Category: ಇತರೆ

ಇತರೆ

ಅಲೆಮಾರಿ ಬದುಕು

ಇಲ್ಲಗಳ ನಡುವಿನ ಅಲೆಮಾರಿ ಬದುಕು ಕೆ.ಶಿವು ಲಕ್ಕಣ್ಣವರ ಸ್ವಾತಂತ್ರ ‌ಭಾರತದಲ್ಲಿ ಇಲ್ಲಗಳ ನಡುವೆಯೇ ಅಲೆಮಾರಿ ಬದುಕು ಬದುಕುತ್ತಿರುವ ಬಸವಳಿದ ಜನ..! ವಾಸಿಸಲು ಮನೆ ಇಲ್ಲ, ವಿದ್ಯುತ್‌ ಇಲ್ಲ, ಕುಡಿಯಲು ನೀರಿಲ್ಲ, ಓಡಾಡಲು ರಸ್ತೆ ಇಲ್ಲ, ಇತರೆ ಸರ್ಕಾರದ ಸೌಲಭ್ಯಗಳು ಇಲ್ಲವೇ ಇಲ್ಲ. ಹೀಗೆ ಇಲ್ಲಗಳ ನಡುವೆಯೇ ಅಲೆಮಾರಿ ಕುಟುಂಬಗಳು ಬದುಕು ಸಾಗಿಸುತ್ತಿವೆ… ಊರಿನ ಹೊರ ವಲಯದಲ್ಲಿ ಬದುಕು ಸಾಗಿಸುವ ನೂರಾರು ಅಲೆಮಾರಿ ಕುಟುಂಬಗಳು ಸೇರಿದಂತೆ ಇತರೆ ಕುಟುಂಬಗಳು ವಾಸಿಸುತ್ತವೆ. ಊರೂರು ಅಲೆಯುವ ಈ ಕುಟುಂಬಗಳು ಅಲೆಮಾರಿ ಜೀವನ‌ […]

ಸಮಾಜಾರ್ಥಿಕ ಘಟಕಗಳು

ಪ್ರಗತಿಗಾಗಿ ಸ್ವಯಂ ಸ್ವಾವಲಂಬಿ ಸಮಾಜಾರ್ಥಿಕ ಘಟಕಗಳು ಗಣೇಶಭಟ್ ಶಿರಸಿ ಭಾರತದ ಆರ್ಥಿಕ ಸ್ಥಿತಿ ಆತಂಕಕಾರಿಯಾಗಿದೆಯೆಂಬುದನ್ನು ಸರ್ಕಾರ ಮತ್ತು ಅದರ ಹಿಂಬಾಲಕರು ಒಪ್ಪಲು ಸಿದ್ಧರಿಲ್ಲ.ಆದರೆ, ಕುಸಿಯುತ್ತಿರುವ ಉದ್ಯೋಗಾವಕಾಶಗಳು, ಕ್ಷೀಣಿಸುತ್ತಿರುವ ಖರೀದಿ ಶಕ್ತಿ, ಜನರನ್ನುಕಾಡುತ್ತಿರುವ ಅಭದ್ರತಾಭಾವ,ಏರುತ್ತಿರುವ ಬೆಲೆಗಳು, ಎಗ್ಗಿಲ್ಲದೇ ನಡೆಯುತ್ತಿರುವ ಬ್ಯಾಂಕ್ ವಂಚನೆಗಳು, ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಗಳಿಂದ ದೇಶ ಬಾಧಿತವಾಗಿರುವುದನ್ನು ದೇಶ, ವಿದೇಶಗಳ ಸಾಮಾಜಿಕ-ಆರ್ಥಿಕ ತಜ್ಞರು ಗಮನಿಸುತ್ತಿದ್ದಾರೆ.ರಾಜಕಾರಣಿಗಳ ಪೊಳ್ಳು ಭರವಸೆಗಳನ್ನೇ ನಂಬಿರುವ ದೇಶದ ನಾಗರಿಕರು ಸಮಸ್ಯೆಗಳ ಪರಿಹಾರದ ನಿರೀಕ್ಷೆಯಲ್ಲಿ ದಿನದೂಡುತ್ತಿದ್ದಾರೆ. ಇಂದಿನ ಸಮಸ್ಯೆಗಳಿಗೆ ರಾಜಕೀಯ ಪಕ್ಷಗಳ ಬಳಿ ಯಾವುದೇ ಪರಿಹಾರವಿಲ್ಲ. […]

ನನಗೆ ಹೀಗನಿಸುತ್ತದೆ

ಕವಿತೆ ನನಗಿಷ್ಟ ಚಂದ್ರಪ್ರಭ ನನಗೆ ಹೀಗನಿಸುತ್ತದೆ…. ಕವಿತೆ ಬಗೆಗಿನ ಎಲ್ಲ ಆರಾಧನಾ ಭಾವಗಳಾಚೆ ಕವಿತೆ ಪುಸ್ತಕಗಳು ಅವಗಣನೆಗೆ ಒಳಗಾಗುವ ಸತ್ಯ ಬಹುಶಃ ಒಂದು ಕಾಲದ್ದಾಗಿಲ್ಲದಿರಬಹುದು. ಕವಿತೆ ಮೂಲತಃ ಒಂದು ಸಶಕ್ತ ಅಭಿವ್ಯಕ್ತಿ ಮಾಧ್ಯಮ. ಅದರ ಹರಿವಿನಗುಂಟ ಸಾಗುವಾಗ ಕೇಳಿಸುವ ಮೊರೆತವೂ ವಿಭಿನ್ನ. ಕವಿತೆ ನನಗೇಕೆ ಇಷ್ಟ ಎಂದೆನ್ನಿಸಿದ ಕ್ಷಣ ನನಗೆ ಹೀಗೆಲ್ಲ ತೋರಿತು… ಬಿಡುಗಡೆ ಗಾಗಿನ ಮನುಷ್ಯನ ಪ್ರಯತ್ನ ನಿರಂತರದ್ದು. ಒಂದಿಲ್ಲೊಂದು ಸಂಗತಿಯಿಂದ ಬಿಡುಗಡೆ ಹೊಂದುತ್ತ ಆಯುಷ್ಯವೇ ಕಳೆದು ಹೋಗುವುದು. ಯಾವುದರಿಂದ ಬಿಡುಗಡೆ, ಯಾರಿಂದ ಬಿಡುಗಡೆ, ಉಳಿದದ್ದು […]

ಜೀವನ್ಮುಖಿ

ಹೊಸ ವರ್ಷ ಹೊಸ ಹರ್ಷ ಜಯಲಕ್ಷ್ಮಿ ಕೆ. ಹೊಸ ವರ್ಷ -ತರಲಿ ಹರ್ಷ . “ಆದದ್ದು ಆಗಿ ಹೋಯ್ತು, ಮಣ್ಣಾಗಿ ಹೋದ ನನ್ನವರು ತಿರುಗಿ ಬರಲಾರರು. ಇರುವವನು ಇರುವಷ್ಟು ದಿನ ಬದುಕಬೇಕಲ್ಲ? ನನ್ನ ಗಾಡಿ, ನನ್ನ ಎತ್ತುಗಳೂ ಭೂಕಂಪದ ಅಂತರoಗ ಸೇರಿದ್ದರೆ ನನಗೆ ಕಷ್ಟವಾಗುತ್ತಿತ್ತು. ಪುಣ್ಯಕ್ಕೆ ಸ್ವಲ್ಪ ಹೊಲವೂ ಉಳಿದಿದೆ. ಬದುಕಬೇಕಾದ ನನ್ನ ಬದುಕಿಗೆ ಇಷ್ಟು ಸಾಕಲ್ಲ ….ಉಳಲು, ಬಿತ್ತಲು, ಮನೆಕಟ್ಟಲು …..” 1993 ರಲ್ಲಿ ಮಹಾರಾಷ್ಟ್ರದಲ್ಲಿ ಸಂಭವಿಸಿದ್ದ ಭಾರೀ ಭೂಕಂಪದಲ್ಲಿ ತನ್ನವರನ್ನೆಲ್ಲ ಕಳೆದುಕೊoಡಿದ್ದ ವೃದ್ದನೊಬ್ಬ ಪತ್ರಕರ್ತನ […]

