ಪ್ರಸ್ತುತ
ಪ್ರಕೃತಿ ಹೇಳಿದ ಪಾಠ ಗಣೇಶ್ ಭಟ್ ಕೊರೊನಾ ಮುಖಾಂತರ ಪ್ರಕೃತಿ ಹೇಳಿದ ಪಾಠ ವ್ಯಕ್ತಿ ಅಥವಾ ಸಮುದಾಯದ ಬದುಕಿನಲ್ಲಿ ನಡೆಯುವ ಯಾವ ಘಟನೆಯೂ ಆಕಸ್ಮಿಕವಲ್ಲ. ಪ್ರತಿಯೊಂದಕ್ಕೂ ಒಂದು ಕಾರಣವಿರುತ್ತದೆ; ಅದು ತಿಳಿಯದಾಗ ನಾವು ಆಕಸ್ಮಿಕ ಎಂದು ಹೇಳುತ್ತೇವೆ ಅಥವಾ ಹಾಗೆ ಭಾವಿಸುತ್ತೇವೆ. ಇಡೀ ಮಾನವ ಕುಲವನ್ನು ನಡುಗಿಸುತ್ತಿರುವ ಕೊರೊನಾ ಸಾಂಕ್ರಾಮಿಕ ಪಿಡುಗೂ ಕೂಡಾ ಆಕಸ್ಮಿಕವಲ್ಲ. ಪ್ರಕೃತಿಯ ಮೇಲೆ ಮಾನವ ನಡೆಸಿದ, ನಡೆಸುತ್ತಿರುವ ದೌರ್ಜನ್ಯದ ಪ್ರತಿಕ್ರಿಯೆ ಅಷ್ಟೇ. ಕಳೆದ ಮೂರು ಶತಮಾನಗಳಿಂದ ಮಾನವ ನಿರ್ಮಿಸಿಕೊಂಡಿದ್ದ ಆರೋಗ್ಯ ಸೌಲಭ್ಯಗಳು, ಆಧುನಿಕ […]
ಭೂಮಿ ದಿನ
ಭೂದೇವಿ ಡಾ: ಪ್ರಸನ್ನ ಹೆಗಡೆ ಕಾಣದ ದೇವರ ಹುಡುಕುವೆ ಏಕೋ ಕಾಣುವ ದೇವತೆ ಈ ಭೂಮಿ ನಾವೆಲ್ಲರೂ ಇರುವಾ ನಮ್ಮೆಲ್ಲರ ಹೊರುವಾ ಪ್ರತ್ಯಕ್ಷ ದೇವತೆ ಈ ಧರಣಿ ಗಂಧದ ಕಾಡನು ಜೇನಿನ ಗೂಡನು ಕರುಣಿಪ ದೇವತೆ ಈ ಧರಣಿ ತಣ್ಣನೆ ಹೊನಲನು ತುಂಬಿದ ಹೊಲವನು ಹೊತ್ತಿಹ ದೇವತೆ ಈ ತರುಣಿ ಏನು ಬಿತ್ತಿದರೂ ಬೆಳೆಯನು ಕೊಡುವಾ ಅಕ್ಷಯ ಪಾತ್ರೆಯೇ ಈ ಭೂಮಿ ಸಾವಿರ ತಪ್ಗಳ ನಗುತಾ ಕ್ಷಮಿಸುವ ಕ್ಷಮಾಧಾತ್ರಿಯೆ ಈ ಭೂಮಿ ಒದೆಯುವ ಕಾಲ್ಗಳ ಜರಿಯದೆ ಇರಿಯದೆ […]
ಪ್ರಸ್ತುತ
ಆತಂಕಗಳ ಸರಮಾಲೆ ರೇಷ್ಮಾ ಕಂದಕೂರ ಮಗು ಎಂಬುದು ದೈವಿಕ ಶಕ್ತಿ .ಮಗುವಿನಲ್ಲಿ ಅವ್ಯಕ್ತ ಭಯ ಭಾವನೆಗಳು ಆತಂಕ ಇದ್ದೇ ಇರುತ್ತದೆ . ಕೆಲವು ಪೋಷಕರಿಗೆ ಇದರ ಅರಿವು ಇರುತ್ತದೆ,ಕೆಲವರಿಗೆ ಇರುವುದಿಲ್ಲ,ಮಕ್ಕಳ ಆತಂಕಕ್ಕೆ ಕಾರಣಗಳೇನು? ಆ ಕಾರಣಗಳ ಮೂಲ ಏನು ಎಂಬುದು ತಿಳಿಯದೇ ಮಕ್ಕಳು ಹೆದರಿಕೊಳ್ಳುವರು ಏಕೆ ಹೀಗೇಕೆ ಎಂಬ ಪ್ರಶ್ನೆ ಕಾಡತೊಡಗುತ್ತದೆ.ಮಕ್ಕಳ ವರ್ತನೆ ಬದಲಾಗುವ ರೀತಿ ಕಂಡು ಒಳಗೊಳಗೆ ಕೊರಗುತ್ತಾರೆ. ಇದರಿಂದ ಮಗು ಕೂಡ ತಂದೆ ತಾಯಿಯ ತಿರಸ್ಕಾರಕ್ಕೆ ಒಳಗಾಗುತ್ತದೆ. ನಾನು ಪರಿತ್ಯಕ್ತ ಎಂಬ ಭಾವನೆ […]
