Category: ಇತರೆ

ಇತರೆ

ಮಹಿಳೆ

ನಾನು ಹೆಣ್ಣೆಂಬ ಹೆಮ್ಮೆ ನನಗಿದೆ! ಐಶ್ವರ್ಯ .ಎಲ್ ನಾನೊಂದು ಹೆಣ್ಣಾಗಿ ಈ ವಿಷಯದ ಬಗ್ಗೆ ಬರೆಯೋಕೆ ನನಗ್ಯಾವ ಮುಜುಗರವಾಗ್ಲಿ, ಅವಮಾನವಾಗ್ಲಿ‌ ಇಲ್ಲ. ಬದಲಾಗಿ ನಾನೊಬ್ಬ ಹೆಣ್ಣೆಂಬ ಹೆಮ್ಮೆ ನನಗಿದೆ. ನೀವೆಲ್ಲ ಅನ್ಕೊಬಹುದು ಇದೇನು ಜಗಜ್ಜಾಹೀರು ಮಾಡೊ ವಿಷಯಾನ ಅಂತ ಆದ್ರೆ ಜಗತ್ತಿನ ಅದೆಷ್ಟೊ ಜೀವಗಳಿಗೆ ಗೊತ್ತಿಲ್ಲ ಹೆಣ್ತನದ ನಿಗೂಢತೆ, ನೋವುಗಳ ಬಗ್ಗೆ. ಕಂಬಳಿ ಹುಳುವದು ರೆಕ್ಕೆ ಕಟ್ಟುವ ಕಾಲದಂತೆ ಮೊಣಕಾಲಿನವರೆಗೂ ಲಂಗವೆತ್ತಿ ಕುಂಟೆಬಿಲ್ಲೆ ಆಡುತ್ತಿದ್ದವಳಿಗೆ ಹಿಂದೆಂದೂ ಆಗದಂತ ಕಿಬ್ಬೊಟ್ಟೆಯ ಬಾಧ, ಅಲ್ಲಿಂದಲೇ ಶುರುವಾಯ್ತೆನೋ ಹೆಣ್ಣೊಬ್ಬಳ ದೈಹಿಕ ಹೋರಾಟ, […]

ಮಕ್ಕಳ ಸಾಹಿತ್ಯ

ಆಯ್ಕೆ ಅವ್ಯಕ್ತ ನನ್ನಹೆಚ್ಚಿನ ಸಮಯವನ್ನು ನಾನು ಮಕ್ಕಳೊಂದಿಗೆ ಕಳೆಯುತ್ತಿರುವುದು.ಅವರೊಂದಿಗೆ ಆದ ಅನುಭವಗಳನ್ನು ಸಣ್ಣ ಸಣ್ಣ ಕಥೆಗಳ ಮೂಲಕ ಬರೆಯುತ್ತೇನೆ. ಅಂತ ಕಥೆಗಳಲ್ಲಿ ಇದೂ ಒಂದು) ಆಯ್ಕೆ ಒಳಗೆ ತಲೆಯಾಡಿಸುತ್ತಾ ನಡೆದು ಬಂದ್ಲು. ನಾನು ನೋಡಿ ಮುಗುಳ್ನಗೆ ಬೀರಿದೆ. ಜ್ವಾಲಾಮುಖಿ ಬಚ್ಚಿಟ್ಟಿದ್ದಂತೆ“ನಾನು ಅವರನ್ನೆಲ್ಲ ದ್ವೇಷಿಸುತ್ತೇನೆ”, “ಇನ್ಯಾವತ್ತೂ ಅವರೊಂದಿಗೆ ಮಾತಾಡೋದಿಲ್ಲ”. ನಾನು ತಾಳ್ಮೆಯಿಂದ “ಏನಾಯ್ತೆ ನನ್ ರಾಣಿ?”. ಅಂತ ಕೇಳ್ದೆ. ನನ್ನ ಪ್ರಶ್ನೆಗೆ ಕಾಯ್ತಿದ್ಲೆನೋಅನ್ನೋ ಹಾಗೆ“ನನಗೆ ನೋವಾಗಿದೆ, ನನ್ನ ಆಡ್ಕೋತಾರೆ,ನನ್ನ ನೋಡಿ ನಗ್ತಾರೆ,ನಾನು…. ನನ್ನ…. ನನಗೆ…”ನಿಲ್ಲೋಮಾತೇ ಇಲ್ಲ ! ನಾನುಸ್ವರ […]

ಭಾಷೆ

ಕನ್ನಡದ ಕಲಿಸುವಿಕೆಯ ಒಂದು ಅನುಭವ ದಾಕ್ಷಾಯಣಿ ನಾಗರಾಜ್            ಭಾಷೆಯೂ ಮಾನವನಿಗೆ ಒದಗಿಬಂದ ಅತ್ಯಾದ್ಭುತವಾದ ಶಕ್ತಿಯಾಗಿದೆ.ಅದನ್ನು ಬಳಸಿ ರೂಢಿಸಿಕೊಂಡು ಸಿದ್ದಿಸಿದರೆ ಅದು ಮಾಂತ್ರಿಕ ಶಕ್ತಿಯಾಗಿ ಪರಿವರ್ತಿನೆಯಾಗಿ ಅವನಿಗೆ ಜೀವಂತಿಕೆಯನ್ನು ತಂದುಕೊಡುತ್ತದೆ. ಭಾಷಾ ಕಲಿಕೆಯನ್ನು ಕಲಿಸುವ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಶಿಕ್ಷಕನು ಮಹತ್ವದ ಪಾತ್ರ ನಿರ್ವಹಿಸಬೇಕಾಗುತ್ತದೆ.          ಮಗುವಿನ ಸರ್ವತೋಮುಖ ಬೆಳೆವಣಿಗೆಯಲ್ಲಿ ಮಾತೃಭಾಷೆಯ ಪಾತ್ರ ಮುಖ್ಯವಾಗಿದೆ. ಆದ್ದರಿಂದ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡಬೇಕು.            ಮಗು,ಮನೆ ,ಪರಿಸರ ,ಕೌಟುಂಬಿಕ ಸದಸ್ಯರು, ಸಹಪಾಠಿಗಳು ಸಮಾಜದ ಇತರರೊಂದಿಗೆ ಎಳವೆಯಿಂದಲೇ ಹಲವಾರು ಭಾಷಿಕ ಸಾಮರ್ಥಗಳನ್ನು […]

ಬಾಲ್ಯದ ದೀಪಾವಳಿ

ಅಪ್ಪ ಸಿಡಿಸಿದ ಪಟಾಕಿ ಸಿಂಧು ಭಾರ್ಗವ್. ದೀಪಾವಳಿ ಬಂತೆಂದರೆ ಎಲ್ಲಿಲ್ಲದ ಸಂಭ್ರಮ, ಸಡಗರ. ಪುಟಾಣಿಗಳಿಗೆ ಹೊಸ ಝಯಿತಾರಿ ಅಂಗಿ ಕೊಡಿಸುವರು. ಬೊಗಸೆ ತುಂಬಾ ಸಿಹಿಯನ್ನು ನೀಡುವರು. ಯಾರ ಮನೆಗೆ ಹೋದರೂ ಸಿಹಿತಿಂಡಿ ನೀಡಿ ಆ ಪುಟ್ಟ ಮಕ್ಕಳ ಖುಷಿಯನ್ನು ತಾವೂ ಅನುಭವಿಸುವರು. ಅದಲ್ಲದೇ ಇದಕ್ಕಿಂತ ಹೆಚ್ಚೆಂದರೆ ಅಪ್ಪ ಪಟಾಕಿ ತರುವುದು ಮಕ್ಕಳಿಗೆ ಎಲ್ಲಿಲ್ಲದ ಖುಷಿ. ಕುಣಿದು ಕುಪ್ಪಳಿಸುತ್ತಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಕಟ್ಟಡಗಳ ಹಾವಳಿಯೇ ವಿನಃ, ಮಕ್ಕಳಿಗೆ ಆಡಲು ಅನುಕೂಲವಾಗುವಂತಹ ವಾತಾವರಣ ಕಡಿಮೆ. ಆದರೂ ಈ ದೀಪಾವಳಿ ಹಬ್ಬ […]

