Category: ಅಂಕಣ

ಅಂಕಣ

ವಚನಚಳುವಳಿಗೆ ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಸ್ಥಾನವಿದೆ. ವಚನಗಳಲ್ಲಿ ಆಡಿದ, ಸಾರಿದ, ಸಾಧಿಸಿ ತೋರಿಸಿದ ಮೌಲ್ಯಗಳು ಕೇವಲ ಘೋಷಣೆಗಳಾಗದೆ ನಡೆ ನುಡಿಯಲ್ಲಿ ಒಂದಾಗಿ ಏಕವನ್ನು ಸ್ಥಾಪಿಸಿದ ಕಾರಣದಿಂದ ವಚನಕಾರರು ಈ ನೆಲದಲ್ಲಿ ಮಾನ್ಯ ಮತ್ತು ಮುಖ್ಯರಾಗುತ್ತಾರೆ.

ಅಂಕಣ ಬರಹ ವಸಂತ ಬಂದ! ರಂಗಕ್ಕೆ ರಂಗು ತಂದ!! ವೈಶಾಲಿ ನಗರದ ಬೀದಿ. ವೈಭವದ ಅರಮನೆ. ಅದು ರಾಜನ ಅರಮನೆಯಲ್ಲ. ನಗರದ ಮುಖ್ಯ ನೃತ್ಯಗಾರ್ತಿ,ರಾಜನರ್ತಕಿ ಆಮ್ರಪಾಲಿಯ ಮನೆ. ಆಮ್ರಪಾಲಿ ಚಿಗುರು ಮಾವಿನ ತಳಿರಂತಹವಳು. ಅವಳ ಸೌಂದರ್ಯದ ಕಥನ ಕೇಳಿ ನೆರೆ ಹೊರೆಯ ರಾಜರೂ, ರಾಜಕುಮಾರರೂ ಬಂದಿದ್ದಾರೆ. ಅವಳ ಪ್ರೇಮ ಭಿಕ್ಷೆಗಾಗಿ ಹೊರಬಾಗಿಲಲ್ಲಿ ಸರದಿಯಲ್ಲಿ ಕಾಯುತ್ತಿದ್ದಾರೆ. ಆಕೆ ಒಳಗಡೆ ಇದ್ದಾಳೆ, ಪ್ರಣಯದ ತುರೀಯದ ಅಮಲಲ್ಲಿ. ಆದರೂ ಅದೇನೋ ಬೇಸರ. ಅವಳನ್ನು ಆವರಿಸಿದೆ. ಎಲ್ಲವೂ ಇದ್ದರೂ ಏನೋ ಕೊರತೆ. ತಳಮಳ.  […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-10 ಆತ್ಮಾನುಸಂಧಾನ ಬನವಾಸಿಯಲ್ಲಿ ನೋವಿನ ನೆನಪುಗಳು ಬಾಲ್ಯದ ನಾಲ್ಕು ವರ್ಷಗಳನ್ನು ಬನವಾಸಿಯಲ್ಲಿ ಕಳೆಯುವ ಅವಕಾಶ ದೊರೆತದ್ದು ನನ್ನ ಬದುಕಿನಲ್ಲಿ ಒದಗಿ ಬಂದ ಭಾಗ್ಯವೆಂದೇ ನಾನು ಭಾವಿಸಿದ್ದೇನೆ. ಅತ್ಯಂತ ಆಪ್ತ ಸ್ನೇಹಿತರಾಗಿ ದೊರೆತ ಮುಖೇಶ್ ಕುಚಿನಾಡ, ಸೊಮಶೇಖರ ಒಡಿಯರ್, ಅಶೋಕ ಪಾಳಾ, ಸೆಂಟ್ರಲ್ ಕೆಫೆಯ ಸದಾನಂದ ಶೆಟ್ಟಿ, ಕಿರಾಣಿ ಅಂಗಡಿಯ ಸಚ್ಚಿದಾನಂದ ಮೂಡ್ಲಗಿರಿ ಶೆಟ್ಟಿ ಮುಂತಾದ ಗೆಳೆಯರ ಒಡನಾಟದಲ್ಲಿ ಅತ್ಯಂತ ಮಧುರವಾದ ಅನುಭವಗಳು ನನಗೆ ದಕ್ಕಿವೆ. ಈ ಗೆಳೆಯರೆಲ್ಲ ಆಟ ಪಾಠ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಮೌ..ನದ ನಡುವಿನ ಮೌನ ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಡಿನ ನಟ್ಟ ನಡುವೆ, ಟೆಂಟ್ ನೊಳಗೆ ಮಲಗಿದ್ದೆ. ಚಿಕ್ಕಮಗಳೂರಿನ ಭದ್ರಾ ರಕ್ಷಿತಾರಣ್ಯದಲ್ಲಿ ಸ್ಕೌಟ್ ಕ್ಯಾಂಪ್ ಅದು. ವಿದ್ಯುತ್ ದೀಪಗಳು ಇರಲಿಲ್ಲ, ಕತ್ತಲು ಸುತ್ತಲೂ.  ವರ್ಷಗಳ ಹಿಂದೆ ದೂರ ನಕ್ಷತ್ರ ಗಳಿಂದ ಯಾತ್ರೆ ಹೊರಟು ಯಾತ್ರೆಯ ದಣಿವಿನಿಂದ ಮಂದವಾದ ಕಿರಣಗಳು, ತಂಗದಿರನ ಸೌಮ್ಯ ಬೆಳಕು ಮಾತ್ರ ಆ ಕಾಡನ್ನು ತಬ್ಬಿದ್ದವು. ಟೆಂಟು ಸುತ್ತಲೂ ಗಗನಕ್ಕೆ ಗೆಲ್ಲು ಚಾಚಿದ ಬೃಹತ್ ವೃಕ್ಷಗಳು. ಅವುಗಳಿಂದಾಚೆಗೆ ಕತ್ತಲೆ […]