ಚರ್ಚೆ
ಕನ್ನಡ ಸಂಸ್ಕೃತಿಯ ಕಡೆಗಣನೆ ಮಲ್ಲಿಕಾರ್ಜುನ ಕಡಕೋಳ ಹೊಸ ಸರ್ಕಾರಗಳು ರಚನೆಯಾಗುವಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ “ಮಂತ್ರಿಗಿರಿ” ಯಾರೂ ಬಯಸುವುದಿಲ್ಲ. ಇಲ್ಲವೇ ಅದಕ್ಕಾಗಿ ಪೈಪೋಟಿ ಇರುವುದೇ ಇಲ್ಲ. ಸಾಮಾನ್ಯವಾಗಿ ಪವರ್ಫುಲ್ ರಾಜಕಾರಣಿಗಳಿಗಂತೂ ಅದು ಬೇಡದ ಇಲಾಖೆಯೇ ಆಗಿರ್ತದೆ. ಇದುವರೆಗೂ ಯಾರೊಬ್ಬರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ ಬೇಕೆಂದು ಬಯಸಿ, ಹಟ ಹಿಡಿದು ಮಂತ್ರಿಯಾದ ಉದಾಹರಣೆಗಳಿಲ್ಲ. ಹೀಗೆ ಬಹುಪಾಲು ಮಂದಿ ವೃತ್ತಿಪರ ರಾಜಕಾರಣಿಗಳಿಗೆ ಬೇಡವಾದ ಇಲಾಖೆ ಇದು. ಅಷ್ಟಕ್ಕೂ ಕಾಟಾಚಾರಕ್ಕೆ ಮಂತ್ರಿಯಾಗಿ ಬಂದವರಿಂದ ಇಲಾಖೆಗೆ ನ್ಯಾಯ ದೊರಕೀತಾದರೂ ಹೇಗೆ […]
ಪ್ರಸ್ತುತ
ಇದು ಲಾಕ್ಡೌನ್ ಸಮಯ ರೇಶ್ಮಾ ಗುಳೇದಗುಡ್ಡಾಕರ್ ಕರೋನಾದ ತಲ್ಲಣ ದಿನದಿನಕ್ಕೂ ಅಗಾಧವಾಗಿ ವ್ಯಾಪಿಸುತ್ತಿದೆ . ಲಾಕ್ ಡೌನ್ ನಿಂದ ಸೀಲ್ ಡೌನ್ಗೆ ನಾವು ಸಿದ್ದರಾಗುತ್ತಿದ್ದೇವೆ . ಪ್ರಾಣಿಗಳು ಸ್ವಚ್ಚಂದವಾಗಿ ಸಂಚರಿಸುತ್ತಾ ತಮ್ಮ ಸ್ವಾತಂತ್ರ್ಯ ಅನುಭವಿಸುತ್ತಿವೆ. ಮತ್ತೊಂದೆಡೆ ಇಡೀ ದೇಶದಲ್ಲೇ ವಾಯುಮಾಲಿನ್ಯ ಗಣನೀಯವಾಗಿ ತಗ್ಗಿದೆ.!! ನಮ್ಮ ರಾಷ್ಟ್ರದ ರಾಜಧಾನಿ ದೆಹಲಿ ಒಂದು ಕಾಲದಲ್ಲಿ ಹವಾಮಾನ ವೈಪರೀತ್ಯದಿಂದ ತತ್ತರಿಸಿ ಹೋಗಿತ್ತು .ಈಗ ಅದು ಹಳೆ ಮಾತು ಬಿಡಿ . ಮಹಾನಗರಿಗಳು ಮೌನವಾಗಿವೆ. ಸದಾ ಜನಜಂಗುಳಿಯಿಂದ ಕೂಡಿ ನಿಶ್ಯಬ್ದತೆಯನ್ನು ಮರೆತ ನಗರಿಗಳು […]
ಗೊಂಬೆಯೇ ಏನು ನಿನ್ನ ಮಹಿಮೆಯೇ?
