Category: ಇತರೆ

ಇತರೆ

ಕಾನೂನು, ಮಹಿಳೆ ಮತ್ತು ಅರಿವು

ಅಂಜಲಿ ರಾಮಣ್ಣ ಬರೆಯುತ್ತಾರೆ
ಇದು ನನಗೆ ಕಲಿಸಿದ್ದು ಎರಡು ಪಾಠ. ಒಂದು ಹೆಂಗಸು ಮನಸ್ಸು ಮಾಡಿದರೆ, ಬುದ್ಧಿಯ ಮೂಲಕ ಗಳಿಸಿಕೊಂಡ ಆತ್ಮವಿಶ್ವಾಸ ಇದ್ದರೆ ಯಾರದ್ದೇ ಆಗಿರಲಿ, ಯಾವುದೇ ರೀತಿಯ ಮುಜುಗರವನ್ನು ಹೋಗಲಾಡಿಸಬಲ್ಲಳು

ನೀರು ಕುಡಿಯಿರಿ

ಲೇಖನ ನೀರು ಕುಡಿಯಿರಿ ಆಶಾ ಸಿದ್ದಲಿಂಗಯ್ಯ ಜನರು ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನೀರನ್ನು ಕುಡಿಯುವುದೇ ಮರೆತಿದ್ದಾರೆ ಆದರೆ ನೀರು ಆರೋಗ್ಯಕ್ಕೆ ಅತ್ಯವಶ್ಯಕ.. ನಮ್ಮ ಉಳಿವಿಗಾಗಿ ನೀರು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಬಾಯಾರಿಕೆಯನ್ನು ನೀಗಿಸುವುದಕ್ಕೆ ಮಾತ್ರವಲ್ಲ, ದೇಹ ಸರಿಯಾಗಿ ಕೆಲಸ ಮಾಡಲು ಹಾಗೂ ರೋಗ ಮುಕ್ತವಾಗಿಡಲು ನೀರು ಅಗತ್ಯ. ದೇಹದ ತೂಕ ಇಳಿಸಲು ಸಹ ನೀರು ಕುಡಿಯುವುದು ಸಹಾಯಕಾರಿ. ಬಿಸಿನೀರು ಕುಡಿದರೆ ದೇಹದ ತೂಕ ಕಡಿಮೆ ಆಗಲು ಸಹಾಯ ಆಗುತ್ತಾ? ನಮ್ಮ ದೇಹದ ಸುಮಾರು 70% […]

ಪ್ರತಿಫಲ

ಮಕ್ಕಳ ಕಥೆ ಪ್ರತಿಫಲ ಬಸವರಾಜ ಕಾಸೆ ದಿನವೂ ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿ ಅದನ್ನು ಬರೆದುಕೊಂಡು ಬರಬೇಕು ಎಂದು ಕ್ಲಾಸ್ ಟೀಚರ್ ಹೇಳುತ್ತಿದ್ದರು. ಆದರೆ ಅವಕಾಶ ಇದ್ದಾಗಲೂ ಅಂತಹ ಕೆಲಸವನ್ನು ಯಾವ ಮಕ್ಕಳು ಮಾಡುತ್ತಿರಲಿಲ್ಲ. ಅದರಲ್ಲಿ ವಿಶೇಷವಾಗಿ ಚೂಟಿ ಮಾಡುತ್ತಾನೆ ಇರಲಿಲ್ಲ. ಆದರೆ ದಿನವೂ “ಇಂದು ರಸ್ತೆಯಲ್ಲಿ ಬಿದ್ದ ಮುಳ್ಳು ತೆಗೆದು ಹಾಕಿದೆ”, “ಕಲ್ಲು ತೆಗೆದು ಹಾಕಿದೆ”, “ವೃದ್ಧರಿಗೆ ರಸ್ತೆ ದಾಟಲು ಸಹಾಯ ಮಾಡಿದೆ”, “ಮನೆ ಕಸ ಗುಡಿಸಿದೆ”, “ಅಮ್ಮನಿಗೆ ಅಡುಗೆಯಲ್ಲಿ ನೆರವಾದೆ” ಹೀಗೆ ಸುಮ್ಮಸುಮ್ಮನೆ […]

ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ

ಲಲಿತ ಪ್ರಬಂಧ ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ… ಟಿ.ಎಸ್.ಶ್ರವಣಕುಮಾರಿ ಇಮಾಂ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ’ ಎಂದು ಹೇಳುವಂತೆ ‘ಸಲಾಂ ಸಾಬಿಗೂ ಸಂಕ್ರಾಂತಿಗೂ ಏನು ಸಂಬಂಧ’ ಎಂದು ಹುಬ್ಬೇರಿಸುತ್ತೀರೇನೋ! ಪ್ರತಿ ಸಂಕ್ರಾಂತಿಗೂ ಸಲಾಮನನ್ನು ನೆನಸಿಕೊಳ್ಳದೆ ನನಗೆ ಸಂಕ್ರಾಂತಿ ಹಬ್ಬ ಆಗುವುದೇ ಇಲ್ಲ. ಈಗೊಂದೈವತ್ತು ವರ್ಷಗಳ ಹಿಂದೆ ಜನಸಾಮಾನ್ಯರಿಗೆ ಶಿವಮೊಗ್ಗದಲ್ಲಿ ಸಂಚಾರಕ್ಕೆ ಇದ್ದದ್ದು ಎರಡೇ ರೀತಿ. ಮೊದಲನೆಯದು ನಟರಾಜ ಸರ್ವೀಸ್ ಅಂದರೆ ಕಾಲ್ನಡಿಗೆಯಲ್ಲಿ ಹೋಗುವುದು; ಇನ್ನೊಂದು ಕುದುರೆ ಗಾಡಿ. ಕಾರೆನ್ನುವುದು ಅತಿ ಶ್ರೀಮಂತರ ಸೊತ್ತು ಬಿಡಿ; ನಮದಲ್ಲ. ಊರಲ್ಲಿ […]

ಇನ್ವಿಕ್ಟಸ್ ಮತ್ತು ಮಂಡೇಲಾ

ಲೇಖನ ಇನ್ವಿಕ್ಟಸ್ ಮತ್ತು ಮಂಡೇಲಾ ರಶ್ಮಿ ಹೆಗಡೆ ಮುಂಬೈ ಕೆಲವರ ವ್ಯಕ್ತಿತ್ವ ಹಾಗೂ ಸ್ಪೂರ್ತಿದಾಯಕ ಮಾತುಗಳು,ಸಾಧಕರ ಜೀವನಗಾಥೆಗಳು,ಕೆಲವು ಪುಸ್ತಕಗಳು,ಇನ್ನು ಕೆಲವು ಕಾವ್ಯಗಳು ನಮಗೆ ಗುರುವಾಗಿ,ಆದರ್ಶದ ಚಿಲುಮೆಗಳಾಗಿ ಜೀವನದುದ್ದಕ್ಕೂ ಪ್ರೇರೇಪಿಸುತ್ತವೆ. ಕೆಲವು ಕಾವ್ಯಗಳಂತೂ ಉತ್ಕೃಷ್ಟತೆಯ ಎಲ್ಲೆಯನ್ನು ಮೀರಿ ಬೆಳೆಯುತ್ತವೆ. ಬದುಕಿನ ಅಂಕುಡೊಂಕಿನ ದಾರಿಯಲ್ಲಿ  ಹಾದಿ ತಪ್ಪದಂತೆ ಮುನ್ನಡೆಸಿ,ಸಂಕಟದ ಸಮಯದಲ್ಲಿ ಧೈರ್ಯ,ನೆಮ್ಮದಿ ನೀಡಿ ಚಿಕಿತ್ಸೆಯ ರೂಪದಲ್ಲಿ ಕಾಪಾಡುತ್ತವೆ. ಉತ್ಕೃಷ್ಟವಾದ ಸಾಹಿತ್ಯ ಹಾಗೂ ಪುಸ್ತಕಗಳು ಮನುಷ್ಯನ ಯೋಚನಾಲಹರಿಯನ್ನೇ ಬದಲಿಸಬಲ್ಲದು. ಶಬ್ದಗಳು ಖಡ್ಗಕ್ಕಿಂತ ಹರಿತವಾದದ್ದು ಎನ್ನುವುದು ಸತ್ಯ. ಹೀಗೆಯೇ ಒಂದು ಪುಸ್ತಕ ಒಬ್ಬ […]

ಎದಿಹಿಗ್ಗು ಕಡೆತನಕ.

