Category: ಅಂಕಣ

ಅಂಕಣ

ಸ್ವಾತ್ಮಗತ

ಸುಭಾಷ್ ಪಾಳೇಕರರ ‘ಸಹಜ ಕೃಷಿ ಪದ್ದತಿ’ಯೂ..! ಮೈಸೂರಿನ ಆರ್.ಸ್ವಾಮಿ.ಆನಂದರ ‘ಸುಭಾಷ್ ಪಾಳೇಕರರ ಸಹಜ ಕೃಷಿ’ ಪುಸ್ತಕವೂ.!! ಕಳೆದ ಜುಲೈನಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ‘ಶೂನ್ಯ ಬಂಡವಾಳದ (ನೈಸರ್ಗಿಕ) ಕೃಷಿ’ಯನ್ನು ಉತ್ತೇಜಿಸುವುದಾಗಿ ಉಲ್ಲೇಖಿಸಿದ್ದರು. ಇದಕ್ಕೂ ಮುಂಚೆಯೇ ಕರ್ನಾಟಕವೂ ಸೇರಿದಂತೆ ಆಂಧ್ರ ಪ್ರದೇಶ, ಛತ್ತೀಸ್ ಘಡ, ಹಿಮಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲೂ ಈ ಕೃಷಿ ಪದ್ದತಿಯನ್ನು  ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಆಯಾಯ ರಾಜ್ಯ ಸರ್ಕಾರಗಳು ಹಮ್ಮಿಕೊಂಡಿವೆ. […]

ಭಯದ ಬಗ್ಗೆ ಭಯ ಬೇಡ

ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.         ಮಕ್ಕಳು ಯಾವ ಯಾವುದೋ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ ಮಾನಸಿಕ ಸಮಸ್ಯೆ. ಭಯ ಅಂದರೇನು? ಅದು ಏಕೆ […]

ಶಾಂತಿ ಬೀಜಗಳ ಜತನ’

ಸಾಹಿತ್ಯದ ಬರವಣಿಗೆ ಗಂಭೀರವಾದಂತೆಲ್ಲಾ ಲೇಖಕರ ಜವಾಬ್ದಾರಿ ಹೆಚ್ಚುತ್ತದೆ  ಡಾ. ಪ್ರಕಾಶ ಗ. ಖಾಡೆ  ಬಾಗಲಕೋಟೆಯಲ್ಲಿ ಅಧ್ಯಾಪಕರಾಗಿರುವ ಡಾ. ಪ್ರಕಾಶ ಗಣಪತಿ ಖಾಡೆ ಅವರು ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ೧೦-೦೬-೧೯೬೫ ರಂದು ಜನಿಸಿದರು. ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ, ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾಗಿ , ೨೦೦೫ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ “ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ” ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ […]

ಸ್ವಾತ್ಮಗತ

ಮರಗಳ ಮಹಾತಾಯಿ ನಾನು ಎಕೋ ಇಷ್ಟು ಬರಹವನ್ನು ಬರೆದರೂ ಅದ್ಯಾಕೋ ಈ ‘ಸಾಲು ಮರಗಳ ತಿಮ್ಮಕ್ಕ’ನ ಬಗೆಗೆ ಬರೆಯಲಾಗಿರಲಿಲ್ಲ. ಈ ತಿಮ್ಮಕ್ಕನ ಬಗೆಗೆ ಟಿಪ್ಪಣಿ ಬರೆದಿಟ್ಟುಕೊಂಡು ಬಹಳ ದಿನಗಳಾದವು. ಈಗ ಸಾಲು ಮರದ ಈ ತಿಮ್ಮನ ಬಗೆಗೆ ಬರೆಯಬೇಕು ಎಂಬ ತವಕ ಅದ್ಯಾಕೋ ಹೇಚ್ಚಾಯಿತು. ಅದಕ್ಕಾಗಿ ಇಂದು ಈ ಬರಹ ಬರೆದನು.ಅದೋ ಈ ಲೇಖನ ‘ಮರಗಳ ತಾಯಿ ತಿಮ್ಮಕ್ಕ’..! ಮರ ಎಂದಾಕ್ಷಣ ನಮ್ಮ ಮನದಲ್ಲಿ ಮೂಡಿ ಬರುವವರೇ ತಿಮ್ಮಕ್ಕನರವರು. ಬರೀ ತಿಮ್ಮಕ್ಕನೆಂದರೆ ಬಹುಶಃ ಯಾರಿಗೂ ಗೊತ್ತಾಗಲಾರದು. ಸಾಲು […]

