Category: ಇತರೆ

ಇತರೆ

ಎರಡು ಪತ್ರಗಳು

ಎರಡು ಪತ್ರಗಳು ಪತ್ರ ಒಂದು [6:27 pm, 18/10/2020] NAGRAJ HARAPANALLY: ಸಂಗಾತಿಯ ನೆನೆಯುತ್ತಾ…. ಹಿರಿಯ ಸಂಗಾತಿ ಮಧುಸೂದನ್ ಸರ್ ಗೆ ನಮಸ್ಕಾರಗಳು.. ಸಂಗಾತಿ ಕನ್ನಡ ವೆಬ್ ಒಂದು ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಕಾಲಿಡುತ್ತಿದೆ. ನಾನು ಸಂಗಾತಿಯ ಭಾಗವಾದುದು ಈ ವರ್ಷದ ಮಾರ್ಚನಲ್ಲಿ. ಮಧುಸೂದನ್ ಸರ್ ನನ್ನ fb ಗೆಳೆಯರು.ಹಿರಿಯರು‌ .‌ಆದರೆ ಕನ್ನಡ ವೆಬ್ ಮಾಡಿದ್ದು ಗೊತ್ತಿರಲಿಲ್ಲ. ನನ್ನ ಪತ್ರಿಕೆ ಕೆಲಸ ,ಪತ್ರಕರ್ತ ವೃತ್ತಿ ಕಾರಣವಾಗಿ‌ .ಗೆಳೆಯ ಮೋಹನ್ ಗೌಡನ ಬರಹ ಸಂಗಾತಿಯಲ್ಲಿ ಪ್ರಕಟವಾಗಿತ್ತು. ಕುತೂಹಲದಿಂದ […]

ಹೊರಗೋಡೆ

ಪ್ರಬಂಧ ಹೊರಗೋಡೆ ಗೋಡೆ ಎಂಬುದು ಹಲವಾರು ವಸ್ತುಗಳು, ವಿಶೇಷಗಳು ಹಾಗೂ ವಿಷಯಗಳನ್ನು ಮುಚ್ಚಿಡಬಹುದಾದ ಇಟ್ಟಿಗೆ, ಮರಳು, ಸುಣ್ಣ, ಬೆಲ್ಲ, ಸಿಮೆಂಟುಗಳಿಂದ ಕಟ್ಟಿದ ಒಂದು ರಚನೆ ಎಂದುಕೊಳ್ಳುವುದು ಒಂದು ಬಗೆಯಲ್ಲಿ ಒಪ್ಪಬಹುದಾದ ವಿಷಯವಾದರೂ, ಹಲವಾರು ಕಾರಣಗಳಿಂದ ಗೋಡೆಗಳು ನಮ್ಮನ್ನು ಪೂರ್ವಜರೊಂದಿಗೆ ಬೆಸೆಯುತ್ತಲೇ ಪ್ರಸ್ತುತ ಜೀವನದಲ್ಲಿ ಆಸಕ್ತಿ ಮೂಡಿಸುತ್ತಾ ಹೋಗುತ್ತವೆ. ಪ್ರತಿಯೊಂದು ಗೋಡೆಯನ್ನು ಕಟ್ಟಲು ಆರಂಭಿಸಿದ ಕೂಡಲೇ ಹೊರಗೋಡೆ ಹಾಗೂ ಒಳಗೋಡೆ ಎರಡೂ ಜೊತೆ ಜೊತೆಗೆ ನಿರ್ಮಾಣವಾಗುತ್ತಾ ಸಾಗುತ್ತದೆ. ನಾಗರೀಕತೆಯ ಆರಂಭವನ್ನು ನಾವು ಅರಿಯಲು ಹಾಗೂ ನಮ್ಮ ಪೂರ್ವಜರ ಇರುವನ್ನು […]

