Category: ಇತರೆ

ಇತರೆ

ಪರಿವರ್ತನೆಗೆ ದಾರಿ ಯಾವುದಾದರೇನು?

ಲಲಿತ ಪ್ರಬಂಧ ಪರಿವರ್ತನೆಗೆ ದಾರಿ ಯಾವುದಾದರೇನು? ನಾಗರೇಖಾ ಗಾಂವಕರ್ ಹೊಸ ಸುತ್ತೋಲೆಯಂತೆ ಪದವಿ-ಪೂರ್ವ ಹಂತಕ್ಕೂ ಪ್ರಾರ್ಥನೆಯನ್ನು ಕಡ್ಡಾಯಗೊಳಿಸಿ ಇಲಾಖೆ ಆದೇಶ ಹೊರಡಿಸಿದ್ದು ಪಡ್ಡೆ ಹುಡುಗರಿಗೆ ಕೊಂಚವೂ ಇಷ್ಟವಿಲ್ಲ. ಆಗಾಗ ಆ ಬಗ್ಗೆ ತಕರಾರು ಮಾಡುವ ಗುಂಪು ಇದ್ದೇ ಇತ್ತು. ಆದರೂ ಪ್ರಾಚಾರ್ಯರು ಅದಕ್ಕೆಲ್ಲ ಅವಕಾಶ ಕೊಡದೆ ಕಡ್ಡಾಯ ಎಂದು ನೋಟೀಸು ತೆಗೆದು ಒತ್ತಡ ಹೇರಿದ್ದರು. ಹಾಗಾಗಿ  ವಿದ್ಯಾರ್ಥಿಗಳು  ಪ್ರಾರ್ಥನೆಗೆ ಹಾಜರಾಗುವುದು ಅನಿವಾರ್ಯವಾಗಿತ್ತು. ವಾಣಿಜ್ಯ ವಿಭಾಗದ ಆ ತರಗತಿಯಲ್ಲಿ ಇರುವುದು ಬರಿಯ ಇಪ್ಪತೆಂಟು ವಿದ್ಯಾರ್ಥಿಗಳು  ಮಾತ್ರ. ಉಳಿದೆಲ್ಲ ಮಕ್ಕಳು […]

ಅಂಕಣ ಬರಹ ಕಗ್ಗಗಳ ಲೋಕ ಆದರಣೀಯ ಡಾII ಡಿ. ವಿ. ಗುಂಡಪ್ಪನವರು ರಚಿಸಿದ ‘ಮಂಕುತಿಮ್ಮನ ಕಗ್ಗ’ ಒಂದು ಮೇರುಕೃತಿ. ಅವರ ಒಂದೊಂದು ಮುಕ್ತಕವೂ ಕೂಡ ಸಾರ್ವಕಾಲಿಕ ಸತ್ಯ! ಜೀವನದಲ್ಲಿ ಎದುರಾಗುವ ಸಾವಿರಾರು ಪ್ರಶ್ನೆಗಳಿಗೆ ತತ್ವಶಾಸ್ತ್ರ,ಸ್ವಾನುಭವ ಮತ್ತು ಆಧ್ಯಾತ್ಮದ ಹಿನ್ನೆಲೆಯಲ್ಲಿ ಉತ್ತರ ನೀಡುವ ಕಗ್ಗಗಳು ಓದುಗರಿಗೆ ಆಪ್ತವಾಗಿ ಬಿಡುತ್ತವೆ. ಒಬ್ಬ ಸಾಮಾನ್ಯ ಮನುಷ್ಯನಂತೆ ಮೈತ್ರಿಭಾವದಿಂದ ಬರೆದ ಈ ಕಗ್ಗಗಳು ಅಸಂಖ್ಯ ಮಂದಿಗೆ ಸಾಂತ್ವನ ನೀಡುತ್ತವೆ. “ಎಲ್ಲದರಲ್ಲೂ, ಎಲ್ಲರಲ್ಲೂ ಒಳ್ಳೆಯದನ್ನೇ ಕಂಡು , ಜೀವನದ ಸೊಬಗನ್ನು ಸವಿಯಬೇಕು” ಎಂದು ದಾರಿತೋರುವ […]

ಪಿ.ಲಂಕೇಶ್ ಎಂಬ ‘ಹುಳಿಮಾವಿನ ಮರ’..!

