ಅಂಕಣ
ಅಂಕಣ ಬರಹ ಕವಿಯಿತ್ರಿ ನೂತನ ಎಂ.ದೋಶೆಟ್ಟಿ ಉತ್ತರ ಕನ್ನಡದ ಸಿದ್ದಾಪುರದವರು. ಮೃತ್ಯುಂಜಯ ದೋಶೆಟ್ಟಿ , ಪ್ರೇಮಾ ದೋಶೆಟ್ಟಿ ಅವರ ಮಗಳು.ಅವರ ಪತಿ ಶಾಮ ಸುಂದರ ಕದಂ ಕಾರವಾರ ಬಳಿಯ ಸದಾಶಿವಗಡದವರು. ಆಕಾಶವಾಣಿಯಲ್ಲಿ ಎಂಜಿನಿಯರ್. ಕವಯಿತ್ರಿ ಕತೆಗಾರ್ತಿ ನೂತನ ದೋಶೆಟ್ಟಿ ಸಮೂಹ ಸಂವಹನ , ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕ ಹುದ್ದೆ ನಿಭಾಯಿಸುತ್ತಿದ್ದಾರೆ. ಕಾರವಾರ ಆಕಾಶವಾಣಿ, ಬೆಂಗಳೂರು ಆಕಾಶವಾಣಿಯಲ್ಲಿ ಸೇವೆ ಮಾಡಿ, ಇದೀಗ ಹಾಸನ ಜಿಲ್ಲಾ ಆಕಾಶವಾಣಿಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದಾರೆ. ೨೦೦೯ರಲ್ಲಿ ಕಾಲವೆಂಬ ಮಹಾಮನೆ ಕಾವ್ಯ […]
Read More
ರಾಜ್ಯಮಟ್ಟದ ಪತ್ರಿಕೆಗಳ ಜಿಲ್ಲಾ ಆವೃತ್ತಿಯ ತುದಿಮೂಲೆಯಲ್ಲಿ ಮುದ್ರಿತವಾಗುವ ಒಂದು ಕಾಲಂ ನನ್ನನ್ನು ಸದಾ ಕಾಡುತ್ತದೆ. ಅದೆಂದರೆ `ಅಪರಾಧ ಸುದ್ದಿ’. ಕೆಲವು ಪತ್ರಿಕೆಗಳು ಈ ಶೀರ್ಷಿಕೆಯನ್ನು ಕೆಂಪಕ್ಷರಗಳಲ್ಲಿಟ್ಟು ಅದರ ಕೆಳಗೆ ವರದಿ ಪ್ರಕಟಿಸುತ್ತವೆ. ಈ ರಕ್ತವರ್ಣವು ಅಪಾಯ ಮತ್ತು ಸಾವನ್ನು ಸಂಕೇತಿಸಲಿ ಎಂಬುದು ಅವುಗಳ ಇರಾದೆಯಿರಬೇಕು. ಅಲ್ಲಿ ಎರಡು ಮಾದರಿಯ ಸುದ್ದಿಗಳಿರುತ್ತವೆ. ಮೊದಲನೆಯವು-ಬೈಕುಗಳ್ಳರ ಬಂಧನ, ಸರಗಳ್ಳತನ, ಮನೆಯ ದರೋಡೆ, ಭೀಕರಕೊಲೆ, ಪ್ರಿಯಕರನೊಂದಿಗೆ ವಿವಾಹಿತ ಸ್ತ್ರೀ ಪರಾರಿ, ಮಣ್ಣುಕುಸಿದು ಕೂಲಿಗಾರನ ಜೀವಂತ ಸಮಾಧಿ, ಜಾತ್ರೆಯಲ್ಲಿ ಗುಂಪು ಘರ್ಷಣೆ, ಬಣವೆ ದಹನ, […]
Read More
