Category: ಇತರೆ

ಇತರೆ

‘ಅಲ್ಲಾ ಗುರೂಜಿ, ಇದೇನಿದು..? ಇಷ್ಟು ವರ್ಷಗಳ ಕಾಲ ಬೊಂಬೈಯಲ್ಲಿದ್ದು ಬಂದವರು ನೀವು ಏನೂ ಮಾಡಲಿಲ್ಲವಾ!?’ ಎಂದು ಬಾಯಿ ತಪ್ಪಿ ಅಂದವನು ತಕ್ಷಣ ನಾಲಗೆ ಕಚ್ಚಿಕೊಂಡ. ಆದರೆ ಬಳಿಕ ಅದನ್ನೇ ಸಮರ್ಥಿಸಿಕೊಂಡಂತೆ ಅವರನ್ನು ದಿಟ್ಟಿಸಿದ. ಅಷ್ಟು ಕೇಳಿದ ಏಕನಾಥರಿಗೆ ಅಲ್ಲೇ ಸತ್ತವಷ್ಟು ಹಿಂಸೆಯಾಯಿತು.

ಶಾಲೆಯಲ್ಲಿ ಸಿಹಿ-ಕಹಿ

ಮಕ್ಕಳ ಅನುಭವ ಕಥನ ಶಾಲೆಯಲ್ಲಿ ಸಿಹಿ-ಕಹಿ ವಿಜಯಶ್ರೀ ಹಾಲಾಡಿ ವಿಜಿಯ ಬಾಲ್ಯದ ಆ ದಿನಗಳಳ್ಲಿ ಮತ್ತು ಅದಕ್ಕೂ ಹಿಂದೆಲ್ಲ ಮಕ್ಕಳನ್ನು ಶಾಲೆಗೆ ಕಳಿಸಿಯೇ ತೀರಬೇಕೆಂಬ ದೊಡ್ಡ ಆಸೆ  ಮನೆಯವರಿಗೆ ಇರಲಿಲ್ಲ.  ಹೆಚ್ಚು ಕೇಳಿದರೆ, ಮಕ್ಕಳು ಶಾಲೆಗೆ ಹೋಗುವುದೇ ಬೇಡ, ಮನೆಯಲ್ಲೇ ಕೆಲಸ ಮಾಡಿಕೊಂಡಿರಲಿ ಎಂದು ಬಹುತೇಕ ಹಿರಿಯರ ಅಭಿಪ್ರಾಯವಾಗಿತ್ತು. ಅವರ ಹಳ್ಳಿಯಲ್ಲಿ ದೂರ ದೂರ ಮನೆಗಳು. ರಸ್ತೆಯಿಂದ, ಬಸ್ಸಿನ ಸಂಪರ್ಕದಿಂದ ಬಹು ದೂರ ಕಾಡು, ಗುಡ್ಡ, ಬಯಲುಗಳಲ್ಲಿ ಹುದುಗಿದ ಮನೆಗಳೇ ಜಾಸ್ತಿ. ಶಾಲೆಗಳ ಸಂಖ್ಯೆಯೂ ಆಗ ಕಡಿಮೆಯಿತ್ತು. […]

ವಾರದ ಕಥೆ ಅರಿವು ಮಧುರಾ ಕರ್ಣಮ್               ಮೊದಲೇ  ಹೇಳಿಬಿಡುತ್ತೇನೆ.  ನಾನೊಬ್ಬ  ಗುಮಾಸ್ತ.  ಪ್ರೆöÊವೇಟ್  ಕಂಪನಿಯಲ್ಲಿ  ಕಾರಕೂನ.  ಮಧ್ಯಮ  ವರ್ಗದ  ಬದುಕು.  ತೀರಾ  ಕೆಳ  ಮಧ್ಯಮ  ವರ್ಗದ  ಜೀವನವನ್ನು  ಮಧ್ಯಮ ವರ್ಗದ ಸನಿಹಕ್ಕೆ ಅಪ್ಪ-ಅಮ್ಮ ಎಳೆದು ತಂದು ನಿಲ್ಲಿಸಿದರೆಂದರೂ  ತಪ್ಪಿಲ್ಲ. ಪುಟ್ಟ  ಗುಡಿಸಲಿನಂತಿದ್ದ ಮನೆಯಲ್ಲಿದ್ದು, ಪೈಸೆಗೆ ಪೈಸೆ ಲೆಕ್ಕ ಹಾಕಿ,  ತುತ್ತಿಗೆ ತಾತ್ವಾರ  ಮಾಡಿಕೊಂಡು  ಈ  ಮನೆ  ಕಟ್ಟಿ, ನನಗೆ ಶಿಕ್ಷಣ ಕೊಡಿಸಿ  ಒಂದು  ಮಟ್ಟಕ್ಕೆ ಬಂದರು.  ಹಾಗೆಂದು ಹೇಳಿಕೊಳ್ಳುವ ಹಾಗೆ ದೊಡ್ಡದಲ್ಲ ಮನೆ.  ಎರಡು  […]

