Category: ಅಂಕಣ

ಅಂಕಣ

ಮೊದಲ ಬಾರಿ ಪೇಯಿಂಗ್ ಗೆಸ್ಟ್ ಆಗಿ ಹೋದಾಗ

ಅನುಭವ ಮೊದಲಬಾರಿಪೇಯಿಂಗ್ ಗೆಸ್ಟ್ಆಗಿಹೋದಾಗ      ಬೆಂಗಳೂರಿಗೆ ಹೋಗಿ ಬಂಧುಗಳ ಮನೆಯಲ್ಲಿ  ಬಂಧುಗಳ  ಹಾಗೆ ಒಂದೆರಡು ದಿನ ಇದ್ದು ಬರುವುದು ಬೇರೆ ವಿಚಾರ !ಅದೇ ನಮ್ಮ ಕೆಲಸಕ್ಕೆ ಹೋಗಿ ಇರುವುದು ವೆರಿ ಹಾರಿಬಲ್‌! ಯಾರಿಗೂ ಇರಿಸು ಮುರಿಸು ಬೇಡ ಎಂಬ ಕಾರಣಕ್ಕೆ ಸಾಧನಾಕಾಂಕ್ಷೆಗಳ ಅರ್ಥಾತ್ ಉದ್ಯೋಗಾಕಾಂಕ್ಷೆಗಳು,. ಸ್ಪರ್ಧಾಕಾಂಕ್ಷಿಗಳು ಏನೇ ಕರೆಯಲಿ ಅವರ ಮುಂದಿನ ಆಯ್ಕೆ ಪಿಜಿ.  ಪಿಜಿ ಅಂದರೆ  ‘ಪೇ’ ಮಾಡಿ ‘ಗೆಸ್ಟ್’ ಆಗಿರಿ ಅಂತ ಅಲ್ಲ ಪೇ ಮಾಡಿ  ಪೇನ್ಫುಲ್ ಅಡ್ಜಸ್ಮೆಂಟ್ ಮಾಡಿಕೊಂಡಿರಿ ಎಂದರ್ಥ. ಅತ್ತೆ ಮನೆಯ […]

ಅಂಕಣ ಬರಹ ಜ್ಞಾನವೆಂಬ ತಿಜೋರಿಯ ಕೀಲಿಕೈ… ಪುಸ್ತಕಗಳ ರಾಶಿಯನ್ನು ತಡವುವಾಗೆಲ್ಲಾ ಎಂಥದೋ ಆಪ್ತಭಾವ. ಗುಪ್ತಗೆಳೆಯನೊಬ್ಬ ಮನಕ್ಕೆ ಆಗಮಿಸಿದಂತೆ ಪ್ರತಿ ಪುಸ್ತಕವೂ ನಮ್ಮ ಅತಿ ಖಾಸಗೀತನವನ್ನು ಕೊಳ್ಳೆ ಹೊಡೆಯುತ್ತಿರುತ್ತದೆ. ನನಗೆ ಪುಸ್ತಕದ ರುಚಿ ಹತ್ತಿದ್ದು ಬಹುಶಃ ಮೂರೋ ನಾಲ್ಕನೆಯದೋ ತರಗತಿಯಲ್ಲಿದ್ದಾಗ. ಆಗ ನನ್ನ ಮನೆಗೆ ಬರುತ್ತಿದ್ದದ್ದು ದಿಕ್ಸೂಚಿ ಮಾತ್ರ. ಅದು ಖಂಡಿತ ದಿಕ್ಸೂಚಿ ಆಕರ್ಷಕವಾಗಿ ಕಾಣಿಸಬಹುದಾದ ವಯಸ್ಸು ಆಗಿರಲಿಲ್ಲ. ಆದರೆ ಒಂದು ಪುಸ್ತಕದ ಸ್ಪರ್ಶದ ಅನುಭೂತಿ ಹೇಗಿರುತ್ತದೆಂದು ತಿಳಿದದ್ದು ಮಾತ್ರ  ದಿಕ್ಸೂಚಿಯಿಂದಲೇ. ಶಾಲೆಯ ಪಠ್ಯ ಪುಸ್ತಕಗಳು ಸದಾ ನಮ್ಮೊಂದಿಗಿರುತ್ತಿದ್ದವಾದರೂ […]