ಗೊಂಬೆಯೇ ಏನು ನಿನ್ನ ಮಹಿಮೆಯೇ? ನಾಗರೇಖಾ ಗಾಂವಕರ್ ಗೊಂಬೆಯೇ ಏನು ನಿನ್ನ ಮಹಿಮೆಯೇ? ಆಕೆ ಮುದ್ದು ಮುದ್ದಾದ ಗೊಂಬೆ. ಎಂಥ ಚೆಂದ ಅಂದ. ಅದೆಂತಹ ನುಣುಪು.. ಒನಪು.. ನವಿರು ಹೊಂಬಣ್ಣದ ಮೈಗಂಪು. ಗೊಂಬೆ ಬಂಗಾರದ ಗೊಂಬೆ. ಹೀಗೆ ಹೇಳುವುದು ಸುಂದರವಾದ ಹುಡುಗಿಗೆ ಮಾತ್ರ ಎಂಬುದು ನನಗೆ ಸುಮಾರು ಏಳೆಂಟು ವರ್ಷಗಳಾದಾಗ ಅರಿವಾಗತೊಡಗಿತ್ತು. ಆದರೆ ನನ್ನ ಒಂದೇ ದುಃಖ ನನಗ್ಯಾರೂ ಹಾಗೇ ಕರೆಯುತ್ತಲೇ ಇಲ್ಲವಲ್ಲ ಎಂಬ ಕೊರಗು. ಹತ್ತು ಹಲವು ಬಾರಿ ನನ್ನ ಅಕ್ಕಂದಿರಿಗೆ ಆ ಪದವಿ ಸಿಕ್ಕಾಗಲೆಲ್ಲಾ […]
ಪ್ರಸ್ತುತ
ಮೊಬೈಲ್ ಡೆವಿಲ್ ಆದೀತು ಜೋಕೆ:– ವಿದ್ಯಾ ಶ್ರೀ ಬಿ. ಮೊಬೈಲ್ ಡೆವಿಲ್ ಆದೀತು ಜೋಕೆ. ಮಾನವ ಇಂದು ನಾಗರಿಕತೆಯ ಕಡೆ ಭರದಿಂದ ಸಾಗಿದ್ದಾನೆ. ಹಿಂದೆ ಅನಾಗರೀಕನಾಗಿದ್ದ ಅವನಲ್ಲಿ ಆದಿಮಾನವನಿದ್ದ. ಈಗ ನಾಗರಿಕನಾಗಿದ್ದಾನೆ, ಗ್ರಹದಿಂದ ಗ್ರಹಕ್ಕೆ ಹೋಗಿ ಬರುತ್ತಿದ್ದಾನೆ. ಸಮುದ್ರದ ಆಳವನ್ನು ಕೊರೆದಿದ್ದಾನೆ. ಭೂಮಿಯ ಒಡಲನ್ನು ಬರಿದು ಮಾಡಿದ್ದಾನೆ, ಕಾಂಕ್ರೀಟ್ ಜಂಗಲ್ ಸೃಷ್ಟಿಸಿದ್ದಾನೆ .ಕನಸಿನ ಕೂಸಾದ ಕಂಪ್ಯೂಟರ್ ನಿರ್ಮಿಸಿ ಬಿಡುತ್ತಿದ್ದಾನೆ. ಶಸ್ತ್ರಾಸ್ತ್ರ ಅಣ್ವಸ್ತ್ರದ ಜನಕನೂ ಆಗಿದ್ದಾನೆ. ರೋಬೋಟ್ ಮಾನವ ಕ್ಲೋನಿಂಗ್ ತಳಿಯ ಸೃಷ್ಟಿಕರ್ತನಾಗಿ ಹೀಗೇ ಅವನ ಮಹತ್ತರ ಸಾಧನೆಯನ್ನು […]
ಅವನಿಗೆ ನಾಳೆ ಬಾ ಎನ್ನಿ
ಕೊರೋನಾ ಅವನಿಗೆ ನಾಳೆ ಬಾ ಎನ್ನಿ ಡಿ.ಯಶೋದಾ ಕೊರೋನಾ ಅವನಿಗೆ ನಾಳೆ ಬಾ ಎನ್ನಿ ಇತ್ತೀಚೆಗೆ ಪ್ರತಿದಿವಸ ಅವನು ಕನಸಿನಲ್ಲಿ ಬರುತ್ತಾನೆ, ತನ್ನ ಜೊತೆ ಬಂದುಬಿಡು ಎಂದು ಬಲವಂತ ಮಾಡುತ್ತಾನೆ, ನನಗೂ ಅವನೊಂದಿಗೆ ಹೋಗಿಬಿಡುವ ಮನಸ್ಸಾಗುತ್ತಿದೆ.