Category: ಇತರೆ

ಇತರೆ

ವಿಮರ್ಶಾ ಲೋಕದ ದಿಗ್ಗಜ, ಜಿ.ಎಸ್. ಆಮೂರ..!

ಲೇಖನ ವಿಮರ್ಶಾ ಲೋಕದ ದಿಗ್ಗಜ ಜಿ.ಎಸ್. ಆಮೂರ..! ಜಿ.ಎಸ್. ಅಮೂರರು ನಮನಗಲಿದ್ದಾರೆ ಈಗ. ಆದರೆ ಅವರ ಸಾಹಿತ್ಯ ಕೃತಿಗಳು ಮತ್ತು ಮಾಡಿದ ಪಿ.ಎಚ್.ಡಿಯ ಸಾಹಿತ್ಯ ಸೌರಭ ನಮ್ಮ ಜೊತೆಯಲ್ಲಿ ಇದೆ. ಆಗಲಿ, ಜಿ.ಎಸ್.ಅಮೂರರಿಗೆ ಅನಂತಾನಂತ ನಮನಗಳು… ೦೮.೦೫.೧೯೨೫ ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ೪-೫ ದಶಕಗಳಿಂದಲೂ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ೧೯೨೫ […]

ಹೋಗಿ ಬರುತ್ತೇವೆ ಆ ಬೆಟ್ಟಕ್ಕೆ

ಅನುಭವ ಹೋಗಿ ಬರುತ್ತೇವೆ ಆ ಬೆಟ್ಟಕ್ಕೆ             ಪ್ರತಿ ಡಿಸೆಂಬರ್ ೨೨ಕ್ಕೆ ನಮ್ಮ ಶಾಲೆಯ ವಾರ್ಷಿಕೋತ್ಸವ, ಯಾವಾಗಲು ವಾರ್ಷಿಕೋತ್ಸವ ಮುಗಿದ ಬಳಿಕ ನಮಗೆ ಕ್ರಿಸ್ಮಸ್ರಜೆ. ರಜೆ ಕಳೆಯಲೆಂದೇ ಅಜ್ಜನ ಮನೆಗೆ ಹೋದೆವು. ನಮ್ಮ ಹಾಗೆ ಕ್ರಿಸ್ಮಸ್ ರಜೆ ಕಳೆಯಲು ನಮ್ಮಜ್ಜನ ದಾಯಾದಿಗಳ ಮನೆಮಕ್ಕಳೂ ಬಂದಿದ್ದರು. ಒಂದು ರೀತಿ ಮಕ್ಕಳ ಸೈನ್ಯವೇ ಸರಿ. ನಿಮ್ಮ ಶಾಲೆ ಹೇಗೆ? ನಿಮ್ಮ ಶಾಲೆಯಲ್ಲಿ ಏನೇನು ಕಲಿಸುತ್ತಾರೆ? ನಿಮಗೆ ಯಾವ ಟೀಚರ್ ಇಷ್ಟ? ಯಾರು ಹೇಗೆ ಬಯ್ಯುತ್ತಾರೆ? ಇತ್ಯಾದಿಗಳ ಚರ್ಚೆ ಮಾಡುತ್ತಿದ್ದೆವು. ರಜೆಗೆಂದು […]

ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ

ಪ್ರಸ್ತುತ       ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧದ ಕುರಿತು ಮಹಾತ್ಮ ಗಾಂಧೀಜಿ ಡಾ.ಎಸ್.ಬಿ. ಬಸೆಟ್ಟಿ ಮಹಾತ್ಮ ಗಾಂಧೀಜಿಯವರು ಜನರು ಬಯಸುವ ಹಾನಿಕಾರಕ ಮತ್ತು ಅನಾವಶ್ಯಕ ಮಾದಕ ವಸ್ತುಗಳನ್ನು  ವಿರೋಧಿಸುತ್ತಿದ್ದರು. ಗಾಂಧೀಜಿಯವರು ತಂಬಾಕು ಮತ್ತು ಮಧ್ಯವನ್ನು ಜನರ ಆರೋಗ್ಯಕ್ಕೆ ಅತ್ಯಂತ ಹಾನಿ ಕಾರಕ ವಸ್ತುಗಳೆಂದು ಪರಿಗಣಿಸಿದ್ದರು ಜೊತೆಗೇ ಚಹಾ ಮತ್ತು ಕಾಫಿಯನ್ನು ಕೂಡಾ ಅನಾವಶ್ಯಕ ವಸ್ತುಗಳೆಂದು ಭಾವಿಸಿದ್ದರು. “ಬೆಂಕಿ ದೇಹವನ್ನು ನಾಶ ಮಾಡಿದರೆ, ಮದ್ಯ ಮತ್ತು ಮಾದಕ ವಸ್ತು ದೇಹ  ಮತ್ತು ಆತ್ಮ ಎರಡನ್ನೂ ನಾಶ ಮಾಡುತ್ತದೆ” […]

