ಕನ್ನಡ, ಕನ್ನಡವೇ ಆಗಿರಲಿ
ಗೌರಿ.ಚಂದ್ರಕೇಸರಿ. ಭಾಷೆಯ ಮೇಲೆ ಗಾಢವಾದ ಪ್ರಭಾವ ಬೀರುವ ಸಂಸ್ಕøತಿಯು ಭಾಷೆಯ ಹರಿವನ್ನು ಬದಲಾಯಿಸುತ್ತ ಹೋಗುತ್ತದೆ. ಕೊರಕಲಿನಗುಂಟ ನೀರು ಹರಿಯುವಂತೆ ಸಮಯ ಸಂದರ್ಭಕ್ಕೆ ತಕ್ಕಂತೆ ಹೊಸತನವನ್ನು ಪಡೆಯುತ್ತಲೇ ಹೋಗುತ್ತದೆ. 2500 ವರ್ಷಗಳಷ್ಟು ಹಳೆಯ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆ ನಮ್ಮದು. ಬದಲಾವಣೆ ಆರೋಗ್ಯಕರವಾದದ್ದೇ. ಆದರೆ ಪರಕೀಯ ಶಬ್ದಗಳು ಕನ್ನಡದೊಡನೆ ಮಿಳಿತಗೊಂಡು ಹಾಡಿನ ರೂಪದಲ್ಲಿ ಕಿವಿಗೆ ಬೀಳುತ್ತಿದ್ದರೆ ಕೇಳಲು ಅಸಹನೀಯವೆನಿಸುತ್ತದೆ. ತಳಹದಿಯಿಂದಲೇ ಇಂಗ್ಲೀಷ್ ಮಾಧ್ಯಮದಲ್ಲಿ ಓದುವ ಇಂದಿನ ಮಕ್ಕಳು ಕನ್ನಡದ ಮೇಲೆ ಪ್ರಭುತ್ವವನ್ನು ಸಾಧಿಸಲು ಹೇಗೆ ಸಾಧ್ಯ? ಸರಳಗನ್ನಡದ […]
ಭೂತಾಯಿಗೆ ನಮನ
ಲೇಖನ ಭೂತಾಯಿಗೆ ನಮನ ರಾಘವೇಂದ್ರ ಈ ಹೊರಬೈಲು ಇವತ್ತು ರಾತ್ರಿಯೆಲ್ಲಾ ಎಚ್ರಾಗಿರ್ಬೇಕು, ಮಲಗ್ಬಿಟ್ಟಿಯೋ. ರಾತ್ರಿಯೆಲ್ಲ ಹಬ್ಬ ಮಾಡ್ಬೇಕು, ಹಬ್ಬದಾಗೆ ಎಚ್ರಾಗಿರ್ದೆ ಹಂಗೆ ಮಲ್ಗಿದ್ರೆ ದೇವ್ರು ಶಾಪ ಕೊಡ್ತಾನೆ ಕಣೋ” ನಾನು ಚಿಕ್ಕ ಹುಡುಗನಾಗಿದ್ದಾಗ ನಮ್ಮಮ್ಮನಾಡಿದ ಮಾತುಗಳು ಎಂದಿಗೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಕುಳಿತಿವೆ. “ಇದ್ಯಾವ ಹಬ್ಬನಪ್ಪ, ರಾತ್ರಿಯೆಲ್ಲ ಎಚ್ರಾಗಿರ್ಬೇಕಂತೆ” ಎಂದು ಗೊಣಗುಟ್ಟುತ್ತಾ ತೂಕಡಿಸುತ್ತಾ, ಅಮ್ಮನೋ ಅಪ್ಪನೋ ಹೇಳ್ತಾಯಿದ್ದ ಸಣ್ಣಪುಟ್ಟ ಕೆಲಸಗಳನ್ನು ಒಲ್ಲದ ಮನಸ್ಸಿನಿಂದ ನಿದ್ರೆಗಣ್ಣಿನಲ್ಲೇ ಮಾಡುತ್ತಾ, ಕೆಲವೊಮ್ಮೆ ಹೆಚ್ಚು ಕಡಿಮೆಯಾಗಿ, ಬೈಸಿಕೊಳ್ಳುತ್ತಾ ರಾತ್ರಿ ಕಳೆಯುತ್ತಿದ್ದ ಆ ದಿನಗಳನ್ನು […]
