ಪ್ರಸ್ತುತ
ಮಾತಾಡುವ ಮರಗಳು ಮೋಹನ್ ಗೌಡ ಹೆಗ್ರೆ ಬೆಳವಣಿಗೆ ಮತ್ತು ಬದಲಾವಣೆ ಪ್ರಕೃತಿ ನಿಯಮಗಳಲ್ಲೊಂದು. ಈ ಬೆಳವಣಿಗೆ ಮತ್ತು ಬದಲಾವಣೆಯನ್ನು ದೈಹಿಕವಾಗಿಯೂ, ಮಾನಸಿಕವಾಗಿಯೂ ಕಂಡುಕೊಳ್ಳಬಹುದಾಗಿದೆ. ಈ ಪ್ರಕ್ರಿಯೆ ಕೇವಲ ಮನುಷ್ಯನಿಗೆ ಮಾತ್ರ ಸಂಬಂಧಿಸಿದ್ದಲ್ಲ. ಮನುಷ್ಯನೊಡಗೂಡಿ ಬದುಕುವ ಚರಾಚರ ಜೀವರಾಶಿಗಳು ಬೆಳವಣಿಗೆ ಮತ್ತು ಬದಲಾವಣೆಯ ಪ್ರಕ್ರಿಯೆಯಲ್ಲಿ ಒಳಗೊಳ್ಳಲೇಬೇಕು. ಪಿಳಿಪಿಳಿ ಕಣ್ಣುಬಿಟ್ಟು ತಾಯಿಯ ತೊಡೆ ಮೇಲೆ ಮಲಗಿದ ಮಗು ಬೆಳವಣಿಗೆಯಾಗಿ, ಮಗುವಿನ ತೊದಲು ಮಾತಿಗೆ ಕೈತಟ್ಟಿ ಕುಣಿದ ಮುದಿ ಜೀವಗಳು ಮಗು ಬೆಳವಣಿಗೆಯಾದ ನಂತರದಲ್ಲಿ ಅಂತಹದೇ ಮಗ್ದ ಪ್ರೇಮದ ನುಡಿಗಳ ಕೇಳಿರಬಹುದು […]
ಸಂತಾಪ
ಕನ್ನಡದ ಪ್ರಮುಖ ಕಥೆಗಾರ್ತಿ ಶಾಂತಾದೇವಿ ಕಣವಿಯವರು ಕನ್ನಡ ನಾಡಿನ ಪ್ರಮುಖ ಕಥೆಗಾರ್ತಿ,ಶುದ್ಧ ಕನ್ನಡ ಜನಪದ ಹೃದಯ ಶ್ರೀಮಂತಿಕೆಯ ಸಹಕಾರ ಮೂರ್ತಿ, ಲೇಖಕಿ,ಹಿರಿಯ ಕವಿ, ವಾತ್ಸಲ್ಯಮಯಿ, ಸಮರಸವೇ ಜೀವನ ಎಂದು ಬಾಳು ಬದುಕಿದ ಕವಯಿತ್ರಿ. ಉತ್ತರ ಕರ್ನಾಟಕದ ದೇಸಿ ಸೊಬಗು, ಧ್ವನಿಪೂರ್ಣ ಭಾಷೆ, ತಂತ್ರಗಾರಿಕೆ, ಕಸರತ್ತಿಲ್ಲದ ಬರವಣಿಗೆ ವೈಶಿಷ್ಟ್ಯ ಸಾಕ್ಷಿಕರಿಸಿದ್ದ ಸಾಹಿತಿ ಶಾಂತಾದೇವಿ ಕಣವಿಯವರು.ಹಾಗಾಗಿ ಕನ್ನಡ ಸಾಹಿತ್ಯ ಲೋಕದ ಅನುಪಮ ದಂಪತಿಗಳಲ್ಲಿ ಪ್ರಮುಖವಾಗಿ ಬಂದು ನಿಲ್ಲುವ ಹೆಸರು ಶಾಂತಾದೇವಿ ಕಣವಿ ಮತ್ತು ಚನ್ನವೀರ ಕಣವಿಯವರು ಬಂಧುಗಳೆ. ಜನನ/ಜೀವನ : […]