ಸಂಗಾತಿಯೊಡನೆ ನನ್ನ ಪಯಣ

ಸಂಗಾತಿಯ ಇಬ್ಬರು ಲೇಖಕರುಬರೆದ ಅನಿಸಿಕೆಗಳು ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಮಹತ್ವ ಪ್ರತ್ಯೇಕವಾಗಿ ಉಲ್ಲೇಖಿಸುವ ಅವಶ್ಯಕತೆಯೇ ಇಲ್ಲ . ಮೊದಲಿನಿಂದ ಪ್ರಸಾರ ಮಾಧ್ಯಮ ಎಂದರೆ ಪತ್ರಿಕೆ ಮತ್ತು ಆಕಾಶವಾಣಿ. ಈಗ ದೂರದರ್ಶನ ಹಾಗೂ ಅಂತರ್ಜಾಲಗಳು ಈ ಪರಿಧಿಗೆ ಸೇರಿವೆ.  ದಿನಪತ್ರಿಕೆ ಓದದೇ ಬೆಳಗು ಆರಂಭವಿಲ್ಲ  ಎಂಬಂಥ ಕಾಲ ಹೋಗಿ ಎಲ್ಲವನ್ನೂ ದೃಶ್ಯ ಮಾಧ್ಯಮಗಳಲ್ಲಿ ಕಂಡುಕೊಳ್ಳುವ ಈ ಯುಗದಲ್ಲಿ ಮುದ್ರಿತ ಓದಿನ ಪತ್ರಿಕೆ, ನಿಯತ ಕಾಲಿಕೆಗಳು ತಮ್ಮ ಮೊದಲಿನ ಜನಪ್ರಿಯತೆಯನ್ನು ಕಳೆದುಕೊಳ್ಳುತ್ತಿದೆ.  ಈ ಪ್ರಚಲಿತ ವಿದ್ಯಮಾನದಲ್ಲಿ ಸುದ್ದಿ ತಿಳಿಯಲು ದಿನಪತ್ರಿಕೆಯೇ ಬೇಕೆಂದೇನಿಲ್ಲ.  […]

ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ

ಲೇಖನ ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ ವಿಜಯಶ್ರೀ ಹಾಲಾಡಿ ಕರ್ನಾಟಕದ ಸಾಹಿತ್ಯ ಜಗತ್ತಿನಲ್ಲಿ `ಮಕ್ಕಳ ಸಾಹಿತ್ಯ’ ಎಂಬೊಂದು ಪ್ರಕಾರ ಹೇಗಿದೆ ಎನ್ನುವ ಕಡೆಗೆ ಯೋಚನೆ ಹರಿಸಿದರೆ ಬಹಳ ಖೇದವೂ, ಆಶ್ಚರ್ಯವೂ ಉಂಟಾಗುತ್ತದೆ. ಖೇದ ಏಕೆಂದರೆ ಏಕಕಾಲದಲ್ಲಿ ನಮ್ಮ ವರ್ತಮಾನವೂ, ಭವಿಷ್ಯವೂ ಆಗಿರುವ ಮಕ್ಕಳಿಗಾಗಿ ಇರುವ ಸಾಹಿತ್ಯ ಅಲಕ್ಷ್ಯವಾಗಿರುವುದಕ್ಕೆ. ಆಶ್ಚರ್ಯವೇಕೆಂದರೆ ಇಂತಹ ತಿರುಳನ್ನೇ ನಿರ್ಲಕ್ಷಿಸಿ ಇಡೀ ಸಾಹಿತ್ಯಲೋಕ ನಿಶ್ಚಿಂತೆಯಿಂದ ಇದ್ದು ಬಿಟ್ಟಿರುವುದಕ್ಕೆ! ಸಾಹಿತ್ಯ ವಲಯದ ಹಲವರೂ, ಸಂಸ್ಥೆ-ಅಂಗಸಂಸ್ಥೆಗಳೂ, ಸ್ವತಃ ಬರಹಗಾರರೂ, ಓದುಗರು ಎಲ್ಲರೂ ಸೇರಿ ಪಕ್ಕಕ್ಕೆ ಎತ್ತಿಟ್ಟು ಮರೆತುಬಿಟ್ಟ ಒಂದು […]

