ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಉತ್ತರ ಕರ್ನಾಟಕ ಭೇಟಿಗೆ ಶತಮಾನ
ಲೇಖನ ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಉತ್ತರ ಕರ್ನಾಟಕ ಭೇಟಿಗೆ ಶತಮಾನ ಡಾ. ಎಸ್.ಬಿ. ಬಸೆಟ್ಟಿ ಒಂದು ಶತಮಾನದ ಹಿಂದಿನ ಕಾಲ ಬ್ರಿಟಿಷ್ ಆಳ್ವಿಕೆಯ ಅತಿರೇಕಗಳಿಂದ ಇಡೀ ಭಾರತವೇ ರೋಸಿಹೋಗಿತ್ತು. ಕಳೆದ ಶತಮಾನದ ಪೂರ್ವಾರ್ಧದಲ್ಲಿ ಪ್ಲೇಗ್, ಕಾಲರಾ, ಸಿಡುಬು, ಸ್ಪಾನಿಶ್ ಪ್ಲೂ ಇತ್ಯಾದಿ ಸಾಂಕ್ರಾಮಿಕ ಸೋಂಕುಗಳು ಜಗತ್ತನ್ನು ಕಂಗೆಡಿಸಿದ್ದವು. ಪ್ಲೇಗ್, ಕಾಲರಾ, ಸಿಡುಬು ಆಗಾಗ ಬರುತ್ತಲೇ ಇದ್ದರೂ ಸ್ಪಾನಿಶ್ ಪ್ಲೂ ಮಾತ್ರ ೧೯೧೮-೧೯ ರ ವೇಳೆ ಒಮ್ಮೆಲೆ ವ್ಯಾಪಕವಾಗಿ ಹರಡಿತು. ಇದು ಹರಡಿದ್ದು ಒಂದನೇ ಮಹಾಯುದ್ಧದಲ್ಲಿ ಪಾಲ್ಗೊಂಡ […]
ಕಾದಂಬರಿ ಕುರಿತು ಚೋಮನದುಡಿ. ಡಾ.ಶಿವರಾಮ ಕಾರಂತ ಭಾರತೀಯ ಸಾರಸ್ವತ ಲೋಕದಲ್ಲಿ ದಲಿತರು , ಅದರಲ್ಲಿಯೂ ಅಸ್ಪೃಶ್ಯರು ಎದುರಿಸುತಿದ್ದ ಸಾಮಾಜಿಕ ಅನ್ಯಾಯಗಳ ವಿರುದ್ಧ ಶಾಂತವಾಗಿಯೇ ಪ್ರಥಮ ಬಾರಿಗೆ ದನಿಯೆತ್ತಿದ ಸಾಮಾಜಿಕ ಕಾದಂಬರಿ ಹಾಗೂ ಮೊದಲ ದಲಿತ ಕಾದಂಬರಿ ಎಂದು ಗುರುತಿಸಲ್ಪಡುವ ಶಿವರಾಮ ಕಾರಂತರ “ಚೋಮನ ದುಡಿ” ನನ್ನ ನೆಚ್ಚಿನ ಕಾದಂಬರಿ. ಸ್ವಾತಂತ್ರ್ಯದ ತರುವಾಯ ಪ್ರಜಾಪ್ರಭುತ್ತದ ಕೋಟೆಯಲ್ಲಿ ಹಲವಾರು ಸಂವೇದನಶೀಲ ಬರಹಗಾರರು ದಲಿತ ಲೋಕದ ಒಳಹರಿವು ಕುರಿತು ಅನನ್ಯವು, ಅನುಪಮವೂ ಆದ ಕೃತಿಗಳು ಬಂದಿವೆ. ಆದರೆ ಸ್ವಾತಂತ್ರ್ಯ ಪೂರ್ವದಲ್ಲಿ, ಆಂಗ್ಲರ […]
ಹಿರಿಯ ರಂಗಕರ್ಮಿ ಎಚ್.ಜಿ.ಸೋಮಶೇಖರ ಅಗಲಿಕೆ..!