ಕಬ್ಬಿಗರ ಅಬ್ಬಿ – ಸಂಚಿಕೆ – ೨

ಚೊಕ್ಕಾಡಿಯ ಹಾಡುಹಕ್ಕಿ ಮಹಾದೇವ ಕಾನತ್ತಿಲ ಎರಡು ದಶಕಗಳ ಹಿಂದೆ, ಹಿಮಾಲಯದ ತಪ್ಪಲಿನ, ರಾಣೀಖೇತ್ ಎಂಬ ಜಾಗದಲ್ಲಿ, ಚಾರಣ ಮಾಡುತ್ತಿದ್ದೆ.  ಬೆಟ್ಟ ಹತ್ತುತ್ತಾ, ಓರ್ವ ಬೆಟ್ಟದ ಜೀವಿ ಜತೆಯಾದ. ಆತನ ಮನೆ ಬೆಟ್ಟದ ತುದಿಯ ಹತ್ತಿರ. ಬರೇ ಕಾಲುದಾರಿ,ಸುತ್ತೀ ಬಳಸೀ, ಮರ ಹತ್ತುವ ಲತೆಯಂತೆ ಗುಡ್ಡ ಹತ್ತುತ್ತೆ. ಆಸ್ಪತ್ರೆಗೆ ಬೇಕಾದಲ್ಲಿ ಹತ್ತಾರು ಕಿಲೋಮೀಟರ್ ದೂರ. ಆತನ ಹತ್ತಿರ, ನಾನು ಕೇಳಿದೆ, ಅನಾರೋಗ್ಯವಾದಾಗ ಏನು ಮಾಡುತ್ತೀರಿ ಅಂತ. ಆತ ಅಂದ, “ಇಧರ್ ವನಸ್ಪತಿಯೋಂ ಕೀ ಹವಾ ಹೈ, ಹಮ್ ಹಮೇಷಾ […]

ವಲಸೆಯ ಹಾದಿಯಲ್ಲಿ ಪುಸ್ತಕ- ಮಲಾಣ್ಲೇಖಕರು- ಶಾಂತಾ ನಾಯ್ಕ ಶಿರಗಾನಹಳ್ಳಿಬೆಲೆ-೩೧೦/-ಪ್ರಕಾಶಕರು- ದೇಸಿ ಪುಸ್ತಕ        ಸೃಷ್ಟಿ ನಾಗೇಶ್ ಒಂದಿಷ್ಟು ಪುಸ್ತಕಗಳನ್ನು ಕಳಿಸಿದ್ದರು. ಅದರಲ್ಲಿ ಮಲಾಣ್ ಕೂಡ ಒಂದು. ನೋಡಿದ ಕೂಡಲೇ ಬೇರೆಲ್ಲ ಕೆಲಸ ಬಿಟ್ಟು ಅದನ್ನೇ ಓದಲಾರಂಭಿಸಿದೆ. ಯಾಕೆಂದರೆ ಅದು ನಾನು ತುಂಬಾ ಗೌರವಿಸುವ ಶಾಂತಾ ನಾಯ್ಕ ಶಿರಗಾನಹಳ್ಳಿಯವರ ಪುಸ್ತಕ. ಹಿಂದೊಮ್ಮೆ ಸುಮಾರು ನಾನು ಹೈಸ್ಕೂಲಿನಲ್ಲಿದ್ದಾಗ ಅವರು ಕಾರವಾರದ ಆಕಾಶವಾಣಿಯಲ್ಲಿದ್ದವರು. ಆಗಲೇ ಇವಳು ಬರೆಯುತ್ತಾಳೆ ನೋಡಿ ಎಂದು ಬೆನ್ನು ತಟ್ಟಿದವರು. ಹೀಗಾಗಿ ಅವರ ಹೆಸರು ನೋಡಿದಾಕ್ಷಣ […]