ಪ್ರಸ್ತುತ
ಸಾಂಸ್ಕೃತಿಕ ಲೋಕದ ದಲ್ಲಾಳಿಗಳು. ಮಲ್ಲಿಕಾರ್ಜುನ ಕಡಕೋಳ ಬೆಂಗಳೂರು, ಒಂದಾನೊಂದು ಕಾಲಕ್ಕೆ ಗುಲಾಬಿ ನಗರ ಎಂದು ಪ್ರಸಿದ್ದವಾಗಿತ್ತು. ಗುಲಾಬಿಯ ಆರಂಭದ ಅಕ್ಷರ “ಗು” ಎಂಬುದೆಲ್ಲೋ, ಎಂದೋ ಉದುರಿ ಬಿದ್ದು ಅದು ಲಾಬಿ ನಗರವಾಗಿ ಬಹಳೇ ವರ್ಷಗಳು ಉರುಳುತ್ತಿವೆ. ಆಗಿನ ಕಾಲದಲ್ಲಿ “ಲಾಬಿ” ಅನ್ನಲಾಗದಿದ್ದರೂ ನಿತ್ಯ ಜೀವನಾಗತ್ಯದ ಸಣ್ಣಪುಟ್ಟ ಕೆಲಸ ಕಾರ್ಯಗಳಿಗೆ ಬಲ್ಲವರ ಮೂಲಕ ಹೇಳಿಸಿ ಈಡೇರಿಸಿಕೊಳ್ಳುವ ತುರ್ತುಅಗತ್ಯದ ಶಿಫಾರಸು ಅವಾಗಿರ್ತಿದ್ದವು. ಹಳ್ಳಿಗಳಲ್ಲಿ ಚೆಂದಗೆ ಹಾರ್ಮೋನಿಯಂ ನುಡಿಸಿ, ಸಂಗೀತ, ನಾಟಕ ಕಲಿಸುವ ಮಾಸ್ತರ, ಬಯಲಾಟ, ಕೋಲಾಟ ಆಡುವ ಹಿರೀಕ ಕಲಾವಿದರು, […]
ಪ್ರಸ್ತುತ
೧೯೭೫ ರ ತುರ್ತು ಪರಿಸ್ಥಿತಿ ಮತ್ತು ಇಂದಿನ ಲಾಕ್ ಡೌನ್… ಅಂದಿಗೆ ಹೋಲಿಸಿದರೆ ಇಂದಿನ ಸ್ಥಿತಿ ಭೀಕರ, ಭಯಾನಕ. ಅಂದಿನ ಪ್ರಧಾನಿಯ ಖುರ್ಚಿ ಅಲುಗಾಡ ತೊಡಗಿದಾಗ ತುರ್ತು ಪರಿಸ್ಥಿತಿ ಹೇರಲಾಗಿತ್ತು. ರಾಜಕೀಯ ವಿರೋಧಿಗಳನ್ನು ಜೈಲಿಗೆ ಹಾಕಲಾಯಿತು, ಸರ್ಕಾರದ ವಿರುಧ್ಧ ಯಾರೂ ಮಾತನಾಡುವಹಾಗಿರಲಿಲ್ಲ. ಆದರೆ, ಜನಸಾಮನ್ಯರ ಬದುಕು ಎಂದಿನಂತೆ ಸಾಗಿತ್ತು, ಆರ್ಥಿಕ ಚಟುವಟಿಕೆಗಳನ್ನು ನಡೆಸಲು ಯಾವುದೇ ತೊಂದರೆ ಇರಲಿಲ್ಲ; ಬದುಕಿನ ಆರ್ಥಿಕ ಅಭದ್ರತೆ ಯಾರನ್ನೂ ಕಾಡಿರಲಿಲ್ಲ. ಇಂದಿನ ಸ್ಥಿತಿಯ ಹೆಸರು ಲಾಕ್ ಡೌನ್, ಜನರ ಜೀವ ಉಳಿಸಲು […]
ನಾನೇಕೆ ಬರೆಯುತ್ತೇನೆ?
