ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ
ವಿಶೇಷ ಲೇಖನ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಆಶಾ ಸಿದ್ದಲಿಂಗಯ್ಯ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ […]
ಮಕ್ಕಳ ಹಕ್ಕು,ಮೊದಲ ಹುಡುಗ
ಲೇಖನ ಮಕ್ಕಳ ಹಕ್ಕು,ಮೊದಲ ಹುಡುಗ ಅಂಜಲಿ ರಾಮಣ್ಣ ಈ ಸಂಪರ್ಕ ಸಂಖ್ಯೆಯೊಡನೆ ಮಾತು ನಿಂತು ಮೂರು ತಿಂಗಳಾಗಿತ್ತೇ?! ಗಮನಕ್ಕೇ ಬರಲಿಲ್ಲವಲ್ಲ. ಎಂದುಕೊಳ್ಳುತ್ತಲೇ ಬಂದಿದ್ದ ಆಡಿಯೋ ಸಂದೇಶವನ್ನು ತೆರೆದೆ “ ಲೇ ಲೇ ರಾಮಣ್ಣನ ಮಗಳೇ. . .” ಎಂದು ರಾಗವಾಗಿ ಹಾಡಿದ್ದ ಅವನು. ಆ ರಾಗಕ್ಕೆ ತಾಳವಾಗುವ ಮನಸ್ಸು ಇರಲಿಲ್ಲ. ಆದರೆ ಉತ್ತರಿಸುವುದು ಬೇಕಾಗಿತ್ತು. ಪ್ರಾಮಾಣಿಕವಾಗಿ ಹೇಳಿದೆ “ ಪಾಪ ಆ ಹುಡುಗಿ ಹತ್ತಿರ ಸೆಕ್ಶನ್ 94ರಲ್ಲಿ ಹೇಳಿರುವ ಯಾವ ದಾಖಲೆಯೂ ಇಲ್ಲ. ಏನು ಮಾಡೋದು ಅಂತ […]
ಸಮಾಜ ಚಿಕಿತ್ಸಕ ಡಾ. ಜಗದೀಶ್
ನೆನಪು ಸಮಾಜ ಚಿಕಿತ್ಸಕ ಡಾ. ಜಗದೀಶ್ ಬಿ.ಡಿ.ಎಸ್. ಎಂಡಿಎಸ್ ಈಗ ನಿಮ್ಮ ಬಳಗಕ್ಕೆ ನಿಮ್ಮ ಸೇವೆಯೊಂದೆ ನೆನಪು…. ಅರಸೀಕೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಂತವೈದ್ಯರಾಗಿದ್ದ ಡಾ. ಜಗದೀಶ್, ಇಲ್ಲಿನ ಆಸ್ಪತ್ರೆಯಲ್ಲಿ ‘ಹಲ್ಲು ಡಾಕ್ಟರ್’ ಎಂದೇ ಪ್ರಸಿದ್ಧ. ಇವರು ವೈದ್ಯರಷ್ಟೇ ಅಲ್ಲದೆ, ಸಾಮಾಜಿಕ ಚಿಕಿತ್ಸಕರೂ, ಸ್ನೇಹಜೀವಿಯೂ ಆಗಿದ್ದರು. ಬಹಳಷ್ಟು ವರ್ಷಗಳ ಕಾಲ ಅರಸೀಕೆರೆಯಲ್ಲಿಯೇ ವೈವಿಧ್ಯ ಚಟುವಟಿಕೆಗಳಲ್ಲಿ ತೊಡಗಿ ನಿವೃತ್ತಿ ನಂತರ ಮೈಸೂರು ಸೇರಿದರು. ನಾನು ಬೆಂಗಳೂರು ವಾಸಿಯಾದೆ. ಅರಸೀಕೆರೆಯಲ್ಲಿದ್ದಷ್ಟು ಕಾಲ ನನ್ನ ಜೊತೆಯಲ್ಲಿ ಸಮಾಜಮುಖಿ ವಿಜ್ಞಾನ ಚಳುವಳಿಗೆ ಜೊತೆಯಾದ ಡಾ. […]
ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್