ಲಂಕೇಶ್ ವಿಶೇಷ ಪಿ.ಲಂಕೇಶ್ ಎಂಬ ‘ಹುಳಿಮಾವಿನ ಮರ’..! ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರು. ಪತ್ರಕರ್ತ-ಸಾಹಿತಿಯಾಗಿ ಜನಪ್ರಿಯರಾಗಿರುವ ಪಾಳ್ಯದ ಲಂಕೇಶ್ ಅವರ ಬದುಕು-ಬರಹ ವೈವಿಧ್ಯದಿಂದ ಕೂಡಿದೆ. ಕವಿಯಾಗಿ, ಕಥೆಗಾರನಾಗಿ, ಕಾದಂಬರಿಕಾರನಾಗಿ, ಅನುವಾದಕನಾಗಿ, ನಾಟಕಕಾರನಾಗಿ, ನಟನಾಗಿ, ಚಲನಚಿತ್ರ ನಿರ್ದೇಶಕನಾಗಿ, ವಾರಪತ್ರಿಕೆ ಲಂಕೇಶ್ ಸಂಪಾದಕನಾಗಿ, ಕೃಷಿಕನಾಗಿಯೂ ಪ್ರಸಿದ್ಧನಾಗಿ ಹೆಸರು ಮಾಡಿದವರು ಪಿ.ಲಂಕೇಶ್ ಅವರು. ಹೀಗೆಯೇ ಅವರ ಪ್ರತಿಭೆಗೆ ಹಲವು ಮುಖ. ಕೆಲಸ ಮಾಡಿದ ಕ್ಷೇತ್ರದಲ್ಲೆಲ್ಲ ತನ್ನದೇ ಛಾಪು ಮೂಡಿಸಿದವರು   ಪಿ.ಲಂಕೇಶ್. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ […]

ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ

ಬುಡಕಟ್ಟು ಜನಾಂಗದ ಬಗ್ಗೆ ಬೆಳಕು ಚೆಲ್ಲುವ ಲೇಖನ ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ ಆಶಾ ಸಿದ್ದಲಿಂಗಯ್ಯ ಕಾಡುಗೊಲ್ಲ ಬುಡಕಟ್ಟು ಜನಾಂಗವು ತುಮಕೂರು, ಮತ್ತು ಚಿತ್ರದುರ್ಗ,ಜಿಲ್ಲೆಯಲ್ಲಿ ಹೆಚ್ಚಾಗಿ ನೆಲೆಗೊಂಡಿದ್ದಾರೆ ಉಳಿದಂತೆ   ದಾವಣಗೆರೆ, ಬಳ್ಳಾರಿ ಗಡಿಭಾಗ  ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ , ರಾಮನಗರ  , ಮಂಡ್ಯ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಂಗಳೂರು ಜಿಲ್ಲೆಯಲ್ಲಿ  ವಿರಳವಾಗಿ ಕಾಣಸಿಗುತ್ತಾರೆ. ಒಟ್ಟಾರೆ ಕರ್ನಾಟಕದಲ್ಲಿ ಇವರ ಜನಸಂಖ್ಯೆ ಹತ್ತು ಲಕ್ಷ ಇದೆ. ಕಾಡುಗೊಲ್ಲರನ್ನು ಮುನ್ನೆಲೆಗೆ ತರಲು  ಮತ್ತು ಸರ್ಕಾರ ಅವರನ್ನು ಗುರುತಿಸಲು […]