ಕಬ್ಬಿಗರ ಅಬ್ಬಿ – ಸಂಚಿಕೆ ೫ ನನ್ನ ಗೆಳೆಯನ ಪುಟ್ಟ ಮಗು ನನ್ ಹತ್ರ ಕೇಳಿದ, ” ಮಾಮಾ, ಈ ಚಂದಾಮಾಮ ಎಷ್ಟೆತ್ತರ? “. ನಾನಂದೆ! ” ತುಂಬಾ ಎತ್ತರದಲ್ಲಿ ಇದ್ದಾನೆ ಪುಟ್ಟಾ”. “ಹೇಗೆ ತಲಪೋದು! ” ಪುಟ್ಟನ ಪ್ರಶ್ನೆ! ರಾಕೆಟ್ಟು..ಜೆಟ್ ಪ್ರಿನ್ಸಿಪಲ್ ಅಂತ ಒಂದಷ್ಟು ಕೊರೆದೆ!. ಪುಟ್ಟನ ಕಣ್ಣೊಳಗೆ ಏನೋ ಮಿಂಚು! ಆತ ಅಂದ, ” ಮಾಮಾ, ಅಷ್ಟೆಲ್ಲ ಕಷ್ಟ ಯಾಕೆ! ನಮ್ಮ ತಾರಸಿಯ ಮೇಲೆ ಒಂದು ಮೆಟ್ಟಿಲು ಕಟ್ಟೋಣ!, ಆ ಮೆಟ್ಟಿಲು ಹತ್ತಿ ನಿಂತು […]
Read More
ಅಂಕಣಬರಹ ಪುಸ್ತಕ- ಬಾನಸಮುದ್ರಕೆ ಗಾಳನೋಟ ಲೇಖಕರು- ಪ್ರವೀಣ ಬೆಲೆ ೮೦/- ಪ್ರಕಾಶನ-ಸಲೀಲ ಪುಸ್ತಕ ಚಿಕ್ಕವನಿರುವಾಗ ಬಟ್ಟೆಯ ಸ್ಟ್ಯಾಂಡ್‌ನಲ್ಲಿರುವ ಬಟ್ಟೆಗಳನ್ನೆಲ್ಲ ಒಂದೆಡೆ ಗುಡ್ಡೆಹಾಕಿಕೊಂಡು ಬೆಚ್ಚಗೆ ಮಲಗುತ್ತಿದ್ದ ಮಗನಿಗೆ ಈಗ ಆತ ಹಾಗೆ ಮಾಡುತ್ತಿದ್ದ ಎಂದರೆ ನಂಬುವುದಿಲ್ಲ. ಮಲಗುವಾಗ ನಾನು ಬೆಳ್ಳಿಗ್ಗೆ ಬೇಗ ಏಳಬೇಕಾದಾಗಲೆಲ್ಲ ಅವನ ಪಕ್ಕ ನನ್ನ ಉಪಯೋಗಿಸಿದ ಉಡುಪುಗಳನ್ನು ಇಡುತ್ತಿದ್ದೆ. ಅದನ್ನೇ ತಬ್ಬಿಕೊಂಡು ಆತ ಹಾಯಾಗಿ ಮಲಗಿಬಿಡುತ್ತಿದ್ದ. ಕೆಲವೊಮ್ಮೆ ಬಟ್ಟೆ ಇಡದಿದ್ದಾಗ ಎದ್ದು ಅಳಲು ಪ್ರಾರಂಭಿಸುತ್ತಿದ್ದ. ಪ್ರವೀಣ ಅವರ ಬಾನಸಮುದ್ರಕೆ ಗಾಳನೋಟ ಎನ್ನುವ ಸಂಕಲನದ ಮೊದಲ ಕವನವನ್ನು […]
Read More
