Category: ಇತರೆ

ಇತರೆ

ಮೈಲಿಗಲ್ಲಾದ ಮೊದಲ ಕವಿತೆ

ಮೊದಲ ಕವಿತೆಯ ರೋಮಾಂಚನ ಸುಜಾತಾ ರವೀಶ್ ಶಾಲೆಯಲ್ಲಿ ಪ್ರಬಂಧ ಸ್ಪರ್ಧೆಗಳಲ್ಲಿ ಬರೆಯುತ್ತಿದ್ದರೂ ಕವಿತೆ ಅಂತ ಬರೆದದ್ದು ಹತ್ತನೇ ತರಗತಿಯಲ್ಲೇ.  ಅದಕ್ಕೆ ಮುಂಚೆ ಗದ್ಯರೂಪದಲ್ಲಿ ಸಾಕಷ್ಟು ಮನಸ್ಸಿಗೆ ಬಂದದ್ದನ್ನು ಗೀಚಿ ನನ್ನ ಪ್ರೌಢ ಶಾಲಾ ಕನ್ನಡ ಶಿಕ್ಷಕಿ ಪುಷ್ಪಾ ಮೇಡಂ ಅವುಗಳನ್ನು ಲಂಕೇಶ್ ಪತ್ರಿಕೆಗೆ ಕಳಿಸುವ ಅಂದಿದ್ದರೂ ಕಳಿಸಿದರಾ ಬಿಟ್ಟರಾ ನೆನಪಿಲ್ಲ.  ಆಗ ಬರೆದದ್ದು ಯಾವುದೂ ಬಳಿಯಲ್ಲಿಲ್ಲ . ಅದೊಂದು ದಿನ ಒಂದು ಪುಟ್ಟ ಆಟೋಗ್ರಾಫ್ ಸೈಜಿನ ಪುಸ್ತಕವೊಂದನ್ನು ನನ್ನ ತಂದೆ ಕೊಟ್ಟರು ಅಂಗೈ ಅಗಲದ ಆ ಪುಸ್ತಕದಲ್ಲಿ […]

ಗಾಂಧಿಯೇ ಮೊದಲ ಕವಿತೆ

ಮೊದಲ ಕವಿತೆಯ ರೋಮಾಂಚನ ರೇಶ್ಮಾಗುಳೇದಗುಡ್ಡಾಕರ್ ಅಂದು ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಮನೆಯ ಕಡೆ ಪಯಣ ಬೆಳಸಿದ್ದೆ . ನನ್ನ ಪ್ರೀತಿಯ ಲೇಡಿ ಬರ್ಡ ನೊಂದಿಗೆ.   ಮತ್ತೆ ಒಂದು ಘಂಟೆ ಕಳೆದು ಲ್ಯಾಬ್ ಗೆ ಹೋಗ ಬೇಕಾಗಿತ್ತು . ಸರ ಸರ ಮನೆಗೆ ಬಂದು ನನ್ನ ಸೈಕಲ್ ಅಂಗಳದಲ್ಲೆ ಬಿಟ್ಟು ಒಳಗೆ ಬಂದೆ “ಬಾಬಾ ರೇಶ್ಮಾ ಹೊಸತು ಪತ್ರಿಕೆ ಎರಡು ಬಂದಿದೆ ನೋಡು “.ಎಂದು ನನಗೆ ತಂದು ಕೊಟ್ಟರು .ತಂದೆಯವರಿಗೂ ಪತ್ರಿಕೆ ನೋಡಿ ಅಚ್ಚರಿಯಾಗಿದೆ .ನಾನು ಕವಿತೆ ಕಳಿಸಿರುವ […]

ಮೊದಲ ಕವನ

ಮೊದಲ ಕವಿತೆಯ ರೋಮಾಂಚನ ಎ ಎಸ್. ಮಕಾನದಾರ 80ರ ದಶಕದ ಕೊನೆ ಅಂಚಿನಲಿ ನಿರಂತರ ಸಾಹಿತ್ಯ ವೇದಿಕೆ ಗಜೇಂದ್ರಗಡ ದಲ್ಲಿ ಹುಟ್ಟಿಕೊಂಡಿತು. ಹುಬ್ಬಳ್ಳಿ ಗುಂಡಪ್ಪ ಪುಂಡಲೀಕ ಕಲ್ಲಿಗನೂರ್  ಇಬ್ಬರೂ ಹಿರಿಯರು ಕವನ ಕುಂಜ ಸಂಪಾದಿತ ಕವನ ಸಂಕಲನ ಪ್ರಕಟಿಸಿದರು. ಹುಬ್ಬಳ್ಳಿ ಗುಂಡಪ್ಪ ಗುಂಡಿನ ಗಿರಾಕಿ. ನಾನಾಗ ವೈನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದೆ. ಅಂಗಡಿ ಬಾಗಿಲು ತೆರೆದೊಡನೆ ಮೊದಲ ಗಿರಾಕಿ ಗುಂಡಪ್ಪ. ಬಗಲಲ್ಲಿ ಹತ್ತಾರು ಪತ್ರಿಕೆ ತರುತ್ತಿದ್ದರು. ಗುಂಡಿನ ಮತ್ತು ಏರಿದಂತೆ ಕಾವ್ಯಝರಿ ಸರಾಗವಾಗಿ ಬರುತ್ತಿತ್ತು. ಬೆಳಿಗ್ಗೆ […]