ಬದುಕಿನ ಉತ್ಸಾಹ ಕಾಪಿಟ್ಟುಕೊಳ್ಳಲು ನಾನೇಕೆ ಬರೆಯುತ್ತೇನೆ? ಈ ಪ್ರಶ್ನೆಗೆ ನನಗಿನ್ನೂ ಸಮಾಧಾನಕರ ಉತ್ತರ ದೊರೆತಿಲ್ಲ. ಯಾಕೆಂದರೆ ನಾನು ಬರೆಯುವಾಗ ಯಾವುದೇ ಉದ್ದೇಶವನ್ನಿಟ್ಟುಕೊಂಡು ಬರೆಯುವುದಿಲ್ಲ. ನನ್ನಬರವಣಿಗೆಯಿಂದಸಮಾಜದಲ್ಲಿಮಹತ್ತರಬದಲಾವಣೆ ತರಬಹುದೆಂಬ ಭ್ರಮೆ ನನಗಿಲ್ಲ. ನನ್ನ ಬರವಣಿಗೆಗಳಿಂದ ರಾತ್ರಿ ಕಳೆದು ಬೆಳಗಾಗುವುದರಲ್ಲಿ ನಾನೊಬ್ಬ ಮಹಾನ್ ಲೇಖಕ ನಾಗ ಬೇಕೆಂಬ ಮಹತ್ವಾಕಾಂಕ್ಷೆ ನನಗಿಲ್ಲ.ನನ್ನ ಜ್ಞಾನದ, ಪ್ರತಿಭೆಯ ಪರಿಮಿತಿಯಲ್ಲಿ ಬರೆಯುವ ನಾನು ಯಾವುದೆ ಇಸಂ ಗಳಿಗೆ,ರಾಜಕೀಯಸಿಧ್ಧಾಂತಗಳಿಗೆ, ಜಾತಿ ಮತಗಳಿಗೆ ಬದ್ಧನಾಗಿ ಬರೆಯುವುದಿಲ್ಲ. ವೈಶಾಖದುರಿಬಿಸಿಲಮಧ್ಯಾಹ್ನ ಸುರಿವ ಮಳೆಹನಿಗಳ ಸ್ಪರ್ಷಕ್ಕೆ ಅರಳುವ ಮಣ್ಣಿನ ಕಣಗಳ ಕಂಪು ನನ್ನಲ್ಲಿ ಕಾವ್ಯ ಸ್ಪಂದನೆಯನ್ನುಂಟುಮಾಡುತ್ತದೆ.ನಮ್ಮೂರ […]
ಲಹರಿ
ಎಮ್ಮೆ ಮತ್ತು ಜೋತಿಷ್ಯ ಅನುಸೂಯ ಎಂ.ಆರ್. ನಮ್ಮ ಅಮ್ಮ ಗಟ್ಟಿ ಮುಟ್ಟಾಗಿರುವ ತನಕ ನಾವು ಹಾಲು ಕೊಂಡು ಕೊಳ್ಳುತ್ತಿರಲಿಲ್ಲ.ನಮ್ಮ ಮನೆಯಲ್ಲಿ ಹಾಲು ಕರೆಯುವ ಒಂದು ಎಮ್ಮೆ ಸದಾ ಇದ್ದೇ ಇರುತ್ತಿತ್ತು. ಬೆಳಿಗ್ಗೆ ನಾಲ್ಕೈದು ಲೀಟರ್ ಮತ್ತು ಸಂಜೆ ಅಷ್ಟೇ ಪ್ರಮಾಣದಹಾಲು ಕೊಡುವಂತಹವು.ಆಗ ನಮ್ಮ ಮನೆಯಲ್ಲಿ ಸದಾಹಾಲು,ಮೊಸರು,ತುಪ್ಪಗಳ ಸಮೃದ್ಧಿಯ ಸುವರ್ಣಯುಗ. ನಮ್ಮಮ್ಮ ಹಸುಗಳನ್ನು ಸಾಕುತ್ತಿರಲಿಲ್ಲ,ಹಸು ನಮಗೆ ಆಗಿ ಬರುವುದಿಲ್ಲ ಎಂದು ಹೇಳುತ್ತಿದ್ದರು. ನಮ್ಮಮ್ಮನ ದಿನಚರಿ ಆರಂಭವಾಗುವುದೆ, ಹಾಲು ಕರೆಯುವುದರಿಂದ ಸೌದೆ ಒಲೆಯ ಸಣ್ಣ ಉರಿಯಲ್ಲಿ ಹಾಲು ಕಾಯಿಸುತ್ತಿದ್ದ ಕಾರಣ […]
