ಅಂಕಣ ಬರಹ ಮುಗಿಲ ಪ್ರೇಮದಿ ಕಳೆಗಟ್ಟಿತು ಇಳೆ ನನ್ನ ಅರಳಿದ ಬೊಗಸೆಯೊಳಗೆ ಅವಳು ಸುರಿದ ಹಣದಲ್ಲಿ ಮಡಚಿದ ಹತ್ತು, ಐದು, ಎರಡು, ಒಂದರ ನೋಟುಗಳು. ಅಘ್ರಾಣಿಸಿದರೆ ಅವಳ ಬೆವರು ಹಾಗೂ ಹಸುಗಳ ಉಸಿರನ ಪರಿಮಳ ಬೆರೆತುಬಂದಂತೆ. ಆ ದಿನ ಬೆಳಗ್ಗೆ ನನ್ನಜ್ಜಿ ನನ್ನನ್ನು ಹತ್ತಿರ ಕರೆದು ಕೂರಿಸಿಕೊಂಡಳು “ಬಾಳೀ, ನಿನ್ನ ಶಾಲೆಯಲ್ಲಿ ಇವತ್ತು ಗಮ್ಮತ್ತು ಅಲ್ವಾ. ನೀನು ಕಲಾವಿದೆ. ತಗೋ 100 ರೂಪಾಯಿ. ಇವತ್ತು ಹೊಸ ದಿರಿಸು ತಗೋ. ನಿನ್ನಿಷ್ಟದ್ದು. ಅದನ್ನು ಹಾಕಿಕೊಂಡು ಹೋಗು. ನೋಡು,ನಿನ್ನ ಖುಷಿ […]
ಅಂಕಣ ಬರಹ ಒಂದು ಹಾವಿನ ಕಥೆ ಮತ್ತು ನಾವು ಕೆಲವು ಒತ್ತಡಗಳು ಹುಟ್ಟಿಕೊಳ್ಳುತ್ತವೆ. ಎಂಥದೋ ಅನಿವಾರ್ಯತೆ ಕಾಡುತ್ತದೆ. ಮಾಡಬೇಕೆಂದುಕೊಂಡದ್ದನ್ನು ಮಾಡಲಾಗುತ್ತಿಲ್ಲ ಎನ್ನುವ ಚಡಪಡಿಕೆ, ನೋವು, ಹತಾಶೆ… ಬೇಕಾದವರನ್ನು ಮನಸಿಗೆ ಹತ್ತಿರವಾದವರನ್ನು ನಾವಾಗೇ ಹಚ್ಚಿಕೊಂಡವರನ್ನು ಎದೆಗೆ ತಬ್ಬುವ ಮನಸಿದ್ದಾಗಲೂ ದೂರ ನಿಲ್ಲಬೇಕಾದ ಸಂಯಮದ ಪ೫ರೀಕ್ಷೆಗೆ ತಯಾರಾಗಬೇಕಾಗಿ ಬರುವ ಪರಿಸ್ಥಿತಿಯನ್ನು ಧ್ವನಿ ತೆಗೆಯದೇ ಬಯ್ದುಕೊಳ್ಳುತ್ತಾ ಒಳಗೊಳಗೇ ಹಟಕ್ಕೆ ಬೀಳುತ್ತೇವೆ. ಅದು ನಮ್ಮ ಮೇಲಿನ ನಮ್ಮ ಹಟ. ಚೌಕಟ್ಟನ್ನು ದಾಟಿದರೆ ನಮಗೆ ನಾವು ದಕ್ಕಿಬಿಡುತ್ತೇವೆಂದು ನಮಗೆ ಗೊತ್ತು. ಆದರೆ ನಮಗೆ ಅದಕ್ಕೆ […]
ಚಲನೆಯ ವೇಗ ಜಾಸ್ತಿ ಇರುವುದರಿಂದ ಅಂತರವು ಕೂಡ ಜಾಸ್ತಿಯಾಗ್ತಾ ಹೋಗ್ತಾ ಇದೆ ಆಧುನಿಕತೆ ಸ್ಪರ್ಶ ಹೆಚ್ಚಾಗಿ ನಮ್ಮ ಮೂಲ ಸಂಸ್ಕೃತಿಯನ್ನು ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಅನಿಸುತ್ತದೆ.
