Category: ಇತರೆ

ಇತರೆ

ಕನ್ನಡದ ಅಸ್ಮಿತೆ

ನಾಡ ದ್ವಜ ಯಾಕೆ ಬೇಕು? ಚಂದ್ರಪ್ರಭ ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ ತೋರುತಿಹುದು ಹೊಡೆದು ಹೊಡೆದು ಬಾನಿನಗಲ ಪಟ ಪಟ ಕಯ್ಯಾರ ಕಿಞ್ಞಣ್ಣ ರೈ ದೇಶ, ಭಾಷೆ, ಸಂಸ್ಕೃತಿ, ಸಂಪ್ರದಾಯ ಇತ್ಯಾದಿ ಎಲ್ಲವುಗಳ ಮೂಲ ನೆಲೆ ಅಸ್ಮಿತೆ. ಅಷ್ಟೇ ಅಲ್ಲ ಇವೆಲ್ಲ ಒಂದನ್ನೊಂದು ಪೂರಕವಾಗಿ ಪ್ರಭಾವಿಸುವ ಅಂಶಗಳು. ವ್ಯಕ್ತಿ, ವ್ಯಕ್ತಿಯ ಮನೆತನ, ಪ್ರದೇಶ ಎಲ್ಲಕ್ಕೂ ಒಂದು ಹೆಸರಿದೆ. ಹತ್ತಾರು ಸಂಗತಿಗಳನ್ನು ಹೇಳಿ ಬಿಡುವ ತಾಕತ್ತು ಆ ಒಂದು ಹೆಸರಿಗಿದೆ. ಗುರುತಿಸುವಿಕೆಯ ಇಂಥದ್ದೊಂದು ಅಂಶವಾಗಿ ಹುಟ್ಟಿದ್ದು ‘ಧ್ವಜ’ […]

ಅನುಭವ

ಭಯದ ನೆರಳಲ್ಲಿ ಹೆಬ್ರಿ ಸದಾನಂದ ಶೆಟ್ಟಿ ಭಯದ ನೆರಳಲ್ಲಿ ಕೈಯಲ್ಲಿ ಸಣ್ಣ ಬ್ಯಾಗ್ ಹಿಡಿದ ನಾನು ನನ್ನ ಭಾವಿ ಪತ್ನಿ ನೋಡೊ ಬರದಲ್ಲಿ ಹೆಜ್ಜೆ ಹಾಕಿದೆ 40 ನಿಮಿಷ ಕಳೆದ ನ೦ತರ ಮಾವನ ಮನೆ ನಾಯಿಗಳ ಬೊಗಳುವಿಕೆಗೆ ಚಿಮಿಣಿ ಹಿಡಿದು ಹೊರ ಬ೦ದಳು ನನ್ನ ಭಾವಿ ಪತ್ನಿ, ಕಗ್ಗತ್ತಲು ” ಯಾರದು ಜಾಗ್ರತೆ ನಾಯಿ ಕಚ್ಚುತ್ತೆ ”ಅ೦ದಾಗ ” ನಾನು ಕಣೆ” ಅ೦ದಾಗ ಆಕೆಗೆ ಸಣ್ಣವರಿದ್ದಾಗಲಿ೦ದ ಗೊತ್ತಿದ್ದರಿ೦ದ ಓಡಿ ಹೋಗಿ ನಾಯನ್ನು ಕಟ್ಟಿ, ತ೦ಗಿಯನ್ನುದ್ದೇಶಿಸಿ ” ರತ್ನ […]

