Category: ಇತರೆ

ಇತರೆ

ಮೀನು ಶಿಕಾರಿಯ ಸಂಭ್ರಮ

ಮಳೆಗಾಲದ ಆರಂಭ ಮತ್ತು ಮೀನು ಶಿಕಾರಿ… ರಮೇಶ್ ನೆಲ್ಲಿಸರ ‘ಮಳ್ಗಾಲ ಅನ್ನೋದ್ ಯಾವಾಗ್ ಬಂದ್ ಈ ಸುಡ್ಗಾಡ್ ಶೆಕೀನ ಹೊತ್ಕಂಡ್ ಹೋಯ್ತದೋ ಆ ದ್ಯಾವ್ರೆ ಬಲ್ಲ’, ಅಂತ ಬೇಸ್ಗೀಲಿ ಹಾಗೇಯ “ಈ ಹಾಳಾದ್ ಮಳಿ ದಸೇಂದ್ ಮನೆ ಹೊರ್ಗ್ ಕಾಲಿಡಕ್ ಆಗ್ದು” ಅಂತ ಮಳ್ಗಾಲದಾಗೆ , ಈ ಬಗೀ ಮಾತು ನಮ್ ಮಲ್ನಾಡ್ ಕಡೆ ಎಲ್ರೂ ನಾಲ್ಗಿ ಮೇಲೂ ನಲೀತರ‌್ದದೆ. ಏನ್ ಶೆಕಿ ಅಂತೀರಾ, ಹೋದ್ ಮಳ್ಗಾಲ‌್ದಲ್ ಆ ನಮೂನಿ ಮಳೆ ಹೊಯ್ದ್ರು ನೀರ್ ಅನ್ನದ್ ಪಾತಾಳ್‌ಮಟ […]

ಲಹರಿ

ಒಮ್ಮೆ ತಿರುಗಿ ನೋಡು ನನ್ನ ಕೊನೆಯ ತಿರುವು ಬರುವ ಮುನ್ನ. ವಿಷ್ಣು ಭಟ್ ಹೊಸ್ಮನೆ ನನ್ನ ಮನಸ್ಸು ಅವಳು ತಿರುಗಿ ನೋಡಲೇಬಾರದು. ಮುಂದೆ ಎಂದಿಗೂ ಸಂಧಿಸದ ಹಾದಿಯಲ್ಲಿ ನಾನು ಮತ್ತು ಅವಳು ಸಾಗುತ್ತ ಇರಬೇಕು ಅಂದುಕೊಂಡಿತ್ತು. ಅವತ್ತು ತಿರುಗಿ ನೋಡದೇ ಹೋದರೂ ಎರಡು ದಿನ ಬಿಟ್ಟು ಮತ್ತೆ ಅವಳು ಬಂದಿದ್ದಳು. ಅವಳನ್ನು ಮತ್ತೆ ನೋಡಿದೆ ಎಂಬೊಂದು ಖುಷಿ ಬಿಟ್ಟರೆ ಮತ್ತೇನೂ ನನ್ನಲ್ಲಿ ಹುಟ್ಟಲಿಲ್ಲ. ಆದರೆ ಅವಳು ಎದೆ ತುಂಬ ಪ್ರೀತಿಯನ್ನು ಹೊತ್ತು ತಂದಿದ್ದಳು. ಅವಳು ಕಾದುಕಾದು ಕೇಳಿದ್ದು […]