ಉಪಯೋಗಿಸೋಣ, ಉಳಿಯೋಣ
ಲೇಖನ ಉಪಯೋಗಿಸೋಣ, ಉಳಿಯೋಣ ಶಾಂತಿವಾಸು ನಮ್ಮ ದೇಶದ ಪ್ರತಿ ರಾಜ್ಯವೂ ಅದರದೇ ಆದ ವೈಶಿಷ್ಟ್ಯ ಹಾಗೂ ಹಲವಾರು ಪದ್ಧತಿಯ ಆಚರಣೆಗಳು ಇರುವಂತೆ ನಮ್ಮ ಕರ್ನಾಟಕದ ನೆಲದ ಮೇಲಿನ ಪ್ರತಿಯೊಂದು ಪಂಗಡಗಳಿಗೆ, ಜಾತಿಗಳಿಗೆ, ಪ್ರಾಣಿಗಳು, ಜಾನುವಾರುಗಳಿಗೆ, ವಸ್ತುಗಳಿಗೆ ಹೀಗೆ ಎಲ್ಲಕ್ಕೂ ಪ್ರತ್ಯೇಕ ಹಬ್ಬಗಳಿವೆ. ಬೇರೆ ಬೇರೆ ಪ್ರದೇಶಗಳು ಹಾಗೂ ರಾಜ್ಯಗಳಿಂದ ಜೀವನವನ್ನರಸಿ ಬಂದು ನೆಲೆ ಕಂಡುಕೊಂಡ ಲಕ್ಷಾಂತರ ಜನರ ನೆಮ್ಮದಿಯ ನಮ್ಮ ಕರುನಾಡು, ಬಂದವರು ನಮ್ಮವರೇ ಎನ್ನುವ ಔದಾರ್ಯ ಮೆರೆದು, “ಬದುಕು, ಬದುಕಲು ಬಿಡು” ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ವಿಭಿನ್ನ […]
ಅವಲಕ್ಕಿ ಪವಲಕ್ಕಿ
ಮಕ್ಕಳ ಕಥೆ ಅವಲಕ್ಕಿ ಪವಲಕ್ಕಿ ಗಿರೀಶ ಜಕಾಪುರೆ – ಅವಲಕ್ಕಿ ಪವಲಕ್ಕಿ ಕಾಂಚಣ, ಮಿಣಮಿಣ ಡಾಮ್ ಡೂಮ್ ಟಸ್ ಪುಸ್ಸ ಕೋಯ್ ಕೊಟಾರ್ ಅವಲಕ್ಕಿ ಪವಲಕ್ಕಿ ‘ಸಿರಿ ಟೀಚರ್ ಬಹಳ ಚೆಂದ ಹಾಡು ಹೇಳ್ತಾರೆ’ ಎಂದ ಚಿಂಟೂ ರಮಿಯತ್ತ ನೋಡುತ್ತ. ‘ಅಷ್ಟೇ ಅಲ್ಲ ಮಾರಾಯಾ, ಎಷ್ಟು ಚೆಂದ ಡಾನ್ಸ್ ಹೇಳಿಕೊಡ್ತಾರೆ, ನೋಡು’ ಎಂದ ರಮಿ. ವಿಷಯ ಉತ್ಸಾಹದ್ದಾಗಿದ್ದರೂ ಅವನ ದನಿ ಏಕೋ ಸಪ್ಪಗಿತ್ತು. ಚಿಂಟೂಗೆ ಅವಲಕ್ಕಿ […]
ಬರಗೂರರೆಂಬ ಬೆರಗು