ಕಟ್ಟುವ ಮುಕ್ತತೆ

ಲೇಖನ ನೂತನ ದೋಶೆಟ್ಟಿ ೧೯೮೫ ಮಿಖೈಲ್ ಗೋರ್ಬಚೇವ್ ಸೋವಿಯತ್ ರಷ್ಯಾ ಒಕ್ಕೂಟದ ಕೊನೆಯ ಅಧ್ಯಕ್ಷರಾಗಿ ಗ್ಲಾಸ್‌ನೊಸ್ಟ್ (ಮುಕ್ತತೆ) ಹಾಗೂ ಪೆರೆಸ್ಟ್ರೋಯಿಕ ಅಂದರೆ ಅದುವರೆಗೂ ಇದ್ದ ರಾಜಕೀಯ ಹಾಗೂ ಆರ್ಥಿಕ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಎರಡು ನೀತಿಗಳನ್ನು ಹುಟ್ಟು ಹಾಕಿದರು. ಇದರ ಫಲವಾಗಿ ೧೯೨೨ರ ಡಿಸೆಂಬರಿ ನಲ್ಲಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದ ಸೋವಿಯತ್ ರಷ್ಯಾ ಒಕ್ಕೂಟ ಶಿಥಿಲವಾಗಿ ಛಿದ್ರ ಛಿದ್ರವಾಯಿತು.೬೩ ವರ್ಷಗಳವರೆಗೆ ಅಮೇರಿಕಾಕ್ಕೆ ಸೆಡ್ಡು ಹೊಡೆದು ನಿಂತಿದ್ದ ‘ಸೂಪರ್ ಪವರ್’ ರಾಷ್ಟ್ರ ಹೇಳ ಹೆಸರಿಲ್ಲದಂತಾಯಿತು. ರಷ್ಯಾ ಕ್ರಾಂತಿಯ ಹರಿಕಾರನಾಗಿದ್ದ […]

ಮಾಯಾ ಜಗತ್ತಿನ ಚಕ್ರವ್ಯೂಹದಲ್ಲಿ ಸಿಲುಕಿ

ಲಹರಿ ಡಾ. ಅಜಿತ್ ಹರೀಶಿ ವಾತಾವರಣ ಥಂಡಿಯಿಂದ ಕೂಡಿದೆ. ಮನಸ್ಸು ದುಪ್ಪಡಿ ಹೊದ್ದು ಮಲಗಿದೆ. ನಿನ್ನೆ ಒಂದೇ ದಿನಕ್ಕೆ ವಾಟ್ಸಾಪ್ ಗುಂಪೊಂದರಿಂದ ನಾಲ್ಕು ಜನ ಲೆಫ್ಟ್ ಆದರು. ಹೋದ ವರ್ಷ ಜುಲೈ ತಿಂಗಳಲ್ಲೇ ನಾನು ಎಲ್ಲ ಗ್ರೂಪ್ ಗಳಿಂದ ಹೊರಹೋಗಿದ್ದೆ. ಮತ್ತೆ ಕೆಲವು ಗ್ರೂಪ್ ಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಮರಳಿದ್ದೆ. ಅವರೂ ಮರಳಬಹುದು. ವಾತಾವರಣ, ವಾಟ್ಸಾಪು ಮತ್ತು ಮಾನಸಿಕತೆಯ ಜೊತೆಗೆ ಈ ಬಾರಿ ಕೊರೋನ ಯಾಡೆಡ್ ಫ್ಲೇವರ್ರು. ಫೇಸ್ಬುಕ್ ನಮ್ಮನೆ ದೇವರು! ಬೆಳಿಗ್ಗೆ ಫೇಸ್ಬುಕ್ ಮುಂದೆ ಕುಳಿತು […]