ಲೇಖನ

ಆ ದೃಶ್ಯಗಳನ್ನು ಅಲಂಕರಿಸಿ ಹಂಚುತ್ತಿದ್ದಾರೆ! ಪಿಎಂ ಇಕ್ಬಾಲ್ ಕೈರಂಗಳ ಕೆಲವು ದೌರ್ಜನ್ಯದ ವಾರ್ತೆಗಳು, ವೀಡಿಯೋಗಳು FB ಮತ್ತು ವಾಟ್ಸಪಲ್ಲಿ ಷೇರು ಆಗಿ ನಮ್ಮ ಕಣ್ಣಿಗೆ ಬೀಳುತ್ತಿರುವುತ್ತವೆ. ನೋಡಕ್ಕಾಗದೇ ನೋಡುತ್ತೇವೆ. ಆಗೆಲ್ಲಾ ಮನಸ್ಸು ವಿಪರೀತ ಹರ್ಟುಗೊಳ್ಳುತ್ತದೆ. ಹೃದಯವನ್ನು ಯಾರೋ ಹಿಂಡಿದಂತಾಗುತ್ತದೆ. ಕೆಲವು ನಮ್ಮನ್ನು ಅಳಿಸಿಯೇ ಬಿಡುತ್ತವೆ. ವಿಕೃತ ಮನಸ್ಸಿನ ಪೈಶಾಚಿಕ ಮನುಷ್ಯರ ವಿರುದ್ಧ ರಕ್ತ ಕುದಿಯುತ್ತದೆ. ಅವರನ್ನು ಜೀವಂತ ಸುಡಬೇಕೆಂದು ಅನಿಸುತ್ತದೆ. ಕ್ರೌರ್ಯ, ದೌರ್ಜನ್ಯಗಳ ತಾಕತ್ತೇ ಹಾಗೆ. ಒಂದೆರಡು ನಿಮಿಷದ ವಾರ್ತೆಯಾಗಿ ಅಥವಾ ವೀಡಿಯೋ ಆಗಿ ಸಿಕ್ಕರೆ ನಮಗೆ […]

ಮೀನು ಶಿಕಾರಿಯ ಸಂಭ್ರಮ

ಮಳೆಗಾಲದ ಆರಂಭ ಮತ್ತು ಮೀನು ಶಿಕಾರಿ… ರಮೇಶ್ ನೆಲ್ಲಿಸರ ‘ಮಳ್ಗಾಲ ಅನ್ನೋದ್ ಯಾವಾಗ್ ಬಂದ್ ಈ ಸುಡ್ಗಾಡ್ ಶೆಕೀನ ಹೊತ್ಕಂಡ್ ಹೋಯ್ತದೋ ಆ ದ್ಯಾವ್ರೆ ಬಲ್ಲ’, ಅಂತ ಬೇಸ್ಗೀಲಿ ಹಾಗೇಯ “ಈ ಹಾಳಾದ್ ಮಳಿ ದಸೇಂದ್ ಮನೆ ಹೊರ್ಗ್ ಕಾಲಿಡಕ್ ಆಗ್ದು” ಅಂತ ಮಳ್ಗಾಲದಾಗೆ , ಈ ಬಗೀ ಮಾತು ನಮ್ ಮಲ್ನಾಡ್ ಕಡೆ ಎಲ್ರೂ ನಾಲ್ಗಿ ಮೇಲೂ ನಲೀತರ‌್ದದೆ. ಏನ್ ಶೆಕಿ ಅಂತೀರಾ, ಹೋದ್ ಮಳ್ಗಾಲ‌್ದಲ್ ಆ ನಮೂನಿ ಮಳೆ ಹೊಯ್ದ್ರು ನೀರ್ ಅನ್ನದ್ ಪಾತಾಳ್‌ಮಟ […]