ವಚನಚಳುವಳಿಗೆ ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಸ್ಥಾನವಿದೆ. ವಚನಗಳಲ್ಲಿ ಆಡಿದ, ಸಾರಿದ, ಸಾಧಿಸಿ ತೋರಿಸಿದ ಮೌಲ್ಯಗಳು ಕೇವಲ ಘೋಷಣೆಗಳಾಗದೆ ನಡೆ ನುಡಿಯಲ್ಲಿ ಒಂದಾಗಿ ಏಕವನ್ನು ಸ್ಥಾಪಿಸಿದ ಕಾರಣದಿಂದ ವಚನಕಾರರು ಈ ನೆಲದಲ್ಲಿ ಮಾನ್ಯ ಮತ್ತು ಮುಖ್ಯರಾಗುತ್ತಾರೆ.
ಅಂಕಣ ಬರಹ ವಸಂತ ಬಂದ! ರಂಗಕ್ಕೆ ರಂಗು ತಂದ!! ವೈಶಾಲಿ ನಗರದ ಬೀದಿ. ವೈಭವದ ಅರಮನೆ. ಅದು ರಾಜನ ಅರಮನೆಯಲ್ಲ. ನಗರದ ಮುಖ್ಯ ನೃತ್ಯಗಾರ್ತಿ,ರಾಜನರ್ತಕಿ ಆಮ್ರಪಾಲಿಯ ಮನೆ. ಆಮ್ರಪಾಲಿ ಚಿಗುರು ಮಾವಿನ ತಳಿರಂತಹವಳು. ಅವಳ ಸೌಂದರ್ಯದ ಕಥನ ಕೇಳಿ ನೆರೆ ಹೊರೆಯ ರಾಜರೂ, ರಾಜಕುಮಾರರೂ ಬಂದಿದ್ದಾರೆ. ಅವಳ ಪ್ರೇಮ ಭಿಕ್ಷೆಗಾಗಿ ಹೊರಬಾಗಿಲಲ್ಲಿ ಸರದಿಯಲ್ಲಿ ಕಾಯುತ್ತಿದ್ದಾರೆ. ಆಕೆ ಒಳಗಡೆ ಇದ್ದಾಳೆ, ಪ್ರಣಯದ ತುರೀಯದ ಅಮಲಲ್ಲಿ. ಆದರೂ ಅದೇನೋ ಬೇಸರ. ಅವಳನ್ನು ಆವರಿಸಿದೆ. ಎಲ್ಲವೂ ಇದ್ದರೂ ಏನೋ ಕೊರತೆ. ತಳಮಳ. […]
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-10 ಆತ್ಮಾನುಸಂಧಾನ ಬನವಾಸಿಯಲ್ಲಿ ನೋವಿನ ನೆನಪುಗಳು ಬಾಲ್ಯದ ನಾಲ್ಕು ವರ್ಷಗಳನ್ನು ಬನವಾಸಿಯಲ್ಲಿ ಕಳೆಯುವ ಅವಕಾಶ ದೊರೆತದ್ದು ನನ್ನ ಬದುಕಿನಲ್ಲಿ ಒದಗಿ ಬಂದ ಭಾಗ್ಯವೆಂದೇ ನಾನು ಭಾವಿಸಿದ್ದೇನೆ. ಅತ್ಯಂತ ಆಪ್ತ ಸ್ನೇಹಿತರಾಗಿ ದೊರೆತ ಮುಖೇಶ್ ಕುಚಿನಾಡ, ಸೊಮಶೇಖರ ಒಡಿಯರ್, ಅಶೋಕ ಪಾಳಾ, ಸೆಂಟ್ರಲ್ ಕೆಫೆಯ ಸದಾನಂದ ಶೆಟ್ಟಿ, ಕಿರಾಣಿ ಅಂಗಡಿಯ ಸಚ್ಚಿದಾನಂದ ಮೂಡ್ಲಗಿರಿ ಶೆಟ್ಟಿ ಮುಂತಾದ ಗೆಳೆಯರ ಒಡನಾಟದಲ್ಲಿ ಅತ್ಯಂತ ಮಧುರವಾದ ಅನುಭವಗಳು ನನಗೆ ದಕ್ಕಿವೆ. ಈ ಗೆಳೆಯರೆಲ್ಲ ಆಟ ಪಾಠ […]