ಬದುಕು

ಬದುಕು ತಂತಿಯ ಆಟ ಡಾ.ಗೋವಿಂದ ಹೆಗಡೆ ಮೊನ್ನೆ ೧೧ರಂದು ಅಪರಾತ್ರಿಯಲ್ಲಿ ಬೇಲೂರು ತಲುಪಿದ್ದು. ನಿನ್ನೆ ಬೆಳಿಗ್ಗೆ (೧೨/೧/೨೦) ಚೆನ್ನಕೇಶವನ ದರ್ಶನ ಮುಗಿಸಿ ಚಪ್ಪಲಿ ಸ್ಟ್ಯಾಂಡ್ ಗೆ ತೆರಳಿದೆ. ನಾಲ್ಕು ಹೆಜ್ಜೆ ಗಳ ದೂರದಲ್ಲಿ ಆ ವೃದ್ಧರು ಕೂತಿದ್ದರು. ಕೈಯಲ್ಲಿ ಮೇಲೆ ತೋರಿಸಿದ ಚಿತ್ರದ ತಂತಿಗಳ ಗೊಂಚಲು ‌‌. “ಯಜಮಾನರೇ ಏನಿದು” ಅಂದೆ. ಇವು ಪಜಲ್ಸ್ ಅಂದರು. ತಮ್ಮ ಕೈಯಲ್ಲಿ ಬಿಡಿಯಾಗಿ ಇರಿಸಿಕೊಂಡಿದ್ದ ತಂತಿಯ ಆಟಿಕೆಯನ್ನು ತೋರಿಸಿ “ನೋಡಿ ಈ ರಿಂಗ್ ಇದೆಯಲ್ಲ, ಇದನ್ನು ಹೊರತೆಗೆಯಬೇಕು” ಅಂತ ತೋರಿಸಿದರು. […]

ಲಹರಿ

ಬೆಂಗಳೂರು ಬ್ಯಾಚುಲರ್ ಹುಡುಗರ ಡೇ ಡ್ರೀಮು ದೇವರಾಜ್ ಹೆಂಡ್ತಿ ಹೇಗಿರಬೇಕು…? ಹೆಂಡ್ತಿ ಆಗಿದ್ರೆ ಸಾಕ… ಜೀವನದ ಜೋಕಾಲಿಯಲ್ಲಿ ಮಗು ತರ ಇರ್ಬೇಕಲ್ವಾ. ಬ್ಯಾಚುಲರ್ ಜೀವನ ಒಂತರ ಬೋನ್ ಲೆಸ್ ಬೋಟಿ ಆಗೋಗಿದೆ .ಬ್ಯಾಚುಲರ್ ಅಂದ್ರೆ ಭಗವಂತ ಕೇರ್ ತಗೊಳಲ್ಲ. ಊರು ಮನೆ ಅಪ್ಪ ಅಮ್ಮ ತಂಗಿ ತಮ್ಮ ಅಕ್ಕ ನೆಂಟ್ರು ನಿಷ್ಠರು ಎಲ್ಲರನ್ನು ಬಿಟ್ಟು ಬಂದು ಬೆಂಗಳೂರಿನನಲ್ಲಿ ಬಂದು ಸಿಂಹದಂತೆ ಬದುಕವರು ಬ್ಯಾಚುಲರ್ ಹುಡುಗ್ರು. ತಿಂಗಳಿಗೊಂದು ಸಲ ಸಂಬಳ .ಮನೆ ರೆಂಟು ವಾಟರ್ ಬಿಲ್ಲು ಚೀಟಿ ಬಟ್ಟೆ […]

