ಹರಟೆ
ಮರೆವು ಅನುಪಮಾ ರಾಘವೇಂದ್ರ ಅರಿತೋ…ಮರೆತೋ…ಒಂದೊಮ್ಮೆ ದಾರಿ ತಪ್ಪಿದರೂ ಕೂಡ ಮತ್ತೆ ಎಚ್ಚರಗೊಂಡು ಮೈಕೊಡವಿ ನಿಲ್ಲಬೇಕು. ಆಗ ಮರೆವು ಮರೆಯಾಗಿ ಅರಿವಿನ ಜ್ಯೋತಿ ಬೆಳಗುತ್ತದೆ ಎಂದಿದ್ದಾರೆ ವಿದ್ವಾಂಸರು. ಮರೆವು ದೇವರು ಕೊಟ್ಟ ವರ. ಆದರೆ ಯಾವುದನ್ನು ಮರೆಯಬೇಕು, ಯಾವುದನ್ನು ಮರೆಯಬಾರದು ಎಂಬ ಅರಿವು ನಮ್ಮಲ್ಲಿರಬೇಕು. ಅದೇನೋ ಸರಿ…….. ಆದರೆ ಮೊನ್ನೆ ನಾನು ಅಡಿಗೆ ಮಾಡುತ್ತಿರುವಾಗ ಬೇರೇನೋ ನೆನಪಾಗಿ ಸ್ಟೋರ್ ರೂಮಿನ ಒಳ ಹೊಕ್ಕಾಗ ಯಾವ ಕಾರಣಕ್ಕೆ ಅಲ್ಲಿಗೆ ಹೋದೆ ಎಂಬುದೇ ಮರೆತು ಹೋಗಿತ್ತು. ಮತ್ತೆ ಮೊದಲಿದ್ದಲ್ಲಿಗೇ […]
ಲಹರಿ
ಮಾಸ್ಕಿನ ಮುಸುಕಿನಲಿ ಮುಂಗಾರು ಶಾಲಿನಿ ಆರ್. ಮತ್ತೆ ಮುಂಗಾರು. ಆದರೆ ಇದು ಕೊರೋನಾ ಮುಂಗಾರು. ಜೀವನದಲ್ಲಿ ಮೊದಲ ಬಾರಿ ಮಳೆ ಮತ್ತು ನಾನು, ನನ್ನ ಗಾಡಿ ಮತ್ತೆ ನಿನ್ನ ಮೌನ, ಒಂದಕ್ಕೊಂದು ಸಂಬಂಧ ಇಲ್ಲದ ಹಾಗೆ ಲಾಕ್ ಡೌನ್ ಆಗಿರೋದು. ಪ್ರತಿ ಸಾರಿ ಕಾಯೋ ಹಾಗೆ ಈ ಸಾರಿ ಮುಂಗಾರು ಅನುಭವಿಸಲಿಕ್ಕೆ ಮನಸ್ಸು ಹಿಂದೆ ಮುಂದೆ ನೋಡ್ತಿದೆ.ಇಳೆಯೇನೋ ತೋಯ್ತಾ, ಅದರ ಸಿರಿ ಸಂಭ್ರಮನ ಅದು ಸಂಭ್ರಮಿಸ್ತಿದೆ. ಯಾಕಂದ್ರ ಬಾಳ ವರುಷದ ಮ್ಯಾಲ ಅದಕ್ಕೆ ತನ್ನದೇ ಆದ ಸಮ್ಮಾನ […]
ಶಿಶುಗೀತೆ
ಇರುವೆ ತೇಜಾವತಿ ಹೆಚ್.ಡಿ. ಇರುವೆ ಇರುವೆ ಎಲ್ಲಿರುವೆಎಲ್ಲಾ ಕಡೆಯಲು ನೀನಿರುವೆಶಿಸ್ತಿಗೆ ನೀನೇ ಹೆಸರಾಗಿರುವೆಹೆಚ್ಚಿನ ಭಾರವ ನೀನೊರುವೆ ಇರುವೆ ಇರುವೆ ಕೆಂಬಿರುವೆಕೋಪದಿ ಏಕೆ ನೀನಿರುವೆಅರಿಯದೆ ನಿನ್ನ ಮುಟ್ಟಿದರೆಚುರುಚುರು ಅಂತ ಕಚ್ಚಿರುವೆ ಇರುವೆ ಇರುವೆ ಕಟ್ಟಿರುವೆದಾರಿಲಿ ಏಕೆ ನಡೆದಿರುವೆಅರಿಯದೆ ಪಾದವ ಮೆಟ್ಟಿದರೆಸಾಲನು ಬಿಟ್ಟೇ ಚುಚ್ಚಿರುವೆ ಇರುವೆ ಇರುವೆ ಚಗಳಿರುವೆಕೊಟ್ಟೆಯ ಎಲ್ಲಿ ಕಟ್ಟಿರುವೆಚಟ್ನಿಗೆ ನೀನು ಚಂದಿರುವೆಮಲ್ನಾಡ ಸೀಮೆಲಿ ನೀನಿರುವೆ ಇರುವೆ ಇರುವೆ ಕಪ್ಪಿರುವೆತತ್ತಿಯ ಎಲ್ಲಿ ಬಿಟ್ಟಿರುವೆಬೆಲ್ಲವ ನೀನು ಮುತ್ತಿರುವೆಹಿಡಿಯ ಹೋದ್ರೆ ಬುಳುಗುಡುವೆ ***********
ಲಹರಿ
ಮಳೆಗಾಲದ ಹಸಿ ಪ್ರೇಮಪತ್ರ… ಆಶಾಜಗದೀಶ್ ಯಾರೋ ಹುಡುಗ ಹೇಳಿದನಂತೆ ತನ್ನ ಹುಡುಗಿಗೆ, “ಹೋಗಿ ಮಳೆಯ ಹನಿಗಳನ್ನು ಎಣಿಸು.. ನಾ ನಿನ್ನನ್ನು ಅಷ್ಟು ಪ್ರೀತಿಸುತ್ತೇನೆ” ಎಂದು. ನನ್ನ ಅದೆಷ್ಟೋ ಸಂದರ್ಭಗಳ ಪ್ರೇಮದ ಉತ್ಕಟತೆಗೆ ಮಾತಾಗಿ ನಿಂತಿತ್ತು ಈ ಕಥೆ. ಏನೊಂದು ಹೇಳದೆಯೂ “ನನ್ನ ಪ್ರೀತಿ ಇದು” ಎಂದು ಹೇಳಿದ ಮೌನ ಮಾತಾಗಿತ್ತು ಈ ಕಥೆ. ಅರೆ… ಆ ಹೆದ್ದಾರಿಯ ಮಗ್ಗುಲ ಕಾಲುದಾರಿಯ ಪೊದೆಗೆ ಎಲ್ಲ ಗೊತ್ತಿದೆ. ನಾವು ಹೃದಯವನ್ನು ಹಂಚಿಕೊಳ್ಳುತ್ತಾ ನಮ್ಮ ಆತ್ಮಗಳನ್ನು ಒಂದಾಗಿಸಿದ್ದನ್ನು ಕಂಡಿದೆ ಅದು. ನೋಯಿಸುವಷ್ಟು […]
ಲಹರಿ
ಒಂದು ಪತ್ರ ಜಯಶ್ರೀ ಜೆ.ಅಬ್ಬಿಗೇರಿ ಕಾಲೇಜಿನಂಗಳದಿ ಕಾಲಿಟ್ಟ ದಿನದಂದೇ ನೀ ಕಣ್ಣಿಗೆ ಬಿದ್ದೆ. ಸುರಿವ ಸೋನೆ ಮಳೆಗೆ ಹಾಡೊಂದ ಗುಣುಗುಣಿಸುತ ಕಣ್ಮುಂದೆ ನಿಂದೆ. ತುಸುವೇ ತುಸು ದೂರದ ರಸ್ತೆಯಂಚಿನಲ್ಲಿ ನಿಂತು ಹರಿವ ಸಿಹಿ ಝರಿಯಂತೆ ನನ್ನೆಡೆ ಕಣ್ಣೋಟ ಹರಿಸಿದೆ. ಬೀಸುವ ತಂಗಾಳಿಯ ಜತೆ ನಿನ್ನ ಮೈಯ ಸುಗಂಧ ತೇಲಿ ಬಂದು ನನ್ನ ಮೈಯ ಸವರಿದಂತೆನಿಸಿ ನಿಂತಲ್ಲೇ ಒಮ್ಮೆ ನಡುಗಿದೆ.ಒಮ್ಮಿಂದೊಮ್ಮೆಲೇ ಬೀಸಿದ ಜೋರಾದ ಗಾಳಿಗೆ ಬಲು ದೂರದ ತನಕ ಹಾರಿದ ನಿನ್ನೆದೆಯ ಅಂದದ ಆಕಾರ ಮುಚ್ಚಿದ್ದ ದುಪ್ಪಟ್ಟಾ ತಂದು […]
ಮಕ್ಕಳ ವಿಭಾಗ