ಅಂಕಣ ಬರಹ ಮಕ್ಕಳು ಮಾತ್ರ ಹೀಗಿರಲು ಸಾಧ್ಯ ಅಲ್ಲವಾ.. ಹೆರಿಗೆ ನೋವು ಶುರುವಾಗುವ ಸೂಚನೆಗಳಿದ್ದವು. ಅಂದು ಬೆಳಗ್ಗೆ ಮಗ್ಗಲು ಬದಲಾಯಿಸುವಾಗಲೇ ಎಂಥದೋ ನೋವಿನ ಸಳುಕು ಚುಳ್ ಎನ್ನಲು ಶುರುಮಾಡಿತ್ತು. ನಿಧಾನ ಎದ್ದು ನೆಲಕ್ಕೆ ಕಾಲು ಊರಿದಾಗ ಪಾದಗಳು ನೋಯುತ್ತಿದ್ದವು. ಇನ್ನು ಈ ದೇಹದ ಭಾರ ಹೊರಲಾರೆ ಎನ್ನುವಷ್ಟು  ಊದಿಕೊಂಡಿದ್ದ ಪಾದಗಳು ಇಡಲಾರದೆ ಹೆಜ್ಜೆ ಇಡುತ್ತಿದ್ದವು. ಮೆಲ್ಲಗೆ ಹೋಗಿ ಹಲ್ಲುಜ್ಜಿ, ಮುಖ ತೊಳೆದು ಬಂದೆ. ಹೆರಿಗೆ ನೋವು ಶುರುವಾಗಿಯೇ ಬಿಟ್ಟಿತು… ಸಮುದ್ರದ ಅಲೆಯಂತಹ ನೋವದು. ಬಿಟ್ಟು ಬಿಟ್ಟು ಬರುತ್ತಿತ್ತು. […]