ಪ್ರಸ್ತುತ
ಲಾಕ್ಡೌನ್ ತೆರವಿನ ಪರಿಣಾಮಗಳು ರೇಶ್ಮಾ ಗುಳೇದಗುಡ್ಡಾಕರ್ ಕೊರೊನಾ ಸಾವಿರದ ಗಡಿದಾಟಿದೆ ಇಂತ ಆತಂಕದ ಸ್ಥಿತಿ ಯಲ್ಲಿ ಸರ್ಕಾರ ಲಾಕ್ಡೌನ್ ಹಂತ ಹಂತವಾಗಿ ತೆರವು ಗೊಳಿಸುವದು ಎಷ್ಟು ಸರಿ? ಸಾರಿಗೆ ಸಂಚಾರ ಆರಂಭವಾದರೆ ಸಾಮಾಜಿಕ ಅಂತರ ಸಾದ್ಯವೆ ನಮ್ಮ ಜನರ ಇಗಿನ ಮನಸ್ಥಿತಿ ಯಲ್ಲಿ ರಾಜ್ಯದ ಲ್ಲಿ ?ಶಾಲೆ ಪುನಾರಂಭ ಎರಡು ಪಾಳಿಯಲ್ಲಿ ಮಾಡಲು ಸಚಿವರು ಹೇಳಿದರು ಇಂತಹ ಸಂಧರ್ಭದಲ್ಲಿಕೊರೊನಾ ತಡೆಗಟ್ಟಲು ಸೂಕ್ತ ವ್ಯವಸ್ಥೆ ಇದೆಯೇ ಶಾಲೆಯಲ್ಲಿ ಎಂಬುದನ್ನು ಪರೀಶೀಲಸ ಬೇಕು . ಶಾಲಾ ಅವರಣದಲ್ಲಿ ಮಕ್ಕಳು ಸಾಮಾಜಿಕ […]
ಪ್ರಸ್ತುತ
ಗ್ರಾಮಮಟ್ಟದಿಂದ ರಾಜ್ಯ ಮಟ್ಟದವರೆಗೂ ಸ್ವಾವಲಂಬನೆ ಗಣೇಶಭಟ್ ಮಾನ್ಯ ಪ್ರಧಾನಿಯವರು ಸ್ವಾವಲಂಬಿ ಭಾರತ, ಗ್ರಾಮಮಟ್ಟದಿಂದ ರಾಜ್ಯ ಮಟ್ಟದವರೆಗೂ ಸ್ವಾವಲಂಬನೆಯ ಕುರಿತು ಟ್ವೀಟಿಸಿದ್ದಾರೆ. https://twitter.com/PMOIndia/status/1253562403544915970 ಇಂದು ದೇಶ ಅನುಸರಿಸುತ್ತಿರುವ ಬಂಡವಾಳವಾದ ನೀತಿಯಿಂದ ಈ ಉದ್ದೇಶ ಈಡೇರಲು ಸಾಧ್ಯವಿಲ್ಲ.ಲಕ್ಷ ಲಕ್ಷ ಕೋಟಿ ಹಣ ಸುರಿದರೂ ಅಷ್ಟೇ. ಮಿಶ್ರ ಆರ್ಥಿಕನೀತಿ, ಗಾಂಧೀವಾದ,ಸರ್ವೋದಯ,ಜೆಪಿ ಚಿಂತನೆ,ಸಮಾಜವಾದ ಮುಂತಾದವುಗಳೆಲ್ಲವೂ ಬಂಡವಾಳವಾದದ ವಿವಿಧ ರೂಪಗಳು. ಕಮ್ಯೂನಿಸಮ್ ಎಂಬುದು state capitalism. ಪ್ರಾದೇಶಿಕ ಸ್ವಾವಲಂಬನೆಗೆ ಬೇಕಾದುದು ನವ ಆರ್ಥಿಕ ಚಿಂತನೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಆಧರಿಸಿ ರೂಪುಗೊಳ್ಳುವ ತಳ ಮಟ್ಟದ […]