ಸಂಪ್ರದಾಯದ ಸೊಬಗು

ಅರುಣ್ ಕೊಪ್ಪ ಊರ ಬಾಗಿಲು ಮುಂದೆ ಭಯಭಕ್ತ ಕಲ್ಲುಗಳು, ತೀರಾ ಹಳೆಯವು ಅಲ್ಲಲ್ಲಿ ಹಾಲು ಸೋಕುವ ಮರಗಳು, ಮುಗಿದರೆ ಕೈ ದೇವರು, ಹಾಗೋ ಹೀಗೋ ಗಾಳಿ ಬಂದಾಗ ಬುಡಸಡಿಲವಾಗುವ ಭಯ ಮಹಾಮಯ ! ಮುಂಗಾರಮುಂದೆ ಮಾತು ಕಥೆ, ಅಂತೂ ಕುದುರಿಸಿಯೇ ಬಿಟ್ಟರು ಮಾರಿ ಹಬ್ಬವಂತೆ, ಕುರಿ ಕೋಳಿಯ ಜಾತ್ರೆ ಊರೊಳಗೆ, ಮುಟ್ಟು ಮೈಲಿಗೆ ಹೆಂಗಸರ ಸ್ಥಳಾಂತರ ಒಪ್ಪ, ವಾಗತಿಯಲಿ ಹಬ್ಬ ಸಜ್ಜು ಊರ ಹಬ್ಬದ ಸಲುವಾಗೆ ಶಣ್ಣಿ ಮದುವಿ ಮುಂದಾತು ಕಿವಿಗಿಲ್ಲ ಮೂಗಿಗಿಲ್ಲ ಎಲ್ಲ ದುಬಾರಿಮಯ.. ಇದ್ದದ್ದು […]

ಪ್ರಬಂದ

ಶ್ರಮಜೀವಿ ಜೇನ್ನೊಣಗಳು ನಾಗರಾಜ ಮಸೂತಿ ಶ್ರಮಜೀವಿಗಳಲ್ಲಿ ಒಂದಾದ ಜೇನುಹುಳು ಶ್ರಮದಿಂದಲೇ ತನ್ನ ಆಯಸ್ಸನ್ನು ಕಡಿಮೆ ಮಾಡಿಕೊಳ್ಳುವಂತೆ ಶ್ರಮವಹಿಸಿ ದುಡಿಮೆ ಮಾಡುತ್ತದೆ. ಇದರ ಆಯಸ್ಸು ಸುಮಾರು ಒಂದು ತಿಂಗಳು ಅಥವಾ ಮೂವತ್ತು ದಿನಗಳು ಮಾತ್ರ. ಚಗಳಿ ಇರುವೆಯ ಜೀವನ ಶೈಲಿಯನ್ನು ಹೋಲುವ ಜೇನುಹುಳು ಎಲ್ಲರ ಕೋಪಕ್ಕೆ ತುತ್ತಾದರೆ ಅದರ ಶ್ರಮದ ಫಲ ಜೇನು ಹನಿ ಮಾತ್ರ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಬಹುಶಃ ಜೇನುತುಪ್ಪ ಇಷ್ಟ ಪಡದ ವ್ಯಕ್ತಿ ಭೂಮಿಯ ಮೇಲೆ ಇರಲಿಕ್ಕಿಲ್ಲ. ಈ ಜೇನುಹನಿಯನ್ನ ಪೇರಿಸಲು ಅದು ಪಡುವ […]

ಅಂಕಣ

ಮುಟ್ಟು! ಚಂದ್ರಪ್ರಭ ಮುಟ್ಟು .. ಮುಟ್ಟು.. ಮುಟ್ಟು.. ಪ್ರಜಾವಾಣಿ ಭಾನುವಾರದ ಪುರವಣಿ (೨೩/೧೦/೧೯) ಯಲ್ಲಿ ಬಾನು ಮುಷ್ತಾಕ್ ರವರ ಲೇಖನ  “ಮುಟ್ಟು ಮುಟ್ಟೆಂದೇಕೆ..?”  ಓದುವಾಗ ‘ಮುಟ್ಟು’ ಕುರಿತು ಹತ್ತಾರು ಸಂಗತಿಗಳು ತಲೆಯಲ್ಲಿ ಸುಳಿದಾಡತೊಡಗಿವೆ. ನಮ್ಮ ಬಾಲ್ಯ ಕಾಲಕ್ಕಿಂತ ಈಗ ಸ್ವಲ್ಪ ಮಟ್ಟಿಗೆ ಧೋರಣೆಗಳು ಬದಲಾಯಿಸಿದಂತೆ ತೋರುವುದಿದೆ. ಆಗ ಅದನ್ನು ಕುರಿತು ಹೆಣ್ಮಕ್ಕಳು ತಮ್ಮ ತಮ್ಮಲ್ಲಿಯೂ ಮುಕ್ತವಾಗಿ ಮಾತನಾಡಲು ಹಿಂಜರಿಕೆಯಿತ್ತು. ಆಗ ಆ ಸಂಗತಿ ಮಕ್ಕಳು, ಇತರರ ತಿಳಿವಳಿಕೆಗೆ ಬರುವ ಸಂಭವನೀಯತೆ ಇದ್ದುದು ತೀರ ಕಡಿಮೆ. ತರಗತಿಯಲ್ಲಿ ಅಂಡಾಣು, […]