ನಿಘಂಟು ತಜ್ಞ, ಶತಾಯುಷಿ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ

ನಿಘಂಟು ತಜ್ಞ, ಶತಾಯುಷಿ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ ಜಿ.ವೆಂಕಟಸುಬ್ಬಯ್ಯನವರ ಬಗೆಗೆ ಮೊನ್ನೆಯೇ ಬರೆಯಬೇಕಿತ್ತು. ಆದರೆ ಕೆಲ ಕಾರಣಗಳಿಂದ ಬರೆಯಲಾಗಿರಲಿಲ್ಲ. ಆ ಬರಹವನ್ನು ಈಗ ಬರೆಯುತ್ತಿದ್ದೇನೆ… 108 ವರ್ಷ ವಯಸ್ಸಾಗಿದ್ದ ನಿಘಂಟು ತಜ್ಞರಾದ ಮತ್ತು ಸಾಹಿತಿಗಳಾದ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಏಪ್ರಿಲ್ 18-19 ಮಧ್ಯರಾತ್ರಿ ಬೆಂಗಳೂರಿನಲ್ಲಿ ತೀರಿದರು. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಮೊನ್ನೆ ಮಧ್ಯರಾತ್ರಿ 1:30 ಕ್ಕೆ ಜಯನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಕೊನೆಯುಸಿರೆಳೆದರು. ಅವರು 1913 ರ, ಆಗಸ್ಟ್ 23 ರಂದು ಮಂಡ್ಯ ಜಿಲ್ಲೆಯ ಶ್ರಿರಂಗಪಟ್ಟಣದ ಗಂಜಾಮ್​ನಲ್ಲಿ […]

ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ

ನೆನಪು ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ ಡಾ. ಅರಕಲಗೂಡು ನೀಲಕಂಠ ಮೂರ್ತಿ ಸರಿಸುಮಾರು ಐದು ದಶಕಗಳ ಹಿಂದಿನ ಸಮಾಚಾರ. ಸಾವಿರದ ಎಪ್ಪತ್ತು ಎಪ್ಪತ್ತೊಂದರ ಸಮಯ. ನನಗೆ ಕರಾರುವಾಕ್ಕಾಗಿ ದಿನಾಂಕ ಮತ್ತು ಮಾಹೆ ಸದ್ಯ ಜ್ಞಾಪಕ ಇಲ್ಲ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ನಾನು ನಾಲ್ಕನೇ ವರ್ಷದಲ್ಲಿ ಓದುತ್ತಿದ್ದಾಗ. ಆ ಕಾಲಕ್ಕೆ ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ, ಅದರಿಂದಾಗಿ ಸಾಂಸ್ಕೃತಿಕ ಚಟುವಟಿಕೆಗಳು ಉತ್ತುಂಗಕ್ಕೆ ಏರಿದ್ದ ಕಾಲ. ಈಗ ಹೇಗೋ ನಾ ಕಾಣೆ. ವಾಸ್ತವವಾಗಿ ವಾರ್ಷಿಕೋತ್ಸವದಲ್ಲಿ ನಾಟಕ ನಿರ್ದೇಶನಕ್ಕೆ ಸಿನಿಮಾ […]