ಲಹರಿ

ಜೀವನ ಅನ್ನೋ ಸೈಕಲ್ ಶಂಭುಗೌಡ ಆರ್.ಜಿ. ಹುಟ್ಟೆಂಬುದ ಹುಟ್ಟಿದಾಗಿಂದ ಜೀವನ ಅನ್ನೋ ಸೈಕಲ್ ಹತ್ತಿ ಪೆಟಲ್ ತುಳ್ದಿದ್ದೋ ತುಳಿದಿದ್ದು…ಮಾರ್ಗ ಮಧ್ಯದಲ್ಲಿ ಹೆಸರಿಲ್ಲದ ಕಾಣದ ಕೈ ಒಂದು ಬೀಸಾಕಿದ ಬಿಕನಾಸಿ ಮುಳ್ಳು ಅಂಟಿಲ್ಲದಿದ್ದರೂ ಅಂಟ್ಕೊಂಡು ಪಂಚರ್ ಆಗಿ ಪಂಚರಂಗಿ ಟೈಟಲ್ ಇರೋ ಪಂಚರ್ ಅಂಗಡಿಯವರೆಗೂ ನಟರಾಜ ಸರ್ವಿಸ್ ನಲ್ಲಿ ನಡೆದು ರಿಪೇರಿ ಮಾಡಿಸಿ ಮತ್ತದೇ ಸೈಕಲ್ ಹತ್ತಿ ಕಾಣದ ಕನಸುಗಳ ಮೂಟೆಗಳನ್ನ ಹೊತ್ತು ಮತ್ತದೇ ಹೆಸರಿಲ್ಲದ ನನಸಿನ ನಗರಿಯತ್ತ ಪಯಣ ಶುರು.ಮಾರ್ಗ ಮಧ್ಯದಲ್ಲಿ ಬೇಟಿಯಾಗೋ ಅಪರಿಚಿತ ಮುಖಗಳನ್ನ ಪರಿಚಯಕ್ಕೂ […]

ಚಿಂತನೆ

ಇಷ್ಟಕ್ಕೆ ಹೀಗೆ ವರಿ ಮಾಡೋದಾ? ಪಿ.ಎಂ.ಇಕ್ಭಾಲ್ ಕೈರಂಗಳ ಮಾನಸಿಕವಾದ ಸಮಸ್ಯೆಗಳೇ ಹಾಗೆ‌. ಬಲು ಸಂಕೀರ್ಣ.  ಹೀಗೇ ಇರುತ್ತದೆ ಎಂಬ ನಿಯಮವಿರಲ್ಲ.  ಒಂದೊಂದು ಸಮಸ್ಯೆಯೂ ವೈವಿಧ್ಯ. ಅವುಗಳ ತೀವ್ರತೆ ಎಷ್ಟು ಎಂದು ಅವುಗಳನ್ನು ಅನುಭವಿಸುವ ನತದೃಷ್ಟರಿಗೇನೇ ಗೊತ್ತು. ಆದರೆ ಒಂದು ನೆನಪಿರಲಿ. ‘ನನ್ನ ಸಮಸ್ಯೆಗೆ ಪರಿಹಾರವಿಲ್ಲ’ ಎಂದು ತಿಳಿದು ಹತಾಶರಾದರೆ ಸಮಸ್ಯೆಯ ವ್ಯಾಪ್ತಿ ಮತ್ತಷ್ಟು ದೊಡ್ಡದಾಗುತ್ತದೆ. ಮಾನಸಿಕವಾಗಿ ಅನುಭವಿಸುವ ನೋವು, ಕೊರಗು ಅಥವಾ ಒತ್ತಡ ಸಣ್ಣ ಸಮಸ್ಯೆಯೇನಲ್ಲ. ಇತರರಿಗಾಗಿ ಅವರ ವಿಷಯದ ಆಳಕ್ಕಿಳಿದು ವಸ್ತುನಿಷ್ಠವಾಗಿ ಚಿಂತಿಸಿ ಅರ್ಥೈಸಲು ಮುಂದೆ […]

ಮಹಿಳೆ

ನಾನು ಹೆಣ್ಣೆಂಬ ಹೆಮ್ಮೆ ನನಗಿದೆ! ಐಶ್ವರ್ಯ .ಎಲ್ ನಾನೊಂದು ಹೆಣ್ಣಾಗಿ ಈ ವಿಷಯದ ಬಗ್ಗೆ ಬರೆಯೋಕೆ ನನಗ್ಯಾವ ಮುಜುಗರವಾಗ್ಲಿ, ಅವಮಾನವಾಗ್ಲಿ‌ ಇಲ್ಲ. ಬದಲಾಗಿ ನಾನೊಬ್ಬ ಹೆಣ್ಣೆಂಬ ಹೆಮ್ಮೆ ನನಗಿದೆ. ನೀವೆಲ್ಲ ಅನ್ಕೊಬಹುದು ಇದೇನು ಜಗಜ್ಜಾಹೀರು ಮಾಡೊ ವಿಷಯಾನ ಅಂತ ಆದ್ರೆ ಜಗತ್ತಿನ ಅದೆಷ್ಟೊ ಜೀವಗಳಿಗೆ ಗೊತ್ತಿಲ್ಲ ಹೆಣ್ತನದ ನಿಗೂಢತೆ, ನೋವುಗಳ ಬಗ್ಗೆ. ಕಂಬಳಿ ಹುಳುವದು ರೆಕ್ಕೆ ಕಟ್ಟುವ ಕಾಲದಂತೆ ಮೊಣಕಾಲಿನವರೆಗೂ ಲಂಗವೆತ್ತಿ ಕುಂಟೆಬಿಲ್ಲೆ ಆಡುತ್ತಿದ್ದವಳಿಗೆ ಹಿಂದೆಂದೂ ಆಗದಂತ ಕಿಬ್ಬೊಟ್ಟೆಯ ಬಾಧ, ಅಲ್ಲಿಂದಲೇ ಶುರುವಾಯ್ತೆನೋ ಹೆಣ್ಣೊಬ್ಬಳ ದೈಹಿಕ ಹೋರಾಟ, […]