ಭಾವಲಹರಿ. ಎದಿಹಿಗ್ಗು ಕಡೆತನಕ. ರಶ್ಮಿ .ಎಸ್. ಅಳಬಾರ್ದು ಅಂತ ನಿರ್ಧಾರ ಮಾಡೇನಿ ಅಕ್ಕ. ಆಮ್ಯಾಲೆ ಕಣ್ಣೀರು ತಂದಿಲ್ಲ. ಕಂಠ ಮೀರಿ ದುಖ್ಖಿಸಿಲ್ಲ. ಬಿಕ್ಕಿಲ್ಲ’. ‘ತ್ರಾಸು ಆಗ್ತದ. ಆದ್ರ ಅಳೂದ್ರಿಂದ ಸಂದರ್ಭ ಇರೂದಕ್ಕಿಂತ ಬ್ಯಾರೆ ಏನಾಗೂದಿಲ್ಲ. ಇಡೀ ಪರಿಸ್ಥಿತಿಯನ್ನಂತೂ ಬದಲಸಾಕ ಆಗೂದಿಲ್ಲ. ಅದಕ್ಕೆ ಅಳಬಾರ್ದು ಅಂತ ಮಾಡೇನಿ’. ನಮ್ಮ ಚಿಗವ್ವ ನಮ್ಮಮ್ಮಗ ಹೇಳ್ತಿದ್ಲು. ಮನಿ ಹಿತ್ತಲದಾಗ ಬೇವಿನ ಮರಕ್ಕ ಕಟ್ಟಿದ್ದ ಜೋಕಾಲಿಯೊಳಗ ತೂಗಕೊಂತ ಕುಂತ ಚಿಕ್ಕಮ್ಮ ಆಗಲೇ ೫ ದಶಕ ನೋಡ್ದಕ್ಕಿ. ನಮ್ಮಮ್ಮ ೬. ಬ್ಯಾಸಗಿ ಝಳ ತಾಕಲಾರ್ದ […]

ಹಿಮಾಲಯ ಪರ್ವತ ಶ್ರೇಣಿಗಳು”

ಲೇಖನ ಹಿಮಾಲಯ ಪರ್ವತ ಶ್ರೇಣಿಗಳು” ಆಶಾ ಸಿದ್ದಲಿಂಗಯ್ಯ ಸಿಂಧೂ ನದಿಯ ಬಯಲಿನಲ್ಲಿ ಸಂಸ್ಕೃತಿ ರೂಪುಗೊಳ್ಳುವ ಮೊದಲೇ ಗೊಂಡಿ ಭಾಷೆಯಿತ್ತು ಎನ್ನುವ ಮಾತು ಹೆಚ್ಚು ಮುಖ್ಯವಾಗುತ್ತದೆ. ಹಲವು ಲಕ್ಷ ವರ್ಷಗಳ ಹಿಂದೆ ಈಗಿನ ದಕ್ಷಿಣ ಅಮೆರಿಕ, ದಕ್ಷಿಣ ಆಫ್ರಿಕಾ, ಏಷ್ಯಾ ಖಂಡದ ದಕ್ಷಿಣ ಭಾಗ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಅಂಟಾರ್ಟಿಕಾಗಳು ಕೂಡಿದ್ದ ಭೂಭಾಗವಿತ್ತು. ಅದನ್ನು ಗೊಂಡ್ವಾನ ಎಂದು ಕರೆಯುತ್ತಿದ್ದರು. ಭಾರತದ ವಿಂಧ್ಯ ಪರ್ವತ ಶ್ರೇಣಿಯ ದಕ್ಷಿಣ ಭಾಗ ಅಂದರೆ ದಕ್ಷಿಣ ಭಾರತದ ಪ್ರಸ್ಥಭೂಮಿ ಗೊಂಡ್ವಾನ ಪ್ರದೇಶದ ಭಾಗವಾಗಿತ್ತು. ಅಲ್ಲಿ […]