ಚೆಗುವೆರ ಎಂಬ ಮುಗಿಯದ ಪಯಣ

ಕವಿತೆ ಚೆಗುವೆರ ಎಂಬ ಮುಗಿಯದ ಪಯಣ ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು. ಇವರು ಜನಪ್ರಿಯವಾಗಿ ಚೇ ಗುವಾರ, ಎಲ್ ಚೇ ಅಥವ ಬರಿ ಚೇ ಎಂದು ಕರೆಯಲ್ಪಡುತ್ತಾರೆ. ಅರ್ಜೆಂಟೀನಾದಲ್ಲಿ ಹುಟ್ಟಿದ ಮಾರ್ಕ್ಸ್ ವಾದಿ, ಕ್ರಾಂತಿವಾದಿ, ರಾಜಕೀಯ ವ್ಯಕ್ತಿ, ಮತ್ತು ಕ್ಯೂಬ ಮತ್ತು ಅಂತರರಾಷ್ಟ್ರೀಯ ಗೆರಿಲ್ಲಾಗಳ ನಾಯಕ.  ಅವರು ಬ್ಯೂನಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ವೈದ್ಯನಾಗಲು ಕನಸುಕಂಡಿದ್ದ ಆತ ತನ್ನ ರಜಾದಿನಗಳಲ್ಲಿ ಲ್ಯಾಟಿನ್ ಅಮೆರಿಕದ ಉದ್ದಕ್ಕೂ ಪ್ರವಾಸ ಕೈಗೊಂಡಿದ್ದ.  ಈ ಸಮಯದಲ್ಲಿ ಆತನಲ್ಲಿ ಆದ ಅನುಭವಗಳು […]

ಲಾಕ್ಡೌನ್ ಕಾಲಘಟ್ಟದ ದಾಂಪತ್ಯ

ಲೇಖನ ಲಾಕ್ಡೌನ್ ಕಾಲಘಟ್ಟದ ದಾಂಪತ್ಯ ಅಂಜಲಿ ರಾಮಣ್ಣ ಬೆಳಗಿನಲ್ಲಿ ಅವನು ಬಲು ಸುಭಗ. ರಾತ್ರಿಯಾಯಿತೆಂದರೆ ಕೀಚಕನೇ ಮೈಯೇರಿದ್ದಾನೆ ಎನ್ನುವಂತೆ ಇರುತ್ತಿದ್ದ. ಅವಳ ಮೈಮೇಲಿನ ಹಲ್ಗುರುತು, ಉಗುರ್ಗೆರೆ, ಸಿಗರೇಟಿನ ಬೊಟ್ಟು ಕತ್ತಲಲ್ಲೂ ಮಿರಮಿರ ಉರಿಯುತ್ತಿತ್ತು. ಸಹಿಸುತ್ತಲೇ ಅವಳ ದಾಂಪತ್ಯಕ್ಕೆ ಮೂರು ವರ್ಷ ಕಳೆದುಹೋಗಿತ್ತು. ಸ್ನಾನದ ನೀರು ಬಿದ್ದರೆ ಧಗಧಗ ಎನ್ನುವ ದೇಹ ದಹನಕ್ಕೆ ಹೆದರಿದ್ದ ದಾಕ್ಶಾಯಣಿ  ಅವಳು ಅದೆಷ್ಟೋ ದಿನಗಳಿಗೆ ಒಮ್ಮೆ ಸ್ನಾನ ಮಾಡುತ್ತಿದ್ದಳು. ಕತ್ತಲಲ್ಲಿ ಅವಳಾತ್ಮವನ್ನು ಹೀಗೆ ಚರ್ಮದಂತೆ ಸಂಸ್ಕರಿಸುತ್ತಿದ್ದವ ಬೆಳಕಿನಲ್ಲಿ ಬೆಕ್ಕಿನ ಮರಿಯಂತೆ ಆಗುತ್ತಿದ್ದ. ಆಫೀಸಿನಲ್ಲಿ […]

ಪರಿಣಾಮ

ಲೇಖನ ಪರಿಣಾಮ ಡಾ. ಅರಕಲಗೂಡು ನೀಲಕಂಠ ಮೂರ್ತಿ ಮನುಷ್ಯ ಸಾಮಾನ್ಯವಾಗಿ ಯಾವುದೇ ಕೆಲಸ ಮಾಡಬೇಕಾದರೆ, ಅಥವ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು, ಅದರ ಪರಿಣಾಮದ ಬಗ್ಗೆ ಖಂಡಿತ ಕೂಲಂಕುಷವಾಗಿ ಚಿಂತಿಸುತ್ತಾನೆ. ಆದರೆ ಎಂಥ ಸಂದರ್ಭಗಳಲ್ಲೂ ಸಹ ಕೆಲವರು, ಉಡಾಫೆ ಬದುಕಿನವರು, ಪ್ರಪ್ರಥಮವಾಗಿ ಆಳವನ್ನೂ ಅಂದಾಜಿಸದೆ, ನೇರ ಭಾವಿಗೇ ದಿಢೀರಂತ ಧುಮಿಕಿಬಿಡುತ್ತಾರೆ. ನಂತರ ಪರಿಣಾಮದತ್ತ ಗಮನ ಹರಿಸಿದ ಹಾಗೆ, ಕೈಕಾಲುಗಳನ್ನು ಆತುರಾತುರವಾಗಿ ಬಡಿಯತೊಡಗುತ್ತಾರೆ. ಆಗ ತುಂಬ ತಡವಾಗಿ ಪಶ್ಚಾತ್ತಾಪ ಪಟ್ಟು ಸಂಕಟದ ಕೆಸರೊಳಗೆ ಒದ್ದಾಡುತ್ತಾರೆ. ಬಹಳ ಒಳ್ಳೆಯ, ಆದರೆ […]