ಕವಿತೆಯೆಂಬ ಪುಳಕದ ಧ್ಯಾನ

ಮೊದಲ ಕವಿತೆಯ ರೋಮಾಂಚನ ಸ್ಮಿತಾ ಅಮೃತರಾಜ್ ನಿಜ  ಹೇಳಬೇಕೆಂದರೆ  ನಾನೊಬ್ಬಳು ಕವಯತ್ರಿ ಆಗುತ್ತೇನೆ ಅಂತ ಕನಸು ಮನಸಿನಲ್ಲೂ ಅಂದು ಕೊಂಡವಳಲ್ಲ. ಈಗಲೂ ಹಾಗನ್ನಿಸುತ್ತಿಲ್ಲ.  ಆದರೆ ಕೆಲವೊಮ್ಮೆ ಹುಕಿ ಹುಟ್ಟಿ ಗೀಚಿದ ಎರಡು ಸಾಲು ಅಲ್ಲಿಲ್ಲಿ ಕಾಣಿಸಿಕೊಂಡು, ಕೇಳಿಸಿಕೊಂಡು, ಅದನ್ನೇ ಕವಿತೆ ಅಂತ ಭ್ರಮಿಸಿ ನನಗೆ ಕವಯತ್ರಿ ಅನ್ನುವ ಬಿರುದಾಂಕಿತವನ್ನ ಅವರಿವರು ಯಾವುದೇ ಕವಡೆ ಕಾಸಿಲ್ಲದೆ ಪುಕ್ಕಟೆ ಕೊಟ್ಟು ಗೌರವಾದರದಿಂದ ನೋಡುವಾಗ, ನಾನು ಅದನ್ನು ಸುಖಾ ಸುಮ್ಮಗೆ ಅಲ್ಲಗಳೆದರೆ ಅದು ಸಾಹಿತ್ಯ ಲೋಕಕ್ಕೇ ಮಾಡುವ ಅಪಚಾರವಲ್ಲವೇ? ಅಂತ ನನ್ನೊಳಗೆ […]

ನಾ ಬರೆದ ಮೊದಲ ಕವನ

ಮೊದಲ ಕವಿತೆಯ ರೋಮಾಂಚನ ಸಾಹಿತ್ಯದ ಕಡೆಗೆ ನನ್ನ ಒಲವು ಚಿಕ್ಕವಳಿರುವಾಗಿಂದಲೇ ಇದೆ. ಅಂದರೆ ಕಥೆ, ಕಾದಂಬರಿ ಓದುವುದು. ಕವನ ಬರೆಯುವುದಿರಲಿ ಓದುವದೂ ನನ್ನ ಅಳವಲ್ಲವೆಂದುಕೊಂಡವಳು ನಾನು. ಅಂತಹ ದರಲ್ಲಿ ಈಗ ನಾನು ಪ್ರಕಟಿಸಿದ ಎಂಟು ಕೃತಿಗಳಲ್ಲಿ, ಐದು ಕವನ ಸಂಕಲನಗಳು. ನನಗೇ ಆಶ್ಚರ್ಯವಾಗುತ್ತದೆ! ಗದ್ಯ ಓದುತ್ತಿರುವಾಗ ಸಾಮಾಜಿಕ, ಐತಿಹಾಸಿಕ,ಪತ್ತೇದಾರಿ ಕಾದಂಬರಿ, ವಿಜ್ಞಾನಕ್ಕೆ ಸಂಬಂಧಪಟ್ಟ ಪ್ರಭಂದ ಇತ್ಯಾದಿ ನನ್ನ ಓದಿನ ಪರಿಮಿತಿಯಲ್ಲಿ ಇರುತ್ತಿತ್ತು. ಸ್ನೇಹಿತರು ಕವನ ಓದಲು ಪುಸಲಾಯಿಸಿದರು. ಉಹುಂ, ಕಣ್ಣೆತ್ತಿ ನೋಡಿರಲಿಲ್ಲ. ಆದರೆ ನಿವೃತ್ತಿ ಹೊಂದಿದ ಮೇಲೆ […]

ಮೊದಲ ಕವಿತೆ

ಮೊದಲ ಕವಿತೆಯ ರೋಮಾಂಚನ ಶೀಲಾ ಭಂಡಾರ್ಕರ್ ನಾನು ಮೊದಲ ಕವಿತೆ ಬರೆದಾಗ ಅದು ಪದ್ಯವೋ ಗದ್ಯವೋ ನನಗೇ ತಿಳಿಯಲಿಲ್ಲ. ನಾನದನ್ನು ಕವಿತೆ ಅಂದುಕೊಂಡೆ ಅಷ್ಟೇ. ಬರೆಯಬೇಕೆಂದು ಬರೆದುದಲ್ಲ ಅದು ಕಾಳಿದಾಸನ ಬಾಯಿಯಿಂದ ಆಕಸ್ಮಿಕವಾಗಿ ನಿರರ್ಗಳವಾಗಿ ಶ್ಯಾಮಲಾ ದಂಡಕದ ಮಾಣಿಕ್ಯ ವೀಣಾ ಶ್ಲೋಕ ಹೊರಹೊಮ್ಮಿದಂತೆ ನನ್ನ ಮನಸ್ಸಿನೊಳಗೆ ಕೆಲವು ಸಾಲುಗಳು ಹಾಗೆ ಹಾಗೆಯೇ ಬರಲು ಶುರುವಾದವು. ಅಂಥ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದೊಂದು ರಾತ್ರಿ. ಎಂದಿನಂತೆ ಅದೂ ಒಂದು ರಾತ್ರಿ. ಮಲಗಿದರೆ ನಿದ್ದೆ ಹತ್ತುತ್ತಿಲ್ಲ. ಏನೇನು ಮಾಡಿದರೂ ಪ್ರಯತ್ನ ಫಲಕಾರಿ […]