ಅಂಕಣ ಬರಹ ಹೊಸ ದನಿ ಹೊಸ ಬನಿ – ೧೦. ಹಂಗೆ ಇಲ್ಲದ ಖಬರಿನೊಳಗ ಏನೊ ಗುನುಗಿದ್ಹಾಂಗ ಚಂ ಸು ಕವಿತೆಗಳು ರಾಣೇಬೆನ್ನೂರು ಸಮೀಪ ಕೂನಬೇವು ಗ್ರಾಮದ ಸಾಹಿತಿ ಚಂಸು (ಚಂದ್ರಶೇಖರ ಸುಭಾಸ ಗೌಡ ಪಾಟೀಲ ಅಂದರೆ ಯಾರಿಗೂ ಗೊತ್ತಾಗುವುದಿಲ್ಲ!) ಅವರ “ಬೇಸಾಯದ ಕತಿ” ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೧೮ನೇ ಸಾಲಿನ ಸಿಂಪಿ ಲಿಂಗಣ್ಣ ದತ್ತಿ (ಜೀವನಚರಿತ್ರೆ) ಪ್ರಶಸ್ತಿ ಪ್ರಕಟವಾದಾಗ ಅವರನ್ನು ಅಭಿನಂದಿಸಲು ಫೋನ್ ಮಾಡಿದ್ದೆ.  ಆ ಲೇಖನಗಳಲ್ಲಿ ಕೆಲವನ್ನು ಓದಿದ್ದರಿಂದಾಗಿ ಬೇಸಾಯದ ಬದುಕಿನ ಹಿಂದಣ […]

   ಭಯದ ಬಗ್ಗೆ ಭಯ ಬೇಡ      ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.        ಮಕ್ಕಳು ಯಾವ ಯಾವದೆ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ […]

ಕವಿತೆ ಹುಟ್ಟುವುದು ಎರಡೇ ಕಾರಣಕ್ಕೆ ನೋವು ಬಿಕ್ಕಲಿಕ್ಕೆ,ನಲಿವು ಹಂಚಲಿಕ್ಕೆ ವಿಭಾ ಪುರೋಹಿತ ಮುಖಾಮುಖಿ  ೧. ಕತೆ, ಕವಿತೆಗಳನ್ನ ಏಕೆ ಬರೆಯುತ್ತೀರಿ ?             ಕೆಲವು ಕಾಡುವ ವಿಷಯಗಳು ತನ್ನಷ್ಟಕ್ಕೆ ತಾನೇ ಬರೆಸಿಕೊಂಡುಬಿಡುತ್ತವೆ. ಮನದಲ್ಲಿ ಚಿಮ್ಮಿಬಂದ ತೀವ್ರ ಭಾವನೆಗಳ ಅಲೆಗಳನ್ನು ಅಕ್ಷರಗಳಲ್ಲಿ ಹಿಡಿದಿಡುವ ಕ್ರಿಯೆಯೇ ಕವಿತೆಗಳಾಗಿವೆ. ಹೀಗೇ  ಹರಿದುಬಂದ ಪ್ರಬಲ , ಸಂವೇದನೆಗಳ ಕಂತೆಗಳು ಪದಗಳೊಂದಿಗೆ ಬೆಸೆದು ಕವನಗಳಾಗಿವೆ ಜೀವನದ ಅದೇ ರುಟೀನ್ ಕೆಲಸಕ್ಕೆ ಹೋಗುವದು,ಅಡುಗೆ,ಮನೆ,ಮಕ್ಕಳು ಅಂತ ಇದರಲ್ಲೇ ಮುಳುಗಿರುತ್ತೇವೆ. ಈ ಯಾಂತ್ರಿಕತೆಯಿಂದ ಹೊರಬರಲು ಚೂರು ಚಿನಕುರುಳಿಯಂತೆ ಸಹಾಯವಾಗುತ್ತದೆ […]