ಚಪ್ಪರದ ಗಳಿಕೆ

ಅನುಭವ ಚಪ್ಪರದ ಗಳಿಕೆ ಶಾಂತಿವಾಸು ನಮ್ಮ ಮನೆಗೆ ಹೊದ್ದಿಸಿದ ಸಿಮೆಂಟ್ ಶೀಟ್ ಮೇಲೆ ಹತ್ತಿ ನಡೆಯಲಾರಂಭಿಸಿದರೆ ಸುಮಾರು ಇಪ್ಪತ್ತು ಮನೆಗಳನ್ನು ದಾಟಬಹುದಿತ್ತು.  ನಲವತ್ತು ವರ್ಷಗಳ ಮೊದಲು ನಮ್ಮ ರಸ್ತೆಯಲ್ಲಿ ಯಾವುದೇ ಮಹಡಿ ಮನೆ ಇರಲಿಲ್ಲ. ನೆರಳಿಗಾಗಿ ನಮ್ಮ ಮನೆಯ ಹೊಸ್ತಿಲಿನ ನಂತರ ಹತ್ತು ಅಡಿಗಳಷ್ಟು ಮುಂದಕ್ಕೆ, ಮೇಲೆ ಕವಲುಹೊಡೆದ ಉದ್ದದ ಊರುಗೋಲುಗಳನ್ನು ನಿಲ್ಲಿಸಿ ಮೇಲೆ ಚೌಕಟ್ಟು ಮಾಡಿ  ಇಪ್ಪತ್ತು ಅಡಿಗಳಷ್ಟು ಅಗಲಕ್ಕೆ ತೆಂಗಿನ ಗರಿಗಳನ್ನು ಹೊದಿಸಿದ್ದರು. ನಮ್ಮ ಮನೆ ಬಿಟ್ಟು ಎಡಗಡೆಗೆ ಬಾಡಿಗೆ ಮನೆಗಳು ಹಾಗೂ ಬಲಗಡೆಗೆ […]

ಲೆಕ್ಕಕ್ಕೊಂದು ಸೇರ್ಪಡೆ

ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ, ಸಂಪೂರ್ಣ ದೇಹವನ್ನು ಅದೇನೋ ಹೊಸತರಹದ ದಿರಿಸಿನಿಂದ ಮುಖಸಹಿತ ಮುಚ್ಚಿಕೊಂಡ ಜನರು ಪ್ಲಾಸ್ಟಿಕ್ ಚೀಲದಲ್ಲಿ ಬಿಗಿಯಾಗಿ ಸುತ್ತಿದ ನೂರಾರು ಜನರ ಮೃತದೇಹಗಳನ್ನು ಒಟ್ಟೊಟ್ಟಿಗೇ, ಆಳವಾದ ಒಂದೇ ಹಳ್ಳದಲ್ಲಿ ಹಾಕಿ ಮಣ್ಣು ಮುಚ್ಚುವುದು ಹಾಗೂ ಪೆಟ್ರೋಲ್ ಸುರಿದು ಸಾಮೂಹಿಕವಾಗಿ ಸುಡುವುದನ್ನು ನೋಡಿಯೇ ಪ್ರಪಂಚವು ನಡುಗಿಹೋಗಿತ್ತು. ಇದೇನು?? ಹೊಸದಾಗಿ ನಡೆದದ್ದೇ? ಅಥವಾ ಯಾವುದಾದರೂ ಸಿನಿಮಾಗಾಗಿ ಇರಬಹುದೇನೋ ಎಂದು ಗೊಂದಲಗೊಂಡ ಕೋಟ್ಯಂತರ […]

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….