ಮಕ್ಕಳ ಗೀತೆ ಮಂಜುಳಾ ಗೌಡ ಬನ್ನಿರಿ ಬನ್ನಿರಿ ಗೆಳೆಯರೆಶಾಲೆಗೆ ಹೊಗೋಣವಿದ್ಯೆಬುದ್ದಿ ಕಲಿತು ನಾವುಜಾಣರಾಗೋಣ. ಹೂವುಗಳಂತೆ ನಾವೆಲ್ಲನಗುತ ಅರಳೋಣಅರಳಿ ನಿಂತು ಕೀರ್ತಿಯಪರಿಮಳ ಹರಡೋಣ. ಪಾಠವ ಕಲಿಯೋಣನಾವು ಆಟವ ಆಡೋಣಪಾಠವ ಕಲಿತು ಆಟವ ಆಡಿನಕ್ಕು ನಲಿಯೋಣ. ಹಕ್ಕಿಯಂತೆ ಹಾರಾಡೋಣದುಂಬಿಯಂತೆ ಝೇಂಕರಿಸೋಣನವಿಲಿನಂತೆ ನರ್ತಿಸೋಣಕೋಗಿಲೆಯಂತೆ ಹಾಡೋಣ. ಕಥೆಗಳ ಹೆಳೋಣ ನಾವುನೀತಿಯ ತಿಳಿಯೋಣ.ರಂಗುರಂಗಿನ ಚಿತ್ರವ ಬಿಡಿಸುತಖುಷಿಯಾಗಿರೋಣ. ಪುಸ್ತಕ ಓದೋಣ ವಿಧವಿಧವಿಷಯವ ಅರಿಯೋಣ.ಜ್ಞಾನವಪಡೆದು ಸುಜ್ಞಾನಿಗಳಾಗಿದೇಶವ ಕಟ್ಟೋಣ. *******
ಲಹರಿ
ನೆನಪುಗಳೇ ಮಧುರ. ಶೀಲಾ ಭಂಡಾರ್ಕರ್ ನೆನಪುಗಳೇ ವಿಚಿತ್ರ. ಒಂದಕ್ಕೊಂದು ಸಂಬಂಧ ಕೂಡಿಸಿ ಎಲ್ಲಿಂದೆಲ್ಲಿಗೋ ಎಳಕೊಂಡು ಹೋಗುವ ಪರಿಯಂತೂ ಅದ್ಭುತ. ನಮ್ಮ ಚಿಕ್ಕಪ್ಪ ಮತ್ತು ಚಿಕ್ಕಮ್ಮ ವಾರಾಂತ್ಯದಲ್ಲಿ ನಮ್ಮನೆಗೆ ಬರುವುದಿತ್ತು. ನಾವು ಚಿಕ್ಕವರಿದ್ದಾಗ ಶನಿವಾರವನ್ನು ಬಹಳ ಕಾತರದಿಂದ ಕಾಯುತಿದ್ದೆವು.ಚಿಕ್ಕಮ್ಮ ಭಾನುವಾರದ ತಿಂಡಿ, ಇಡ್ಲಿ ಅಥವಾ ಖೊಟ್ಟೆಯ ಹಿಟ್ಟನ್ನು ರುಬ್ಬುವ ಕಲ್ಲಿನಲ್ಲಿ ರುಬ್ಬಿ ಕೊಡುತಿದ್ದರು. ಆ ಉದ್ದಿನ ಹಿಟ್ಟು ರುಬ್ಬುತ್ತಾ ಅವರು ನಮಗೆ ಚಂದ ಚಂದದ ರೋಮಾಂಚಕಾರಿ ಕಥೆಗಳನ್ನು ಸೃಷ್ಠಿ ಮಾಡಿ ಹೇಳುವುದಿತ್ತು. ನಮಗದುವೇ ದೊಡ್ಡ ಫ್ಯಾಂಟಸಿಯಾಗಿತ್ತು.ಈಗಲೂ ಚಿಕ್ಕಮ್ಮನ ನೆನಪಾದ […]
ಪ್ರಸ್ತುತ
ಜಪಾನಿನ ಕಾವ್ಯ ಪ್ರಕಾರ ತಂಕಾ, ಕನ್ನಡದ ಅಂಗಳದಲ್ಲಿ ಮನುಷ್ಯ ಭಾವನಾ ಜೀವಿ. ತನ್ನ ಭಾವನೆಗಳ ಅಭಿವ್ಯಕ್ತಿಗೆ ತನಗೆ ಅನುಕೂಲವಾದ ಭಾಷೆಯನ್ನು ಬಳಸಿಕೊಳ್ಳುತ್ತಾನೆ. ಅದುವೇ ಮುಂದೆ ಸಾಹಿತ್ಯದ ರೂಪ ಪಡೆಯಿತು. ಸಹೃದಯರಿಗೆ ಭಾಷೆಯ ಹಂಗು ಇರುವುದಿಲ್ಲ. ಅಂತೆಯೇ ಅವರು ತಮ್ಮ ಹೃದಯಕ್ಕೆ ಸ್ಪಂದಿಸುವ ಸಾಹಿತ್ಯದ ಕಡೆಗೆ ವಾಲುತ್ತಾರೆ. ಅದಕ್ಕೆ ಭಾಷಾಂತರವೂ ಒಂದು ವರವಾಗಿದೆ. ಆ ಕಾರಣಕ್ಕಾಗಿಯೇ ಎಲ್ಲಿಯೊ ಇರುವ ಜಪಾನಿನ ಹಲವು ಸಾಹಿತ್ಯ ಪ್ರಕಾರಗಳು ಕನ್ನಡಿಗರ ಮನಗೆದ್ದು, ಸ್ವತಂತ್ರವಾಗಿ ಕನ್ನಡದಲ್ಲಿಯೆ ಕೃಷಿ ಆರಂಭಿಸಿವೆ. ಅವುಗಳಲ್ಲಿ ಹೈಕು, ತಂಕಾ… ಮುಂಚೂಣಿಯಲ್ಲಿವೆ. […]