ದಾರಾವಾಹಿ- ಅದ್ಯಾಯ-12 ತನ್ನ ಕುತಂತ್ರಕ್ಕೆ ಬಲಿಯಾಗಿ ಬೀದಿ ಬಿಕಾರಿಯಾದ ಸಂತಾನಪ್ಪ, ಇಂದಲ್ಲ ನಾಳೆ ರಾತ್ರೋರಾತ್ರಿ ಊರು ಬಿಟ್ಟೇ ಓಡಿ ಹೋಗುತ್ತಾನೆ ಅಥವಾ ಮುಂಚಿನಂತೆಯೇ ಬಾಲ ಮುದುರಿ ಕೂಲಿನಾಲಿ ಮಾಡಿಕೊಂಡು ಬದುಕುತ್ತಾನೆ ಎಂದು ಭಾವಿಸಿದ್ದ ಶಂಕರನ ಯೋಚನೆಯು ಪರಮೇಶನ ಬಿಸಿಬಿಸಿ ಸುದ್ದಿಯಿಂದ ಪೂರ್ತಿ ತಲೆಕೆಳಗಾಗಿಬಿಟ್ಟಿತು. ಬಯಲುಸೀಮೆಯ ಒಣಹವೆಯನ್ನೂ ಖಡಕ್ ಜೋಳದ ರೊಟ್ಟಿಯೊಂದಿಗೆ ಈರುಳ್ಳಿ ಮತ್ತು ಹಸಿ ಮೆಣಸಿನಕಾಯಿಯಂಥ ವ್ಯಂಜನವನ್ನು ಜಜ್ಜಿ ಜಗಿದುಣ್ಣುತ್ತ ಒರಟು ಮಂದಿಯ ನಡುವೆ ಹುಟ್ಟಿ ಬೆಳೆದ, ಆರಡಿ ಎತ್ತರದ ಆಜಾನುಬಾಹು ಸಂತಾನಪ್ಪ ಬಡತನದ ಬೇಗೆಯಿಂದ ಮುಗ್ಧ […]

ಮಕ್ಕಳಿಗಾಗಿ ಅನುಭವ ಕಥನ ಕಾಡಂಚಿನಊರಿನಲ್ಲಿ….. ವಿಜಯಶ್ರೀ ಹಾಲಾಡಿ ವಿಜಿ ಸಣ್ಣವಳಿರುವಾಗ, ಅಜ್ಜಿ ಅಂದಿಗೆ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದೆ (ಅಂದರೆ ಇವತ್ತಿಗೆ ತೊಂಬತ್ತು-ತೊಂಬತ್ತೈದು ವರ್ಷಗಳ ಹಿಂದೆ) ನಡೆದ ಘಟನೆಯನ್ನು ಹೇಳುತ್ತಿದ್ದರು. ಅಜ್ಜಿಯ ಮಾವ ಮುಂತಾದ ಹಿರಿಯರಿದ್ದ ಸಮಯವದು. ಆಗ ನಮ್ಮೂರು `ಮುದೂರಿ’ಯ ಸುತ್ತಲಿನ ಕಾಡುಗಳಲ್ಲಿ ಹುಲಿಯಿತ್ತಂತೆ! ಎಷ್ಟು ಹುಲಿಗಳಿದ್ದವೋ, ತಿಳಿಯದು, ಆದರೆ ಊರಿಗೆ ಬಂದು ದನಗಳನ್ನು ಕೊಂಡೊಯ್ದ ಅನೇಕ ಪ್ರಸಂಗಗಳಿದ್ದವು. ಹಟ್ಟಿಯ ಗೋಡೆಯನ್ನು ಮಣ್ಣಿನಿಂದ ಗಟ್ಟಿಯಾಗಿ ನಿರ್ಮಿಸಿ ಬಂದೋಬಸ್ತು ಮಾಡಿದ್ದರೂ ಬಾಗಿಲು ಸ್ವಲ್ಪ ಸದರ ಇದ್ದರೆ ಅದರ […]

Back To Top