ಎಲೆಗಳ ಬಲೆಯಲ್ಲಿ…

ಲಲಿತ ಪ್ರಬಂಧ ಎಲೆಗಳ ಬಲೆಯಲ್ಲಿ…                                                             ಟಿ.ಎಸ್.ಶ್ರವಣಕುಮಾರಿ ಈ ಹದಿಮೂರು ಎಲೆಗಳಿಗೊಂದು ವಿಶಿಷ್ಟ ಆಕರ್ಷಣೆಯಿದೆ, ಸೆಳೆತವಿದೆ. ಕೆಲವರು ರಮ್ಮಿ, ಬ್ರಿಡ್ಜ್‌, ಮೂರೆಲೆ ಎನ್ನುತ್ತಾ ಇಸ್ಪೀಟಿನ ಹಿಂದೆ ಬಿದ್ದರೆ, ಇನ್ನು ಕೆಲವರು ಸಾಲಿಟೇರ್‌, ಫ್ರೀಸೆಲ್‌ ಎನ್ನುತ್ತಾ ಕಂಪ್ಯೂಟರಿನಲ್ಲಿ ಅದೇ ಹದಿಮೂರು ಎಲೆಗಳಲ್ಲಿ ಅಡಗಿಕೊಂಡಿರುತ್ತಾರೆ. ʻಅಂದರ್‌ ಬಾಹರ್‌ ಅಂದರ್‌ ಬಾಹರ್‌ʼ ಎಂದು ಕೋರಸ್‌ನಲ್ಲಿ ಗುನುಗುತ್ತ ʻಎಕ್ಕ ರಾಜ ರಾಣಿ ನನ್ನ ಕೈಯೊಳಗೆ, ಹಿಡಿಮಣ್ಣು ನಿನ್ನ ಬಾಯೊಳಗೆʼ ಎಂದು ಹಾಡುತ್ತ ಜಾಕಿ ಚಲನಚಿತ್ರದಲ್ಲಿ ಪುನೀತ್‌ ರಾಜ್‌ಕುಮಾರ್‌ ತನ್ನೆಲ್ಲಾ ಅಭಿಮಾನಿಗಳನ್ನೂ ವಶೀಕರಣ ಮಾಡಿಕೊಂಡಿದ್ದು […]

ವಿಚಿತ್ರ ಆಸೆಗಳು…ಹೀಗೊಂದಷ್ಟು,

ಲಲಿತ ಪ್ರಬಂಧ ವಿಚಿತ್ರ  ಆಸೆಗಳು…ಹೀಗೊಂದಷ್ಟು, ಸಮತಾ ಆರ್. “ಕಕ್ ಕಕ್ ಕಕ್ ಕೊಕ್ಕೋಕ್ಕೊ” ಅಂತ ಒಂದು ಬಿಳಿ,ಬೂದು,ಕೆಂಪು ಬಣ್ಣದ ರೆಕ್ಕೆ ಪುಕ್ಕಗಳ,ಅಂಗೈ ಅಗಲದ ಜುಟ್ಟಿದ್ದ,ಕಮ್ಮಿ ಅಂದರೂ ನಾಲ್ಕೈದು ಕೆಜಿ ತೂಗುತ್ತಿದ್ದ ಗಿರಿರಾಜ ಹುಂಜ ವೊಂದು ಹೆಜ್ಜೆಯ ಮೇಲೆ ಹೆಜ್ಜೆ ಇಡುತ್ತಾ ಗತ್ತಿನಿಂದ ,ಅತ್ತಿಂದಿತ್ತ ಇತ್ತಿಂದತ್ತ ಓಡಾಡುತ್ತಿದ್ದಾಗ,ಸುತ್ತ ನಾಲ್ಕೈದು ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸಿಕೊಂಡು ವಿದ್ಯಾಗಮ ಕಾರ್ಯಕ್ರಮದ ಅಡಿಯಲ್ಲಿ ಕಲಿಸುತ್ತಿದ್ದ ನನಗೆ ಎಷ್ಟು ಪ್ರಯತ್ನ ಪಟ್ಟರೂ ಆ ಹುಂಜನಿಂದ ಕಣ್ಣು ಕೀಳ ಲಾಗಲಿಲ್ಲ. ನನ್ನಿಂದ ಅನತಿ ದೂರದಲ್ಲಿ ಕುಳಿತಿದ್ದ […]