ಲೇಖನ ಬರಗೂರರೆಂಬ ಬೆರಗು ಮಮತಾ ಅರಸೀಕೆರೆ ಪ್ರೊ.ಬರಗೂರು ರಾಮಚಂದ್ರಪ್ಪನವರ ಬಗ್ಗೆ ಬರೆಯುವುದೆಂದರೆ ಸಾಗರಕ್ಕೆ ಸೇರುವ ನದಿಗಳನ್ನು ಎಲ್ಲೋ ಕುಳಿತು ಎಣಿಸಿದಂತೆ.ಯಾವುದೇ ಉತ್ಪ್ರೇ ಕ್ಷೆಯಿಲ್ಲದ ಮಾತುಗಳಿವು ಎಂದು ಅವರನ್ನು ಸನಿಹದಿಂದ ಬಲ್ಲವರಿಗೆಲ್ಲಾ ಚಿರಪರಿಚಿತ.ಅವರ ಹತ್ತು ಹಲವು ಮಜಲುಗಳ ವೈವಿಧ್ಯ ಚಟುವಟಿಕೆಗಳನ್ನು ಸಾಮಾನ್ಯವಾಗಿ ಎಲ್ಲರೂ ಬಲ್ಲರು.ನಾನಿಲ್ಲಿ ಬರಗೂರು ಸರ್ ಬಗ್ಗೆ ಅಕಾಡೆಮಿಕ್ ಅಲ್ಲದ ಕೆಲವೇ ಸರಳ ಮಾತುಗಳಲ್ಲಿ ಬರೆಯಲು ಪ್ರಯತ್ನಪಡುವೆ. ಬರಗೂರರನ್ನ ಕಂಡಿದ್ದು ಪತ್ರಿಕೆಗಳಲ್ಲಿ ಅಂಕಣಗಳ ಮೂಲಕ.ಸಾಮಾನ್ಯವಾಗಿ ಆಯ್ದ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಲೇಖನ, ಅಂಕಣಗಳನ್ನು ತಪ್ಪದೇ ಓದುತ್ತಿದ್ದೆ.ಬಿ.ಆರ್.ಬರಹಗಳನ್ನು ಮೆಚ್ಚುತ್ತಿದ್ದೆ.ನಂತರ ಅಲ್ಲಿಲ್ಲಿ […]
ಹೀಗೇಕೆ ನನ್ನವ್ವ ?
ಲೇಖನ ಹೀಗೇಕೆ ನನ್ನವ್ವ ? ಸುಮಾ ಆನಂದರಾವ್ ಇಂದೇಕೆ ನನ್ನವ್ವ ಪದೇ ಪದೇ ನೆನಪಾಗುತ್ತಿದ್ದಾಳೆ? ಅವಳೇಕೆ ಹಾಗಿದ್ದಳು? ಜೆರ್ಮನಿಯಲ್ಲಿ ಒಬ್ಬ ವಯೋ ವೃದ್ಧೆಯ ಪರಿಚಯವಾದಂದಿನಿಂದ ಗಮನಿಸುತ್ತಿದ್ದೇನೆ. ಅವಳ ದಿಟ್ಟತನ ಅಚ್ಚರಿ ಉಂಟುಮಾಡುತ್ತಿದೆ. ಅವಳು ತನ್ನೆಲ್ಲಾ ಕರ್ತವ್ಯ ಮುಗಿಸಿದ್ದಳು, ಮಕ್ಕಳನ್ನು ಓದಿಸಿ ಅವರ ಕಾಲಮೇಲೆ ಅವರು ನಿಲ್ಲುವ ಹಾಗೆ ಮಾಡಿದ್ದಾಳೆ. ಆಗಾಗ ಮಕ್ಕಳು ಬಂದು ಹೋಗುತ್ತಿರುತ್ತಾರೆ. ತೊಂಬತ್ತು ವರ್ಷಆದರೂ ತನ್ನ ಕೆಲಸ ತಾನೇ ಮಾಡಿಕೊಳ್ಳುತ್ತಾಳೆ, ಕೈಯಲ್ಲಿ ಕೋಲು ಹಿಡಿದು ಸಣ್ಣ ನೂಕುವ ಗಾಡಿಯಲ್ಲಿ ಅಗತ್ಯ ವಸ್ತುಗಳನ್ನು […]
ಪ್ರತಿಮೆಯೂ ಕನ್ನಡಿಯೂ..