ಮಕ್ಕಳ ಸಾಹಿತ್ಯ

ಆಯ್ಕೆ ಅವ್ಯಕ್ತ ನನ್ನಹೆಚ್ಚಿನ ಸಮಯವನ್ನು ನಾನು ಮಕ್ಕಳೊಂದಿಗೆ ಕಳೆಯುತ್ತಿರುವುದು.ಅವರೊಂದಿಗೆ ಆದ ಅನುಭವಗಳನ್ನು ಸಣ್ಣ ಸಣ್ಣ ಕಥೆಗಳ ಮೂಲಕ ಬರೆಯುತ್ತೇನೆ. ಅಂತ ಕಥೆಗಳಲ್ಲಿ ಇದೂ ಒಂದು) ಆಯ್ಕೆ ಒಳಗೆ ತಲೆಯಾಡಿಸುತ್ತಾ ನಡೆದು ಬಂದ್ಲು. ನಾನು ನೋಡಿ ಮುಗುಳ್ನಗೆ ಬೀರಿದೆ. ಜ್ವಾಲಾಮುಖಿ ಬಚ್ಚಿಟ್ಟಿದ್ದಂತೆ“ನಾನು ಅವರನ್ನೆಲ್ಲ ದ್ವೇಷಿಸುತ್ತೇನೆ”, “ಇನ್ಯಾವತ್ತೂ ಅವರೊಂದಿಗೆ ಮಾತಾಡೋದಿಲ್ಲ”. ನಾನು ತಾಳ್ಮೆಯಿಂದ “ಏನಾಯ್ತೆ ನನ್ ರಾಣಿ?”. ಅಂತ ಕೇಳ್ದೆ. ನನ್ನ ಪ್ರಶ್ನೆಗೆ ಕಾಯ್ತಿದ್ಲೆನೋಅನ್ನೋ ಹಾಗೆ“ನನಗೆ ನೋವಾಗಿದೆ, ನನ್ನ ಆಡ್ಕೋತಾರೆ,ನನ್ನ ನೋಡಿ ನಗ್ತಾರೆ,ನಾನು…. ನನ್ನ…. ನನಗೆ…”ನಿಲ್ಲೋಮಾತೇ ಇಲ್ಲ ! ನಾನುಸ್ವರ […]

ಭಾಷೆ

ಕನ್ನಡದ ಕಲಿಸುವಿಕೆಯ ಒಂದು ಅನುಭವ ದಾಕ್ಷಾಯಣಿ ನಾಗರಾಜ್            ಭಾಷೆಯೂ ಮಾನವನಿಗೆ ಒದಗಿಬಂದ ಅತ್ಯಾದ್ಭುತವಾದ ಶಕ್ತಿಯಾಗಿದೆ.ಅದನ್ನು ಬಳಸಿ ರೂಢಿಸಿಕೊಂಡು ಸಿದ್ದಿಸಿದರೆ ಅದು ಮಾಂತ್ರಿಕ ಶಕ್ತಿಯಾಗಿ ಪರಿವರ್ತಿನೆಯಾಗಿ ಅವನಿಗೆ ಜೀವಂತಿಕೆಯನ್ನು ತಂದುಕೊಡುತ್ತದೆ. ಭಾಷಾ ಕಲಿಕೆಯನ್ನು ಕಲಿಸುವ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಶಿಕ್ಷಕನು ಮಹತ್ವದ ಪಾತ್ರ ನಿರ್ವಹಿಸಬೇಕಾಗುತ್ತದೆ.          ಮಗುವಿನ ಸರ್ವತೋಮುಖ ಬೆಳೆವಣಿಗೆಯಲ್ಲಿ ಮಾತೃಭಾಷೆಯ ಪಾತ್ರ ಮುಖ್ಯವಾಗಿದೆ. ಆದ್ದರಿಂದ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡಬೇಕು.            ಮಗು,ಮನೆ ,ಪರಿಸರ ,ಕೌಟುಂಬಿಕ ಸದಸ್ಯರು, ಸಹಪಾಠಿಗಳು ಸಮಾಜದ ಇತರರೊಂದಿಗೆ ಎಳವೆಯಿಂದಲೇ ಹಲವಾರು ಭಾಷಿಕ ಸಾಮರ್ಥಗಳನ್ನು […]

