Category: ಅಂಕಣ

ಅಂಕಣ

ಉಗಾದಿ ಚಿತ್ರಗಳು ಕೆರೆಕೋಡಿ ಪಕ್ಕದಲ್ಲಿದ್ದ ಬೀದಿಯೊಂದರಲ್ಲಿ ನನ್ನ ತಾರುಣ್ಯ ಕಳೆಯಿತು. ಅಲ್ಲಿ ಬೆಸ್ತರು, ಈಡಿಗರು, ಬಡಗಿಗೆಲಸದ ಆಚಾರಿಗಳು, ಕಮ್ಮಾರರು, ಮಂಡಕ್ಕಿಭಟ್ಟಿಯವರು, ಮೇದಾರರು ಇದ್ದರು. ಎಲ್ಲರೂ ಬಸವಣ್ಣನವರ ವಚನದಲ್ಲಿ ಬರುವಂತೆ `ಅಂದಂದೆ ಹುಟ್ಟಿತ್ತು ಅಂದಂದೆ ಹೊಂದಿತ್ತು’ ಎಂಬಂತೆ ಹಗಲ ದುಡಿಮೆ- ರಾತ್ರಿಯ ಊಟದ ಅವಸ್ಥೆಯವರು. ಒಬ್ಬರ ಮನೆಯ ಹಬ್ಬ ಇಡೀ ಬೀದಿಯ ಹಬ್ಬವಾಗುತ್ತಿತ್ತು. ರಂಜಾನ್ ದಿನ ಶೀರ್‍ಕುರುಮಾ ಬಟ್ಟಲನ್ನು ಬೀದಿಯ ಎಲ್ಲರ ಮನೆಗೆ ತಲುಪಿಸುವುದು ನಮಗೆ ಲೋಕಮಹತ್ವದ ಕಾಯಕವಾಗಿತ್ತು. ಉಗಾದಿಯ ದಿನ ಬೇರೆಯವರ ಮನೆಗಳಿಂದ ಬರುತ್ತಿದ್ದ ಹೋಳಿಗೆ, ಕೋಸಂಬರಿ, […]

ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು ಇಂದಿನ ದಾವಂತದ ಬದುಕಿನಲ್ಲಿ ಎಲ್ಲ ಸುಖಗಳೂ ನಮ್ಮೆಡೆ ತಾವೇ ಬರಲಿ ಎಂದು ಆಶಿಸುತ್ತೇವೆ. ಬೆರಳ ತುದಿಯಲ್ಲಿ ಬೇಕಾದ್ದೆಲ್ಲವೂ ದೊರೆಯುತ್ತಿರುವಾಗ ಗೆಲುವಿಗೆ ಮಾತ್ರ ಇನ್ನಿಲ್ಲದ ಪರಿಶ್ರಮ ಏಕೆ ಪಡಬೇಕು ಎಂದು ಪ್ರಶ್ನಿಸುತ್ತೇವೆ. ‘ಕೆಲಸಕ್ಕೆ ಕರೆಯಬೇಡ್ರಿ ಊಟಕ್ಕೆ ಮರೆಯಬೇಡ್ರಿ.’ ಅನ್ನೋ ಜಾಯಮಾನದವರನ್ನು ಕಂಡರೆ ಯಶಸ್ಸು ಹತ್ತಿರವೂ ಸುಳಿಯುವುದಿಲ್ಲ. ಶ್ರಮವಿಲ್ಲದೇ ಏನೆಲ್ಲವೂ ತಮ್ಮ ಪಾದದ ಕೆಳಗೆ ಬಿದ್ದಿರಬೇಕೆಂಬುದು ನಮ್ಮಲ್ಲಿ ಬಹುತೇಕ ಜನರ ಅಭಿಪ್ರಾಯ. ವ್ಯಕ್ತಿತ್ವ ವಿಕಾಸದಲ್ಲಂತೂ ಪರಿಶ್ರಮ ಮೂಲ ವಸ್ತುವಿನಂತೆ ಕಾರ‍್ಯ ನಿರ‍್ವಹಿಸುತ್ತದೆ. ಶ್ರಮದ ಬೀಜಕ್ಕೆ ಅಗಾಧ […]

ನಾನು ದೀಪ ಹಚ್ಚಿಕೊಂಡರೂ ಬೆಳಕು ಎಲ್ಲರಿಗೂ ಕಾಣಿಸಬೇಕು `ಈಗ ಅಕ್ಷರಸ್ಥರನ್ನು, ಶ್ರೀಮಂತರನ್ನು ನಂಬಿಸುವ- ಒಲಿಸಿಕೊಳ್ಳುವ ಸಿದ್ಧಾಂತ ಹೆಚ್ಚಾಗಿದೆ…’ ಗಣೇಶ್ ಹೆಗಡೆ ಹೊಸ್ಮನೆ   ಗಣೇಶ್ ಹೆಗಡೆ ಹೊಸ್ಮನೆ  ಶಿರಸಿ ತಾಲೂಕು ಜಾನ್ಮನೆಯವರು. ವೃತ್ತಿಯಿಂದ ಕೃಷಿಕ. ಯಾರೂ ನೆಡದ ಮರ ಇವರ ಮೊದಲ ಕವಿತಾ ಸಂಕಲನ. ಇದಕ್ಕೆ ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿ, ಪುತ್ತೂರು ಕನ್ನಡ ಸಂಘದ ಉಗ್ರಾಣ ಪ್ರಶಸ್ತಿ ಲಭಿಸಿವೆ. ನಂತರ ಹರಿದು ಕೂಡುವ ಕಡಲು (ಗಜಲ್) ಸಂಕಲನವನ್ನು ಲಡಾಯಿ ಪ್ರಕಾಶನ ಪ್ರಕಟಿಸಿತು. ಕಾರವಾರ ಆಕಾಶವಾಣಿ, ಧಾರವಾಡ […]

ಪೇಟಿಮಾಂತ್ರಿಕ ಬೆಳಗಾವಿಯಲ್ಲಿರುವ ಪಂಡಿತ್ ರಾಮಭಾವು ಬಿಜಾಪುರೆ ಅವರನ್ನು ಕಾಣಬೇಕೆಂದು ನನಗೆ ಅನಿಸಿತು. ಮಿತ್ರರಾದ ಕುಸಗಲ್ಲರಿಗೆ ವಿಷಯ ತಿಳಿಸಲು `ನಾವು ಇದೇ ಊರಾಗಿದ್ರೂ ಅವರ ಮನೀಗ್ ಹೋಗಿಲ್ಲ, ಬರ್ರಿ ಸರ’ ಎಂದು ಕರೆದೊಯ್ಯಲು ಒಪ್ಪಿದರು. ಮುಸ್ಸಂಜೆ ಹೊತ್ತಿಗೆ ಶ್ರೀ ಕುಸುಗಲ್ಲ, ಅವರ ಮಗಳು ಕವಿತಾ, ಸ್ನೇಹಿತ ಡಾ. ಕೋಲ್ಕಾರ ಅವರೊಡನೆ ಬಿಜಾಪುರೆ ಅವರಲ್ಲಿಗೆ ಹೊರಟೆ. ಹಳೇ ಬೆಳಗಾವಿಯ ಬೀದಿಗಳು. ಪಶ್ಚಿಮಘಟ್ಟದ ಜಿರ್ರೋ ಮಳೆಧಾರೆ. ಕಚಿಪಿಚಿ ಕೆಸರು. ಹಸುರು ಕಕ್ಕುವ ಗಿಡಮರಪೊದೆ. ಮನೆಯ ಛಾವಣಿ ಕಾಂಪೌಂಡು ಗೋಡೆಗಳು ಹಸಿರು ಸ್ವೆಟರುಟ್ಟಂತೆ […]

ದೇವರ ವಾನಪ್ರಸ್ತ.

