Category: ಇತರೆ

ಇತರೆ

ಲಹರಿ

ಮಾವಿನ ಪುರಾಣ ಮಾವಿನ ಪುರಾಣ ಹಣ್ಣುಗಳಲ್ಲಿ ಮಾವು ಕೊಡುವ ಖುಷಿ, ಯಾವ ಹಣ್ಣು ಕೂಡ ಕೊಡದು ಎಂದರೆ ತಪ್ಪಾಗಲಾರದು.ಹಣ್ಣುಗಳಲ್ಲಿ ಮಾವಿಗೆ ವಿಶೇಷ ಸ್ಥಾನಮಾನ,ರಾಜಮರ್ಯಾದೆ.ಮಾವಿನ ಹಣ್ಣು, ಹಣ್ಣುಗಳ ರಾಜ. ಬೇಸಿಗೆ ಶುರುವಾದೊಡನೆ ಮಾವು ಶುರುವಾಗುತ್ತದೆ.ನಮ್ಮಲ್ಲಿ ಮೊದಲು ಗಿಣಿಮೂತಿ ಮಾವಿನಕಾಯಿ ಜೊತೆ ಈ ಸೀಸನ್ ಶುರುವಾಗುತ್ತದೆ.ಎರೆಡು ಮಳೆ ಆಗುವ ತನಕ ಮಾವು ತಿನ್ನುವುದಿಲ್ಲ.ಒಂದು ದೃಷ್ಟಿ , ಬಂದ ಈ ಗಿಣಿಮೂತಿ ಕಾಯಿಯ ಮೇಲೆ ಇಟ್ಟುಕೊಂಡು ನೋಡದ ಹಾಗೆ ಮಾರುಕಟ್ಟೆಯಲ್ಲಿ ಓಡಾಡುತ್ತೇವೆ.ಮಳೆ ಸ್ವಲ್ಪ ಲೇಟಾದರೆ ಚಡಪಡಿಕೆ ಶುರು.ನಾಲ್ಕೋ,ಐದೋ ಗಿಣಿ ಮಾವಿನಕಾಯಿ ಖರೀದಿಸಿ […]

ಪರಿಸರ

ಮರಗಳ ಕಡಿದರೆ ಖಚಿತ ನಮ್ಮದೇ ಮಾರಣ ಹೋಮ!! ಜಯಶ್ರೀ ಜೆ.ಅಬ್ಬಿಗೇರಿ                                                    ಇದು  ಕೇವಲ ಇಪ್ಪತ್ತು ಮೂವತ್ತು ವರ್ಷಗಳ ಹಿಂದಿನ ಮಾತು ಪ್ರತಿ ಗ್ರಾಮದಲ್ಲೂ ಚಾವಡಿ ಕಟ್ಟೆಗೆ ಹೊಂದಿಕೊಂಡಂತೆ ಮತ್ತು  ಊರ ಹೊರಗಿನ ಗ್ರಾಮ ದೇವತೆಯ ದೇವಸ್ಥಾನದ ಸನಿಹ ಗಿಡ ಮರಗಳ ಸೊಂಪಾದ ನೆರಳು ಇದ್ದೇ ಇರುತ್ತಿತ್ತು.  ದುಡಿದು ದಣಿದು ಬಂದ ರೈತಾಪಿ ವರ್ಗ,  ಹಿರಿಯರು, ಹೈದರು ಮಕ್ಕಳಿಗೆಲ್ಲ ಮನದ ಭಾವನೆಗಳನ್ನು ಹಂಚಿಕೊಳ್ಳುವ ಅಡ್ಡಾದಂತೆ ಕೆಲಸ ನಿರ್ವಹಿಸುತ್ತಿತ್ತು.  ಪ್ರತಿಯೊಬ್ಬರ ಮನೆಯ ಹಿಂದೆ ಹಿತ್ತಲಿನಲ್ಲಿ ತರಹೇವಾರಿ ತರಕಾರಿಯೊಂದಿಗೆ […]

ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ.

ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ? ನಂದಿನಿ ಹೆದ್ದುರ್ಗ ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ. ‘ರೀಫಿಲ್ ಮಾತ್ರ ಸಾಕು’ ಎಂದೆ.. ‘ಅಯ್ಯೋ ರೀಫಿಲ್ಗೂ ,ಫುಲ್ ಪೆನ್ನಿಗೂ ಎರಡೇ ರೂಪಾಯಿ ವ್ಯತ್ಯಾಸ ಮೇಡಮ್ . ಇದನ್ನೇ ತಗೋಳಿ ‘ ಅಂದ ಅಂಗಡಿಯ ಹುಡುಗ. ತಕ್ಕಮಟ್ಟಿಗೆ ವಿದ್ಯಾವಂತನಂತೇ ಕಾಣುತ್ತಿದ್ದ.. ಎರಡು ಮೂರು ರೂಪಾಯಿಗಳ ವ್ಯತ್ಯಾಸಕ್ಕಲ್ಲಣ್ಣ ರಿಫಿಲ್ ಕೇಳ್ತಿರುವುದು.. ನಾನು ಉತ್ಪತ್ತಿ ಮಾಡುವ ಕಸದ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಎಂದೆ… ವಿಚಿತ್ರ ಪ್ರಾಣಿಯಂತೆ ಸುತ್ತಲಿನವರು ನೋಡಿದರೆ ಇನ್ನೂ ಕೆಲವರು ನೀವು ಏನ್ […]

ಪ್ರಕೃತಿ ರಕ್ಷತಿ ರಕ್ಷಿತಾಃ

ಪ್ರಕೃತಿ ರಕ್ಷತಿ ರಕ್ಷಿತಾಃ ಜ್ಯೋತಿ ನಾಯ್ಕ ಜೂನ್ ಐದು ಅಂದಾಕ್ಷಣ ವಿಶ್ವ ಪರಿಸರ ದಿನಾಚರಣೆ ಸ್ಮರಿಸೋದು ಸಾಮಾನ್ಯ ಏಕೆಂದರೆ ಪರಿಸರವು ಹಲವು ಜೈವಿಕ & ಭೌತಿಕ ಘಟಕಗಳ ಆಗರ, ಇವುಗಳ ನಡುವೆಯೇ ಬೇಕು-ಬೇಡಗಳ ಸಂಘರ್ಷ. ೧೯೭೨-೧೯೭೩ರಿಂದ ವಿಶ್ವ ಸಂಸ್ಥೆಯ ನೇತೃತ್ವದಲ್ಲಿ ಪರಿಸರದ ಜಾಗೃತಿಗೊಳಿಸುತ್ತಲೇ ಬಂದಿದ್ದೇವೆ ಆದರೂ ಮತ್ತೆ ಮತ್ತೇ ನಮ್ಮ ಪರಿಸರದ ಬಗ್ಗೆ ತಿಳಿಯುವ ಹಾಗೂ ಅದರ ಮಹತ್ವ ಅರಿಯುವ ಜೊತೆಗೆ ನಮ್ಮಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅವಲೋಕಿಸಿ ಸಂರಕ್ಷಿಸಲು ಪಣತೊಡುವ ಮಹತ್ವದ ದಿನ. ಈ ಪರಿಸರ […]