ಬೊಗಸೆಯಲ್ಲೊಂದು ಹೂನಗೆ ನೆನಪೊಂದು ಮಳೆಯಾಗಿ ಸುರಿದಾಗಲೆಲ್ಲ ನಗುವೊಂದು ಮಳೆಯ ಹನಿಗಳಾಗಿ ಅಂಗೈಯನ್ನು ಸ್ಪರ್ಶಿಸುತ್ತದೆ. ಹಾಗೆ ಸ್ಪರ್ಶಿಸಿದ ಒಂದಿಷ್ಟು ಹನಿಗಳು ಜಾರಿಬಿದ್ದು ನೆಲವನ್ನು ಹಸಿಯಾಗಿಸಿದರೆ, ಉಳಿದವು ಬೊಗಸೆಯಲ್ಲೊಂದು ಹೊಸ ಪ್ರಪಂಚವನ್ನು ಬಿಚ್ಚಿಡುತ್ತವೆ. ಹಾಗೆ ನಮ್ಮೆದುರು ತೆರೆದುಕೊಳ್ಳುವ ಪ್ರಪಂಚದಲ್ಲಿ ಕೈಗೂಸಿನ ಕನಸಿನಂಥ ನಗುವೊಂದು ಅಮ್ಮನ ಮಡಿಲಿನಲ್ಲಿ ಕದಲಿದರೆ, ಹೂನಗೆಯ ಹೊತ್ತ ಹುಡುಗಿಯೊಬ್ಬಳು ಸೈಕಲ್ಲನ್ನೇರಿ ಕನಸಿನಂತೆ ಮರೆಯಾಗುತ್ತಾಳೆ; ಹನಿಮೂನ್ ಪ್ಯಾಕೇಜಿನ ರೆಸಾರ್ಟ್ ಒಂದರ ಡೈನಿಂಗ್ ಹಾಲ್ ನಲ್ಲಿ ನಾಚಿಕೆಯ ನಗುವೊಂದು ಮೋಂಬತ್ತಿಯಾಗಿ ಕರಗಿದರೆ, ಆಪರೇಟಿಂಗ್ ರೂಮೊಂದರಿಂದ ಹೊರಬಂದ ವೈದ್ಯರ ನಗುವೊಂದು ಕಣ್ಣೀರನ್ನೆಲ್ಲ […]

ಅವಮಾನದ ತಿರುವುಗಳು ಗೆಲುವಿನ ಮೈಲಿಗಲ್ಲುಗಳು ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದು ಅವಮಾನದ ಒಂದು ಪ್ರಸಿದ್ಧ ಉದಾಹರಣೆ; ಪವಿತ್ರ ನರ್ಮದಾ ನದಿಯಲ್ಲಿ ಒಮ್ಮೆ ಸಂತ ಏಕನಾಥ ಸ್ನಾನ ಮಾಡಿ ಹೊರ ಬರುತ್ತಿದ್ದ.ಆಗ ಪಠಾಣನೊಬ್ಬ ಮನದಲ್ಲಿ ವಿಷ ತುಂಬಿಕೊಂಡು ಸಂತನ ಮೇಲೆ ಉಗುಳಿದ. ಏಕನಾಥ ‘ಜೈ ವಿಠ್ಠಲ’ ಎನ್ನುತ್ತ ಮತ್ತೆ ನರ್ಮದೆಗಿಳಿದ. ಈ ರೀತಿ ಮುಂಜಾನೆಯಿಂದ ಸಂಜೆಯವರೆಗೂ ಇಬ್ಬರ ನಡುವೆ ನಡೆಯಿತು ಯಾರು ಸೋಲುತ್ತಾರೆಂದು ನದಿ ತಟದಲ್ಲಿ ಜನ ನಿಂತು ನೋಡುತ್ತಿದ್ದರು. ಕೊನೆಗೆ ಪಠಾಣ, ಸಂತರನ್ನು ಉದ್ದೇಶಿಸಿ ನಾನು ಯಾವುದೇ ಕಾರಣವಿಲ್ಲದೇ […]

