Category: ಅಂಕಣ

ಅಂಕಣ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—50 ಯಕ್ಷರಂಗದ ಮಾನಾಪಮಾನಗಳು ೧೯೭೦-೮೦ ದಶಕವೆಂದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನದ ಸುಗ್ಗಿಕಾಲ. ಅಪರೂಪಕ್ಕೆ ಕಾಣಲು ಸಿಗುವ ಸಿನೇಮಾ ಹೊರತು ಪಡಿಸಿದರೆ ಹಳ್ಳಿ-ಹಳ್ಳಿಗಳಲ್ಲಿ ನಡೆಯುವ ಯಕ್ಷಗಾನ ಬಯಲಾಟ, ನಾಟಕ ಪ್ರದರ್ಶನಗಳೇ ಜನಸಾಮಾನ್ಯರಿಗೆ ಮನರಂಜನೆಯ ಪ್ರಮುಖ ಮಾದ್ಯಮಗಳಾಗಿದ್ದವು. ಎಲ್ಲ ಆಟ-ನಾಟಕಗಳಿಗೂ ಸಮೃದ್ಧವಾದ ಪ್ರೇಕ್ಷಕ ಸಮುದಾಯದ ಹಾಜರಿ ಇರುತ್ತಿತ್ತು. ಜಿಲ್ಲೆಯ ಕೆರೆಮನೆ, ಕರ್ಕಿ, ಬಚ್ಚಗಾರು ಇತ್ಯಾದಿ ವೃತ್ತಿಮೇಳಗಳ ತಿರುಗಾಟವಲ್ಲದೆ ದಕ್ಷಿಣದ ಕಡೆಯಿಂದಲೂ ಸೂರತ್ಕಲ್, ಧರ್ಮಸ್ಥಳ, ಮೂಲ್ಕಿ, ಮಂಗಳೂರು, ಕೋಟ ಮುಂತಾದ ಮೇಳಗಳು ಕನಿಷ್ಟ […]

ಅಂಕಣ ಸಂಗಾತಿ ನೆನಪಿನದೋಣಿಯಲಿ–02 ಕಾಲನ ಸುಳಿಗಾಳಿಯಲ್ಲಿ ಸಿಕ್ಕಿದ ತರಗೆಲೆಗಳು ನಾವು. ಆದರೂ ಸಿಗುವ ಒಂದಿಷ್ಟು ವಿರಾಮದಲ್ಲೇ ಸ್ಮರಣೆಗಳ ಜಾಡನ್ನು ಹಿಡಿದು  ಹೋದಾಗ………. ನೆನಪಿನ ದೋಣಿಯಲಿ ~೨ ಪರಿಪರಿಯ ರೂಪಿನಲಿ ಕಾಂತಿಯಲಿ ರಾಗದಲಿ ನೆರಯಿಸುತ ಪರಿಪರಿಯ ರಸಗಳಂ ಪ್ರಕೃತಿ  ಕೆರಳಿಸುತ ಹಸಿವುಗಳ ಸವಿಗಳನು ಕಲಿಸುವಳು ಗುರು ರುಚಿಗೆ ಸೃಷ್ಟಿಯಲ _  ಮಂಕುತಿಮ್ಮ   ಪ್ರಕೃತಿ ಅನೇಕ ಬಗೆಯ ರಸಗಳನ್ನು ತನ್ನ ಅಗಾಧವಾದ ಸೃಷ್ಟಿಯ ರೂಪಿನಲ್ಲಿ ಕಾಂತಿಯಲ್ಲಿ ಬಣ್ಣದಲ್ಲಿ ತುಂಬಿ ಜೀವದ ಹಸಿವುಗಳನ್ನು ಕೆರಳಿಸುತ್ತಾಳೆ.  ಅದನ್ನು ರುಚಿ ನೋಡಿದರೆ ಆನಂದ ಎಂಬುದನ್ನು […]

ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ

“ನಾವು ನಿಟ್ಟುಸಿರು ಬಿಟ್ಟರು ಕುಖ್ಯಾತರಾಗುತ್ತೇವೆ
ಅವರು ಕೊಂದರೂ ಸಹ ಚರ್ಚೆಯೂ ಆಗುವುದಿಲ್ಲ”
-ಅಕ್ಬರ್ ಇಲಾಹಾಬಾದಿ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—49 ಯಕ್ಷಗಾನ-ನಾಟಕ ರಂಗಭೂಮಿಯಲ್ಲಿ. ನನ್ನ ಕಾಲೇಜು ಅಧ್ಯಾಪಕರ ವೃತ್ತಿಯೊಡನೆ ನಾನು ಪ್ರೀತಿಯಿಂದ ಎದೆಗೆ ಹಚ್ಚಿಕೊಂಡ ಯಕ್ಷಗಾನ ಮತ್ತು ನಾಟಕ ರಂಗಭೂಮಿಯ ಹವ್ಯಾಸಗಳು ನನ್ನ ವ್ಯಕ್ತಿತ್ವದ ಇನ್ನೊಂದು ಮುಖದ ಬೆಳವಣಿಗೆಗೆ ಕಾರಣವಾದವು. ಈ ನಂಟಿನಿಂದಲೇ ಕಾಲೇಜು ಕ್ಯಾಂಪಸ್ಸಿನ ಆಚೆಯೂ ನನಗೊಂದು ಜನಪ್ರಿಯ ವಲಯ ಸೃಷ್ಟಿಯಾಯಿತು. ಹಾಗೆಂದು ನಾನು ಕ್ರಮಿಸಿದ ಯಕ್ಷಗಾನ ಮತ್ತು ರಂಗಭೂಮಿಯ ದಾರಿ ಕೇವಲ ಸುಗಂಧಯುಕ್ತ ಹೂವಿನ ಹಾಸಿಗೆಯಷ್ಟೇ ಆಗಿರಲಿಲ್ಲ. ಅಲ್ಲಿ ಶ್ಲಾಘನೆಯ ಪರಿಮಳದೊಡನೆ ವಿಮರ್ಶೆಯ ಟೀಕೆ ಟಿಪ್ಪಣಿಗಳ ಕಲ್ಲು […]

“ಒಣರೊಟ್ಟಿ ತಿಂದು
ತಣ್ಣೀರ ಕುಡಿ, ಫರೀದ್
ಇತರರ ತುಪ್ಪ ರೊಟ್ಟಿಯ ಕಡೆ
ನೋಡದಿರು ಹಂಬಲಿಸಿ”
-ಬಾಬಾ ಷೇಖ್ ಫರೀದ್

ಕಾಲವೆಂಬ ಗಿರಿಯ ಏರುತ್ತಾ ಏರುತ್ತಾ ಹಿಂತಿರುಗಿ ನೋಡಿದಾಗ ಅದೆಷ್ಟೋ ಅಂದಿನ ಸಾಮಾನ್ಯ ಸಂಗತಿಗಳು ಇಂದು ವಿಶಿಷ್ಟವೆನಿಸ ತೊಡಗುತ್ತವೆ. ಕಾಡುವ ನೆನಪುಗಳಾಗಿ ಹಂಚಿಕೊಳ್ಳಲೇಬೇಕೆಂಬ ತಹತಹ ಮೂಡಿಸುತ್ತವೆ. ಅಂತಹ ನೆನಪುಗಳ ಮಾಲಿಕೆ ಈ ಅಂಕಣ. ಬನ್ನಿ ನೆನಪಿನ ದೋಣಿಯನ್ನೇರಿ ಗತ ವೆಂಬ ಸಾಗರದ ಪರ್ಯಟನೆ ಮಾಡಿ ಬರೋಣ.

Back To Top