ಒಲವಿನೋಲೆ

ಓದೋಕೊಂದು ಒಲವಿನೋಲೆ ಜಯಶ್ರೀ ಜೆ.ಅಬ್ಬಿಗೇರಿ ಜೀವದ ಗೆಳತಿ, ನೆತ್ತಿ ಸುಡುವ ಸೂರ‍್ಯನ ಅರ್ಭಟ ತಗ್ಗಿಸಲೆಂದೇ ಮಟ ಮಟ ಮಧ್ಯಾಹ್ನ ಸುರಿದ ಮಳೆ ಗಕ್ಕನೇ ನಿಂತಾಗ, ಆಗಸದಲ್ಲಿ ಕಾಮನಬಿಲ್ಲು ಮೈ ಅರಳಿಸಿಕೊಂಡು ತುಟಿ ಬಿರಿದು ನಿಂತಿತು. ಅದೇ ಕ್ಷಣ ಕಾಗದವನ್ನೇ ದೋಣಿಯಾಗಿಸಿ ನಾನು ನೀನು ಕೈ ಕೈ ಹಿಡಿದು ತೇಲಿ ಬಿಟ್ಟ ಘಳಿಗೆ ಅದೆಷ್ಟು ಮಧುರ ಅನುಭವ! ಅಲ್ಲವೇ ಗೆಳತಿ? ಅದನ್ನು ಮರೆಯಲಾದೀತೆ? ಹಾಲ್ಗಡಲು ಕಡೆಯುವಾಗ ಜನಿಸಿದ ಅಪ್ಸರೆಯಂತೆ ನಿನ್ನ ನೋಟ ಕಂಗೊಳಿಸುತ್ತಿರುವಾಗ ಗಗನದ ಮಳೆ ಬಿಲ್ಲು ನಸು […]

ಇಕೊ ಕ್ಲಬ್ ಗಳ ಅನುಷ್ಠಾನ

ಪರಿಸರದ ಮಹತ್ವ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಇಕೋ ಕ್ಲಬ್ ಗಳ ಅನುಷ್ಠಾನ ಪರಿಸರದ ಮಹತ್ವ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಇಕೋ ಕ್ಲಬ್ ಗಳ ಅನುಷ್ಠಾನ ಹಸಿರೇ ಉಸಿರು- ಪ್ರಕೃತಿಯ ವಿಸ್ಮಯಗಳನ್ನು ಒಳಗೊಂಡಿರುವ ನಮ್ಮ ಸುತ್ತಲಿನ ಪರಿಸರವನ್ನು ನಾವು ಕಾಪಾಡಿಕೊಳ್ಳಬೇಕಾಗಿರುವುದು ಇಂದು ಅನಿವಾರ್ಯವಾಗಿದೆ. ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮ(NGC)ವು ಪರಿಸರ ಮತ್ತು ಅರಣ್ಯ ಮಂತ್ರಾಲಯ(MOEF) ಭಾರತ ಸರ್ಕಾರ (GOL)ದ ರಾಷ್ಟ್ರೀಯ ಶಾಲಾ ಕಾರ್ಯಕ್ರಮವಾಗಿದೆ. ಇದರಡಿಯಲ್ಲಿ ದೇಶದಾದ್ಯಂತ ಪ್ರತಿ ಜಿಲ್ಲೆಯ ಸುಮಾರು 250 ಶಾಲೆಗಳಲ್ಲಿ […]

ಪ್ರಸ್ತುತ

ದುಬಾರಿಯಾಗಲಿರುವ ದಿನಗಳು ಅರುಣ್ ಕೊಪ್ಪ *ಕೊರೊನಾ ದಿನಗಳು ಇನ್ನೂ ದುಬಾರಿಯಾಗಲಿವೆ* ಹೌದು ಇಲ್ಲಿ ದುಬಾರಿ ಎಂದ ಮಾತ್ರಕ್ಕೆ ಹಣ ಅನ್ನೋ ಶಬ್ಧ ಕಾಲ್ಪನಿಕತೆ ಒಂದೆಡೆ ಆದರೆ  ಸಂಕ್ಷಿಪ್ತದೆಡೆಗೆ ಒಯ್ದು ಆಚೆ ಕಿವಿಯಿಂದ ಕೇಳಿ ಈಚೆ ಕಿವಿಯಲ್ಲಿ ಬಿಡುವ ಆಲಸಿ ಪ್ರಮೇಯಕ್ಕೆ ಎಳೆದು ಬಿಡುತ್ತದೆ ಅಲ್ಲವೇ? ಅದು ಹಾಗಲ್ಲ ಇಲ್ಲಿನ ಸಮತೋಲನ ಪರೋಕ್ಷವಾಗಿ ಬದಲಾವಣೆಯಾಗಿ ಆರ್ಥಿಕತೆ ಮೇಲೆ ಪರಿಣಾಮ ಬೀರುವದಷ್ಟೇ ಅಲ್ಲದೆ ,ಮುಂದಿನ ಕ್ರಮ,ಮುಂದೇನು ಅನ್ನೋ ಪ್ರಶ್ನೆ ಮೂಡುವದು ಸಹಜವಾಗಿಯೇ ವಯಕ್ತಿಕ ಬದುಕಿನತ್ತ ಲಗ್ಗೆ ಇಡುತ್ತವೆ. ನಾವಿಷ್ಟು ದಿನ […]

ಆರೋಗ್ಯ

ಧೂಮಪಾನ ದುಷ್ಟಪರಿಣಾಮಗಳು. ಸಂಗಮೇಶ ಎನ್ ಜವಾದಿ  ಧೂಮಪಾನ ಎಂದರೆ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಹೊಗೆಯನ್ನು ಒಳತೆಗೆದುಕೊಳ್ಳುವುದನ್ನು ಧೂಮಪಾನ ಸೇವನೆ ಯೆಂದು ಕರೆಯಲಾಗುತ್ತದೆ. ಇದರಿಂದ ಹೊರಡುವ ಹೊಗೆಯನ್ನು ಉಚ್ಛ್ವಾಸದ ಮೂಲಕ ಒಳತೆಗೆದುಕೊಂಡಾಗ ಇದರ ಸಕ್ರಿಯ ವಸ್ತುಸಾರಗಳು ಆಲ್ವಿಯೋಲೈ ಮೂಲಕ ಶ್ವಾಸಕೋಶದಲ್ಲಿ ಹೀರಲ್ಪಡುತ್ತವೆ.ಈ ಸಕ್ರಿಯ ವಸ್ತುಸಾರಗಳು ನರಗಳ ತುದಿಗಳಲ್ಲಿ ರಾಸಾಯನಿಕ ಕ್ರಿಯೆಗಳನ್ನುಂಟುಮಾಡಿ ಹೃದಯ ಬಡಿತದ ವೇಗ, ನೆನಪಿನ ಶಕ್ತಿ, ಸಕ್ರಿಯತೆ ಹಾಗೂ ಪ್ರತಿಕ್ರಿಯಿಸುವ ಸಮಯದಲ್ಲಿ ಏರಿಕೆಯನ್ನುಂಟುಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಚಟ ಹೆಚ್ಚಾಗಿ ಗ್ರಾಸವಾಗುತ್ತಿದೆ. […]

ಪ್ರಸ್ತುತ

ಸಮಯ ಅಮೂಲ್ಯ ಸಮಯ ಅಪವ್ಯಯ ಮಾಡದಿರುವುದು ಹೇಗೆ? ಜಯಶ್ರೀ.ಜೆ.ಅಬ್ಬಿಗೇರಿ. ಎಲ್ಲವನ್ನೂ ಗೆಲ್ಲಬಹುದು.ಸಮಯವನ್ನು ಗೆಲ್ಲಲಾಗುವುದಿಲ್ಲ. ಎಲ್ಲವನ್ನೂ ಕೊಳ್ಳುವ ಶಕ್ತಿ ಇರುವ ಸಿರಿವಂತನೂ ಬಡವ ಸಮಯದ ಮುಂದೆ. ಎಲ್ಲರೂ ನಿದ್ರಿಸುವಾಗಲೂ ಇದು ಜಾಗೃತವಾಗಿಯೇ ಇರುತ್ತದೆ. ಸಮಯವನ್ನು ಗೆಲ್ಲಲಾಗುವುದಿಲ್ಲ ಆದರೆ ಸರಿಯಾದ ಸಮಯ ನಿರ್ವಹಣೆ ಮಾಡಿ ಗೆಲ್ಲಬಹುದು. ಕನಸುಗಳನ್ನು ನನಸಾಗಿಸಬಹುದು. ಅಂಥವರನ್ನು ಯಶಸ್ವಿಗಳು ಎಂದು ಗುರುತಿಸಿ ಗೌರವಿಸುತ್ತಾರೆ. ಇವೆಲ್ಲ ಸಮಯದ ಕುರಿತಾದ ಸಾಮಾನ್ಯ ಮಾತುಗಳು. ‘ನೆನಪಿಡಿ, ಸಮಯ ಹಣವಿದ್ದಂತೆ.’ ಎನ್ನುವ ಬೆಂಜಮಿನ್ ಫ್ರಾಂಕ್ಲಿನ್ ಮಾತನ್ನು ನಾವೆಲ್ಲರೂ ಕೇಳಿದ್ದೇವೆ. ಅದನ್ನು ನಂಬುತ್ತೇವೆ. ಆದರೂ […]