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಫೆಲ್ಸಿ ಲೋಬೊ ಶ್ರೀಮತಿ ಫೆಲ್ಸಿ ಲೋಬೊಶಿಕ್ಷಕಿ, ಸಂತ ಎಲೋಶಿಯಸ್ ಪ್ರೌಢಶಾಲೆ, ಮಂಗಳೂರು.ಹವ್ಯಾಸ: ಕವನ, ಲೇಖನ ಬರಹಕನ್ನಡ, ಕೊಂಕಣಿ, ತುಳು ಭಾಶೆಗಳಲ್ಲಿ.ಕೊಂಕಣಿಯ, ರಾಕ್ಣೊ, ಉಜ್ವಾಡ್, ಸೆವಕ್, ಮುಂತಾದ ಪತ್ರಿಕೆಗಳಲ್ಲಿ, ವೀಜ್ ಪಾಕ್ಶಿಕ ದಲ್ಲಿ, ಕವಿತಾ ಡಾಟ್ ಕಾಮ್ ಗಳಲ್ಲಿ ಬರಹಗಳ ಪ್ರಕಟವಾಗಿದೆ. ಕವಿಗೋಶ್ಟಿಗಳಲ್ಲಿ ಭಾಗವಹಿಸುವಿಕೆ, ವಿವಿಧ ಸಾಹಿತ್ಯ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಲಾಗಿದೆ. ಆಕಾಶವಾಣಿ ಮಂಗಳೂರು ರೇಡಿಯೊ ಹಾಗೂ ಸಾರಂಗ್ ರೇಡಿಯೊ ದಲ್ಲಿ ಕಾರ್ಯಕ್ರಮಗಳು ಪ್ರಸಾರ ಕಂಡಿವೆ. ” ಗರ್ಜೆತೆಕಿದ್ ಗಜಾಲಿ” ಎಂಬ ಚೊಚ್ಚಲ ಲೇಖನ […]

ಕಡಿವಾಣವೂ ಪ್ರೀತಿಯೇ!!!!!

ಲೇಖನ ಕಡಿವಾಣವೂ ಪ್ರೀತಿಯೇ!!!!! ಮಾಲಾ ಅಕ್ಕಿಶೆಟ್ಟಿ   ಕೊರೊನಾ ಲಾಕಡೌನ್ ಕ್ಕಿಂತ ಮುಂಚೆ ನಡೆದ ಮಾತಿದು.ಆತ್ಮೀಯರೊಬ್ಬರು ಚರ್ಚಿಸಿದ ವಿಚಾರ.ಅವರು ವಿವರಿಸಿದ ಹಾಗೆ ಈಗ ಒಂದು ವರ್ಷದಿಂದ ಶಾಲೆಗೆ ಹೋಗುವ ನಾಲ್ಕು ವರ್ಷದ ಮಗಳು ದಿನಾಲು ಒಂದಿಲ್ಲೊಂದು ವಸ್ತುಗಳನ್ನು ಶಾಲೆಯಲ್ಲಿ ಕಳೆದುಕೊಂಡು ಬಂದು ತಾಯಿಗೆ ಮತ್ತೆ ಹೊಸ ವಸ್ತುಗಳನ್ನು ಕೊಡಿಸುವಂತೆ ಪೀಡಿಸುತ್ತಿದ್ದಳು. ಮಗಳು ದಿನವೂ ಪೆನ್ಸಿಲ್, ರಬ್ಬರ್, ಶಾರ್ಪನರ್, ಕ್ರೆಯಾನ್ಸ್ ಗಳನ್ನು ಕಳೆದುಕೊಂಡು ಬರುವುದು ತಾಯಿಗೆ ತಲೆನೋವಾಗಿ ಪರಿಣಮಿಸಿತ್ತು. ಬೇಸತ್ತ ತಾಯಿ ಒಂದು ದಿನ ಮಗಳಿಗೆ ಸ್ಟ್ರಿಕ್ಟಾಗಿ ಎಚ್ಚರಿಕೆ […]

ಕಾಯಕದ ಮಹತ್ವ.

ಲೇಖನ ಕಾಯಕದ ಮಹತ್ವ. ಜಯಶ್ರೀ ಭ.ಭಂಡಾರಿ. ದಾಸೋಹ ಕಾಯಕವೆಂಬ ನಾಣ್ಯದ ಇನ್ನೊಂದು ಮುಖ.ಸಮಾಜದಲ್ಲಿ ಸಂಪತ್ತು ಉತ್ಪತ್ತಿಯಾಗಲು ಸತ್ಯಶುದ್ಧ ಕಾಯಕ ಬೇಕು.ಆದರೆ,ಸಂಪತ್ತು ಕೇಂದ್ರೀಕತವಾದರೆ ಎಲ್ಲಾ ಬಗೆಯ ಅಸಮಾನತೆಗಳು ಹುಟ್ಟುತ್ತವೆ.ಆದ್ದರಿಂದ ಬಸವಾದಿ ವಚನಕಾರರು ದಾಸೋಹ ತತ್ವವನ್ನು ಆವಿಷ್ಕರಿಸಿ ಆಚರಣೆಯಲ್ಲಿ ತಂದರು.ಅಣ್ಣನವರ ಸುಪ್ರಸಿದ್ಧ ವಚನ “ಕಾಗೆಯೊಂದಗುಳ ಕಂಡಡೆ ಕೂಗಿ ಕರೆಯದೆ ತನ್ನ ಬಳಗವ….”. ಸಮಾಜದಲ್ಲಿ ಸಂಪತ್ತಿನ ವಿತರಣೆಯಾಗಲೇಬೇಕೆಂದು ವಿಧಿಸುವ ನಿಯಮ. ಕಾಯಕ ಸಾರ್ಥಕವಾಗುವದೇ ದಾಸೋಹದಲ್ಲಿ.ಆದ್ದರಿಂದಲೇ “ಸೋಹಂ ಎಂದೆನಿಸದೆ ದಾಸೋಹಂ ಎಂದೆನಿಸಯ್ಯ” ಎಂದು ದೇವರಲ್ಲಿ ಪ್ರಾರ್ಥಿಸುತ್ತಾರೆ ಅಣ್ಣ.”ತನು ಮನ ಬಳಲಿಸಿ ತಂದು ದಾಸೋಹ […]

ಜಾಲತಾಣಗಳಿಂದ ಮಹಿಳೆಯರಿಗೆ ಹೆಚ್ಚಿದ ಅವಕಾಶ ಮಾಲಾ ಅಕ್ಕಿಶೆಟ್ಟಿ   ಎಲ್ಲೋ ಇದ್ದವರನ್ನು ಇಲ್ಲೇ ಇದ್ದಾರೆನ್ನುವಂತೆ ಮಾಡುವ ಮೋಡಿ ಈ ಜಾಲತಾಣಗಳಿಗಿದೆ. ಹಳೆಯ ಕಾಲವೇ ಕಣ್ಮರೆಯಾಗಿ, ಆಧುನಿಕದ ಹೊಸತಿಗೆ ತುಸು ಜಾಸ್ತಿನೇ ಹೊಂದಿಕೊಂಡ ಮನುಷ್ಯ, ಅನುಕೂಲಕ್ಕಾಗಿ ತನಗೆ ಬೇಕಾದ್ದನ್ನೆಲ್ಲಾ ಬಳಸಿಕೊಂಡು ಜಗತ್ತನ್ನು ಸಮೀಪದಿಂದಲೇ ಆನಂದಿಸುತ್ತಿದ್ದಾನೆ. ಹೊಸದರ ಅಳವಡಿಕೆ ಖುಷಿ ನೀಡಿದೆ. ಏಕಕಾಲದಲ್ಲೇ ಆಗುತ್ತಿರುವ ಹೊಸ ಹೊಸ ಆ್ಯಪ್ ಗಳ ಆವಿಷ್ಕಾರ ಹಾಗೂ ಇಂಟರ್ನೆಟ್ ಸೌಲಭ್ಯ ಎಲ್ಲರಿಗೂ ಅವುಗಳ ಉಪಯೋಗಕ್ಕೆ ಮಾಯಾ ಕೊಂಡಿಯನ್ನು ನಿರ್ಮಿಸಿದೆ.          […]