ಅಂತರಂಗದ ಅಲೆಗಳು

                         ಸುಜಾತ ರವೀಶ್ ಹೌದು. ಮನವೆಂಬುದು ಅದೆಷ್ಪೋ ಲಕ್ಷ GBಗಳಾಗಿಂತ ಶಕ್ತಿಯುತ ಚಿಪ್. ಅಂತರಾಳದ ಪದರ ಪದರಗಳಲ್ಲಿ ಅಸಂಖ್ಯಾತ ನೆನಪಿನಲೆಗಳೇಳುತ್ತಲೇ ಇರುತ್ತವೆˌ ಈ ಭರತಕ್ಕೆ ಹುಣ್ಣಿಮೆ ಅಮಾವಾಸ್ಯೆಗಳ ಹಂಗಿಲ್ಲ. ಅವಿರತ ನಿರಂತರ ಅನಂತ.ಎಂದೋ ಎಲ್ಲೋ ಆದ ಅನುಭವದ ನೆನಹು ಇನ್ನೆಂದೋ ಇನ್ನೆಲ್ಲೋ ಧುತ್ತನೆ ಮನದಂಗಳದಲಿ ಪ್ರತ್ಯಕ್ಷ.ಕವಿವಾಣಿ ನುಡಿದಂತೆ “ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮಜಲದಾ ತಂಪು” ಇಂದಿಗೂ ತಾಜಾ ತಾಜಾ ಹಸಿ ಹಸಿ. ಇವತ್ತು ಬರೆಯಹೊರಟಿರುವ ವಿಷಯ ತುಂಬಾ ದಿನದಿಂದ ಮನದಲ್ಲಿತ್ತು. ಮುಂದೂಡೂತ್ತಲೇ  ಇದ್ದೆ. ಹಾಗಾಗಿ ಈಗ […]

ವಿಶೇಷ

ಕನ್ನಡ ಬರಹಗಾರ ಮತ್ತು ಜಾಲತಾಣಗಳು.  ಡಿ.ಎಸ್.ರಾಮಸ್ವಾಮಿ         ಕನ್ನಡಕ್ಕೂ ಮತ್ತು ಅದರ ಸಾಹಿತ್ಯ ಚರಿತ್ರೆಗೂ ಶತಮಾನಗಳ ಇತಿಹಾಸವೇ ಇದೆ. ಮೌಖಿಕ ಪರಂಪರೆಯಿಂದ ಹಿಡಿದು ಇವತ್ತು ನಾವು ನೀವೆಲ್ಲ ಬಳಸುತ್ತಿರುವ ಸಾಮಾಜಿಕ ಜಾಲತಾಣಗಳವರೆಗೂ ಅದರ ವಿಸ್ತರತೆ ಇದೆ. ಇಂಗ್ಲಿಷಿಗೆ ತರ್ಜುಮೆಯಾಗದ ಏಕೈಕ ಕಾರಣಕ್ಕೆ ಶ್ರೇಷ್ಠ ಸಾಹಿತ್ಯ ಕೃತಿಗಳಾಗಿದ್ದೂ ವಿಶ್ವ ಮನ್ನಣೆ ಪಡೆಯುವ ಹಲವಾರು ಬಹುಮಾನಗಳಿಂದ ಕನ್ನಡದ ಲೇಖಕರು ವಂಚಿತರಾಗಿರುವುದೂ ಮತ್ತು ಇಂಗ್ಲಿಷಿಗೆ ಅನುವಾದಗೊಂಡ ಕಾರಣಕ್ಕೇ ಸಾಮಾನ್ಯ ಲೇಖಕರೂ ವಿಶ್ವ ವ್ಯಾಪೀ ಪ್ರಚಾರ ಪಡೆದುದೂ ಇದೆ.      ಅಂದರೆ ಕನ್ನಡ […]

Back To Top