ಬದುಕಿನ ಬಗ್ಗೆ ಮಾತನಾಡುವಾಗಲೆಲ್ಲ ನನಗೆ ಕರ್ಟನ್ನುಗಳು ನೆನಪಾಗುತ್ತವೆ; ಬದುಕಿನ ಪ್ರತಿಯೊಂದು ಅಧ್ಯಾಯವೂ ಬೇರೆಬೇರೆ ಬಣ್ಣ-ವಿನ್ಯಾಸಗಳನ್ನು ಹೊತ್ತ ಸುಂದರವಾದ ಕರ್ಟನ್ನಿನಂತೆ ಭಾಸವಾಗುತ್ತದೆ. ಕಿಟಕಿಗಳೇ ಇಲ್ಲದ ಮನೆಯಲ್ಲಿ ಬೆಳಕಿಗೊಂದು ಅವಕಾಶವನ್ನು ಒದಗಿಸುವುದಾದರೂ ಹೇಗೆ; ಹಾಗೆ ಕಿಟಕಿಯೊಂದು ಒದಗಿಸಿದ ಅವಕಾಶವನ್ನು ಸ್ವಂತದ್ದಾಗಿಸಿಕೊಳ್ಳಲಿಕ್ಕೆ ಕರ್ಟನ್ನುಗಳ ಸೃಷ್ಟಿಯೂ ಆಗಿರಬೇಕು! ಬೆಳಕಿನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಕಿಟಕಿ, ಕಿಟಕಿಯೊಂದಿಗೆ ಸಾಮರಸ್ಯವನ್ನು ಬೆಳೆಸಿಕೊಳ್ಳುವ ಕರ್ಟನ್ನು ಎಲ್ಲವೂ ಸೇರಿ ಬದುಕಿಗೊಂದು ಸ್ವಂತಿಕೆ, ಜೊತೆಗಿಷ್ಟು ಬಣ್ಣಗಳು ಲಭ್ಯವಾಗಿದ್ದಿರಬೇಕು. ದುಃಸ್ವಪ್ನಗಳನ್ನೆಲ್ಲ ದೂರವಾಗಿಸುವ ಬೆಳಕು ಕಿಟಕಿಯನ್ನು ಸ್ಪರ್ಶಿಸುವ ಸಮಯಕ್ಕೆ ಸರಿಯಾಗಿ ಕಣ್ತೆರೆವ ಕರ್ಟನ್ನಿನ ಎಲೆ, […]
Read More
ಉಗಾದಿ ಚಿತ್ರಗಳು ಕೆರೆಕೋಡಿ ಪಕ್ಕದಲ್ಲಿದ್ದ ಬೀದಿಯೊಂದರಲ್ಲಿ ನನ್ನ ತಾರುಣ್ಯ ಕಳೆಯಿತು. ಅಲ್ಲಿ ಬೆಸ್ತರು, ಈಡಿಗರು, ಬಡಗಿಗೆಲಸದ ಆಚಾರಿಗಳು, ಕಮ್ಮಾರರು, ಮಂಡಕ್ಕಿಭಟ್ಟಿಯವರು, ಮೇದಾರರು ಇದ್ದರು. ಎಲ್ಲರೂ ಬಸವಣ್ಣನವರ ವಚನದಲ್ಲಿ ಬರುವಂತೆ `ಅಂದಂದೆ ಹುಟ್ಟಿತ್ತು ಅಂದಂದೆ ಹೊಂದಿತ್ತು’ ಎಂಬಂತೆ ಹಗಲ ದುಡಿಮೆ- ರಾತ್ರಿಯ ಊಟದ ಅವಸ್ಥೆಯವರು. ಒಬ್ಬರ ಮನೆಯ ಹಬ್ಬ ಇಡೀ ಬೀದಿಯ ಹಬ್ಬವಾಗುತ್ತಿತ್ತು. ರಂಜಾನ್ ದಿನ ಶೀರ್‍ಕುರುಮಾ ಬಟ್ಟಲನ್ನು ಬೀದಿಯ ಎಲ್ಲರ ಮನೆಗೆ ತಲುಪಿಸುವುದು ನಮಗೆ ಲೋಕಮಹತ್ವದ ಕಾಯಕವಾಗಿತ್ತು. ಉಗಾದಿಯ ದಿನ ಬೇರೆಯವರ ಮನೆಗಳಿಂದ ಬರುತ್ತಿದ್ದ ಹೋಳಿಗೆ, ಕೋಸಂಬರಿ, […]
Read More
ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು ಇಂದಿನ ದಾವಂತದ ಬದುಕಿನಲ್ಲಿ ಎಲ್ಲ ಸುಖಗಳೂ ನಮ್ಮೆಡೆ ತಾವೇ ಬರಲಿ ಎಂದು ಆಶಿಸುತ್ತೇವೆ. ಬೆರಳ ತುದಿಯಲ್ಲಿ ಬೇಕಾದ್ದೆಲ್ಲವೂ ದೊರೆಯುತ್ತಿರುವಾಗ ಗೆಲುವಿಗೆ ಮಾತ್ರ ಇನ್ನಿಲ್ಲದ ಪರಿಶ್ರಮ ಏಕೆ ಪಡಬೇಕು ಎಂದು ಪ್ರಶ್ನಿಸುತ್ತೇವೆ. ‘ಕೆಲಸಕ್ಕೆ ಕರೆಯಬೇಡ್ರಿ ಊಟಕ್ಕೆ ಮರೆಯಬೇಡ್ರಿ.’ ಅನ್ನೋ ಜಾಯಮಾನದವರನ್ನು ಕಂಡರೆ ಯಶಸ್ಸು ಹತ್ತಿರವೂ ಸುಳಿಯುವುದಿಲ್ಲ. ಶ್ರಮವಿಲ್ಲದೇ ಏನೆಲ್ಲವೂ ತಮ್ಮ ಪಾದದ ಕೆಳಗೆ ಬಿದ್ದಿರಬೇಕೆಂಬುದು ನಮ್ಮಲ್ಲಿ ಬಹುತೇಕ ಜನರ ಅಭಿಪ್ರಾಯ. ವ್ಯಕ್ತಿತ್ವ ವಿಕಾಸದಲ್ಲಂತೂ ಪರಿಶ್ರಮ ಮೂಲ ವಸ್ತುವಿನಂತೆ ಕಾರ‍್ಯ ನಿರ‍್ವಹಿಸುತ್ತದೆ. ಶ್ರಮದ ಬೀಜಕ್ಕೆ ಅಗಾಧ […]
Read More
ನಾನು ದೀಪ ಹಚ್ಚಿಕೊಂಡರೂ ಬೆಳಕು ಎಲ್ಲರಿಗೂ ಕಾಣಿಸಬೇಕು `ಈಗ ಅಕ್ಷರಸ್ಥರನ್ನು, ಶ್ರೀಮಂತರನ್ನು ನಂಬಿಸುವ- ಒಲಿಸಿಕೊಳ್ಳುವ ಸಿದ್ಧಾಂತ ಹೆಚ್ಚಾಗಿದೆ…’ ಗಣೇಶ್ ಹೆಗಡೆ ಹೊಸ್ಮನೆ ಗಣೇಶ್ ಹೆಗಡೆ ಹೊಸ್ಮನೆ ಶಿರಸಿ ತಾಲೂಕು ಜಾನ್ಮನೆಯವರು. ವೃತ್ತಿಯಿಂದ ಕೃಷಿಕ. ಯಾರೂ ನೆಡದ ಮರ ಇವರ ಮೊದಲ ಕವಿತಾ ಸಂಕಲನ. ಇದಕ್ಕೆ ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿ, ಪುತ್ತೂರು ಕನ್ನಡ ಸಂಘದ ಉಗ್ರಾಣ ಪ್ರಶಸ್ತಿ ಲಭಿಸಿವೆ. ನಂತರ ಹರಿದು ಕೂಡುವ ಕಡಲು (ಗಜಲ್) ಸಂಕಲನವನ್ನು ಲಡಾಯಿ ಪ್ರಕಾಶನ ಪ್ರಕಟಿಸಿತು. ಕಾರವಾರ ಆಕಾಶವಾಣಿ, ಧಾರವಾಡ […]
Read More