ಮಾತು ಮನವನ್ನು ಅರಳಿಸಬೇಕು

ಲೇಖನ ಮಾತು ಮನವನ್ನು ಅರಳಿಸಬೇಕು ಮಾಲಾ ಕಮಲಾಪುರ್ ಭಾಷೆ ಮನುಷ್ಯನಿಗೆ  ಲಭಿಸಿದ ದೈವ ದತ್ತ ವರ ವಾದರೆ ಮಾತು ನಮ್ಮ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಮೂಲಕ ಅಮೂಲ್ಯ ಸಾಧನ ಆಗಿದೆ. ಮಾತು ನಮ್ಮ ಬದುಕನ್ನು ಕಟ್ಟುತ್ತದೆ. ಇದು ವ್ಯಕ್ತಿಯ  ಬಿಚ್ಚಿಡುವ ಪಾರಿಜಾತದ ಪರಿಮಳದಂತೆ. ನಾವಾಡುವ ಮಾತು ಪುಷ್ಪದ ದಳದಂತೆ. ಮಾತಿನ ಬಳಕೆ  ಬಲ್ಲವರು ಮಾಣಿಕ್ಕ್ಯ ತರುತ್ತಾರೆ. ಬಳಿಕೆ ಅರಿಯದವರು ಜಗಳ ತರುತ್ತಾರೆ.ಮನುಷ್ಯನು  ಯಾವುದೇ ಲೌಕಿಕ ವಾದ ವಸ್ತು ಗಳಿಂದ ಅಲಂಕಾರ ಮಾಡಿಕೊಂಡರು ಶೋಭಿಸುವುದಿಲ್ಲ. ಆದರೆ ಒಳ್ಳೆಯ ಮಾತು ಮತ್ತು […]

ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ

ಲೇಖನ ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಡಾ.ಸುಜಾತಾ.ಸಿ.                                     “ನೀನು ನಂಗೊAದು ರೊಟ್ಟಿ ಕೊಟ್ರೆ                                     ಒಂದು ದಿವ್ಸ ಹಸಿವನ್ನ ತೀರಿಸ್ದಂಗೆ                                     ರೊಟ್ಟಿಗಳಿಸೋದು ಹೆಂಗೇAತ ಕಲಿಸಿದ್ರೆ                                     ಗಳಿಸೋ ಅವಕಾಶ ಕಿತ್ಕಳೋ ತಂಕ                                     ನನ್ನ ಹಸಿವನ್ನ ತೀರ್ಸಿದಂಗೆ                                     ಅದೇ ನಿನೇನಾದ್ರೂ ವಿದ್ಯೆ ಕಲ್ಸಿ                                     ಒಗ್ಗಟ್ಟಾಗಿ ಹೋರಾಡೋದು ಕಲ್ಸಿದ್ಯಾ?                                     ಏನ್ಬೇಕಾದ್ರೂ ಆಗ್ಲಿ, ಯಾವ ಕಷ್ಟನಾದ್ರೂ ಬರಲಿ                                     ಎಲ್ಲ ಒಟ್ ಸೇರಿ                                     ನಮ್ ದಾರಿ ನಾವು […]

ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ?

ಲೇಖನ ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ? ಆಶಾ ಸಿದ್ದಲಿಂಗಯ್ಯ ತರಕಾರಿ ಎಂಬುದು ಸಾಮಾನ್ಯವಾಗಿ ಹಣ್ಣುಗಳನ್ನು ಹೊರತಾಗಿ ಅಹಾರವಾಗಿ ಉಪಯೋಗಿಸಲಾಗುವ ಸಸ್ಯಗಳ ಭಾಗಗಳು. ಮಳೆಗಾಲದ ತರಕಾರಿಗಳು : ಟೊಮೊಟೊ, ಬೆಂಡೆ, ಬದನೆ, ಹುರುಳಿ, ತಿಂಗಳ ಹುರಳಿ, ಗೆಣಸು, ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, ಹಾಗಲ, ಮೂಲಂಗಿ ಮುಂತಾದುವುಗಳು. ಚಳಿಗಾಲದ ತರಕಾರಿಗಳು: ಕ್ಯಾಬೇಜ್, ಹೂವುಕೋಸು, ಗಜ್ಜರಿ, ಬಟಾಣಿ, ಈರುಳ್ಳಿ, ಆಲೂಗಡ್ಡೆ, ಮೂಲಂಗಿ, ಟರ್ನಿಪ್, ಸೊಪ್ಪು ತರಕಾರಿ ಮುಂತಾದುವುಗಳು. ಬೇಸಿಗೆ ತರಕಾರಿಗಳು : ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, […]

Back To Top