ರೇಖಾಚಿತ್ರ ಕಲೆಯ ತಾಯಿ “ಚಿತ್ರಕಲಾ ಅಧ್ಯಾಪಕರ ಆಯ್ಕೆಯಲ್ಲಿ ಪಠ್ಯಕ್ಕೆ ಅನುಗುಣವಾದ ಪ್ರಯೋಗಿಕ ಪರೀಕ್ಷೆ ಮಾನದಂಡವಾಗಬೇಕು” …………………………………. ಹಜರತ್ ಅಲಿ ನಾಡಿನ ಖ್ಯಾತ ಕಲಾವಿದ. ಹರಪನಹಳ್ಳಿ ಬಳಿಯ ಉಚ್ಚಂಗಿ ದುರ್ಗ ಅವರ ಹುಟ್ಟೂರು. ಅವರು ನೆಲೆಸಿರುವುದು ದಾವಣೆಗರೆಯಲ್ಲಿ.  ಕಾರ್ಯ ನಿರ್ವಹಿಸುತ್ತಿರುವುದು ತುಮಕೂರು ವಿಶ್ವವಿದ್ಯಾಲಯದ ಚಿತ್ರಕಲಾ ವಿಭಾಗದಲ್ಲಿ ಉಪನ್ಯಾಸಕರಾಗಿ. ಉತ್ಸವಾಂಬ ಪ್ರೌಢಶಾಲೆಯಲ್ಲಿ ಕಲಿತ ಅವರು , ದಾವಣಗೆರೆಯ ಚಿತ್ರಕಲಾ ಶಾಲೆಯಲ್ಲಿ ಫೈನ್ ಆರ್ಟ ಮತ್ತು ಮಾಸ್ಟರ್ ಆಫ್ ಆರ್ಟ ಪದವಿಗಳಿಸಿದರು. ಹಂಪಿ ಅವರ ನೆಚ್ಚಿನ ತಾಣ. ನಿಸರ್ಗ ಮತ್ತು ಹಳ್ಳಿ […]

ಚಹಾ ಎನ್ನುವ ಜನುಮದ ಸಾಕಿ ಬುಕ್ ಆಫ್ ಟೀ ಲೇಖಕರು – ಕುಮಾರ್ ಎಸ್ ಬೆಲೆ- -100           ಎಲ್ಲವನ್ನೂ ಬೆಸೆದ ಚಹಾ ಪ್ರೀತಿಗೆ ಎನ್ನುವ ಬರೆಹದೊಂದಿಗೆ ಈ ಪುಸ್ತಕ ನನ್ನ ಕೈ ಸೇರಿದಾಗ ಎಷ್ಟೊಂದು ಖುಷಿಯಾಗಿತ್ತು ಎಂದರೆ ಕುಳಿತಲ್ಲೇ ಒಂದು ಕಪ್ಪು ಬಿಸಿಬಿಸಿ ಚಹಾ ಕುಡಿದಷ್ಟು ರಿಲ್ಯಾಕ್ಸ್ ಆಗಿದ್ದೆ.  ನನ್ನ ಚಹಾ ಪ್ರೀತಿಯೇ ಅಂತಹುದ್ದು. ಕೊಟ್ಟರೆ ಮೊಗಮೊಗೆದು ಕುಡಿಯುತ್ತಲೇ ಇರುವ ಇಲ್ಲದಿದ್ದರೆ ದಿನವಿಡೀ ಕುಡಿಯದ ಪ್ರೀತಿಯಂತಹ ಪ್ರೀತಿ ಈ ಚಹ. ಪ್ರೀತಿಯೂ ಹಾಗೆ. ಪ್ರೇಮ ಸಾಗರದಲ್ಲಿ […]

Back To Top