ವಿಶೇಷ ಲೇಖನ ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್ ಸಿದ್ಧರಾಮ ಹೊನ್ಕಲ್ . ಇತ್ತೀಚಿನ ದಿನಗಳಲ್ಲಿ ನನಗೆ ಬಹುವಾಗಿ ಕಾಡಿ ನನ್ನಿಂದ ಮೂರು ಗಜಲ್ ಕೃತಿಗಳು ಹೊರಬರಲು ಕಾರಣ ಆದ ಗಜಲ್ ಸಾಹಿತ್ಯಕ್ಕೆ ಸಂಬಂಧಿಸಿದ ಗಜಲ್ ಸಾಹಿತ್ಯದ ಮೇರು ಪರ್ವತ ಗಾಲಿಬ್ ಕುರಿತ ನನ್ನ ಪುಟ್ಟ ಬರಹ. . ಗಾಲಿಬ್ ಹುಟ್ಟಿನಿಂದ ಸಾವಿನವರೆಗೆ ಆತನ ಬದುಕು ಬರಹ ಹವ್ಯಾಸ ಸುಖ ದುಃಖ ಸಾಲ ಸೋಲ ನೋವು ಅವಮಾನ ಸ್ವಾಭಿಮಾನ ಎಲ್ಲ ತಿಳಿದಾಗ ಅಂತಹ ಮಹತ್ವದ ಕಾವ್ಯ ಹುಟ್ಟಲು […]
‘ಅಮ್ಮನ ನಿರಾಳತೆ’
ವಸುಂಧರಾ ಕದಲೂರು ಬರೆಯುತ್ತಾರೆ
ಒಟ್ಟಿನಲ್ಲಿ ಹೊಟ್ಟೆ ತುಂಬಿದ ಮಗು ಒಂದಷ್ಟು ಹೊತ್ತು ತರಲೆ ಮಾಡದೇ ಆಡಿಕೊಂಡೋ, ಮಲಗಿಕೊಂಡೋ ಇದ್ದರೆ ಅಮ್ಮನಿಗೆ ಸಿಗುವ ನಿರಾಳತೆ ಇದೆಯಲ್ಲಾ ಅದಕ್ಕೆ ಬೆಲೆ ಕಟ್ಟಲಾಗದು.
ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ
ಪ್ರಬಂಧ ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ ಜಯಶ್ರೀ.ಜೆ. ಅಬ್ಬಿಗೇರಿ ಇಸ್ಲಾಂ ಧರ್ಮದ ಪ್ರಖ್ಯಾತ ಗುರು ‘ಸಾದಿ’ ಸಣ್ಣವರಿದ್ದಾಗ ತನ್ನ ತಂದೆಯೊಂದಿಗೆ ಮಸೀದಿಗೆ ಹೋಗಿದ್ದರು. ತಂದೆ ಮಕ್ಕಳು ಮಸೀದಿಯ ಮೇಲ್ವಿಚಾರಣೆ ನೋಡಿಕೊಳ್ಳಬೇಕಿತ್ತು. ಅಲ್ಲಿ ಪ್ರಾರ್ಥನೆಗೆ ಬಂದವರೆಲ್ಲ ನಿದ್ದೆಗೆ ಜಾರಿದ್ದರು. ಅದನ್ನು ಕಂಡ ಸಾದಿಗೆ ಆಶ್ಚರ್ಯವಾಯಿತು. ಆತ ತಂದೆಗೆ ತಿಳಿಸಿದ. ‘ನಮ್ಮಿಬ್ಬರನ್ನು ಬಿಟ್ಟು ಬಾಕಿಯವರೆಲ್ಲ ಮಲಗಿ ಬಿಟ್ಟಿದ್ದಾರೆ. ಆತನ ತಂದೆಗೆ ಕೋಪ ಬಂದಿತು.’ನಿನ್ನ ಕೆಲಸ ನೀನು ಮಾಡು. ಬೇರೆಯವರು ಏನು ಮಾಡುತ್ತಿದ್ದಾರೆಂದು ನೋಡುವುದು ನಿನ್ನ ಕೆಲಸವಲ್ಲ. ‘ಬೇರೆಯವರಲ್ಲಿ ತಪ್ಪು […]
ಜೀವ ಮಿಡಿತದ ಸದ್ದು
ನಮ್ಮ ಫ್ಲಾಟಿನ ಮನೆ; ನೆಲದ ಸ್ಪರ್ಶ ಮಣ್ಣ ಘಮ, ಮರಗಳ ಸ್ನೇಹ, ಬೆಕ್ಕು ನಾಯಿಗಳ ಸಾನಿಧ್ಯ ಇಲ್ಲದ ನೆಲೆಯಾದರೂ ಇಲ್ಲಿಯೂ ಜೀವಮಿಡಿತದ ಸದ್ದಿದೆ. ಮರಗಿಡಗಳ, ತಂಗಾಳಿಯ ಸ್ಪರ್ಶವಿದೆ, ವಿಧ ವಿಧ ಹಕ್ಕಿ ಹಾಡಿನ ನಿನಾದವಿದೆ.