ಪ್ರಸ್ತುತ
ಅವಕಾಶ – ವಂಚಿತರ ಗೆಲುವಿನ ಹೆಬ್ಬಾಗಿಲು! ವಸುಂಧರಾ ಕದಲೂರು ಜನರು ಅವಕಾಶ ವಂಚಿತರಾಗಲು ಇರುವ ಕಾರಣಗಳು ಬಹಳ ಸಲ ಕ್ಷುಲ್ಲಕವಾಗಿರುತ್ತವೆ. ಅದರಲ್ಲೂ ಬಣ್ಣ, ಹಣ, ಅಧಿಕಾರ, ಜಾತಿ- ಇತರೆ ತಾರತಮ್ಯಗಳು ಪ್ರಮುಖವಾದವು. ಆದರೆ ಕೇವಲ ‘ಹೆಣ್ಣು’ ಎಂಬ ಕಾರಣಕ್ಕೇ ಅವಕಾಶ ವಂಚಿತರಾಗುವುದು ಇದೆಯಲ್ಲಾ ಇದಕ್ಕೆ ಏನೆನ್ನುವುದು..? ತಮಗೆ ದೊರಕಿದ ಒಂದು ಸದಾವಕಾಶದಿಂದ ಎತ್ತರದ ಸಾಧನೆ ಮಾಡಿರುವ ಸುಧಾಮೂರ್ತಿ, ಕಿರಣ್ ಮಜುಂದಾರ್, ಹಿಮಾದಾಸ್ ಗುಪ್ತಾ, ಸಾನಿಯಾ ಮಿರ್ಜಾ, ಪಿ ಟಿ […]
ಪ್ರಸ್ತುತ
ಆರೋಗ್ಯ ಸಹಾಯಕರ ಸೇವೆ ಗುರುತಿಸುವ ಕಣ್ಣುಗಳಿಲ್ಲ ಮಲ್ಲಿಕಾರ್ಜುನ ಕಡಕೋಳ ಕೊರೊನಾ ಎಂಬ ಕರಾಳ ನೆರಳಿನಲ್ಲಿ ಯುದ್ಧೋಪಾದಿ ಕೆಲಸ ಮಾಡುತ್ತಿರುವವರು ಆರೋಗ್ಯ ಇಲಾಖೆಯ ವೈದ್ಯರು, ಶುಶ್ರೂಷಕರು, ಆಶಾ ಕಾರ್ಯಕರ್ತೆಯರು. ಇವರನ್ನು ಹೆಲ್ತ್ ವಾರಿಯರ್ಸ್ ಎಂದೇ ಬಣ್ಣಿಸಿ ಎಲ್ಲ ಕಡೆಗೂ ಅವರ ಸೇವಾ ಬಾಹುಳ್ಯ ಕೊಂಡಾಡಿ ಗೌರವಿಸುವುದನ್ನು ನಿತ್ಯವೂ ಕಾಣುತ್ತಿದ್ದೇವೆ. ಇದು ಸಂತಸ ಪಡುವ ವಿಷಯವೇ. ಆದರೆ ಇದೇ ಸಂದರ್ಭದಲ್ಲಿ ಅದೇ ಕೊರೊನಾ ಯುದ್ಧ ಭೂಮಿಯೊಳಗೆ ಅಕ್ಷರಶಃ ರಣರಂಗದ ಯೋಧರಂತೆ ಕೆಲಸ ಮಾಡುತ್ತಿರುವ ಬಹು ದೊಡ್ಡದಾದ ಮತ್ತೊಂದು ಆರೋಗ್ಯ ಸಮುದಾಯವೇ […]