ರಾತ್ರಿಯಿಡೀ ಕಗ್ಗತ್ತಲು. ಯಾಕಿಲ್ಲ, ಅಮವಾಸ್ಯೆಯ ರಾತ್ರೆಯದು. ಗುಹೆಯೊಂದರಲ್ಲಿ ಮಲಗಿದ್ದ ಶಿಲಾಮಾನವ ರಾತ್ರೆ ಕಳೆಯುತ್ತಿದ್ದ. ಸುತ್ತ ,ಅಡವಿ. ಅದೊಂದು ನಿದ್ದೆಯಲ್ಲದ ನಿದ್ದೆ. ಗಾಳಿಗೆ ಮರಗಳ ಸುಂಯ್..ಸುಂಯ್.. ಒಂಥರಾ ನೀರವ ಕಗ್ಗತ್ತಲು. ಕಣ್ಣಿಗೇನೂ ಕಾಣಿಸದಾದಾಗ, ಕಿವಿ ಅತ್ಯಂತ ಸೂಕ್ಷ್ಮವಾಗುತ್ತೆ. ದೂರದಿಂದ, ನರಿಗಳು ಊಳಿಡುವ ಶಬ್ಧ, ಪಟ್ಟೆ ಹುಲಿ ನಡೆಯುವಾಗ,ಓಡುವಾಗ ಶಬ್ಧಮಾಡುವುದಿಲ್ಲ. ಸೈಲೆಂಟ್ ಕಿಲ್ಲರ್ ಅದು! ಹ್ಞಾ! ಕೇಳಿಸಿತಲ್ಲ, ಜಿಂಕೆಯ ಮರಣಾಕ್ರಾಂದನ..ಖಂಡಿತಾ ಹುಲಿ ಹಿಡಿದಿರಬೇಕು, ನಾಳೆ ಸಿಗುತ್ತೆ ಅದರ ಅವಶೇಷಗಳು. ಹೇಗಿದ್ದರೂ, ಗುಹೆಯ ಬಾಗಿಲಿಗೆ ಬಂಡೆ ಪಾರ್ಶ್ವದಿಂದ ಮುಚ್ಚಿದೆ. ಹುಲಿಗೂ ಭಯವಿದೆ. […]

ಸ್ವಾತ್ಮಗತ

ಬಂಡಾಯ ಸಾಹಿತ್ಯದ ವಿವಿಧ ಮಜಲುಗಳು..! ಶಿವು ಲಕ್ಕಣ್ಣವರ ಬಂಡಾಯ ಸಾಹಿತ್ಯ ಆಧುನಿಕ ಕನ್ನಡ ಸಾಹಿತ್ಯದ ಈಚಿನ ಹಂತ… ನವೋದಯ, ಪ್ರಗತಿಶೀಲ, ನವ್ಯಗಳ ಅನಂತರದ ಸಾಹಿತ್ಯ ಚಳವಳಿ ಇದು. ಇದನ್ನು ನವೋತ್ತರ ಸಾಹಿತ್ಯವೆಂದೂ ಕರೆಯಲಾಗಿದೆ. ಎಪ್ಪತ್ತರ ದಶಕದ ಉತ್ತರಾರ್ಧದಲ್ಲಿ ಕನ್ನಡ ಸಾರಸ್ವತ ಪ್ರಪಂಚದಲ್ಲಿ ಕೇಳಿಬರುತ್ತಿರುವ, ಎಲ್ಲ ಪ್ರಗತಿಪರ ಹಾಗೂ ದಲಿತ ಬರಹಗಾರರಿಂದ ಸೃಷ್ಟಿಯಾದ ಮತ್ತು ಸೃಷ್ಟಿಗುತ್ತಿರುವ ಸಾಹಿತ್ಯವಿದು. ಬಂಡಾಯ ಸಾಹಿತ್ಯದ ಉಗಮ– 1970 ರ ದಶಕದಲ್ಲಿ ಅನೇಕ ಸಾಮಾಜಿಕ, ರಾಜಕೀಯ ಘಟನೆಗಳು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆಗಳನ್ನು ತಂದವು. ಬದುಕಿನಲ್ಲಿ […]