ಹಿರಿಯ ಕಲಾವಿದ ದತ್ತಣ್ಣನವರ ಅಣ್ಣ ಹಿರಿಯ ರಂಗಕರ್ಮಿ ಎಚ್.ಜಿ.ಸೋಮಶೇಖರ ಅಗಲಿಕೆ..! ಹಿರಿಯ ಕಲಾವಿದ ದತ್ತಣ್ಣ ಅವರ ಅಣ್ಣ 86 ವರ್ಷದ ಹೆಚ್.ಜಿ.ಸೋಮಶೇಖರ ರಾವ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಣ್ಣ ಇಂದು ಕೊನೆಯುಸಿರೆಳೆದಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿದ್ದ ಸೋಮಣ್ಣನವರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದವರು. ಇವರು ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕ ಕರ್ತುಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದ್ದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ. ಅದು ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ ಮೂಲಕ. […]
ಕಾದಂಬರಿ ಕುರಿತು ಮಲೆಗಳಲ್ಲಿ ಮದುಮಗಳು ಕುವೆಂಪು ಕಾವ್ಯ ಎಸ್. ಕಾಡಿದ , ಅರಿವು ವಿಸ್ತಿರಿಸಿದ, ಬದುಕಿನ ಚೆಲುವು ತಿಳಿಸಿದ ಕುವೆಂಪು ನನ್ನನ್ನು ದೀರ್ಘವಾಗಿ ಓದಿಸಿದ ಪ್ರೀತಿಯ ಕಾದಂಬರಿ ಎಂದರೆ ; ಕುವೆಂಪುರವರ “ಮಲೆಗಳಲ್ಲಿ ಮದುಮಗಳು ” ಕಾದಂಬರಿ. 712 ಪುಟಗಳಿರುವ ಈ ಬೃಹತ್ ಕಾದಂಬರಿಯಲ್ಲಿ ಪಾತ್ರವರ್ಗ, ಸ್ಥಳಗಳು, ಜಾತಿ, ಪಂಗಡಗಳ ವಿವರಣೆಗಳ ಸುತ್ತ ಹೆಣೆದುಕೊಳ್ಳುತ್ತಾ ಅಂದಿನ ಮೇಲುಜಾತಿ, ಕೀಳುಜಾತಿಯ ವಿಡಂಬನೆ, ಕೂಲಿ ಆಳುಗಳನ್ನು ನಡೆಸುಕೊಳ್ಳುತ್ತಿ ದ್ದ ಹೀನಾಯ ಸ್ಥಿತಿ, ಬ್ರಾಹ್ಮಣ ವರ್ಗದವರೇ ಶ್ರೇಷ್ಠರೆಂದು, ಉಳಿದ ವರ್ಗದವರನ್ನು ಹೀನಾಯವಾಗಿ […]
ಪಾಕ ಕ್ರಾಂತಿ
ಕಾದಂಬರಿ ಕುರಿತು ಪಾಕ ಕ್ರಾಂತಿ ಪೂರ್ಣಚಂದ್ರ ತೇಜಸ್ವಿ ದಿವಂಗತ ಶ್ರೀ ಪೂರ್ಣಚಂದ್ರ ತೇಜಸ್ವಿಯವರ ನೀಳ್ಗತೆ *ಪಾಕ್ ಕ್ರಾಂತಿ* ಓದಲು ಸುರುವು ಮಾಡುವದಕ್ಕೂ ಮೊದಲು ನನಗೆ ಅನ್ನಿಸಿದ್ದು ಕ್ರಾಂತಿಯ ಬಗೆಗೆ ಬರೆದಿರುವ ಲೇಖನವಿರಬಹುದು, ಬಹುಶಃ ಪಾಕಿಸ್ತಾನದ ಯಾವುದೋ ಕ್ರಾಂತಿಯದು ಎಂದು. ಆದರೆ ಒಂದೆರಡು ವಾಕ್ಯ ಓದಿದಾಗ ಇದು ಪಾಕ್ ಕ್ರಾಂತಿಯಲ್ಲ ಪಾಕ ಕ್ರಾಂತಿ ಅಂದರೆ ಪಾಕಶಾಸ್ತ್ರದ, ಅಡುಗೆಯಲ್ಲಿ ಮಾಡಿದ ಕ್ರಾಂತಿಯ ಬರಹ ಅಂತ. ನಾಲ್ಕೇ ಜನ ಕಥೆಯಲ್ಲಿ ಬರುತ್ತಾರೆ, ಅದರಲ್ಲಿ ಹೆಂಡತಿ ತವರಿಗೆ ಹೋದಾಗ ಅಡುಗೆಯಲ್ಲಿ ಕ್ರಾಂತಿ ಮಾಡಲು […]