ಪ್ರಸ್ತುತ

ಕ್ಯಾಂಪಸ್ ಕೋಲಾಹಲ…… ಗಣೇಶ್ ಭಟ್ ಶಿರಸಿ ದೆಹಲಿಯ ಜವಾಹರಲಾಲ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು) ಪುನಃ ಸುದ್ಧಿಯಲ್ಲಿದೆ. ವಿವಿಧ ಶುಲ್ಕಗಳ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿ, ಕೆಲವು ವಾರಗಳ ಹಿಂದೆ ಮಾಧ್ಯಮಗಳಿಗೆ ಆಹಾರವಾಗಿದ್ದ ಜೆಎನ್‍ಯುನಲ್ಲಿ ಮುಸುಕುಧಾರಿಗಳು ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹೊಡೆದು ಬಡಿದಿದ್ದಾರೆಂಬ ವಿಷಯ ಬಿತ್ತರವಾಗುತ್ತಿದೆ. ಕ್ಯಾಂಪಸ್‍ನಲ್ಲೇ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲವೆಂಬ ವಿಷಯ ದೇಶದಾದ್ಯಂತ ಹಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಕೆರಳಿಸಿ, ಪ್ರತಿಭಟನೆ ನಡೆಸಲು ಕಾರಣವಾಗಿದೆ. ನಾಲ್ಕಾರು ದಶಕಗಳ ಹಿಂದೆ ವಿಶ್ವವಿದ್ಯಾಲಯಗಳಲ್ಲಿ ಸೈದ್ಧಾಂತಿಕ ಚರ್ಚೆಗಳು ಇರುತ್ತಿದ್ದವು. ಅಭಿಪ್ರಾಯ ಭೇದಗಳು ಇದ್ದವು. ಆದರೆ […]

ಶ್ರದ್ದಾಂಜಲಿ

ನಮ್ಮನ್ನಗಲಿದ ಸಾಹಿತಿ, ಸಂಶೋಧಕ, ಪ್ರೋ. ಎಂ.ಚಿದಾನಂದಮರ್ತಿ..! ಕೆ.ಶಿವು ಲಕ್ಕಣ್ಣವರ ಪ್ರೋ. ಎಂ.ಚಿದಾನಂದಮರ್ತಿ..! ಸಾಹಿತಿ, ಸಂಶೋಧಕ ಪ್ರೋ. ಎಂ.ಚಿದಾನಂದಮೂರ್ತಿ ಅವರ ಬಗೆಗೆ ಇತ್ತೀಚಿನ ಎಡಪಂಥೀಯರ ಏನೇ ತಕರಾರಿದ್ದರು. ಅದನ್ನೆಲ್ಲ ಬದಿಗಿರಿಸಿ ಅವರು ಕೊನೆ ಉಸಿರೆಳದ ಈ ಗಳಿಗೆಯಲ್ಲಿ ಅವರ ಕುರಿತು ಈ ಪುಟ್ಟ ಲೇಖನ ಸ್ಮರಣೆ… ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30ರ ಸುಮಾರಿಗೆ ಚಿಕಿತ್ಸೆ […]

ಪ್ರಸ್ತುತ

16ನೇಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಬಾಷಣ [15:50, 1/10/2020] H C. 2: ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ. ಜಿಲ್ಲಾ ೧೬ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.. ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ […]

ಕುಮಾರವ್ಯಾಸ ಜಯಂತಿ

ಕನ್ನಡ ಸಾಹಿತ್ಯದ ದಿಗ್ಗಜ ಕುಮಾರವ್ಯಾಸ..! ಕೆ.ಶಿವು ಲಕ್ಕಣ್ಣವರ ದಿನಾಂಕ ೯ ಕುಮಾರವ್ಯಾಸನ ಜಯಂತಿ. ಆ ನಿಮಿತ್ತವಾಗಿ ಕುಮಾರವ್ಯಾಸ ಕುರಿತು ಈ ಲೇಖನ… ಕುಮಾರವ್ಯಾಸ (ಕ್ರಿ.ಶ. ೧೩೫೦-೧೪೦೦) ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಾಯಣಪ್ಪ. “ಗದುಗಿನ ನಾರಾಯಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ […]

Back To Top