ಸ್ವಗತ ಪ್ರತಿಮೆಯೂ ಕನ್ನಡಿಯೂ.. ಚಂದ್ರಪ್ರಭ.ಬಿ. ಪ್ರತಿಮೆಯೂ ಕನ್ನಡಿಯೂ “ತೋರಾ ಮನ ದರಪನ ಕೆಹಲಾಯೆಭಲೆ ಬುರೆ ಸಾರೆ ಕರಮೊಂ ಕೊ ದೇಖೆ ಔರ ದಿಖಾಯೆ..………….. ………… ……….. …………… ………… ಸುಖ ಕಿ ಕಲಿಯಾಂ ದುಃಖ ಕಿ ಕಾಟೇಂ ಮನ ಸಬ್ ಕಾ ಆಧಾರ / ಮನ ಸೆ ಕೋಯಿ ಬಾತ ಛುಪೆ ನಾ ಮನ ಕೆ ನೈನ ಹಜಾರ/ ಜಗ ಸೆ ಚಾಹೆ ಭಾಗ ಲೆ ಕೋಯಿ ಮನ ಸೆ ಭಾಗ ನ ಪಾಯೆ…..” “ಕಾಜಲ್” ಹಿಂದಿ […]
ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ
ಅನುಭವ ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ ಮಮತಾ ಅರಸೀಕೆರೆ ಬಯಸಿ ಬಂದದ್ದಲ್ಲ. ಹಂಬಲಿಸಿ ಪಡೆದದ್ದಲ್ಲ. ಒಂದು ಬಗೆಯ ಓರೆ ನೋಟದ ಕಸಿವಿಸಿಯ ಬಿಗುವಿನೊಡನೆ ಅನಿಚ್ಛಾಪೂರ್ವಕವಾಗಿ ಇಲಾಖೆಗೆ ಕಾಲಿಟ್ಟದ್ದು. ನಂತರ ಜರುಗಿದ್ದು ಬರೋಬ್ಬರಿ ಇಪ್ಪತ್ತು ವರ್ಷಗಳ ಅನಿಯಮಿತ ಅಡೆತಡೆಯಿಲ್ಲದ ಪ್ರಯಾಣ. ಇದೇ ಅಕ್ಟೋಬರ್ ೨೫ ಕ್ಕೆ ನಾನು ಶಿಕ್ಷಣ ಇಲಾಖೆಯ ಸದಸ್ಯಳಾಗಿ ಎರಡು ದಶಕಗಳೇ ಆಗುತ್ತಿದೆ. ನನ್ನಮ್ಮ ಕೂಡ ಇದೇ ಇಲಾಖೆಯಲ್ಲಿದ್ದವರು.ಅಪ್ಪ ಅಂಚೆ ಇಲಾಖೆ ಉದ್ಯೋಗಿ.ಅದೇಕೋ ತನ್ನ ಇಲಾಖೆ ಬಗ್ಗೆ ಅಸಡ್ಡೆಯಿದ್ದಬಅಪ್ಪನ ಉದ್ಯೋಗಕ್ಕಿಂತ ಸುಲಭವಾಗಿ ಸರಳವಾಗಿ […]
ಬದಲಾದ ಕಾಲಕ್ಕೆ ಹಳ್ಳಿಯ ಬದುಕು