‘ಅಲ್ಲಾ ಗುರೂಜಿ, ಇದೇನಿದು..? ಇಷ್ಟು ವರ್ಷಗಳ ಕಾಲ ಬೊಂಬೈಯಲ್ಲಿದ್ದು ಬಂದವರು ನೀವು ಏನೂ ಮಾಡಲಿಲ್ಲವಾ!?’ ಎಂದು ಬಾಯಿ ತಪ್ಪಿ ಅಂದವನು ತಕ್ಷಣ ನಾಲಗೆ ಕಚ್ಚಿಕೊಂಡ. ಆದರೆ ಬಳಿಕ ಅದನ್ನೇ ಸಮರ್ಥಿಸಿಕೊಂಡಂತೆ ಅವರನ್ನು ದಿಟ್ಟಿಸಿದ. ಅಷ್ಟು ಕೇಳಿದ ಏಕನಾಥರಿಗೆ ಅಲ್ಲೇ ಸತ್ತವಷ್ಟು ಹಿಂಸೆಯಾಯಿತು.
ಶಾಲೆಯಲ್ಲಿ ಸಿಹಿ-ಕಹಿ
ಮಕ್ಕಳ ಅನುಭವ ಕಥನ ಶಾಲೆಯಲ್ಲಿ ಸಿಹಿ-ಕಹಿ ವಿಜಯಶ್ರೀ ಹಾಲಾಡಿ ವಿಜಿಯ ಬಾಲ್ಯದ ಆ ದಿನಗಳಳ್ಲಿ ಮತ್ತು ಅದಕ್ಕೂ ಹಿಂದೆಲ್ಲ ಮಕ್ಕಳನ್ನು ಶಾಲೆಗೆ ಕಳಿಸಿಯೇ ತೀರಬೇಕೆಂಬ ದೊಡ್ಡ ಆಸೆ ಮನೆಯವರಿಗೆ ಇರಲಿಲ್ಲ. ಹೆಚ್ಚು ಕೇಳಿದರೆ, ಮಕ್ಕಳು ಶಾಲೆಗೆ ಹೋಗುವುದೇ ಬೇಡ, ಮನೆಯಲ್ಲೇ ಕೆಲಸ ಮಾಡಿಕೊಂಡಿರಲಿ ಎಂದು ಬಹುತೇಕ ಹಿರಿಯರ ಅಭಿಪ್ರಾಯವಾಗಿತ್ತು. ಅವರ ಹಳ್ಳಿಯಲ್ಲಿ ದೂರ ದೂರ ಮನೆಗಳು. ರಸ್ತೆಯಿಂದ, ಬಸ್ಸಿನ ಸಂಪರ್ಕದಿಂದ ಬಹು ದೂರ ಕಾಡು, ಗುಡ್ಡ, ಬಯಲುಗಳಲ್ಲಿ ಹುದುಗಿದ ಮನೆಗಳೇ ಜಾಸ್ತಿ. ಶಾಲೆಗಳ ಸಂಖ್ಯೆಯೂ ಆಗ ಕಡಿಮೆಯಿತ್ತು. […]
ವಾರದ ಕಥೆ ಅರಿವು ಮಧುರಾ ಕರ್ಣಮ್ ಮೊದಲೇ ಹೇಳಿಬಿಡುತ್ತೇನೆ. ನಾನೊಬ್ಬ ಗುಮಾಸ್ತ. ಪ್ರೆöÊವೇಟ್ ಕಂಪನಿಯಲ್ಲಿ ಕಾರಕೂನ. ಮಧ್ಯಮ ವರ್ಗದ ಬದುಕು. ತೀರಾ ಕೆಳ ಮಧ್ಯಮ ವರ್ಗದ ಜೀವನವನ್ನು ಮಧ್ಯಮ ವರ್ಗದ ಸನಿಹಕ್ಕೆ ಅಪ್ಪ-ಅಮ್ಮ ಎಳೆದು ತಂದು ನಿಲ್ಲಿಸಿದರೆಂದರೂ ತಪ್ಪಿಲ್ಲ. ಪುಟ್ಟ ಗುಡಿಸಲಿನಂತಿದ್ದ ಮನೆಯಲ್ಲಿದ್ದು, ಪೈಸೆಗೆ ಪೈಸೆ ಲೆಕ್ಕ ಹಾಕಿ, ತುತ್ತಿಗೆ ತಾತ್ವಾರ ಮಾಡಿಕೊಂಡು ಈ ಮನೆ ಕಟ್ಟಿ, ನನಗೆ ಶಿಕ್ಷಣ ಕೊಡಿಸಿ ಒಂದು ಮಟ್ಟಕ್ಕೆ ಬಂದರು. ಹಾಗೆಂದು ಹೇಳಿಕೊಳ್ಳುವ ಹಾಗೆ ದೊಡ್ಡದಲ್ಲ ಮನೆ. ಎರಡು […]