ಪೇಟಿಮಾಂತ್ರಿಕ ಬೆಳಗಾವಿಯಲ್ಲಿರುವ ಪಂಡಿತ್ ರಾಮಭಾವು ಬಿಜಾಪುರೆ ಅವರನ್ನು ಕಾಣಬೇಕೆಂದು ನನಗೆ ಅನಿಸಿತು. ಮಿತ್ರರಾದ ಕುಸಗಲ್ಲರಿಗೆ ವಿಷಯ ತಿಳಿಸಲು `ನಾವು ಇದೇ ಊರಾಗಿದ್ರೂ ಅವರ ಮನೀಗ್ ಹೋಗಿಲ್ಲ, ಬರ್ರಿ ಸರ’ ಎಂದು ಕರೆದೊಯ್ಯಲು ಒಪ್ಪಿದರು. ಮುಸ್ಸಂಜೆ ಹೊತ್ತಿಗೆ ಶ್ರೀ ಕುಸುಗಲ್ಲ, ಅವರ ಮಗಳು ಕವಿತಾ, ಸ್ನೇಹಿತ ಡಾ. ಕೋಲ್ಕಾರ ಅವರೊಡನೆ ಬಿಜಾಪುರೆ ಅವರಲ್ಲಿಗೆ ಹೊರಟೆ. ಹಳೇ ಬೆಳಗಾವಿಯ ಬೀದಿಗಳು. ಪಶ್ಚಿಮಘಟ್ಟದ ಜಿರ್ರೋ ಮಳೆಧಾರೆ. ಕಚಿಪಿಚಿ ಕೆಸರು. ಹಸುರು ಕಕ್ಕುವ ಗಿಡಮರಪೊದೆ. ಮನೆಯ ಛಾವಣಿ ಕಾಂಪೌಂಡು ಗೋಡೆಗಳು ಹಸಿರು ಸ್ವೆಟರುಟ್ಟಂತೆ […]
Read More
ರಾತ್ರಿಯಿಡೀ ಕಗ್ಗತ್ತಲು. ಯಾಕಿಲ್ಲ, ಅಮವಾಸ್ಯೆಯ ರಾತ್ರೆಯದು. ಗುಹೆಯೊಂದರಲ್ಲಿ ಮಲಗಿದ್ದ ಶಿಲಾಮಾನವ ರಾತ್ರೆ ಕಳೆಯುತ್ತಿದ್ದ. ಸುತ್ತ ,ಅಡವಿ. ಅದೊಂದು ನಿದ್ದೆಯಲ್ಲದ ನಿದ್ದೆ. ಗಾಳಿಗೆ ಮರಗಳ ಸುಂಯ್..ಸುಂಯ್.. ಒಂಥರಾ ನೀರವ ಕಗ್ಗತ್ತಲು. ಕಣ್ಣಿಗೇನೂ ಕಾಣಿಸದಾದಾಗ, ಕಿವಿ ಅತ್ಯಂತ ಸೂಕ್ಷ್ಮವಾಗುತ್ತೆ. ದೂರದಿಂದ, ನರಿಗಳು ಊಳಿಡುವ ಶಬ್ಧ, ಪಟ್ಟೆ ಹುಲಿ ನಡೆಯುವಾಗ,ಓಡುವಾಗ ಶಬ್ಧಮಾಡುವುದಿಲ್ಲ. ಸೈಲೆಂಟ್ ಕಿಲ್ಲರ್ ಅದು! ಹ್ಞಾ! ಕೇಳಿಸಿತಲ್ಲ, ಜಿಂಕೆಯ ಮರಣಾಕ್ರಾಂದನ..ಖಂಡಿತಾ ಹುಲಿ ಹಿಡಿದಿರಬೇಕು, ನಾಳೆ ಸಿಗುತ್ತೆ ಅದರ ಅವಶೇಷಗಳು. ಹೇಗಿದ್ದರೂ, ಗುಹೆಯ ಬಾಗಿಲಿಗೆ ಬಂಡೆ ಪಾರ್ಶ್ವದಿಂದ ಮುಚ್ಚಿದೆ. ಹುಲಿಗೂ ಭಯವಿದೆ. […]
Read More| Powered by WordPress | Theme by TheBootstrapThemes