ಗಾಂಧಿ ವಿಶೇಷ  ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ  ಗಾಂಧಿ  ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ  ಮುಖ್ಯವಾಗುವುದು ಮೂರು ಕಾರಣಗಳಿಗೆ. ಒಂದನೇ ಕಾರಣ ಗಾಂಧಿಜೀ ಅಸ್ಪೃಶ್ಯತೆಯನ್ನು ಜನರ ಮನದಿಂದ ಕಿತ್ತೊಗೆಯಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಎರಡನೇ ಕಾರಣ ದೇವಸ್ಥಾನದಲ್ಲಿನ ಪ್ರಾಣಿ ಬಲಿ ನಿಲ್ಲಿಸಲು ಯತ್ನಿಸಿದರು ಹಾಗೂ ಇದರಲ್ಲಿ ಯಶಸ್ವಿಯಾದರು. ಮೂರನೇ ಕಾರಣ  ಬಾಲವಿಧವೆಯರ ಕೇಶ ಮುಂಡನೆಯಂಥ ಸಂಪ್ರದಾಯವನ್ನು ನಿಲ್ಲಿಸಿದರು. ವಿಶೇಷವೆಂದರೆ ಈ ಮೂರು ಘಟನೆಗಳು ನಡೆದದ್ದು ೧೯೩೪ ರಲ್ಲಿ ಉತ್ತರ ಕನ್ನಡ ಜಿಲ್ಲೆಯ […]

ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..!

ಲೇಖನ ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕೆ.ಶಿವು ಲಕ್ಕಣ್ಣವರ ಹಿಂದಿ ಹೇರಿಕೆಯು ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕರ್ನಾಟಕದಲ್ಲಿ ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಅಣತಿ ಮೇರಗೆ ಬೆಂಗಳೂರು ಮೆಟ್ರೋ ಆಡಳಿತ ಮಂಡಳಿ ಇಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆಯಲ್ಲಿ ಫಲಕಗಳನ್ನು ಹಾಕಿದಾಗಲೇ ಸ್ಥಳೀಯ ಕನ್ನಡಪರ ಹೋರಾಟಗಾರರು ಹಿಂದಿ ಫಲಕಗಳಿಗೆ ಬಣ್ಣ ಬಳಿದು ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಯಾವ ಭಾಷೆಗೂ ರಾಷ್ಟ್ರಭಾಷೆ ಎಂಬ ವಿಶೇಷ ಸ್ಥಾನಮಾನ ನೀಡಲಾಗಿಲ್ಲ ಎಂಬುದನ್ನು […]

ನಂದ ಗೋಕುಲ

ಅನುಭವ ನಂದ  ಗೋಕುಲ ಮಾಲಾ ಕಮಲಾಪುರ್ ನಾನು  ಸರ್ಕಾರಿ ಶಾಲೆಯಲ್ಲಿ  ಶಿಕ್ಷಕಿ ಯಾಗಿ ಕೆಲಸ ನಿರ್ವಹಿಸುವಾಗ ನಡೆದ ಘಟನೆ. ಒಂದು ದಿನಾ ನಾಲ್ಕನೆಯ ತರಗತಿಯಲ್ಲಿ ಓದುತ್ತಿದ್ದ ಹೆಣ್ಣು ಮಗು ತರಗತಿಯಲ್ಲಿಯೇ ಮೊದಲು ಆಕಿಗೆ ಕಲಿಕೆಯಲ್ಲಿ ಆಸಕ್ತಿ. ಮನೆಯಲ್ಲಿ ತಾಯಿ ಸಹ ಕೂಲಿ ನಾಲಿಮಾಡಿ ಓದಿಸುತ್ತಿದ್ದಳು ತಂದೆಗೆ ಇದಾವ ಪರಿವೇ ಇಲ್ಲದೆ ಸದಾ ಕುಡಿದುಕೊಂಡು ಮನೆಗೆ ಬಂದು ಹೆಂಡತಿ ಮಗುವಿಗೆ ಹೊಡೆದು ಬಡೆದು ಮನೆ ಬಿಟ್ಟು ಹೋಗುವದು ಇದೆಲ್ಲದರ ನಡುವೆ ಮಗು ಗುಡಿಸಿಲಿನಲ್ಲಿ ಓದುವುದು ರಜೆಯದಿನ ಹೊಲದಲ್ಲಿ ತಾಯಿಗೆ […]