ಜ್ವಾಲೆಗಳ ನಡುವೆ…ಹುಟ್ಟಿದ ಕಾವ್ಯ

ಮೊದಲ ಕವಿತೆಯ ರೋಮಾಂಚನ ನಾಗರಾಜ ಹರಪನಹಳ್ಳಿ ನಾನು ಸಾಹಿತ್ಯದ ವಿದ್ಯಾರ್ಥಿ. ಉಪನ್ಯಾಸಕ ಆಗಬೇಕೆಂದು ಕೊಂಡಿದ್ದೆ. ಆಗಿದ್ದು ಪತ್ರಕರ್ತ. ಬಿಡುವಿನ ಮಧ್ಯೆ ಸಾಹಿತ್ಯದ ಓದು, ಬರಹ ಇದ್ದೇ ಇದೆ. ನನ್ನ ಮೊದಲ ಕವಿತೆ ಪ್ರಕಟವಾದದ್ದು ದಾವಣಗೆರೆಯ ಹೊಯ್ಸಳ ಪತ್ರಿಕೆಯಲ್ಲಿ. ೧೯೯೨ ರ ಸಮಯ. ಕವಿತೆಯ ಶೀರ್ಷಿಕೆ “ಕಲೆಗಳು” ಅಂತ ನೆನಪು.‌ ಸಾಹಿತ್ಯ ಸಂಗಾತಿ ಆ ಕವಿತೆಯ ನೆನಪಿಸಿತು.‌ಹೊಯ್ಸಳದ ಪ್ರತಿ ಸಿಕ್ಕೀತೆಂದು ಹುಡುಕಾಡಿದೆ.‌ ಸಿಗಲಿಲ್ಲ.‌ ಕವಿತೆ ಬಂಧ ಗಟ್ಟಿಯಾಗಿರಲಿಲ್ಲ.‌ ಬಂಡಾಯ  ಶೈಲಿಯ ಕವಿತೆಯಾಗಿತ್ತು. ೧೯೯೧-೯೨ ಸಮಯದಲ್ಲಿ ಫ್ರೆಂಚ್ ಲೇಖಕರಾದ ಅಲ್ಬರ್ಟ  […]

ಲೋಕಶಾಹಿರ ಅಣ್ಣಾಭಾವು ಸಾಠೆ

“ನೀನು ಗುಲಾಮನಲ್ಲ, ಈ ವಾಸ್ತವ್ಯ ಜಗತ್ತಿನ ನಿರ್ಮಾಪಕ“ “ನೀನು ಗುಲಾಮನಲ್ಲ, ಈ ವಾಸ್ತವ್ಯ ಜಗತ್ತಿನ ನಿರ್ಮಾಪಕ” ಹೀಗೆ ಹೇಳಿದ್ದು, ಯಾವ ವಿದೇಶಿ ವಿಚಾರವಂತನಲ್ಲ; ಮರಾಠಿ ಮೂಲ ಮಹಾನ್ ಸಾಹಿತಿ ಲೋಕಶಾಹಿರ ಅಣ್ಣಾಭಾವು ಸಾಠೆ. ದಮನಿತ, ಶೋಷಿತ, ಕಾರ್ಮಿಕ, ರೈತ ಈ ಎಲ್ಲ ವರ್ಗಗಳ ಧ್ವನಿಯಾಗಿ ಸಾಹಿತ್ಯ ರಚಿಸಿದ ಕ್ರಾಂತಿಪುತ್ರ. ಎರಡು ದಿನವೂ ಪೂರ್ಣ ಶಾಲೆಗೆ ಹೋಗದ ಇವರು ವಿಶ್ವಮಾನ್ಯ ಸಾಹಿತ್ಯವನ್ನು ಸ್ವ-ಅನುಭವದಿಂದಲೆ ರಚಿಸಿದರು. ಇವರ ಮಹಾನ್ ಸಾಹಿತ್ಯ ಇಂದು ಜಾಗತಿಕವಾಗಿ 27 ಭಾಷೆಗಳಲ್ಲಿ ಅನುವಾದಗೊಂಡಿದೆ. ಅಗಸ್ಟ 1 […]

Back To Top