ಗಜಲ್ ಸಾಹಿತ್ಯ ಮತ್ತು ಸವಾಲುಗಳು

ಲೇಖನ ಗಜಲ್ ಸಾಹಿತ್ಯ ಮತ್ತು ಸವಾಲುಗಳು ಡಾ. ಮಲ್ಲಿನಾಥ ಎಸ್.ತಳವಾರ ಪ್ರಕೃತಿಯನ್ನೊಮ್ಮೆ ಅವಲೋಕಿಸಿದಾಗ ‘ಮನುಷ್ಯ’ ನ ವಿಕಾಸ ದಿಗ್ಭ್ರಮೆಯನ್ನು ಮೂಡಿಸುತ್ತದೆ. ಅದೊಂದು ರೀತಿಯಲ್ಲಿ ಪವಾಡವೇ ಸರಿ ! ಎಲ್ಲ ಪ್ರಾಣಿ ಸಂಕುಲಗಳಿಂದ ಆತನು ವಿಭಿನ್ನವೆನಿಸಿದ್ದು ಮಾತ್ರ ಭಾಷೆಯ ಬಳಕೆಯಿಂದ. ತನ್ನ ಭಾವನೆಗಳನ್ನು ಸಶಕ್ತವಾಗಿ ಅಭಿವ್ಯಕ್ತಿಪಡಿಸಲು ‘ಭಾಷೆ’ ಯನ್ನು ಸಾಧನವನ್ನಾಗಿ ಮಾರ್ಪಡಿಸಿಕೊಂಡನು. ಈ ಭಾಷೆಯ ಉದಯದೊಂದಿಗೆ ಸಾಹಿತ್ಯವೂ ಉದಯವಾಯಿತು ಎನ್ನಬಹುದು. “ಭಾಷೆಯ ಉದಯವೆಂದರೆ ಸಾಹಿತ್ಯದ ಉದಯವೆ ಸರಿ” ( ಕನ್ನಡ ಸಾಹಿತ್ಯ ಚರಿತ್ರೆ, ಪು- ೦೧) ಎಂಬ ರಂ. […]

ಪ್ರಶಸ್ತಿ ಘೋಷಣೆ

ಪ್ರಶಸ್ತಿ ಘೋಷಣೆ ಉತ್ತರ ಸಾಹಿತ್ಯ ವೇದಿಕೆ ಶಿಗ್ಗಾಂವ ಪ್ರಶಸ್ತಿಗಳು ಉತ್ತರ ಸಾಹಿತ್ಯ ವೇದಿಕೆ ಶಿಗ್ಗಾಂವ ಇವರ ವತಿಯಿಂದ ಪ್ರತಿ ವರ್ಷ ಸಾಹಿತ್ಯ,ಶಿಕ್ಷಣ,ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿದ ನಾಡಿನ ಹಿರಿಯ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿಕೊಂಡು ಬರಲಾಗುತ್ತಿದೆ 2019-20 ನೇ ಸಾಲಿನಲ್ಲಿಕನಕ ಶರೀಫ ಪುರಸ್ಕಾರ 1-ಬಿ.ಶ್ರೀನಿವಾಸ-2019 ದಾವಣಗೆರೆ2-ಅಲ್ಲಾಗಿರಿರಾಜ-2020 ಕೊಪ್ಪಳ ಡಾ.ಹಿರೇಮಲ್ಲೂರ ಈಶ್ವರನ್ ಶಿಕ್ಷಕ ಪುರಸ್ಕಾರ 1-ಡಾ.ವಾಯ್.ಎಂ.ಯಾಕೊಳ್ಳಿ-2019 ಬೆಳಗಾವಿ2-ಜಿ.ಎಸ್.ಬಿಜಾಪುರ-2020 ಬಾಗಲಕೋಟೆ ಡಾ.ಅರಟಾಳ ರುದ್ರಗೌಡರ ಸಾಮಾಜಿಕ ಸೇವಾ ಪುರಸ್ಕಾರ 1-ಡಾ.ಹನುಮಂತಪ್ಪ ಪಿ.ಎಚ್.2019 ಶಿಗ್ಗಾಂವ2-ಅಕ್ಷತಾ ಕೆ.ಸಿ.2020 ಹಾವೇರಿ. ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜನೇವರಿ 2021 […]

” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು”

” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು” ರಶ್ಮಿ ಎಸ್. ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ ಡಿ. 6,7,8 ಬಾಬರಿ ಮಸೀದಿ ಪ್ರಕರಣ ಆದಾಗ ಇಡೀ ದೇಶ ಕೋಮು ದಳ್ಳುರಿಯೊಳಗ ಧಗಧಗಿಸುತ್ತಿತ್ತು… ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ … ಮುಗಲ ಮಾರಿಯೊಳಗ ದೇವರ ನಗಿ ನೋಡ್ಕೊಂತ… ನನ್ನ ತಾಯಾ, (ದೊಡ್ಡಪ್ಪ) ಅಂಗಳದೊಳಗ ಅರಾಮ ಕುರ್ಚಿ ಹಾಕ್ಕೊಂಡು ಆಕಾಶ ನೋಡ್ಕೊಂತ ಕುಂತಾರ ಅಂದ್ರ ಏನೋ ಚಿಂತಿ ಕಾಡ್ತದ ಅಂತನೇ ಅರ್ಥ. ಅವಾಗ ನಾವು ಯಾರೂ […]

Back To Top