ಅಂಕಣ ಬರಹ ಕಬ್ಬಿಗರ ಅಬ್ಬಿ ಮೌ..ನದ ನಡುವಿನ ಮೌನ ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಡಿನ ನಟ್ಟ ನಡುವೆ, ಟೆಂಟ್ ನೊಳಗೆ ಮಲಗಿದ್ದೆ. ಚಿಕ್ಕಮಗಳೂರಿನ ಭದ್ರಾ ರಕ್ಷಿತಾರಣ್ಯದಲ್ಲಿ ಸ್ಕೌಟ್ ಕ್ಯಾಂಪ್ ಅದು. ವಿದ್ಯುತ್ ದೀಪಗಳು ಇರಲಿಲ್ಲ, ಕತ್ತಲು ಸುತ್ತಲೂ. ವರ್ಷಗಳ ಹಿಂದೆ ದೂರ ನಕ್ಷತ್ರ ಗಳಿಂದ ಯಾತ್ರೆ ಹೊರಟು ಯಾತ್ರೆಯ ದಣಿವಿನಿಂದ ಮಂದವಾದ ಕಿರಣಗಳು, ತಂಗದಿರನ ಸೌಮ್ಯ ಬೆಳಕು ಮಾತ್ರ ಆ ಕಾಡನ್ನು ತಬ್ಬಿದ್ದವು. ಟೆಂಟು ಸುತ್ತಲೂ ಗಗನಕ್ಕೆ ಗೆಲ್ಲು ಚಾಚಿದ ಬೃಹತ್ ವೃಕ್ಷಗಳು. ಅವುಗಳಿಂದಾಚೆಗೆ ಕತ್ತಲೆ […]
ಅಂಕಣ ಬರಹ ಮಕ್ಕಳು ಮಾತ್ರ ಹೀಗಿರಲು ಸಾಧ್ಯ ಅಲ್ಲವಾ.. ಹೆರಿಗೆ ನೋವು ಶುರುವಾಗುವ ಸೂಚನೆಗಳಿದ್ದವು. ಅಂದು ಬೆಳಗ್ಗೆ ಮಗ್ಗಲು ಬದಲಾಯಿಸುವಾಗಲೇ ಎಂಥದೋ ನೋವಿನ ಸಳುಕು ಚುಳ್ ಎನ್ನಲು ಶುರುಮಾಡಿತ್ತು. ನಿಧಾನ ಎದ್ದು ನೆಲಕ್ಕೆ ಕಾಲು ಊರಿದಾಗ ಪಾದಗಳು ನೋಯುತ್ತಿದ್ದವು. ಇನ್ನು ಈ ದೇಹದ ಭಾರ ಹೊರಲಾರೆ ಎನ್ನುವಷ್ಟು ಊದಿಕೊಂಡಿದ್ದ ಪಾದಗಳು ಇಡಲಾರದೆ ಹೆಜ್ಜೆ ಇಡುತ್ತಿದ್ದವು. ಮೆಲ್ಲಗೆ ಹೋಗಿ ಹಲ್ಲುಜ್ಜಿ, ಮುಖ ತೊಳೆದು ಬಂದೆ. ಹೆರಿಗೆ ನೋವು ಶುರುವಾಗಿಯೇ ಬಿಟ್ಟಿತು… ಸಮುದ್ರದ ಅಲೆಯಂತಹ ನೋವದು. ಬಿಟ್ಟು ಬಿಟ್ಟು ಬರುತ್ತಿತ್ತು. […]