ಬಾಲ್ಯದ ದೀಪಾವಳಿ

ಅಪ್ಪ ಸಿಡಿಸಿದ ಪಟಾಕಿ ಸಿಂಧು ಭಾರ್ಗವ್. ದೀಪಾವಳಿ ಬಂತೆಂದರೆ ಎಲ್ಲಿಲ್ಲದ ಸಂಭ್ರಮ, ಸಡಗರ. ಪುಟಾಣಿಗಳಿಗೆ ಹೊಸ ಝಯಿತಾರಿ ಅಂಗಿ ಕೊಡಿಸುವರು. ಬೊಗಸೆ ತುಂಬಾ ಸಿಹಿಯನ್ನು ನೀಡುವರು. ಯಾರ ಮನೆಗೆ ಹೋದರೂ ಸಿಹಿತಿಂಡಿ ನೀಡಿ ಆ ಪುಟ್ಟ ಮಕ್ಕಳ ಖುಷಿಯನ್ನು ತಾವೂ ಅನುಭವಿಸುವರು. ಅದಲ್ಲದೇ ಇದಕ್ಕಿಂತ ಹೆಚ್ಚೆಂದರೆ ಅಪ್ಪ ಪಟಾಕಿ ತರುವುದು ಮಕ್ಕಳಿಗೆ ಎಲ್ಲಿಲ್ಲದ ಖುಷಿ. ಕುಣಿದು ಕುಪ್ಪಳಿಸುತ್ತಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಕಟ್ಟಡಗಳ ಹಾವಳಿಯೇ ವಿನಃ, ಮಕ್ಕಳಿಗೆ ಆಡಲು ಅನುಕೂಲವಾಗುವಂತಹ ವಾತಾವರಣ ಕಡಿಮೆ. ಆದರೂ ಈ ದೀಪಾವಳಿ ಹಬ್ಬ […]

ಲೇಖನ

ಆ ದೃಶ್ಯಗಳನ್ನು ಅಲಂಕರಿಸಿ ಹಂಚುತ್ತಿದ್ದಾರೆ! ಪಿಎಂ ಇಕ್ಬಾಲ್ ಕೈರಂಗಳ ಕೆಲವು ದೌರ್ಜನ್ಯದ ವಾರ್ತೆಗಳು, ವೀಡಿಯೋಗಳು FB ಮತ್ತು ವಾಟ್ಸಪಲ್ಲಿ ಷೇರು ಆಗಿ ನಮ್ಮ ಕಣ್ಣಿಗೆ ಬೀಳುತ್ತಿರುವುತ್ತವೆ. ನೋಡಕ್ಕಾಗದೇ ನೋಡುತ್ತೇವೆ. ಆಗೆಲ್ಲಾ ಮನಸ್ಸು ವಿಪರೀತ ಹರ್ಟುಗೊಳ್ಳುತ್ತದೆ. ಹೃದಯವನ್ನು ಯಾರೋ ಹಿಂಡಿದಂತಾಗುತ್ತದೆ. ಕೆಲವು ನಮ್ಮನ್ನು ಅಳಿಸಿಯೇ ಬಿಡುತ್ತವೆ. ವಿಕೃತ ಮನಸ್ಸಿನ ಪೈಶಾಚಿಕ ಮನುಷ್ಯರ ವಿರುದ್ಧ ರಕ್ತ ಕುದಿಯುತ್ತದೆ. ಅವರನ್ನು ಜೀವಂತ ಸುಡಬೇಕೆಂದು ಅನಿಸುತ್ತದೆ. ಕ್ರೌರ್ಯ, ದೌರ್ಜನ್ಯಗಳ ತಾಕತ್ತೇ ಹಾಗೆ. ಒಂದೆರಡು ನಿಮಿಷದ ವಾರ್ತೆಯಾಗಿ ಅಥವಾ ವೀಡಿಯೋ ಆಗಿ ಸಿಕ್ಕರೆ ನಮಗೆ […]

Back To Top