‘ಶಾಂತಿ ಮಾನವ’ ಶಾಸ್ತ್ರಿ
ಲೇಖನ ‘ಶಾಂತಿ ಮಾನವ’ ಶಾಸ್ತ್ರಿ ಚವೀಶ್ ಜೈನ್ ಚಪ್ಪರಿಕೆ ಭಾರತ ಎಂಬ ಈ ದೇಶ ಸಾವಿರಾರು ಮಹಾಪುರುಷರನ್ನು ಕಂಡಿದೆ. ಅಂತಹ ಮಹಾನ್ ನಾಯಕರನ್ನೂ ಒಪ್ಪಿಕೊಳ್ಳುವ ಮತ್ತು ತಿರಸ್ಕರಿಸುವ ಎರಡೂ ವರ್ಗಗಳು ಸಾಮಾನ್ಯವಾಗಿ ಸಮಾಜದಲ್ಲಿ ಇರುತ್ತವೆ. ಆದರೆ ಕೆಲವು ವ್ಯಕ್ತಿಗಳಿದ್ದಾರೆ, ಅವರನ್ನು ಎಲ್ಲಾ ವರ್ಗದವರು, ಎಲ್ಲಾ ಜಾತಿ – ಮತದವರು, ಬಲಪಂಥೀಯರು, ಎಡಪಂಥೀಯರು, ಎಲ್ಲಾ ಪಕ್ಷಗಳು ಒಟ್ಟಾರೆ ಸಮಸ್ತ ದೇಶ ಒಪ್ಪಿಕೊಳ್ಳುತ್ತದೆ ಮತ್ತು ಗೌರವಿಸುತ್ತೆ. ಅಂತಹ ಮಹಾತ್ಮರಲ್ಲಿ ಅಗ್ರಪಂಕ್ತಿಯಲ್ಲಿ ನಿಂತುಕೊಳ್ಳುವವರು, ಈ ದೇಶದ ಶಾಂತಿ ಮಾನವ ಲಾಲ್ ಬಹದ್ದೂರ್ […]
ಕನ್ನಡ ಕಂದ
ಮಕ್ಕಳ ಪದ್ಯ ಕನ್ನಡ ಕಂದ ಮಲಿಕಜಾನ ಶೇಖ . ಕನ್ನಡ ನಾಡಿನ ಕಂದನು ನಾನುಕನ್ನಡವನ್ನೆ ಬೆಳಗುವೇನು..ಅ,ಆ,ಇ,ಈ ಎನ್ನುತ್ತಾ ನಾನುಕನ್ನಡವನ್ನೆ ಕಲಿಯುವೇನು. ಸಹ್ಯಾದ್ರಿಯ ಗಿರಿಕಂದರಗಳಕಾವೇರಿ ಕೃಷ್ಣೆ ತುಂಗೆ ತೀರದಲಿಶ್ರೀಗಂಧ ವನ್ಯಸಿರಿ ನಾಡಿನಲಿಸೌಗಂಧ ತುಂಬಿದ ಮಣ್ಣಿನಲಿಎಂದಿಗೂ ನಾನು ಮೆರೆಯುವೇನು.. ಹರಿಹರ ಕೃಷ್ಣರು ಕಟ್ಟಿದಚಾಲೂಕ್ಯ ಕದಂಬರು ಆಳಿದಚೆನ್ನಮ್ಮಾ ಓಬವ್ವಾ ಹೋರಾಡಿದವೀರರು ಧೀರರು ಮೆರೆದಿಹಶೌರ್ಯದ ಇತಿಹಾಸ ಕೇಳುವೇನು.. ಶರಣರು ದಾಸರು ಬದುಕಿದಸೂಫಿ ಸಂತರು ಬೆಳಗಿದಸತ್ಯ ಶಾಂತಿ ನಿತ್ಯ ನೀತಿಐಕ್ಯ ಮಂತ್ರ ಸಾರಿದಪಾವನ ನೆಲಕ್ಕೆ ನಮಿಸುವೇನು. ರನ್ನ ಪಂಪರ ಅಪಾರ ಪಾಂಡಿತ್ಯಕುವೆಂಪು ಬೇಂದ್ರೆಯ ಅಗಾಧ […]
ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – ೨೦೨೦
ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – ೨೦೨೦ ಬಿದಲೋಟಿ ರಂಗನಾಥ್ ಮತ್ತು ಡಾ. ಶೋಭಾ ನಾಯಕ್ ಗೆ ೨೦೨೦ ರ ಸಾಲಿನ ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ರಾಜ್ಯಮಟ್ಟದಲ್ಲಿ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿತ್ತು. ಈ ಸಲ ಒಟ್ಟು ೫೬ ಹಸ್ತಪ್ರತಿಗಳು ಬಂದಿದ್ದವು. ಕೊನೆಯ ಹಂತದಲ್ಲಿ ಅಂಕಗಳು ಸಮ ಬಂದ ಕಾರಣ ಇಬ್ಬರು ಕವಿಗಳ ಹಸ್ತಪ್ರತಿಗಳನ್ನು ಆಯ್ಕೆ ಮಾಡಲಾಗಿದೆ. ಉತ್ತರ ಕನ್ನಡ ಮೂಲದ ಶೋಭಾ ನಾಯಕ್ ರ ‘ಶಯ್ಯಾಗೃಹದ ಸುದ್ದಿಗಳು’ ಮತ್ತು ತುಮಕೂರು […]
ಕನ್ನಡ, ಕನ್ನಡವೇ ಆಗಿರಲಿ
ಗೌರಿ.ಚಂದ್ರಕೇಸರಿ. ಭಾಷೆಯ ಮೇಲೆ ಗಾಢವಾದ ಪ್ರಭಾವ ಬೀರುವ ಸಂಸ್ಕøತಿಯು ಭಾಷೆಯ ಹರಿವನ್ನು ಬದಲಾಯಿಸುತ್ತ ಹೋಗುತ್ತದೆ. ಕೊರಕಲಿನಗುಂಟ ನೀರು ಹರಿಯುವಂತೆ ಸಮಯ ಸಂದರ್ಭಕ್ಕೆ ತಕ್ಕಂತೆ ಹೊಸತನವನ್ನು ಪಡೆಯುತ್ತಲೇ ಹೋಗುತ್ತದೆ. 2500 ವರ್ಷಗಳಷ್ಟು ಹಳೆಯ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆ ನಮ್ಮದು. ಬದಲಾವಣೆ ಆರೋಗ್ಯಕರವಾದದ್ದೇ. ಆದರೆ ಪರಕೀಯ ಶಬ್ದಗಳು ಕನ್ನಡದೊಡನೆ ಮಿಳಿತಗೊಂಡು ಹಾಡಿನ ರೂಪದಲ್ಲಿ ಕಿವಿಗೆ ಬೀಳುತ್ತಿದ್ದರೆ ಕೇಳಲು ಅಸಹನೀಯವೆನಿಸುತ್ತದೆ. ತಳಹದಿಯಿಂದಲೇ ಇಂಗ್ಲೀಷ್ ಮಾಧ್ಯಮದಲ್ಲಿ ಓದುವ ಇಂದಿನ ಮಕ್ಕಳು ಕನ್ನಡದ ಮೇಲೆ ಪ್ರಭುತ್ವವನ್ನು ಸಾಧಿಸಲು ಹೇಗೆ ಸಾಧ್ಯ? ಸರಳಗನ್ನಡದ […]
ಭೂತಾಯಿಗೆ ನಮನ
ಲೇಖನ ಭೂತಾಯಿಗೆ ನಮನ ರಾಘವೇಂದ್ರ ಈ ಹೊರಬೈಲು ಇವತ್ತು ರಾತ್ರಿಯೆಲ್ಲಾ ಎಚ್ರಾಗಿರ್ಬೇಕು, ಮಲಗ್ಬಿಟ್ಟಿಯೋ. ರಾತ್ರಿಯೆಲ್ಲ ಹಬ್ಬ ಮಾಡ್ಬೇಕು, ಹಬ್ಬದಾಗೆ ಎಚ್ರಾಗಿರ್ದೆ ಹಂಗೆ ಮಲ್ಗಿದ್ರೆ ದೇವ್ರು ಶಾಪ ಕೊಡ್ತಾನೆ ಕಣೋ” ನಾನು ಚಿಕ್ಕ ಹುಡುಗನಾಗಿದ್ದಾಗ ನಮ್ಮಮ್ಮನಾಡಿದ ಮಾತುಗಳು ಎಂದಿಗೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಕುಳಿತಿವೆ. “ಇದ್ಯಾವ ಹಬ್ಬನಪ್ಪ, ರಾತ್ರಿಯೆಲ್ಲ ಎಚ್ರಾಗಿರ್ಬೇಕಂತೆ” ಎಂದು ಗೊಣಗುಟ್ಟುತ್ತಾ ತೂಕಡಿಸುತ್ತಾ, ಅಮ್ಮನೋ ಅಪ್ಪನೋ ಹೇಳ್ತಾಯಿದ್ದ ಸಣ್ಣಪುಟ್ಟ ಕೆಲಸಗಳನ್ನು ಒಲ್ಲದ ಮನಸ್ಸಿನಿಂದ ನಿದ್ರೆಗಣ್ಣಿನಲ್ಲೇ ಮಾಡುತ್ತಾ, ಕೆಲವೊಮ್ಮೆ ಹೆಚ್ಚು ಕಡಿಮೆಯಾಗಿ, ಬೈಸಿಕೊಳ್ಳುತ್ತಾ ರಾತ್ರಿ ಕಳೆಯುತ್ತಿದ್ದ ಆ ದಿನಗಳನ್ನು […]