ಅಂಕಣ ಬರಹ ಪ್ರಸ್ತುತ ಸಾಂಸ್ಕೃತಿಕ ವಾತಾವರಣದಲ್ಲಿ ಫೇವರಟಿಸಂ, ಜಾತೀಯತೆ, ಧಾರ್ಮಿಕತೆ, ಎಡ-ಬಲ, ವಶೀಲಿ ಎಲ್ಲವೂ ಇವೆ ಡಾ ಪ್ರೇಮಲತ .ಬಿ. ಪರಿಚಯ ಮೂಲತಃ ತುಮಕೂರಿನವರಾದ ಪ್ರೇಮಲತ ವೃತ್ತಿಯಲ್ಲಿ ದಂತವೈದ್ಯೆ. ಕಳೆದ 18 ವರ್ಷಗಳಿಂದ ಇಂಗ್ಲೆಂಡಿನಲ್ಲಿ ವಾಸ.ದಿನಪತ್ರಿಕೆ, ವಾರಪತ್ರಿಕೆ,ಮಾಸಪತ್ರಿಕೆ ಮತ್ತು ಅಂತರ್ಜಾಲ ತಾಣಗಳಲ್ಲಿ ಲೇಖನಗಳು,ಅಂಕಣ ಬರಹ, ಕಥೆ, ಕವನಗಳು ಮತ್ತು ಪ್ರಭಂದಗಳನ್ನು ಬರೆದಿದ್ದಾರೆ.ತುಷಾರ ಚಿತ್ರಕವನ ಸ್ಪರ್ಧೆಯ ಬಹುಮಾನ, ಪ್ರಜಾವಾಣಿ ಪ್ರೇಮ ಪತ್ರ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಭಂದ ಸ್ಪರ್ದೆಯಲ್ಲಿ ಸಮಾಧಾನಕರ ಬಹುಮಾನ, ಕರ್ನಾಟಕ ಲೇಖಕಿಯರ […]
ಅಂಕಣ ಬರಹ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಹಂಸಪತಿ ಗರುಡಪತಿ ವೃಷಭಪತಿ ರ‍್ವಜೀವಾಧಿಪತಿ ದೇವರಾಯ ಮಹಾರಾಯನ ಅರಸುತನ ಹೊಸತು ಓಲಗಕ್ಕೆ ಬಾರ; ಸಿಂಹಾಸನದಲ್ಲಿ ಕುಳ್ಳಿರ; ಸ್ತ್ರೀಲಂಪಟನಾಗಿ ಅಂತಃಪುರ ಬಿಟ್ಟು ಹೊರವಡ; ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ. ಗುರುವೆಂಬ ತಳವಾರನಾಜ್ಞೆ ಕೆಟ್ಟಿತ್ತು. ತರೆದ ಬಾಗಿಲ ಮುಚ್ಚುವರಿಲ್ಲ; ಮುಚ್ಚಿದ ಬಾಗಿಲ ತೆರೆವರಿಲ್ಲ; ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು ಭಕ್ತರೆಂಬುವವರಿನ್ನು ಬದುಕಲೆಬಾರದು ೧ ಅಗ್ಘವಣಿಯ ಹಂಪಯ್ಯ ವಚನ ಚಳುವಳಿಯ ಕೊನೆಯ ಹಂತದಲ್ಲಿ ಬಂದವನು. ವಿಜಯನಗರದ ದೇವರಾಯ (ಕ್ರಿ.ಶ. […]