ಅಂಕಣ ಬರಹ ಪ್ರಸ್ತುತ ಸಾಂಸ್ಕೃತಿಕ ವಾತಾವರಣದಲ್ಲಿ ಫೇವರಟಿಸಂ, ಜಾತೀಯತೆ, ಧಾರ್ಮಿಕತೆ, ಎಡ-ಬಲ, ವಶೀಲಿ ಎಲ್ಲವೂ ಇವೆ ಡಾ ಪ್ರೇಮಲತ .ಬಿ. ಪರಿಚಯ ಮೂಲತಃ ತುಮಕೂರಿನವರಾದ ಪ್ರೇಮಲತ ವೃತ್ತಿಯಲ್ಲಿ ದಂತವೈದ್ಯೆ. ಕಳೆದ 18 ವರ್ಷಗಳಿಂದ ಇಂಗ್ಲೆಂಡಿನಲ್ಲಿ ವಾಸ.ದಿನಪತ್ರಿಕೆ, ವಾರಪತ್ರಿಕೆ,ಮಾಸಪತ್ರಿಕೆ ಮತ್ತು ಅಂತರ್ಜಾಲ ತಾಣಗಳಲ್ಲಿ ಲೇಖನಗಳು,ಅಂಕಣ ಬರಹ, ಕಥೆ, ಕವನಗಳು ಮತ್ತು ಪ್ರಭಂದಗಳನ್ನು ಬರೆದಿದ್ದಾರೆ.ತುಷಾರ ಚಿತ್ರಕವನ ಸ್ಪರ್ಧೆಯ ಬಹುಮಾನ, ಪ್ರಜಾವಾಣಿ ಪ್ರೇಮ ಪತ್ರ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಭಂದ ಸ್ಪರ್ದೆಯಲ್ಲಿ ಸಮಾಧಾನಕರ ಬಹುಮಾನ, ಕರ್ನಾಟಕ ಲೇಖಕಿಯರ […]

ಅಂಕಣ ಬರಹ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಹಂಸಪತಿ ಗರುಡಪತಿ ವೃಷಭಪತಿ ರ‍್ವಜೀವಾಧಿಪತಿ ದೇವರಾಯ ಮಹಾರಾಯನ ಅರಸುತನ ಹೊಸತು ಓಲಗಕ್ಕೆ ಬಾರ; ಸಿಂಹಾಸನದಲ್ಲಿ ಕುಳ್ಳಿರ; ಸ್ತ್ರೀಲಂಪಟನಾಗಿ ಅಂತಃಪುರ ಬಿಟ್ಟು ಹೊರವಡ; ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ. ಗುರುವೆಂಬ ತಳವಾರನಾಜ್ಞೆ ಕೆಟ್ಟಿತ್ತು. ತರೆದ ಬಾಗಿಲ ಮುಚ್ಚುವರಿಲ್ಲ; ಮುಚ್ಚಿದ ಬಾಗಿಲ ತೆರೆವರಿಲ್ಲ; ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು ಭಕ್ತರೆಂಬುವವರಿನ್ನು ಬದುಕಲೆಬಾರದು ೧ ಅಗ್ಘವಣಿಯ ಹಂಪಯ್ಯ ವಚನ ಚಳುವಳಿಯ ಕೊನೆಯ ಹಂತದಲ್ಲಿ ಬಂದವನು. ವಿಜಯನಗರದ ದೇವರಾಯ (ಕ್ರಿ.ಶ. […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-9 ಆತ್ಮಾನುಸಂಧಾನ ಪಂಪನ ಬನವಾಸಿಗೆ ಪಯಣ             ನಾನು ಎರಡನೆ ಇಯತ್ತೆ ಮುಗಿಸುವಾಗ ನಮ್ಮ ತಂದೆಯವರಿಗೆ ಶಿರ್ಶಿ ತಾಲೂಕಿನ ಬನವಾಸಿಗೆ ವರ್ಗವಾಯಿತು. ನಮ್ಮ ಕುಟುಂಬದಲ್ಲಿ ಮಾತ್ರವಲ್ಲ, ನಮ್ಮ ಇಡಿಯ ಕೇರಿಯೇ ದಿಗಿಲುಗೊಂಡಿತು. ಅಂದಿನ ದಿನಮಾನಗಳಲ್ಲಿ ನಮಗೆಲ್ಲ ಬನವಾಸಿಯೆಂಬುದು ವಿದೇಶ ಪ್ರವಾಸದಷ್ಟೇ ದೂರದ ಅನುಭವವನ್ನುಂಟು ಮಾಡುವಂತಿತ್ತು. ಭಯಾನಕವಾದ ಪರ್ವತ ಶ್ರೇಣಿಗಳ ಆಚೆಗಿನ ಘಟ್ಟ ಪ್ರದೇಶ ಎಂಬುದು ಒಂದು ಕಾರಣವಾದರೆ, ನಮ್ಮೂರ ಪಕ್ಕದ ಹನೇಹಳ್ಳಿಯಿಂದ ಶಿರ್ಶಿಗೆ ಹೊರಡುವ ಒಂದೇ ಒಂದು ಬಸ್ಸು ನಸುಕಿನಲ್ಲಿ […]