ಜೀವನ
ವಿಶಾಲ ದೃಷ್ಟಿಕೋನಗಳೇ ಸುಂದರ ಬದುಕಿಗೆ ಆಧಾರ “ ಪ್ರೊ ಸುಧಾ ಹುಚ್ಚಣ್ಣವರ “ವಿಶಾಲ ದೃಷ್ಟಿಕೋನಗಳೇ ಸುಂದರ ಬದುಕಿಗೆ ಆಧಾರ “ “ದೃಷ್ಟಿಯಂತೆ ಸೃಷ್ಟಿ “ಎನ್ನುವ ಹಾಗೆ ನಮ್ಮಲ್ಲಿರುವ ವಿಶಾಲ ದೃಷ್ಟಿಕೋನಗಳೇ ನಮ್ಮ ಸುಂದರ ಬದುಕಿಗೆ ಆಧಾರವಾಗುತ್ತದೆ.ಸೃಷ್ಟಿಯಲ್ಲಿ ಇತರ ಜೀವಿಗಳಿಗೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ತೀರ್ಮಾನ ಮಾಡುವ ವಿವೇಕ ಇರುವುದಿಲ್ಲ ಆದರೆ ಮನುಷ್ಯನಲ್ಲಿ ಈ ವಿವೇಕವೂ ಪೂರ್ಣ ಪ್ರಮಾಣದಲ್ಲಿ ವಿಕಾಸವಾಗಿದೆ.ಸೃಷ್ಟಿಯ ಆದಿಯಿಂದಲೂ ಮನುಷ್ಯ ತನ್ನ ವಿವೇಕವನ್ನು ಹಲವಾರು ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತ ಬಂದಿದ್ದಾನೆ.ನಮ್ಮ ಸುತ್ತಲಿರುವ […]
ವರ್ತಮಾನ
ಕವಡೆ ಲೋಬಾನದ ಪರಿಮಳಕ್ಕೆ ಬಿತ್ತು ಕರಾಳ ಕೊರೊನಾ ಪೆಟ್ಟು ಪ್ರತೀ ವರುಷವೂ ಸಂಕ್ರಮಣದಿಂದ ನಾಗರಪಂಚಮಿವರೆಗೆ ಹಳ್ಳಿ ಹಳ್ಳಿಗಳು ಸೇರಿದಂತೆ ನಗರ ಪಟ್ಟಣಗಳ ತುಂಬೆಲ್ಲಾ ವೃತ್ತಿರಂಗಭೂಮಿ ನಾಟಕಗಳ ಸುಗ್ಗಿ. ಬಹುಪಾಲು ಜಾತ್ರೆಗಳು ಜರುಗುವುದು ಇದೇ ಅವಧಿಯಲ್ಲೇ. ಒಕ್ಕಲುಮಕ್ಕಳು ಬೆಳೆವ ಬೆಳೆಗಳ ಫಸಲಿನಸುಗ್ಗಿ ಮುಗಿದು ಹಬ್ಬ, ಹುಣ್ಣಿಮೆ, ಜಾತ್ರೆಗಳ ಸಡಗರ ಸಂಭ್ರಮ. ವರ್ಷವೆಲ್ಲ ದುಡಿದ ಜೀವಗಳಿಗೆ ಆಡಿ ನಲಿದು, ಹಾಡಿ, ಕುಣಿವ ಹಂಗಾಮ. ಸಹಜವಾಗಿ ವೃತ್ತಿರಂಗ ನಾಟಕಗಳೆಂದರೆ ಜನ ಸಾಮಾನ್ಯರ ಮನರಂಜನೆಯ ಘಮಲು. ಕವಡೆ ಲೋಬಾನದ ಪರಿಮಳ. ಝಗಮಗಿಸುವ ಬಣ್ಣಬಣ್ಣದ […]