ಹರಟೆ ಕಟ್ಟೆ

ಲಹರಿ ಹರಟೆ ಕಟ್ಟೆ ಮಾಲಾ  ಕಮಲಾಪುರ್   ನಾನು  ಹೇಳುವ ಮಾತು ಇದು  ಮೂವತ್ತು ವರ್ಷ ಗಳ ಹಿಂದು ಮುಂದಿನ ಮಾತು ಆಗಿನ ಜನರು ಗಂಡಾಗಲಿ ಹೆಣ್ಣಾಗಲಿ  ಭೇದ  ಭಾವ ಇಲ್ಲದೆ ತನ್ನವರು ನನ್ನವರು ಎನ್ನುವ ಭಾವನೆ ಯೊಂದಿಗೆ ಬೆರೆತು ಹರಟೆ ಹೊಡಿಯುತ್ತಿದ್ದರು. ತಮಗೆ ಬಿಡುವಾದಾಗ ಒಬ್ಬರಿಗೊಬ್ಬರು ಸಂಜೆಗೆ ಹರಟೆ ಕಟ್ಟೆಗೆ ಬಂದು ಹರಟೆ ಹೊಡೆದು ಹೋಗುತ್ತಿದ್ದರು. ಅಷ್ಟೇ ಅಲ್ಲ  ಸುಖ ದುಃಖ ದಲ್ಲಿ ಪಾಲ್ಗೊಂಡು  ತಮ್ಮ ಮನೆಯವರಂತೆ  ಹಚ್ಚಿಕೊಂಡು ಕೆಲಸ ಮಾಡುತ್ತಿದ್ದರು. ಮನೆಯ ಯಜಮಾನಿಯಂತೂ ತನ್ನ ಊಟ […]

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ವಿಲ್ಸನ್ ಕಟೀಲ್ ವಿಲ್ಸನ್ ಕಟೀಲ್ ಕಾವ್ಯನಾಮದಿಂದ ಬರೆಯುವ ವಿಲ್ಸನ್ ರೋಶನ್ ಸಿಕ್ವೇರಾ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಟೀಲಿನವರು. ಹುಟ್ಟಿದ ದಿನಾಂಕ – 31.08.1980. ತಂದೆಯ ಹೆಸರು ಗ್ರೆಗರಿ ಸಿಕ್ವೇರಾ, ತಾಯಿ ಬೆನೆಡಿಕ್ಟ ಸಿಕ್ವೇರಾ. ಕಾರಣಾಂತರಗಳಿಂದ ಇಂಜಿನಿಯರಿಂಗ್ ವ್ಯಾಸಂಗವನ್ನು ತ್ಯಜಿಸಿ ಸಾಹಿತ್ಯದತ್ತ ಆಕರ್ಷಣೆ. ತಮಿಳು ಹಾಡುಗಳಿಂದ ಸ್ಪೂರ್ಥಿಗೊಂಡು ಕಾವ್ಯದತ್ತ ಒಲವು. ತನ್ನ ತಾಯಿಭಾಷೆ ಕೊಂಕಣಿಯಲ್ಲಿ ಕತೆ, ಕವಿತೆ, ಗೀತೆ ಹಾಗೂ ಇನ್ನಿತರ ಸಾಹಿತ್ಯ ಕೃಷಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೊಂಕಣಿಯಲ್ಲಿ ಇದುವರೆಗೆ ’ದೀಕ್ ಆನಿ ಪೀಕ್’’, […]

Back To Top