ಮಗುವಾಗಿಸುವ ಸುಂದರ ಹೂ ಮಾಲೆ

ಪುಟ್ಟಲಕ್ಷ್ಮಿ ಕಥೆಗಳುಲೇಖಕರು- ರಘುನಾಥ ಚ ಹಬೆಲೆ-೮೦/-ಪ್ರಕಾಶನ-ಅಂಕಿತ ಪುಸ್ತಕ ಚಿಕ್ಕ ಮಕ್ಕಳ ಲೋಕವೇ ಬೇರೆ ರೀತಿಯದ್ದು. ಕಂಡಿದ್ದೆಲ್ಲವೂ ಅಚ್ಚರಿಯ ವಿಷಯವೇ. ನಾನು ಮೂರನೇ ತರಗತಿಯಲ್ಲಿದ್ದಾಗ ನನ್ನ ಪಕ್ಕದ ಮನೆಯಲ್ಲಿ ದೀಪಾ ಕೊಡ್ಲೆಕೆರೆ ಎನ್ನುವ ನಾಲ್ಕನೆ ತರಗತಿಯ ಗೆಳತಿಯೊಬ್ಬಳಿದ್ದಳು. ಅವಳ ತಂದೆ ಅಲ್ಲೇ ಸಮೀಪದ ಮತ್ತೊಂದು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ಅವರು ನಮ್ಮ ಹೆಸರಾಂತ ಕಥೆಗಾgರಾಗಿರುವ ಚಿಂತಾಮಣಿ ಕೊಡ್ಲೆಕೆರೆ ಹಾಗೂ ಮಹಾಬಲಮೂರ್ತಿ ಕೊಡ್ಲೆಕೆರೆಯವರ ಚಿಕ್ಕಪ್ಪ. ನಾನು ದೀಪಾ ಆಗಲೇ ಕವನ ಬರೆಯುತ್ತೇವೆಂದು ಏನೇನೋ ಬರೆಯುತ್ತಿದ್ದೆವು. ಆಗ ನಾವಿದ್ದ ಅಮ್ಮಿನಳ್ಳಿ ಎಂಬ […]

ಉತ್ತಮರ ಸಂಗ ಎನಗಿತ್ತು ಸಲಹೊ

ಸಂಬಂಧಗಳು ಹುಟ್ಟಿಕೊಳ್ಳುವುದು ಅಂಥ ವಿಶೇಷವಾದ ಸಂಗತಿಯೇನಲ್ಲ. ಹುಟ್ಟಿಕೊಂಡ ಸಂಬಂಧಗಳು ಎಲ್ಲಿಯವರೆಗೆ ಬಾಳುತ್ತವೆ, ನಮ್ಮ ಬದುಕಿನ ಚಲನೆಯಲ್ಲಿ ಅವುಗಳ ಮಹತ್ವವೇನು, ಅವು ಯಾವ ಬಗೆಯ ಹೊಸತನವನ್ನು ನಮ್ಮ ಯೋಚನೆಗಳಿಗೆ ಒದಗಿಸಬಲ್ಲವು ಎನ್ನುವ ಆಧಾರದ ಮೇಲೆ ಸಂಬಂಧಗಳ ಗುಣಮಟ್ಟದ ನಿರ್ಧಾರವಾಗುತ್ತದೆ. ಈ ಗುಣಮಟ್ಟದ ಮೌಲ್ಯಮಾಪನ ಯಾವುದೇ ರೂಪ, ಆಕಾರ ಅಥವಾ ಹೆಸರುಗಳ ಪ್ರಾಪಂಚಿಕ ಚೌಕಟ್ಟಿನೊಳಗೆ ನಡೆಯುವಂಥದ್ದಲ್ಲ. ತಲೆದಿಂಬಿನ ಪಕ್ಕದಲ್ಲಿ ನೆಮ್ಮದಿಯಿಂದ ನಿದ್ರಿಸಿರುವ ಮೊಬೈಲ್ ನಲ್ಲಿ ಪಾಪ್ ಅಪ್ ಆಗುವ ಗುಡ್ ಮಾರ್ನಿಂಗ್ ಮೆಸೇಜುಗಳಲ್ಲಿ ಹದಿನೈದು ವರ್ಷಗಳ ನಂತರ ಮತ್ತೆ ಜೊತೆಯಾದ […]

ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್ ಬರೆದದ್ದು. ಒಮ್ಮೆ ಇಬ್ಬರು ಗೆಳೆಯರು ಕಾಡಿನಲ್ಲಿ ಹೋಗುತ್ತಿದ್ದರು. ಕಾಡು ಪ್ರಾಣಿಗಳು ಪೊದೆಗಳ ಹಿಂದೆ ಅಡಗಿರಬಹುದೆಂಬ  ಭಯದಿಂದ ಇಬ್ಬರೂ ಕೈ ಕೈ ಹಿಡಿದು ಸಾಗುತ್ತಿದ್ದರು.  ಕಾಡಿನ ದಾರಿಯನು ಗೆಲುವಾಗಿ ಸಾಗಲು ಅತಿ ಪ್ರೀತಿಯಿಂದ ಅದು ಇದು ಹರಟುತ್ತ ಸಾಗುತ್ತಿದ್ದರು. ಒಮ್ಮೆಲೇ ಕರಡಿ ಕಾಣಿಸಿಕೊಂಡಿತು.ಕರಡಿ ಇನ್ನೂ ದೂರದಲ್ಲಿತ್ತು. ಹಾಗಾಗಿ ಹೇಗಾದರೂ ಅದರಿಂದ ಬಚಾವಾಗಬೇಕೆಂದು ಉಪಾಯ ಮಾಡಲು ಅವರಿಬ್ಬರಿಗೂ ಕೆಲ […]

ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ

ಮಹಾಂತೇಶ್ ಪಲದಿನ್ನಿ ಮಿಥುನ ಶಿಲ್ಪಗಳ ಮೂಲಕ ಸಾಮಾಜಿಕ ಎಚ್ಚರಿಕೆ ನೀಡುವ  ಸಂದೇಶವೂ ಇದೆ ‘ * ಕಲಾವಿದ ಡಾ.ಮಹಾಂತೇಶ್ ಎಂ.ಪಲದಿನ್ನಿ . ವಿಜಾಪುರ ಇವರ ಊರು. ಹುಟ್ಟಿದ್ದು ೧೯೮೪. ಕಲಾ ಶಿಕ್ಷಣ ಕಲಿತದ್ದು ಹಂಪಿ ಕನ್ನಡ ವಿವಿ ಶಿಲ್ಪಕಲಾ ವಿಭಾಗದಲ್ಲಿ. ಬಿಎಫ್‌ಎ ಶಿಲ್ಪಕಲೆ ಕಲಿತ ಅವರು ಮೈಸೂರಿನ ಕಾವಾದಲ್ಲಿ ಮಾಸ್ಟರ್ ಆಫ್ ಆರ್ಟ ಕಲಿತರು. ನಂತರ ಶಿಲ್ಪಕಲೆಯಲ್ಲಿ ಎಂ.ಫಿಲ್.ಪದವಿ ಹಾಗೂ ಡಾಕ್ಟರೇಟ್ ಪದವಿಗಳನ್ನು ಹಂಪಿ ಕನ್ನಡ ವಿ.ವಿ.ಯಿಂದ ಪಡೆದರು. ಹಂಪಿ ವಿಶ್ವ ವಿದ್ಯಾಲಯದ ಶಿಲ್ಪಕಲಾ ವಿಭಾಗ ಬದಾಮಿ […]

Back To Top