ಲಹರಿ

ಒಮ್ಮೆ ತಿರುಗಿ ನೋಡು ನನ್ನ ಕೊನೆಯ ತಿರುವು ಬರುವ ಮುನ್ನ. ವಿಷ್ಣು ಭಟ್ ಹೊಸ್ಮನೆ ನನ್ನ ಮನಸ್ಸು ಅವಳು ತಿರುಗಿ ನೋಡಲೇಬಾರದು. ಮುಂದೆ ಎಂದಿಗೂ ಸಂಧಿಸದ ಹಾದಿಯಲ್ಲಿ ನಾನು ಮತ್ತು ಅವಳು ಸಾಗುತ್ತ ಇರಬೇಕು ಅಂದುಕೊಂಡಿತ್ತು. ಅವತ್ತು ತಿರುಗಿ ನೋಡದೇ ಹೋದರೂ ಎರಡು ದಿನ ಬಿಟ್ಟು ಮತ್ತೆ ಅವಳು ಬಂದಿದ್ದಳು. ಅವಳನ್ನು ಮತ್ತೆ ನೋಡಿದೆ ಎಂಬೊಂದು ಖುಷಿ ಬಿಟ್ಟರೆ ಮತ್ತೇನೂ ನನ್ನಲ್ಲಿ ಹುಟ್ಟಲಿಲ್ಲ. ಆದರೆ ಅವಳು ಎದೆ ತುಂಬ ಪ್ರೀತಿಯನ್ನು ಹೊತ್ತು ತಂದಿದ್ದಳು. ಅವಳು ಕಾದುಕಾದು ಕೇಳಿದ್ದು […]

ಸಂಪ್ರದಾಯದ ಸೊಬಗು

ಅರುಣ್ ಕೊಪ್ಪ ಊರ ಬಾಗಿಲು ಮುಂದೆ ಭಯಭಕ್ತ ಕಲ್ಲುಗಳು, ತೀರಾ ಹಳೆಯವು ಅಲ್ಲಲ್ಲಿ ಹಾಲು ಸೋಕುವ ಮರಗಳು, ಮುಗಿದರೆ ಕೈ ದೇವರು, ಹಾಗೋ ಹೀಗೋ ಗಾಳಿ ಬಂದಾಗ ಬುಡಸಡಿಲವಾಗುವ ಭಯ ಮಹಾಮಯ ! ಮುಂಗಾರಮುಂದೆ ಮಾತು ಕಥೆ, ಅಂತೂ ಕುದುರಿಸಿಯೇ ಬಿಟ್ಟರು ಮಾರಿ ಹಬ್ಬವಂತೆ, ಕುರಿ ಕೋಳಿಯ ಜಾತ್ರೆ ಊರೊಳಗೆ, ಮುಟ್ಟು ಮೈಲಿಗೆ ಹೆಂಗಸರ ಸ್ಥಳಾಂತರ ಒಪ್ಪ, ವಾಗತಿಯಲಿ ಹಬ್ಬ ಸಜ್ಜು ಊರ ಹಬ್ಬದ ಸಲುವಾಗೆ ಶಣ್ಣಿ ಮದುವಿ ಮುಂದಾತು ಕಿವಿಗಿಲ್ಲ ಮೂಗಿಗಿಲ್ಲ ಎಲ್ಲ ದುಬಾರಿಮಯ.. ಇದ್ದದ್ದು […]

Back To Top