ಅಂಕಣ ಬರಹ ಲೇರಿಯೊಂಕ ಲೇರಿಯೊಂಕ ( ಕಾದಂಬರಿ)ಮೂಲ : ಹೆನ್ರಿ ಆರ್. ಓಲೆ ಕುಲೆಟ್ ಕನ್ನಡಕ್ಕೆ : ಪ್ರಶಾಂತ ಬೀಚಿಪ್ರ : ಛಂದ ಪುಸ್ತಕಪ್ರಕಟಣೆಯ.ವರ್ಷ : ೨೦೦೮ಬೆಲೆ : ರೂ.೧೦೦ಪುಟಗಳು : ೨೫೦  ಕೀನ್ಯಾದ ಹೆಸರಾಂತ ಕಾದಂಬರಿಕಾರ ಹೆನ್ರಿ ಆರ್.ಓಲೆ ಕುಲೆಟ್ ಅವರ ಈ ಕಾದಂಬರಿಯು ಲೇರಿಯೊಂಕ ಎಂಬ ಒಬ್ಬ ದನಗಾಹಿ ಹುಡುಗ ಶಾಲೆಗೆ ಹೋಗಲು ಪಡಬಾರದ ಪಾಡು ಪಟ್ಟು ಕೊನೆಗೆ ಸ್ವಂತ ಪರಿಶ್ರಮದಿಂದ ವಿದ್ಯಾವಂತನಾಗಿ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವುದರ ಕುರಿತಾದ ಕಥೆಯನ್ನು ಹೇಳುತ್ತದೆ.  ಮಾಸಯಿ ಜನಾಂಗಕ್ಕೆ […]

ಅಂಕಣ ಬರಹ ವೃದ್ಧಾಶ್ರಮ ಅಥಶ್ರೀ ಒಮ್ಮೆ ಕನ್ನಡದ ಸುದ್ದಿಮಾಧ್ಯಮಗಳು, ಹಿರಿಯ ರಂಗನಟರೊಬ್ಬರ ಹೆಂಡತಿ ವೃದ್ಧಾಶ್ರಮದಲ್ಲಿದ್ದಾರೆ ಎನ್ನುವುದನ್ನು ದೊಡ್ಡದಾಗಿ ವರದಿ ಮಾಡಿದವು. ಕೆಲವು ವರದಿಗಳಲ್ಲಿ `ಇದೊಂದು ಶೋಚನೀಯ ಸಂಗತಿ’ ಎಂಬ ದನಿಯಿರಲಿಲ್ಲ. ಇದಕ್ಕೆ ತಕ್ಕಂತೆ ಆ ಮಹಿಳೆ ಕೂಡ `ಕುಟುಂಬದವರು ಬೀದಿಪಾಲು ಮಾಡಿದರು’ ಎಂದೂ ಹೇಳಲಿಲ್ಲ. ವೃದ್ಧಾಶ್ರಮಕ್ಕೆ ಬರಲು ಕಾರಣವಾದ ಸನ್ನಿವೇಶವನ್ನು ಯಾರಮೇಲೂ ಆರೋಪ ಮಾಡದಂತೆ ಘನತೆಯಿಂದ ವಿವರಿಸಿದರು. ಆದರೂ ವ್ಯಕ್ತಿಗಳ ಖಾಸಗಿ ಬದುಕಿನ ವಿಷಯವನ್ನು ಮಾಧ್ಯಮಗಳು ನೈತಿಕ ರಕ್ಷಕರಂತೆ ಸಾರ್ವಜನಿಕ ಚರ್ಚೆಯ ವಿಷಯವನ್ನಾಗಿ ಮಾಡುವ ಚಾಳಿ ಹೆಚ್ಚುತ್ತಿದೆ. […]

ಅಂಕಣ ಬರಹ ಕಬ್ಬಿಗರ ಅಬ್ಬಿ   ಪಟ್ಟಣದ ಕವಿತೆಗೆ ಛಂದಸ್ಸಿಲ್ಲ! ಈ ಷಹರ ನಿದ್ರಿಸಲ್ಲ!.  ಏರ್ಪೋರ್ಟ್ ನಲ್ಲಿ ಇಳಿಯಲು ಅನುಮತಿ ಸಿಗುವ ವರೆಗೆ ಪೈಲಟ್ ವಿಮಾನವನ್ನು ಷಹರಕ್ಕೆ ಸುತ್ತು ಹಾಕುತ್ತಿದ್ದ. ವಿಂಡೋ ದಿಂದ ಕಣ್ಣು ಹಾಯಿಸಿದರೆ, ಕೆಳಗೆ ಅಷ್ಟೂ ಬೆಳಕು. ಉದ್ದಕ್ಕೆ ಅಡ್ಡಕ್ಕೆ ಕೆಲವು ನೇರ,ಹಲವು ವಕ್ರ ರಸ್ತೆಗಳು. ಅವುಗಳನ್ನು ಬೆಳಗುವ ರಾತ್ರಿ ದೀಪಗಳು. ಈ ಪಟ್ಟಣಕ್ಕೆ ಮಧ್ಯರಾತ್ರಿ ಎನ್ನುವುದು ಬರೇ ಒಂದು ಪದ. ಆಕಾಶದಿಂದ ನೋಡಿದರೆ, ನೆಲದೆದೆಗೆ ಮೊಳೆ ಹೊಡೆದ ಹಾಗಿರುವ ಕಟ್ಟಡಗಳು. ಅವುಗಳ ಕಿಟಿಕಿಗಳಿಂದ ತಡರಾತ್ರೆ […]