ಅಂಕಣ ಬರಹ ಮರಿಕಪ್ಪೆ ಹಾರಿತು ಬಾವಿಯ ಹೊರಗೆ ಚಾವಣಿಯ ಹೊರೆ ಕಳೆದು ಶಿಥಿಲವಾದರೂ ನಿಂತೇ ಇದ್ದ ಗೋಡೆಯದು.  ಆ ಮೋಟುಗೋಡೆಯ ಮಗ್ಗುಲಲ್ಲಿ  ಕಪ್ಪೆಯಂತೆ ಹಾರಿ ಆ ಬದಿಯ ಕಿಟಕಿಯ ಚೌಕಟ್ಟಿಗೆ ಒಂದು ಕಾಲುಕೊಟ್ಟು  ಬಲಗೈಯಿಂದ ಕಿಟಕಿಯ ಸರಳು ಹಿಡಿದು ಮೇಲೇರಿ ಎಡಗಾಲು ಎತ್ತಿ ಆ ಅರ್ಧಗೋಡೆಯ ಮೇಲೆ ಇಟ್ಟು ದೇಹವನ್ನು ನಿಯಂತ್ರಣಕ್ಕೆ ತಂದುಕೊಳ್ಳುತ್ತ ಕೈಗಳನ್ನೂ ಗೋಡೆಯ ಬೋಳುತಲೆ ಮೇಲೆ ಊರಿ ಪುಟ್ಟ ಲಗಾಟೆ ಹೊಡೆದು ಗೋಡೆ ಏರಿ ಕುಳಿತುಕೊಳ್ಳುತ್ತಿದ್ದೆವು. ನಮ್ಮ  ಸಿಂಹಾಸನವದು. ಏರಿ ಕೂತವಳು ಮಹಾರಾಣಿ. ಉಳಿದವರು […]

ಅಂಕಣ ಬರಹ ಜೀವ ಜಂತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಥೆ ಹುಟ್ಟುತ್ತದೆ “ ಸುರೇಶ್ ಹೆಗಡೆ ಪರಿಚಯ: ಸುರೇಶ್ ಹೆಗಡೆ  ಹೊನ್ನಾವರದ ಕರ್ಕಿ ಗ್ರಾಮದವರು‌ .1952 ಜನನ. ಇವರ ತಂದೆ ಚಂದ್ರ ಮಾಸ್ತರ ಇವರ ಗುರು. ಹೊನ್ನಾವರ ಕಾಲೇಜಿನಿಂದ ವಿಜ್ಞಾನದ ವಿಷಯದಲ್ಲಿ ಪದವಿ ಪಡೆದರು. 1973 ರಲ್ಲಿ ಕರ್ನಾಟಕ ವಿದ್ಯುತ್  ನಿಗಮದಲ್ಲಿ 38 ವರ್ಷ ನೌಕರಿ ಮಾಡಿ ನಿವೃತ್ತರಾಗಿದ್ದಾರೆ. ಕತೆ ಬರೆಯುತ್ತಿದ್ದ ಇವರು ,ಅವುಗಳನ್ನು ಪ್ರಕಟಿಸಿದ್ದು, ನಿವೃತ್ತಿ ನಂತರ. 2020 ರಲ್ಲಿ ಇವರ ಮೊದಲ ಕಥಾ ಸಂಕಲನ ಇನಾಸ […]

Back To Top