ನಮ್ಮ ಕವಿ ಸ್ಮಿತಾ ಅಮೃತರಾಜ್ ಕವಿಪರಿಚಯ–ಸಂದರ್ಶನ–ಕವಿತೆಗಳು ಪರಿಚಯ ಸ್ಮಿತಾ, ಕವಿ, ಲೇಖಕಿ, ಅಂಕಣಕಾರ್ತಿ, ಇವೆಲ್ಲಕ್ಕಿಂತ ಹೆಚ್ಚಾಗಿ ಅಪಾರ ಮಾನವೀಯ ಅಂತಃಕರಣದ, ಎಲ್ಲದರಲ್ಲೂ,ಎಲ್ಲರಲ್ಲೂ ಒಳಿತನ್ನೇ ಕಾಣುವ ಮೃದು ಹೃದಯಿ. “ಪ್ರಪಂಚ ಬಹಳ ಕೆಟ್ಟದು”ಅನ್ನುವ  ಸಿನಿಕತನ ನನ್ನನ್ನು ಕಾಡಿದಾಗೆಲ್ಲ ಅದಕ್ಕೆ ಅಪವಾದವೆಂಬಂತೆ ನನ್ನ ಮನಸ್ಸಿಗೆ ಬರುವ ನನ್ನ ಜೀವದ ಗೆಳತಿ ಸ್ಮಿತಾ ಬಗ್ಗೆ ಹೇಳಿದಷ್ಟು ಕಡಿಮೆಯೇ. ಸ್ಮಿತಾ ಅವರ  ಜನ್ಮಸ್ಥಳ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ . ಜನನ 8 ನೆ ಜನವರಿ 1978,   ತಂದೆ ಶ್ರೀಯುತ.ವೆಂಕಟ್ರಮಣ ಪಳಂಗಾಯ […]

ಒಂದು ಲೋಟ ಗಂಜಿ

ಕಥೆ ಒಂದು ಲೋಟ ಗಂಜಿ ಟಿ.ಎಸ್.ಶ್ರವಣಕುಮಾರಿ ಶುರುವಾಗಿದ್ದು ಹೀಗೆ… ಸಾವಿತ್ರಿಯ ಮಗಳು ಜಯಲಕ್ಷ್ಮಿ ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಯನ್ನು ಸೇರಿ ಎರಡು ದಿನವಾಗಿತ್ತು. ಹೆದರುವಂತದೇನಲ್ಲ, ಚೊಚ್ಚಲ ಹೆರಿಗೆ. ಆದರೆ ಸ್ವಲ್ಪವೇನೂ, ಸ್ವಲ್ಪ ಜಾಸ್ತಿಯೇ ನೋವು ತಿನ್ನುತ್ತಿದ್ದರೂ ಇನ್ನೂ ಹೆರಿಗೆಯಾಗಿರಲಿಲ್ಲ. ಸಾವಿತ್ರಿ, ಮೊನ್ನೆ ಬೆಳಗ್ಗೆ ಬಂದಿದ್ದವಳು ರಾತ್ರಿಯೆಲ್ಲಾ ಆಸ್ಪತ್ರೆಯ ಕಾರಿಡಾರಿನಲ್ಲೇ ತೂಕಡಿಸುತ್ತಾ ಕಾಯುತ್ತಾ ಕುಳಿತಿದ್ದಳು. ಆಸ್ಪತ್ರೆಗೆ ಮನೆ ಸ್ವಲ್ಪ ದೂರವೇ. ಗಂಡನಿಗೆ ಆಗುಂಬೆಯ ಟೋಲ್ಗೇಟಿನಲ್ಲಿ ಕೆಲಸ. ಬರುವುದು ವಾರಕ್ಕೊಂದು ಬಾರಿಯೇ. ನಿನ್ನೆ ಮತ್ತು ಇಂದು ಬೆಳಗ್ಗೆ ಒಂದು ಘಳಿಗೆ ಮನೆಗೆ […]

Back To Top