸುಮಾರು 12ವರ್ಷಗಳ ಕಾಲ ಆ ಹುದ್ದೆಯಲ್ಲೇ ಇದ್ದ ಇವರಿಗೆ 60 ಆಯಿತೆಂದು ಅಲ್ಲಿ ನಿವೃತ್ತಿಯಾಯಿತು. 1956ರಲ್ಲಿ ಆಕಾಶವಾಣಿಯಲ್ಲಿ ಮೊದಲು ಪ್ರೊಡ್ಯೂಸರ್ ಆಗಿ, ಆಮೇಲೆ ಸಲಹೆಗಾರರಾಗಿ ಧಾರವಾಡದಲ್ಲಿ ಮತ್ತೆ ಒಂದು ಉದ್ಯೋಗ. ಸರ್ಕಾರಕ್ಕೆ ಆಕಾಶವಾಣಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ಪಿ.ಎಂ. ಲಾಡ್ ಅವರ ಮೂಲಕ ದೊರೆತ ಉದ್ಯೋಗ ಅದು. ಇಡೀ ಬದುಕಿನ ತುಂಬಾ ಉದ್ಯೋಗ ನಿರುದ್ಯೋಗಗಳ ಚೆಲ್ಲಾಟ. ಈ ಮಧ್ಯೆಯೂ ಧೃತಿಗೆಡದ ಕವಿಚೇತನ ಬೇಂದ್ರೆಯವರದು… ಬೇಂದ್ರೆಯವರ ವಿವಾಹವಾದದ್ದು 1919ರಲ್ಲಿ, ಹುಬ್ಬಳ್ಳಿಯಲ್ಲಿ. ನರಗುಂದದಲ್ಲಿ ಸಾರ್ವಜನಿಕ ಸೇವಾ ಇಲಾಖೆಯಲ್ಲಿ ನೌಕರರಾಗಿದ್ದ ಶ್ರೀ ಜೋಗಳೇಕರ ವಾಸುದೇವರಾಯರ ಮಗಳಾದ ರಂಗೂತಾಯಿಯೇ ಇವರ ಮಡದಿ. ಬೇಂದ್ರೆ ಮನೆತನಕ್ಕೆ ಬಂದ ಮೇಲೆ ಅವರ ಹೆಸರು ಲಕ್ಷ್ಮೀಬಾಯಿ. ಲಕ್ಷ್ಮೀಬಾಯಿ ಹಾಗೂ ಬೇಂದ್ರೆಯವರ ಸಂಸಾರ ಕಂಡದ್ದು ಹೆಚ್ಚಾಗಿ ಕಷ್ಟದ ದಿನಗಳು. ಅದರಲ್ಲಿಯೂ ಹುಟ್ಟಿದ 9 ಮಕ್ಕಳಲ್ಲಿ 6 ಮಕ್ಕಳು ಕಣ್ಣ ಮುಂದೆಯೇ ಇಲ್ಲವಾಗಿ ಉಳಿದವರು 2 ಗಂಡು ಮಕ್ಕಳು (ವಾಮನ ಬೇಂದ್ರೆ ಮತ್ತು ಪಾಂಡುರಂಗ ಬೇಂದ್ರೆ) ಮತ್ತು ಒಬ್ಬಳು ಮಗಳು ಶ್ರೀಮತಿ ಮಂಗಳ. ಬಡತನದ ಕುಲುಮೆಯಲ್ಲಿ ಬೇಯುತ್ತಿದ್ದಂತೆಯೇ ಕರುಳ ಕುಡಿಗಳು ಕಣ್ಣಮುಂದೆ ಬಾಡಿಹೋದಾಗ ಆ ದುಃಖದ ಅನುಭವವನ್ನೂ ಎದೆಯಲ್ಲಿ ತುಂಬಿಕೊಂಡವರು ಅವರು… ಇಷ್ಟಾದರೂ ಬೇಂದ್ರೆಯವರ ದೃಷ್ಟಿ ‘ಬಡತನ ಸಿರಿತನ ಕಡೇತನಕ ಉಳಿದಾವೇನ’ ಎಂಬುದು. ಅಲ್ಲದೆ ಅವರ ಕಾವ್ಯದ ಮೂಲದೃಷ್ಟಿ – ಎನ್ನಪಾಡೆನಗಿರಲಿ ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ – ಎಂಬ ರಸಯೋಗಿಯ ಸಂಕಲ್ಪದಿಂದ ಪ್ರಚೋದಿತವಾದದ್ದು. ರಸವೆ ಜನನ ವಿರಸ ಮರಣ ಸಮರಸವೇ ಜೀವನ ಎಂದು ಬದುಕನ್ನು ಎದೆಗಪ್ಪಿಕೊಂಡು ಅರಳಿದ ಕಾವ್ಯಚೇತನ ಅವರದ್ದು… ಬೇಂದ್ರೆ ಅಥವಾ ‘ಬೇನ್’ರೆ ಅಂದರೆ ದೇವಾಲಯಗಳಲ್ಲಿ ಋಕ್ ಮಂತ್ರಗಳನ್ನು ಪಠಿಸುವವರು ಎಂಬ ಅರ್ಥ ಇದೆಯಂತೆ. ಇವರ ಮೂಲ ವಂಶಜರು ಮಹಾರಾಷ್ಟ್ರದ ರತ್ನಗಿರಿಯಿಂದ ಬಂದು ಕರ್ನಾಟಕದ ಶಿರಹಟ್ಟಿಯಲ್ಲಿ ನೆಲೆಸಿದರು. ಇವರ ಮುತ್ತಜ್ಜ ರಾಮಭಟ್ಟ ಎಂಬುವರು ಕೊನೆಗೆ ಸಂನ್ಯಾಸ ದೀಕ್ಷೆ ಪಡೆದು ಸಮಾಧಿಸ್ತರಾದರೆ, ಬೇಂದ್ರೆಯವರ ಅಜ್ಜ ಅಪ್ಪಾಭಟ್ಟ ತಪಃಶಕ್ತಿಯ ಜೊತೆಗೆ ಕಾವ್ಯಶಕ್ತಿಯನ್ನೂ ಪಡೆದಿದ್ದರಂತೆ. ಇವರು ಸತ್ಯನಾರಾಯಣ ಕಥೆಯನ್ನು ರಚಿಸಿದ್ದರೆಂದು ಹೇಳುತ್ತಾರೆ… ಬೇಂದ್ರೆಯವರ ಬದುಕಿನಲ್ಲಿ ಪ್ರಭಾವ ಬೀರಿದ ವ್ಯಕ್ತಿಗಳ ಹೆಸರುಗಳನ್ನು ಹೇಳುವುದು ಅಷ್ಟು ಸುಲಭದ ಮಾತಲ್ಲ. ಅಂಬೂ ತಾಯಿಯೇ ಅವರ ಬದುಕಿನ ಮೊದಲ ಪ್ರೇರಕ ಶಕ್ತಿ. ಅವರ ಸಂಕೇತವಾಗಿಯೇ ತಮ್ಮ ಕಾವ್ಯನಾಮವನ್ನು ಅಂಬಿಕಾತನಯದತ್ತ ಎಂದು ಮಾಡಿಕೊಂಡರು. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತೆಯ ಕವಿ ಹುಯಿಲಗೋಳ ನಾರಾಯಣರಾಯರು ಇವರ ಶಿಕ್ಷಕ ವರ್ಗದಲ್ಲಿ ಒಬ್ಬರಾಗಿದ್ದರು. ಇನ್ನೊಬ್ಬ ಮಹತ್ವದ ವ್ಯಕ್ತಿಯೆಂದರೆ ಪುಣೆಯ ಫರ್ಗೂಸನ್ ಕಾಲೇಜಿನ ಆಂಗ್ಲಭಾಷೆಯ ಪ್ರಾಧ್ಯಾಪಕರಾದ ಪಟವರ್ಧನ ಅವರು. ಬಾಲ್ಯದುದ್ದಕ್ಕೂ ಆಸರೆಯಾಗಿದ್ದವರು ಅವರ ಕಕ್ಕ ಬಂಡೋಪಂತರು. ಅಧ್ಯಯನ ಬೇಂದ್ರೆಯವರ ಬದುಕಿನ ಒಂದು ಅವಿಭಾಜ್ಯ ಅಂಗ. ಸಂಸ್ಕೃತ, ಕನ್ನಡ, ಇಂಗ್ಲಿಷ್ ಹಾಗೂ ಮರಾಠಿ ಸಾಹಿತ್ಯಗಳನ್ನು ಅಧ್ಯಯನ ಮಾಡಿದವರು ಅವರು. ಎಲ್ಲಕ್ಕಿಂತ ಅತಿ ಮುಖ್ಯವಾದ ವಿಷಯ ಎಂದರೆ ಇವರ ಬದುಕು ಮರಾಠಿ, ಕನ್ನಡ ದ್ವಿಭಾಷಾ ವಾತಾವರಣದಲ್ಲಿದ್ದುದು. ಕನ್ನಡದಲ್ಲಿ ಇಂಥ ದ್ವಿಭಾಷಾ, ದ್ವಿಸಂಸ್ಕೃತಿಗಳ ವಾತಾವರಣದಲ್ಲಿ ಮಾಸ್ತಿ, ಡಿ.ವಿ.ಜಿ., ಪು.ತಿ.ನ ಅವರೂ ಇದ್ದವರೇ ಎಂದರೂ ಬೇಂದ್ರೆಯವರ ಕಾವ್ಯದಲ್ಲಿ ಮರಾಠಿ, ಕನ್ನಡ ಭಾಷಾ ಸಂಸ್ಕೃತಿಗಳ ಸಂಗಮದ ಫಲಸಮೃದ್ಧಿಯನ್ನು ಕಾಣಬಹುದಾಗಿದೆ. ಮರಾಠಿಯ ಜ್ಞಾನೇಶ್ವರಿ, ರಾಮಾಯಣ, ಮಹಾಭಾರತ, ಭಾಗವತ, ವಚನಗಳು, ಕೀರ್ತನ ಸಾಹಿತ್ಯ, ತತ್ವಜ್ಞಾನ, ಸಂಖ್ಯಾಶಾಸ್ತ್ರ, ಖಗೋಳಶಾಸ್ತ್ರ, ಜೋತಿಷ್ಯ ಶಾಸ್ತ್ರ, ಕಾವ್ಯಮೀಮಾಂಸೆ, ಅಲಂಕಾರ, ಉಪನಿಷತ್ತು, ಪಾಣಿನಿಯ ವ್ಯಾಕರಣ, ಕನ್ನಡ ಸಾಹಿತ್ಯ-ಹೀಗೆ ಬಹು ಮುಖ್ಯವಾದ ಅಧ್ಯಯನದಿಂದ ಸಮೃದ್ಧಗೊಂಡ ಚೇತನ ಬೇಂದ್ರೆಯವರದು. ವಿಶ್ವದ ಮಹಾಕವಿಗಳು, ಹಾಗೆಯೇ ಖಲಿಲ್ ಜಿಬ್ರಾನ್, ಜಾರ್ಜ್ ರಸೆಲ್, ಜೆ. ಕೃಷ್ಣಮೂರ್ತಿ, ಅರವಿಂದರು, ಸ್ವಾಮಿ ರಾಮದಾಸ್, ಮಾರಿಸ್ ಮೇಟರ್ಲಿಂಕ್ ಇಂಥ ದಾರ್ಶನಿಕರ ಅನುಭವ ಚಿಂತನ ಸಮುದ್ರಗಳನ್ನು ಕುಡಿದ ಅಗಸ್ತ್ಯ ಇವರು. ಇಂಗ್ಲಿಷ್, ಕನ್ನಡ ಸಂಸ್ಕೃತ ಮತ್ತು ಮರಾಠಿ ಸಾಹಿತ್ಯಗಳ ಅತ್ಯಂತ ಆತ್ಮೀಯವಾದ ಒಡನಾಟ ಪಡೆದಿದ್ದ ಈ ವ್ಯಕ್ತಿತ್ವದಲ್ಲಿ ಎರಡು ಭಾಷಾ ಸಂಸ್ಕೃತಿಗಳ ಸಂಗಮವಾಗಿದ್ದಂತೆಯೇ ನಗರ ಹಾಗೂ ಜಾನಪದ ಸಂಸ್ಕೃತಿಗಳು ಸಂಗಮಗೊಂಡಿದ್ದವು… ಅವರ ಮೊದಲನೇ ಕವನ ಸಂಕಲನವಾದ ‘ಗರಿ’ಯಲ್ಲಿ “ಕನ್ನಡದ ಅಶರೀರವಾಣಿಯು ಸಾವಿರ ಬಾಯಿಗಳಿಂದ ತನ್ನ ಕನಸನ್ನು ಕನ್ನಡಿಸುತ್ತಿದೆ. ಆ ಸಾವಿರ ಬಾಯಿಗಳಲ್ಲಿ ನನ್ನದೊಂದು. ಅದೇ ನನ್ನ ಧನ್ಯತೆ” ಎಂದು ಸಹೃದಯರಿಗೆ ನಿವೇದಿಸಿಕೊಳ್ಳುವ ಮಾತು ಬೇಂದ್ರೆಯವರ ಪ್ರತಿಭೆಯ ದ್ಯೋತಕವಾಗಿದೆ. ಹೀಗಾದುದರಿಂದಲೇ ಕನ್ನಡದ ಎಲ್ಲ ಒಳ್ಳೆಯ ಕಾವ್ಯವು ತನ್ನದೇ ಎನ್ನುವ ನಿರ್ಮತ್ಸರದ ಅಭಿಮಾನ ತಾನೇ ತಾನಾಗಿ ಮೂಡಿತು. ‘ಗೆಳೆಯರ ಬಳಗ’ ಎಂಬ ವಿ.ಕೃ. ಗೋಕಾಕ, ಬೆಟಗೇರಿ ಕೃಷ್ಣಶರ್ಮ, ಮಧುರಚೆನ್ನ, ರಂ. ಶ್ರೀ ಮುಗಳಿಯಂಥ ಕವಿಗಳ ಬಳಗವನ್ನೇ ಕಟ್ಟಿದರು. ಆ ಗುಂಪು ಕರ್ನಾಟಕದ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಇತಿಹಾಸದ ಒಂದು ಜೀವಂತ ಭಾಗವಾಗಿ ಉಳಿದಿದ್ದಷ್ಟೇ ಅಲ್ಲ ಕವಿಗೆ ಕವಿ ಮುನಿವ ಎಂಬ ಗಾದೆಯನ್ನು ಸುಳ್ಳಾಗಿಸಿತು. ಅದಕ್ಕಿಂತ ಮುಖ್ಯವಾದ ಮಾತು ಎಂದರೆ ಕನ್ನಡದ ತಮ್ಮ ಸಮಕಾಲೀನ ಕವಿಗಳನ್ನು ಕುರಿತ ಅವರ ಧೋರಣೆ. ಯುಗದ ಕವಿಗೆ, ಜಗದ ಕವಿಗೆ ನಮಸ್ಕಾರ ಎಂದು ಕುವೆಂಪು ಅವರನ್ನು ಅಭಿನಂದಿಸುತ್ತ ಅವರ ಚಿತ್ರಾಂಗದಾ ಕಾವ್ಯವನ್ನು ಕುರಿತು ಹೇಳುವಾಗ ಹಿಂದಿನ ಮಹಾಕಾವ್ಯವನ್ನು ಮೀರಿಸಲಿದೆ ಎಂದು ಅಭಿಮಾನಪಟ್ಟಿದ್ದು ಬೇಂದ್ರೆಯವರ ಮುಕ್ತ ಪ್ರಶಂಸೆಯ ಕವಿಹೃದಯವನ್ನು ಪರಿಚಯಿಸುತ್ತದೆ. ಬೇಂದ್ರೆಯವರ ಸನಿಹಕ್ಕೆ ಹೋದ ಹೆಚ್ಚು ಕನ್ನಡ ಕವಿಗಳ ಭಾವನೆ ಇದೇ ತೆರನಾದದ್ದಾಗಿದೆ… ರಸ ಋಷಿ, ಶ್ರೇಷ್ಠ ಕವಿ ಹೀಗೆ ಬಹುವಿಧವಾಗಿ ರಸಿಕರಿಂದ ಗೌರವಿಸಲ್ಪಟ್ಟ ಬೇಂದ್ರೆಯವರ ಕಾವ್ಯ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ಶ್ರೀಮಂತಗೊಳಿಸಿದೆ. ಬೆಳಗು, ರಾಗರತಿ, ಶ್ರಾವಣ, ಯುಗಾದಿ, ಸಣ್ಣ ಸೋಮವಾರ, ಹಕ್ಕಿ ಹಾರುತಿದೆ ನೋಡಿದಿರಾ, ಪಾತರಗಿತ್ತಿ ಪಕ್ಕ, ಹೋತದ ಹುಣಸಿ, ಶ್ರಾವಣ ವೈಭವ, ಚಿತ್ತಿಯ ಮಳೆಯ ಸಂಜೆ ಇಂಥ ನಿಸರ್ಗವನ್ನು ಕುರಿತ ಕವಿತೆಗಳಾಗಲಿ; ಮಾಯಾಕಿನ್ನರಿ, ಹುಬ್ಬಳ್ಳಿಯಾಂವಾ, ಮನಸುಖರಾಯನ ಮಗಳು ಇಂತಹ ಮಾಂತ್ರಿಕ ಕವಿತೆಗಳಾಗಲಿ; ಪುಟ್ಟ ವಿಧವೆ, ನರಬಲಿ, ತುತ್ತಿನಚೀಲ, 33 ಕೋಟಿ, ಕನಸಿನೊಳಗೊಂದು ಕನಸು ಇಂಥ ಸಾಮಾಜಿಕ ಕವಿತೆಗಳಾಗಲಿ; ಕೇಳಿರೊಂದು ಸೋಜಿಗದಂಥ ಬದುಕಿನ ಗಹನತೆಯ ಕಡೆಗೆ ಮನಸೆಳೆಯುವ ಕವಿತೆಯಾಗಲಿ; ಗೆಳೆಯ ಶಂಕರದೇವ, ಗುರುದೇವರಂಥ ವ್ಯಕ್ತಿತ್ವಗಳನ್ನು ಕುರಿತು ಬರೆದ ಕವಿತೆಗಳಾಗಲಿ; ಅನಂತ ಪ್ರಣಯ, ಪ್ರೀತಿ ಇಂಥ ಪ್ರೇಮದ ವಿವಿಧ ಮುಖಗಳನ್ನು ಕುರಿತ ಕವಿತೆಗಳಾಗಲಿ ಬೇಂದ್ರೆಯವರ ಕವಿತೆ ತನ್ನ ಸಾಚಾತನದಿಂದ ಮೆರೆಯುತ್ತದೆ… ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗುತ್ತ ಹೋಗುವ ಪವಾಡಸದೃಶ ಶಕ್ತಿ. ನೀ ಹಿಂಗ ನೋಡಬ್ಯಾಡ ನನ್ನ, ನಾನೊಂದು ನೆನೆದರೆ, ಸಖೀಗೀತ, ನಾದ ಲೀಲೆ, ಪಾಡು, ಹೋದ ಬುಧವಾರ – ಇಂಥ ಕವಿತೆಗಳು ಅವರ ಬದುಕಿಗೆ ತೀವ್ರವಾದ ಆಘಾತವುಂಟು ಮಾಡಿದ ಮಗನ ಸಾವು, ಸಂಸಾರದ ವಿರಸ, ತನ್ನ ಬದುಕಿನ ಕಥೆ-ವ್ಯಥೆಗಳು, ಮಡದಿ ತನ್ನನ್ನು ಬಿಟ್ಟು ಹೋದದ್ದು, ಇಂಥ ಘಟನೆಗಳಿಂದ ಮೂಡಿದವುಗಳಾಗಿವೆ. ಬದುಕೇ ಕಾವ್ಯವಾಗುವ ಸಹಜ ಕವಿ ಹೃದಯವನ್ನು ಇಂಥ ಕಡೆ ಗುರುತಿಸಬಹುದು. ಬದುಕಿಗೆ ತೀವ್ರವಾಗಿ ಸ್ಪಂದಿಸುವ ಕವಿಚೇತನವಾದದ್ದರಿಂದಲೇ ಭೃಂಗದ ಬೆನ್ನೇರಿ ಬಂತು ಕಲ್ಪನಾ ವಿಲಾಸ, ಪಾತರಗಿತ್ತಿ ಪಕ್ಕಗಳ ವೈಭವಗಳನ್ನು ನವಿಲು ಗರಿಗೆದರಿದಂತೆ ಮೈತೆರೆಯುತ್ತಾ ಹೋಗುತ್ತದೆ. ಶ್ರಾವಣವಾಗಲಿ, ಧಾರವಾಡದ ಚೆಲುವಾಗಲಿ ಬದುಕಿನ ಕಾವ್ಯ ಅಥವಾ ಸುಂದರ ಮುಖವಾಗಲೀ ಈ ಪ್ರತಿಭೆಗೆ ಸದಾ ಆಹ್ವಾನವಾಗಿರುತ್ತದೆ. ಕನ್ನಡದಲ್ಲಿ ಬೇಂದ್ರೆಯವರಷ್ಟು ವಿಫುಲವಾಗಿ ಹಾಗೂ ಕಾವ್ಯಮಯವಾಗಿ ಕೌಟುಂಬಿಕ ಗೀತೆಗಳನ್ನು ರಚಿಸಿದ ಕವಿಯನ್ನು ಕಾಣುವುದು ಕಷ್ಟ. ಗಂಡು ಹೆಣ್ಣಿನ ಪ್ರೀತಿ ಹಾಗೂ ವಿರಸ ವಿಕೋಪಗಳನ್ನು ತುಂಬಾ ಕಾವ್ಯಮಯವಾಗಿಸಿದ ಪ್ರತಿಭೆ ಇವರದ್ದು… ಬೇಂದ್ರೆಯವರ 27ಕವನ ಸಂಕಲನಗಳು ಪ್ರಕಟವಾಗಿವೆ. ಈ ಕವನ ಸಂಕಲನಗಳನ್ನು ಅವಲೋಕಿಸಿದಾಗ ಬದುಕನ್ನು ಅದರ ಆಳ, ವಿಸ್ತಾರ ಹಾಗೂ ವೈವಿಧ್ಯದಲ್ಲಿ ಕಂಡಿರಿಸಿದ ಮಹಾ ಪ್ರತಿಭೆಯೊಂದು ನಮಗೆದುರಾಗುತ್ತದೆ. ವಚನ ಪರಂಪರೆಯಲ್ಲಿ ರಚಿತವಾದ ವಿನೂತನ ಕಾಂತಿಯ ಕರುಳಿನ ವಚನಗಳು, ಮಾಂತ್ರಿಕತೆಯಿಂದ ಕಳಕಳಿಸುವ ಸುನೀತಗಳು ಅಲ್ಲದೆ ಕನ್ನಡದ ಅನುಭಾವ ಪರಂಪರೆಯನ್ನು ಮುಂದುವರೆಸಿರುವುದು ಬೇಂದ್ರೆಯವರ ವೈಶಿಷ್ಟ್ಯವಾಗಿದೆ. ಬೆಳಗು ರೀತಿಯ ನಿಸರ್ಗ ಗೀತೆಯಿಂದ ಆರಂಭಿಸಿದ ಜೋಗಿ, ಓಂ ಸಚ್ಚಿದಾನಂದ ಇಂಥ ಕವಿತೆಗಳವರೆಗೆ ಇದರ ಹರವಿದೆ. ಕನ್ನಡದ ಪರಂಪರೆಯನ್ನು ಹಾಡಿ ಕರ್ನಾಟಕದ ಏಕೀಕರಣದ ಸಂಘಟನೆಯನ್ನು ಇವರ ಕಾವ್ಯ ನಡೆಸಿದ ರೀತಿ ಮುಖ್ಯವಾದದ್ದು. ಮಾನವನನ್ನು ಸದಾ ಕಾಡುವ ಹಸಿವು, ಬಡತನಗಳು ಕೂಡ ಅನ್ನದೇವರು, ಅನ್ನಬ್ರಹ್ಮದ ದೇಗುಲದಲ್ಲಿ ಇಂಥ ಕವಿತೆಗಳಿಗೆ ಕಾರಣವಾಗಿವೆ. ಬಂಗಾಳದಲ್ಲಿ ನಡೆದ ಮಾರಣ ಹೋಮವನ್ನು ಕುರಿತು ಬರೆದ ‘ನರಬಲಿ’ ಕವಿಯನ್ನು ಅಂದಿನ ಸರ್ಕಾರದ ಕೋಪಕ್ಕೂ ಗುರಿಯಾಗಿಸಿ ಸೆರೆಮನೆಗೆ ತಳ್ಳಿದ್ದು ಐತಿಹಾಸಿಕ ಘಟನೆ. ಬದುಕಿನ ಬಡತನ, ಕಷ್ಟ-ಕಾರ್ಪಣ್ಯದ ಮಧ್ಯೆಯೂ ನಿಸರ್ಗದ ಹಾಗೂ ಬದುಕಿನ ಸೌಂದರ್ಯವನ್ನು ಬೊಗಸೆ ಬೊಗಸೆಯಾಗಿ ಸವಿದ, ಹಾಗೆಯೇ ಬದುಕಿದ ಧೀಮಂತ ಪ್ರತಿಭೆ ಬೇಂದ್ರೆಯವರದು. ನಾದದ ನದಿಯೊಳು ಮಿಂದಾಗ ಸೂಜಿ ಹಿಂದ ದಾರದಾಂಗ ಇಂಥ ಅತ್ಯುತ್ತಮವಾದ ಅನೇಕ ಕಾವ್ಯಪಂಕ್ತಿಗಳನ್ನು ಬೇಂದ್ರೆಯವರ ಕಾವ್ಯದ ತುಂಬಾ ಕಾಣಬಹುದು. ಅದಕ್ಕೆ ಕಾರಣ ಈ ಪ್ರತಿಭೆ ವಿಶೇಷವಾಗಿ ರೂಪಕಗಳ ಮೂಲಕವೇ ಕ್ರಿಯಾತ್ಮಕವಾಗತೊಡಗುವುದು. ಉದಾಹರಣೆಗೆ ಅತ್ಯಂತ ಸರಳ ಎಂಬಂತೆ ಕಾಣುವ ಬಡವ ಬಡವಿ ಕವನವನ್ನೇ ನೋಡಬಹುದು… ಜೋಗಿಯಂಥ ಹೆಚ್ಚು ಸಂಕೀರ್ಣವೂ, ಕಿಂಚಿದ್ ಸ್ಪಷ್ಟವೂ ಹಾಗೂ ಅಧ್ಯಾತ್ಮಿಕವೂ ಆದ ಕವಿತೆಯನ್ನು ಬಿಟ್ಟು ಇಡೀ ಸಂಜೆಯೇ ಒಬ್ಬ ಸುಂದರ ಪ್ರಣಯಿನಿಯಾಗಿ ಎದ್ದು ಮೂಡಿಬರುವಂತೆ ಚಿತ್ರಿತವಾಗಿರುವ ಮಾಂತ್ರಿಕವಾದ, ರಾಗರತಿಯಂಥ ಕವಿತೆಯನ್ನು ಬಿಟ್ಟು ಸರಳವೂ, ಸಹಜವೂ ಆದರೆ ಬೇಂದ್ರೆಯವರ ಕಾವ್ಯ ಪಡೆಯುವ ಸಾರ್ಥಕ್ಯದ ರೀತಿಯನ್ನು ವ್ಯಂಜಿಸುವಂಥದ್ದು ಆಗಿದೆ ‘ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು ಎಂದು ಸುಂದರವಾಗಿ ಮೂಡುವ’ ಬಡವ ಬಡವಿ ಕವನ. ಬೇಂದ್ರೆಯವರು ಅನೇಕ ಕವಿತೆಗಳನ್ನು ಅನುವಾದಿಸಿದ್ದಾರೆ. ಅವುಗಳಲ್ಲಿ ನಮ್ಮ ಕೊನೆಯ ಶರಣು ಹಾಗೂ ಮೇಘದೂತ ಕವಿತೆಗಳು ಅನುವಾದಗಳು. ಅರವಿಂದರ ಸಾವಿತ್ರಿಯನ್ನು ಮತ್ತೆ