ಮೂರನೇ ಆಯಾಮ

ಅಂಕಣ ಬರಹ ಹಾಡುವ ತೊರೆಗೆ ಹಾದಿ ತೋರುವ ಕವಿತೆಗಳು ಸಂಕಲನ-ತೊರೆ ಹರಿವ ಹಾದಿಕವಿ- ವಿನಯಚಂದ್ರಬೆಲೆ-೧೨೦ಪ್ರಕಾಶನ- ವಿಶಿಷ್ಟ ಪ್ರಕಾಶನ, ಹಾಸನ   ಕವಿತೆಗಳ ಜಾಡು ಎಂತಹದ್ದು? ಅದು ಯಾವ ಹಾದಿ ಹಿಡಿದು ಹೊರಟಿರುತ್ತದೆ? ಕವಿತೆ ಅಂತರ್ಮುಖಿಯಾಗಿರಬೇಕೆ ಅಥವಾ ಬಹಿರ್ಮುಖಿಯಾಗಿರಬೇಕೆ ಎನ್ನುವ ಪ್ರಶ್ನೆ ಸದಾಕಾಲ ವಿಮರ್ಶೆಯನ್ನು ಕಾಡುತ್ತಿರುತ್ತದೆ. ಒಂದು ಕವಿತೆ ಅತ್ಯುತ್ತಮ ಅಥವಾ ಇನ್ನೊಂದು ಕವಿತೆ ಸಾಧಾರಣ ಇಲ್ಲವೆ ಈ ಕವಿತೆ ಕಳಪೆ ಎಂದು ಹೇಳುವ ಮಾನದಂಡವಾದರೂ ಯಾವುದು? ಕವಿತೆಯನ್ನು ಓದಿ ಆಸ್ವಾದಿಸಬೇಕೋ ಅಥವಾ ವಿಮಶೆಯ ನಿಕಶಕ್ಕೆ ಒಡ್ಡಿ ಒಳ್ಳೆಯ […]

ಅಂಕಣ ಬರಹ ಸೀಗಲ್ ಸೀಗಲ್ಮೂಲ : ಆಂಟನ್ ಚೆಕಾಫ್ ಕನ್ನಡಕ್ಕೆ : ಹೇಮಾ ಪಟ್ಟಣಶೆಟ್ಟಿಪ್ರ : ಅನನ್ಯ ಪ್ರಕಾಶನಪ್ರ.ವರ್ಷ :೨೦೦೭ಬೆಲೆ :ರೂ.೭೦ಪುಟಗಳು : ೧೦೮ ಎರಡು ತಲೆಮಾರುಗಳ ನಡುವಣ ಸಂಘರ್ಷವೇ ಈ ನಾಟಕದ ಮುಖ್ಯ ಕಥಾ ವಸ್ತು. ಇಬ್ಬರು ನಟಿಯರು ಮತ್ತು ಇಬ್ಬರು ಲೇಖಕರುಗಳ ನಡುವಣ ಸಂಬಂಧದ ಸ್ವರೂಪದ ಶೋಧನೆಯೇ ಇಲ್ಲಿನ ಮುಖ್ಯ ಕಾಳಜಿಯಾಗಿದೆ. ಹಿರಿಯ ನಟಿ ಅರ್ಕಾದಿನಾ ಮತ್ತು ಹಿರಿಯ ಲೇಖಕ ತ್ರಿಗೊರಿನ್ ಆಗಲೇ ಸಮಾಜದಲ್ಲಿ ತಮ್ಮ ನೆಲೆಯನ್ನು ರೂಪಿಸಿಕೊಂಡವರು. ಯುವಕ ತ್ರೆಪ್ಲೆಫ್ ಮತ್ತು ಎಳೆಯ […]

Back To Top