ಲೇಖನ ಬದಲಾದ ಕಾಲಕ್ಕೆ ಹಳ್ಳಿಯ ಬದುಕು ಸರಿತಾ ಮಧು ಹಳ್ಳಿಗಳ ದೇಶವೇ ನಮ್ಮದು. ಮೊದಲಾದರೆ ಸುಂದರ ಸ್ವರ್ಗದಂತೆ ಇದ್ದವು. ಕೂಡು ಕುಟುಂಬ, ಅದಕ್ಕೆ ಹೊಂದಿಕೊಂಡಂತೆ ಗದ್ದೆ- ತೋಟಗಳು, ರಕ್ತ ಸಂಬಂಧಗಳು ಹಾಗೂ ಮಾನವೀಯ ನೆಲೆಯಲ್ಲಿ ಒಟ್ಟಿಗೆ ಸೇರಿ ನಲಿಯುತ್ತಿದ್ದ ಸಂದರ್ಭಗಳು. ಮೂರು – ನಾಲ್ಕು ತಲೆಮಾರಿನ ಅನುಭವಗಳ ಬೆರೆತ ಸಂಸಾರ. ಮನೆಗಳಲ್ಲಿ ಆಡಂಬರವಿರಲಿಲ್ಲ ಮನಸಿನಲ್ಲಿ ಆತ್ಮೀಯತೆ ಇತ್ತು. ಅವಿಭಕ್ತ ಭಾವ ರಕ್ತಗತವಾಗಿ ಮುಂದುವರೆಯುತ್ತಿತ್ತು. ಹಣಕಾಸಿಗೆ ಅಡಚಣೆಯಿತ್ತು ಅದರ ಹೊರತು ಪರಿಶುದ್ಧವಾದ ಬದುಕಿಗಲ್ಲ. ನಗರ ಜೀವನಕ್ಕೆ ಮನಸೋತ ಕೆಲವು […]
ಪ್ರಕೃತಿಯ ವಿಕೋಪಗಳು ಮತ್ತು ಪರಿಸರ ಸಂರಕ್ಷಣೆ
ಲೇಖನ ಪ್ರಕೃತಿಯ ವಿಕೋಪಗಳು ಮತ್ತು ಪರಿಸರ ಸಂರಕ್ಷಣೆ ಶ್ರೀನಿವಾಸ. ಎನ್.ದೇಸಾಯಿ ಪ್ರಕೃತಿಯ ವಿಕೋಪಗಳು ಮತ್ತು ಪರಿಸರ ಸಂರಕ್ಷಣೆಯ ಮುನ್ನೆಚ್ಚರಿಕೆಯ ಕ್ರಮಗಳು.. ನಾವು ನಮ್ಮನ್ನು ಹೇಗೆ ರಕ್ಷಣೆ ಮಾಡಿಕೊಳ್ಳುತ್ತೇವೆಯೋ ಹಾಗೇಯೇ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕೂಡಾ ಕ್ರಮಬದ್ಧವಾಗಿ, ಕಾಳಜಿಯಿಂದ, ಜವಾಬ್ದಾರಿಯುತವಾಗಿ ರಕ್ಷಣೆ ಮಾಡಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಯಾಕೆಂದರೆ ಇತ್ತೀಚೆಗೆ ಆಗುತ್ತಿರುವ ಪ್ರಕೃತಿಯ ವಿಕೋಪಗಳಿಂದ ನಾವು ಅಕ್ಷರಶಃ ತತ್ತರಸಿ ಹೋಗಲು ಮುಖ್ಯ ಕಾರಣ ನಾವು ಮಾಡಿರುವ ಮತ್ತು ಮಾಡುತ್ತಿರುವ ಪರಿಸರ ನಾಶಕ್ಕೆ ಇಡೀ ಭೂಮಂಡಲದ ಚಿತ್ರಣವೇ ಬದಲಾಗುತ್ತಿದೆ. ನಾವಿಲ್ಲಿ […]