ನಿಜ ಹೇಳಬೇಕೆಂದರೆ ಹಗಲೆಲ್ಲಾ ಅವನನ್ನೇ ನೆನಪಿಸಿಕೊಳ್ಳುತ್ತಿರುತ್ತೇನೆ, ಇರುಳಲ್ಲಿ ಅವನು ಬಂದು ಕರೆಯುತ್ತಾನೆ. ಇಲ್ಲಿ ಇದ್ದು ನಾನು ಮಾಡುವುದಾದರೂ ಏನಿದೆ? ಹೋಗಿಬಿಡಲೇ?…ಹೋಗಿಬಿಡಲೇ ಎಂದು ಕೇಳುವ ಆಕೆಯಮನಸ್ಸು ಅರ್ಥವಾಗಿತ್ತು ಹಾಗೆಯೇ ನನ್ನ ಮನಸ್ಸುಆರ್ದ್ರವಾಯಿತು.. ಕರೆಯುವವನು ಜೀವ ಕೊಡುವವನಾಗಿದ್ದರೆ ಹೋಗಿಬಿಡು ಎನ್ನಬಹುದಿತ್ತು, ಆದರೆ ಜೀವ ತೆಗೆಯುವವನ […]
ವಿದಾಯ
ಚಂದ್ರಕಾಂತ ಕುಸನೂರು ಖ್ಯಾತ ಸಾಹಿತಿ, ಚಿತ್ರ ಕಲಾವಿದ ಮತ್ತು ಹೈಕು ಗಾರುಡಿಗ ಚಂದ್ರಕಾಂತ ಕುಸನೂರು..! ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ಇಂದು ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯದಲ್ಲಿ ಅಸಂಗತ ನಾಟಕ ಮತ್ತು ಜಪಾನಿ ಮಾದರಿಯ ಹೈಕುಗಳನ್ನು ಪರಿಚಯಿಸಿದ್ದರು ಅವರು. ಹೈಕು ಮಾದರಿಯ ಕವಿತೆಗಳನ್ನು ಸಹ ಕನ್ನಡಕ್ಕೆ ಪರಿಚಯಿಸಿದ್ದರು… ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಕಲಬುರಗಿ […]
ಪ್ರಸ್ತುತ
ಕೋರೋನದ ತಲ್ಲಣಗಳು ಎನ್ . ಶೈಲಜಾ ಹಾಸನ, ಕೋರೋನದ ತಲ್ಲಣಗಳು ಸರಾಗವಾಗಿ ಹರಿಯುತ್ತಿದ್ದ ಬದುಕಿನ ಬಂಡಿ ಕನಸಿನಲ್ಲಿಯೂ ನೆನೆಸದಂತೆ ನಿಂತು ಬಿಟ್ಟಿತು.ಅದೇನಾಗಿ ಹೋಯಿತೋ,ಕಂಡರಿಯದ ವೈರಾಣವೊಂದು ಇಡಿ ಪ್ರಪಂಚವನ್ನೆ ತಲ್ಲಣಗೊಳಿಸಿಬಿಟ್ಟಿದೆ. ದೂರದ ಅದ್ಯಾವುದೋ ದೇಶದಲ್ಲಿ ಅದೆಷ್ಟೋ ಪ್ರಾಣಗಳನ್ನು ತೆಗೆಯುತ್ತಿದೆ , ಅದೆಷ್ಟೋ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ ಅಂತೆ ಅಂತ ದೃಶ್ಯ ಮಾಧ್ಯಮಗಳಲ್ಲಿ ನೋಡುತ್ತಾ ಅಯ್ಯೋ ಪಾಪ ಅಂತ ಕನಿಕರ ಪಡುತ್ತಿರುವಾಗಲೆ ದಿಢೀರನೆ ನಮ್ಮ ದೇಶಕ್ಕೂ ಆ ಕ್ಷುದ್ರ ವೈರಸ್ ಬಂದು ಅಪ್ಪಳಿಸಿದೆ ಅಂತ ಗೊತ್ತಾದಾಗ ದಿಗಿಲು […]