ಅವ್ವನ ನೆನಪಲಿ

ಅವ್ವನ ನೆನಪಲಿ… ಮಲ್ಲಿಕಾರ್ಜುನ ಕಡಕೋಳ ಸಗರನಾಡು – ಮಸಬಿನ  ಪ್ರಾಂತ್ಯದ ಸುರಪುರ ಬಳಿಯ ” ಜಾಲಿಬೆಂಚಿ ”  ಅವ್ವನ  ತವರೂರು. ಏಳೂರು  ಗೌಡಕಿಯ ವತನದಾರ ಮನೆತನದಾಕೆ.  ಕಡಲೇಬೇಳೆ ಬಣ್ಣದ ತುಂಬು ಚೆಲುವೆಯಾದ  ಆಕೆಯನ್ನು ನೋಡಿದ  ಅಪ್ಪನಿಗೆ, ಮದುವೆಯಾಗುವುದಾದರೇ.. ಈ ಸಾಹೇಬಗೌಡರ ಮಗಳು ನಿಂಗಮ್ಮ ಗೌಡತಿಯನ್ನೇ ಆಗಬೇಕೆಂಬ ಸಂಕಲ್ಪ  ಮಾಡಿದ. ಅಪ್ಪನಿಗೆ ಆಗ ಉಂಡುಡಲು  ಯಥೇಚ್ಛವಾಗಿದ್ದುದು ಕಡುಬಡತನ ಮಾತ್ರ. ನಮ್ಮೂರ ಸಾಹುಕಾರರ ಹೊಲ – ಮನೆಯಲ್ಲಿ ಜೀತಕ್ಕಿದ್ದ. ಸಾಹುಕಾರರಿಗೆ  ನೂರಾರು ಎಕರೆ ಜಮೀನು. ಅದೆಲ್ಲ  ಜಮೀನು ತನ್ನದೆಂದು ” ಫೋಸು ” ಕೊಟ್ಟು ಸುಳ್ಳುಹೇಳಿ ಅವ್ವನನ್ನು ಲಪಟಾಯಿಸಿದನಂತೆ. ೧೯೪೮ ರ ರಜಾಕಾರರ ಸಪಾಟಿಯಷ್ಟೊತ್ತಿಗೆ  ಅವರ ಲಗ್ನವಾಗಿ ಅಜಮಾಸು ಎರಡು  ಪಟ್ಟಗಳೇ ಅಂದರೆ ಇಪ್ಪತ್ನಾಲ್ಕು  ವರುಷಗಳು ಕಳೆದಿದ್ದವಂತೆ.  ಒರಟು ಕಗ್ಗಲ್ಲಿನಂತಹ  ಅಪ್ಪನನ್ನು  ತಿದ್ದಿ,ತೀಡಿ  ಮೂರ್ತಿ  ಮಾಡಿದ  ಕೀರ್ತಿ […]

Back To Top